ಕಾಯುವಿಕೆ ಅಂತ್ಯ: ಭಾರೀ ಬದಲಾವಣೆಗಳೊಂದಿಗೆ ಬಿಡುಗಡೆಗೆ ಸಿದ್ದವಾದ ನ್ಯೂ ಜನರೇಷನ್ ಮಹೀಂದ್ರಾ ಸ್ಕಾರ್ಪಿಯೋ

ಮಹೀಂದ್ರಾ(Mahindra) ಕಂಪನಿಯು ತನ್ನ ಬಹುನೀರಿಕ್ಷಿತ ನ್ಯೂ ಜನರೇಷನ್ ಸ್ಕಾರ್ಪಿಯೋ ಎಸ್‌ಯುವಿ ಉತ್ಪಾದನಾ ಆವೃತ್ತಿಯನ್ನು ಅನಾವರಣಗೊಳಿಸಿದ್ದು, ಕಂಪನಿಯು ಹೊಸ ಮಾದರಿಯನ್ನು ಮುಂದಿನ ತಿಂಗಳು ಜೂನ್ 27ರಂದು ಅಧಿಕೃತವಾಗಿ ಬಿಡುಗಡೆ ಮಾಡುವ ಮಾಹಿತಿ ಹಂಚಿಕೊಂಡಿದೆ.

ಭಾರೀ ಬದಲಾವಣೆಗಳೊಂದಿಗೆ ಬಿಡುಗಡೆಗೆ ಸಿದ್ದವಾದ ನ್ಯೂ ಜನರೇಷನ್ ಮಹೀಂದ್ರಾ ಸ್ಕಾರ್ಪಿಯೋ

ನ್ಯೂ ಜನರೇಷನ್ ಸ್ಕಾರ್ಪಿಯೋ ಮಾದರಿಯೊಂದಿಗೆ ಮಾರಾಟದಲ್ಲಿ ಮಹತ್ವದ ಬದಲಾವಣೆ ತರುತ್ತಿರುವ ಮಹೀಂದ್ರಾ ಕಂಪನಿಯು ಹೊಸ ಮಾದರಿಯ ಜೊತೆಗೆ ಸದ್ಯ ಮಾರುಕಟ್ಟೆಯಲ್ಲಿರುವ ಹಳೆಯ ತಲೆಮಾರಿನ ಸ್ಕಾರ್ಪಿಯೋ ಮಾದರಿಯ ಮಾರಾಟವನ್ನು ಸಹ ಮುಂದುವರಿಸಲಿದೆ. ಹೀಗಾಗಿ ಹೊಸ ಮತ್ತು ಹಳೆಯ ಮಾದರಿಯ ನಡುವಿನ ಹೋಲಿಕೆಯನ್ನು ಗುರುತಿಸಲು ಕಂಪನಿಯು ಹೊಸ ಮಾದರಿಯನ್ನು ಸ್ಕಾರ್ಪಿಯೋ-ಎನ್(Scorpio-N) ಎಂದು ಮತ್ತು ಪ್ರಸ್ತುತ ಮಾದರಿಯನ್ನು ಸ್ಕಾರ್ಪಿಯೋ ಕ್ಲಾಸಿಕ್(Scorpio Classic) ಎಂದು ಹೆಸರಿಸಿದೆ.

ಭಾರೀ ಬದಲಾವಣೆಗಳೊಂದಿಗೆ ಬಿಡುಗಡೆಗೆ ಸಿದ್ದವಾದ ನ್ಯೂ ಜನರೇಷನ್ ಮಹೀಂದ್ರಾ ಸ್ಕಾರ್ಪಿಯೋ

ಹೊಸ ಸ್ಕಾರ್ಪಿಯೋ-ಎನ್ ಮಾದರಿಯು ಸ್ಕಾರ್ಪಿಯೋ ಕ್ಲಾಸಿಕ್ ಮಾದರಿಗಿಂತಲೂ ಹೆಚ್ಚಿನ ವೈಶಿಷ್ಟ್ಯತೆಗಳು ಮತ್ತು ಪ್ರೀಮಿಯಂ ಸೌಲಭ್ಯಗಳೊಂದಿಗೆ ಮಾರಾಟಗೊಳ್ಳಲಿದ್ದು, ಹೊಸ ಮಾದರಿಯು ಲ್ಯಾಡರ್ ಫ್ರೇಮ್ ಚಾಸಿಸ್ ಮೇಲೆ ನಿರ್ಮಾಣಗೊಂಡಿದೆ.

