ಕಾರೆನ್ಸ್ ಎಂಯುವಿ ಮೂಲಕ ಪ್ರಯಾಣಿಕರ ಕಾರು ಮಾರಾಟ ಭರ್ಜರಿ ಬೇಡಿಕೆ ಪಡೆದುಕೊಂಡ ಕಿಯಾ

ಕಿಯಾ ಇಂಡಿಯಾ ಕಂಪನಿಯು ಹೊಸ ಉತ್ಪನ್ನಗಳ ಮೂಲಕ ಪ್ರಯಾಣಿಕರ ಕಾರು ಮಾರಾಟ ವಿಭಾಗದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಕಳೆದ ಫೆಬ್ರವರಿಯಲ್ಲಿ ಬಿಡುಗಡೆಗೊಂಡಿದ್ದ ಕಾರೆನ್ಸ್ ಎಂಯುವಿ ಮೂಲಕ ಉತ್ತಮ ಮಾರುಕಟ್ಟೆ ಕಾಯ್ದುಕೊಂಡಿದೆ.

ಕಾರೆನ್ಸ್ ಎಂಯುವಿ ಮೂಲಕ ಪ್ರಯಾಣಿಕರ ಕಾರು ಮಾರಾಟ ಭರ್ಜರಿ ಬೇಡಿಕೆ ಪಡೆದುಕೊಂಡ ಕಿಯಾ

ಪ್ರಯಾಣಿಕರ ಕಾರು ಮಾರಾಟದಲ್ಲಿ ಸದ್ಯ ನಾಲ್ಕನೇ ಸ್ಥಾನದಲ್ಲಿರುವ ಕಿಯಾ ಮೋಟಾರ್ಸ್ ಕಂಪನಿಯು ಶೇ.7 ರಷ್ಟು ಮಾರುಕಟ್ಟೆ ಪಾಲು ಹೊಂದಿದ್ದು, ಕಾರೆನ್ಸ್ ಬಿಡುಗಡೆಗೂ ಮುನ್ನ ಶೇ.6 ರಷ್ಟಿದ್ದ ಮಾರುಕಟ್ಟೆ ಪಾಲು ಇದೀಗ ಶೇ. 1 ರಷ್ಟು ಹೆಚ್ಚಳವಾಗಿದೆ. ಕಳೆದ ತಿಂಗಳು 22,622 ಕಾರುಗಳ ಮಾರಾಟದೊಂದಿಗೆ ಕಂಪನಿಯು ವಾರ್ಷಿಕವಾಗಿ ಶೇ. 18.4 ರಷ್ಟು ಮುನ್ನಡೆ ಕಾಯ್ದುಕೊಂಡಿದ್ದು, ಕಾರೆನ್ಸ್ ಮಾದರಿಯು ಕಿಯಾ ಕಾರು ಮಾರಾಟದಲ್ಲಿ ಸದ್ಯ ಮುಂಚೂಣಿಯಲ್ಲಿದೆ.

ಕಾರೆನ್ಸ್ ಎಂಯುವಿ ಮೂಲಕ ಪ್ರಯಾಣಿಕರ ಕಾರು ಮಾರಾಟ ಭರ್ಜರಿ ಬೇಡಿಕೆ ಪಡೆದುಕೊಂಡ ಕಿಯಾ

ಮಾರ್ಚ್ ಅವಧಿಯಲ್ಲಿನ ಕಾರು ಮಾರಾಟದಲ್ಲಿ ಶೇ. 18.4 ರಷ್ಟು ಮುನ್ನಡೆ ಕಾಯ್ದುಕೊಂಡಿದ್ದರೂ ಕಂಪನಿಯು ಸೆಲ್ಟೊಸ್ ಮತ್ತು ಸೊನೆಟ್ ಕಾರು ಮಾರಾಟದಲ್ಲಿ ಕಳದ ವರ್ಷಕ್ಕಿಂತಲೂ ಸಾಕಷ್ಟು ಹಿನ್ನಡೆ ಅನುಭವಿಸಿದ್ದು, ಇದೇ ವೇಳೆ ಕಾರನ್ಸ್ ಮಾರಾಟ ಕಿಯಾ ಮುನ್ನಡೆಗೆ ಕಾರಣವಾಗಿದೆ.

