ಫೆಬ್ರವರಿ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ ಮಹೀಂದ್ರಾ ಬೊಲೆರೊ

ಮಹೀಂದ್ರಾ ಬೊಲೆರೊ ಮಹೀಂದ್ರಾ ಕಂಪನಿಯ ಸರಣಿಯಲ್ಲಿ ಅತ್ಯಂತ ಜನಪ್ರಿಯ ಪ್ರಯಾಣಿಕ ವಾಹನಗಳಲ್ಲಿ ಒಂದಾಗಿದೆ. 2022ರ ಫೆಬ್ರವರಿ ತಿಂಗಳಿನಲ್ಲಿ, ಸ್ವದೇಶಿ ವಾಹನ ತಯಾರಕ ಕಂಪನಿಯಾದ ಮಹೀಂದ್ರಾ ತನ್ನ ಬೊಲೆರೊದ ಒಟ್ಟು 11,045 ಯುನಿಟ್‌ಗಳನ್ನು ಮಾರಾಟಗೊಳಿಸಿವೆ.

ಫೆಬ್ರವರಿ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ ಮಹೀಂದ್ರಾ ಬೊಲೆರೊ

2021ರ ಫೆಬ್ರವರಿ ತಿಂಗಳಿನಲ್ಲಿ ಬೊಲೆರೊದ 4,843 ಯುನಿಟ್‌ಗಳನ್ನು ಮಾರಾಟವಾಗಿತ್ತು. ಇದು ಕಳೆದ ತಿಂಗಳು ವರ್ಷದಿಂದ ವರ್ಷಕ್ಕೆ (YoY) ಆಧಾರದ ಮೇಲೆ ಶೇ.128.06 ರಷ್ಟು ಮಾರಾಟದ ಬೆಳವಣಿಗೆಯನ್ನು ಸಾಧಿಸಿದೆ. 2022ರ ಜನವರಿ ತಿಂಗಳಿನಲ್ಲಿ ಮಹೀಂದ್ರಾ ಕಂಪನಿಯು 4,843 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ತಿಂಗಳಿನಿಂದ ತಿಂಗಳ ಮಾರಾಟದಲ್ಲಿ ಮಹೀಂದ್ರಾ ಬೊಲೆರೊ ವಾಹನವು ಶೇ.215.03 ಪ್ರತಿಶತದಷ್ಟು ಮಾರಾಟದ ಬೆಳವಣಿಗೆಯನ್ನು ದಾಖಲಿಸಿದೆ.

ಫೆಬ್ರವರಿ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ ಮಹೀಂದ್ರಾ ಬೊಲೆರೊ

ಮಹೀಂದ್ರಾ ಬೊಲೆರೊ ಮಾರಾಟದ ಅಂಕಿಅಂಶಗಳು ಬೊಲೆರೊ ಮತ್ತು ಬೊಲೆರೊ ನಿಯೋ ಎರಡಕ್ಕೂ ಸಂಖ್ಯೆಗಳನ್ನು ಒಳಗೊಂಡಿವೆ ಎಂದು ಗಮನಿಸಬೇಕು. ಎರಡನೆಯದು ಮೂಲಭೂತವಾಗಿ ಟಿಯುವಿ300 ಎಸ್‍ಯುವಿಯ ಫೇಸ್‌ಲಿಫ್ಟೆಡ್ ಆವೃತ್ತಿಯಾಗಿದೆ.

ಫೆಬ್ರವರಿ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ ಮಹೀಂದ್ರಾ ಬೊಲೆರೊ

ಕಳೆದ ತಿಂಗಳ ಮಾರಾಟದಲ್ಲಿ ಮಹೀಂದ್ರಾ ಕಂಪನಿಗೆ ಬೊಲೆರೊ ಉತ್ತಮ ಕೊಡುಗೆಯನ್ನು ನೀಡಿದೆ. ಸಾಮಾನ್ಯ ಬೊಲೆರೊ ಭಾರತೀಯ ಮಾರುಕಟ್ಟೆಯಲ್ಲಿ ಬಹುದೀರ್ಘಕಾಲದಿಂದ ಮಾರಾಟವಾಗುತ್ತಿರುವ ಜನಪ್ರಿಯ ಎಸ್‍ಯುವಿಗಳಲ್ಲಿ ಒಂದಾಗಿದೆ.

