ಸಪ್ತ ಸಾಗರದಾಚೆಯೂ ಮಹೀಂದ್ರಾ ಕಾರಿಗೆ ಬೇಡಿಕೆ: ದಕ್ಷಿಣ ಆಫ್ರಿಕಾದಲ್ಲಿ ಎಕ್ಸ್‌ಯುವಿ700 ಬಿಡುಗಡೆ

ಭಾರತದ ಜನಪ್ರಿಯ ಕಾರು ತಯಾರಕ ಕಂಪನಿಯಾದ ಮಹೀಂದ್ರಾ ತನ್ನ ಹೊಸ ಎಕ್ಸ್‌ಯುವಿ700 ಎಸ್‍ಯುವಿಯನ್ನು ಇದೀಗ ದಕ್ಷಿಣ ಆಫ್ರಿಕಾದ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ.

ಮಹೀಂದ್ರಾ ಎಕ್ಸ್‌ಯುವಿ700 ಎಸ್‍ಯುವಿಯ ಬೆಲೆಯು 4,74,999 ಸೌತ್ ಆಫ್ರಿಕನ್ ರಾಂಡ್ (ಅಂದಾಜು ರೂ 22.48 ಲಕ್ಷ) ಆರಂಭಿಕ ಬೆಲೆಯಲ್ಲಿ ಲಭ್ಯವಿದೆ, ವಿದೇಶದಲ್ಲಿ ಪೆಟ್ರೋಲ್ ಪವರ್‌ಟ್ರೇನ್‌ನೊಂದಿಗೆ ಮಾತ್ರ ನೀಡಲಾಗುತ್ತದೆ. ಭಾರತದಲ್ಲಿ ಮಹೀಂದ್ರಾ ಎಕ್ಸ್‌ಯುವಿ700 ಎಸ್‍ಯುವಿಯಯನ್ನು ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್‌ಗಳೊಂದಿಗೆ ನೀಡಲಾಗುತ್ತದೆ.

ದಕ್ಷಿಣ ಆಫ್ರಿಕಾದಲ್ಲಿ ಎಕ್ಸ್‌ಯುವಿ700 ಬಿಡುಗಡೆ

ದಕ್ಷಿಣ ಆಫ್ರಿಕಾದ ಮಾರುಕಟ್ಟೆಯಲ್ಲಿ ಮಹೀಂದ್ರಾ ಎಕ್ಸ್‌ಯುವಿ700 ಎಸ್‍ಯುವಿಯು ಕೇವಲ 2.0-ಲೀಟರ್ ಗ್ಯಾಸೋಲಿನ್ ಎಂಜಿನ್‌ನಿಂದ ಚಾಲಿತವಾಗಿದ್ದು, ಈ ಎಂಜಿನ್ 197 ಬಿಹೆಚ್‍ಪಿ ಪವರ್ ಮತ್ತು 380 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಉತ್ಪಾದಿಸಲು ಟ್ಯೂನ್ ಮಾಡಲಾಗಿದೆ. ಈ ಎಂಜಿನ್ ನೊಂದಿಗೆ 6-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ. ಸದ್ಯಕ್ಕೆ ಯಾವುದೇ ಮ್ಯಾನುವಲ್ ಗೇರ್‌ಬಾಕ್ಸ್ ಅನ್ನು ನೀಡಿಲ್ಲ.

ರೂಪಾಂತರಗಳಿಗೆ ಸಂಬಂಧಿಸಿದಂತೆ, XUV700 AX5, AX7 ಮತ್ತು AX7L ರೂಪಾಂತರಗಳಲ್ಲಿ ಲಭ್ಯವಿದೆ. ಈ ಮಹೀಂದ್ರಾ ಎಕ್ಸ್‌ಯುವಿ700 ಎಸ್‍ಯುವಿಯಲ್ಲಿ ಫ್ರಂಟ್ ಫಾಸಿಯಾದೊಂದಿಗೆ ಸಂಯೋಜನೆಗೊಂಡಿರುವ ಎಲ್ಇಡಿ ಹೆಡ್‌ಲ್ಯಾಂಪ್ಸ್, ಸಿ ಆಕಾರದಲ್ಲಿರುವ ಎಲ್ಇಡಿ ಡಿಆರ್‌ಎಲ್ಎಸ್, ಸಿಲ್ವರ್ ಕೋಟಿಂಗ್ ಹೊಂದಿರುವ ಫ್ಲಕ್ಸ್ ಸ್ಕೀಡ್ ಪ್ಲೇಟ್ ಮತ್ತು 18-ಇಂಚಿನ ಡ್ಯುಯಲ್ ಟೋನ್ ಮಲ್ಟಿ ಸ್ಪೋಕ್ ಅಲಾಯ್ ವ್ಹೀಲ್ ಹೊಂದಿದೆ.