ಕಾರೆನ್ಸ್ ಎಂಯುವಿ ಮೂಲಕ ಪ್ರಯಾಣಿಕರ ಕಾರು ಮಾರಾಟ ಭರ್ಜರಿ ಬೇಡಿಕೆ ಪಡೆದುಕೊಂಡ ಕಿಯಾ

ಕಳೆದ ತಿಂಗಳು ಸೆಲ್ಟೊಸ್ ಮಾದರಿಯು 8,415 ಯುನಿಟ್ ಮಾರಾಟಗೊಂಡಿದ್ದರೆ ಸೊನೆಟ್ ಮಾದರಿಯು 6,871 ಯುನಿಟ್ ಮಾರಾಟಗೊಂಡಿದ್ದು, ಈ ಎರಡು ಕಾರು ಮಾರಾಟವು ಕಳೆದ ವರ್ಷಕ್ಕಿಂತಲೂ ಶೇ. 20 ರಷ್ಟು ಕುಸಿತವಾಗಿದೆ.

ಕಾರೆನ್ಸ್ ಎಂಯುವಿ ಮೂಲಕ ಪ್ರಯಾಣಿಕರ ಕಾರು ಮಾರಾಟ ಭರ್ಜರಿ ಬೇಡಿಕೆ ಪಡೆದುಕೊಂಡ ಕಿಯಾ

ಆದರೆ ಎಸ್‌ಯುವಿ ಮತ್ತು ಎಂಪಿವಿ ಕಾರುಗಳ ನಡುವಿನ ಸ್ಥಾನದಲ್ಲಿರುವ ಕಾರೆನ್ಸ್ ಮಾದರಿಯು 7,008 ಯುನಿಟ್ ಮಾರಾಟದೊಂದಿಗೆ ಭರ್ಜರಿ ಬೇಡಿಕೆ ಪಡೆದುಕೊಂಡಿದ್ದು, ಈ ಮೂಲಕ ಕಿಯಾ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಶೇ.7 ರಷ್ಟು ಮಾರುಕಟ್ಟೆ ಪಾಲು ದಾಖಲಿಸಿತು.

ಕಾರೆನ್ಸ್ ಎಂಯುವಿ ಮೂಲಕ ಪ್ರಯಾಣಿಕರ ಕಾರು ಮಾರಾಟ ಭರ್ಜರಿ ಬೇಡಿಕೆ ಪಡೆದುಕೊಂಡ ಕಿಯಾ

ಹೊಸ ಕಾರು 6 ಸೀಟರ್ ಮತ್ತು 7 ಸೀಟರ್ ಸೌಲಭ್ಯದೊಂದಿಗೆ ಮಧ್ಯಮ ಕ್ರಮಾಂಕದ ಎಂಪಿವಿ ಮತ್ತು ಎಸ್‌ಯುವಿ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿದ್ದು, ಹೊಸ ಕಾರು ಪ್ರೀಮಿಯಂ, ಪ್ರೆಸ್ಟಿಜ್, ಪ್ರೆಸ್ಟಿಜ್ ಪ್ಲಸ್, ಲಗ್ಷುರಿ ಮತ್ತು ಲಗ್ಷುರಿ ಪ್ಲಸ್ ಎನ್ನುವ ಐದು ವೆರಿಯೆಂಟ್‌ಗಳಲ್ಲಿ ಹೊಸ ಕಾರು ಖರೀದಿಗೆ ಲಭ್ಯವಿದೆ.

