Just In
Don't Miss!
- News
ಪಲ್ಲವಿ ಡೇ ಬಳಿಕ ಮತ್ತೊಬ್ಬ ಯುವ ರೂಪದರ್ಶಿ ಆತ್ಮಹತ್ಯೆ
- Sports
ಮಹಿಳಾ ಟಿ20 ಚಾಲೆಂಜ್: ವೆಲಾಸಿಟಿ ವಿರುದ್ಧ ಗೆದ್ದ ಟ್ರೈಲ್ಬ್ಲೇಜರ್ಸ್, ಆದ್ರೂ ಫೈನಲ್ ಮಿಸ್
- Finance
ಮೇ 26ರಂದು ವಾಣಿಜ್ಯ ಬೆಳೆ ಅಡಿಕೆ, ಕಾಫಿ, ಮೆಣಸು, ಏಲಕ್ಕಿ ಪೇಟೆ ಧಾರಣೆ
- Movies
ಬಾಲಕೃಷ್ಣ 107ನೇ ಸಿನಿಮಾದ ಟೈಟಲ್ 'ಜೈ ಬಾಲಯ್ಯ'
- Technology
ಸ್ಯಾಮ್ಸಂಗ್ ಗ್ಯಾಲಕ್ಸಿ M13 ಸ್ಮಾರ್ಟ್ಫೋನ್ ಬಿಡುಗಡೆ! ವಿಶೇಷತೆ ಏನು?
- Lifestyle
ಕಿಚನ್ ಟಿಪ್ಸ್: ಫ್ರಿಡ್ಜ್ನಲ್ಲಿ ಆಹಾರಗಳನ್ನು ಹೀಗೆ ಇಟ್ಟರೆ ಆರೋಗ್ಯಕ್ಕೆ ಕುತ್ತು ಎಚ್ಚರ..!
- Education
Karnataka SSLC Revaluation 2022 : ಮರುಮೌಲ್ಯಮಾಪನ ಮತ್ತು ಮರುಎಣಿಕೆಗೆ ಅರ್ಜಿ ಆಹ್ವಾನ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಕೊನೆಯ ಮೈಲಿ ವಿತರಣಾ ಕಾರ್ಯಾಚರಣೆಗೆ ಇವಿ ವಾಹನ ಹೆಚ್ಚಿಸಲು ಲಾಗ್9 ಹೊಸ ಪಾಲುದಾರಿಕೆ ಘೋಷಣೆ
ಹೆಚ್ಚುತ್ತಿರುವ ಇಂಧನಗಳ ದರ ಪರಿಣಾಮ ಇವಿ ವಾಹನಗಳ ಬೇಡಿಕೆ ಸಾಕಷ್ಟು ಏರಿಕೆಯಾಗುತ್ತಿದ್ದು, ವ್ಯಯಕ್ತಿಕ ಇವಿ ವಾಹನಗಳಷ್ಟೇ ಅಲ್ಲದೆ ವಾಣಿಜ್ಯ ವಾಹನಗಳ ವಿಭಾಗದಲ್ಲೂ ಕೂಡಾ ಇವಿ ವಾಹನ ಬಳಕೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.

ಸದ್ಯ ಇವಿ ಬ್ಯಾಟರಿ ತಂತ್ರಜ್ಞಾನ ಅಭಿವೃದ್ದಿಯಲ್ಲಿ ಮುಂಚೂಣಿಯಲ್ಲಿರುವ ಲಾಗ್9 ಕಂಪನಿಯು ಕೂಡಾ ವಿವಿಧ ಕಂಪನಿಗಳ ಜೊತೆಗೂಡಿ ಹೊಸ ಪಾಲುದಾರಿಕೆ ಯೋಜನೆಗಳನ್ನು ಪ್ರಕಟಿಸುತ್ತಿದ್ದು, ಕಂಪನಿಯು ಇತ್ತೀಚೆಗೆ ಪೈ ಬೀಮ್ ಜೊತೆಗೂಡಿ ಕೊನೆಯ ಮೈಲಿ ವಿತರಣಾ ಕಾರ್ಯಾಚರಣೆಗಳಿಗಾಗಿ ಇವಿ ವಾಹನಗಳನ್ನು ಹೆಚ್ಚಿಸಲು ಹೊಸ ಪಾಲುದಾರಿಕೆ ಪ್ರಕಟಿಸಿವೆ.

