Just In
- 1 hr ago
ಓಲಾ S1 ಮತ್ತು S1 Pro ನಡುವೆ ಗೊಂದಲವೇ?: ಬೆಲೆ, ಡಿಸೈನ್, ಫೀಚರ್ಸ್ ಬಗೆಗಿನ ಮಾಹಿತಿ ಇಲ್ಲಿದೆ
- 1 hr ago
24.90 ಕಿ.ಮೀ ಮೈಲೇಜ್ ನೀಡುವ ಆಲ್ಟೋ ಕೆ10 ಕಾರಿನ ಟಿವಿಸಿ ಬಿಡುಗಡೆಗೊಳಿಸಿದ ಮಾರುತಿ ಸುಜುಕಿ
- 2 hrs ago
ಶೀಘ್ರದಲ್ಲಿಯೇ ಬಿಡುಗಡೆಯಾಗಲಿದೆ ನವೀಕೃತ ಮಾರುತಿ ಆಲ್ಟೊ ಕೆ10 ಸಿಎನ್ಜಿ
- 2 hrs ago
ಪೊಲೀಸರಿಗ್ಯಾಕೆ ಬುಲೆಟ್ ಪ್ರೂಫ್ ವಾಹನವಿಲ್ಲ: ಗಣ್ಯರಿಗಿರುವ ಭದ್ರತೆ ಆರಕ್ಷಕರಿಗಿಲ್ಲವೇ? ಕಾರಣ ಇಲ್ಲಿದೆ...
Don't Miss!
- Sports
ಧವನ್ ಹಾಗೂ ತೆಂಡೂಲ್ಕರ್ ನಡುವಿನ ಸಾಮ್ಯತೆ ವಿವರಿಸಿದ ಅಜಯ್ ಜಡೇಜಾ
- Movies
ನನಸಾಯ್ತು ಕಾಫಿನಾಡು ಚಂದು ಕನಸು, ಎಲ್ಲಾ ಶ್ರೇಯ ಅನುಶ್ರೀಗೆ
- News
ಕದ್ದ ಹಣದಲ್ಲಿ ವಿಮಾನದಲ್ಲಿ ಪ್ರಯಾಣಿಸುವ ಹೈಟೆಕ್ ಕಳ್ಳಿ
- Technology
ವಿಶ್ವ ಛಾಯಾಗ್ರಹಣ ದಿನ: ಈ ಸ್ಮಾರ್ಟ್ಫೋನ್ಗಳು ಫೋಟೋಗ್ರಫಿಗೆ ಸೂಕ್ತ ಎನಿಸಲಿವೆ!
- Lifestyle
ಈ ಲಕ್ಷಣಗಳು ನಿಮ್ಮಲ್ಲಿ ಕಂಡುಬಂದರೆ ಕೆಲಸಕ್ಕಂತೂ ಅಲ್ಪ ವಿರಾಮ ನೀಡಲೇಬೇಕು..!
- Travel
ಮೋಜಿನ ವಾರಾಂತ್ಯದ ಪ್ರವಾಸಕ್ಕಾಗಿ ಇಲ್ಲಿಗೆ ಭೇಟಿ ನೀಡಿ
- Education
Karnataka High Court Recruitment 2022 : 129 ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ
- Finance
ಫೋನ್ ಪೇ, ಗೂಗಲ್ ಪೇ, ಭೀಮ್ App ಬಳಕೆಗೆ ಪೇಮೆಂಟ್ ಶುಲ್ಕ?
ಬಾರ್ನ್ ಎಲೆಕ್ಟ್ರಿಕ್ ಕಾನ್ಸೆಪ್ಟ್ ಕಾರಿನ ಹೊಸ ಟೀಸರ್ ಬಿಡುಗಡೆ ಮಾಡಿದ ಮಹೀಂದ್ರಾ
ಮಹೀಂದ್ರಾ ಕಂಪನಿಯು ಇದೇ ತಿಂಗಳು 15ರಂದು ತನ್ನ ಹೊಸ ತಲೆಮಾರಿನ ವೈಶಿಷ್ಟ್ಯತೆಯ ಬಾರ್ನ್ ಎಲೆಕ್ಟ್ರಿಕ್ ಕಾನ್ಸೆಪ್ಟ್ ಕಾರುಗಳ ಅನಾವರಣಕ್ಕೆ ಸಿದ್ದವಾಗುತ್ತಿದ್ದು, ಹೊಸ ಕಾರುಗಳ ಅನಾವರಣಕ್ಕೂ ಮುನ್ನ ಕಂಪನಿಯು ಹೊಸ ಕಾರಿನ ಟೀಸರ್ ಬಿಡುಗಡೆ ಮಾಡಿದೆ.

