ಏಪ್ರಿಲ್ ತಿಂಗಳಿನಲ್ಲಿ 19 ಸಾವಿರಕ್ಕೂ ಹೆಚ್ಚು ಕಾರುಗಳನ್ನು ಮಾರಾಟ ಮಾಡಿದ ಕಿಯಾ ಇಂಡಿಯಾ

ಕೊರಿಯಾ ಮೂಲದ ಜನಪ್ರಿಯ ವಾಹನ ತಯಾರಕ ಕಂಪನಿಯಾದ ಕಿಯಾ ಇಂಡಿಯಾ(Kia India) 2022 ಏಪ್ರಿಲ್ ತಿಂಗಳ ಮಾರಾಟದ ವರದಿಯನ್ನು ಬಹಿರಂಗಪಡಿಸಿದೆ. ಕಳೆದ ತಿಂಗಳು ಕಿಯಾ ಕಂಪನಿಯು 19,019 ಯುನಿಟ್‌ಗಳ ಯುನಿಟ್‌ಗಳನ್ನು ಮಾರಾಟ ಮಾಡಿದ್ದಾರೆ.

ಏಪ್ರಿಲ್ ತಿಂಗಳಿನಲ್ಲಿ 19 ಸಾವಿರಕ್ಕೂ ಹೆಚ್ಚು ಕಾರುಗಳನ್ನು ಮಾರಾಟ ಮಾಡಿದ ಕಿಯಾ ಇಂಡಿಯಾ

ಕಿಯಾ ಇಂಡಿಯಾ ಕಂಪನಿಯು ವರ್ಷದಿಂದ ವರ್ಷಕ್ಕೆ (YoY) ಶೇಕಡಾ 18 ರಷ್ಟು ಮಾರಾಟ ಬೆಳವಣಿಗೆಯನ್ನು ದಾಖಲಿಸಿದೆ. ಕಿಯಾ ಸೆಲ್ಟೋಸ್ ಕಾಂಪ್ಯಾಕ್ಟ್ ಎಸ್‍ಯುವಿ ಭಾರತದಲ್ಲಿ ಕೊರಿಯನ್ ಬ್ರಾಂಡ್‌ಗೆ ಹೆಚ್ಚು ಮಾರಾಟವಾದ ಮಾದರಿಯಾಗಿ ಮುಂದುವರೆದಿದೆ, ಕಳೆದ ತಿಂಗಳು ಸೆಲ್ಟೋಸ್ ಮಾದರಿಯ 7,506 ಯುನಿಟ್‌ಗಳನ್ನು ಮಾರಾಟ ಮಾಡಲಾಯಿತು, ನಂತರ ಅದರ ಇತ್ತೀಚಿನ ಬಿಡುಗಡೆಯಾದ ಕಿಯಾ ಕಾರೆನ್ಸ್ 5,754 ಯುನಿಟ್‌ಗಳಲ್ಲಿ ಮಾರಾಟವಾಯಿತು.

ಏಪ್ರಿಲ್ ತಿಂಗಳಿನಲ್ಲಿ 19 ಸಾವಿರಕ್ಕೂ ಹೆಚ್ಚು ಕಾರುಗಳನ್ನು ಮಾರಾಟ ಮಾಡಿದ ಕಿಯಾ ಇಂಡಿಯಾ

ಕಳೆದ ತಿಂಗಳಲ್ಲಿ 5,404 ಯುನಿಟ್‌ಗಳನ್ನು ಮಾರಾಟ ಮಾಡುವುದರೊಂದಿಗೆ ಕಿಯಾ ಸೊನೆಟ್ ಮೂರನೇ ಸ್ಥಾನವನ್ನು ಪಡೆದುಕೊಂಡಿದೆ. ಇನ್ನು ಕಿಯಾ ಕಂಪನಿಯು ಐಷಾರಾಮಿ ಕಿಯಾ ಕಾರ್ನಿವಲ್‌ನ 355 ಯುನಿಟ್‌ಗಳನ್ನು ಮಾರಾಟ ಮಾಡಿದೆ.

ಏಪ್ರಿಲ್ ತಿಂಗಳಿನಲ್ಲಿ 19 ಸಾವಿರಕ್ಕೂ ಹೆಚ್ಚು ಕಾರುಗಳನ್ನು ಮಾರಾಟ ಮಾಡಿದ ಕಿಯಾ ಇಂಡಿಯಾ

ಕಿಯಾ ಇಂಡಿಯಾದ ವಿಪಿ ಮತ್ತು ಮಾರಾಟ ಮತ್ತು ಮಾರುಕಟ್ಟೆ ವಿಭಾಗದ ಮುಖ್ಯಸ್ಥ ಹರ್ದೀಪ್ ಸಿಂಗ್ ಬ್ರಾರ್ ಅವರು ಮಾತನಾಡಿ, ಕಿಯಾ ಇಂಡಿಯಾ 2022 ರಲ್ಲಿ ಪ್ರತಿ ತಿಂಗಳು ಸರಾಸರಿ 20,000 ಯುನಿಟ್‌ಗಳನ್ನು ಮಾರಾಟ ಮಾಡಿದೆ ಮತ್ತು ಇದು ನಮಗೆ ಆರೋಗ್ಯಕರ ವರ್ಷವಾಗಿದೆ. .

