ಹೊಸ ಸ್ಕಾರ್ಪಿಯೋ-ಎನ್ ಮಾದರಿಯಲ್ಲಿ ಪೆಟ್ರೋಲ್ ಎಂಜಿನ್ ಆಯ್ಕೆ ಖಚಿತಪಡಿಸಿದ ಮಹೀಂದ್ರಾ

ಮಹೀಂದ್ರಾ ಕಂಪನಿಯು ನ್ಯೂ ಜನರೇಷನ್ ಸ್ಕಾರ್ಪಿಯೋ-ಎನ್ ಮಾದರಿಯನ್ನು ಭಾರತದಲ್ಲಿ ಬಿಡುಗಡೆ ಮಾಡುತ್ತಿದ್ದು, ಹೊಸ ಕಾರು ಮಾದರಿಯು ಪ್ರತಿ ಸ್ಪರ್ಧಿ ಮಾದರಿಗಳಿಗೆ ಪೈಪೋಟಿಯಾಗಿ ಹಲವಾರು ವಿಶೇಷತೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿದೆ.

ಹೊಸ ಸ್ಕಾರ್ಪಿಯೋ-ಎನ್ ಮಾದರಿಯಲ್ಲಿ ಪೆಟ್ರೋಲ್ ಎಂಜಿನ್ ಆಯ್ಕೆ ಖಚಿತಪಡಿಸಿದ ಮಹೀಂದ್ರಾ

ಹೊಸ ಸ್ಕಾರ್ಪಿಯೋ-ಎನ್ ಕಾರು ಮಾದರಿಯನ್ನು ಮಹೀಂದ್ರಾ ಕಂಪನಿಯು ಇದೇ ತಿಂಗಳು 27ರಂದು ಮಹತ್ವದ ಬದಲಾವಣೆಯೊಂದಿಗೆ ಬಿಡುಗಡೆಗೊಳಿಸುತ್ತಿದ್ದು, ಸಂಪೂರ್ಣವಾಗಿ ಹೊಸ ಚಾಸಿಸ್‌ನೊಂದಿಗೆ ಸುಧಾರಿತ ವೈಶಿಷ್ಟ್ಯತೆಗಳು ಮತ್ತು ಹೊಸ ವಿವಿಧ ಎಂಜಿನ್ ಆಯ್ಕೆ ಹೊಂದಿರಲಿದೆ.

ಹೊಸ ಸ್ಕಾರ್ಪಿಯೋ-ಎನ್ ಮಾದರಿಯಲ್ಲಿ ಪೆಟ್ರೋಲ್ ಎಂಜಿನ್ ಆಯ್ಕೆ ಖಚಿತಪಡಿಸಿದ ಮಹೀಂದ್ರಾ

ಹೊಸ ತಲೆಮಾರಿನ ಕಾರನ್ನು ಮಹೀಂದ್ರಾ ಸ್ಕಾರ್ಪಿಯೋ-ಎನ್ ಹೆಸರಿನಲ್ಲಿ ಬಿಡುಗಡೆ ಮಾಡುತ್ತಿದ್ದು, ಹೊಸ ಕಾರು ಮಾದರಿಯು ಬಿಡುಗಡೆಯೊಂದಿಗೆ ಪ್ರಸ್ತುತ ಮಾರುಕಟ್ಟೆಯಲ್ಲಿರುವ ಸ್ಕಾರ್ಪಿಯೋ ಮಾದರಿಯನ್ನು ಕಂಪನಿಯು ಸ್ಕಾರ್ಪಿಯೋ-ಕ್ಲಾಸಿಕ್ ಹೆಸರಿನಲ್ಲಿ ಮಾರಾಟ ಮುಂದುವರಿಸಲಿದೆ.

