Just In
- 13 min ago
ಯಾವುದೇ ಏರ್ಪೋರ್ಟ್ಗೂ ಕಮ್ಮಿಯಿಲ್ಲ ಬೆಂಗಳೂರಿನ ಈ ರೈಲು ನಿಲ್ದಾಣ: ಹೇಗಿದೆ ಒಮ್ಮೆ ನೋಡಿ
- 22 min ago
ಹೊಸ ಫೀಚರ್ಸ್ಗಳೊಂದಿಗೆ ಬಿಡುಗಡೆಯಾಗಲಿದೆ ಕಿಯಾ ಸೆಲ್ಟೋಸ್ ಫೇಸ್ಲಿಫ್ಟ್
- 1 hr ago
ಮನಕಲುಕುವ ಘಟನೆ: ಮೃತ ತಾಯಿಯನ್ನು 80 ಕಿ.ಮೀ ಬೈಕ್ನಲ್ಲೇ ಸಾಗಿಸಿದ ಮಗ
- 1 hr ago
ಹೊಸ ಆಫ್-ರೋಡರ್ ಆರ್ಜೆಡ್ಆರ್ ಪ್ರೊ ಆರ್ ಸ್ಪೋರ್ಟ್ ಬಿಡುಗಡೆ ಮಾಡಿದ ಪೋಲಾರಿಸ್ ಇಂಡಿಯಾ
Don't Miss!
- Movies
ವಿಡಿಯೋ: ಜಗ್ಗೇಶ್ ಮನೆ ನಾಯಿಗೂ ಹಾಡು ಬರುತ್ತೆ!
- Finance
4 ತಿಂಗಳಲ್ಲೇ ಭಾರಿ ಏರಿಕೆ ಕಂಡ ಸೆನ್ಸೆಕ್ಸ್: ಆಟೋ, ಪವರ್ ಸ್ಟಾಕ್ ಬಲ
- News
ಬಲವಂತವಾಗಿ ಹಿಡಿದ ಅಭಿಮಾನಿಯ ಕೈಯಿಂದ ತಂದೆಯನ್ನು ರಕ್ಷಿಸಿದ ಆರ್ಯನ್ ಖಾನ್
- Technology
ಇದೇ ತಿಂಗಳು 5G ಸೇವೆ ಬರಲಿದೆ ಅಂತಾ ನಿರೀಕ್ಷಿಸುತ್ತಿದ್ದೀರಾ?..ಈ ಸುದ್ದಿಯನ್ನೊಮ್ಮೆ ಗಮನಿಸಿ!
- Sports
CWG 2022: ಬ್ಯಾಡ್ಮಿಂಟನ್ಲ್ಲಿ ಭಾರತಕ್ಕೆ ಮತ್ತೊಂದು ಚಿನ್ನ, ಸಿಂಗಲ್ಸ್ನಲ್ಲಿ ಚಾಂಪಿಯನ್ ಆದ ಲಕ್ಷ್ಯಸೇನ್
- Lifestyle
ಬೆಚ್ಚಗಾಗಲು ಬಳಸುವ ರೂಮ್ ಹೀಟರ್ ಎಷ್ಟು ಅಪಾಯಕಾರಿ ಗೊತ್ತಾ?
- Travel
ಭಾರತದಲ್ಲಿರುವ ಕೆಲವು ಸ್ಥಳಗಳು ಅಸ್ತಮಾ ರೋಗಿಗಳಿಗೆ ಸಲ್ಪ ಮಟ್ಟದಲ್ಲಿ ಅಪಾಯಕಾರಿಯಾಗಬಹುದು!
- Education
CSB Recruitment 2022 : 66 ಸೈಂಟಿಸ್ಟ್-ಬಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕಡಿಮೆ ಅವಧಿಯಲ್ಲಿ 1.5 ಲಕ್ಷ ಮಾರಾಟದ ಮೈಲಿಗಲ್ಲು ಸಾಧಿಸಿದ ಕಿಯಾ ಸೊನೆಟ್
ಕೊರಿಯಾ ಮೂಲದ ಕಾರು ತಯಾರಕ ಕಂಪನಿಯಾದ ಕಿಯಾ ಇಂಡಿಯಾ 2020ರ ಸೆಪ್ಟೆಂಬರ್ ತಿಂಗಳಿನಲ್ಲಿ ಭಾರತದಲ್ಲಿ ಸೊನೆಟ್(Sonet) ಕಾಂಪ್ಯಾಕ್ಟ್ ಎಸ್ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತು. ಸೆಲ್ಟೋಸ್, ಕಾರ್ನಿವಲ್ ಬಳಿಕ ಕಿಯಾ ಮೋಟಾರ್ಸ್ ಮೂರನೇ ಮಾದರಿಯಾಗಿ ಸೊನೆಟ್ ಕಾಂಪ್ಯಾಕ್ಟ್ ಎಸ್ಯುವಿಯನ್ನು ಬಿಡುಗಡೆಗೊಳಿಸಿತ್ತು.