ಈ ಎಸ್‍ಯುವಿಯ ಸೈಡ್ ಪ್ರೋಫೈಲ್ ಮತ್ತು ಹಿಂಬದಿಯ ವಿನ್ಯಾಸವು ಕೂಡಾ ಸಾಕಷ್ಟು ಹೊಸತನದಿಂದ ಕೂಡಿದ್ದು, ಹಿಂಬದಿಯ ಫೆಂಡರ್‌ನೊಂದಿಗೆ ಹರಡಿಕೊಂಡಿರುವ ವಿಭಜಿತ ಟೈಲ್‌ಲ್ಯಾಂಪ್, ವಿನೂತನ ವಿನ್ಯಾಸದ ಬಂಪರ್, ಫ್ಲಕ್ಸ್ ಸ್ಕೀಡ್ ಪ್ಲೇಟ್, ರೂಫ್ ರೈಲ್ಸ್, ಶಾರ್ಕ್ ಫಿನ್ ಆಂಟೆನಾ ಮತ್ತು ರೂಫ್ ಸ್ಪಾಯ್ಲರ್ ಅನ್ನು ಒಳಗೊಂಡಿದೆ. ಈ ಎಕ್ಸ್‌ಯುವಿ700 ಎಸ್‍ಯುವಿಯಲ್ಲಿ 10.25 ಇಂಚಿನ ಡಿಜಿಟಲ್ ಮತ್ತು ಇನ್ಪೋಟೈನ್‌ಮೆಂಟ್ ಟಚ್‌ಸ್ಕ್ರೀನ್ ಡಿಸ್‌ಪ್ಲೇ, ಆಂಡ್ರಾಯಿಡ್ ಆಟೋ ಮತ್ತು ಆಟೋ ಕಾರ್‌ಪ್ಲೇಯನ್ನು ಹೊಂದಿದೆ.

ಅಮೆಜಾನ್ ಅಲೆಕ್ಸಾ, 60 ತಾಂತ್ರಿಕ ಸೌಲಭ್ಯಗಳನ್ನು ನಿಯಂತ್ರಿಸಬಹುದಾದ ಕಾರ್ ಕನೆಕ್ಟ್ ಟೆಕ್ನಾಲಜಿ, ವಾಯ್ಸ್ ಅಸಿಸ್ಟೆನ್ಸ್, ಆ್ಯಂಬಿಯೆಂಟ್ ಲೈಟಿಂಗ್ಸ್, ಡ್ಯುಯಲ್ ಜೋನ್ ಕ್ಲೈಮೆಟ್ ಕಂಟ್ರೋಲ್, 2 ಮತ್ತು 3ನೇ ಸಾಲಿನಲ್ಲೂ ಎಸಿ ವೆಂಟ್ಸ್, ಪನೋರಮಿಕ್ ಸನ್‌ರೂಫ್ ಮತ್ತು ಏರ್ ಪ್ಯೂರಿಫ್ಲೈರ್ ಅನ್ನು ಹೊಂದಿದೆ. ಇದರೊಂದಿಗೆ ಅಡ್ವಾನ್ಸ್ ಡ್ರೈವರ್ ಅಸಿಸ್ಟೆಡ್ ಸಿಸ್ಟಂ ಸೌಲಭ್ಯವು ಹೊಸ ಕಾರಿನ ಪ್ರಮುಖ ಸುರಕ್ಷಾ ಸೌಲಭ್ಯವಾಗಿದ್ದು,

