ಫೆಬ್ರವರಿ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರುಗಳಿವು..

ವಿಶ್ವದ ಕಾರು ತಯಾರಕರ ದೊಡ್ಡ ಮಾರುಕಟ್ಟೆಯಲ್ಲಿ ಭಾರತದ ವಾಹನ ಮಾರುಕಟ್ಟೆಯು ಕೂಡ ಒಂದಾಗಿದೆ. ಭಾರತೀಯ ಮಾರುಕಟ್ಟೆಯಲ್ಲಿ ವಿವಿಧ ಮಾದರಿಯ ಕಾರುಗಳು ಮಾರಾಟವಾಗುತ್ತಿವೆ. ಕಡಿಮೆ ಬೆಲೆಯ ಕಾರುಗಳಿಂದ ಬಹುಕೋಟಿ ಬೆಲೆಯ ಸೂಪರ್ ಕಾರುಗಳು ಕೂಡ ಮಾರಾಟವಾಗುತ್ತಿವೆ.

ಫೆಬ್ರವರಿ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರುಗಳಿವು..

ಭಾರತೀಯ ಮಾರುಕಟ್ಟೆಯಲ್ಲಿ ಹಲವಾರು ವಿಭಾಗದ ಹೊಸ ಕಾರುಗಳು ಬಿಡುಗಡೆಯಾಗಲಿದೆ, ಫೆಬ್ರವರಿ ತಿಂಗಳಿನಲ್ಲಿ ಪ್ರೀಮಿಯಂ ಮತ್ತು ಬಜೆಟ್ ಬೆಲೆಯ ಹೊಸ ಕಾರು ಬಿಡುಗಡೆಯಾಗಲಿದೆ. ಇದರಿಂದ ಭಾರತೀಯ ಕಾರು ಪ್ರೀಯರ ಆಯ್ಕೆಯು ಹೆಚ್ಚಾಗಲಿದೆ. ಹಲವು ಜನಪ್ರಿಯ ಕಾರು ತಯಾರಕ ಕಂಪನಿಗಳು ಭಾರತದಲ್ಲಿ ಹೊಸ ಕಾರುಗಳನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಇದರಲ್ಲಿ ಮುಂದಿನ ತಿಂಗಳು ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಕಾರುಗಳ ಬಗ್ಗೆ ಮಾಹಿತಿ ಇಲ್ಲಿದೆ.

ಫೆಬ್ರವರಿ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರುಗಳಿವು..

ಆಡಿ ಕ್ಯೂ7 ಫೇಸ್‌ಲಿಫ್ಟ್

ಆಡಿ ಇಂಡಿಯಾ (Audi India) ಕಂಪನಿಯು ಹೊಸ ಕ್ಯೂ7 ಫೇಸ್‌ಲಿಫ್ಟ್ ಎಸ್‍ಯುವಿಯನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಈ ಹೊಸ ಆಡಿ ಕ್ಯೂ7 ಫೇಸ್‌ಲಿಫ್ಟ್ (Audi Q7 facelift) ಎಸ್‍ಯುವಿಯು ಫೆಬ್ರವರಿ 3 ರಂದು ಭಾರತದಲ್ಲಿ ಬಿಡುಗಡೆಯಾಗಲಿದೆ,

ಫೆಬ್ರವರಿ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರುಗಳಿವು..

ಆಡಿ ಕಂಪನಿಯು 2022ರ ಕ್ಯೂ7 ಫೇಸ್‌ಲಿಫ್ಟ್ ಎಸ್‍ಯುವಿಯ ಖರೀದಿಗಾಗಿ ಅಧಿಕೃತವಾಗಿ ಬುಕ್ಕಿಂಗ್ ಅನ್ನು ಪ್ರಾರಂಭಿಸಿದೆ, ಈ ಐಷಾರಾಮಿ ಎಸ್‍ಯುವಿಯನ್ನು ಖರೀದಿಸಲು ಬಯಸುವವರು ಟೋಕನ್ ಮೊತ್ತ ರೂ,5 ಲಕ್ಷ ಪಾವತಿಸಿ ಬುಕ್ಕಿಂಗ್ ಮಾಡಿಕೊಳ್ಳಬಹುದು. ಆಡಿ ಕ್ಯೂ7 ಫೇಸ್‌ಲಿಫ್ಟ್ ಅನ್ನು ಪ್ರೀಮಿಯಂ ಪ್ಲಸ್ ಮತ್ತು ಟೆಕ್ನಾಲಜಿ ಸೇರಿದಂತೆ ಎರಡು ರೂಪಾಂತರಗಳಲ್ಲಿ ನೀಡಲಾಗುತ್ತದೆ.

