ಬಿಡುಗಡೆಗೆ ಸಿದ್ದಗೊಂಡಿರುವ ಮಹೀಂದ್ರಾ ಅಟಾಮ್ ಕ್ವಾರ್ಡ್ರಿಸೈಕಲ್ ಮಾಹಿತಿ ಬಹಿರಂಗ
ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ತೀವ್ರ ಬೆಳವಣಿಗೆ ಕಂಡುಬರುತ್ತಿರುವ ಹಿನ್ನಲೆಯಲ್ಲಿ ಹಲವಾರು ಹೊಸ ವಾಹನ ಉತ್ಪಾದನಾ ಕಂಪನಿಗಳು ವಿವಿಧ ಮಾದರಿಯ ಇವಿ ವಾಹನಗಳ ಮೂಲಕ ಗ್ರಾಹಕರನ್ನು ಸೆಳೆಯುತ್ತಿದ್ದು, ಮಹೀಂದ್ರಾ ಕಂಪನಿಯು ಕೂಡಾ ತನ್ನ ಹೊಸ ಇವಿ ವಾಹನ ಮಾದರಿಗಳೊಂದಿಗೆ ಎಲೆಕ್ಟ್ರಿಕ್ ವಾಹನ ಮಾರಾಟದಲ್ಲಿ ಭಾರೀ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಮಹೀಂದ್ರಾ ಕಂಪಿಯು ಹೊಸ ಎಲೆಕ್ಟ್ರಿಕ್ ವಾಹನಗಳ ಪಟ್ಟಿಯಲ್ಲಿ ಇಕೆಯುವಿ100, ಇಎಕ್ಸ್‌ಯುವಿ300 ಮತ್ತು ಅಟಾಮ್ ಕ್ವಾರ್ಡ್ರಿಸೈಕಲ್ ವಾಹನವು ಪ್ರಮುಖವಾಗಿದ್ದು, 2020ರಲ್ಲಿ ಮೊದಲ ಬಾರಿಗೆ ಅನಾವರಣಗೊಂಡಿದ್ದ ಅಟಾಮ್ ಕ್ವಾರ್ಡ್ರಿಸೈಕಲ್ ಮಾದರಿಯ ಬಿಡುಗಡೆಗೆ ಮಹೀಂದ್ರಾ ಕಂಪನಿಯು ಇದೀಗ ಅಂತಿಮ ಹಂತದ ಸಿದ್ದತೆ ನಡೆಸುತ್ತಿದೆ.

ಕೋವಿಡ್ ಪರಿಣಾಮ ಹೊಸ ಎಲೆಕ್ಟ್ರಿಕ್ ವಾಹನಗಳ ಬಿಡುಗಡೆಯನ್ನುು ತಾತ್ಕಾಲಿಕವಾಗಿ ಮುಂಡೂಡಿಕೆ ಮಾಡುತ್ತಾ ಬಂದಿದ್ದ ಮಹೀಂದ್ರಾ ಕಂಪನಿಯು ಇದೀಗ ಹೊಸ ವಾಹನಗಳ ಬಿಡುಗಡೆಗಾಗಿ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳಿಗೆ ಮರುಚಾಲನೆ ನೀಡಿದೆ.

ಅಟಾಮ್ ಕ್ವಾರ್ಡ್ರಿಸೈಕಲ್ ಮಾದರಿಯು ಉತ್ಪಾದನಾ ಮಾದರಿಯೊಂದಿಗೆ ವಿವಿಧ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಯಲ್ಲಿ ಭಾಗಿಯಾಗಿರುವುದು ಕಂಡುಬಂದಿದ್ದು, ಹೊಸ ವಾಹನವು ಕೆ1, ಕೆ2, ಕೆ3 ಮತ್ತು ಕೆ4 ವೆರಿಯೆಂಟ್‌ಗಳೊಂದಿಗೆ ಬಿಡುಗಡೆಗೊಳ್ಳಬಹುದಾಗಿದೆ.

