ತಾಂತ್ರಿಕ ದೋಷ: ಹೊಸ ಎಕ್ಸ್‌ಯುವಿ700 ಹಿಂಪಡೆಯುತ್ತಿದೆ ಮಹೀಂದ್ರಾ
ಮಧ್ಯಮ ಕ್ರಮಾಂಕದ ಕಾರು ಮಾರಾಟದಲ್ಲಿ ಮಹೀಂದ್ರಾ ಹೊಸ ಎಕ್ಸ್‌ಯುವಿ700 ಕಾರು ಮಾದರಿಯು ಭಾರೀ ಬೇಡಿಕೆ ಹೊಂದಿದೆ.
Recommended Video
ಹೊಸ ಕಾರು ಮಾದರಿಯು ಭಾರೀ ಬೇಡಿಕೆಯ ನಡುವೆಯೂ ಕೆಲವು ಗ್ರಾಹಕರಿಂದ ಎಕ್ಸ್‌ಯುವಿ700 ತಾಂತ್ರಿಕ ಸೌಲಭ್ಯಗಳ ಕುರಿತಾಗಿ ದೂರುಗಳು ಹೆಚ್ಚಳವಾಗುತ್ತಿವೆ.

ಹೊಸ ಕಾರು ಬಿಡುಗಡೆಯ ನಂತರ ಇದುವರೆಗೆ ಸುಮಾರು 1.20 ಲಕ್ಷಕ್ಕಿಂತಲೂ ಹೆಚ್ಚು ಯುನಿಟ್‌ಗಳಿಗೆ ಬುಕಿಂಗ್ ಪಡೆದುಕೊಂಡಿದ್ದು, ಇದರಲ್ಲಿ ಕಂಪನಿಯು ಸುಮಾರು 30 ಸಾವಿಕ್ಕಿಂತಲೂ ಹೆಚ್ಚು ಯುನಿಟ್‌ಗಳನ್ನು ವಿತರಣೆ ಮಾಡಿದೆ. ವಿತರಣೆಗೊಂಡಿರುವ ಹೊಸ ಕಾರಿನ ಟಾಪ್ ಎಂಡ್ ಮಾದರಿಯಲ್ಲಿ ಕೆಲವು ತಾಂತ್ರಿಕ ದೋಷಗಳು ಕಂಡುಬರುತ್ತಿರುವ ಬಗೆಗೆ ಗ್ರಾಹಕರಿಂದ ದೂರ ದಾಖಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ಮಹೀಂದ್ರಾ ಕಂಪನಿಯು ಹೊಸ ಕಾರಿನಲ್ಲಿ ತಾಂತ್ರಿಕ ದೋಷದಿಂದ ಕೂಡಿರುವ ಪ್ರಮುಖ ವೆರಿಯೆಂಟ್‌ಗಳನ್ನು ಹಿಂಪಡೆಯುತ್ತಿದೆ.

ಎಕ್ಸ್‌ಯುವಿ700 ಬಿಡುಗಡೆಯ ನಂತರ ಇದೇ ಮೊದಲ ಬಾರಿಗೆ ಹೊಸ ಎಸ್‌ಯುವಿಯನ್ನು ಹಿಂಪಡೆಯಲಾಗುತ್ತಿದ್ದು, ಹೊಸ ಕಾರಿನಲ್ಲಿ 4x4 ಆಲ್ ವ್ಹೀಲ್ ಡ್ರೈವ್ ಸಿಸ್ಟಂ ಸೌಲಭ್ಯ ಹೊಂದಿರುವ ಡೀಸೆಲ್ ವೆರಿಯೆಂಟ್ ಹಿಂಪಡೆಯಲಾಗಿದೆ.

ಆಲ್ ವ್ಹೀಲ್ ಡ್ರೈವ್ ಸಿಸ್ಟಂ ಸೌಲಭ್ಯ ಹೊಂದಿರುವ ಡೀಸೆಲ್ ವೆರಿಯೆಂಟ್ ಹೊರತುಪಡಿಸಿ ಇನ್ನುಳಿದ ಯಾವುದೇ ವೆರಿಯೆಂಟ್‌ನಲ್ಲೂ ಯಾವುದೇ ತಾಂತ್ರಿಕ ಸಮಸ್ಯೆಗಳಿಲ್ಲ ಎಂದಿರುವ ಮಹೀಂದ್ರಾ ಕಂಪನಿಯು ತಾಂತ್ರಿಕ ದೋಷ ಹೊಂದಿರುವ ಕಾರು ಮಾದರಿಗಳನ್ನು ಶೀಘ್ರದಲ್ಲಿಯೇ ಸರಿಪಡಿಸುವುದಾಗಿ ಭರವಸೆ ನೀಡಿದೆ.