ಫೆಬ್ರವರಿ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರುಗಳಿವು..

ಈ ಎರಡು ರೂಪಾಂತರಗಳಲ್ಲಿ ಅತ್ಯಾಧುನಿಕ ಫೀಚರ್ಸ್ ಮತ್ತು ತಂತ್ರಜ್ಙಾನಗಳನ್ನು ಒಳಗೊಂಡಿರುತ್ತದೆ. ನವೀಕರಿಸಿದ ಎಸ್‍ಯುವಿಯಲ್ಲಿ 3.0-ಲೀಟರ್, ಟ್ವಿನ್-ಟರ್ಬೋಚಾರ್ಜ್ಡ್, ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 335 ಬಿಹೆಚ್‍ಪಿ ಪವರ್ ಮತ್ತು 500 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿರುತ್ತದೆ. ಈ ಎಂಜಿನ್ ನೊಂದಿಗೆ 8-ಸ್ಪೀಡ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ. ಇನ್ನು ಈ ಹೊಸ ಆಡಿ ಕ್ಯೂ7 ಫೇಸ್‌ಲಿಫ್ಟ್ ಎಸ್‍ಯುವಿಯು 250 ಕಿಮೀ ಟಾಪ್ ಸ್ಪೀಡ್ ಅನ್ನು ಹೊಂದಿದೆ, ಬ್ರ್ಯಾಂಡ್‌ನ ಕ್ವಾಟ್ರೊ ಆಲ್-ವೀಲ್-ಡ್ರೈವ್ ಸಿಸ್ಟಂ ಸಹ ಈ ಎಸ್‍ಯುವಿಯಲ್ಲಿ ಹೊಂದಿರುತ್ತದೆ.

ಫೆಬ್ರವರಿ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರುಗಳಿವು..

2022ರ ಮಾರುತಿ ಬಲೆನೊ

ಈ ಹೊಸ ಮಾರುತಿ ಬಲೆನೊ ಕಾರನ್ನು ಫೆಬ್ರವರಿ 10 ರಂದು ಬಿಡುಗಡೆಯಾಗಲಿದೆ. ಮಾರುತಿ ಸುಜುಕಿ ಕಂಪನಿಯು ತನ್ನ ಗುಜರಾತ್ ಮೂಲದ ಸ್ಥಾವರದಲ್ಲಿ ಹೊಸ 2022ರ ಮಾರುತಿ ಬಲೆನೊ ಕಾರಿನ ಉತ್ಪಾದನೆಯನ್ನು ಈಗಾಗಲೇ ಪ್ರಾರಂಭಿಸಿದೆ. ಈ ಹ್ಯಾಚ್‌ಬ್ಯಾಕ್‌ನ ಮೊದಲ ಯುನಿಟ್ ಅನ್ನು ಇದೇ ತಿಂಗಳ 24 ರಂದು ಹೊರತರಲಾಯಿತು. ಇದರ ಚಿತ್ರಗಳು ಈಗಾಗಲೇ ಇಂಟರ್ನೆಟ್‌ನಲ್ಲಿ ಸೋರಿಕೆಯಾಗಿವೆ.

ಫೆಬ್ರವರಿ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರುಗಳಿವು..

