ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಮಹೀಂದ್ರಾದ ಅತ್ಯಂತ ಕೈಗೆಟುಕುವ ಬೆಲೆಯ eKUV100

ಮಹೀಂದ್ರಾ ಆ್ಯಂಡ್ ಮಹೀಂದ್ರಾ ಈ ವರ್ಷದ ಅಂತ್ಯದ ವೇಳೆಗೆ ಭಾರತದಲ್ಲಿ ತನ್ನ ಬಹು ನಿರೀಕ್ಷಿತ ಎಲೆಕ್ಟ್ರಿಕ್ SUV eKUV100 ಅನ್ನು ಬಿಡುಗಡೆ ಮಾಡಲಿದೆ. ಮೂಲಗಳ ಪ್ರಕಾರ ಕಂಪನಿಯು ಈ ವರ್ಷ ನಡೆಯಲಿರುವ ಆಟೋ ಎಕ್ಸ್‌ಪೋದಲ್ಲಿ eKUV100 ಅನ್ನು ಪ್ರದರ್ಶಿಸಲಿದ್ದು, ನಂತರ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲಿದೆ ಎಂದು ತಿಲಿದುಬಂದಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಮಹೀಂದ್ರಾದ ಅತ್ಯಂತ ಕೈಗೆಟುಕುವ ಬೆಲೆಯ eKUV100

ಮಹೀಂದ್ರಾ ಈಗಾಗಲೇ ಇಕೆಯುವಿ100 ಬೆಲೆಯನ್ನು ಬಹಿರಂಗಪಡಿಸಿದೆ. ಕಂಪನಿಯು ಅದರ ಬೆಲೆಯನ್ನು ಏಪ್ರಿಲ್ 2020ರಲ್ಲಿ ರೂ 8.25 ಲಕ್ಷಕ್ಕೆ (ಎಕ್ಸ್ ಶೋ ರೂಂ) ನಿಗದಿಪಡಿಸಿತ್ತು. ನಂತರ ಕೆಲವು ಕಾರಣಾಂತರಗಳಿಂದ ಕಂಪನಿಯು ಅದರ ಮಾರಾಟವನ್ನು ಪ್ರಾರಂಭಿಸಲು ಸಾಧ್ಯವಾಗಿರಲಿಲ್ಲ. ಇದೀಗ ಮಹೀಂದ್ರಾ ಇಕೆಯುವಿ100 ಮಾರಾಟವನ್ನು ಪ್ರಾರಂಭಿಸಲು ಸಿದ್ಧವಾಗಿದೆ. ಪ್ರಸ್ತುತ ಈ ಎಲೆಕ್ಟ್ರಿಕ್ SUV ಪರೀಕ್ಷಾ ಹಂತದಲ್ಲಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಮಹೀಂದ್ರಾದ ಅತ್ಯಂತ ಕೈಗೆಟುಕುವ ಬೆಲೆಯ eKUV100

ಪ್ರಸ್ತುತ ಮಹೀಂದ್ರಾ ಕಂಪನಿಯ ದೊಡ್ಡ ಎಲೆಕ್ಟ್ರಿಕ್ ವಾಹನಗಳಲ್ಲಿ ಇನ್ನೂ ಕೆಲವು ಮಾದರಿಗಳು ಇರಬಹುದಾಗಿದ್ದು, ಮಾಧ್ಯಮ ವರದಿಗಳ ಪ್ರಕಾರ ಕಂಪನಿಯು XUV300ನ ಎಲೆಕ್ಟ್ರಿಕ್ ಆವೃತ್ತಿಯನ್ನು ತರಲು ಯೋಜಿಸುತ್ತಿದೆ, ಇದು 2023ರ ಮೂರನೇ ಅಥವಾ ನಾಲ್ಕನೇ ತ್ರೈಮಾಸಿಕದಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಮಹೀಂದ್ರಾದ ಅತ್ಯಂತ ಕೈಗೆಟುಕುವ ಬೆಲೆಯ eKUV100

