ಬಹುಬೇಡಿಕೆಯ ಸ್ಕಾರ್ಪಿಯೊ-ಎನ್ ಎಸ್‌ಯುವಿಯ ವಿತರಣೆ ಪಡೆದ ಆನಂದ್ ಮಹೀಂದ್ರಾ: ಒಳ್ಳೆ ಹೆಸರು ಸೂಚಿಸಲು ಮನವಿ

ಜನಪ್ರಿಯ ಸ್ವದೇಶಿ ಕಾರು ತಯಾರಕ ಕಂಪನಿಯಾದ ಮಹೀಂದ್ರಾ ತನ್ನ ಬಹುನಿರೀಕ್ಷಿತ ಸ್ಕಾರ್ಪಿಯೋ-ಎನ್ ಎಸ್‌ಯುವಿಯನ್ನು ಈ ವರ್ಷದ ಅಗಸ್ಟ್ 15ರಂದು ಬಿಡುಗಡೆಗೊಳಿಸಿತು. ಈ ಹೊಸ ಮಹೀಂದ್ರಾ ಸ್ಕಾರ್ಪಿಯೋ-ಎನ್ ಎಸ್‌ಯುವಿಯ ವಿತರಣೆಯನ್ನು ಇತ್ತೀಚೆಗೆ ಪ್ರಾರಂಭಿಸಿದೆ.

ಬಹುಬೇಡಿಕೆಯ ಸ್ಕಾರ್ಪಿಯೊ-ಎನ್ ಎಸ್‌ಯುವಿಯ ವಿತರಣೆ ಪಡೆದ ಆನಂದ್ ಮಹೀಂದ್ರಾ: ಒಳ್ಳೆ ಹೆಸರು ಸೂಚಿಸಲು ಮನವಿ

ಮಹೀಂದ್ರಾ ಸಮೂಹದ ಅಧ್ಯಕ್ಷರಾದ ಆನಂದ್ ಮಹೀಂದ್ರಾ ಅವರು ಹೊಸ ಸ್ಕಾರ್ಪಿಯೋ-ಎನ್ ಎಸ್‌ಯುವಿಯ ವಿತರಣೆಯನ್ನು ಪಡೆದುಕೊಂಡಿದ್ದಾರೆ. ಅವರು ಕೆಂಪು ಬಣ್ಣದ ಎಸ್‍ಯುವಿಯನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಅವರು ಹೊಸ ಸ್ಕಾರ್ಪಿಯೋ-ಎನ್ ಎಸ್‌ಯುವಿಯ ವಿತರಣೆ ಪಡೆಯುವ ಚಿತ್ರಗಳನ್ನು ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದಾರೆ ಮತ್ತು ಟ್ವಿಟರ್ ಬಳಕೆದಾರರಿಗೆ ತಮ್ಮ ಸ್ಕಾರ್ಪಿಯೋ-ಎನ್‌ಗೆ ಸೂಕ್ತವಾದ ಹೆಸರನ್ನು ಸೂಚಿಸಲು ಆಹ್ವಾನಿಸಿದ್ದಾರೆ.

ಬಹುಬೇಡಿಕೆಯ ಸ್ಕಾರ್ಪಿಯೊ-ಎನ್ ಎಸ್‌ಯುವಿಯ ವಿತರಣೆ ಪಡೆದ ಆನಂದ್ ಮಹೀಂದ್ರಾ: ಒಳ್ಳೆ ಹೆಸರು ಸೂಚಿಸಲು ಮನವಿ

ಆನಂದ್ ಮಹೀಂದ್ರಾ ಅವರು ಹೊಸ ಸ್ಕಾರ್ಪಿಯೋ-ಎನ್ ಎಸ್‌ಯುವಿಯ ಯಾವ ವೆರಿಯೆಂಟ್ ಅನ್ನು ಆಯ್ಕೆ ಮಾಡಿದ್ದಾರ ಎಂಬ ಮಾಹಿತಿಯನ್ನು ಬಹಿರಂಗವಾಗಿಲ್ಲ. ಫೋರ್ ವೀಲ್ ಡ್ರೈವ್ ಲೇಔಟ್‌ನೊಂದಿಗೆ ಸಂಪೂರ್ಣ-ಲೋಡ್ ಮಾಡಲಾದ ಟಾಪ್-ಎಂಡ್ ಡೀಸೆಲ್ ಆಟೋಮ್ಯಾಟಿಕ್ ಟ್ರಿಮ್ ಆಗಿರಬಹುದು ಎಂದು ನಿರೀಕ್ಷಿಸುತ್ತೇವೆ.

