Just In
- just now
ಭಾರತದಲ್ಲಿ ಹೊಸ ಕವಾಸಕಿ ನಿಂಜಾ 400 ಸೂಪರ್ಸ್ಪೋರ್ಟ್ ಬೈಕ್ ಬಿಡುಗಡೆ
- 57 min ago
ಭಾರತೀಯ ಕಾರುಗಳಿಗೆ ವಿದೇಶಗಳಲ್ಲಿ ಬೇಡಿಕೆ ಹೆಚ್ಚಳ: ಮೇ ತಿಂಗಳಲ್ಲಿ ಅತಿ ಹೆಚ್ಚು ರಫ್ತಾಗಿರುವ ಕಾರುಗಳಿವು!
- 1 hr ago
ಅತ್ಯಾಧುನಿಕ ಫೀಚರ್ಸ್ಗಳೊಂದಿಗೆ ಹೀರೋ ಪ್ಯಾಶನ್ ಎಕ್ಸ್ಟೆಕ್ ಬೈಕ್ ಬಿಡುಗಡೆ
- 2 hrs ago
ಪ್ರಯಾಣಿಕ ಕಾರು ಮಾದರಿಗಳಿಗಾಗಿ 5 ಸ್ಟಾರ್ ರೇಟಿಂಗ್ ಹೊಂದಿರುವ ಟೈರ್ ಬಿಡುಗಡೆ ಮಾಡಿದ ಮೈಕೆಲಿನ್
Don't Miss!
- Finance
ಇನ್ಸ್ಟಾಗ್ರಾಂನಲ್ಲಿ ಅಧಿಕ ಸಂಭಾವನೆ ಪಡೆಯುವ ಸೆಲೆಬ್ರೆಟಿಗಳು ಇವರೇ ನೋಡಿ..
- Sports
ನಮ್ಮೂರ ಪ್ರತಿಭೆ: ತಾಯಿಯಂತೆಯೇ ಕ್ರೀಡಾ ಸಾಧನೆಯ ಹಾದಿಯಲ್ಲಿ ಮಗಳು ಉನ್ನತಿ ಅಯ್ಯಪ್ಪ
- Education
SSC MTS Admit Card 2022 : ಪ್ರವೇಶ ಪತ್ರ ಡೌನ್ಲೋಡ್ ಮಾಡುವುದು ಹೇಗೆ ?
- News
ಅಸ್ಸಾಂ ಪ್ರವಾಹ: ಅಸ್ಸಾಂ ಸಿಎಂ ಪರಿಹಾರ ನಿಧಿಗೆ ರಿಲಯನ್ಸ್ ಫೌಂಡೇಶನ್ 25 ಕೋಟಿ ರೂ.
- Movies
ಅಖಿಲಾಂಡೇಶ್ವರಿಯನ್ನು ಆಟ ಆಡಿಸಲು ಬಂದ ಅರುಂಧತಿ: ಯಾರೀಕೆ?
- Technology
ಪೊಕೊ F4 5G V/S ಪೊಕೊ F3 GT: ಇವೆರಡರಲ್ಲಿ ಖರೀದಿಗೆ ಯಾವುದು ಬೆಸ್ಟ್?
- Lifestyle
ಅಪಘಾತದಿಂದ ಕ್ಷಣಾರ್ಧದಲ್ಲಿ ಮಗುವಿನ ರಕ್ಷಿಸಿ, ತಾಯಿಯ ಮೊಬೈಲ್ ಪುಡಿ ಮಾಡಿದ ಸೈನಿಕ: ಸೈನಿಕನ ಕಾರ್ಯಕ್ಕೆ ನೆಟ್ಟಿಗರು ಫುಲ್ ಫಿದಾ
- Travel
ನಿಮ್ಮ ಮುಂದಿನ ಪ್ರವಾಸದ ಪಟ್ಟಿಯಲ್ಲಿ ಕರ್ನಾಟಕದ ಬಾದಾಮಿ ಯಾಕಿರಬೇಕು? ಇಲ್ಲಿದೆ ಕಾರಣ!
ಕಿಯಾ ಕಾರೆನ್ಸ್ ಎಂಪಿವಿ ಖರೀದಿಸಲು ಕನಿಷ್ಠ ಇಷ್ಟು ದಿನ ಕಾಯಲೇಬೇಕು..
ಕಿಯಾ ಇಂಡಿಯಾ ಕಂಪನಿಯು ಹೊಸ ಕಾರೆನ್ಸ್ ಎಂಯುವಿ ಮಾದರಿಯ ಮೂಲಕ ಹೊಸ ದಾಖಲೆಗಳನ್ನು ನಿರ್ಮಿಸುತ್ತಿದ್ದು, ಹೊಸ ಕಾರು ಆಕರ್ಷಕ ಬೆಲೆ ಮತ್ತು ವಿವಿಧ ಎಂಜಿನ್ ಆಯ್ಕೆಯೊಂದಿಗೆ ಅತಿ ಕಡಿಮೆ ಅವಧಿಯಲ್ಲಿ ಬರೋಬ್ಬರಿ 70 ಸಾವಿರಕ್ಕೂ ಗ್ರಾಹಕರಿಂದ ಬುಕಿಂಗ್ ಪಡೆದುಕೊಂಡಿದೆ.