ಹೊಸ ಸ್ಕಾರ್ಪಿಯೋ-ಎನ್ ಮಾದರಿಯಲ್ಲಿ ಪೆಟ್ರೋಲ್ ಎಂಜಿನ್ ಆಯ್ಕೆ ಖಚಿತಪಡಿಸಿದ ಮಹೀಂದ್ರಾ

ಮಹೀಂದ್ರಾ ಕಂಪನಿಯು ಸ್ಕಾರ್ಪಿಯೋ-ಎನ್ ಕಾರಿನಲ್ಲಿ ನ್ಯೂ ಜನರೇಷನ್ ಮಾದರಿಗಳಾದ ಥಾರ್ ಮತ್ತು ಎಕ್ಸ್‌ಯುವಿ700 ಮತ್ತು ಥಾರ್ ಮಾದರಿಯಲ್ಲಿರುವಂತೆ 2.0 ಲೀಟರ್ ಪೆಟ್ರೋಲ್ ಎಂಜಿನ್ ಮತ್ತು 2.2 ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ನೀಡಲಿದ್ದು, ಹೊಸ ಕಾರಿನಲ್ಲಿ ಪೆಟ್ರೋಲ್ ಎಂಜಿನ್ ಆಯ್ಕೆಯ ಕುರಿತಂತೆ ಕಂಪನಿಯು ಸಾಮಾಜಿಕ ಜಾಲತಾಣಗಳಲ್ಲಿ ಗ್ರಾಹಕರೊಬ್ಬರ ಹೊಸ ಕಾರಿನ ಕುರಿತಾದ ಪ್ರಶ್ನೆಗೆ ಉತ್ತರಿಸುವಾಗ ಹೊಸ ಎಂಜಿನ್ ಬಗೆಗೆ ಖಚಿತಪಡಿಸಿದೆ.

ಹೊಸ ಸ್ಕಾರ್ಪಿಯೋ-ಎನ್ ಮಾದರಿಯಲ್ಲಿ ಪೆಟ್ರೋಲ್ ಎಂಜಿನ್ ಆಯ್ಕೆ ಖಚಿತಪಡಿಸಿದ ಮಹೀಂದ್ರಾ

ಹೊಸ ಕಾರು ಮಾದರಿಯು ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಖರೀದೆಗೆ ಲಭ್ಯವಾಗಲಿದ್ದರೆ ಪ್ರಸ್ತುತ ಮಾರುಕಟ್ಟೆಯಲ್ಲಿರುವ ಮಾದರಿಯು ಈ ಹಿಂದಿನಂತೆಯೇ 2.2-ಲೀಟರ್ ಡೀಸೆಲ್ ಎಂಜಿನ್‌ ಆಯ್ಕೆಯೊಂದಿಗೆ ಖರೀದಿಗೆ ಲಭ್ಯವಿರಲಿದೆ.

ಹೊಸ ಸ್ಕಾರ್ಪಿಯೋ-ಎನ್ ಮಾದರಿಯಲ್ಲಿ ಪೆಟ್ರೋಲ್ ಎಂಜಿನ್ ಆಯ್ಕೆ ಖಚಿತಪಡಿಸಿದ ಮಹೀಂದ್ರಾ

ಹೊಸ ಕಾರು ಮಾದರಿಲ್ಲಿ ಅಳವಡಿಸಲಾಗುತ್ತಿರುವ 2.0 ಲೀಟರ್ ಪೆಟ್ರೋಲ್ ಎಂಜಿನ್ ಮತ್ತು 2.2 ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಕಂಪನಿಯು ಎಕ್ಸ್‌ಯುವಿ700 ಮಾದರಿಗಿಂತಲೂ ತುಸು ಡಿಟ್ಯೂನ್ ಮಾಡುವ ಮೂಲಕ ಜೋಡಣೆ ಮಾಡಲಾಗುತ್ತಿದ್ದು, ಹೊಸ ಕಾರು ಮಾದರಿಯು 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಟಾರ್ಕ್ ಕನ್ವರ್ಟಕ್ ಆಟೋಮ್ಯಾಟಿಕ್ ಮಾದರಿಗಳೊಂದಿಗೆ ಬಿಡುಗಡೆಯಾಗಲಿದೆ.

