ಈ 15 ಡೀಲರ್ಸ್‌ಗಳಲ್ಲಿ ಮಾತ್ರ ಖರೀದಿಗೆ ಲಭ್ಯವಿರಲಿದೆ ಕಿಯಾ ಇವಿ6 ಎಲೆಕ್ಟ್ರಿಕ್ ಕಾರು

ಕಿಯಾ ಇಂಡಿಯಾ ಕಂಪನಿಯು ತನ್ನ ಜನಪ್ರಿಯ ಎಲೆಕ್ಟ್ರಿಕ್ ಕಾರು ಮಾದರಿಯಾದ ಇವಿ6 ಆವೃತ್ತಿಯನ್ನು ಭಾರತದಲ್ಲೂ ಬಿಡುಗಡೆಗೆ ಸಿದ್ದವಾಗಿದ್ದು, ಹೊಸ ಕಾರು ಜೂನ್ 2 ರಂದು ಅಧಿಕೃತವಾಗಿ ಮಾರುಕಟ್ಟೆಗೆ ಪ್ರವೇಶಿಸಲಿದೆ.

ಈ 15 ಡೀಲರ್ಸ್‌ಗಳಲ್ಲಿ ಮಾತ್ರ ಖರೀದಿಗೆ ಲಭ್ಯವಿರಲಿದೆ ಕಿಯಾ ಇವಿ6 ಎಲೆಕ್ಟ್ರಿಕ್ ಕಾರು

ಇವಿ6 ಎಲೆಕ್ಟ್ರಿಕ್ ಕಾರು ಮಾದರಿಯನ್ನು ಕಿಯಾ ಕಂಪನಿಯು ಭಾರತದಲ್ಲಿ ಸದ್ಯಕ್ಕೆ ಸೀಮಿತ ಸಂಖ್ಯೆಯಲ್ಲಿ ಮಾರಾಟ ಮಾಡಲು ನಿರ್ಧರಿಸಿದ್ದು, ಹೊಸ ಸಂಪೂರ್ಣವಾಗಿ ವಿದೇಶಿ ಮಾರುಕಟ್ಟೆಯಿಂದ ಆಮದು ಮಾಡಿಕೊಂಡಿರುವುದರಿಂದ ತುಸು ದುಬಾರಿ ಬೆಲೆಯಲ್ಲಿ ಮಾರಾಟಗೊಳ್ಳಲಿದೆ.

ಈ 15 ಡೀಲರ್ಸ್‌ಗಳಲ್ಲಿ ಮಾತ್ರ ಖರೀದಿಗೆ ಲಭ್ಯವಿರಲಿದೆ ಕಿಯಾ ಇವಿ6 ಎಲೆಕ್ಟ್ರಿಕ್ ಕಾರು

ಹೊಸ ಕಾರು ಮಾದರಿಯನ್ನು ಕಂಪನಿಯು ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ಆಧರಿಸಿ ದೇಶದ ಪ್ರಮುಖ 12 ನಗರಗಳಲ್ಲಿನ 15 ಡೀಲರ್ಸ್‌ಗಳಲ್ಲಿ ಮಾರಾಟಗೊಳಿಸಲಿದ್ದು, ಮೊದಲ ಹಂತದಲ್ಲಿ ಕೇವಲ 100 ಯುನಿಟ್‌ಗಳು ಮಾತ್ರ ಖರೀದಿಗೆ ಲಭ್ಯವಿರಲಿವೆ.