ಕಾರೆನ್ಸ್ ಕಾರಿನ ಬುಕ್ಕಿಂಗ್ ಪ್ರಮಾಣವನ್ನು ಆಧರಿಸಿ ವಿತರಣೆಯನ್ನು ತೀವ್ರಗೊಳಿಸಿರುವ ಕಿಯಾ ಕಂಪನಿಯು ಉತ್ಪಾದನಾ ಸಾಮರ್ಥ್ಯಕ್ಕೆ ಅನುಗುಣವಾಗಿ ವಿವಿಧ ಮಾದರಿಗಳಿಗೆ ನಿಗದಿತ ಕಾಯುವಿಕೆ ಅವಧಿಯನ್ನು ಪ್ರಕಟಸಿದೆ. ಹೊಸ ಕಾರು ಮಾದರಿಯಲ್ಲಿ ಪೆಟ್ರೋಲ್ ಮಾದರಿಗಳಿಂತಲೂ ಡೀಸೆಲ್ ಮಾದರಿಗಳು ಹೆಚ್ಚು ಬೇಡಿಕೆ ಪಡೆದುಕೊಳ್ಳುತ್ತಿದ್ದು, ಹೊಸ ಎಂಪಿವಿ ಕಾಯುವಿಕೆ ಅವಧಿಯು ಹೆಚ್ಚುತ್ತಿದೆ.

ಮಾಹಿತಿಗಳ ಪ್ರಕಾರ, ಹೊಸದಾಗಿ ಬುಕಿಂಗ್ ಮಾಡುವ ಗ್ರಾಹಕರು ಕಾರೆನ್ಸ್ ಕಾರು ಖರೀದಿಗಾಗಿ ಕನಿಷ್ಠ 25 ವಾರಗಳಿಂದ ಗರಿಷ್ಠ 75 ವಾರಗಳ ಕಾಲ ಕಾಯಬೇಕಿದ್ದು, ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ಕಾಯುವಿಕೆ ಅವಧಿಯನ್ನು ನಿರ್ಧರಿಸಲಾಗುತ್ತದೆ.

ಕಳೆದ ಫೆಬ್ರವರಿ ಮಧ್ಯಂತರದಲ್ಲಿ ಬಿಡುಗಡೆಯಾಗಿದ್ದ ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 8.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 16.99 ಲಕ್ಷ ಬೆಲೆ ಹೊಂದಿದ್ದು, ವಿವಿಧ ಎಂಜಿನ್ ಆಯ್ಕೆಯೊಂದಿಗೆ ಗ್ರಾಹಕರ ಬೇಡಿಕೆಯಲ್ಲಿ ಭರ್ಜರಿ ಮುಂಚೂಣಿ ಸಾಧಿಸುತ್ತಿದೆ.