ಹೊಸ ಸ್ಕಾರ್ಪಿಯೋ-ಎನ್ ಮಾದರಿಯಲ್ಲಿ ಪೆಟ್ರೋಲ್ ಎಂಜಿನ್ ಆಯ್ಕೆ ಖಚಿತಪಡಿಸಿದ ಮಹೀಂದ್ರಾ

ಇದಲ್ಲದೇ ಹೊಸ ಮಹೀಂದ್ರಾ ಸ್ಕಾರ್ಪಿಯೊ-ಎನ್ ಪೆಟ್ರೋಲ್ ಮತ್ತು ಡೀಸೆಲ್ ಹೈ ಎಂಡ್ ರೂಪಾಂತರಗಳು ಗ್ರಾಹಕರ ಬೇಡಿಕೆಯೆಂತೆ 4X2 ಮತ್ತು 4X4 ಆಯ್ಕೆಗಳೊಂದಿಗೆ ಲಭ್ಯವಿರಲಿದ್ದು, ಹೊಸ ಕಾರಿನಲ್ಲಿ ಕಂಪನಿಯು ಇನ್ನು ಹಲವಾರು ಹೊಸ ಸೌಲಭ್ಯಗಳನ್ನು ನೀಡಿದೆ.

ಹೊಸ ಸ್ಕಾರ್ಪಿಯೋ-ಎನ್ ಮಾದರಿಯಲ್ಲಿ ಪೆಟ್ರೋಲ್ ಎಂಜಿನ್ ಆಯ್ಕೆ ಖಚಿತಪಡಿಸಿದ ಮಹೀಂದ್ರಾ

ಹಾಗೆಯೇ ಹೊಸ ಕಾರು ಪ್ರಮುಖ ಪ್ರೀಮಿಯಂ ಫೀಚರ್ಸ್‌ಗಳಿಂದಾಗಿ ಮತ್ತಷ್ಟು ಬಲಿಷ್ಠ ವಿನ್ಯಾಸ ಹೊಂದಿದ್ದು, ಇದು 4,662 ಎಂಎಂ ಉದ್ದಳತೆ ಮತ್ತು 2,750 ಎಂಎಂ ವಿಸ್ತರಿತ ವೀಲ್ಹ್ ಬೆಸ್ ಮೂಲಕ ಅರಾಮದಾಯಕ ಕ್ಯಾಬಿನ್ ಸ್ಪೆಸ್ ಹೊಂದಿದೆ. ಹೊಸ ಕಾರು ಪ್ರಸ್ತುತ ಮಾದರಿಗಿಂತಲೂ ಹೆಚ್ಚುವರಿಯಾಗಿ 206 ಎಂಎಂ ಉದ್ದ ಮತ್ತು 97 ಎಂಎಂ ಅಗಲ ಹೊಂದಿದ್ದರೆ 125 ಎಂಎಂ ನಷ್ಟು ಪ್ರಸ್ತುತ ಮಾದರಿಗಿಂತಲೂ ಕಡಿಮೆ ಎತ್ತರ ಹೊಂದಿದೆ.

ಹೊಸ ಸ್ಕಾರ್ಪಿಯೋ-ಎನ್ ಮಾದರಿಯಲ್ಲಿ ಪೆಟ್ರೋಲ್ ಎಂಜಿನ್ ಆಯ್ಕೆ ಖಚಿತಪಡಿಸಿದ ಮಹೀಂದ್ರಾ

ವ್ಹೀಲ್‌ಬೇಸ್ ಸೌಲಭ್ಯವು ಪ್ರಸ್ತುತ ಮಾದರಿಗಿಂತಲೂ 70 ಎಂಂ ಉದ್ದವಾಗಿರುವುದರಿಂದ ಇದು ಖಂಡಿತವಾಗಿಯೂ ಹೆಚ್ಚಿನ ವೇಗದ ಸ್ಥಿರತೆಯನ್ನು ಸುಧಾರಿಸಲು ಸಹಾಯ ಮಾಡವುದಲ್ಲದೆ 2ನೇ ಸಾಲಿನಲ್ಲಿ ಕೂರುವ ಪ್ರಯಾಣಿಕರ ಮೊಣಕಾಲುಗಳಿಗೆ ಹೆಚ್ಚಿನ ಸ್ಥಳಾವಕಾಶ ಒದಗಿಸುತ್ತದೆ.

