Just In
- 40 min ago
ಶೀಘ್ರದಲ್ಲಿಯೇ ಬಿಡುಗಡೆಯಾಗಲಿದೆ ನವೀಕೃತ ಮಾರುತಿ ಆಲ್ಟೊ ಕೆ10 ಸಿಎನ್ಜಿ
- 1 hr ago
ಪೊಲೀಸರಿಗ್ಯಾಕೆ ಬುಲೆಟ್ ಪ್ರೂಫ್ ವಾಹನವಿಲ್ಲ: ಗಣ್ಯರಿಗಿರುವ ಭದ್ರತೆ ಆರಕ್ಷಕರಿಗಿಲ್ಲವೇ? ಕಾರಣ ಇಲ್ಲಿದೆ...
- 1 hr ago
ಕಡಿಮೆ ಮೊತ್ತಕ್ಕೆ ಲೀಸ್ಗೆ ಸಿಗಲಿದೆ ಫೋಕ್ಸ್ವ್ಯಾಗನ್ ವರ್ಟಸ್ ಕಾರು
- 4 hrs ago
ಬಿಡುಗಡೆಗಾಗಿ ರೋಡ್ ಟೆಸ್ಟಿಂಗ್ ನಡೆಸಿದ ಮಹೀಂದ್ರಾ ಥಾರ್ 5 ಡೋರ್ ವರ್ಷನ್
Don't Miss!
- News
ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದದ್ದು ತಪ್ಪು: ಆದರೆ..
- Sports
Anil Kumble: ಪಂಜಾಬ್ ಕಿಂಗ್ಸ್ ಕೋಚ್ ಸ್ಥಾನದಿಂದ ಕನ್ನಡಿಗ ಕುಂಬ್ಳೆ ಔಟ್; ಬೇರೆ ಕೋಚ್ ಆಯ್ಕೆ!
- Technology
ಲೆನೊವೊ ಲೀಜನ್ Y70 ಸ್ಮಾರ್ಟ್ಫೋನ್ ಬಿಡುಗಡೆ!..68W ವೇಗದ ಚಾರ್ಜಿಂಗ್!
- Education
Karnataka High Court Recruitment 2022 : 129 ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ
- Travel
ವಂಡರ್ಲಾ ಬೆಂಗಳೂರಿನಲ್ಲಿರುವ ವಿಶಿಷ್ಟ ಅಮ್ಯೂಸ್ಮೆಂಟ್ ಪಾರ್ಕ್ ಆಗಿದೆ.
- Finance
ಫೋನ್ ಪೇ, ಗೂಗಲ್ ಪೇ, ಭೀಮ್ App ಬಳಕೆಗೆ ಪೇಮೆಂಟ್ ಶುಲ್ಕ?
- Movies
ಅಪ್ಪು- ದರ್ಶನ್ ಸ್ನೇಹದ ಬಗ್ಗೆ ಹೇಳಿದ ರಾಘಣ್ಣ!
- Lifestyle
ಕಾಲಿನಲ್ಲಿ ಈ 10 ಲಕ್ಷಣಗಳು ಕಂಡು ಬಂದರೆ ಹುಷಾರು! ಮಧುಮೇಹ ತುಂಬಾ ಹೆಚ್ಚಿದೆ ಎಂದು ಸೂಚಿಸುವ ಲಕ್ಷಣಗಳಿವು
ಅಲ್ಟುರಾಸ್ ಜಿ4 ಎಸ್‍ಯುವಿಯ 4X2 ರೂಪಾಂತರಕ್ಕೆ ತಾತ್ಕಾಲಿಕವಾಗಿ ಬುಕ್ಕಿಂಗ್ ಸ್ಥಗಿತಗೊಳಿಸಿದ ಮಹೀಂದ್ರಾ
ಸ್ವದೇಶಿ ವಾಹನ ತಯಾರಕ ಕಂಪನಿಯಾದ ಮಹೀಂದ್ರಾ ಭಾರತೀಯ ಮಾರುಕಟ್ಟೆಯಲ್ಲಿ ಟೊಯೊಟಾ ಫಾರ್ಚುನರ್ ಮತ್ತು ಫೋರ್ಡ್ ಎಂಡೀವರ್‌ಗೆ ಪೈಪೋಟಿಯಾಗಿ ಅಲ್ಟುರಾಸ್ ಜಿ4 ಎಸ್‍ಯುವಿಯನ್ನು ಬಿಡುಗಡೆಗೊಳಿಸಲಾಗಿತ್ತು. ಅಲ್ಟುರಾಸ್ ಅನ್ನು ಅಂತರರಾಷ್ಟೀಯ ಮಾರುಕಟ್ಟೆಯಲ್ಲಿ ಮಾರಾಟವಾಗುವ ಸ್ಯಾಂಗ್‌ಯಾಂಗ್ ರೆಕ್ಸ್‌ಟನ್ ಅನ್ನು ಆಧರಿಸಿ ಭಾರತದಲ್ಲಿ ಬಿಡುಗಡೆ ಮಾಡಲಾದ ಮಾದರಿಯಾಗಿದೆ.

