Just In
Don't Miss!
- Sports
ವಿಂಡೀಸ್ ಪ್ರವಾಸದಲ್ಲಿ ಹಿರಿಯ ಆಟಗಾರರಿಗೆ ವಿಶ್ರಾಂತಿ, ಸಂಜು ಸ್ಯಾಮ್ಸನ್ಗೆ ಸಿಗಲಿದೆ ಮತ್ತೊಂದು ಅವಕಾಶ?
- News
ಅಮೃತ್ ನಗರೋತ್ಥಾನ ಯೋಜನೆಯಡಿ ಬೆಂಗಳೂರು ಪೂರ್ವ ವಲಯಕ್ಕೆ 450 ಕೋಟಿ ಮಂಜೂರು
- Movies
ಹಿಂದಿಗೆ ಹೋಗುತ್ತಿದೆ ಏಳು ವರ್ಷ ಹಳೆಯ ಕನ್ನಡ ಸಿನಿಮಾ: ಅಕ್ಷಯ್-ಶಾಹಿದ್ ನಡುವೆ ಪೈಪೋಟಿ!
- Finance
ಸರ್ವೀಸ್ ಚಾರ್ಜ್ ಬಗ್ಗೆ ಗ್ರಾಹಕರು ದೂರು ನೀಡುವುದು ಹೇಗೆ?
- Lifestyle
ಯಾರೂ ಇಲ್ಲದಿದ್ದಾಗ ಪುರುಷ ಈ ರೀತಿ ವಿಲಕ್ಷಣವಾಗಿ ವರ್ತಿಸುತ್ತಾನೆ, ಗೊತ್ತಾ? ಇದನ್ನು ಓದಿದ್ರೆ ನೀವು ಶಾಕ್ ಆಗೋದು ಪಕ್ಕಾ!
- Technology
ಜಬ್ರೋನಿಕ್ಸ್ ಡ್ರಿಪ್ ಸ್ಮಾರ್ಟ್ವಾಚ್ ಬಿಡುಗಡೆ! ಲಾಂಗ್ ಬ್ಯಾಟರಿ ಬ್ಯಾಕ್ಅಪ್ ವಿಶೇಷ!
- Education
Karnataka Second PUC Results 2022 : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಉತ್ತರ ಪತ್ರಿಕೆಯ ಪ್ರತಿಗಳು ಜು.6ರಿಂದ ಲಭ್ಯ
- Travel
ಸೂರ್ಯ, ಅಲೆಗಳು ಮತ್ತು ಮರಳು ಇವುಗಳ ಸಮ್ಮಿಲನ ಕಡಲತೀರದ ಪಟ್ಟಣ - ಮಲ್ಪೆ
ನ್ಯೂ ಜನರೇಷನ್ ಎಲೆಕ್ಟ್ರಿಕ್ ಕಾರುಗಳ ಅಭಿವೃದ್ದಿಗಾಗಿ ಮಹೀಂದ್ರಾ ಜೊತೆ ಕೈಜೋಡಿಸಿದ ಫೋಕ್ಸ್‌ವ್ಯಾಗನ್
ಮಹೀಂದ್ರಾ(Mahindra) ಕಂಪನಿಯು ಭಾರತದಲ್ಲಿ ತನ್ನ ಹೊಸ ತಲೆಮಾರಿನ ಇವಿ ಮಾದರಿಗಳ ಬಿಡುಗಡೆಗಾಗಿ ಬೃಹತ್ ಯೋಜನೆ ರೂಪಿಸುತ್ತಿದ್ದು, ಹೊಸ ಯೋಜನೆಗೆ ಪೂರಕವಾಗಿ ಕಂಪನಿಯು ಇವಿ ವಾಹನಗಳ ಬಿಡಿಭಾಗಗಳ ಪೂರೈಕೆಗಾಗಿ ಜಮರ್ನ್ ಕಾರು ತಯಾರಕ ಕಂಪನಿ ಫೋಕ್ಸ್‌ವ್ಯಾಗನ್ ಜೊತೆಗೂಡಿದೆ.