ಏಪ್ರಿಲ್ ತಿಂಗಳಿನಲ್ಲಿ 19 ಸಾವಿರಕ್ಕೂ ಹೆಚ್ಚು ಕಾರುಗಳನ್ನು ಮಾರಾಟ ಮಾಡಿದ ಕಿಯಾ ಇಂಡಿಯಾ

ಜಾಗತಿಕವಾಗಿ. 2020 ರಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗವು ಪ್ರಾರಂಭವಾದಾಗಿನಿಂದ ವಾಹನ ಉದ್ಯಮವು ಕಠಿಣ ಹಂತವನ್ನು ಎದುರಿಸುತ್ತಿದೆ. ನಮ್ಮ ವಾಹನಗಳಿಗೆ ನಾವು ಅಗಾಧ ಬೇಡಿಕೆಯನ್ನು ಪಡೆಯುತ್ತಿದ್ದೇವೆ ಮತ್ತು ಕಾಯುವ ಅವಧಿಯನ್ನು ನಿಯಂತ್ರಣದಲ್ಲಿಡಲು ನಾವು ನಮ್ಮ ಉತ್ಪಾದನೆಯನ್ನು ಸ್ಥಿರವಾಗಿ ಉತ್ತಮಗೊಳಿಸುತ್ತಿದ್ದೇವೆ.

ಏಪ್ರಿಲ್ ತಿಂಗಳಿನಲ್ಲಿ 19 ಸಾವಿರಕ್ಕೂ ಹೆಚ್ಚು ಕಾರುಗಳನ್ನು ಮಾರಾಟ ಮಾಡಿದ ಕಿಯಾ ಇಂಡಿಯಾ

ನಮ್ಮನ್ನು ನಾವು ನಿರಂತರವಾಗಿ ವಿಕಸನಗೊಳಿಸುತ್ತಿದ್ದೇವೆ ಮತ್ತು ಆದ್ದರಿಂದ ನಾವು ನಮ್ಮ ವಿವೇಚನಾಶೀಲ ಭಾರತೀಯ ಗ್ರಾಹಕರಿಗಾಗಿ ಇದುವರೆಗೆ ತಯಾರಿಸಿದ ಅತ್ಯಂತ ಹೈಟೆಕ್ ಕಿಯಾವನ್ನು ತರುತ್ತಿದ್ದೇವೆ. ಇವಿ6 ನೊಂದಿಗೆ, ನಾವು ಭಾರತದ ಇವಿ ಜಾಗವನ್ನು ಪ್ರವೇಶಿಸುತ್ತಿದ್ದೇವೆ, ಅದು ಉತ್ತಮ ಸಾಮರ್ಥ್ಯವನ್ನು ತೋರಿಸಲಿದೆ ಎಂದು ಹೇಳಿದರು.

ಏಪ್ರಿಲ್ ತಿಂಗಳಿನಲ್ಲಿ 19 ಸಾವಿರಕ್ಕೂ ಹೆಚ್ಚು ಕಾರುಗಳನ್ನು ಮಾರಾಟ ಮಾಡಿದ ಕಿಯಾ ಇಂಡಿಯಾ

ಕಿಯಾ ಇಂಡಿಯಾ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ತನ್ನ ಪ್ರಮುಖ ಕಾರು ಉತ್ಪನ್ನಗಳ ತಂತ್ರಜ್ಞಾನದಲ್ಲಿ ಸಾಕಷ್ಟು ಬದಲಾವಣೆಗಳನ್ನು ಪರಿಚಯಿಸುತ್ತಿದೆ. ಕಂಪನಿಯು ಶೀಘ್ರದಲ್ಲಿಯೇ ಸೊನೆಟ್ ಮತ್ತು ಕಾರೆನ್ಸ್ ಮಾದರಿಯನ್ನು ಸಿಎನ್‌ಜಿ ಆವೃತ್ತಿಯಲ್ಲೂ ಬಿಡುಗಡೆಯ ಸುಳಿವು ನೀಡಿದೆ.