ಇದರ ಜೊತೆಗೆ 7-ಏರ್‌ಬ್ಯಾಗ್, ಎಬಿಎಸ್ ಜೊತೆಗೆ ಇಬಿಡಿ, ಎಲೆಕ್ಟ್ರಾನಿಕ್ ಲಾಕಿಂಗ್, ಟ್ರಾಕ್ಷನ್ ಕಂಟ್ರೋಲ್, ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಆಟೋ ಹೆಡ್‌ಲ್ಯಾಂಪ್ ಬೂಸ್ಟರ್, ವ್ಯಯಕ್ತಿಕರಣಗೊಳಿಸಿದ ಸೇಫ್ಟಿ ಅಲರ್ಟ್, ಡ್ರೈವರ್ ಡ್ರಾಸಿನೆಸ್ ಅಲರ್ಟ್ ಮತ್ತು ಲೆನ್ ಕಿಪ್ ಅಸಿಸ್ಟ್ ಹೊಂದಿದೆ. ಇದರಲ್ಲಿ 2.2-ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಆಯ್ಕೆಯಲ್ಲಿ ಲಭ್ಯವಿದೆ,

ಈ ಎಂಜಿನ್ 183 ಬಿಹೆಚ್‌ಪಿ ಪವರ್ ಮತ್ತು 420 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ಗಳೊಂದಿಗೆ 6-ಸ್ಪೀಡ್ ಎಂಟಿ ಮತ್ತು 6-ಸ್ಪೀಡ್ ಎಟಿ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ. ಈ ಎಕ್ಸ್‌ಯುವಿ700 ಮಾದರಿಗಳು ಮಹೀಂದ್ರಾ ಎಸ್‌ಯುವಿ ಪ್ರೂವಿಂಗ್ ಟ್ರ್ಯಾಕ್ ನಲ್ಲಿ ದಿನದ 24 ಗಂಟೆಗಳ ತಡೆರಹಿತ ಚಾಲನೆ ನಡೆಸಿ ಹೊಸ ದಾಖಲೆಗೆ ಕಾರಣವಾಗಿದ್ದು, ಟ್ರ್ಯಾಕ್ ಡ್ರೈವ್ ಮೂಲಕವೇ ಹೊಸ ಎಸ್‌ಯುವಿ ಸರಾಸರಿಯಾಗಿ 4 ಸಾವಿರ ಕಿ.ಮೀ ಚಲಿಸಿ ಹೊಸ ದಾಖಲೆಯನ್ನು ತಮ್ಮದಾಗಿಸಿಕೊಂಡಿದೆ

ಸ್ಪೀಡ್ ಎಂಡ್ಯೂರೆನ್ಸ್ ಚಾಲೆಂಜ್‌ನಲ್ಲಿ ಈ ಹಿಂದೆ ದಿನದ 24 ಗಂಟೆಗಳ ಚಲಿಸುವ ಮೂಲಕ 3,161 ಕಿ.ಮೀ ದಾಖಲೆ ಹೊಂದಿದ್ದ ಎಕ್ಸ್‌ಯುವಿ500 ದಾಖಲೆಯನ್ನು ಇದೀಗ ಎಕ್ಸ್‌ಯುವಿ700 ಮಾದರಿಯು ಹೊಸ ದಾಖಲೆ ನಿರ್ಮಿಸಿದೆ. ಇನ್ನು ಮಹೀಂದ್ರಾದ ಭಾರತದ ಪೋರ್ಟ್‌ಫೋಲಿಯೊವು ಮಹೀಂದೆಆ ಸ್ಕಾರ್ಪಿಯೊ-ಎನ್, ಮಹೀಂದ್ರ ಬೊಲೆರೊ, ಮಹೀಂದ್ರ ಥಾರ್ ಮತ್ತು ಮಹೀಂದ್ರಾ ಎಕ್ಸ್‌ಯುವಿ300 ನಂತಹ ಎಸ್‍ಯುವಿಗಳನ್ನು ಒಳಗೊಂಡಿದೆ.

Most Read Articles

Kannada
English summary
Mahindra launched new xuv700 suv launched in south africa
Story first published: Saturday, November 19, 2022, 12:24 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X