ಮಾರುತಿಯ ನೆಕ್ಸಾ ಡೀಲರ್‌ಶಿಪ್ ಶ್ರೇಣಿಯ ಮೂಲಕ ಮಾರಾಟ ಮಾಡಲು ಹೊಸ ಬಲೆನೊ ಗಮನಾರ್ಹವಾಗಿ ಪರಿಷ್ಕೃತ ಮುಂಭಾಗದ ವಿನ್ಯಾಸದೊಂದಿಗೆ ಬರುತ್ತದೆ. ಹ್ಯಾಚ್‌ಬ್ಯಾಕ್‌ನ ಬಾಡಿ ಪ್ಯಾನೆಲ್‌ಗಳನ್ನು ಮರು-ವಿನ್ಯಾಸಗೊಳಿಸಲಾಗಿದೆ ಮತ್ತು ಹೊಸ ಮಾದರಿಯು ಪ್ರಸ್ತುತ ಕಾರ್‌ಗಿಂತ ಅಗಲವಾಗಿ ಮತ್ತು ದಪ್ಪವಾಗಿ ಕಾಣುತ್ತದೆ. ಹೊಸ ಬಲೆನೊ ಮಾದರಿಯು ಕೆಲವು ಹೆಚ್ಚುವರಿ ಫೀಚರ್ಸ್ ಗಳನ್ನು ಒಳಗೊಂಡಿರುತ್ತದೆ. ಇನ್ನು ಎಂಜಿನ್ ನಲ್ಲಿ ಯಾವುದೇ ಬದಲಾವಣೆಗಳನ್ನು ಹೊಂದಿರುವುದಿಲ್ಲವೆಂದು ನಿರೀಕ್ಷಿಸುತ್ತೇವೆ

ಫೆಬ್ರವರಿ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರುಗಳಿವು..

ಹೊಸ ಮಾರುತಿ ಬಲೆನೊ ಕಾರಿನಲ್ಲಿ 1.2 ಲೀಟರ್ ಪೆಟ್ರೋಲ್ ಎಂಜಿನ್ ಅನ್ನು ಮುಂದುವರೆಸಬಹುದು. ಈ ಎಂಜಿನ್ 82 ಬಿಎಚ್‌ಪಿ ಪವರ್ ಮತ್ತು 113 ಎನ್‌ಎಂ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ನೊಂದಿಗೆ ಮ್ಯಾನುವಲ್ ಮತ್ತು ಸಿವಿಟಿ ಗೇರ್ ಬಾಕ್ಸ್ ಆಯ್ಕೆಗಳನ್ನು ನೀಡಲಾಗಿದೆ.

ಫೆಬ್ರವರಿ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರುಗಳಿವು..

2022ರ ಎಂಜಿ ಜೆಡ್ಎಸ್ ಇವಿ ಫೇಸ್‌ಲಿಫ್ಟ್

ಎಂಜಿ ಮೋಟಾರ್ ಇಂಡಿಯಾ ಈ ವರ್ಷದ ಫೆಬ್ರವರಿಯಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಫೇಸ್‌ಲಿಫ್ಟ್ ಇವಿ ಮಾದರಿಯನ್ನು ಪರಿಚಯಿಸಬಹುದು, ನವೀಕರಿಸಿದಈ ಎಲೆಕ್ಟ್ರಿಕ್ ಎಸ್‍ಯುವಿಯು ಈಗಾಗಲೇ ಭಾರತದಲ್ಲಿ ರೋಡ್ ಟೆಸ್ಟ್ ನಡೆಸುವಾಗ ಕಾಣಿಸಿಕೊಂಡಿದೆ. ಆದರೆವಾಹನದಲ್ಲಿನ ದೊಡ್ಡ ಬದಲಾವಣೆಯು ಪವರ್‌ಟ್ರೇನ್‌ಗೆ, ಹೆಚ್ಚು ನಿರ್ದಿಷ್ಟವಾಗಿ, ಬ್ಯಾಟರಿ ಪ್ಯಾಕ್‌ಗೆ ಇರುತ್ತದೆ. 2022ರ ಎಂಜಿ ಜೆಡ್ಎಸ್ ಇವಿ ಫೇಸ್‌ಲಿಫ್ಟ್ ಎರಡು ಬ್ಯಾಟರಿ ಆಯ್ಕೆಗಳೊಂದಿಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಲಭ್ಯವಿದೆ.

ಫೆಬ್ರವರಿ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರುಗಳಿವು..