ಭಾರೀ ಬದಲಾವಣೆಗಳೊಂದಿಗೆ ಬಿಡುಗಡೆಗೆ ಸಿದ್ದವಾದ ನ್ಯೂ ಜನರೇಷನ್ ಮಹೀಂದ್ರಾ ಸ್ಕಾರ್ಪಿಯೋ

ಬಾಕ್ಸಿ ಡಿಸೈನ್ ಹೊಂದಿರುವ ಹೊಸ ಸ್ಕಾರ್ಪಿಯೋ-ಎನ್ ಮಾದರಿಯು ಪ್ರಸ್ತುತ ಮಾದರಿಗಿಂತಲೂ ಹೆಚ್ಚಿನ ಒಳಾಂಗಣ ಸೌಲಭ್ಯದೊಂದಿಗೆ 7 ಸೀಟರ್ ಸೌಲಭ್ಯವನ್ನು ಹೊಂದಿರಲಿದ್ದು, ಹೊಸ ಕಾರಿನ ಕುರಿತಾದ ಯಾವುದೇ ಅಧಿಕೃ ತಾಂತ್ರಿಕ ಅಂಶಗಳ ಮಾಹಿತಿ ಇದುವರೆಗೂ ಬಹಿರಂಗಪಡಿಸಲಾಗಿಲ್ಲ.

ಭಾರೀ ಬದಲಾವಣೆಗಳೊಂದಿಗೆ ಬಿಡುಗಡೆಗೆ ಸಿದ್ದವಾದ ನ್ಯೂ ಜನರೇಷನ್ ಮಹೀಂದ್ರಾ ಸ್ಕಾರ್ಪಿಯೋ

ಸದ್ಯ ಕಾರಿನ ಉತ್ಪಾದನಾ ಆವೃತ್ತಿಯ ಚಿತ್ರಗಳೊಂದಿಗೆ ಬಿಡುಗಡೆಯ ದಿನಾಂಕ ಮಾಹಿತಿ ಮಾತ್ರ ಹಂಚಿಕೊಂಡಿರುವ ಮಹೀಂದ್ರಾ ಕಂಪನಿಯು ಬಿಡುಗಡೆಯ ಸಂದರ್ಭದಲ್ಲಿಯೇ ಅಧಿಕೃತವಾಗಿ ಹೊಸ ಕಾರಿನ ಮಾಹಿತಿ ಹಂಚಿಕೊಳ್ಳಲಿದ್ದು, ಹೊಸ ಬದಲಾವಣೆಗಳೊಂದಿಗೆ ನ್ಯೂ ಜನರೇಷನ್ ಮಾದರಿಯು ಡಿ-ಸೆಗ್ಮೆಂಟ್ ಎಸ್‌ಯುವಿ ವಿಭಾಗದಲ್ಲಿ ಹೆಚ್ಚಿನ ಬೇಡಿಕೆ ಪಡೆದುಕೊಳ್ಳಲಿದೆ.

ಭಾರೀ ಬದಲಾವಣೆಗಳೊಂದಿಗೆ ಬಿಡುಗಡೆಗೆ ಸಿದ್ದವಾದ ನ್ಯೂ ಜನರೇಷನ್ ಮಹೀಂದ್ರಾ ಸ್ಕಾರ್ಪಿಯೋ

ಭಾರತದಲ್ಲಿ ಬಿಡುಗಡೆಗೊಂಡ 20 ವರ್ಷಗಳ ಸಂಭ್ರಮದಲ್ಲಿರುವ ಸ್ಕಾರ್ಪಿಯೋ ಮಾದರಿಯು ಮೊದಲ ತಲೆಮಾರಿನಿಂದ ಇಲ್ಲಿಯ ತನಕ ಹಲವಾರು ಬದಲಾವಣೆಗಳನ್ನು ಪಡೆದುಕೊಂಡಿದ್ದು, ಹೊಸ ಹೊಸ ಬದಲಾವಣೆಗಳೊಂದಿಗೆ ಗ್ರಾಹಕರ ಬೇಡಿಕೆಯಲ್ಲಿ ಮುಂಚೂಣಿ ಸಾಧಿಸುತ್ತಿದೆ.