ಫೆಬ್ರವರಿ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ ಮಹೀಂದ್ರಾ ಬೊಲೆರೊ

ಈ ಮಹೀಂದ್ರಾ ಬೊಲೆರೊ ಕೈಗೆಟುಕುವ ಬೆಲೆ ಮತ್ತು ಒರಟಾದ ಯುಟಿಲಿಟಿ ವಾಹನವಾಗಿದೆ. ಮಹೀಂದ್ರಾ ಕಂಪನಿಯು ಜನಪ್ರಿಯ ಬೊಲೆರೊ ಎಸ್‍ಯುವಿಯನ್ನು ಮೊದಲ ಬಾರಿಗೆ 2000ದಲ್ಲಿ ಬಿಡುಗಡೆಗೊಳಿಸಿದ್ದರು. ಇಂದಿಗೂ ಭಾರತೀಯ ಮಾರುಕಟ್ಟೆಯಲ್ಲಿ ಜನಪ್ರಿಯ ಎಸ್‍ಯುವಿಗಳಲ್ಲಿ ಒಂದಾಗಿದೆ.

ಫೆಬ್ರವರಿ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ ಮಹೀಂದ್ರಾ ಬೊಲೆರೊ

ಮಹೀಂದ್ರಾ ಬೊಲೆರೊ ಎಸ್‍ಯುವಿ ಬಿ4, ಬಿ6 ಮತ್ತು ಬಿ6(ಒ) ಎಂಬ ಮೂರು ರೂಪಾಂತರಗಳಲ್ಲಿ ಲಭ್ಯವಿದೆ. ಈ ಬೊಲೆರೊ ವಿನ್ಯಾಸದ ಬಗ್ಗೆ ಹೇಳುವುದಾದರೆ, ಇದರ ಮುಂಭಾಗದಲ್ಲಿ ಹೊಸ ಬಂಪರ್, ಗ್ರಿಲ್ ಮತ್ತು ಮರುವಿನ್ಯಾಸಗೊಳಿಸಲಾದ ಹೆಡ್ ಲ್ಯಾಂಪ್ ಗಳನ್ನು ಅಳವಡಿಸಲಾಗಿದೆ. ಈ ಹೊಸ ಬೊಲೆರೊ ಆಕರ್ಷಕ ಲುಕ್ ಅನ್ನು ಹೊಂದಿದೆ.ಬೊಲೆರೊ ಎಸ್‍‍ಯುವಿನಲ್ಲಿ ಹೊಸ ಕ್ರ್ಯಾಶ್ ಟೆಸ್ಟ್ ಸುರಕ್ಷತಾ ನಿಯಮಕ್ಕೆ ಅನುಗುಣವಾಗಿ ಅದರ ಮಂಭಾಗವನ್ನು ನವೀಕರಿಸಲಾಗಿದೆ.

ಫೆಬ್ರವರಿ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ ಮಹೀಂದ್ರಾ ಬೊಲೆರೊ

ಮುಂಭಾಗದ ಪ್ರಯಾಣಿಕರ ಸುರಕ್ಷತೆಗೆ ಈ ಹೊಸ ನವೀಕರಣವು ಸಹಕಾರಿಯಾಗಲಿದೆ .ಇದರೊಂದಿಗೆ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಫಾಗ್ ಲ್ಯಾಂಪ್, ಮತ್ತು ಪ್ರಯಾಣಿಕರ ಬದಿಯ ಏರ್‌ಬ್ಯಾಗ್ ಅನ್ನು ಈ ಬೊಲೆರೊ ಎಸ್‍‍ಯುವಿಯ ಟಾಪ್-ಎಂಡ್ ಮಾದರಿಯಲ್ಲಿ ಪ್ರತ್ಯೇಕವಾಗಿ ನೀಡಲಾಗುತ್ತದೆ.

ಫೆಬ್ರವರಿ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ ಮಹೀಂದ್ರಾ ಬೊಲೆರೊ

ಮಹೀಂದ್ರಾ ಬೊಲೆರೊ ಎಸ್‌ಯುವಿಯಲ್ಲಿ 1.5 ಎಲ್ 3-ಸಿಲಿಂಡರ್ ಎಮ್ಹಾಕ್ 75 ಡೀಸೆಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 75 ಬಿ‍‍ಹೆಚ್‍‍ಪಿ ಪವರ್ ಮತ್ತು 195 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್‍ನೊಂದಿಗೆ 5 ಸ್ಪೀಡ್ ಮಾನ್ಯುವಲ್ ಗೇರ್ ಬಾಕ್ಸ್ ಅನ್ನು ಅಳವಡಿಸಲಾಗಿದೆ.