ಮಹೀಂದ್ರ eKUV100 ಬಿಡುಗಡೆಯಾದ ನಂತರ ಭಾರತದಲ್ಲಿ ಅಗ್ಗದ ಎಲೆಕ್ಟ್ರಿಕ್ ಕಾರು ಎಂಬ ಖ್ಯಾತಿಗೆ ಪಾತ್ರವಾಗಲಿದೆ. ಹೆಚ್ಚಿನ ಕಾರ್ಯಕ್ಷಮತೆಯ ಲಿಥಿಯಂ-ಐಯಾನ್ ಬ್ಯಾಟರಿ ಮತ್ತು ನಾಲ್ಕು ಎಲೆಕ್ಟ್ರಿಕ್ ಮೋಟಾರ್‌ಗಳನ್ನು ಈ ಎಸ್‌ಯುವಿಯಲ್ಲಿ ಬಳಸಲಾಗಿದೆ. ಸಂಪೂರ್ಣ ಚಾರ್ಜ್ ಮಾಡಿದರೆ, ಈ SUV 250 ಕಿಮೀ ವ್ಯಾಪ್ತಿಯನ್ನು ನೀಡುತ್ತದೆ ಎನ್ನಲಾಗಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಮಹೀಂದ್ರಾದ ಅತ್ಯಂತ ಕೈಗೆಟುಕುವ ಬೆಲೆಯ eKUV100

ರೆವಾ ಎಲೆಕ್ಟ್ರಿಕ್ ಕಂಪನಿಯೊಂದಿಗೆ 2010ರಲ್ಲಿ ಮೊದಲ ಹೂಡಿಕೆಯೊಂದಿಗೆ ಎಲೆಕ್ಟ್ರಿಕ್ ವಾಹನ ಉದ್ಯಮಕ್ಕೆ ಕಾಲಿರಿಸಿದ ಮಹೀಂದ್ರಾ ಕಂಪನಿಯು ಇದುವರೆಗೆ ಹಲವಾರು ಎಲೆಕ್ಟ್ರಿಕ್ ವಾಹನ ಮಾದರಿಗಳನ್ನು ಪರಿಚಯಿಸಿದ್ದು, ಇದೀಗ ಕಂಪನಿಯು ಸುಧಾರಿತ ತಂತ್ರಜ್ಞಾನ ಪ್ರೇರಿತ ವಾಹನಗಳ ಅಭಿವೃದ್ದಿಯತ್ತ ಹೆಚ್ಚಿನ ಗಮನಹರಿಸುತ್ತಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಮಹೀಂದ್ರಾದ ಅತ್ಯಂತ ಕೈಗೆಟುಕುವ ಬೆಲೆಯ eKUV100

ಪ್ರಯಾಣಿಕ ವಾಹನಗಳ ವಿಭಾಗದಲ್ಲಿ ಮಾತ್ರವಲ್ಲ ವಾಣಿಜ್ಯ ವಾಹನಗಳ ವಿಭಾಗದಲ್ಲೂ ಎಲೆಕ್ಟ್ರಿಕ್ ಮಾದರಿಗಳನ್ನು ಪರಿಚಯಿಸಿರುವ ಮಹೀಂದ್ರಾ ಕಂಪನಿಯು ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆಯೆಂತೆ ಪ್ರಮುಖ ಬದಲಾವಣೆಗಳೊಂದಿಗೆ ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡುವ ಸಿದ್ದತೆಯಲ್ಲಿದ್ದು, ಮಹೀಂದ್ರಾ ಕಂಪನಿಯು ಕೇವಲ ಎಲೆಕ್ಟ್ರಿಕ್ ವಾಹನ ಉತ್ಪಾದನೆ ಮಾತ್ರವಲ್ಲದೆ ಸಂಶೋಧನೆ, ವಿಶ್ವಾದ್ಯಂತ ನೂರಾರು ಇವಿ ಸ್ಟಾರ್ಟ ಅಪ್ ಕಂಪನಿಗಳಲ್ಲೂ ಹಣ ಹೂಡಿಕೆ ಮಾಡಿರುವುದು ಭವಿಷ್ಯದ ಎಲೆಕ್ಟ್ರಿಕ್ ವಾಹನ ಉತ್ಪಾದನೆ ಮತ್ತು ಮಾರಾಟದಲ್ಲಿ ಮಹತ್ವದ ಪಾತ್ರವಹಿಸಲಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಮಹೀಂದ್ರಾದ ಅತ್ಯಂತ ಕೈಗೆಟುಕುವ ಬೆಲೆಯ eKUV100

ಹೊಸ ಬಂಡವಾಳದೊಂದಿಗೆ ಇದೀಗ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆಗಾಗಿ ಹೊಸ ಪ್ಲ್ಯಾಟ್‌ಫಾರ್ಮ್ ಸಿದ್ದಪಡಿಸುತ್ತಿದ್ದು, ಒಂದೇ ಪ್ಲ್ಯಾಟ್‌ಫಾರ್ಮ್ ಅಡಿ ಹಲವು ವಾಹನ ಮಾದರಿಗಳನ್ನು ನಿರ್ಮಾಣ ಮಾಡುವ ಗುರಿಹೊಂದಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಮಹೀಂದ್ರಾದ ಅತ್ಯಂತ ಕೈಗೆಟುಕುವ ಬೆಲೆಯ eKUV100