ಇದು 72 kWh ಬ್ಯಾಟರಿ ಮತ್ತು 51 kWh ಬ್ಯಾಟರಿ ಆಯ್ಕೆಗಳಾಗಿದೆ. ಇಂಡಿಯಾ-ಸ್ಪೆಕ್ ಆವೃತ್ತಿಯು 51 kWh ಬ್ಯಾಟರಿ ಆಯ್ಕೆಯನ್ನು ಪಡೆಯುತ್ತದೆ, ಇದು ಹೊರಹೋಗುವ ಆವೃತ್ತಿಗೆ ಪವರ್ ನೀರುವ 44.5 kWh ಬ್ಯಾಟರಿಗಿಂತ ಇನ್ನೂ ದೊಡ್ಡದಾಗಿದೆ. ಎಸ್‍ಯುವಿಯ ಪ್ರಸ್ತುತ 419 ಕಿಮೀ ರೇಂಜ್ ಅನ್ನು ಮತ್ತಷ್ಟು ಹೆಚ್ಚಿಸುವ ನಿರೀಕ್ಷೆಯಿದೆ.

ಫೆಬ್ರವರಿ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರುಗಳಿವು..

ಕಿಯಾ ಕಾರೆನ್ಸ್

ಕಿಯಾ ಇಂಡಿಯಾ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ತನ್ನ ನಾಲ್ಕನೇ ಕಾರು ಮಾದರಿಯಾಗಿ ಕಾರೆನ್ಸ ಮಾದರಿಯನ್ನು ಭಾರತದಲ್ಲಿ ಬಿಡುಗಡೆ ಮಾಲಿದೆ, ಅತ್ಯುತ್ತಮ ಎಂಜಿನ್ ಆಯ್ಕೆ, ಸೆಗ್ಮೆಂಟ್ ಫಸ್ಟ್ ಫೀಚರ್ಸ್‌ಗಳೊಂದಿಗೆ ಅನಾವರಣಗೊಂಡಿರುವ ಈ ಹೊಸ ಎಂಪಿವಿ ಕಾರು ಫೆಬ್ರವರಿ ಎರಡನೇ ವಾರದಲ್ಲಿ ಅಧಿಕೃತವಾಗಿ ಬಿಡುಗಡೆಯಾಗಲಿದೆ.

ಫೆಬ್ರವರಿ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರುಗಳಿವು..

ಈ ಹೊಸ ಮಾದರಿಯು ಸೆಲ್ಟೋಸ್ ಎಸ್‍ಯುವಿಗೆ ಆಧಾರವಾಗಿರುವ ಮಾರ್ಪಡಿಸಿದ SP2 ಪ್ಲಾಟ್‌ಫಾರ್ಮ್ ಅನ್ನು ಆಧರಿಸಿದೆ.ಕಿಯಾ ಕಾರೆನ್ಸ್ ಮಾದರಿಯು ಭಾರತದಲ್ಲಿ ಮಹೀಂದ್ರ ಮರಾಜೊಗೆ ಪೈಪೋಟಿ ನೀಡುತ್ತದೆ, ಇನ್ನು ಕಾರೆನ್ಸ್ ಎಂಪಿವಿಯನ್ನು 5ಟ್ರಿಮ್ ಹಂತಗಳಲ್ಲಿ ನೀಡಲಾಗುವುದು. ಈ ಎಂಪಿವಿಯು ಆರು ಏರ್‌ಬ್ಯಾಗ್‌ಗಳು, ಎಲ್ಲಾ-4 ಡಿಸ್ಕ್ ಬ್ರೇಕ್‌ಗಳು ಮತ್ತು ESP ಯಂತಹ ಹಲವಾರು ವಿಭಾಗ-ಪ್ರಮುಖ ವೈಶಿಷ್ಟ್ಯಗಳೊಂದಿಗೆ ಬರಲಿದೆ.

ಫೆಬ್ರವರಿ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರುಗಳಿವು..

