ಹೊಸ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಗಾಗಿ ಫೋಕ್ಸ್‌ವ್ಯಾಗನ್ ಜೊತೆಗೆ ಪಾಲುದಾರಿಕೆ ಪ್ರಕಟಿಸಿದ ಮಹೀಂದ್ರಾ

ಮಹೀಂದ್ರಾ ಕಂಪನಿಯು ಭಾರತದಲ್ಲಿ ಹೊಸ ತಲೆಮಾರಿನ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಗಾಗಿ ಬೃಹತ್ ಯೋಜನೆ ರೂಪಿಸುತ್ತಿದ್ದು, ಹೊಸ ಇವಿ ಕಾರುಗಳ ಉತ್ಪಾದನೆ ಅಗತ್ಯ ತಾಂತ್ರಿಕ ಸೌಲಭ್ಯಗಳನ್ನು ಒದಗಿಸಲು ಫೋಕ್ಸ್‌ವ್ಯಾಗನ್ ಗ್ರೂಪ್ ಜೊತೆ ಮಹೀಂದ್ರಾ ಕಂಪನಿಯು ಹೊಸ ಪಾಲುದಾರಿಕೆ ಪ್ರಕಟಿಸಿದೆ.

ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಗಾಗಿ ಫೋಕ್ಸ್‌ವ್ಯಾಗನ್ ಜೊತೆಗೆ ಪಾಲುದಾರಿಕೆ ಪ್ರಕಟಿಸಿದ ಮಹೀಂದ್ರಾ

ಪ್ರಸ್ತುತ ಮಾರುಕಟ್ಟೆಯಲ್ಲಿ ಪ್ರಮುಖ ಕಾರು ಉತ್ಪಾದನಾ ಕಂಪನಿಗಳು ಹೊಸ ಇವಿ ಕಾರು ಮಾದರಿಯೊಂದಿಗೆ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಮಹೀಂದ್ರಾ ಕಂಪನಿಯು ಕೂಡಾ ತನ್ನ ಹೊಸ ಮಾದರಿಗಳೊಂದಿಗೆ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಗಾಗಿ ಫೋಕ್ಸ್‌ವ್ಯಾಗನ್ ಜೊತೆಗೆ ಪಾಲುದಾರಿಕೆ ಪ್ರಕಟಿಸಿದ ಮಹೀಂದ್ರಾ

2028ರ ವೇಳೆಗೆ ಮಹೀಂದ್ರಾ ಕಂಪನಿಯು ಒಟ್ಟು ಏಳು ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲು ಸಿದ್ದತೆ ನಡೆಸುತ್ತಿದ್ದು, ಹೊಸ ಎಲೆಕ್ಟ್ರಿಕ್ ಕಾರು ಮಾದರಿಗಳಿಗಾಗಿ ಪ್ಲ್ಯಾಟ್‌ಫಾರ್ಮ್, ಬ್ಯಾಟರಿ ಉತ್ಪಾದನೆ ಮತ್ತು ಪ್ರಮುಖ ತಾಂತ್ರಿಕ ಸೌಲಭ್ಯಗಳ ಬೆಂಬಲಕ್ಕಾಗಿ ಫೋಕ್ಸ್‌ವ್ಯಾಗನ್ ಕಂಪನಿಯ ಜೊತೆಗೆ ಪಾಲುದಾರಿಕೆ ಘೋಷಣೆ ಮಾಡಿದೆ.

ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಗಾಗಿ ಫೋಕ್ಸ್‌ವ್ಯಾಗನ್ ಜೊತೆಗೆ ಪಾಲುದಾರಿಕೆ ಪ್ರಕಟಿಸಿದ ಮಹೀಂದ್ರಾ

ಹೊಸ ಒಪ್ಪಂದವನ್ನು ಮುಂಬರುವ ಡಿಸೆಂಬರ್ 2022ರ ವೇಳೆಗೆ ಅಂತಿಮಗೊಳಿಸಲಾಗುವುದು ಎಂದು ಮಹೀಂದ್ರಾ ಕಂಪನಿಯು ಅಧಿಕೃತವಾಗಿಯೇ ಹೇಳಿಕೊಂಡಿದ್ದು, ಪಾಲುದಾರಿಕೆಯ ಯೋಜನೆ ಅಡಿ ನಿರ್ಮಾಣವಾಗಲಿರುವ ಹೊಸ ಕಾರುಗಳು ಭಾರತದಲ್ಲಿ ಮಾತ್ರವಲ್ಲ ವಿದೇಶಿ ಮಾರುಕಟ್ಟೆಯನ್ನು ಸಹ ಪ್ರವೇಶಿಸಲಿವೆ.

ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಗಾಗಿ ಫೋಕ್ಸ್‌ವ್ಯಾಗನ್ ಜೊತೆಗೆ ಪಾಲುದಾರಿಕೆ ಪ್ರಕಟಿಸಿದ ಮಹೀಂದ್ರಾ

ಪಾಲುದಾರಿಕೆ ಯೋಜನೆ ಅಡಿ ಮಹೀಂದ್ರಾ ಕಂಪನಿಯು ಫೋಕ್ಸ್‌ವ್ಯಾಗನ್ ಕಂಪನಿಯೊಂದ ಪ್ಲ್ಯಾಟ್‌ಫಾರ್ಮ್ ಹಂಚಿಕೆ ಮತ್ತು ಪ್ರಮುಖ ತಾಂತ್ರಿಕ ಸೌಲಭ್ಯಗಳ ಬೆಂಬಲವನ್ನು ಮಾತ್ರವಲ್ಲದೆ ಇವಿ ಬ್ಯಾಟರಿ ಸೆಲ್ ತಯಾರಿಕೆಗೆ ಎದುರುನೋಡುತ್ತಿದೆ.

ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಗಾಗಿ ಫೋಕ್ಸ್‌ವ್ಯಾಗನ್ ಜೊತೆಗೆ ಪಾಲುದಾರಿಕೆ ಪ್ರಕಟಿಸಿದ ಮಹೀಂದ್ರಾ

ಹೊಸ ಇವಿ ಮಾದರಿಗಳಿಗಾಗಿ ತಂತ್ರಜ್ಞಾನವನ್ನು ಬಳಸಿಕೊಳ್ಳುವ ಒಪ್ಪಂದವು ಭಾರತಕ್ಕೆ ಮಾತ್ರ ಸೀಮಿತವಾಗಿಲ್ಲ ಎಂದು ಹೇಳಿಕೊಂಡಿರುವ ಮಹೀಂದ್ರಾ ಕಂಪನಿಯು ಸಾಗರೋತ್ತರ ಮಾರುಕಟ್ಟೆಗಳಲ್ಲೂ ಹೊಸ ಮಾದರಿಗಳನ್ನು ಪರಿಚಯಿಸುವ ಯೋಜನೆಯಲ್ಲಿದೆ.

ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಗಾಗಿ ಫೋಕ್ಸ್‌ವ್ಯಾಗನ್ ಜೊತೆಗೆ ಪಾಲುದಾರಿಕೆ ಪ್ರಕಟಿಸಿದ ಮಹೀಂದ್ರಾ

ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆಗಾಗಿ ಈಗಾಗಲೇ ಭಾರೀ ಪ್ರಮಾಣದಲ್ಲಿ ಹೂಡಿಕೆ ಮಾಡಿರುವ ಮಹೀಂದ್ರಾ ಕಂಪನಿಯು ಬಾರ್ನ್ ಇವಿ ಕಾನ್ಸೆಪ್ಟ್ ಆಧರಿಸಿ ಒಟ್ಟು ಐದು ಎಲೆಕ್ಟ್ರಿಕ್ ಕಾರು ಮಾದರಿಗಳನ್ನು ಅನಾವರಣಗೊಳಿಸಿದ್ದು, ಹೊಸ ಇವಿ ಕಾರು ಮಾದರಿಗಳನ್ನು ಕಂಪನಿಯು ಎಕ್ಸ್‌ಯುವಿ.ಇ(XUV.e) ಮತ್ತು ಬಿಇ (BE) ಎನ್ನುವ ಎರಡು ಬ್ರಾಂಡ್‌ಗಳ ಅಡಿಯಲ್ಲಿ ಮಾರಾಟ ಮಾಡಲಿದೆ.

ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಗಾಗಿ ಫೋಕ್ಸ್‌ವ್ಯಾಗನ್ ಜೊತೆಗೆ ಪಾಲುದಾರಿಕೆ ಪ್ರಕಟಿಸಿದ ಮಹೀಂದ್ರಾ

ಹೊಸ ಇವಿ ಕಾರುಗಳಲ್ಲಿ ಮೂರು ಎಸ್‌ಯುವಿ ಮಾದರಿಗಳಾಗಿದ್ದರೆ ಎರಡು ಎಸ್‌ಯುವಿ ಕೂಪೆ ಶೈಲಿಯಲ್ಲಿ ಆಧರಿಸಿದ್ದು, ಎಕ್ಸ್‌ಯುವಿ.ಇ(XUV.e) ಬ್ರಾಂಡ್ ಅಡಿಯಲ್ಲಿ ಎಕ್ಸ್‌ಯುವಿ.ಇ8(XUV.E8) ಮತ್ತು ಎಕ್ಸ್‌ಯುವಿ.ಇ9(XUV.E9) ಮಾರಾಟಗೊಳ್ಳಲಿದ್ದರೆ ಬಿಇ(BE) ಬ್ರಾಂಡ್ ಅಡಿಯಲ್ಲಿ ಬಿಇ.05(BE.05). ಬಿಇ.07(BE.07) ಮತ್ತು ಬಿಇ.09(BE.09) ಕಾರುಗಳು ಮಾರಾಟಗೊಳ್ಳಲಿವೆ.

ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಗಾಗಿ ಫೋಕ್ಸ್‌ವ್ಯಾಗನ್ ಜೊತೆಗೆ ಪಾಲುದಾರಿಕೆ ಪ್ರಕಟಿಸಿದ ಮಹೀಂದ್ರಾ

ಹೊಸ ಇವಿ ಕಾರುಗಳು ಅತ್ಯಾಧುನಿಕ ಸೌಲಭ್ಯದೊಂದಿಗೆ ಅತ್ಯಧಿಕ ಮೈಲೇಜ್ ಪ್ರೇರಿತ ಬ್ಯಾಟರಿ ಪ್ಯಾಕ್‌ನೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿದ್ದು, ಹೊಸ ಇವಿ ಕಾರು ಮಾದರಿಗಳು ಅಡ್ವಾನ್ಸ್ ಫ್ಯೂಚರಿಸ್ಟಿಕ್ ವಿನ್ಯಾಸವನ್ನು ಹೊಂದಿರುವುದು ಪ್ರಮುಖ ಆಕರ್ಷಣೆಯಾಗಿವೆ.

ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಗಾಗಿ ಫೋಕ್ಸ್‌ವ್ಯಾಗನ್ ಜೊತೆಗೆ ಪಾಲುದಾರಿಕೆ ಪ್ರಕಟಿಸಿದ ಮಹೀಂದ್ರಾ

ಮಹೀಂದ್ರಾ ಕಂಪನಿಯು ಮೊದಲ ಹಂತದಲ್ಲಿ ಎಕ್ಸ್‌ಯುವಿ.ಇ ಬ್ರಾಂಡ್ ಕಾರುಗಳನ್ನು ಮಾರಾಟಗೊಳಿಸಲಿದ್ದು, ತದನಂತರವಷ್ಟೇ ಬಿಇ ಬ್ರಾಂಡ್ ಇವಿ ಕಾರುಗಳನ್ನು ಬಿಡುಗಡೆ ಮಾಡಲಿದೆ. 2024ರ ಕೊನೆಯಲ್ಲಿ ಎಕ್ಸ್‌ಯುವಿ.ಇ ಕಾರುಗಳ ಮಾರಾಟ ಆರಂಭವಾಗಲಿದ್ದು, ಬಿಇ ಬ್ರಾಂಡ್ ಕಾರುಗಳ ಮಾರಾಟವು 2025ರ ಕೊನೆಯಲ್ಲಿ ಆರಂಭವಾಗಲಿದೆ.

ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಗಾಗಿ ಫೋಕ್ಸ್‌ವ್ಯಾಗನ್ ಜೊತೆಗೆ ಪಾಲುದಾರಿಕೆ ಪ್ರಕಟಿಸಿದ ಮಹೀಂದ್ರಾ

ಹೊಸ ಕಾರು ಮಾದರಿಗಳ ನಿರ್ಮಾಣಕ್ಕಾಗಿ ಕಂಪನಿಯು ಇನ್‌ಗ್ಲೊ(INGLO) ಪ್ಲ್ಯಾಟ್‌ಫಾರ್ಮ್ ಸಿದ್ದಪಡಿಸಿದ್ದು, ಹೊಸ ಪ್ಲ್ಯಾಟ್‌ಫಾರ್ಮ್‌ನಲ್ಲಿ ನಿರ್ಮಾಣವಾಗಲಿರುವ ಇವಿ ಕಾರುಗಳು 60 ರಿಂದ 80 kWh ಬ್ಯಾಟರಿ ಪ್ಯಾಕ್ ಜೋಡಣೆ ಹೊಂದಿರಲಿವೆ. ಹಾಗೆಯೇ ಹೊಸ ಕಾರುಗಳು 175kW ಫಾಸ್ಟ್ ಚಾರ್ಜಿಂಗ್ ಸೌಲಭ್ಯದೊಂದಿಗೆ ಕೇವಲ 30 ನಿಮಿಷಗಳಲ್ಲಿ ಸೊನ್ನೆಯಿಂದ ಶೇ.80ರಷ್ಟು ರೀಚಾರ್ಜ್ ವೈಶಿಷ್ಟ್ಯತೆ ಹೊಂದಿವೆ.

ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಗಾಗಿ ಫೋಕ್ಸ್‌ವ್ಯಾಗನ್ ಜೊತೆಗೆ ಪಾಲುದಾರಿಕೆ ಪ್ರಕಟಿಸಿದ ಮಹೀಂದ್ರಾ

ಇದರೊಂದಿಗೆ ಮಹೀಂದ್ರಾ ಕಂಪನಿಯು ಹೊಸ ಪ್ಲ್ಯಾಟ್‌ಫಾರ್ಮ್ ನಿರ್ಮಾಣಗೊಳಿಸಿದ ಐದು ಇವಿ ಕಾರು ಮಾದರಿಗಳಿಗೂ ಸುರಕ್ಷತೆಯಲ್ಲಿ 5-ಸ್ಟಾರ್ ಸುರಕ್ಷತಾ ರೇಟಿಂಗ್‌ ಒದಗಿಸುವ ಭರವಸೆ ವ್ಯಕ್ತಪಡಿಸಿದ್ದು, ಇವುಗಳಲ್ಲಿ ರಿಯರ್ ವ್ಹೀಲ್ ಡ್ರೈವ್ ಮತ್ತು ಆಲ್ ವೀಲ್ ಡ್ರೈವ್ ಮಾದರಿಗಳನ್ನು ಒಳಗೊಂಡಿದೆ.

ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಗಾಗಿ ಫೋಕ್ಸ್‌ವ್ಯಾಗನ್ ಜೊತೆಗೆ ಪಾಲುದಾರಿಕೆ ಪ್ರಕಟಿಸಿದ ಮಹೀಂದ್ರಾ

ಈ ಮೂಲಕ ಹೊಸ ಮಾದರಿಗಳು ಮೈಲೇಜ್ ಮತ್ತು ಪ್ರೀಮಿಯಂ ಫೀಚರ್ಸ್‌ಗಳ ಜೊತೆಗೆ ಪರ್ಫಾಮೆನ್ಸ್‌ನಲ್ಲೂ ಗಮನಸೆಳೆಯಲಿದ್ದು, ರಿಯಲ್ ವ್ಹೀಲ್ ಮಾದರಿಗಳು 231 ಬಿಎಚ್‌ಪಿಯಿಂದ 285 ಬಿಎಚ್‌ಪಿ ಉತ್ಪಾದಿಸಲಿದ್ದರೆ ಆಲ್ ವ್ಹೀಲ್ ಡ್ರೈವ್ ಸಿಸ್ಟಂ ಹೊಂದಿರುವ ಕಾರು ಮಾದರಿಗಳು 340 ಬಿಎಚ್‌ಪಿಯಿಂದ 394 ಬಿಎಚ್‌ಪಿ ಉತ್ಪಾದಿಸಬಲ್ಲವು.

ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಗಾಗಿ ಫೋಕ್ಸ್‌ವ್ಯಾಗನ್ ಜೊತೆಗೆ ಪಾಲುದಾರಿಕೆ ಪ್ರಕಟಿಸಿದ ಮಹೀಂದ್ರಾ

ವೈಶಿಷ್ಟ್ಯತೆಗಳ ವಿಷಯದಲ್ಲಿ ಹೊಸ ಇವಿ ಕಾರು ಮಾದರಿಗಳು ಐಷಾರಾಮಿ ಕಾರುಗಳಲ್ಲೂ ಇಲ್ಲದ ಹಲವು ಹೊಸ ಫೀಚರ್ಸ್‌ಗಳೊಂದಿಗೆ ಲೆವಲ್ 2 ಎಡಿಎಎಸ್ ಸೇರಿದಂತೆ ಹಲವಾರು ಫೀಚರ್ಸ್ ಹೊಂದಿರಲಿದ್ದು, ಎಲ್ಲಾ ವರ್ಗದ ಗ್ರಾಹಕರನ್ನು ಗಮನದಲ್ಲಿಟ್ಟುಕೊಂಡು ಹೊಸ ಉತ್ಪನ್ನಗಳನ್ನು ಸಿದ್ದಪಡಿಸಲಾಗುತ್ತಿದೆ.

ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಗಾಗಿ ಫೋಕ್ಸ್‌ವ್ಯಾಗನ್ ಜೊತೆಗೆ ಪಾಲುದಾರಿಕೆ ಪ್ರಕಟಿಸಿದ ಮಹೀಂದ್ರಾ

ಮಹೀಂದ್ರಾ ಕಂಪನಿಯು ಹೊಸ ಕಾರು ಉತ್ಪನ್ನಗಳನ್ನು ಯುಕೆಯಲ್ಲಿರುವ ಮಹೀಂದ್ರಾ ಅಡ್ವಾನ್ಸ್‌ಡ್ ಡಿಸೈನ್ ಯುರೋಪ್ (MADE) ನಲ್ಲಿ ನಿರ್ಮಾಣ ಮಾಡುತ್ತಿದ್ದು, ಇದು ಕಂಪನಿಯ ಭವಿಷ್ಯದ ಇವಿ ಉತ್ಪನ್ನಗಳ ಪೋರ್ಟ್‌ಫೋಲಿಯೊಗೆ ಪರಿಕಲ್ಪನಾ ಕೇಂದ್ರವಾಗಿ ಕಾರ್ಯನಿರ್ವಹಿಸುತ್ತದೆ

ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಗಾಗಿ ಫೋಕ್ಸ್‌ವ್ಯಾಗನ್ ಜೊತೆಗೆ ಪಾಲುದಾರಿಕೆ ಪ್ರಕಟಿಸಿದ ಮಹೀಂದ್ರಾ

ಇವಿ ಮತ್ತು ಸುಧಾರಿತ ವಾಹನ ಪರಿಕಲ್ಪನೆಗಳನ್ನು ರೂಪಿಸುವುದು ಮತ್ತು ನಿರ್ಮಿಸಲು ಈ ಹೊಸ ಪ್ಲ್ಯಾಟ್‌ಫಾರ್ಮ್ ಸಾಕಷ್ಟು ಸಹಕಾರಿಯಾಗಲಿದ್ದು, ಇದರಲ್ಲಿ ಇವಿ ಪರಿಕಲ್ಪನೆ, 3ಡಿ ಡಿಜಿಟಲ್ ಮತ್ತು ಫಿಜಿಕಲ್ ಮಾಡೆಲಿಂಗ್, ಕ್ಲಾಸ್-ಎ ಸರ್ಫೇಸಿಂಗ್, ಡಿಜಿಟಲ್ ದೃಶ್ಯೀಕರಣ ಮತ್ತು ಮಾನವ-ಯಂತ್ರ ಸೇರಿದಂತೆ ಎಂಡ್ ಟು ಎಂಡ್ ಡಿಸೈನ್ ವಿನ್ಯಾಸವನ್ನು ಪೂರ್ಣಗೊಳಿಸುವ ಮತ್ತು ನಿರ್ವಹಿಸಲು ಇದು ಅನುವು ಮಾಡಿಕೊಡುತ್ತದೆ.

Most Read Articles

Kannada
English summary
Mahindra and volkswagen announce partnership for ev components
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X