ಭಾರೀ ಬದಲಾವಣೆಗಳೊಂದಿಗೆ ಬಿಡುಗಡೆಗೆ ಸಿದ್ದವಾದ ನ್ಯೂ ಜನರೇಷನ್ ಮಹೀಂದ್ರಾ ಸ್ಕಾರ್ಪಿಯೋ

ಮಹೀಂದ್ರಾ ಕಂಪನಿಯು ಕಳೆದ ಎರಡು ವರ್ಷಗಳಲ್ಲಿ ತನ್ನ ಪ್ರಮುಖ ಕಾರುಗಳ ನ್ಯೂ ಜನರೇಷನ್ ಮಾದರಿಗಳನ್ನು ಬಿಡುಗಡೆ ಮಾಡುವ ಮೂಲಕ ಭಾರೀ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಹೊಸ ತಲೆಮಾರಿನ ಸ್ಕಾರ್ಪಿಯೋ ಆವೃತ್ತಿಯೊಂದಿಗೆ ಎಸ್‌ಯುವಿ ಕಾರು ಮಾರಾಟದಲ್ಲಿ ತನ್ನ ಪ್ರಾಬಲ್ಯವನ್ನು ಗಟ್ಟಿಗೊಳಿಸಲಿದೆ.

ಭಾರೀ ಬದಲಾವಣೆಗಳೊಂದಿಗೆ ಬಿಡುಗಡೆಗೆ ಸಿದ್ದವಾದ ನ್ಯೂ ಜನರೇಷನ್ ಮಹೀಂದ್ರಾ ಸ್ಕಾರ್ಪಿಯೋ

ಬಿಡುಗಡೆಯಾಗಲಿರುವ ಹೊಸ ಸ್ಕಾರ್ಪಿಯೋ-ಎನ್ ಕಾರು ಮಾದರಿಯ ಪ್ರಸ್ತುತ ಮಾರುಕಟ್ಟೆಯಲ್ಲಿನ ಮಾರಾಜೋ ಎಂಪಿವಿಯಿಂದಲೂ ಕೆಲವು ಪ್ರೀಮಿಯಂ ಫೀಚರ್ಸ್‌ಗಳನ್ನು ಎರವಲು ಪಡೆದುಕೊಂಡಿದ್ದು, ಹೊಸ ಫೀಚರ್ಸ್‌ಗಳಿಂದಾಗಿ ಸ್ಕಾರ್ಪಿಯೋ ಕಾರು ಮತ್ತಷ್ಟು ಬಲಿಷ್ಠ ವಿನ್ಯಾಸದೊಂದಿಗೆ ವಿಸ್ತರಿತ ವೀಲ್ಹ್ ಬೆಸ್ ಮೂಲಕ ಅರಾಮದಾಯಕ ಕ್ಯಾಬಿನ್ ಸ್ಪೆಸ್ ಹೊಂದಿದೆ.