ಈ 15 ಡೀಲರ್ಸ್‌ಗಳಲ್ಲಿ ಮಾತ್ರ ಖರೀದಿಗೆ ಲಭ್ಯವಿರಲಿದೆ ಕಿಯಾ ಇವಿ6 ಎಲೆಕ್ಟ್ರಿಕ್ ಕಾರು

ಹೀಗಾಗಿ ಕಂಪನಿಯು ತನ್ನ ಪ್ರಮುಖ ಡೀಲರ್ಸ್‌ಗಳಲ್ಲಿ ಮಾತ್ರ ಹೊಸ ಕಾರಿನ ಮಾರಾಟ ಪ್ರಕ್ರಿಯೆ ಕೈಗೊಳ್ಳುತ್ತಿದ್ದು, ಹೊಸ ಕಾರು ನಮ್ಮ ಬೆಂಗಳೂರಿನ ಎಪಿಟೋಮ್ ಆಟೋಮೊಬೈಲ್ಸ್ ಮತ್ತು ವಿಎಸ್‌ಟಿ ಸೆಂಟ್ರಲ್ ಕಾರು ಮಳಿಗೆಯಲ್ಲಿ ಖರೀದಿಗೆ ಲಭ್ಯವಿದ್ದರೆ ಮುಂಬೈ ನಗರಲ್ಲಿ ಆಟೋವಾಹನ ಕಿಯಾ, ಪುಣೆಯಲ್ಲಿ ಕ್ರಿಸ್ಟಲ್ ಆಟೋ, ಅಹಮದಾಬಾದ್‌ನಲ್ಲಿರುವ ಸೂಪರ್ನೋವಾ ಮತ್ತು ಕೊಸ್ಟಲ್ ಕಿಯಾ, ದೆಹಲಿಯ ಜಯಂತಿ ಕಿಯಾ, ಗುರುಗ್ರಾಮ್‌ನಲ್ಲಿ ಧಿಂಗ್ರಾ ಮೋಟಾರ್ಸ್, ನೋಯ್ಡಾದಲ್ಲಿಅಲೈಡ್ ಮೋಟಾರ್ಸ್, ಜೈಪುರ್‌ದಲ್ಲಿ ರಾಜೇಶ್ ಮೋಟಾರ್ಸ್, ಚೆನ್ನೈನಲ್ಲಿ ಕ್ಯಾಪಿಟಲ್ ಕಿಯಾ, ಕೊಚ್ಚಿನ್‌ನಲ್ಲಿ ಇಂಚಿಯಾನ್ ಕಿಯಾ, ಹೈದ್ರಾಬಾದ್‌ನಲ್ಲಿ ಆಟೋಮೋಟಿವ್ ಕಿಯಾ ಮತ್ತು ಕಾರ್ ಕಿಯಾ ಹಾಗೂ ಕೋಲ್ಕತ್ತಾದಲ್ಲಿ ಇಸ್ಟನ್ ಕಿಯಾ ಶೋರೂಂಗಳಲ್ಲಿ ಖರೀದಿಗೆ ಲಭ್ಯವಿರಲಿದೆ.

ಈ 15 ಡೀಲರ್ಸ್‌ಗಳಲ್ಲಿ ಮಾತ್ರ ಖರೀದಿಗೆ ಲಭ್ಯವಿರಲಿದೆ ಕಿಯಾ ಇವಿ6 ಎಲೆಕ್ಟ್ರಿಕ್ ಕಾರು

ಹೊಸಇವಿ6 ಎಲೆಕ್ಟ್ರಿಕ್ ಕಾರು ಎಲೆಕ್ಟ್ರಿಕ್-ಗ್ಲೋಬಲ್ ಮಾಡ್ಯುಲರ್ ಪ್ಲಾಟ್‌ಫಾರ್ಮ್(E-GMP) ಅನ್ನು ಆಧರಿಸಿ ನಿರ್ಮಾಣಗೊಂಡಿದ್ದು, ಇದು ಬ್ರ್ಯಾಂಡ್‌ನ ಭವಿಷ್ಯದ ಶ್ರೇಣಿಯ ಎಲೆಕ್ಟ್ರಿಕ್ ಕೊಡುಗೆಗಳ ಆಧಾರವಾಗಿದೆ. ಹೊಸ ಕಾರು 77.4kWh ಲಿಥಿಯಂ-ಐಯಾನ್ ಬ್ಯಾಟರಿ ಪ್ಯಾಕ್‌ನೊಂದಿಗೆ ಅತ್ಯಧಿಕ ಮೈಲೇಜ್ ನೀಡಲಿದ್ದು, ಇದು ಪ್ರತಿ ಚಾರ್ಜ್‌ಗೆ ಗರಿಷ್ಠ 528 ಕಿ.ಮೀ ಮೈಲೇಜ್ ರೇಂಜ್ ಖಚಿತಪಡಿಸುತ್ತದೆ.