ಏಪ್ರಿಲ್ ತಿಂಗಳಿನಲ್ಲಿ 19 ಸಾವಿರಕ್ಕೂ ಹೆಚ್ಚು ಕಾರುಗಳನ್ನು ಮಾರಾಟ ಮಾಡಿದ ಕಿಯಾ ಇಂಡಿಯಾ

ಸದ್ಯ ಮಾರುಕಟ್ಟೆಯಲ್ಲಿ ಸಿಎನ್‌ಜಿ ಮಾದರಿಗಳ ಮಾರಾಟವು ಸಾಕಷ್ಟು ಬೇಡಿಕೆ ಪಡೆದುಕೊಳ್ಳುತ್ತಿದ್ದು, ಮಾರುತಿ ಸುಜುಕಿ ಮತ್ತು ಟಾಟಾ ಮೋಟಾರ್ಸ್ ಕಂಪನಿಗಳು ತಮ್ಮ ಪ್ರಮುಖ ಕಾರುಗಳಿಗೆ ಫ್ಯಾಕ್ಟರಿ ಫಿಟೆಡ್ ಸಿಎನ್‌ಜಿ ಕಿಟ್ ಅಳವಡಿಸುತ್ತಿವೆ. ಸಂಕುಚಿತ ನೈಸರ್ಗಿಕ ಅನಿಲ (ಸಿಎನ್‌ಜಿ)ವಾಹನಗಳು ಹೆಚ್ಚು ಮೈಲೇಜ್ ಖಾತ್ರಿಪಡಿಸುವುದಲ್ಲದೆ ವಾತಾವರಣಕ್ಕೆ ಹೊರಬಿಡುವ ಮಾಲಿನ್ಯದ ಪ್ರಮಾಣವೂ ಕಡಿಮೆಯಾಗಿದೆ.

ಏಪ್ರಿಲ್ ತಿಂಗಳಿನಲ್ಲಿ 19 ಸಾವಿರಕ್ಕೂ ಹೆಚ್ಚು ಕಾರುಗಳನ್ನು ಮಾರಾಟ ಮಾಡಿದ ಕಿಯಾ ಇಂಡಿಯಾ

ಪೆಟ್ರೋಲ್ ಅಥವಾ ಡೀಸೆಲ್ ಕಾರುಗಳಿಗೆ ಹೋಲಿಸಿದಾಗ ಸಿಎನ್‌ಜಿ ಕಾರುಗಳ ಕಾರ್ಯಕ್ಷಮತೆಯಲ್ಲಿ ಸ್ವಲ್ಪ ಕಡಿಮೆಯಾಗಿರುತ್ತದೆ. ಸಾಮಾನ್ಯ ಇಂಧನ ಚಾಲಿತ ಕಾರಿಗಿಂತಲೂ ಹೆಚ್ಚು ಮೈಲೇಜ್ ಪಡೆಯಲು ಸಿಎನ್‌ಜಿ ಕಾರುಗಳಿಂದ ಸಾಧ್ಯ. ಇವು ಸಾಮಾನ್ಯ ಡೀಸೆಲ್ ಮಾದರಿಗಿಂತಲೂ ಶೇ.30 ರಷ್ಟು ಮೈಲೇಜ್ ನೀಡಲಿದೆ. ಗ್ರಾಹಕರ ಬೇಡಿಕೆಯೆಂತೆ ದೇಶಾದ್ಯಂತ ಪ್ರಮುಖ ನಗರಗಳಲ್ಲಿ ಸಿಎನ್‌ಜಿ ಪೂರೈಕೆಯನ್ನು ವೇಗಗೊಳಿಸಲಾಗಿದೆ.

ಏಪ್ರಿಲ್ ತಿಂಗಳಿನಲ್ಲಿ 19 ಸಾವಿರಕ್ಕೂ ಹೆಚ್ಚು ಕಾರುಗಳನ್ನು ಮಾರಾಟ ಮಾಡಿದ ಕಿಯಾ ಇಂಡಿಯಾ

ಇತ್ತೀಚೆಗೆ ಭಾರತೀಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆಯು ಹೆಚ್ಚಾಗುತ್ತಿದೆ. ಅಲ್ಲದೇ ದೇಶದಲ್ಲಿ ಇಂಧನ ಬೆಲೆಯು ಕೂಡ ದಾಖಲೆಯ ಪ್ರಮಾಣದಲ್ಲಿ ಹೆಚ್ಚಾಗುತ್ತಿದೆ. ಇದರಿಂದ ಹೆಚ್ಚಿನ ಜನರು ನಿಧಾನವಾಗಿ ಎಲೆಕ್ಟ್ರಿಕ್ ವಾಹನಗಳ ಕಡೆ ಮೊರೆ ಹೋಗುತ್ತಿದ್ದಾರೆ. ಇದರಿಂದ ಬಹುತೇಕ ವಾಹನ ತಯಾರಕ ಕಂಪನಿಗಳು ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸಲು ಪ್ರಾರಂಭಿಸಿದೆ. ಭಾರತೀಯ ಮಾರುಕಟ್ಟೆಯಲ್ಲಿ ಕೆಲವು ಜನಪ್ರಿಯ ವಾಹನ ತಯಾರಕ ಕಂಪನಿಯು ಸಂಪೂರ್ಣ ಎಲೆಕ್ಟ್ರಿಕ್ ವಾಹನಗಳ ಕಡೆ ಗಮನಹರಿಸುತ್ತಿದೆ.