ಭಾರೀ ಬದಲಾವಣೆಗಳೊಂದಿಗೆ ಬಿಡುಗಡೆಗೆ ಸಿದ್ದವಾದ ನ್ಯೂ ಜನರೇಷನ್ ಮಹೀಂದ್ರಾ ಸ್ಕಾರ್ಪಿಯೋ

ಹಾಗೆಯೇ ಹೊಸ ಕಾರಿನಲ್ಲಿ ಈ ಬಾರಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳ ಜೊತೆಗೆ ಹೆಚ್ಚಿನ ಮಟ್ಟದ ಸುರಕ್ಷಾ ಸೌಲಭ್ಯಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗುತ್ತಿದ್ದು, ಆರಾಮದಾಯಕವಾದ ಆಸನ ಸೌಲಭ್ಯದೊಂದಿಗೆ ಅಂಡ್ರಾಯಿಡ್ ಆಟೋ ಮತ್ತು ಆಟೋ ಕಾರ್ ಪ್ಲೇ ಸರ್ಪೊಟ್ ಮಾಡುವ ಇನ್ಪೋಟೈನ್‌ಮೆಂಟ್ ಸಿಸ್ಟಂ, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್, ಎಲೆಕ್ಟ್ರಿಕ್ ಸನ್‌ರೂಫ್ ಮತ್ತು ವಿವಿಧ ಡ್ರೈವ್ ಮೋಡ್ ಕಂಟ್ರೋಲ್ ಸೇರಿದಂತೆ ಹಲವು ಹೊಸ ಸೌಲಭ್ಯಗಳಿವೆ.

ಭಾರೀ ಬದಲಾವಣೆಗಳೊಂದಿಗೆ ಬಿಡುಗಡೆಗೆ ಸಿದ್ದವಾದ ನ್ಯೂ ಜನರೇಷನ್ ಮಹೀಂದ್ರಾ ಸ್ಕಾರ್ಪಿಯೋ

ನ್ಯೂ ಜನರೇಷನ್ ಮಾದರಿಯ ಮತ್ತೊಂದು ವಿಶೇಷವೆಂದರೆ ಬ್ರಾಂಡ್ ನ್ಯೂ ಲೋಗೊ ಹೊಂದಿದ್ದು, ಸ್ಟೀರಿಂಗ್ ಮೌಂಟೆಡ್ ಮೇಲೆ ಇರಿಸಲಾಗಿರುವ ಲೋಗೊ ಸಾಕಷ್ಟು ಆಕರ್ಷಕವಾಗಿದೆ. ಹಾಗೆಯೇ ಹೊಸ ಕಾರಿನಲ್ಲಿ ಮಲ್ಟಿ ಏರ್‌ಬ್ಯಾಗ್, ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ರಿಯರ್ ಪಾರ್ಕಿಂಗ್ ಕ್ಯಾಮೆರಾ, ಆಯ್ದ ವೆರಿಯೆಂಟ್‌ಗಳಲ್ಲಿ ಟ್ವಿನ್ ಪಾಡ್ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್, ಆಲ್ ವೀಲ್ಹ್ ಡಿಸ್ಕ್ ಬ್ರೇಕ್ ಸೌಲಭ್ಯಗಳಿವೆ.

ಭಾರೀ ಬದಲಾವಣೆಗಳೊಂದಿಗೆ ಬಿಡುಗಡೆಗೆ ಸಿದ್ದವಾದ ನ್ಯೂ ಜನರೇಷನ್ ಮಹೀಂದ್ರಾ ಸ್ಕಾರ್ಪಿಯೋ

ಟಾಪ್ ಎಂಡ್ ಮಾದರಿಗಳಲ್ಲಿ ಹೆಚ್ಚಿನ ಸುರಕ್ಷತೆಗಾಗಿ ಕ್ರೂಸ್ ಕಂಟ್ರೋಲ್, ಸನ್‌ರೂಫ್, ಪುಶ್ ಬಟನ್ ಆನ್/ಆಫ್, ಕೀ ಲೆಸ್ ಎಂಟ್ರಿ, ರೂಫ್ ರೈಲ್ಸ್, ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್‌ಇಡಿ ಫಾಗ್ ಲ್ಯಾಂಪ್, ಎಲ್ಇಡಿ ಟರ್ನ್ ಇಂಡಿಕೇಟಕ್ ಲೈಟ್, ಸಿಲ್ವರ್ ಸ್ಕೀಡ್ ಪ್ಲೇಟ್ ಸೌಲಭ್ಯಗಳಿರಲಿವೆ.