2023ರ ಆರ್ಥಿಕ ವರ್ಷದಲ್ಲಿ ಒಟ್ಟು ಮೂರು ಹೊಸ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆ ಮಾಡಲು ಸಿದ್ದವಾಗಿರುವ ಮಹೀಂದ್ರಾ ಕಂಪನಿಯು ಮೊದಲಿಗೆ ಇಕೆಯುವಿ100 ಮತ್ತು ಅಟಾಮ್ ಕ್ವಾರ್ಡ್ರಿಸೈಕಲ್ ಬಿಡುಗಡೆ ಮಾಡಲಿದ್ದು, ತದನಂಕರ 2023ರ ಕೊನೆಯಲ್ಲಿ ಇಎಕ್ಸ್‌ಯುವಿ300 ಬಿಡುಗಡೆ ಮಾಡಲಿದೆ.

ಮಹೀಂದ್ರಾ ಕಂಪನಿಯು ಸದ್ಯ ಹೊಸ ನಿಯಮಗಳಿಗೆ ಅನುಗುಣವಾಗಿ ತನ್ನ ಭವಿಷ್ಯದ ಎಲೆಕ್ಟ್ರಿಕ್ ಕಾರು ಮಾದರಿಗಳನ್ನು ಅಭಿವೃದ್ಧಿಪಡಿಸುತ್ತಿದ್ದು, ಪ್ರಯಾಣಿಕರಿಗೆ ಗರಿಷ್ಠ ಮಟ್ಟದ ಸುರಕ್ಷತೆ ನೀಡುವ ಉದ್ದೇಶದಿಂದ ಈ ಹಿಂದಿನ ಇ2ಓ ಪ್ಲಸ್ ಕಾರಿನ ಉತ್ಪಾದನೆ ಸ್ಥಗಿತಗೊಳಿಸಿರುವ ಕಂಪನಿಯು ಹೊಸ ಮಾದರಿಯ ಎಲೆಕ್ಟ್ರಿಕ್ ವಾಹನ ಉತ್ಪನ್ನಗಳ ಮೇಲೆ ಹೆಚ್ಚಿನ ಗಮನಹರಿಸುತ್ತಿದೆ.

ಗ್ರಾಹಕರ ಬೇಡಿಕೆಯೆಂತೆ ವಿಶೇಷ ಫೀಚರ್ಸ್ ಮತ್ತು ಅತ್ಯುತ್ತಮ ಬ್ಯಾಟರಿ ಆಯ್ಕೆ ಹೊಂದಲಿರುವ ಹೊಸ ಎಲೆಕ್ಟ್ರಿಕ್ ಪ್ರಯಾಣಿಕರ ಕಾರುಗಳು ಮತ್ತು ಎಲೆಕ್ಟ್ರಿಕ್ ವಾಣಿಜ್ಯ ವಾಹನಗಳ ಬಿಡುಗಡೆಯ ಮೇಲೂ ಭಾರೀ ಪ್ರಮಾಣದ ಹೂಡಿಕೆ ಮಾಡುತ್ತಿದೆ.

ಇದರಲ್ಲಿ 2020ರ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಂಡಿದ್ದ ಅಟಾಮ್ ಕ್ವಾರ್ಡ್ರಿಸೈಕಲ್ ಎಲೆಕ್ಟ್ರಿಕ್ ವಾಹನವು ಒಂದಾಗಿದ್ದು, ಈ ವಾಹನವು ಎರಡು ಮಾದರಿಯ ಲೀಥಿಯಂ ಅಲಾಯ್ ಬ್ಯಾಟರಿ ಪ್ಯಾಕ್ ಹೊಂದಿರಲಿದೆ.

ಆರಂಭಿಕ ಮಾದರಿಗಳಲ್ಲಿ 7.4kWh ಬ್ಯಾಟರಿ ಪ್ಯಾಕ್ ನೀಡಲಾಗುತ್ತಿದ್ದರೆ ಟಾಪ್ ಎಂಡ್ ಮಾದರಿಯಲ್ಲಿ 11.1kWh ಬ್ಯಾಟರಿ ಪ್ಯಾಕ್ ನೀಡಲಾಗುತ್ತಿದ್ದು, 11 ಬಿಎಚ್‌ಪಿ ಉತ್ಪಾದನೆಯೊಂದಿಗೆ ಇವು ಪ್ರತಿ ಚಾರ್ಜ್‌ಗೆ 120 ಕಿ.ಮೀ ನಿಂದ 150 ಕಿ.ಮೀ ಮೈಲೇಜ್ ಹಿಂದಿರುಗಿಸಲಿವೆ.