ಕಳೆದ 2020ರ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಕೆಯುವಿ100 ಎಲೆಕ್ಟ್ರಿಕ್, ಎಕ್ಸ್‌ಯುವಿ300 ಎಲೆಕ್ಟ್ರಿಕ್ ಮತ್ತು ಅಟಾಮ್ ಕ್ವಾರ್ಡ್ರಿಸೈಕಲ್ ಮಾದರಿಗಳನ್ನು ಪ್ರದರ್ಶನ ಮಾಡಿದ್ದ ಮಹೀಂದ್ರಾ ಎಲೆಕ್ಟ್ರಿಕ್ ಕಂಪನಿಯು ಪ್ರದರ್ಶನದ ವೇಳೆ ಕೆಯುವಿ100 ಎಲೆಕ್ಟ್ರಿಕ್ ಕಾರು ಮಾದರಿಯ ಬೆಲೆ ಮಾಹಿತಿ ಮಾತ್ರವೇ ಹಂಚಿಕೊಳ್ಳುವ ಮೂಲಕ ಮುಂದಿನ ಕೆಲವೇ ದಿನಗಳಲ್ಲಿ ವಿತರಣೆ ಮಾಡುವುದಾಗಿ ಹೇಳಿಕೊಂಡಿತ್ತು.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಮಹೀಂದ್ರಾದ ಅತ್ಯಂತ ಕೈಗೆಟುಕುವ ಬೆಲೆಯ eKUV100

ಟಾಟಾ ಮೋಟಾರ್ಸ್ ಮತ್ತು ಎಂಜಿ ಮೋಟಾರ್ ಸಹ ಭಾರತೀಯ ಮಾರುಕಟ್ಟೆಗೆ ಕೈಗೆಟುಕುವ ಎಲೆಕ್ಟ್ರಿಕ್ ಕಾರುಗಳನ್ನು ಪರಿಚಯಿಸುವ ತಮ್ಮ ಯೋಜನೆಗಳನ್ನು ಬಹಿರಂಗಪಡಿಸಿರುವುದು ಈಗಾಗಲೇ ಎಲ್ಲರಿಗೂ ತಿಳಿದಿರುವ ವಿಚಾರವೇ. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಭಾರತೀಯ ಗ್ರಾಹಕರು ಕೈಗೆಟುಕುವ ಬೆಲೆಯ ವಿವಿಧ ಬ್ರಾಂಡ್‌ನ ಎಲೆಕ್ಟ್ರಿಕ್ ಕಾರುಗಳ ಆಯ್ಕೆ ಮಾಡಿಕೊಳ್ಳಬಹುದಾಗಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಮಹೀಂದ್ರಾದ ಅತ್ಯಂತ ಕೈಗೆಟುಕುವ ಬೆಲೆಯ eKUV100

ಮಹೀಂದ್ರಾ ಕಂಪನಿ ಭಾರತೀಯ EV ವಲಯದಲ್ಲಿ ಮೊದಲ ಹೆಜ್ಜೆಯ ಪ್ರಯೋಜನವನ್ನು ಪಡಿಯಲು ತಡಬಡಿಸುತ್ತಿದೆ. ಇದಕ್ಕೆ ಕಾರಣ ಉತ್ಪನ್ನದ ನಾವೀನ್ಯತೆ ಮತ್ತು ಆಕ್ರಮಣಶೀಲತೆಯ ಕೊರತೆಯಿಂದಾಗಿ ಕಾರು ತಯಾರಕರನ್ನು ಹಿಂದಕ್ಕೆ ತಳ್ಳಿದೆ, ಆದರೆ ಇತರ ಆಟೋಮೊಬೈಲ್ ಬ್ರಾಂಡ್‌ಗಳಾದ ಟಾಟಾ ಮೋಟಾರ್ಸ್, ಹ್ಯುಂಡೈ ಮತ್ತು ಎಂಜಿ ಮೋಟಾರ್‌ಗಳು ತಮ್ಮದೇ ಆದ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡುವ ಮೂಲಕ ರೇಸ್‌ನಲ್ಲಿ ಬಹಳ ದೂರ ಬಂದಿವೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಮಹೀಂದ್ರಾದ ಅತ್ಯಂತ ಕೈಗೆಟುಕುವ ಬೆಲೆಯ eKUV100