ಹೊಸ ಇವಿ ಕಾರು ಮಾದರಿಗಳಿಗಾಗಿ ಪ್ರತ್ಯೇಕವಾದ ಪ್ಲ್ಯಾಟ್‌ಫಾರ್ಮ್ ತೆರೆದಿರುವ ಮಹೀಂದ್ರಾ ಕಂಪನಿಯು ಹೊಸ ಎಸ್‌ಯುವಿ ಮಾದರಿಗಳನ್ನು ಸುಧಾರಿತ ತಂತ್ರಜ್ಞಾನ ಸೌಲಭ್ಯಗಳೊಂದಿಗೆ ಅಭಿವೃದ್ದಿಗೊಳಿಸುತ್ತಿದ್ದು, ಮೂರು ಹೊಸ ಇವಿ ಕಾರಿಗಳಲ್ಲಿ ಮೊದಲ ಇವಿ ಎಸ್‌ಯುವಿ ಕಾರಿನ ಟೀಸರ್ ಹಂಚಿಕೊಂಡಿರುವ ಕಂಪನಿಯು ಮುಂಬರುವ ಜುಲೈನಲ್ಲಿ ಹೊಸ ಕಾನ್ಸೆಪ್ಟ್ ಮಾದರಿಯನ್ನು ಅನಾವರಣಗೊಳಿಸಲಿದೆ.

ಮಹೀಂದ್ರಾ ಕಂಪನಿಯು ಬಾರ್ನ್ ಇವಿ ಪರಿಕಲ್ಪನೆ ಅಡಿ ಹೊಸ ಇವಿ ಕಾರುಗಳನ್ನು ಯುಕೆಯಲ್ಲಿರುವ ತನ್ನ ಅಡ್ವಾನ್ಸ್ಡ್ ಡಿಸೈನ್ ಸ್ಟುಡಿಯೋದಲ್ಲಿ ವಿನ್ಯಾಸಗೊಳಿಸುತ್ತಿದೆ. ಹೊಸ ಶ್ರೇಣಿಯ ಇವಿ ಕಾರುಗಳನ್ನು ಕಂಪನಿಯು 2025 ಮತ್ತು 2026ರ ನಡುವೆ ಪರಿಚಯಿಸಲು ನಿರ್ಧರಿಸಿದ್ದು, ಹೊಸ ಕಾರು ಮಾದರಿಗಳಾಗಿ ಕಂಪನಿಯು ಫೋಕ್ಸ್‌ವ್ಯಾಗನ್ ಕಂಪನಿಯ ಎಂಇಬಿ ಪ್ಲ್ಯಾಟ್‌ಫಾರ್ಮ್ ಅಡಿ ನಿರ್ಮಾಣ ಮಾಡಲಾಗುವ ಬಿಡಿಭಾಗಗಳನ್ನು ಬಳಕೆ ಮಾಡಲಿದೆ.

ಎಂಇಬಿ ಎಲೆಕ್ಟ್ರಿಕ್ ಪ್ಲ್ಯಾಟ್‌ಫಾರ್ಮ್ ಅಡಿ ಫೋಕ್ಸ್‌ವ್ಯಾಗನ್ ಕಂಪನಿಯು ಎಲೆಕ್ಟ್ರಿಕ್ ಮೋಟಾರ್, ಬ್ಯಾಟರಿ ಸಿಸ್ಟಂ ಮತ್ತು ಬ್ಯಾಟರಿ ಸೆಲ್‌ಗಳನ್ನು ಎರವಲು ಪಡೆದುಕೊಳ್ಳಲಿದ್ದು, ಫೋಕ್ಸ್‌ವ್ಯಾಗನ್ ಕಂಪನಿಯ ಬೇಡಿಕೆಯೆಂತೆ ಬಜೆಟ್ ಬೆಲೆಯಲ್ಲಿ ಇವಿ ಬಿಡಿಭಾಗಗಳನ್ನು ಸಿದ್ದಪಡಿಸಲಿದೆ.