ನ್ಯೂ ಜನರೇಷನ್ ಇವಿ ಕಾರು ಮಾದರಿಗಳ ಬಿಡುಗಡೆಗಾಗಿ ಬೃಹತ್ ಯೋಜನೆ ರೂಪಿಸಿರುವ ಮಹೀಂದ್ರಾ ಕಂಪನಿಯು ಮುಂಬರುವ ಕೆಲವೇ ವರ್ಷಗಳಲ್ಲಿ ಹಲವಾರು ಹೊಸ ಇವಿ ಕಾರು ಮಾದರಿಗಳನ್ನು ರಸ್ತೆಗಿಳಿಸುವ ಸಿದ್ದತೆಯಲ್ಲಿದ್ದು, ಹೊಸ ಇವಿ ಕಾರು ಮಾದರಿಗಳಿಗಾಗಿ ಪ್ರತ್ಯೇಕ ಪ್ಲ್ಯಾಟ್‌ಫಾರ್ಮ್ ಸಹ ಆರಂಭಿಸಿದೆ.

ಎಲೆಕ್ಟ್ರಿಕ್ ಕಾರು ವಿಭಾಗದಲ್ಲಿ ಹೊಸ ಸಂಚಲನ ಮೂಡಿಸಲು ಸಜ್ಜಾಗುತ್ತಿರುವ ಮಹೀಂದ್ರಾ ಕಂಪನಿಯು ಬಾರ್ನ್ ಇವಿ ಶ್ರೇಣಿಯಲ್ಲಿ ಒಟ್ಟು ಐದು ಹೊಸ ಇವಿ ಎಸ್‌ಯುವಿ ಕಾರುಗಳನ್ನು ಪರಿಚಯಿಸುತ್ತಿದ್ದು, ಹೊಸ ಕಾರುಗಳು ಪ್ರಸ್ತುತ ಮಾರುಕಟ್ಟೆಯಲ್ಲಿ ಬೇಡಿಕೆ ಹಲವಾರು ವೈಶಿಷ್ಟ್ಯತೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಲಿವೆ.

ಹೊಸ ಇವಿ ಕಾರು ಮಾದರಿಗಳಿಗಳನ್ನು ಪ್ರತ್ಯೇಕ ಪ್ಲ್ಯಾಟ್‌ಫಾರ್ಮ್ ಮೂಲಕ ಸುಧಾರಿತ ತಂತ್ರಜ್ಞಾನ ಸೌಲಭ್ಯಗಳೊಂದಿಗೆ ಅಭಿವೃದ್ದಿಗೊಳಿಸುತ್ತಿದ್ದು, ಐದು ಹೊಸ ಇವಿ ಕಾರಿಗಳಲ್ಲಿ ಮೊದಲ ಇವಿ ಎಸ್‌ಯುವಿ ಕಾರಿನ ಟೀಸರ್ ಹಂಚಿಕೊಂಡಿರುವ ಮಹೀಂದ್ರಾ ಕಂಪನಿಯು ಭಾರೀ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಮಹೀಂದ್ರಾ ಕಂಪನಿಯು ಬಾರ್ನ್ ಇವಿ ಪರಿಕಲ್ಪನೆ ಅಡಿ ಹೊಸ ಇವಿ ಕಾರುಗಳನ್ನು ಯುಕೆಯಲ್ಲಿರುವ ತನ್ನ ಅಡ್ವಾನ್ಸ್ಡ್ ಡಿಸೈನ್ ಸ್ಟುಡಿಯೋದಲ್ಲಿ ವಿನ್ಯಾಸಗೊಳಿಸುತ್ತಿದ್ದು, ಹೊಸ ಶ್ರೇಣಿಯ ಇವಿ ಕಾರುಗಳನ್ನು ಕಂಪನಿಯು 2025 ಮತ್ತು 2026ರ ನಡುವೆ ಪರಿಚಯಿಸಲು ನಿರ್ಧರಿಸಿದೆ.

ಮಹೀಂದ್ರಾ ಕಂಪನಿಯು ಭಾರತದಲ್ಲಿ ಹೊಸ ಬಾರ್ನ್ ಇವಿ ಮಾದರಿಗಳ ಬಿಡುಗಡೆಗೂ ಮುನ್ನ ಈಗಾಗಲೇ ಅನಾವರಣಗೊಳಿಸಲಾಗಿರುವ ಇಕೆಯುವಿ100 ಮತ್ತು ಇಎಕ್ಸ್‌ಯುವಿ300 ಕಾರುಗಳನ್ನು 2023ರ ಆರಂಭದಲ್ಲಿ ಬಿಡುಗಡೆ ಮಾಡಲಿದೆ.