ಬಹುಬೇಡಿಕೆಯ ಸ್ಕಾರ್ಪಿಯೊ-ಎನ್ ಎಸ್‌ಯುವಿಯ ವಿತರಣೆ ಪಡೆದ ಆನಂದ್ ಮಹೀಂದ್ರಾ: ಒಳ್ಳೆ ಹೆಸರು ಸೂಚಿಸಲು ಮನವಿ

ಸ್ಕಾರ್ಪಿಯೊ ಟರ್ಬೊ ಪೆಟ್ರೋಲ್ ಎಂಜಿನ್‌ನೊಂದಿಗೆ ಸಹ ಲಭ್ಯವಿದೆ. ಫೋರ್ ವೀಲ್ ಡ್ರೈವ್ ವಿನ್ಯಾಸವು ಡೀಸೆಲ್ ಎಂಜಿನ್‌ನೊಂದಿಗೆ ಮಾತ್ರ ಲಭ್ಯವಿದೆ, ಆನಂದ್ ಮಹೀಂದ್ರಾ ಅವರ ಕಾರು ಸಂಗ್ರಹದಲ್ಲಿ ಟಾಪ್-ಆಫ್-ಲೈನ್ ಅಲ್ಟುರಾಸ್ ಐಷಾರಾಮಿ ಎಸ್‍ಯುವಿ ಮತ್ತು ಟಿಯುವಿ300 ಪ್ಲಸ್ ಮಲ್ಟಿ-ಯುಟಿಲಿಟಿ ವೆಹಿಕಲ್ ಸೇರಿವೆ.

ಬಹುಬೇಡಿಕೆಯ ಸ್ಕಾರ್ಪಿಯೊ-ಎನ್ ಎಸ್‌ಯುವಿಯ ವಿತರಣೆ ಪಡೆದ ಆನಂದ್ ಮಹೀಂದ್ರಾ: ಒಳ್ಳೆ ಹೆಸರು ಸೂಚಿಸಲು ಮನವಿ

ಮಹೀಂದ್ರಾ ಸಮೂಹದ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು ಮಹೀಂದ್ರ ಬೊಲೆರೊ ಇನ್‌ವೇಡರ್ ಲೈಫ್‌ಸ್ಟೈಲ್ ಎಸ್‌ಯುವಿ, ಟಿಯುವಿ300 ಸಬ್-4 ಮೀಟರ್ ಎಸ್‌ಯುವಿ ಮತ್ತು ಮೊದಲ ತಲೆಮಾರಿನ ಸ್ಕಾರ್ಪಿಯೊ ಎಸ್‌ಯುವಿಯನ್ನು ಸಹ ಹೊಂದಿದ್ದಾರೆ.

ಬಹುಬೇಡಿಕೆಯ ಸ್ಕಾರ್ಪಿಯೊ-ಎನ್ ಎಸ್‌ಯುವಿಯ ವಿತರಣೆ ಪಡೆದ ಆನಂದ್ ಮಹೀಂದ್ರಾ: ಒಳ್ಳೆ ಹೆಸರು ಸೂಚಿಸಲು ಮನವಿ

ಈ ಹೊಸ ಮಹೀಂದ್ರಾ ಸ್ಕಾರ್ಪಿಯೋ-ಎನ್ ಮಾದರಿಗೆ ಈಗಾಗಲೇ 1 ಲಕ್ಷಕ್ಕೂ ಅಧಿಕ ಗ್ರಾಹಕರಿಂದ ಬುಕಿಂಗ್ ದಾಖಲಾಗಿದೆ. ಈ ಹೊಸ ಎಸ್‍ಯುವಿ ಜೆಡ್2, ಜೆಡ್4, ಜೆಡ್6, ಜೆಡ್8 ಮತ್ತು ಜೆಡ್ಎಲ್ ವೆರಿಯೆಂಟ್‌ಗಳೊಂದಿಗೆ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.11.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 21.45 ಲಕ್ಷ ಬೆಲೆ ಹೊಂದಿದೆ.