ಜೀಪ್ ಕಂಪಾಸ್‌ ಟ್ರೈಲ್‌ಹಾಕ್

ಕಳೆದ ವರ್ಷ ಜನವರಿಯಲ್ಲಿ ಸ್ಟ್ಯಾಂಡರ್ಡ್ ಕಂಪಾಸ್ ಫೇಸ್‌ಲಿಫ್ಟ್ ಅನ್ನು ಪಡೆದಿದ್ದರೂ, ಜೀಪ್ ನವೀಕರಿಸಿದ ಟ್ರೈಲ್‌ಹಾಕ್ ಅನ್ನು ಭಾರತೀಯ ಮಾರುಕಟ್ಟೆಗೆ ತರಲಿಲ್ಲ, ಹೀಗಾಗಿ ರೂಪಾಂತರವನ್ನು ಸ್ಥಗಿತಗೊಳಿಸಿತು. ಇದೀಗ ಒಂದು ವರ್ಷದ ನಂತರ, ಟ್ರಯಲ್‌ಹಾಕ್ ಮತ್ತೆ ಲೈನ್-ಅಪ್‌ಗೆ ಸೇರ್ಪಡೆಗೊಳ್ಳಲು ಸಿದ್ಧವಾಗಿದೆ. ಆದರೂ ಇದನ್ನು ಸೀಮಿತ ಸಂಖ್ಯೆಯಲ್ಲಿ ಉತ್ಪಾದಿಸುವ ನಿರೀಕ್ಷೆಯಿದೆ.

ಫೆಬ್ರವರಿ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರುಗಳಿವು..

ನವೀಕರಿಸಿದ ಕಂಪಾಸ್ ಟ್ರೈಲ್‌ಹಾಕ್ ಹಿಂದಿನ ಮಾದರಿಗಿಂತ ಹೆಚ್ಚು ಸ್ಪೋರ್ಟಿಯರ್ ಆಗಿ ಕಾಣುತ್ತದೆ. ಕಂಪಾಸ್ ಟ್ರೈಲ್‌ಹಾಕ್ ಫೇಸ್‌ಲಿಫ್ಟ್ ಎಸ್‍ಯುವಿಯ ಕ್ಯಾಬಿನ್ ಒಳಗೆ ಕೆಲವು ನವೀಕರಣಗಳನ್ನು ನಡೆಸಿದ್ದಾರೆ. ಒಳಭಾಗವು ಡ್ಯುಯಲ್-ಟೋನ್ ರೆಡ್ ಮತ್ತು ಬ್ಲ್ಯಾಕ್ ಬಣ್ಣಗಳಿಂದ ಕೂಡಿರುತ್ತದೆ ಮತ್ತು ಕೆಲವು ಹೊಸ ಫೀಚರ್ ಗಳನ್ನು ಪಡೆಯಬಹುದು ಎಂದು ನಿರೀಕ್ಷಿಸುತ್ತೇವೆ.

ಫೆಬ್ರವರಿ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರುಗಳಿವು..

ಮಿನಿ ಕೂಪರ್ ಎಸ್‌ಇ

ಕಳೆದ ವರ್ಷದ ಅಕ್ಟೋಬರ್‌ನಲ್ಲಿ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಕಾರು ತಯಾರಕ ಕಂಪನಿಯಾದ ಮಿನಿ ( MINI) ಇಂಡಿಯಾ ತನ್ನ ಎಸ್‌ಇ (SE) ಎಲೆಕ್ಟ್ರಿಕ್ ಕೂಪರ್ ಕಾರಿನ ಟೀಸರ್ ಅನ್ನು ಬಿಡುಗಡೆಗೊಳಿಸಿತ್ತು. ಕಂಪನಿಯು ಈ ಎಲೆಕ್ಟ್ರಿಕ್ ಕಾರ್ ಅನ್ನು 2019ರಲ್ಲಿ ಅಧಿಕೃತವಾಗಿ ಪರಿಚಯಿಸಿತು. ಇದರ ನಂತರ, ಕಂಪನಿಯು 2021ರ ಅಕ್ಟೋಬರ್ ಅಂತ್ಯದಿಂದ ಈ ಎಲೆಕ್ಟ್ರಿಕ್ ಕಾರಿನ ಬುಕ್ಕಿಂಗ್ ಗಳನ್ನು ಆರಂಭಿಸಿತು.

ಫೆಬ್ರವರಿ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರುಗಳಿವು..