ಈ 15 ಡೀಲರ್ಸ್‌ಗಳಲ್ಲಿ ಮಾತ್ರ ಖರೀದಿಗೆ ಲಭ್ಯವಿರಲಿದೆ ಕಿಯಾ ಇವಿ6 ಎಲೆಕ್ಟ್ರಿಕ್ ಕಾರು

ಹೊಸ ಕಾರಿನ ಬ್ಯಾಟರಿ ಪ್ಯಾಕ್ ಅಲ್ಟ್ರಾ-ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದ್ದು, ಸೂಪರ್ ಚಾರ್ಜಿಂಗ್ ಮೂಲಕ ಕೇವಲ 4.5 ನಿಮಿಷಗಳ ಚಾರ್ಜಿಂಗ್ ಮೂಲಕ ಕನಿಷ್ಠ 100 ಕಿ.ಮೀ ಕ್ರಮಿಸುವಷ್ಟು ಚಾರ್ಜ್ ಮಾಡಬಹುದು. ಜೊತೆಗೆ ಹೊಸ ಕಾರಿನಲ್ಲಿ 350kW ಫಾಸ್ಟ್ ಚಾರ್ಜರ್ ಸೌಲಭ್ಯದೊಂದಿಗೆ 50kWh ಡಿಸಿ ಫಾಸ್ಟ್ ಚಾರ್ಜರ್‌ ಆಯ್ಕೆಗಳಿದ್ದು, ಇವು ಕ್ರಮವಾಗಿ 18 ನಿಮಿಷ ಮತ್ತು 73 ನಿಮಿಷಗಳಲ್ಲಿ ಶೇ. 10 ರಿಂದ ಶೇ. 80ರ ವರೆಗಿನ ಬ್ಯಾಟರಿಯನ್ನು ಚಾರ್ಜ್ ಮಾಡಬಹುದಾಗಿದೆ.

ಈ 15 ಡೀಲರ್ಸ್‌ಗಳಲ್ಲಿ ಮಾತ್ರ ಖರೀದಿಗೆ ಲಭ್ಯವಿರಲಿದೆ ಕಿಯಾ ಇವಿ6 ಎಲೆಕ್ಟ್ರಿಕ್ ಕಾರು

ಕಿಯಾ ಕಂಪನಿಯು ಹೊಸ ಎಲೆಕ್ಟ್ರಿಕ್ ಕಾರಿನಲ್ಲಿ ಡ್ಯುಯಲ್ ಮೋಟಾರ್ ಸೆಟಪ್ ಅನ್ನು ಜೋಡಿಸಿದ್ದು, ರಿಯರ್ ವ್ಹೀಲ್ ಡ್ರೈವ್ ಮಾದರಿಯು 350 ಎನ್ಎಂ ಮತ್ತು 225 ಬಿಎಚ್‌ಪಿ ಉತ್ಪಾದನೆ ಮಾಡಲಿದ್ದರೆ ಆಲ್ ವ್ಹೀಲ್ ಡ್ರೈವ್ ಮಾದರಿಯು 321 ಬಿಹೆಚ್‍ಪಿ ಮತ್ತು 605 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ಈ 15 ಡೀಲರ್ಸ್‌ಗಳಲ್ಲಿ ಮಾತ್ರ ಖರೀದಿಗೆ ಲಭ್ಯವಿರಲಿದೆ ಕಿಯಾ ಇವಿ6 ಎಲೆಕ್ಟ್ರಿಕ್ ಕಾರು