ಫೋಕ್ಸ್‌ವ್ಯಾಗನ್ ಕಂಪನಿಯ ಹೊಸ ಎಂಇಬಿ ಎಲೆಕ್ಟ್ರಿಕ್ ಪ್ಲಾಟ್‌ಫಾರ್ಮ್ ತೆರೆದ ವಾಹನ ಉತ್ಪಾದನಾ ವೇದಿಕೆಯಾಗಿದ್ದು, ಎಲೆಕ್ಟ್ರಿಫೈಡ್ ವಾಹನಗಳ ಪೋರ್ಟ್‌ಫೋಲಿಯೊವನ್ನು ತ್ವರಿತವಾಗಿ ಮತ್ತು ವೆಚ್ಚ-ಪರಿಣಾಮಕಾರಿಯಾಗಿ ನಿರ್ಮಿಸಲು ಇದು ಅನುವು ಮಾಡಿಕೊಡುತ್ತದೆ.

ಬಾರ್ನ್ ಇವಿ ಪರಿಕಲ್ಪನೆಯಲ್ಲಿ ಅಭಿವೃದ್ದಿಗೊಳ್ಳುತ್ತಿರುವ ಹೊಸ ಇವಿ ಕಾರುಗಳು ಇಕೆಯುವಿ100 ಮತ್ತು ಇಎಕ್ಸ್‌ಯುವಿ300 ಕಾರುಗಳಿಂತಲೂ ಹೆಚ್ಚಿನ ಮಟ್ಟದ ತಂತ್ರಜ್ಞಾನ ಪ್ರೇರಣೆಯೊಂದಿಗೆ ಬಿಡುಗಡೆಯಾಗಲಿದ್ದು, ಬಾರ್ನ್ ಇವಿ ಮಾದರಿಗಳು ಎರಡನೇ ತಲೆಮಾರಿನ ಇವಿ ತಂತ್ರಜ್ಞಾನ ಸೌಲಭ್ಯಗಳನ್ನು ಪಡೆದುಕೊಳ್ಳಲಿವೆ.

ಬಾರ್ನ್ ಇವಿ ಪರಿಕಲ್ಪನೆಯ ಹೊಸ ಕಾರುಗಳು ಮಹೀಂದ್ರಾ ಕಂಪನಿಯ ಹೊಸ ಇವಿ ಕಾರುಗಳಿಗಾಗಿ ಮೀಸಲಾದ ಪ್ರತ್ಯೇಕ ಪ್ಲಾಟ್‌ಫಾರ್ಮ್ ಅನ್ನು ಆಧರಿಸಿರಲಿದ್ದು, ಹೊಸ ಇವಿ ಎಸ್‌ಯುವಿ ಕಾರು ಸಿ ಆಕಾರದ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಟೈಲ್‌ಲೈಟ್ ಮತ್ತು ಆಕರ್ಷಕ ಕ್ಯಾಬಿನ್ ಹೊಂದಿರಲಿದೆ.

2022ರ ಜುಲೈನಲ್ಲಿ ಹೊಸ ಬಾರ್ನ್ ಇವಿ ಪರಿಕಲ್ಪನೆಯ ಅಡಿಯ ಹೊಸ ಮೂರು ಇವಿ ಕಾರುಗಳು ಕಾನ್ಸೆಪ್ಟ್ ಮಾದರಿಗಳೊಂದಿಗೆ ಅನಾವರಣಗೊಳ್ಳಲಿದ್ದು, ಹೊಸ ಕಾರುಗಳ ಭಾರತದಲ್ಲಿ ಮಾತ್ರವಲ್ಲ ಪ್ರಮುಖ ಅಂತರಾಷ್ಟ್ರೀಯ ಮಾರುಕಟ್ಟೆಗಳಿಗೂ ಪ್ರವೇಶಿಸಲಿವೆ.