ಭಾರೀ ಬದಲಾವಣೆಗಳೊಂದಿಗೆ ಬಿಡುಗಡೆಗೆ ಸಿದ್ದವಾದ ನ್ಯೂ ಜನರೇಷನ್ ಮಹೀಂದ್ರಾ ಸ್ಕಾರ್ಪಿಯೋ

ಇದರೊಂದಿಗೆ ಹೊಸ ಕಾರಿನಲ್ಲಿ 18 ಇಂಚಿನ ಅಲಾಯ್ ವೀಲ್ಹ್‌ಗಳು, ಹೊಸ ವಿನ್ಯಾಸದ ಫ್ರಂಟ್ ಅಂಡ್ ರಿಯರ್ ಬಂಪರ್ ಮತ್ತು ವಿಸ್ತರಿತ ವೀಲ್ಹ್‌ಬೆಸ್‌ನಿಂದಾಗಿ ಮೂರನೇ ಸಾಲಿನ ಪ್ರಯಾಣಿಕರಿಗೆ ಹೆಚ್ಚಿನ ಮಟ್ಟದ ಸ್ಥಳಾವಕಾಶ ನೀಡಲಿದೆ.

ಭಾರೀ ಬದಲಾವಣೆಗಳೊಂದಿಗೆ ಬಿಡುಗಡೆಗೆ ಸಿದ್ದವಾದ ನ್ಯೂ ಜನರೇಷನ್ ಮಹೀಂದ್ರಾ ಸ್ಕಾರ್ಪಿಯೋ

ಹೊಸ ಕಾರಿನಲ್ಲಿ ರಿಯರ್ ಎಸಿ ವೆಂಟ್ಸ್, ಲೆದರ್ ಸೀಟುಗಳು, 6 ಹಂತದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಡ್ರೈವರ್ ಸೀಟ್ ಸೇರಿದಂತೆ ಹೊಸ ಕಾರಿನಲ್ಲಿ ಹಲವಾರು ಸುರಕ್ಷಾ ಸೌಲಭ್ಯಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗುತ್ತಿದೆ.

ಭಾರೀ ಬದಲಾವಣೆಗಳೊಂದಿಗೆ ಬಿಡುಗಡೆಗೆ ಸಿದ್ದವಾದ ನ್ಯೂ ಜನರೇಷನ್ ಮಹೀಂದ್ರಾ ಸ್ಕಾರ್ಪಿಯೋ

ಹೊಸ ಕಾರಿನ ವಿನ್ಯಾಸದ ಕುರಿತು ಹೇಳುವುದಾದರೆ ನವೀಕರಿಸಲಾದ ಗ್ರಿಲ್‌ನೊಂದಿಗೆ ಅಡ್ಡಲಾಗಿ ಮತ್ತು ನಡುವೆ ಐದು ಲಂಬ ಸ್ಲೇಟ್ಗಳನ್ನು ನೀಡಲಾಗಿದೆ. ಇದರೊಂದಿಗೆ ಎರಡು ಭಾಗಗಳಲ್ಲಿ ಹೆಡ್‌ಲೈಟ್ ಘಟಕಗಳನ್ನು ನೀಡಲಾಗಿದ್ದು, ಅದನ್ನು ಎರಡು ಭಾಗಗಳಾಗಿ ವಿಂಗಡಿಸಲಾಗಿದೆ.