ಗ್ರಾಹಕರ ಬೇಡಿಕೆಯೆಂತೆ ಹೊಸ ಕಾರಿನಲ್ಲಿ ಸ್ನೋ ವೈಟ್ ಪರ್ಲ್, ಅರೋರಾ ಬ್ಲ್ಯಾಕ್ ಪರ್ಲ್, ಮೊನೊಸ್ಕೇಪ್, ರನ್ವೇ ರೆಡ್ ಮತ್ತು ಯಾಚ್ ಬ್ಲೂ ಸೇರಿದಂತೆ ಐದು ಬಾಹ್ಯ ಬಣ್ಣದ ಆಯ್ಕೆ ನೀಡಲಾಗಿದ್ದು, ಹೊಸ ಎಲೆಕ್ಟ್ರಿಕ್ ಕಾರು 4690 ಎಂಎಂ ಉದ್ದ, 1890 ಎಂಎಂ ಅಗಲ ಮತ್ತು 1550 ಎಂಎಂ ಎತ್ತರದೊಂದಿಗೆ ಅತ್ಯುತ್ತಮ ಕ್ಯಾಬಿನ್ ಸ್ಥಳವಾಕಾಶ ಹೊಂದಿದೆ.

ಈ 15 ಡೀಲರ್ಸ್‌ಗಳಲ್ಲಿ ಮಾತ್ರ ಖರೀದಿಗೆ ಲಭ್ಯವಿರಲಿದೆ ಕಿಯಾ ಇವಿ6 ಎಲೆಕ್ಟ್ರಿಕ್ ಕಾರು

ಹಾಗೆಯೇ ಹೊಸ ಕಾರಿನಲ್ಲಿ ಡ್ಯುಯಲ್ 12.3-ಇಂಚಿನ ಡಿಸ್ಪ್ಪೇ, ಡ್ಯುಯಲ್ ಜೋನ್ ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, 10 ಹಂತದಲ್ಲಿ ಹೊಂದಾಣಿಕೆ ಮಾಡಬಹುದಾದ ಪವರ್ ಅಡ್ಜೆಸ್ಟ್ ಫ್ರಂಟ್ ಸೀಟ್‌ಗಳು, ಪ್ಯಾಡಲ್ ಶಿಫ್ಟರ್‌, ರೈನ್ ಸೆನ್ಸಿಂಗ್ ವೈಪರ್‌, ಮಲ್ಟಿ ಡ್ರೈವ್ ಮೋಡ್‌ಗಳು, ವೈರ್‌ಲೆಸ್ ಸ್ಮಾರ್ಟ್‌ಫೋನ್ ಚಾರ್ಜರ್, 4 ಸ್ಪೀಕರ್ ಆಡಿಯೋ ಸಿಸ್ಟಂ, 60ಕ್ಕೂ ಹೆಚ್ಚು ವೈಶಿಷ್ಟ್ಯತೆಗಳನ್ನು ಪಡೆದುಕೊಂಡಿರುವ ಕಿಯಾ ಕನೆಕ್ಟ್ ಸೌಲಭ್ಯವನ್ನು ಕೂಡಾ ಹೊಂದಿರಲಿದೆ.