ಫೆಬ್ರವರಿ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ ಮಹೀಂದ್ರಾ ಬೊಲೆರೊ

ಮಹೀಂದ್ರಾ ಬೊಲೆರೊವನ್ನು ಮೊದಲ ಬಾರಿಗೆ ಭಾರತದಲ್ಲಿ 2000 ರಲ್ಲಿ ಪರಿಚಯಿಸಲಾಯಿತು, ಮತ್ತು ವರ್ಷಗಳಲ್ಲಿ ಕೆಲವು ಫೇಸ್‌ಲಿಫ್ಟ್‌ಗಳ ಹೊರತಾಗಿ, ವಾಹನವು ಒಂದೇ ಆಗಿರುತ್ತದೆ. ಅದರ ಇಬೊಲೆರೊ ಸಬ್ -4 ಮೀಟರ್ ವಾಹನವಾಗಿದೆ; ಇದರ ಉದ್ದ 3,995 ಮಿಮೀ, ಅಗಲ 1,745 ಎಂಎಂ, ಎತ್ತರ 1,880 ಎಂಎಂ, 2,680 ಎಂಎಂ ಉದ್ದದ ವ್ಹೀಲ್‌ಬೇಸ್ ಅನ್ನು ಒಳಗೊಂಡಿದೆ.

ಫೆಬ್ರವರಿ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ ಮಹೀಂದ್ರಾ ಬೊಲೆರೊ

ಇನ್ನು ಈ ಮಹೀಂದ್ರಾ ಬೊಲೆರೊ ಎಸ್‍ಯುವಿಯು ಬಾಕ್ಸೀ ವಿನ್ಯಾಸವನ್ನು ಹೊಂದಿದೆ. ಹೊಸ ಬೊಲೆರೊ ಎಸ್‍‍ಯುವಿಯಲ್ಲಿ ಸುರಕ್ಷತಾ ಕ್ರಮಗಳನ್ನು ಹೆಚ್ಚಿಸಿದೆ. ಮಹೀಂದ್ರಾ ಬೊಲೆರೊ ಭಾರತೀಯ ಮಾರುಕಟ್ಟೆಯಲ್ಲಿ ಉತ್ತಮ ಬೇಡೀಕೆಯೊಂದಿಗೆ ಮಾರಾಟವಾಗುತ್ತಿದೆ.

ಫೆಬ್ರವರಿ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ ಮಹೀಂದ್ರಾ ಬೊಲೆರೊ

ಮಹೀಂದ್ರಾ ಕಂಪನಿಯು ಟಿಯುವಿ300 ಮಾದರಿಯ ಹೊಸ ಆವೃತ್ತಿಯನ್ನೇ ಬೊಲೆರೊ ನಿಯೋ ಮಾದರಿಯ ಬಗ್ಗೆ ಹೇಳುವುದಾದರೆ, ಈ ಹೊಸ ಎಸ್‍ಯುವಿ ಕೂಡಾ ಪ್ರತಿಸ್ಪರ್ಧಿ ಮಾದರಿಗಳಿಂತಲೂ ಉತ್ತಮ ಎಂಜಿನ್ ಆಯ್ಕೆ ಮತ್ತು ಬೆಲೆ ಅಂತರವನ್ನು ಹೊಂದಿದೆ, ಹೊಸ ಬೊಲೆರೊ ನಿಯೋ ಕಾರು ಸ್ಕಾರ್ಪಿಯೋ ಮತ್ತು ಥಾರ್ ಮ್ಯಾಡುಲರ್ ಚಾರ್ಸಿ ಸೌಲಭ್ಯದೊಂದಿಗೆ ಹಲವು ಹೊಸ ತಾಂತ್ರಿಕ ಅಂಶಗಳನ್ನು ಹೊಂದಿದೆ.