ಮಹೀಂದ್ರಾ ಅಲ್ಟುರಾಸ್ ಜಿ4 2018 ರಿಂದ ಪೂರ್ಣ ಗಾತ್ರದ ಎಸ್‍ಯುವಿ ವಿಭಾಗದಲ್ಲಿದೆ. ಈ ವಾಹನವು ಬೇಸ್ 2 ವ್ಹೀಲ್ ಡ್ರೈವ್ ಮತ್ತು ಟಾಪ್ ಎಂಡ್ 4 ವ್ಹೀಲ್ ಡ್ರೈವ್ ಎಂಬ ಎರಡು ರೂಪಾಂತರಗಳಲ್ಲಿ ಲಭ್ಯವಿದೆ. ಅಲ್ಟುರಾಸ್ ಭಾರತದಲ್ಲಿ ಗಮನಾರ್ಹ ಮಾರಾಟವನ್ನು ಉತ್ಪಾದಿಸಲು ಸಾಧ್ಯವಾಗದಿದ್ದರೂ, ಮಹೀಂದ್ರಾ ಇನ್ನೂ ಎಸ್‌ಯುವಿ ಮಾರಾಟವನ್ನು ಸ್ಥಗಿತಗೊಳಿಸಿಲ್ಲ, ಪೂರ್ಣ ಗಾತ್ರದ ಎಸ್‍ಯುವಿ ವಿಭಾಗದಲ್ಲಿ ಟೊಯೊಟಾ ಫಾರ್ಚುನರ್ ಪಾರುಪತ್ಯವನ್ನು ಸಾಧಿಸುತ್ತಿದೆ.

ಮಹೀಂದ್ರಾ ಅಲ್ಟುರಾಸ್ ಜಿ4 ಎಸ್‍ಯುವಿಯು 4850 ಎಂಎಂ ಉದ್ದ, 1960 ಅಗಲ ಮತ್ತು 2865 ಎಂಎಂ ವ್ಹೀಲ್‌ಬೇಸ್ ಅನ್ನು ಹೊಂದಿದೆ. ಈ ಅಲ್ಟುರಾಸ್ ಜಿ4 ಪುಲ್ ಸೈಜ್ ಎಸ್‍ಯುವಿಯು 7-ಸೀಟರ್ ಮಾದರಿಯಾಗಿದೆ.

ಇದೀಗ ಮಹೀಂದ್ರಾ ಅಲ್ಟುರಾಸ್ ಜಿ4 ಬೇಸ್ ವೆರಿಯೆಂಟ್ ಗಾಗಿ ಬುಕ್ಕಿಂಗ್ ಅನ್ನು ಸ್ವೀಕರಿಸುವುದನ್ನು ಸ್ಥಗಿತಗೊಳಿಸಿದ್ದಾರೆ. ಜಾಗತಿಕ ಪೂರೈಕೆ ಸರಪಳಿಯ ಅಡೆತಡೆಗಳ ಕಾರಣದಿಂದಾಗಿ, ತಾತ್ಕಾಲಿಕವಾಗಿ ಅಲ್ಟುರಾಸ್‌ನ 2WD ರೂಪಾಂತರಕ್ಕಾಗಿ ಬುಕಿಂಗ್ ಅನ್ನು ನಿಲ್ಲಿಸಿದ್ದಾರೆ.

ಮಹೀಂದ್ರಾ ಅಲ್ಟುರಾಸ್ ಜಿ4 ಎಸ್‍ಯುವಿಯು ಬೇಸ್-ಸ್ಪೆಕ್ ರೂಪಾಂತರವಾಗಿದ್ದರೂ, 2 ವ್ಹೀಲ್ ಡೈವ್ 8-ವೇ ಪವರ್-ಹೊಂದಾಣಿಕೆ ಡ್ರೈವರ್ ಸೀಟ್, ಡ್ಯುಯಲ್-ಜೋನ್ ಕ್ಲೈಮೇಟ್ ಕಂಟ್ರೋಲ್, ವೆಂಟಿಲೇಟೆಡ್ ಸೀಟ್‌ಗಳು ಮತ್ತು ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್‌ಪ್ಲೇ ಜೊತೆಗೆ 8-ಇಂಚಿನ ಟಚ್‌ಸ್ಕ್ರೀನ್ ಸಿಸ್ಟಮ್‌ನಂತಹ ವೈಶಿಷ್ಟ್ಯಗಳೊಂದಿಗೆ ಸುಸಜ್ಜಿತವಾಗಿದೆ. .