ಬಾರ್ನ್ ಇವಿ ಪರಿಕಲ್ಪನೆಯಲ್ಲಿ ಅಭಿವೃದ್ದಿಗೊಳ್ಳುತ್ತಿರುವ ಇವಿ ಕಾರುಗಳು ಇಕೆಯುವಿ100 ಮತ್ತು ಇಎಕ್ಸ್‌ಯುವಿ300 ಕಾರುಗಳಿಂತಲೂ ಹೆಚ್ಚಿನ ಮಟ್ಟದ ತಂತ್ರಜ್ಞಾನ ಪ್ರೇರಣೆಯೊಂದಿಗೆ ಬಿಡುಗಡೆಯಾಗಲಿದ್ದು, ಬಾರ್ನ್ ಇವಿ ಮಾದರಿಗಳು ಎರಡನೇ ತಲೆಮಾರಿನ ಇವಿ ತಂತ್ರಜ್ಞಾನ ಸೌಲಭ್ಯಗಳನ್ನು ಪಡೆದುಕೊಳ್ಳಲಿವೆ.

ಬಾರ್ನ್ ಇವಿ ಪರಿಕಲ್ಪನೆಯ ಹೊಸ ಕಾರುಗಳು ಮಹೀಂದ್ರಾ ಕಂಪನಿಯ ಹೊಸ ಇವಿ ಕಾರುಗಳಿಗಾಗಿ ಮೀಸಲಾದ ಪ್ರತ್ಯೇಕ ಪ್ಲಾಟ್‌ಫಾರ್ಮ್ ಅನ್ನು ಆಧರಿಸಿರಲಿದ್ದು, ಹೊಸ ಇವಿ ಎಸ್‌ಯುವಿ ಕಾರು ಸಿ ಆಕಾರದ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಟೈಲ್‌ಲೈಟ್ ಮತ್ತು ಆಕರ್ಷಕ ಕ್ಯಾಬಿನ್ ಹೊಂದಿರಲಿದೆ.

ಹೊಸ ಬಾರ್ನ್ ಇವಿ ಪರಿಕಲ್ಪನೆಯ ಅಡಿಯ ಹೊಸ ಮೂರು ಇವಿ ಕಾರುಗಳು ಕಾನ್ಸೆಪ್ಟ್ ಮಾದರಿಗಳೊಂದಿಗೆ ಅನಾವರಣಗೊಳ್ಳಲಿದ್ದು, ಹೊಸ ಕಾರುಗಳ ಭಾರತದಲ್ಲಿ ಮಾತ್ರವಲ್ಲ ಪ್ರಮುಖ ಅಂತರಾಷ್ಟ್ರೀಯ ಮಾರುಕಟ್ಟೆಗಳಿಗೂ ಪ್ರವೇಶಿಸಲಿವೆ.

ಕಂಪನಿಯು ಪ್ರಸ್ತುತ ಮಾರುಕಟ್ಟೆಯಲ್ಲಿನ ಎಕ್ಸ್‌ಯುವಿ700, ಎಕ್ಸ್‌ಯುವಿ300, ಬೊಲೆರೊ, ಸ್ಕಾರ್ಪಿಯೋ, ಥಾರ್ ಮಾದರಿಯೊಂದಿಗೆ ಎಸ್‌ಯುವಿ ಮಾರಾಟದಲ್ಲಿ ಮುಂಚೂಣಿ ಹೊಂದಿದ್ದು, ಎಸ್‌ಯುವಿ ವಿಭಾಗದಲ್ಲಿ ಮತ್ತಷ್ಟು ಹೊಸ ಕಾರುಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ.

ಹೊಸ ಎಸ್‌ಯುವಿ ಕಾರುಗಳ ಪಟ್ಟಿಯಲ್ಲಿ ಸಾಮಾನ್ಯ ಮಾದರಿಗಳ ಜೊತೆಗೆ ಎಲೆಕ್ಟ್ರಿಕ್ ಮಾದರಿಗಳು ಸಹ ಮಾರುಕಟ್ಟೆ ಪ್ರವೇಶಿಸುತ್ತಿದ್ದು, ಮುಂದಿನ ಐದು ವರ್ಷಗಳ ಅವಧಿಯಲ್ಲಿ ಒಟ್ಟು 13 ಹೊಸ ಕಾರುಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ.

ಬಾರ್ನ್ ಇವಿ ಮಾದರಿಗಳ ಬಿಡುಗಡೆಗೂ ಮುನ್ನ 2020ರ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಮೊದಲ ಅನಾವರಣಗೊಂಡಿದ್ದ ಹೊಸ ಇಎಕ್ಸ್‌ಯುವಿ(eXUV300) ಕಾರನ್ನು ಮಾರುಕಟ್ಟೆಯಲ್ಲಿನ ಸನ್ನಿವೇಶವನ್ನು ಆಧರಿಸಿ ಇದೀಗ ಬಿಡುಗಡೆ ಮಾಡಲು ಮುಂದಾಗಿದ್ದು, ಹೊಸ ಕಾರು ಬಿಡುಗಡೆಗೂ ಮುನ್ನ ವಿವಿಧ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಕೈಗೊಂಡಿದೆ.

ಹೊಸ ಕಾರು ಈ ವರ್ಷಾಂತ್ಯಕ್ಕೆ ಉತ್ಪಾದನಾ ಮಾದರಿಯೊಂದಿಗೆ ಅನಾವರಣಗೊಳ್ಳಲಿದ್ದು, 2023ರ ಆರಂಭದಲ್ಲಿ ಅಧಿತೃತವಾಗಿ ಮಾರುಕಟ್ಟೆ ಪ್ರವೇಶಿಸುವುದು ಖಚಿತವಾಗಿದೆ. ಮಹೀಂದ್ರಾ ಕಂಪನಿಯು ಇಎಕ್ಸ್‌ಯುವಿ300 ಬಿಡುಗಡೆಗೂ ಮುನ್ನ ಇಕೆಯುವಿ100 ಎಲೆಕ್ಟ್ರಿಕ್ ಕಾರು ಮಾದರಿಯ ಮಾರಾಟಕ್ಕೆ ಚಾಲನೆ ನೀಡಲಿದ್ದು, ಹೊಸ ಇಎಕ್ಸ್‌ಯುವಿ300 ಮಾದರಿಯು ಪ್ರಸ್ತುತ ಮಾರುಕಟ್ಟೆಯಲ್ಲಿ ಇವಿ ಕಾರು ಮಾರಾಟದಲ್ಲಿ ಮುಂಚೂಣಿಯಲ್ಲಿ ಟಾಟಾ ನೆಕ್ಸಾನ್ ಇವಿ ಮಾದರಿಗೆ ಪೈಪೋಟಿಯಾಗಿ ಬಿಡುಗಡೆಯಾಗುತ್ತಿದೆ.

ಮಹೀಂದ್ರಾ ಕಂಪನಿಯು ಬಿಡುಗಡೆ ಮಾಡಲಿರುವ ಹೊಸ ಎಂಟು ಎಲೆಕ್ಟ್ರಿಕ್ ಕಾರುಗಳೊಂದಿಗೆ ಐದು ಸಾಮಾನ್ಯ ಕಾರು ಮಾದರಿಗಳು ಸಹ ಬಿಡುಗಡೆಯಾಗಲಿದ್ದು, ಹೊಸ ಎಲೆಕ್ಟ್ರಿಕ್ ಕಾರುಗಳು 2022ರ ಮಧ್ಯಂತರದಿಂದ ಹಂತ-ಹಂತವಾಗಿ ಮಾರುಕಟ್ಟೆ ಪ್ರವೇಶಿಸಲಿವೆ.

2022ರಿಂದ 2027ರ ತನಕ ಎಂಟು ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲಿರುವ ಮಹೀಂದ್ರಾ ಕಂಪನಿಯು ಆರಂಭಿಕವಾಗಿ ಇಕೆಯುವಿ100 ನಂತರ ಇಎಕ್ಸ್‌ಯುವಿ300 ಬಿಡುಗಡೆ ಮಾಡಲಿದ್ದು, ತದನಂತರ ಮಾರುಕಟ್ಟೆಯಲ್ಲಿನ ಇತರೆ ಕಾರುಗಳ ಮಾದರಿಗಳಲ್ಲೂ ಎಲೆಕ್ಟ್ರಿಕ್ ಆವೃತ್ತಿಗಳನ್ನು ಪರಿಚಯಿಸಲಿದೆ.

ಹೊಸ ಇಎಕ್ಸ್‌ಯುವಿ300 ಮಾದರಿಯು ಪ್ರತಿ ಚಾರ್ಜ್‌ಗೆ ಕನಿಷ್ಠ 380 ಕಿ.ಮೀ ನಿಂದ 420 ಕಿ.ಮೀ ಮೈಲೇಜ್ ಪ್ರೇರಿತ ಬ್ಯಾಟರಿ ಪ್ಯಾಕ್‌ನೊಂದಿಗೆ ಟಾಟಾ ನೆಕ್ಸಾನ್ ಇವಿ ಬೆಲೆಗೆ ಸರಿಸಮನಾಗಿ ಬಿಡುಗಡೆ ಹೊಂದಬಹುದಾಗಿದ್ದು, ಹೊಸ ಕಾರು ಎಂಜಿ ಜೆಡ್ಎಸ್ ಇವಿ ಮಾದರಿಗೂ ಸಹ ಪೈಪೋಟಿ ನೀಡಲಿದೆ.