ಹೊಸ ಸ್ಕಾರ್ಪಿಯೋ-ಎನ್ ಮಾದರಿಯಲ್ಲಿ ಪೆಟ್ರೋಲ್ ಎಂಜಿನ್ ಆಯ್ಕೆ ಖಚಿತಪಡಿಸಿದ ಮಹೀಂದ್ರಾ

ಜೊತೆಗೆ ಹೊಸ ಕಾರು ಎಕ್ಸ್‌ಯುವಿ700 ಮಾದರಿಗಿಂತಲೂ ಹೆಚ್ಚುವರಿಯಾಗಿ 27 ಎಂಎಂ ಅಗಲ ಮತ್ತು 115 ಎಂಎಂ ಎತ್ತರವನ್ನು ಹೊಂದಿದ್ದು, ಇದು ನಿಕಟ ಪ್ರತಿಸ್ಪರ್ಧಿ ಟಾಟಾ ಸಫಾರಿ ಎಸ್‌ಯುವಿ ಮಾದರಿಗಿಂತಲೂ ಹೆಚ್ಚುವರಿ 23 ಎಂಎಂ ಅಗಲ ಮತ್ತು 84 ಎಂಎಂ ಎತ್ತರ ಹೊಂದಿದೆ.

ಹೊಸ ಸ್ಕಾರ್ಪಿಯೋ-ಎನ್ ಮಾದರಿಯಲ್ಲಿ ಪೆಟ್ರೋಲ್ ಎಂಜಿನ್ ಆಯ್ಕೆ ಖಚಿತಪಡಿಸಿದ ಮಹೀಂದ್ರಾ

ಹೊಸ ಕಾರಿನಲ್ಲಿ ಈ ಬಾರಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳ ಜೊತೆಗೆ ಹೆಚ್ಚಿನ ಮಟ್ಟದ ಸುರಕ್ಷಾ ಸೌಲಭ್ಯಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗುತ್ತಿದ್ದು, ಆರಾಮದಾಯಕವಾದ ಆಸನ ಸೌಲಭ್ಯದೊಂದಿಗೆ ಆರ್ಟಿಫಿಶಲ್ ಇಂಟೆಜೆನ್ಸ್ ಹೊಂದಿರುವ ಅಂಡ್ರಾಯಿಡ್ ಆಟೋ ಮತ್ತು ಆಟೋ ಕಾರ್ ಪ್ಲೇ ಸರ್ಪೊಟ್ ಮಾಡುವ ಇನ್ಪೋಟೈನ್‌ಮೆಂಟ್ ಸಿಸ್ಟಂ, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್, ಎಲೆಕ್ಟ್ರಿಕ್ ಸನ್‌ರೂಫ್ ಮತ್ತು ವಿವಿಧ ಡ್ರೈವ್ ಮೋಡ್ ಕಂಟ್ರೋಲ್ ಸೇರಿದಂತೆ ಹಲವು ಹೊಸ ಸೌಲಭ್ಯಗಳಿವೆ.

ಹೊಸ ಸ್ಕಾರ್ಪಿಯೋ-ಎನ್ ಮಾದರಿಯಲ್ಲಿ ಪೆಟ್ರೋಲ್ ಎಂಜಿನ್ ಆಯ್ಕೆ ಖಚಿತಪಡಿಸಿದ ಮಹೀಂದ್ರಾ

ನ್ಯೂ ಜನರೇಷನ್ ಮಾದರಿಯ ಮತ್ತೊಂದು ವಿಶೇಷವೆಂದರೆ ಬ್ರಾಂಡ್ ನ್ಯೂ ಲೋಗೊ ಹೊಂದಿದ್ದು, ಸ್ಟೀರಿಂಗ್ ಮೌಂಟೆಡ್ ಮೇಲೆ ಇರಿಸಲಾಗಿರುವ ಲೋಗೊ ಸಾಕಷ್ಟು ಆಕರ್ಷಕವಾಗಿದೆ. ಹಾಗೆಯೇ ಹೊಸ ಕಾರಿನಲ್ಲಿ ಮಲ್ಟಿ ಏರ್‌ಬ್ಯಾಗ್, ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ರಿಯರ್ ಪಾರ್ಕಿಂಗ್ ಕ್ಯಾಮೆರಾ, ಆಯ್ದ ವೆರಿಯೆಂಟ್‌ಗಳಲ್ಲಿ ಟ್ವಿನ್ ಪಾಡ್ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್, ಆಲ್ ವೀಲ್ಹ್ ಡಿಸ್ಕ್ ಬ್ರೇಕ್ ಸೌಲಭ್ಯಗಳಿವೆ.