ಈ 15 ಡೀಲರ್ಸ್‌ಗಳಲ್ಲಿ ಮಾತ್ರ ಖರೀದಿಗೆ ಲಭ್ಯವಿರಲಿದೆ ಕಿಯಾ ಇವಿ6 ಎಲೆಕ್ಟ್ರಿಕ್ ಕಾರು

ಹೊಸ ಕಿಯಾ ಇವಿ6 ಕಾರು 14 ಸ್ಪೀಕರ್‌ಗಳೊಂದಿಗೆ ಮೆರಿಡಿಯನ್ ಸೌಂಡ್ ಸಿಸ್ಟಂ, ವರ್ಧಿತ ರಿಯಾಲಿಟಿ ಹೆಡ್ಸ್-ಅಪ್ ಡಿಸ್ಪ್ಲೇ, ಆಟೋಮ್ಯಾಟಿಕ್ ಫ್ಲಶ್ ಫಿಟ್ಟಿಂಗ್ ಡೋರ್ ಹ್ಯಾಂಡಲ್‌ಗಳು ಮತ್ತು ಚಾಲಿತ ಟೈಲ್‌ಗೇಟ್‌ನಂತಹ ಕೆಲವು ವಿಶೇಷ ವಿನ್ಯಾಸದ ಅಂಶಗಳು ಮತ್ತು ವೈಶಿಷ್ಟ್ಯಗಳೊಂದಿಗೆ ಬರಲಿದ್ದು, ಅಡ್ವಾನ್ಸ್ ಡ್ರೈವಿಂಗ್ ಅಸಿಸ್ಟ್ ಸಿಸ್ಟಂ ಸೂಟ್ ಅನ್ನು ಒಳಗೊಂಡಿದೆ.

ಈ 15 ಡೀಲರ್ಸ್‌ಗಳಲ್ಲಿ ಮಾತ್ರ ಖರೀದಿಗೆ ಲಭ್ಯವಿರಲಿದೆ ಕಿಯಾ ಇವಿ6 ಎಲೆಕ್ಟ್ರಿಕ್ ಕಾರು

ಜೊತೆಗೆ ಹೊಸ ಕಾರಿನಲ್ಲಿ 8 ಏರ್‌ಬ್ಯಾಗ್‌ಗಳು, ಇಎಸ್‌ಸಿ, ಎಬಿಎಸ್, ಹೆಚ್‌ಎಸಿ, ಬಿಎಸ್ಎ, ವಿಎಸ್ಎಂ, ಇಎಸ್ಎಸ್, ಆಲ್ ವ್ಹೀಲ್ ಗಳಿಗೆ ಡಿಸ್ಕ್ ಬ್ರೇಕ್, ಮುಂಭಾಗ ಮತ್ತು ಹಿಂಭಾಗದಲ್ಲಿ ಪಾರ್ಕಿಂಗ್ ಸೆನ್ಸಾರ್ ಮತ್ತು ಐಸೋಫಿಕ್ಸ್ ಚೈಲ್ಡ್ ಆಂಕರ್‌ಗಳನ್ನು ಒಳಗೊಂಡಿದ್ದು, ಕ್ರ್ಯಾಶ್ ಟೆಸ್ಟಿಂಗ್ ಹೊಸ ಕಾರು ಗರಿಷ್ಠ 5 ಸ್ಟಾರ್ ರೇಟಿಂಗ್ಸ್ ಸೌಲಭ್ಯದೊಂದಿಗೆ ಉತ್ತಮ ಸುರಕ್ಷತೆಯನ್ನು ಖಚಿತಪಡಿಸುತ್ತದೆ.

ಈ 15 ಡೀಲರ್ಸ್‌ಗಳಲ್ಲಿ ಮಾತ್ರ ಖರೀದಿಗೆ ಲಭ್ಯವಿರಲಿದೆ ಕಿಯಾ ಇವಿ6 ಎಲೆಕ್ಟ್ರಿಕ್ ಕಾರು

ಹೊಸ ಕಾರು ಐಷಾರಾಮಿ ಫೀಚರ್ಸ್‌ಗಳೊಂದಿಗೆ ಪ್ರಮುಖ ಜರ್ಮನ್ ಕಾರು ಕಂಪನಿಗಳಿಗೆ ಉತ್ತಮ ಪೈಪೋಟಿ ನೀಡಲಿದ್ದು, ಹೊಸ ಕಾರು ಎಕ್ಸ್‌ಶೋರೂಂ ಪ್ರಕಾರ ರೂ.50 ಲಕ್ಷದಿಂದ ರೂ. 60 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳಬಹುದಾಗಿದೆ.

Most Read Articles

Kannada
English summary
Kia new ev6 available only major 15 dealership details
Story first published: Monday, May 30, 2022, 8:45 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X