ಫೆಬ್ರವರಿ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ ಮಹೀಂದ್ರಾ ಬೊಲೆರೊ

ಈ ಹೊಸ ಬೊಲೆರೊ ಎಸ್‍ಯುವಿಯು 7 ಸೀಟರ್ ಸೌಲಭ್ಯದೊಂದಿಗೆ ಎನ್4, ಎನ್8, ಎನ್10 ಮತ್ತು ಎನ್10 ಆಪ್ಷನ್ ಎನ್ನುವ ನಾಲ್ಕು ವೆರಿಯೆಂಟ್‌ನಲ್ಲಿ ಖರೀದಿಗೆ ಲಭ್ಯವಿದೆ. ಬೊಲೆರೊ ನಿಯೋದಲ್ಲಿ ಹಲವಾರು ಹೊಸ ತಾಂತ್ರಿಕ ಸೌಲಭ್ಯಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಿದ್ದು, ಹೊಸ ಕಾರಿನಲ್ಲಿ ಮರುವಿನ್ಯಾಸಗೊಳಿಸಲಾದ ಫ್ರಂಟ್ ಬಂಪರ್, ಮಾಡಿಫೈಗೊಳಿಸಿದ ಹೆಡ್‌ಲ್ಯಾಂಪ್‌, ಹಾರಿಜಂಟಲ್ ಆಗಿರುವ ಎಲ್‌ಇಡಿ ಡಿಆರ್‌ಎಲ್ ಲೈಟ್‌ಗಳನ್ನು ಒಳಗೊಂಡಿದೆ.

ಫೆಬ್ರವರಿ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ ಮಹೀಂದ್ರಾ ಬೊಲೆರೊ

ಇದರ ಜೊತೆಗೆ ಹೊಸ ಕಾರಿನಲ್ಲಿ ವಿಶಾಲವಾದ ಏರ್ ಡ್ಯಾಂ, ಸರ್ಕ್ಯೂಲರ್ ಫಾಗ್ ಲೈಟ್, ಮರುವಿನ್ಯಾಸಗೊಳಿಸಲಾದ ಹಿಂಭಾಗದ ಬಂಪರ್, ಹೊಸ ಬೊಲೆರೊ ನಿಯೋ ಬ್ಯಾಡ್ಜಿಂಗ್ ಸೇರಿದಂತೆ ಹಲವು ಹೊಸ ತಾಂತ್ರಿಕ ಸೌಲಭ್ಯಗಳು ಈ ಎಸ್‌ಯುವಿಯಲ್ಲಿ ಕಾಣಬಹುದಾಗಿದ್ದು, ಕಾರಿನ ಹೊರಭಾಗದಲ್ಲಿ ಮಾತ್ರವಲ್ಲದೆ ಒಳಭಾಗದ ವಿನ್ಯಾಸದಲ್ಲೂ ಸಾಕಷ್ಟು ಬದಲಾವಣೆ ಪಡೆದುಕೊಂಡಿದೆ. ಈ ಬೊಲೆರೊ ನಿಯೋ ಎಸ್‌ಯುವಿಯಲ್ಲಿ ಮಹೀಂದ್ರಾ ಕಂಪನಿಯು ಡ್ಯುಯಲ್ ಫ್ರಂಟ್ ಏರ್ ಬ್ಯಾಗ್‌, ಎಬಿಎಸ್ ಜೊತೆ ಇಬಿಡಿ, ಸಿಬಿಸಿ, ರಿಯರ್ ಪಾರ್ಕಿಂಗ್ ಸೆನ್ಸಾರ್, ಕ್ರೂಸ್ ಕಂಟ್ರೋಲ್, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್ ಸೇರಿದಂತೆ ಹಲವಾರು ಫೀಚರ್ಸ್‌ಗಳನ್ನು ನೀಡಿದೆ.

ಫೆಬ್ರವರಿ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ ಮಹೀಂದ್ರಾ ಬೊಲೆರೊ

ಈ ಬೊಲೆರೊ ನಿಯೋ ಮಾದರಿಯಲ್ಲಿ ಈ ಹಿಂದಿನ ಟಿಯುವಿ300 ಮಾದರಿಯಲ್ಲಿ ಅಳವಡಿಸಲಾಗುತ್ತಿದ್ದ 1.5-ಲೀಟರ್ ತ್ರಿ ಸಿಲಿಂಡರ್ ಡೀಸೆಲ್ ಎಂಜಿನ್ ಆಯ್ಕೆ ನೀಡಲಾಗಿದ್ದು, 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 100-ಬಿಎಚ್‌ಪಿ ಮತ್ತು 260 ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಅತ್ಯುತ್ತಮ ಇಂಧನ ದಕ್ಷತೆ ಪಡೆದುಕೊಂಡಿದೆ.

Most Read Articles

Kannada
English summary
Mahindra bolero february 2022 sales report find here all details
Story first published: Tuesday, March 22, 2022, 20:10 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X