ಹೊಸ ಸ್ಕಾರ್ಪಿಯೋ-ಎನ್ ಮಾದರಿಯಲ್ಲಿ ಪೆಟ್ರೋಲ್ ಎಂಜಿನ್ ಆಯ್ಕೆ ಖಚಿತಪಡಿಸಿದ ಮಹೀಂದ್ರಾ

ಟಾಪ್ ಎಂಡ್ ಮಾದರಿಗಳಲ್ಲಿ ಹೆಚ್ಚಿನ ಸುರಕ್ಷತೆಗಾಗಿ ಕ್ರೂಸ್ ಕಂಟ್ರೋಲ್, ಸನ್‌ರೂಫ್, ಪುಶ್ ಬಟನ್ ಆನ್/ಆಫ್, ಕೀ ಲೆಸ್ ಎಂಟ್ರಿ, ರೂಫ್ ರೈಲ್ಸ್, ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್‌ಇಡಿ ಫಾಗ್ ಲ್ಯಾಂಪ್, ಎಲ್ಇಡಿ ಟರ್ನ್ ಇಂಡಿಕೇಟಕ್ ಲೈಟ್, ಸಿಲ್ವರ್ ಸ್ಕೀಡ್ ಪ್ಲೇಟ್ ಸೌಲಭ್ಯಗಳಿರಲಿವೆ.

ಹೊಸ ಸ್ಕಾರ್ಪಿಯೋ-ಎನ್ ಮಾದರಿಯಲ್ಲಿ ಪೆಟ್ರೋಲ್ ಎಂಜಿನ್ ಆಯ್ಕೆ ಖಚಿತಪಡಿಸಿದ ಮಹೀಂದ್ರಾ

ಇದರೊಂದಿಗೆ ಹೊಸ ಕಾರಿನಲ್ಲಿ 18 ಇಂಚಿನ ಅಲಾಯ್ ವೀಲ್ಹ್‌ಗಳು, ಹೊಸ ವಿನ್ಯಾಸದ ಫ್ರಂಟ್ ಅಂಡ್ ರಿಯರ್ ಬಂಪರ್ ಮತ್ತು ವಿಸ್ತರಿತ ವೀಲ್ಹ್‌ಬೆಸ್‌ನಿಂದಾಗಿ ಮೂರನೇ ಸಾಲಿನ ಪ್ರಯಾಣಿಕರಿಗೆ ಹೆಚ್ಚಿನ ಮಟ್ಟದ ಸ್ಥಳಾವಕಾಶ ನೀಡಲಿದೆ.

ಹೊಸ ಸ್ಕಾರ್ಪಿಯೋ-ಎನ್ ಮಾದರಿಯಲ್ಲಿ ಪೆಟ್ರೋಲ್ ಎಂಜಿನ್ ಆಯ್ಕೆ ಖಚಿತಪಡಿಸಿದ ಮಹೀಂದ್ರಾ

ಹೊಸ ಕಾರಿನಲ್ಲಿ ರಿಯರ್ ಎಸಿ ವೆಂಟ್ಸ್, ಲೆದರ್ ಸೀಟುಗಳು, 6 ಹಂತದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಡ್ರೈವರ್ ಸೀಟ್ ಸೇರಿದಂತೆ ಹೊಸ ಕಾರಿನಲ್ಲಿ ಹಲವಾರು ಸುರಕ್ಷಾ ಸೌಲಭ್ಯಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗುತ್ತಿದೆ.

Article Published On: Friday, June 17, 2022, 16:14 [IST]
English summary
Mahindra officially confirmed new scorpio n engine options details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+