ಹೊಸ ಪಾಲುದಾರಿಕೆ ಯೋಜನೆ ಅಡಿ ಪೈ ಬೀಮ್ ಮುಂದಿನ ಕೆಲವೇ ವರ್ಷಗಳಲ್ಲಿ ಸಾವಿರಾರು ಇವಿ ತ್ರಿ-ಚಕ್ರ ವಾಹನಗಳನ್ನು ಲಾಜಿಸ್ಟಿಕ್ ವಿಭಾಗದಲ್ಲಿ ಸೇರ್ಪಡೆಗೊಳಿಸುತ್ತಿದ್ದು, ಹೊಸ ಇವಿ ವಾಹನಗಳಿಗೆ ಬ್ಯಾಟರಿ ಅಳವಡಿಕೆ ಮತ್ತು ಚಾರ್ಜಿಂಗ್ ನಿರ್ವಹಣೆಗಾಗಿ ಲಾಗ್9 ಪಾಲುದಾರಿಕೆ ಪ್ರಕಟಿಸಿದೆ.

ಲಾಗ್9 ಕಂಪನಿಯು ತನ್ನದೆ ಆದ ಹೊಸ ತಂತ್ರಜ್ಞಾನ ಅಭಿವೃದ್ದಿ ಯೋಜನೆ ಅಡಿ ಪ್ರಮುಖ ಇವಿ ವಾಹನ ತಯಾರಕ ಕಂಪನಿಗಳಿಗೆ ಇನ್‌ಸ್ಟಾಚಾರ್ಜ್ ಬ್ಯಾಟರಿ ಒದಗಿಸುತ್ತಿದ್ದು, ಜೊತೆಗೆ ದೇಶಾದ್ಯಂತ ಪ್ರಮುಖ ನಗರಗಳಲ್ಲಿ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳ ಸೇವೆಯನ್ನು ಒದಗಿಸುತ್ತಿದೆ.

ಹೀಗಾಗಿ ಲಾಗ್9 ಕಂಪನಿಯ ಜೊತೆ ಕೈಜೋಡಿಸಿರುವ ಪೈ ಬೀಮ್ ಕಂಪನಿಯು ಇನ್ಮುಂದೆ ಹೊಸದಾಗಿ ಅಳವಡಿಸಿಕೊಳ್ಳಲಿರುವ ಇವಿ ತ್ರಿ-ಚಕ್ರ ವಾಹನಗಳಿಗೆ ಲಾಗ್9 ನಿರ್ಮಾಣದ ಬ್ಯಾಟರಿ ಪ್ಯಾಕ್ ಅಳವಡಿಸಿಕೊಳ್ಳಲಿದ್ದು, ಲಾಗ್9 ಚಾರ್ಜಿಂಗ್ ನಿಲ್ದಾಣಗಳಲ್ಲಿಯೇ ಕೇವಲ 35 ನಿಮಿಷಗಳಲ್ಲಿ ಚಾರ್ಜ್ ಮಾಡಿಕೊಳ್ಳಬಹುದಾಗಿದೆ.