ಕಾರೆನ್ಸ್ ಎಂಯುವಿ ಮೂಲಕ ಪ್ರಯಾಣಿಕರ ಕಾರು ಮಾರಾಟ ಭರ್ಜರಿ ಬೇಡಿಕೆ ಪಡೆದುಕೊಂಡ ಕಿಯಾ

ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 8.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 16.99 ಲಕ್ಷ ಬೆಲೆ ಹೊಂದಿದ್ದು, ಇದು ಈ ವಿಭಾಗದ ಕಾರುಗಳಲ್ಲೇ ಇದು ಅತಿ ಕಡಿಮೆ ಬೆಲೆಯಾಗಿರುವುದರಿಂದ ಹೆಚ್ಚಿನ ಬೇಡಿಕೆಗೆ ಕಾರಣವಾಗಿದೆ.

ಕಾರೆನ್ಸ್ ಎಂಯುವಿ ಮೂಲಕ ಪ್ರಯಾಣಿಕರ ಕಾರು ಮಾರಾಟ ಭರ್ಜರಿ ಬೇಡಿಕೆ ಪಡೆದುಕೊಂಡ ಕಿಯಾ

ಕಿಯಾ ಕಂಪನಿಯು ಸೆಲ್ಟೊಸ್ ಎಸ್‌ಯುವಿ ಮಾದರಿಯುವಂತೆಯೇ ಹೊಸ ಕಾರೆನ್ಸ್ ಕಾರಿನಲ್ಲೂ 1.5-ಲೀಟರ್ ಸಾಮಾನ್ಯ ಪೆಟ್ರೋಲ್, 1.4-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಜೋಡಣೆ ಮಾಡಿದ್ದು, ಅತ್ಯುತ್ತಮ ಪರ್ಫಾಮೆನ್ಸ್‌ನೊಂದಿಗೆ ಈ ವಿಭಾಗದಲ್ಲಿಯೇ ಅತಿ ಹೆಚ್ಚು ಮೈಲೇಜ್ ನೀಡುವ ಮಾದರಿ ಇದಾಗಿದೆ.

ಕಾರೆನ್ಸ್ ಎಂಯುವಿ ಮೂಲಕ ಪ್ರಯಾಣಿಕರ ಕಾರು ಮಾರಾಟ ಭರ್ಜರಿ ಬೇಡಿಕೆ ಪಡೆದುಕೊಂಡ ಕಿಯಾ

ವಿವಿಧ ಎಂಜಿನ್ ಆಯ್ಕೆಯೊಂದಿಗೆ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮ್ಯಾಟಿಕ್ ಅಥವಾ 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಮಾದರಿಯನ್ನು ಆಯ್ಕೆ ಮಾಡಬಹುದಾಗಿದ್ದು, 1.5-ಲೀಟರ್ ಪೆಟ್ರೋಲ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 115-ಬಿಎಚ್‌ಪಿ, 144-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ 1.4-ಲೀಟರ್ ಟರ್ಬೊ ಪೆಟ್ರೋಲ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಮತ್ತು 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ 140-ಬಿಎಚ್‌ಪಿ, 242-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

ಕಾರೆನ್ಸ್ ಎಂಯುವಿ ಮೂಲಕ ಪ್ರಯಾಣಿಕರ ಕಾರು ಮಾರಾಟ ಭರ್ಜರಿ ಬೇಡಿಕೆ ಪಡೆದುಕೊಂಡ ಕಿಯಾ

1.5-ಲೀಟರ್ ಡೀಸೆಲ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 115-ಬಿಎಚ್‌ಪಿ, 250-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದು, ಹೊಸ ಕಾರು ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹೆಚ್ಚು ಮೈಲೇಜ್ ನೀಡುತ್ತದೆ.