ಏಪ್ರಿಲ್ ತಿಂಗಳಿನಲ್ಲಿ 19 ಸಾವಿರಕ್ಕೂ ಹೆಚ್ಚು ಕಾರುಗಳನ್ನು ಮಾರಾಟ ಮಾಡಿದ ಕಿಯಾ ಇಂಡಿಯಾ

ಇದರ ನಡುವೆ ಕಿಯಾ ಇಂಡಿಯಾ ಕಂಪನಿಯು ಹೊಸ ಎಲೆಕ್ಟ್ರಿಕ್ ಕಾರನ್ನು ಬಿಡುಗಡೆಗೊಳಿಸಲು ಸಜ್ಜಾಗಿದೆ. ಕಿಯಾ ಇಂಡಿಯಾವು ಈ ಹೊಸ ವರ್ಷದಲ್ಲಿ ಕೈಗೆಟುಕವ ದರಲ್ಲಿ ಕ್ಯಾರೆನ್ಸ್ ಮೂರು-ಸಾಲಿನ ಯುವಿ ಮಾದರಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿ ಹೊಸ ಸಂಚಲವನ್ನು ಮೂಡಿಸಿತ್ತು. ಕಿಯಾ ಇಂಡಿಯಾ ಕಂಪನಿಯು ಇವಿ6 ಹೆಸರನ್ನು ಈಗ ಭಾರತದಲ್ಲಿ ಟ್ರೇಡ್‌ಮಾರ್ಕ್ ಮಾಡಲಾಗಿತ್ತು. ಇದೀಗ ದಕ್ಷಿಣ ಕೊರಿಯಾದ ಕಾರು ತಯಾರಕರಾದ ಕಿಯಾ ಎಲೆಕ್ಟ್ರಿಕ್ ಫ್ಲ್ಯಾಗ್‌ಶಿಪ್‌ ಇವಿ6 ಕಾರನ್ನು ಬಿಡುಗಡೆಗೊಳಿಸುವುದಾಗಿ ಖಚಿತಪಡಿಸಿದೆ. ಕಿಯಾ ಕಂಪನಿಯು ಈ ಇವಿ6 ಎಲೆಕ್ಟ್ರಿಕ್ ಕಾರಿನ ಖರೀದಿಗಾಗಿ ಬುಕ್ಕಿಂಗ್ ಅನ್ನು ಮೇ 26 ರಂದು ಪ್ರಾರಂಭಿಸಲಿದೆ ಎಂದು ಘೋಷಿಸಲಾಗಿದೆ.

ಏಪ್ರಿಲ್ ತಿಂಗಳಿನಲ್ಲಿ 19 ಸಾವಿರಕ್ಕೂ ಹೆಚ್ಚು ಕಾರುಗಳನ್ನು ಮಾರಾಟ ಮಾಡಿದ ಕಿಯಾ ಇಂಡಿಯಾ

ಈ ಕಾರಿನ ವಿತರಣೆಯನ್ನು ಶೀಘ್ರದಲ್ಲೇ ಪ್ರಾರಂಭವಾಗಲಿವೆ ಎಂದು ಹೇಳಿದೆ. ಕಿಯಾ ಇವಿ6 ಎಲೆಕ್ಟ್ರಿಕ್ ಕಾರನ್ನು ಭಾರತಕ್ಕೆ ಸೀಮಿತ ಸಂಖ್ಯೆಯಲ್ಲಿ ತರಬಹುದು. ಈ ಕಿಯಾ ಇವಿ6 ಎಲೆಕ್ಟ್ರಿಕ್ ಕ್ರಾಸ್ಒವರ್ ಸಂಪೂರ್ಣವಾಗಿ ಸಿಬಿಯು ಆಗಿ ಭಾರತಕ್ಕೆ ಬರಲಿದೆ. ಈ ಹೊಸ ಎಲೆಕ್ಟ್ರಿಕ್ ಕಾರು ಬಿಡುಗಡೆಯೊಂದಿಗೆ ಮಾರಾಟದಲ್ಲೆ ಕಂಪನಿಗೆ ಹೆಚ್ಚಿನ ಕೊಡುಗೆ ನೀಡಲಿದೆ.

Most Read Articles

Kannada
English summary
Kia india sales report growth by 18 percent details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X