ಫಾಸ್ಟ್ ಚಾರ್ಜಿಂಗ್ ಸರ್ಪೊಟ್ ಮಾಡುವ ಲಾಗ್9 ಇನ್‌ಸ್ಟಾಚಾರ್ಜ್ ಬ್ಯಾಟರಿ ಸೌಲಭ್ಯವು ಸಾಮಾನ್ಯ ಲೀಥಿಯಂ ಅಯಾನ್ ಬ್ಯಾಟರಿಗಿಂತಲೂ 9 ಪಟ್ಟು ಹೆಚ್ಚು ಕಾರ್ಯಕ್ಷಮತೆ ಮತ್ತು ಸುರಕ್ಷತೆಯನ್ನು ಹೊಂದಿದ್ದು, ಹೊಸ ಬ್ಯಾಟರಿಯು -30 ಡಿಗ್ರಿಯಿಂದ 60 ಡಿಗ್ರಿ ಸೆಲ್ಸಿಯಸ್ ತಾಪಮಾನದಲ್ಲೂ ಅಚ್ಚುಕಟ್ಟಾಗಿ ಕಾರ್ಯಾನಿರ್ವಹಿಸುದಲ್ಲದೆ 15 ಸಾವಿರಕ್ಕೂ ಹೆಚ್ಚು ಬಾರಿ ಬ್ಯಾಟರಿ ಚಾರ್ಜಿಂಗ್ ವೈಶಿಷ್ಟ್ಯತೆ ಹೊಂದಿದೆ.

ಹೀಗಾಗಿ ಲಾಗ್9 ಹೊಸ ತಂತ್ರಜ್ಞಾನ ಪ್ರೇರಿತ ಬ್ಯಾಟರಿ ಪ್ಯಾಕ್ ಮಾದರಿಗಾಗಿ ಪ್ರಮುಖ ಇವಿ ಕಂಪನಿಗಳು ಸಹಭಾಗಿತ್ವ ಪ್ರಕಟಿಸುತ್ತಿದ್ದು, ಇದೀಗ ಪೈ ಬೀಮ್ ಕಂಪನಿಯು ಸಹ ಹೊಸ ಪಾಲುದಾರಿಕೆ ಯೋಜನೆ ಅಡಿ ಭಾರೀ ಪ್ರಮಾಣದ ಇವಿ ವಾಹನಗಳನ್ನು ಅಳವಡಿಸಿಕೊಳ್ಳುತ್ತಿದೆ.

ಇನ್ನು ತೈಲ ಬೆಲೆ ಹೆಚ್ಚಳ ಪರಿಣಾಮ ಸಾಂಪ್ರಾದಾಯಿಕ ವಾಹನಗಳ ನಿರ್ವಹಣಾ ವೆಚ್ಚದಲ್ಲಿ ಭಾರೀ ಏರಿಕೆಯಾಗಿದ್ದು, ಹೀಗಿರುವಾಗ ಹೊಸ ವಾಹನ ಖರೀದಿದಾರರಿಗೆ ಎಲೆಕ್ಟ್ರಿಕ್ ವಾಹನಗಳು ಪ್ರಮುಖ ಆಕರ್ಷಣೆಯಾಗುತ್ತಿವೆ.

ಎಲೆಕ್ಟ್ರಿಕ್ ವಾಹನ ಬಳಕೆಯನ್ನು ಉತ್ತೇಜಿಸಲು ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ವ್ಯಯಕ್ತಿಕ ಇವಿ ವಾಹನ ಮಾದರಿಗಳಲ್ಲದೆ ವಾಣಿಜ್ಯ ಇವಿ ವಾಹನಗಳ ಮಾರಾಟವು ಸಹ ಹೆಚ್ಚಳವಾಗುತ್ತಿದೆ.

ಇನ್ನು ಹೆಚ್ಚುತ್ತಿರುವ ಇಂಧನಗಳ ಬೆಲೆ ಮತ್ತು ಮಾಲಿನ್ಯದ ಕಾರಣಕ್ಕೆ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಆದ್ಯತೆ ನೀಡಲಾಗುತ್ತಿದ್ದು, ಕೇಂದ್ರ ಸರ್ಕಾರದ ಜೊತೆಗೆ ವಿವಿಧ ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನ ನೀತಿಯನ್ನು ಅಳವಡಿಸಿಕೊಳ್ಳುತ್ತಿರುವ ಇವಿ ವಾಹನ ಮಾಲೀಕರಿಗೆ ಹೆಚ್ಚಿನ ಮಟ್ಟದ ಪ್ರೋತ್ಸಾಹವು ಹೊಸ ಬದಲಾವಣೆಗೆ ಕಾರಣವಾಗಿದೆ.