ಈ ಮಹೀಂದ್ರಾ ಅಲ್ಟುರಾಸ್ ಜಿ4 ಎಸ್‍ಯುವಿಯಲ್ಲಿ 2.2 ಲೀಟರ್ ಇ-ಎಕ್ಸ್‌ಡಿ 220 ಟರ್ಬೋಚಾರ್ಜ್ಡ್ ನಾಲ್ಕು ಸಿಲಿಂಡರ್ ಡೀಸೆಲ್ ಎಂಜಿನ್ ಅನ್ನು ಅಳವಡಿಸಿದೆ. ಈ ಎಂಜಿನ್ 180 ಬಿಹೆಚ್‍ಪಿ ಪವರ್ ಮತ್ತು 420 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 7-ಸ್ಪೀಡ್ ಆಟೋಮ್ಯಾಟಿಕ್ ಗೇರ್‍ಬಾಕ್ಸ್ ಅನ್ನು ಜೋಡಿಸಲಾಗಿದೆ.

ಬಿಎಸ್-6 ಮಾಲಿನ್ಯ ನಿಯಮಕ್ಕೆ ನವೀಕರಿಸಿದರೂ ಪವರ್ ಮತ್ತು ಟಾರ್ಕ್ ಅಂಕಿ ಅಂಶಗಳಲ್ಲಿ ಬದಲಾವಣೆಯಾಗಿಲ್ಲ. ಈ ಬಿಎಸ್-6 ಮಹೀಂದ್ರಾ ಅಲ್ಟುರಾಸ್ ಜಿ4 ಎಸ್‍ಯುವಿಯಲ್ಲಿ ಎಂಜಿನ್ ನವೀಕರಣ ಹೊರತುಪಡಿಸಿ ಹೊಸ ಅಲಾಯ್ ವ್ಹೀಲ್ ಗಳನ್ನು ಒಳಗೊಂಡಿದೆ.

ಮಹೀಂದ್ರಾ ಅಲ್ಟುರಾಸ್ ಜಿ4 ಎಸ್‍ಯುವಿಯಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಒಂಬತ್ತು ಏರ್‌ಬ್ಯಾಗ್, ಫ್ರಂಟ್ ಮತ್ತು ರೇರ್ ಪಾರ್ಕಿಂಗ್ ಸೆನ್ಸರ್‌ಗಳು, 360 ಡಿಗ್ರಿ ಕ್ಯಾಮೆರಾ, ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ, ಹಿಲ್ ಸ್ಟಾರ್ಟ್ ಅಸಿಸ್ಟ್, ಹಿಲ್ ಡಿಸೆಂಟ್ ಕಂಟ್ರೋಲ್, ಎಬಿಎಸ್ ಜೊತೆ ಇಬಿಡಿ, ಕ್ರೂಸ್ ಕಂಟ್ರೋಲ್, ಹೈಸ್ಪೀಡ್ ಅಲರ್ಟ್ ಮತ್ತು ಸೀಟ್‌ಬೆಲ್ಟ್ ರಿಮೈಂಡರ್ ಅನ್ನು ಕೂಡ ಹೊಂದಿದೆ.

ತಾತ್ಕಾಲಿಕ ಸ್ಥಗಿತಗೊಳ್ಳುವ ಮೊದಲು, ಮಹೀಂದ್ರಾ ಅಲ್ಟುರಾಸ್ ಜಿ4 ಎಸ್‍ಯುವಿಯು ಬೇಸ್-ಸ್ಪೆಕ್ ರೂಪಾಂತರವನ್ನು ರೂ.28.88 ಲಕ್ಷ ರೂಪಾಯಿಗಳಿಗೆ ಮಾರಾಟ ಮಾಡಿತು, ಆದರೆ ಮಾರಾಟದಲ್ಲಿರುವ ಟಾಪ್-ಸ್ಪೆಕ್ ರೂಪಾಂತರವು ರೂ,31.88 ಲಕ್ಷವಾಗಿದೆ. ಮಹೀಂದ್ರಾ ಅಲ್ಟುರಾಸ್ ಜಿ4 ಭಾರತೀಯ ಮಾರುಕಟ್ಟೆಯಲ್ಲಿ ಟೊಯೊಟಾ ಫಾರ್ಚುನರ್, ಎಂಜಿ ಗ್ಲೋಸ್ಟರ್, ಸ್ಕೋಡಾ ಕೊಡಿಯಾಕ್ ಮತ್ತು ಜೀಪ್ ಮೆರಿಡಿಯನ್ ಎಸ್‍ಯುವಿಗಳಿಗೆ ಪೈಪೋಟಿಯನ್ನು ನೀಡುತ್ತದೆ.