ಬಹುಬೇಡಿಕೆಯ ಸ್ಕಾರ್ಪಿಯೊ-ಎನ್ ಎಸ್‌ಯುವಿಯ ವಿತರಣೆ ಪಡೆದ ಆನಂದ್ ಮಹೀಂದ್ರಾ: ಒಳ್ಳೆ ಹೆಸರು ಸೂಚಿಸಲು ಮನವಿ

ಈ ಸ್ಕಾರ್ಪಿಯೋ-ಎನ್ ಮಾದರಿಯು 6 ಸೀಟರ್ ಮತ್ತು 7 ಸೀಟರ್ ಸೌಲಭ್ಯದೊಂದಿಗೆ 2.2 ಲೀಟರ್ ಡೀಸೆಲ್ ಮತ್ತು 2.0 ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿದ್ದು, ಎರಡು ಮಾದರಿಗಳಲ್ಲೂ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಆವೃತ್ತಿಗಳು ಖರೀದಿಗೆ ಲಭ್ಯವಿವೆ.

ಬಹುಬೇಡಿಕೆಯ ಸ್ಕಾರ್ಪಿಯೊ-ಎನ್ ಎಸ್‌ಯುವಿಯ ವಿತರಣೆ ಪಡೆದ ಆನಂದ್ ಮಹೀಂದ್ರಾ: ಒಳ್ಳೆ ಹೆಸರು ಸೂಚಿಸಲು ಮನವಿ

2.0-ಲೀಟರ್ ಪೆಟ್ರೋಲ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ಮತ್ತು 2.2 ಲೀಟರ್ ಡೀಸೆಲ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ ಎರಡು ರೀತಿಯ ಪರ್ಫಾಮೆನ್ಸ್ ಆಯ್ಕೆಗಳನ್ನು ಹೊಂದಿದೆ.

ಬಹುಬೇಡಿಕೆಯ ಸ್ಕಾರ್ಪಿಯೊ-ಎನ್ ಎಸ್‌ಯುವಿಯ ವಿತರಣೆ ಪಡೆದ ಆನಂದ್ ಮಹೀಂದ್ರಾ: ಒಳ್ಳೆ ಹೆಸರು ಸೂಚಿಸಲು ಮನವಿ

ಪೆಟ್ರೋಲ್ ಮ್ಯಾನುವಲ್ ಮಾದರಿಯು 203 ಬಿಹೆಚ್‍ಪಿ ಮತ್ತು 370 ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದಲ್ಲಿ ಆಟೋಮ್ಯಾಟಿಕ್ ಮಾದರಿಯು 203 ಬಿಹೆಚ್‍ಪಿ ಮತ್ತು 380 ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ. ಹಾಗೆಯೇ ಡೀಸೆಲ್ ಆರಂಭಿಕ ಮಾದರಿಯು ಮ್ಯಾನುವಲ್ ಆಯ್ಕೆಯೊಂದಿಗೆ 132 ಬಿಎಚ್‌ಪಿ ಮತ್ತು 300 ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

ಬಹುಬೇಡಿಕೆಯ ಸ್ಕಾರ್ಪಿಯೊ-ಎನ್ ಎಸ್‌ಯುವಿಯ ವಿತರಣೆ ಪಡೆದ ಆನಂದ್ ಮಹೀಂದ್ರಾ: ಒಳ್ಳೆ ಹೆಸರು ಸೂಚಿಸಲು ಮನವಿ

ಇನ್ನು ಹೈ ಎಂಡ್ ಮಾದರಿಯು ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಮಾದರಿಯೊಂದಿಗೆ 175 ಬಿಹೆಚ್‍ಪಿ ಪವರ್ ಮತ್ತು 370 ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿವೆ. ಇದರೊಂದಿಗೆ ಮಹೀಂದ್ರಾ ಕಂಪನಿಯು ಹೊಸ ಕಾರು ಮಾದರಿಯನ್ನು ಈ ಹಿಂದಿಗಿಂತಲೂ ಹೆಚ್ಚಿನ ಮಟ್ಟದ ತಾಂತ್ರಿಕ ಅಂಶಗಳೊಂದಿಗೆ ಅಭಿವೃದ್ದಿಗೊಳಿಸಿದ್ದು, ಕಾರಿನ ಮುಂಭಾಗದಲ್ಲಿ ಮಹೀಂದ್ರಾ ಸಾಂಪ್ರದಾಯಿಕ ಸಿಕ್ಸ್ ಸ್ಲಾಟ್ ಫ್ರಂಟ್ ಗ್ರಿಲ್ ಜೊತೆಗೆ ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್, ಸ್ಕಾರ್ಪಿಯನ್ ಟೈಲ್ ಶೇಪ್ ಹೊಂದಿರುವ ಡಿಆರ್‌ಎಲ್ಎಸ್ ಮತ್ತು ಫಾಗ್ ಲ್ಯಾಂಪ್ ನೀಡಲಾಗಿದೆ.