ಮಿನಿ ಎಲೆಕ್ಟ್ರಿಕ್‌ ಕಾರಿನ ವಿನ್ಯಾಸವನ್ನು ಮಿನಿ ಕೂಪರ್‌ನಂತೆಯೇ ವಿನ್ಯಾಸಗೊಳಿಸಲಾಗಿದೆ. ಆದರೆ ಈ ಕಾರಿನಲ್ಲಿ ಕೆಲವು ಸಣ್ಣ ಪುಟ್ಟ ಬದಲಾವಣೆಗಳನ್ನು ಮಾಡಲಾಗಿದೆ. ಈ ಬದಲಾವಣೆಗಳಲ್ಲಿ ಅತ್ಯಂತ ಪ್ರಮುಖವಾದುದೆಂದರೆ ಮುಂಭಾಗದ ಗ್ರಿಲ್. ಇದು ಕಾರ್ ಅನ್ನು ಏರೋಡೈನಾಮಿಕ್ ಆಗಿಸುತ್ತದೆ. ಈ ಹ್ಯಾಚ್‌ಬ್ಯಾಕ್‌ ಕಾರಿಗೆ ಫೇಸ್‌ಲಿಫ್ಟ್ ನೀಡಲು, ಆಕರ್ಷಕ ಹಳದಿ ಬಣ್ಣದ ಅಸೆಂಟ್ ಸ್ಟ್ರೈಪ್ ಹಾಗೂ ಮಿನಿ ಎಲೆಕ್ಟ್ರಿಕ್ ಬ್ಯಾಡ್ಜ್‌ಗಳನ್ನು ನೀಡಲಾಗಿದೆ.

ಫೆಬ್ರವರಿ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರುಗಳಿವು..

ಲೆಕ್ಸಸ್ ಎನ್ಎಕ್ಸ್ 350ಹೆಚ್

ಜಪಾನಿನ ಐಷಾರಾಮಿ ಕಾರು ತಯಾರಕರಾದ ಲೆಕ್ಸಸ್ ತನ್ನ ಹೊಸ ಎನ್ಎಕ್ಸ್ 350hಹೆಚ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಲೆಕ್ಸಸ್ ಕಂಪನಿಯು ಈ ಹೊಸ ಎನ್ಎಕ್ಸ್ 350ಹೆಚ್ ಎಸ್‍ಯುವಿಯ ಖರೀದಿಗಾಗಿ ಬುಕ್ಕಿಂಗ್ ಅನ್ನು ಈಗಾಗಲೇ ಪ್ರಾರಂಭಿಸಿದ್ದಾರೆ.

ಫೆಬ್ರವರಿ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರುಗಳಿವು..

ಈ ಹೊಸ ಲೆಕ್ಸಸ್ ಎನ್ಎಕ್ಸ್ 350ಹೆಚ್ ಎಸ್‍ಯುವಿಯು ಫೆಬ್ರವರಿ ತಿಂಗಳಿನಲ್ಲಿ ಬಿಡುಗಡೆಯಾಗಲಿದೆ. ಇನ್ನು ಲೆಕ್ಸಸ್ ತನ್ನ ಎನ್ಎಕ್ಸ್ 350ಹೆಚ್ ಎಸ್‍ಯುವಿಯ ಹೊಸ ಟೀಸರ್ ಅನ್ನು ಬಿಡುಗಡೆಗೊಳಿಸಿದೆ. ಈ ಎಸ್‍ಯುವಿ ಕಳೆದ ವರ್ಷ ಜೂನ್‌ನಲ್ಲಿ ತನ್ನ ಜಾಗತಿಕ ಚೊಚ್ಚಲ ಪ್ರವೇಶವನ್ನು ಮಾಡಿತು.ಹೊಸ ಲೆಕ್ಸಸ್ ಎನ್ಎಕ್ಸ್ 350ಹೆಚ್ ಎಸ್‍ಯುವಿ ನ್ಯೂ ಗ್ಲೋಬಲ್ ಆರ್ಕಿಟೆಕ್ಚರ್ (TNGA) ಪ್ಲಾಟ್‌ಫಾರ್ಮ್‌ನ GA-K ಆವೃತ್ತಿಯನ್ನು ಆಧರಿಸಿದೆ.

Article Published On: Monday, January 31, 2022, 15:23 [IST]
English summary
List of cars to be launched in indian market in 2022 february details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+