ಭಾರೀ ಬದಲಾವಣೆಗಳೊಂದಿಗೆ ಬಿಡುಗಡೆಗೆ ಸಿದ್ದವಾದ ನ್ಯೂ ಜನರೇಷನ್ ಮಹೀಂದ್ರಾ ಸ್ಕಾರ್ಪಿಯೋ

ಮುಂಭಾಗದಿಂದ ಬಲವಾದ ನೋಟವನ್ನು ನೀಡುವ ಅದರ ಬಾನೆಟ್ ಮೇಲೆ ಗೆರೆಗಳನ್ನು ಕಾಣಬಹುದು. ಅದರ ಬದಿಯಲ್ಲಿ ದೊಡ್ಡ ಮಿಶ್ರಲೋಹದ ಚಕ್ರಗಳು ಕಂಡುಬರುತ್ತವೆ. ಇದು ಈ ಎಸ್‌ಯುವಿಯ ಗಾತ್ರಕ್ಕೆ ಸಾಕಾಗಲಿದ್ದು, ಇದರ ಪಕ್ಕದಲ್ಲಿರುವ ಪುಟ್ ಸ್ಟೆಪ್‌ಗಳನ್ನು ಮೊದಲಿಗಿಂತಲೂ ದೊಡ್ಡದಾಗಿ ಇರಿಸಬಹುದಾಗಿದ್ದು, ಪ್ರಯಾಣಿಕರಿಗೆ ಇದು ಹತ್ತಲು ಮತ್ತು ಇಳಿಯಲು ಸಾಕಷ್ಟು ಸಹಕಾರಿಯಾಗುತ್ತದೆ. ಹಿಂಭಾಗದಲ್ಲಿ ಟೈಲ್ ಗೇಟ್ ಮತ್ತು ಅದನ್ನು ತೆರೆಯಲು ಬದಿಯಲ್ಲಿ ಡೋರ್ ಹ್ಯಾಂಡಲ್ ಇದ್ದು, ಎಲ್ಇಡಿ ಟೈಲ್ ಲೈಟ್ ಇದರಲ್ಲಿ ಕಾಣಬಹುದಾಗಿದೆ.

ಭಾರೀ ಬದಲಾವಣೆಗಳೊಂದಿಗೆ ಬಿಡುಗಡೆಗೆ ಸಿದ್ದವಾದ ನ್ಯೂ ಜನರೇಷನ್ ಮಹೀಂದ್ರಾ ಸ್ಕಾರ್ಪಿಯೋ

ಇನ್ನು ಮಹೀಂದ್ರಾ ಕಂಪನಿಯು ಸ್ಕಾರ್ಪಿಯೋ-ಎನ್ ಕಾರಿನಲ್ಲಿ ಎಕ್ಸ್‌ಯುವಿ700 ಮತ್ತು ಥಾರ್ ಮಾದರಿಯಲ್ಲಿರುವಂತೆ 2.0 ಲೀಟರ್ ಪೆಟ್ರೋಲ್ ಎಂಜಿನ್ ಮತ್ತು 2.2 ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ನೀಡಲಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿರುವ ಮಾದರಿಯು ಕೇವಲ 2.2-ಲೀಟರ್ ಡೀಸೆಲ್ ಎಂಜಿನ್‌ ಆಯ್ಕೆಯೊಂದಿಗೆ ಮಾರಾಟಕ್ಕೆ ಲಭ್ಯವಿದೆ.

ಭಾರೀ ಬದಲಾವಣೆಗಳೊಂದಿಗೆ ಬಿಡುಗಡೆಗೆ ಸಿದ್ದವಾದ ನ್ಯೂ ಜನರೇಷನ್ ಮಹೀಂದ್ರಾ ಸ್ಕಾರ್ಪಿಯೋ

ಆದರೆ ಹೊಸ ಮಾದರಿಯು ಸಾಕಷ್ಟು ಹೊಸ ಬದಲಾಣೆಗಳೊಂದಿಗೆ ಎಂಜಿನ್ ಆಯ್ಕೆಯಲ್ಲಿ ಹೆಚ್ಚಿನ ಬದಲಾವಣೆಗಳನ್ನು ಪಡೆದುಕೊಂಡಿದ್ದು, ಹೊಸ ಕಾರು 4x2 ಮತ್ತು ಹೈ ಎಂಡ್ ಮಾದರಿಯಲ್ಲಿ 4x4 ಡ್ರೈವ್ ಸಿಸ್ಟಂ ಆಯ್ಕೆಗಳೊಂದಿಗೆ ದೆಹಲಿ ಎಕ್ಸ್‌‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 14 ಲಕ್ಷದಿಂದ ರೂ. 20 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳಲಿದೆ.

Article Published On: Friday, May 20, 2022, 21:45 [IST]
English summary
Mahindra officially unveiled scorpio n unveil and launch set for 27 june
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+