ಇದೀಗ ಕಿಯಾ ಸೊನೆಟ್ ಬಿಡುಗಡೆಯಾದ ಎರಡು ವರ್ಷದೊಳಗೆ ದೇಶೀಯ ಮಾರುಕಟ್ಟೆಯಲ್ಲಿ 1.5 ಲಕ್ಷ ಮಾರಾಟದ ಗಡಿ ದಾಟಿ ಹೊಸ ಮೈಲಿಗಲ್ಲು ಸಾಧಿಸಿದೆ. ಈ ಸಬ್ ಕಾಂಪ್ಯಾಕ್ಟ್ ಎಸ್ಯುವಿಯು ಭಾರತ ಮಾರುಕಟ್ಟೆಯಲ್ಲಿ ಬ್ಲಾಕ್ಬಸ್ಟರ್ ಹಿಟ್ ಆಗಿದೆ. ಈ ಎಸ್ಯುವಿಯು ಅದರ ಬೆಲೆ ಮತ್ತು ವೈಶಿಷ್ಟ್ಯಗಳ ಕಾರಣದಿಂದಾಗಿ ಸಾಕಷ್ಟು ಗಮನ ಸೆಳೆಯಿತು .ಹೆಚ್ಚು ಸ್ಥಳೀಯವಾಗಿರುವ ಈ ಎಸ್ಯುವಿ ಕಳೆದ 21 ತಿಂಗಳುಗಳಲ್ಲಿ ಕಂಪನಿಗೆ ಅಗ್ರ ಮಾರಾಟಗಾರ ಎಂದು ಸಾಬೀತಾಗಿದೆ.

ಇದು ಸ್ಥಳೀಯವಾಗಿ ಒಟ್ಟು ಮಾರಾಟದ 32 ಪ್ರತಿಶತಕ್ಕೆ ಕೊಡುಗೆ ನೀಡಿದೆ. 26 ಪ್ರತಿಶತ ಗ್ರಾಹಕರು ಸೊನೆಟ್ನ ಟಾಪ್-ಸ್ಪೆಕ್ ಎಕ್ಸ್ ಪ್ಲಸ್ ರೂಪಾಂತರಗಳನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಈ ಕಿಯಾ ಸೊನೆಟ್ ಎಸ್ಯುವಿಯ ಆರಂಭಿಕ ಬೆಲೆಯು ರೂ.7.15 ಲಕ್ಷವಾಗಿದೆ.