ಹಾಗೆಯೇ ಹೊಸ ವಾಹನದಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ನೀಡಲಾಗಿದ್ದು, ವಾಹನ ಹೊರಭಾಗದಲ್ಲಿ ಮಾತ್ರವಲ್ಲದೇ ಒಳಭಾಗದಲ್ಲೂ ಆಕರ್ಷಕ ಆಸನ ಸೌಲಭ್ಯದೊಂದಿಗೆ ದೊಡ್ಡದಾದ ಕ್ಯಾಬಿನ್ ಸೇರಿದಂತೆ ವಿವಿಧ ತಾಂತ್ರಿಕ ಅಂಶಗಳನ್ನು ನೀಡಲಾಗಿದೆ.

ಅನಾವರಣ ಹೊರತುಪಡಿಸಿ ಅಟಾಮ್ ಬಗೆಗೆ ಕಂಪನಿಯು ಇನ್ನು ಯಾವುದೇ ಅಧಿಕೃತ ತಾಂತ್ರಿಕ ಮಾಹಿತಿ ಬಿಟ್ಟುಕೊಟ್ಟಿಲ್ಲವಾದರೂ ಈ ಹೊಸ ಎಲೆಕ್ಟ್ರಿಕ್ ವಾಹನವು ಬಜಾಜ್ ಬಿಡಗಡೆ ಮಾಡಲಿರುವ ಎಲೆಕ್ಟ್ರಿಕ್ ಕ್ಯೂಟ್ ಕ್ವಾರ್ಡ್ರಿಸೈಕಲ್‌ಗೆ ಉತ್ತಮ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.

ಹೊಸ ಅಟಾಮ್ ಕ್ವಾರ್ಡ್ರಿಸೈಕಲ್ ವಾಹನವು 2,728 ಎಂಎಂ ಉದ್ದಳತೆಯೊಂದಿಗೆ 1,452 ಎಂಎಂ ಅಗಲ, 1,576 ಎಂಎಂ ಎತ್ತರ ಮತ್ತು 1,885 ಎಂಎಂ ವ್ಹೀಲ್ ಬೆಸ್ ಹೊಂದಿದ್ದು, ಬಾಕ್ಸಿ ಡಿಸೈನ್‌ನೊಂದಿಗೆ ಆಕರ್ಷಕ ಹೊರನೋಟ ಹೊಂದಿದೆ.

ಮಹೀಂದ್ರಾ ನಿರ್ಮಾಣದ ಹೊಸ ಎಲೆಕ್ಟ್ರಿಕ್ ಕಾರುಗಳು 2023ರಿಂದ ಹಂತ-ಹಂತವಾಗಿ ಮಾರುಕಟ್ಟೆ ಪ್ರವೇಶಿಸಲಿದ್ದು, 2023ರಿಂದ 2027ರ ತನಕ ಒಟ್ಟು ಎಂಟು ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲಿರುವ ಮಹೀಂದ್ರಾ ಕಂಪನಿಯು ಆರಂಭಿಕವಾಗಿ ಇಕೆಯುವಿ100 ನಂತರ ಅಟಾಮ್ ಕ್ವಾರ್ಡ್ರಿಸೈಕಲ್ ಬಿಡುಗಡೆ ಮಾಡಲಿದೆ.

ಎಲೆಕ್ಟ್ರಿಕ್ ವಾಹನ ಉದ್ಯಮದಲ್ಲಿ ಮೇಲೆ ಈಗಾಗಲೇ ಭಾರೀ ಪ್ರಮಾಣದ ಹೂಡಿಕೆ ಮಾಡಿರುವ ಮಹೀಂದ್ರಾ ಕಂಪನಿಯು ಇತ್ತೀಚೆಗೆ ಹೆಚ್ಚುವರಿಯಾಗಿ ರೂ.3 ಸಾವಿರ ಕೋಟಿ ಬಂಡವಾಳ ಹೂಡಿಕೆ ಮಾಡಿದ್ದು, ಹೊಸ ಬಂಡವಾಳದೊಂದಿಗೆ ಕಂಪನಿಯು ಇದುವರೆಗೆ ಸುಮಾರು ರೂ.12 ಸಾವಿರ ಕೋಟಿ ಹೂಡಿಕೆ ಮಾಡಿದಂತಾಗಿದೆ.


Click it and Unblock the Notifications