ಕಾರೆನ್ಸ್ ಎಂಯುವಿ ಮೂಲಕ ಪ್ರಯಾಣಿಕರ ಕಾರು ಮಾರಾಟ ಭರ್ಜರಿ ಬೇಡಿಕೆ ಪಡೆದುಕೊಂಡ ಕಿಯಾ

ಕಾರೆನ್ಸ್ ಕಾರಿನ 1.5 ಲೀಟರ್ ಪೆಟ್ರೋಲ್ ಮ್ಯಾನುವಲ್ ಮಾದರಿಯು ಪ್ರತಿ ಲೀಟರ್‌ಗೆ 15.7 ಕಿ.ಮೀ ಮೈಲೇಜ್ ನೀಡಿದ್ದಲ್ಲಿ 1.4 ಲೀಟರ್ ಟರ್ಬೊ ಪೆಟ್ರೋಲ್ ಮ್ಯಾನುವಲ್ ಮಾದರಿಯು ಪ್ರತಿ ಲೀಟರ್‌ಗೆ 16.2 ಕಿ.ಮೀ ಮತ್ತು ಆಟೋಮ್ಯಾಟಿಕ್ ಮಾದರಿಯು 16.5 ಕಿ.ಮೀ ಮೈಲೇಜ್ ನೀಡುತ್ತದೆ.

ಕಾರೆನ್ಸ್ ಎಂಯುವಿ ಮೂಲಕ ಪ್ರಯಾಣಿಕರ ಕಾರು ಮಾರಾಟ ಭರ್ಜರಿ ಬೇಡಿಕೆ ಪಡೆದುಕೊಂಡ ಕಿಯಾ

ಹಾಗೆಯೇ 1.5 ಲೀಟರ್ ಡೀಸೆಲ್ ಮಾದರಿಯಲ್ಲಿನ ಮ್ಯಾನುವಲ್ ಮಾದರಿಯು ಪ್ರತಿ ಲೀಟರ್‌ಗೆ 21.3 ಕಿ.ಮೀ ಮೈಲೇಜ್ ನೀಡಿದ್ದಲ್ಲಿ ಆಟೋಮ್ಯಾಟಿಕ್ ಮಾದರಿಯು ಪ್ರತಿ ಲೀಟರ್‌ಗೆ 18.3 ಕಿ.ಮೀ ಮೈಲೇಜ್ ನೀಡಲಿದೆ. ಹೊಸ ಕಾರು ಸೆಲ್ಟೊಸ್ ಮಾದರಿಗಿಂತಲೂ ಹೆಚ್ಚಿನ ಮೈಲೇಜ್ ನೀಡಲಿದ್ದು, ಪರ್ಫಾಮೆನ್ಸ್‌ನಲ್ಲೂ ಗಮನಸೆಳೆಯಲಿದೆ.

ಕಾರೆನ್ಸ್ ಎಂಯುವಿ ಮೂಲಕ ಪ್ರಯಾಣಿಕರ ಕಾರು ಮಾರಾಟ ಭರ್ಜರಿ ಬೇಡಿಕೆ ಪಡೆದುಕೊಂಡ ಕಿಯಾ

ಜೊತೆಗೆ ಹೊಸ ಕಾರು ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹೆಚ್ಚಿನ ಸ್ಥಳಾವಕಾಶದೊಂದಿಗೆ 4540 ಎಂಎಂ ಉದ್ದ, 1800 ಎಂಎಂ ಅಗಲ, 1700 ಎಂಎಂ ಎತ್ತರ, 2780 ಎಂಎಂ ವ್ಹೀಲ್ ಬೆಸ್ ಮತ್ತು 195 ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿದ್ದು, ಇದರೊಂದಿಗೆ ಆಕರ್ಷಕವಾದ ಡಿಸೈನ್ ಮತ್ತು ಗುಣಮಟ್ಟದ ಫೀಚರ್ಸ್ ಹೊಂದಿರುವುದು ಗ್ರಾಹಕರ ಆಯ್ಕೆಗೆ ಪ್ರಮುಖ ಆಕರ್ಷಣೆಯಾಗಿದೆ.