ಈ ಕಿಯಾ ಸೊನೆಟ್ ಸಬ್ ಕಾಂಪ್ಯಾಕ್ಟ್ ಎಸ್ಯುವಿಯ ಪೆಟ್ರೋಲ್ ಮತ್ತು ಎರಡು ಡೀಸೆಲ್ ಎಂಜಿನ್ ಆಯ್ಕೆಗಳಲ್ಲಿ ಲಭ್ಯವಿದೆ. ಇದರಲ್ಲಿ 1.2-ಲೀಟರ್ ಯುನಿಟ್ ಮತ್ತು 1.0-ಲೀಟರ್ ಟರ್ಬೊ-ಚಾರ್ಜ್ಡ್ ಪೆಟ್ರೋಲ್ ಅನ್ನು ಹೊಂದಿದೆ. ಇದರಲಿ 1.2-ಲೀಟರ್ ಪೆಟ್ರೋಲ್ ಎಂಜಿನ್ 84 ಬಿಹೆಚ್ಪಿ ಪವರ್ ಮತ್ತು 115 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ

ಇನ್ನು ಟಾಪ್ ಸ್ಪೆಕ್ ಮಾದರಿಯಲ್ಲಿರುವ 1.0-ಲೀಟರ್ ಪೆಟ್ರೋಲ್ ಎಂಜಿನ್ 119 ಬಿಹೆಚ್ಪಿ ಪವರ್ ಮತ್ತು 172 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 7 ಅಥವಾ 6-ಸ್ಪೀಡ್ ಐಎಂಟಿ ಅನ್ನು ಕೂಡ ಜೋಡಿಸಲಾಗಿದೆ.

ಈ ಕಿಯಾ ಸೊನೆಟ್ ಸಬ್ ಕಾಂಪ್ಯಾಕ್ಟ್ ಎಸ್ಯುವಿಯ ಡೀಸೆಲ್ ಎಂಜಿನ್ ಬಗ್ಗೆ ಹೇಳುವುದಾದರೆ, 1.5-ಲೀಟರ್ ಡೀಸೆಲ್ ಡಬ್ಲ್ಯುಜಿಟಿ ಎಂಜಿನ್ 99 ಬಿಹೆಚ್ಪಿ ಪವರ್ ಮತ್ತು 240 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಇನ್ನು ವಿಜಿಟಿ ಎಂಜಿನ್ 114 ಬಿಹೆಚ್ಪಿ ಮತ್ತು 250 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ,

ಕಿಯಾ ಸೊನೆಟ್ ಸಬ್ ಕಾಂಪ್ಯಾಕ್ಟ್ ಎಸ್ಯುವಿಯಲ್ಲಿ ಎಲ್ಇಡಿ ಹೆಡ್ಲ್ಯಾಂಪ್ಸ್, ಎಲ್ಇಡಿ ಡಿಆರ್ಎಲ್ಎಸ್, ಫಾಗ್ ಲ್ಯಾಂಪ್ಸ್, ಸಿಗ್ನೆಚೆರ್ ಟೈಗರ್ ನೊಸ್ ಫ್ರಂಟ್ ಗ್ರಿಲ್, 16-ಇಂಚಿನ ಕ್ರಿಸ್ಟಲ್ ಕಟ್ ಅಲಾಯ್ ವೀಲ್ಹ್, ರಿಪ್ಲೆಕ್ಟರ್ ಸ್ಟ್ರೀಪ್ಗೆ ಹೊಂದಿಕೊಂಡಂತಿರುವ ಹಾರ್ಟ್ ಬಿಟ್ ವಿನ್ಯಾಸದ ಎಲ್ಇಡಿ ಟೈಲ್ ಲೈಟ್ಸ್, ಫ್ಲಕ್ಸ್ ಡಿಫ್ಯೂಸರ್ ಮತ್ತು ರಿಯರ್ ಬಂಪರ್ ಹೊಂದಿದೆ.