ಹೊಸ ಕಾರು 6 ಸೀಟರ್ ಮತ್ತು 7 ಸೀಟರ್ ಸೌಲಭ್ಯದೊಂದಿಗೆ ಮಧ್ಯಮ ಕ್ರಮಾಂಕದ ಎಂಪಿವಿ ಮತ್ತು ಎಸ್‌ಯುವಿ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿದ್ದು, ಹೊಸ ಕಾರು ಪ್ರೀಮಿಯಂ, ಪ್ರೆಸ್ಟಿಜ್, ಪ್ರೆಸ್ಟಿಜ್ ಪ್ಲಸ್, ಲಗ್ಷುರಿ ಮತ್ತು ಲಗ್ಷುರಿ ಪ್ಲಸ್ ಎನ್ನುವ ಐದು ವೆರಿಯೆಂಟ್‌ಗಳಲ್ಲಿ ಹೊಸ ಕಾರು ಖರೀದಿಗೆ ಲಭ್ಯವಿದೆ.

ಕಿಯಾ ಕಂಪನಿಯು ಸೆಲ್ಟೊಸ್ ಎಸ್‌ಯುವಿ ಮಾದರಿಯುವಂತೆಯೇ ಹೊಸ ಕಾರೆನ್ಸ್ ಕಾರಿನಲ್ಲೂ 1.5-ಲೀಟರ್ ಸಾಮಾನ್ಯ ಪೆಟ್ರೋಲ್, 1.4-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಜೋಡಣೆ ಮಾಡಿದ್ದು, ಅತ್ಯುತ್ತಮ ಪರ್ಫಾಮೆನ್ಸ್‌ನೊಂದಿಗೆ ಈ ವಿಭಾಗದಲ್ಲಿಯೇ ಅತಿ ಹೆಚ್ಚು ಮೈಲೇಜ್ ನೀಡುವ ಮಾದರಿ ಇದಾಗಿದೆ.

ವಿವಿಧ ಎಂಜಿನ್ ಆಯ್ಕೆಯೊಂದಿಗೆ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮ್ಯಾಟಿಕ್ ಅಥವಾ 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಮಾದರಿಯನ್ನು ಆಯ್ಕೆ ಮಾಡಬಹುದಾಗಿದ್ದು, 1.5-ಲೀಟರ್ ಪೆಟ್ರೋಲ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 115-ಬಿಎಚ್‌ಪಿ, 144-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ 1.4-ಲೀಟರ್ ಟರ್ಬೊ ಪೆಟ್ರೋಲ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಮತ್ತು 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ 140-ಬಿಎಚ್‌ಪಿ, 242-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

1.5-ಲೀಟರ್ ಡೀಸೆಲ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 115-ಬಿಎಚ್‌ಪಿ, 250-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದು, ಹೊಸ ಕಾರು ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹೆಚ್ಚು ಮೈಲೇಜ್ ನೀಡುತ್ತದೆ.

ಕಾರೆನ್ಸ್ ಕಾರಿನ 1.5 ಲೀಟರ್ ಪೆಟ್ರೋಲ್ ಮ್ಯಾನುವಲ್ ಮಾದರಿಯು ಪ್ರತಿ ಲೀಟರ್‌ಗೆ 15.7 ಕಿ.ಮೀ ಮೈಲೇಜ್ ನೀಡಿದ್ದಲ್ಲಿ 1.4 ಲೀಟರ್ ಟರ್ಬೊ ಪೆಟ್ರೋಲ್ ಮ್ಯಾನುವಲ್ ಮಾದರಿಯು ಪ್ರತಿ ಲೀಟರ್‌ಗೆ 16.2 ಕಿ.ಮೀ ಮತ್ತು ಆಟೋಮ್ಯಾಟಿಕ್ ಮಾದರಿಯು 16.5 ಕಿ.ಮೀ ಮೈಲೇಜ್ ನೀಡುತ್ತದೆ.