ಇಂಧನ ಚಾಲಿತ ವಾಹನಗಳನ್ನು ತಗ್ಗಿಸಿ ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳತ್ತ ಸೆಳೆಯಲು ಕೇಂದ್ರ ಸರ್ಕಾರವು ಫೇಮ್ 2 ಸಬ್ಸಡಿ ಯೋಜನೆಯಡಿ ಎಲೆಕ್ಟ್ರಿಕ್ ವಾಹನಗಳ ಉತ್ಪಾದಕ ಕಂಪನಿಗಳಿಗೆ ಮತ್ತು ಖರೀದಿ ಮಾಡುವ ಗ್ರಾಹಕರಿಗೆ ಗರಿಷ್ಠ ಧನಸಹಾಯ ಒದಗಿಸುತ್ತಿದ್ದು, ಫೇಮ್ 2 ಯೋಜನೆಯ ಸಬ್ಸಡಿ ಜೊತೆಗೆ ವಿವಿಧ ರಾಜ್ಯದ ಸರ್ಕಾರಗಳು ಸಹ ಕೆಲವು ವಿನಾಯ್ತಿಗಳನ್ನು ನೀಡುತ್ತಿವೆ.

ಕಳೆದ ಕೆಲ ತಿಂಗಳಿನಿಂದ ಒಟ್ಟಾರೆ ವಾಹನಗಳ ನೋಂದಣಿ ಪ್ರಮಾಣದಲ್ಲಿ ಶೇ.2 ರಿಂದ ಶೇ. 3 ರಷ್ಟು ಪಾಲು ಹೊಂದಿದ್ದ ಇವಿ ವಾಹನಗಳ ನೋಂದಣಿ ಪ್ರಮಾಣ ಇದೀಗ ಗರಿಷ್ಠ ಪ್ರಮಾಣಕ್ಕೆ ಏರಿಕೆ ಕಂಡಿದ್ದು, ಸದ್ಯ ಹೆಚ್ಚುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ದರಗಳ ಪರಿಣಾಮ ಇವಿ ವಾಹನಗಳು ಇನ್ನು ಹೆಚ್ಚಿನ ಮಟ್ಟದಲ್ಲಿ ರಸ್ತೆಗಿಳಿಯಲಿವೆ.

ಮಾಹಿತಿಗಳ ಪ್ರಕಾರ ದೇಶಾದ್ಯಂತ ಇದುವರೆಗೆ ಸುಮಾರು 10 ಲಕ್ಷ ಇವಿ ವಾಹನಗಳು ನೋಂದಣಿಯಾಗಿ ಎನ್ನಲಾಗಿದ್ದು, ಸಾಮಾನ್ಯ ವಾಹನಗಳ ನೋಂದಣಿ ಪ್ರಮಾಣಕ್ಕೆ ಹೋಲಿಕೆ ಮಾಡಿದರೆ ತೀರಾ ಕಡಿಮೆ ಪ್ರಮಾಣ ಎನ್ನಬಹುದು. ಹೀಗಾಗಿ ಇವಿ ವಾಹನಗಳ ಉತ್ತೇಜನಕ್ಕೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗುತ್ತಿದ್ದು, ಇವಿ ವಾಹನಗಳ ಹೆಚ್ಚಳಕ್ಕೆ ಮುಖ್ಯವಾಗಿ ಚಾರ್ಜಿಂಗ್ ನಿಲ್ದಾಣಗಳನ್ನು ಹೆಚ್ಚಿಸಲಾಗುತ್ತಿದೆ.