ಕಾರೆನ್ಸ್ ಎಂಯುವಿ ಮೂಲಕ ಪ್ರಯಾಣಿಕರ ಕಾರು ಮಾರಾಟ ಭರ್ಜರಿ ಬೇಡಿಕೆ ಪಡೆದುಕೊಂಡ ಕಿಯಾ

ಇದರೊಂದಿಗೆ ಹೊಸ ಕಾರಿನಲ್ಲಿ ಕಿಯಾ ಕಂಪನಿಯು ಬೆಸ್ ವೆರಿಯೆಂಟ್‌ನಲ್ಲೂ ಲಭ್ಯವಾಗುವಂತೆ ಸ್ಟ್ಯಾಂಡರ್ಡ್ ಆಗಿ 6 ಏರ್‌ಬ್ಯಾಗ್ ಮತ್ತು ಆಲ್ ವ್ಹೀಲ್ ಡಿಸ್ಕ್ ಬ್ರೇಕ್ ಜೋಡಿಸಿದ್ದು, ಇನ್ನುಳಿದಂತೆ ವಿವಿಧ ವೆರಿಯೆಂಟ್‌ಗಳಿಗೆ ಅನ್ವಯಿಸುವಂತೆ ಎಬಿಎಸ್ ಜೊತೆ ಇಬಿಡಿ, ಇಎಸ್‌ಸಿ, ಹಿಲ್ ಸ್ಟಾರ್ಟ್ ಅಸಿಸ್ಟ್, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ, ರಿಯರ್ ಪಾರ್ಕಿಂಗ್ ಸೆನ್ಸಾರ್ ಸೌಲಭ್ಯಗಳಿವೆ.

ಕಾರೆನ್ಸ್ ಎಂಯುವಿ ಮೂಲಕ ಪ್ರಯಾಣಿಕರ ಕಾರು ಮಾರಾಟ ಭರ್ಜರಿ ಬೇಡಿಕೆ ಪಡೆದುಕೊಂಡ ಕಿಯಾ

ಇನ್ನು ಹೊಸ ಕಾರು ಇಂಪೀರಿಯಲ್ ಬ್ಲೂ, ಇಂಟೆನ್ಸ್ ರೆಡ್, ಮಾಸ್ ಬ್ರೌನ್, ಸ್ಪಾರ್ಕ್ಲಿಂಗ್ ಸಿಲ್ವರ್, ಅರೋರಾ ಬ್ಲ್ಯಾಕ್ ಪರ್ಲ್, ಗ್ರಾವಿಟಿ ಗ್ರೇ ಮತ್ತು ಗ್ಲೇಸಿಯರ್ ವೈಟ್ ಪರ್ಲ್ ಬಣ್ಣಗಳಲ್ಲಿ ಆಯ್ಕೆ ಮಾಡಬಹುದಾಗಿದ್ದು, ಆಕರ್ಷಕ ಬೆಲೆಯೊಂದಿಗೆ ಹೊಸ ಕಾರು ಮಾರುತಿ ಎರ್ಟಿಗಾ, ಮಹೀಂದ್ರಾ ಮರಾಜೋ, ಹ್ಯುಂಡೈ ಅಲ್ಕಾಜರ್, ಮಹೀಂದ್ರಾ ಎಕ್ಸ್‌ಯುವಿ700 ಮತ್ತು ಎಂಜಿ ಹೆಕ್ಟರ್ ಪ್ಲಸ್, ಟಾಟಾ ಸಫಾರಿ ಮತ್ತು ಇನೋವಾ ಕ್ರಿಸ್ಟಾ ಆರಂಭಿಕ ಮಾದರಿಗಳಿಗೂ ಇದು ಪೈಪೋಟಿ ನೀಡಲಿದೆ.

Most Read Articles

Kannada
English summary
Kia india march 2022 sales report model wise
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X