ಹಾಗೆಯೇ 1.5 ಲೀಟರ್ ಡೀಸೆಲ್ ಮಾದರಿಯಲ್ಲಿನ ಮ್ಯಾನುವಲ್ ಮಾದರಿಯು ಪ್ರತಿ ಲೀಟರ್‌ಗೆ 21.3 ಕಿ.ಮೀ ಮೈಲೇಜ್ ನೀಡಿದ್ದಲ್ಲಿ ಆಟೋಮ್ಯಾಟಿಕ್ ಮಾದರಿಯು ಪ್ರತಿ ಲೀಟರ್‌ಗೆ 18.3 ಕಿ.ಮೀ ಮೈಲೇಜ್ ನೀಡಲಿದೆ. ಹೊಸ ಕಾರು ಸೆಲ್ಟೊಸ್ ಮಾದರಿಗಿಂತಲೂ ಹೆಚ್ಚಿನ ಮೈಲೇಜ್ ನೀಡಲಿದ್ದು, ಪರ್ಫಾಮೆನ್ಸ್‌ನಲ್ಲೂ ಗಮನಸೆಳೆಯಲಿದೆ.

ಜೊತೆಗೆ ಹೊಸ ಕಾರು ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹೆಚ್ಚಿನ ಸ್ಥಳಾವಕಾಶದೊಂದಿಗೆ 4540 ಎಂಎಂ ಉದ್ದ, 1800 ಎಂಎಂ ಅಗಲ, 1700 ಎಂಎಂ ಎತ್ತರ, 2780 ಎಂಎಂ ವ್ಹೀಲ್ ಬೆಸ್ ಮತ್ತು 195 ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿದ್ದು, ಇದರೊಂದಿಗೆ ಆಕರ್ಷಕವಾದ ಡಿಸೈನ್ ಮತ್ತು ಗುಣಮಟ್ಟದ ಫೀಚರ್ಸ್ ಹೊಂದಿರುವುದು ಗ್ರಾಹಕರ ಆಯ್ಕೆಗೆ ಪ್ರಮುಖ ಆಕರ್ಷಣೆಯಾಗಿದೆ.

ಇದರೊಂದಿಗೆ ಹೊಸ ಕಾರಿನಲ್ಲಿ ಕಿಯಾ ಕಂಪನಿಯು ಬೆಸ್ ವೆರಿಯೆಂಟ್‌ನಲ್ಲೂ ಲಭ್ಯವಾಗುವಂತೆ ಸ್ಟ್ಯಾಂಡರ್ಡ್ ಆಗಿ 6 ಏರ್‌ಬ್ಯಾಗ್ ಮತ್ತು ಆಲ್ ವ್ಹೀಲ್ ಡಿಸ್ಕ್ ಬ್ರೇಕ್ ಜೋಡಿಸಿದ್ದು, ಇನ್ನುಳಿದಂತೆ ವಿವಿಧ ವೆರಿಯೆಂಟ್‌ಗಳಿಗೆ ಅನ್ವಯಿಸುವಂತೆ ಎಬಿಎಸ್ ಜೊತೆ ಇಬಿಡಿ, ಇಎಸ್‌ಸಿ, ಹಿಲ್ ಸ್ಟಾರ್ಟ್ ಅಸಿಸ್ಟ್, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ, ರಿಯರ್ ಪಾರ್ಕಿಂಗ್ ಸೆನ್ಸಾರ್ ಸೌಲಭ್ಯಗಳಿವೆ.