ಕಂಪನಿಯು ಪ್ರಸ್ತುತ ಮಾರುಕಟ್ಟೆಯಲ್ಲಿ ಎಕ್ಸ್‌ಯುವಿ700, ಎಕ್ಸ್‌ಯುವಿ300, ಬೊಲೆರೊ, ಸ್ಕಾರ್ಪಿಯೋ, ಥಾರ್ ಮಾದರಿಯೊಂದಿಗೆ ಎಸ್‌ಯುವಿ ಮಾರಾಟದಲ್ಲಿ ಮುಂಚೂಣಿ ಹೊಂದಿದ್ದು, ಎಸ್‌ಯುವಿ ವಿಭಾಗದಲ್ಲಿ ಮತ್ತಷ್ಟು ಹೊಸ ಕಾರುಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ.

ಹೊಸ ಎಸ್‌ಯುವಿ ಕಾರುಗಳ ಪಟ್ಟಿಯಲ್ಲಿ ಸಾಮಾನ್ಯ ಮಾದರಿಗಳ ಜೊತೆಗೆ ಎಲೆಕ್ಟ್ರಿಕ್ ಮಾದರಿಗಳು ಸಹ ಮಾರುಕಟ್ಟೆ ಪ್ರವೇಶಿಸುತ್ತಿದ್ದು, ಮುಂದಿನ ಐದು ವರ್ಷಗಳ ಅವಧಿಯಲ್ಲಿ ಒಟ್ಟು 13 ಹೊಸ ಕಾರುಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ.

ಬಾರ್ನ್ ಇವಿ ಮಾದರಿಗಳ ಬಿಡುಗಡೆಗೂ ಮುನ್ನ 2020ರ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಮೊದಲ ಅನಾವರಣಗೊಂಡಿದ್ದ ಹೊಸ ಇಎಕ್ಸ್‌ಯುವಿ(eXUV300) ಕಾರನ್ನು ಮಾರುಕಟ್ಟೆಯಲ್ಲಿನ ಸನ್ನಿವೇಶವನ್ನು ಆಧರಿಸಿ ಇದೀಗ ಬಿಡುಗಡೆ ಮಾಡಲು ಮುಂದಾಗಿದ್ದು, ಹೊಸ ಕಾರು ಬಿಡುಗಡೆಗೂ ಮುನ್ನ ವಿವಿಧ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಕೈಗೊಂಡಿದೆ.

ಹೊಸ ಕಾರು ಈ ವರ್ಷಾಂತ್ಯಕ್ಕೆ ಉತ್ಪಾದನಾ ಮಾದರಿಯೊಂದಿಗೆ ಅನಾವರಣಗೊಳ್ಳಲಿದ್ದು, 2023ರ ಆರಂಭದಲ್ಲಿ ಅಧಿತೃತವಾಗಿ ಮಾರುಕಟ್ಟೆ ಪ್ರವೇಶಿಸುವುದು ಖಚಿತವಾಗಿದೆ. ಮಹೀಂದ್ರಾ ಕಂಪನಿಯು ಇಎಕ್ಸ್‌ಯುವಿ300 ಬಿಡುಗಡೆಗೂ ಮುನ್ನ ಇಕೆಯುವಿ100 ಎಲೆಕ್ಟ್ರಿಕ್ ಕಾರು ಮಾದರಿಯ ಮಾರಾಟಕ್ಕೆ ಚಾಲನೆ ನೀಡಲಿದ್ದು, ಹೊಸ ಇಎಕ್ಸ್‌ಯುವಿ300 ಮಾದರಿಯು ಪ್ರಸ್ತುತ ಮಾರುಕಟ್ಟೆಯಲ್ಲಿ ಇವಿ ಕಾರು ಮಾರಾಟದಲ್ಲಿ ಮುಂಚೂಣಿಯಲ್ಲಿ ಟಾಟಾ ನೆಕ್ಸಾನ್ ಇವಿ ಮಾದರಿಗೆ ಪೈಪೋಟಿಯಾಗಿ ಬಿಡುಗಡೆಯಾಗುತ್ತಿದೆ.