ಬಹುಬೇಡಿಕೆಯ ಸ್ಕಾರ್ಪಿಯೊ-ಎನ್ ಎಸ್‌ಯುವಿಯ ವಿತರಣೆ ಪಡೆದ ಆನಂದ್ ಮಹೀಂದ್ರಾ: ಒಳ್ಳೆ ಹೆಸರು ಸೂಚಿಸಲು ಮನವಿ

ಈ ಹೊಸ ಮಹೀಂದ್ರಾ ಸ್ಕಾರ್ಪಿಯೋ-ಎನ್ ಮಾದರಿಯಲ್ಲಿ ಸಿ ಮತ್ತು ಡಿ-ಪಿಲ್ಲರ್ ಪ್ರದೇಶಗಳಲ್ಲಿ ವಿಂಡೋ ಕ್ರೋಮ್ ಫ್ರೇಮ್‌ನಲ್ಲಿ ಸ್ಕಾರ್ಪಿಯನ್ ಸ್ಟಿಂಗ್ ಅಂಶವನ್ನು ಸಹ ಹೊಂದಿದೆ. ಜೊತೆಗೆ ಹೊಸ ಸ್ಕಾರ್ಪಿಯೋ-ಎನ್‌ನಲ್ಲಿ ಹೊಸ ಡ್ಯುಯಲ್-ಟೋನ್ ಅಲಾಯ್ ವ್ಹೀಲ್ 18 ಇಂಚಿನ ಚಕ್ರಗಳನ್ನು ನೀಡಲಾಗಿದ್ದು, ಲಂಬವಾಗಿ ಜೋಡಿಸಲಾದ ಎಲ್ಇಡಿ ಟೈಲ್‌ಲೈಟ್‌ಗಳು ಮತ್ತು ಸ್ಪಾಯ್ಲರ್ ಅನ್ನು ಹೊಂದಿದೆ.

ಬಹುಬೇಡಿಕೆಯ ಸ್ಕಾರ್ಪಿಯೊ-ಎನ್ ಎಸ್‌ಯುವಿಯ ವಿತರಣೆ ಪಡೆದ ಆನಂದ್ ಮಹೀಂದ್ರಾ: ಒಳ್ಳೆ ಹೆಸರು ಸೂಚಿಸಲು ಮನವಿ

ಸ್ಕಾರ್ಪಿಯೋ-ಎನ್ ಮಧ್ಯಂತರ ವೆರಿಯೆಂಟ್‌ ನಂತರದಲ್ಲಿ ಲಭ್ಯವಾಗುವಂತೆ ಸನ್‌ರೂಫ್, ಎಲೆಕ್ಟ್ರಿಕಲ್ ಫೋಲ್ಡಿಂಗ್ ರಿಯರ್ ವ್ಯೂ ಮಿರರ್‌ಗಳು ಮತ್ತು ಶಾರ್ಕ್-ಫಿನ್ ಆಂಟೆನಾವನ್ನು ಸಹ ಒಳಗೊಂಡಿದ್ದು, ಹೊಸ ಕಾರಿನಲ್ಲಿ ಹೊರಭಾಗದಂತೆ ಒಳಭಾಗದಲ್ಲೂ ಸಾಕಷ್ಟು ಬದಲಾವಣೆ ತರಲಾಗಿದೆ. ಇನ್ನು ಡ್ಯುಯಲ್-ಟೋನ್ ಡ್ಯಾಶ್‌ಬೋರ್ಡ್ ಮತ್ತು ಮೆಟಲ್-ಫಿನಿಶ್ಡ್ ಡ್ಯುಯಲ್ ರೈಲ್‌ಗಳೊಂದಿಗೆ ಆಕರ್ಷಕವಾದ ಸೆಂಟರ್ ಕನ್ಸೋಲ್‌ ಗಮನಸೆಳೆಯಲಿದ್ದು, ರಿಚ್ ಕಾಫಿ ಬ್ಲ್ಯಾಕ್ ಲೆದರ್ ಆಸನಗಳು, 6 ಹಂತಗಳಲ್ಲಿ ಹೊಂದಾಣಿಕೆ ಮಾಡಬಹುದಾದ ಡ್ರೈವರ್ ಸೀಟ್ ಎರಡನೇ ಸಾಲಿನಲ್ಲಿ ಕ್ಯಾಪ್ಟನ್ ಆಸನಗಳನ್ನು ಸಹ ಒಳಗೊಂಡಿವೆ.