ಸೊನೆಟ್ ಎಸ್ಯುವಿ ಒಳಭಾಗದಲ್ಲೂ ಕೂಡಾ ಹಲವಾರು ಪ್ರೀಮಿಯಂ ಫೀಚರ್ಸ್ಗಳ ನೀಡಲಾಗಿದೆ. ಇದರಲ್ಲಿ ಮುಂಭಾಗದಲ್ಲಿ ವೆಂಟಿಲೆಟೆಡ್ ಲೆದರ್ ಸೀಟುಗಳು, ತ್ರಿ ಸ್ಪೋಕ್ ಡಿ ಕಟ್ ಸ್ಟೀರಿಂಗ್ ವೀಲ್ಹ್ ಜೊತೆ ಮೌಂಟೆಡ್ ಕಂಟ್ರೋಲ್, ಸೆಮಿ ಡಿಜಿಟಲ್ ಇನ್ಸ್ಟುಮೆಂಟ್ ಕ್ಲಸ್ಟರ್, ಮಲ್ಟಿ ಇನ್ಫಾರ್ಮೆಷನ್ ಡಿಸ್ಪ್ಲೇ, 10.25-ಇಂಚಿನ ಟಚ್ ಸ್ಕ್ರೀನ್ ಇನ್ಪೋಟೈನ್ಮೆಂಟ್ ಸಿಸ್ಟಂ ಜೊತೆಗೆ ಆ್ಯಪಲ್ ಕಾರ್ಪ್ಲೇ ಮತ್ತು ಅಂಡ್ರಾಯಿಡ್ ಆಟೋ ಕನೆಕ್ಟಿಟಿಯನ್ನು ಒಳಗೊಂಡಿದೆ.

ಇದರೊಂದಿಗೆ ಈ ಸಬ್ ಕಾಂಪ್ಯಾಕ್ಟ್ ಎಸ್ಯುವಿಯಲ್ಲಿ ವೈರ್ಲೆಸ್ ಚಾರ್ಜರ್, ಸೌಂಡ್ ಮೋಡ್ ಲೈಟಿಂಗ್ ಮತ್ತು ಬಾಷ್ ಸಿಸ್ಟಂ ಹೊಂದಿರುವ 7-ಸ್ಪೀಕರ್ಸ್ ಅನ್ನು ಒಳಗೊಂಡಿದೆ. ಇನ್ನು ಕಿಯಾ ಮೋಟಾರ್ಸ್ ಅಭಿವೃದ್ದಿಪಡಿಸಿರುವ ಯುವಿಒ ಕಾರ್ ಕನೆಕ್ಟ್ ಟೆಕ್ನಾಲಜಿ ಸೌಲಭ್ಯವು ಗರಿಷ್ಠ ಫೀಚರ್ಸ್ ಹೊಂದಿದ್ದು, ಸುಮಾರು 57 ಫೀಚರ್ಸ್ಗಳನ್ನು ಯುವಿಒ ಆ್ಯಪ್ ಮೂಲಕವೇ ಕಾರಿನ ಪ್ರಮುಖ ತಾಂತ್ರಿಕ ಅಂಶಗಳನ್ನು ನಿಯಂತ್ರಣ ಮಾಡಬಹುದು.

ಈ ಕಿಯಾ ಸೊನೆಟ್ ಸಬ್ ಕಾಂಪ್ಯಾಕ್ಟ್ ಎಸ್ಯುವಿಯಲ್ಲಿ ಪ್ರಯಾಣಿಕ ಸುರಕ್ಷತೆಗಾಗಿ, ಇದರಲ್ಲಿ 6-ಏರ್ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ವೆಹಿಕಲ್ ಸ್ಟ್ಯಾಬಿಲಿಟಿ ಮ್ಯಾನೆಜ್ಮೆಂಟ್(ವಿಎಸ್ಎಂ), ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೊಲ್, ಬ್ರೇಕ್ ಅಸಿಸ್ಟ್, ಎಮರ್ಜೆನ್ಸಿ ಸ್ಟಾಪ್ ಸಿಗ್ನಲ್, ಇಂಪ್ಯಾಕ್ಟ್ ಸೆನ್ಸಾರ್ ಆಟೋ ಡೋರ್ ಅನ್ಲಾಕ್, ಸ್ಪೀಡ್-ಸೆನ್ಸಿಂಗ್ ಆಟೋ ಡೋರ್ ಲಾಕ್, ಫ್ರಂಟ್ ಆ್ಯಂಡ್ ರಿಯರ್ ಪಾರ್ಕಿಂಗ್ ಸೆನ್ಸಾರ್, ಕ್ರೂಸ್ ಕಂಟ್ರೊಲ್, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ ಮತ್ತು ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್ ಅನ್ನು ನೀಡಲಾಗಿದೆ.