ಮಹೀಂದ್ರಾ ಕಂಪನಿಯು ಬಿಡುಗಡೆ ಮಾಡಲಿರುವ ಹೊಸ ಎಂಟು ಎಲೆಕ್ಟ್ರಿಕ್ ಕಾರುಗಳೊಂದಿಗೆ ಐದು ಸಾಮಾನ್ಯ ಕಾರು ಮಾದರಿಗಳು ಸಹ ಬಿಡುಗಡೆಯಾಗಲಿದ್ದು, ಹೊಸ ಎಲೆಕ್ಟ್ರಿಕ್ ಕಾರುಗಳು 2022ರ ಮಧ್ಯಂತರದಿಂದ ಹಂತ-ಹಂತವಾಗಿ ಮಾರುಕಟ್ಟೆ ಪ್ರವೇಶಿಸಲಿವೆ.

2022ರಿಂದ 2027ರ ತನಕ ಎಂಟು ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲಿರುವ ಮಹೀಂದ್ರಾ ಕಂಪನಿಯು ಆರಂಭಿಕವಾಗಿ ಇಕೆಯುವಿ100 ನಂತರ ಇಎಕ್ಸ್‌ಯುವಿ300 ಬಿಡುಗಡೆ ಮಾಡಲಿದ್ದು, ತದನಂತರ ಮಾರುಕಟ್ಟೆಯಲ್ಲಿನ ಇತರೆ ಕಾರುಗಳ ಮಾದರಿಗಳಲ್ಲೂ ಎಲೆಕ್ಟ್ರಿಕ್ ಆವೃತ್ತಿಗಳನ್ನು ಪರಿಚಯಿಸಲಿದೆ.

ಹೊಸ ಇಎಕ್ಸ್‌ಯುವಿ300 ಮಾದರಿಯು ಪ್ರತಿ ಚಾರ್ಜ್‌ಗೆ ಕನಿಷ್ಠ 380 ಕಿ.ಮೀ ನಿಂದ 420 ಕಿ.ಮೀ ಮೈಲೇಜ್ ಪ್ರೇರಿತ ಬ್ಯಾಟರಿ ಪ್ಯಾಕ್‌ನೊಂದಿಗೆ ಟಾಟಾ ನೆಕ್ಸಾನ್ ಇವಿ ಬೆಲೆಗೆ ಸರಿಸಮನಾಗಿ ಬಿಡುಗಡೆ ಹೊಂದಬಹುದಾಗಿದ್ದು, ಹೊಸ ಕಾರು ಎಂಜಿ ಜೆಡ್ಎಸ್ ಇವಿ ಮಾದರಿಗೂ ಸಹ ಪೈಪೋಟಿ ನೀಡಲಿದೆ.

ಇಕೆಯುವಿ100 ಮಾದರಿಯು ಎಕ್ಸ್‌ಶೋರೂಂ ಪ್ರಕಾರ ರೂ. 8.25 ಲಕ್ಷ ಬೆಲೆ ಹೊಂದಿದ್ದು, 15.9kWh ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್‌ನೊಂದಿಗೆ ಪ್ರತಿ ಚಾರ್ಜ್‌ಗೆ ಕನಿಷ್ಠ 150 ಕಿ.ಮೀ ಮೈಲೇಜ್ ಸಾಮರ್ಥ್ಯ ಹೊಂದಿರಲಿದೆ. ಹಾಗೆಯೇ ಇಎಕ್ಸ್‌ಯುವಿ 300 ಮಾದರಿಯು ಹೆಚ್ಚಿನ ಮಟ್ಟದ ಬ್ಯಾಟರಿ ಪ್ಯಾಕ್‌ನೊಂದಿಗೆ ಗರಿಷ್ಠ ಮೈಲೇಜ್ ಪ್ರೇರಣೆ ಹೊಂದಿಲಿದ್ದು, ಇದು 2023ರ ಆರಂಭದಲ್ಲಿ ಬಿಡುಗಡೆಯಾಗಲಿದೆ.