ಬಹುಬೇಡಿಕೆಯ ಸ್ಕಾರ್ಪಿಯೊ-ಎನ್ ಎಸ್‌ಯುವಿಯ ವಿತರಣೆ ಪಡೆದ ಆನಂದ್ ಮಹೀಂದ್ರಾ: ಒಳ್ಳೆ ಹೆಸರು ಸೂಚಿಸಲು ಮನವಿ

ಇದರೊಂದಿಗೆ ಹೊಸ ಕಾರಿನಲ್ಲಿ 8-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, 70ಕ್ಕೂ ಹೆಚ್ಚು ಕಾರ್ ಕನೆಕ್ಟ್ ಫೀಚರ್ಸ್, ಅಂಡ್ರಾಯಿಡ್ ಆಟೋ ಮತ್ತು ಆಟೋ ಕಾರ್‌ಪ್ಲೇ, ಅಮೆಜಾನ್ ಅಲೆಕ್ಸಾ ವಾಯ್ಸ್ ಸರ್ಪೊಟ್, 3ಡಿ ಸೊನಿ ಸರೌಂಡ್ ಸೌಂಡ್ ಸಿಸ್ಟಂ ಮತ್ತು ವಾಯ್ಸ್ ಕಮಾಂಡ್ ಫೀಚರ್ಸ್ ಹೊಂದಿದೆ. ಜೊತೆಗೆ ಹೊಸ ಕಾರಿನಲ್ಲಿ ಡ್ಯುಯಲ್-ಜೋನ್ ಆಟೋಮ್ಯಾಟಿಕ್ ಹವಾಮಾನ ನಿಯಂತ್ರಣ, ಮುಂಭಾಗ ಮತ್ತು ಹಿಂಭಾಗದಲ್ಲಿ ಕ್ಯಾಮೆರಾಗಳು ಮತ್ತು ಸ್ಮಾರ್ಟ್‌ಫೋನ್‌ಗಾಗಿ ವೈರ್‌ಲೆಸ್ ಚಾರ್ಜರ್‌ನಂತಹ ವೈಶಿಷ್ಟ್ಯಗಳನ್ನು ಹೊಂದಿದೆ.

ಬಹುಬೇಡಿಕೆಯ ಸ್ಕಾರ್ಪಿಯೊ-ಎನ್ ಎಸ್‌ಯುವಿಯ ವಿತರಣೆ ಪಡೆದ ಆನಂದ್ ಮಹೀಂದ್ರಾ: ಒಳ್ಳೆ ಹೆಸರು ಸೂಚಿಸಲು ಮನವಿ

ಮಹೀಂದ್ರಾ ಸ್ಕಾರ್ಪಿಯೋ-ಎನ್ ಎಸ್‍ಯುವಿಯಲ್ಲಿ ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ಇಬಿಡಿ ಜೊತೆಗೆ ಎಬಿಎಸ್, ಇಎಸ್ಇ, ಟ್ರಾಕ್ಷನ್ ಕಂಟ್ರೋಲ್, ಹಿಲ್ ಹೋಲ್ಡ್ ಕಂಟ್ರೋಲ್, ಹಿಲ್ ಡಿಸೆಂಟ್ ಕಂಟ್ರೋಲ್, ಐಸೋಫಿಕ್ಸ್ ಆಂಕರ್ ಪಾಯಿಂಟ್‌ಗಳು ಮತ್ತು ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್ ಸೇರಿದಂತೆ ಹಲವಾರು ಫೀಚರ್ಸ್‌ಗಳಿವೆ.

Most Read Articles

Kannada
English summary
Mahindra group chairman anand mahindras takes delivery of new scorpio n suv details
Story first published: Friday, October 7, 2022, 18:00 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X