ಇನ್ನು ಮಹೀಂದ್ರಾ ಕಂಪನಿಯು ಬಹುನೀರಿಕ್ಷಿತ ಹೊಸತಲೆಮಾರಿನ ಸ್ಕಾರ್ಪಿಯೋ-ಎನ್ ಮಾದರಿಯನ್ನು ಬಿಡುಗಡೆ ಮಾಡಿದೆ. ಬರೋಬ್ಬರಿ 20 ವರ್ಷಗಳ ಯಶಸ್ವಿ ಬೇಡಿಕೆಯೊಂದಿಗೆ ಮುನ್ನುಗ್ಗುತ್ತಿರುವ ಸ್ಕಾರ್ಪಿಯೋ ಮಾದರಿಯು ಇದೀಗ ಹೊಸ ತಲೆಮಾರಿನ ವೈಶಿಷ್ಟ್ಯತೆಗಳೊಂದಿಗೆ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಭಾರತೀಯ ಮಾರುಕಟ್ಟೆಯಲ್ಲಿ ಮೊದಲ ಬಾರಿಗೆ 2002ರಲ್ಲಿ ಬಿಡುಗಡೆಯಾಗಿದ್ದ ಮಹೀಂದ್ರಾ ಸ್ಕಾರ್ಪಿಯೋ ಎಸ್‌ಯುವಿ ಮಾರುಕಟ್ಟೆಯಲ್ಲಿನ ಬೇಡಿಕೆಯೆಂತೆ ಹಲವಾರು ಹೊಸತನ ಪಡೆದುಕೊಳ್ಳುತ್ತಲೇ ಗ್ರಾಹಕರ ಬೇಡಿಕೆಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಇದೀಗ ಹೊಸ ತಲೆಮಾರಿನ ಆವೃತ್ತಿಯು ಮತ್ತಷ್ಟು ಸುಧಾರಿತ ತಂತ್ರಜ್ಞಾನ ಪ್ರೇರಣೆಯೊಂದಿಗೆ ಅಭಿವೃದ್ದಿಗೊಂಡಿದೆ.

ಹೊಸ ಎಸ್‍ಯುವಿಯೊಂದಿಗೆ ಮಹೀಂದ್ರಾ ಪ್ರಸ್ತುತ ಮಾರುಕಟ್ಟೆಯಲ್ಲಿ ಮಾದರಿಯ ಮಾರಾಟವನ್ನು ಸಹ ಮುಂದುವರಿಸಲು ನಿರ್ಧರಿಸಿದೆ. ಹೊಸ ಕಾರು ಸ್ಕಾರ್ಪಿಯೋ-ಎನ್ ಹೆಸರಿನಲ್ಲಿ ಮಾರಾಟಗೊಳ್ಳಲಿದ್ದರೆ ಹಳೆಯ ಮಾದರಿಯು ಸ್ಕಾರ್ಪಿಯೋ-ಕ್ಲಾಸಿಕ್ ಹೆಸರಿನಲ್ಲಿ ಮಾರಾಟಗೊಳ್ಳಲಿದೆ. ಸ್ಕಾರ್ಪಿಯೋ-ಎನ್ ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.11.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 19.49 ಲಕ್ಷ ಬೆಲೆ ಹೊಂದಿದ್ದು, ಹೊಸ ಕಾರು ಮಾದರಿಯು ವಿವಿಧ ಎಂಜಿನ್ ಆಯ್ಕೆಗಳಿಗೆ ಅನುಗುಣವಾಗಿ ಜೆಡ್2, ಜೆಡ್4, ಜೆಡ್6, ಜೆಡ್8 ಮತ್ತು ಜೆಡ್ಎಲ್ ವೆರಿಯೆಂಟ್‌ಗಳನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಅಭಿಪ್ರಾಯ
ಇದೀಗ ಮಹೀಂದ್ರಾ ಅಲ್ಟುರಾಸ್ ಜಿ4 ಬೇಸ್ ವೆರಿಯೆಂಟ್ ಗಾಗಿ ತಾತ್ಕಾಲಿಕವಾಗಿ ಬುಕ್ಕಿಂಗ್ ಅನ್ನು ಸ್ವೀಕರಿಸುವುದನ್ನು ಸ್ಥಗಿತಗೊಳಿಸಿದ್ದಾರೆ. ಆದರೆ ಮುಂದಿನ ದಿನಗಳಲ್ಲಿ ಮಹೀಂದ್ರಾ ಕಂಪನಿಯು ಅಲ್ಟುರಾಸ್ ಜಿ4 ಬೇಸ್ ವೆರಿಯೆಂಟ್ ಗಾಗಿ ಬುಕ್ಕಿಂಗ್ ಅನ್ನು ಪ್ರಾರಂಬಿಸುತ್ತದೆ.