ಮಾರುತಿ ಸುಜುಕಿ ಶೀಘ್ರದಲ್ಲೇ ವ್ಯಾಗನ್ಆರ್ ಇವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡುವ ತವಕದಲ್ಲಿದೆ. ಆದಾಗ್ಯೂ, ಹೊಸ ಎಲೆಕ್ಟ್ರಿಕ್ ವಾಹನ ಶ್ರೇಣಿಯೊಂದಿಗೆ, ಮಹೀಂದ್ರಾ ತನ್ನ ಸ್ಥಾನವನ್ನು ಮರಳಿ ಪಡೆಯುವ ಗುರಿಯನ್ನು ಹೊಂದಿದೆ. ಮಹೀಂದ್ರಾ XUV300 EV 2023 ರಲ್ಲಿ ಬಿಡುಗಡೆಯಾಗಲಿದೆ ಎಂದು ಘೋಷಿಸಲಾಗಿದ್ದು, ಟಾಟಾ ನೆಕ್ಸಾನ್ EV, MG ZS EV ಮತ್ತು ಹುಂಡೈ ಕೋನಾ EV ಯಂತಹ ಎಲೆಕ್ಟ್ರಿಕ್ ಕಾರುಗಳೊಂದಿಗೆ ಸ್ಪರ್ಧಿಸಲಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಮಹೀಂದ್ರಾದ ಅತ್ಯಂತ ಕೈಗೆಟುಕುವ ಬೆಲೆಯ eKUV100

ಪ್ರಸ್ತುತ, ಮಹೀಂದ್ರಾ ತನ್ನ ಎಲೆಕ್ಟ್ರಿಕ್ ವಾಹನ ಶ್ರೇಣಿಯಲ್ಲಿ ಇ-ವೆರಿಟೊ ಕಾಂಪ್ಯಾಕ್ಟ್ ಎಲೆಕ್ಟ್ರಿಕ್ ಸೆಡಾನ್ ಅನ್ನು ಮಾರಾಟ ಮಾಡುತ್ತಿದೆ. ಆದರೂ, ಈ ಇವಿ ಸರ್ಕಾರಿ ಏಜೆನ್ಸಿಗಳು ಮತ್ತು ಫ್ಲೀಟ್ ಆಪರೇಟರ್‌ಗಳಿಗೆ ಲಭ್ಯವಿದ್ದರೂ, ಖಾಸಗಿ ವೈಯಕ್ತಿಕ ಖರೀದಿದಾರರಿಗೆ ಇದು ಇನ್ನೂ ಲಭ್ಯವಾಗಬೇಕಿದೆ. ವಾಹನ ತಯಾರಕ ಸಂಸ್ಥೆಯು ಈಗ ಎಲೆಕ್ಟ್ರಿಕ್ ಮೂರು ಮತ್ತು ನಾಲ್ಕು ಚಕ್ರಗಳ ವಿಭಾಗದಲ್ಲಿ ಮಾತ್ರ ಗಮನಹರಿಸಲಿದೆ ಎಂದು ಮಹೀಂದ್ರಾ ಗ್ರೂಪ್ ಹೇಳಿಕೊಂಡಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಮಹೀಂದ್ರಾದ ಅತ್ಯಂತ ಕೈಗೆಟುಕುವ ಬೆಲೆಯ eKUV100

ಮಧ್ಯಮ ಗಾತ್ರದ ಎಲೆಕ್ಟ್ರಿಕ್ ಕಾರುಗಳ ವಿಭಾಗದಲ್ಲಿ ಇಎಕ್ಸ್‌ಯುವಿ300 ಕಾರು ಮಾದರಿಯೊಂದಿಗೆ 2025ರ ವೇಳೆಗೆ 5 ಲಕ್ಷ ಯುನಿಟ್ ಇವಿ ವಾಹನಗಳನ್ನು ಮಾರಾಟ ಮಾಡುವ ಗುರಿಹೊಂದಿದ್ದು, ಹೊಸ ಕಾರುಗಳು ಭಾರತೀಯ ಆಟೋ ಉದ್ಯಮದಲ್ಲಿ ಹೊಸ ಬದಲಾವಣೆ ತರಲಿವೆ.

More from DriveSpark

Article Published On: Saturday, March 26, 2022, 18:30 [IST]
English summary
Mahindra e kuv100 to launch in 2022 details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+