ಇನ್ನು ಹೊಸ ಕಾರು ಇಂಪೀರಿಯಲ್ ಬ್ಲೂ, ಇಂಟೆನ್ಸ್ ರೆಡ್, ಮಾಸ್ ಬ್ರೌನ್, ಸ್ಪಾರ್ಕ್ಲಿಂಗ್ ಸಿಲ್ವರ್, ಅರೋರಾ ಬ್ಲ್ಯಾಕ್ ಪರ್ಲ್, ಗ್ರಾವಿಟಿ ಗ್ರೇ ಮತ್ತು ಗ್ಲೇಸಿಯರ್ ವೈಟ್ ಪರ್ಲ್ ಬಣ್ಣಗಳಲ್ಲಿ ಆಯ್ಕೆ ಮಾಡಬಹುದಾಗಿದ್ದು, ಹೊಸ ಕಾರು ಮಾರುತಿ ಎರ್ಟಿಗಾ, ಮಹೀಂದ್ರಾ ಮರಾಜೋ, ಹ್ಯುಂಡೈ ಅಲ್ಕಾಜರ್, ಮಹೀಂದ್ರಾ ಎಕ್ಸ್‌ಯುವಿ700 ಮತ್ತು ಎಂಜಿ ಹೆಕ್ಟರ್ ಪ್ಲಸ್, ಟಾಟಾ ಸಫಾರಿ ಮತ್ತು ಇನೋವಾ ಕ್ರಿಸ್ಟಾ ಆರಂಭಿಕ ಮಾದರಿಗಳಿಗೂ ಇದು ಭರ್ಜರಿ ಪೈಪೋಟಿ ನೀಡುತ್ತಿದೆ.

ಕಿಯಾ ಇಂಡಿಯಾ ಕಂಪನಿಯು ಸದ್ಯ ಕಾರೆನ್ಸ್ ಎಂಯುವಿ ಮೂಲಕ ಕಾರು ಮಾರಾಟದಲ್ಲಿ ಉತ್ತಮ ಮುನ್ನಡೆ ಕಾಯ್ದುಕೊಳ್ಳುತ್ತಿದ್ದು, ಕಾರೆನ್ಸ್ ಹೊಸ ಮಾದರಿಯ ಮಾಲೀಕರಿಗೆ ಕಂಪನಿಯು ಮಾರಾಟ ನಂತರದ ಪ್ರಮುಖ ಸೇವೆಗಳನ್ನು ಒಂದೇ ಸೂರಿನಡಿಯಲ್ಲಿ ನೀಡುವ ಉದ್ದೇಶದಿಂದ 'ಮೈ ಕನ್ವೀನಿಯನ್ಸ್ ಪ್ಯಾಕೇಜ್' ಅನ್ನು ಪರಿಚಯಿಸಿದೆ.

ಮೈ ಕನ್ವೀನಿಯನ್ಸ್ ಪ್ಯಾಕೇಜ್‌ನಲ್ಲಿ ಗ್ರಾಹಕರು ನಿಯಮಿತ ನಿರ್ವಹಣೆ, ವಿಸ್ತೃತ ವಾರಂಟಿ, ಟೈರ್, ಅಪಘಾತ ದುರಸ್ತಿ ಮತ್ತು ರಸ್ತೆ ಬದಿಯ ಸೌಲಭ್ಯಗಳನ್ನು ಸುಲಭವಾಗಿ ಪಡೆಯಲು ಸಾಧ್ಯವಾಗುತ್ತದೆ. ಮೈ ಕನ್ವೀನಿಯನ್ಸ್ ಪ್ಯಾಕೇಜ್ ಅನ್ನು ಗ್ರಾಹಕರು ಪ್ರೀಮಿಯಂ ಮತ್ತು ಐಷಾರಾಮಿ ಮಾದರಿಯಲ್ಲಿ ಖರೀದಿಸಬಹುದಾಗಿದ್ದು, ಇದು ನಾಲ್ಕು ಮತ್ತು ಐದು ವರ್ಷಗಳವರೆಗೆ ಕಾರಿಗೆ ಕವರೇಜ್ ನೀಡುತ್ತದೆ.