ಇನ್ನು ನವೀಕರಣಗೊಂಡಿರುವ 2022ರ ಸೊನೆಟ್ ಮಾದರಿಯ ಬೆಸ್ ವೆರಿಯೆಂಟ್ನಲ್ಲಿ ಈ ಬಾರಿ ಸ್ಟ್ಯಾಂಡರ್ಡ್ ಆಗಿ ನಾಲ್ಕು ಏರ್ಬ್ಯಾಗ್ ಮತ್ತು ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ ಅನ್ನು ನೀಡಲಾಗಿದೆ. ಹಾಗೆಯೇ ವೈಟ್ ಸ್ಟಿಚ್ ಹೊಂದಿರುವ ಸೆಮಿ ಲೆದರ್ ಆಸನಗಳು ಒಳಾಂಗಣ ವಿನ್ಯಾಸಕ್ಕೆ ಮತ್ತಷ್ಟು ಮೆರಗು ನೀಡಿದ್ದು, ಹಿಂಭಾಗದ ಸೀಟಿನಲ್ಲಿ ಮಡಿಕೆ ಮಾಡಬಹುದಾದ ನಾಬ್ ನೀಡಲಾಗಿದೆ. ಸೊನೆಟ್ ಮಾದರಿಯ ವಿಶೇಷ ಆವೃತ್ತಿಯು ನಾಲ್ಕು ಬಣ್ಣದ ಆಯ್ಕೆಗಳಲ್ಲಿ ಲಭ್ಯವಿದ್ದು, ಅರೋರಾ ಬ್ಲ್ಯಾಕ್ ಪರ್ಲ್, ಗ್ಲೇಸಿಯರ್ ವೈಟ್ ಪರ್ಲ್, ಸ್ಟೀಲ್ ಸಿಲ್ವರ್ ಮತ್ತು ಗ್ರಾವಿಟಿ ಗ್ರೇ ಬಣ್ಣಗಳ ಆಯ್ಕೆಯೊಂದಿಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಹೊಂದಿದೆ.

ಡ್ರೈವ್ಸ್ಪಾರ್ಕ್ ಅಭಿಪ್ರಾಯ
ಭಾರತೀಯ ಮಾರುಕಟ್ಟೆಯಲ್ಲಿ ಕಿಯಾ ಸೊನೆಟ್ ಬಿಡುಗಡೆಯಾದ ಆರಂಭದಲ್ಲೇ ಅತಿ ಹೆಚ್ಚು ಪೈಪೋಟಿ ಹೊಂದಿರುವ ಕಾಂಪ್ಯಾಕ್ಟ್ ಎಸ್ಯುವಿ ವಿಭಾಗದಲ್ಲಿ ಹೊಸ ಸಂಚಲವನ್ನು ಮೂಡಿಸಿತು. ಕಿಯಾ ಸೊನೆಟ್ ಭಾರತೀಯ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಫೋರ್ಡ್ ಇಕೋಸ್ಪೋರ್ಟ್, ಹ್ಯುಂಡೈ ವೆನ್ಯೂ ಮತ್ತು ಟಾಟಾ ನೆಕ್ಸಾನ್ ಎಸ್ಯುವಿಗಳಿಗೆ ಪೈಪೋಟಿ ನೀಡುತ್ತಿದೆ.