ಮಹೀಂದ್ರಾ ಕಂಪನಿಯ ಮಾಹಿತಿಯ ಪ್ರಕಾರ, ಆಲ್ ವ್ಹೀಲ್ ಡ್ರೈವ್ ಸಿಸ್ಟಂ ಸೌಲಭ್ಯ ಹೊಂದಿರುವ ಡೀಸೆಲ್ ವೆರಿಯೆಂಟ್‌ಗಳ ಎಂಜಿನ್ ಅನ್ನು ಹಿಂದಿನ ಆಕ್ಸಲ್‌ಗೆ ಸಂಪರ್ಕಿಸುವ ಪ್ರೊಪೆಲ್ಲರ್ ಶಾಫ್ಟ್‌ನಲ್ಲಿ ತೊಂದರೆಯಾಗುತ್ತಿರುವ ಬಗೆಗೆ ಮಾಹಿತಿ ನೀಡಿದ್ದು, ಮಹೀಂದ್ರಾ ಸೇವಾ ತಂಡವು ಡ್ರೈವ್ ಶಾಫ್ಟ್ ಅನ್ನು ಹೊಂದಿರುವ ಬೋಲ್ಟ್‌ಗಳಲ್ಲಿನ ಸಮಸ್ಯೆಯನ್ನು ಶೀಘ್ರದಲ್ಲಿಯೇ ಬಗೆಹರಿಸಲಿದೆ ಎಂದಿದೆ.

ಡ್ರೈವ್ ಶಾಫ್ಟ್‌ನಲ್ಲಿ ಉಂಟಾಗಿರುವ ತಾಂತ್ರಿಕ ಸಮಸ್ಯೆಯಿಂದಾಗಿ ಚಾಲನೆಯಲ್ಲಿ ಇದುವರೆಗೂ ಯಾವುದೇ ಅಪಾಯವಾಗಿಲ್ಲವಾದರೂ ಚಾಲನೆಯ ಸಂದರ್ಭದಲ್ಲಿ ಕೆಲವು ಗ್ರಾಹಕರಿಗೆ ಈ ತಾಂತ್ರಿಕ ಸಮಸ್ಯೆಯು ಗಮನಕ್ಕೆ ಬಂದಿದೆ. ಹೀಗಾಗಿ ಗ್ರಾಹಕರ ದೂರುಗಳನ್ನು ಆಧರಿಸಿ ಆಲ್ ವ್ಹೀಲ್ ಡ್ರೈವ್ ಸಿಸ್ಟಂ ಸೌಲಭ್ಯ ಹೊಂದಿರುವ ಎಲ್ಲಾ ಡೀಸೆಲ್ ವೆರಿಯೆಂಟ್‌ಗಳನ್ನು ಸ್ವಯಂಪ್ರೇರಿತವಾಗಿ ಪರೀಕ್ಷೆಗೆ ಒಳಪಡಿಸುತ್ತಿದೆ.

ಮಹೀಂದ್ರಾ ಕಂಪನಿಯು ಹೊಸ ಎಕ್ಸ್‌ಯುವಿ700 ಕಾರು ಮಾದರಿಗಾಗಿ ಇದುವರೆಗೆ ಸುಮಾರು 1.20 ಲಕ್ಷಕ್ಕೂ ಅಧಿಕ ಯುನಿಟ್‌ಗಳಿಗೆ ಬುಕಿಂಗ್ ಸ್ವಿಕರಿಸಿದ್ದು, ಹೊಸ ಕಾರು ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಆಕರ್ಷಕ ಬೆಲೆಯೊಂದಿಗೆ ಗ್ರಾಹಕರನ್ನು ಸೆಳೆಯುತ್ತಿದೆ.

ಹೊಸ ಕಾರು ಗ್ರಾಹಕರ ಬೇಡಿಕೆಯೆಂತೆ 5 ಸೀಟರ್ ಮತ್ತು 7 ಸೀಟರ್ ಮಾದರಿಗಳಲ್ಲಿ ಖರೀದಿಗೆ ಲಭ್ಯವಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 13.18 ಲಕ್ಷಕ್ಕೆ ಮತ್ತು ಹೆಚ್ಚಿನ ಮಟ್ಟದ ಫೀಚರ್ಸ್ ಹೊಂದಿರುವ ಟಾಪ್ ಎಂಡ್ ಮಾದರಿಯನ್ನು ರೂ. 24.58 ಲಕ್ಷ ಬೆಲೆ ಹೊಂದಿದೆ.

ಹೊಸ ಕಾರಿನಲ್ಲಿ 7 ಸೀಟರ್ ಮಾದರಿಯು 2+3+2 ಮಾದರಿಯ ಆಸನ ಸೌಲಭ್ಯ ಹೊಂದಿದ್ದರೆ 5 ಸೀಟರ್ ಮಾದರಿಯು 2+3 ಆಸನ ಸೌಲಭ್ಯ ಹೊಂದಿದ್ದು, ಹೊಸ ಕಾರಿನಲ್ಲಿ ಕಂಪನಿಯು 2.0-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 2.2-ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಆಯ್ಕೆ ನೀಡಿದೆ.

ಹೊಸ ಕಾರು ಎಂಎಕ್ಸ್, ಎಎಕ್ಸ್3, ಎಎಕ್ಸ್5, ಎಎಕ್ಸ್7 ಮತ್ತು ಎಎಕ್ಸ್7 ಲಗ್ಷುರಿ ಎನ್ನುವ ವಿವಿಧ ವೆರಿಯೆಂಟ್‌ಗಳೊಂದಿಗೆ ಆಕರ್ಷಕ ಫೀಚರ್ಸ್, ಬಲಿಷ್ಠ ಎಂಜಿನ್ ಆಯ್ಕೆ ಹೊಂದಿದ್ದು, ಕಂಪನಿಯೇ ಜೋಡಣೆ ಮಾಡುವ 7 ಸೀಟರ್ ಮಾದರಿಗಳನ್ನು ಹೊರತುಪಡಿಸಿ 5 ಸೀಟರ್ ಹೊಂದಿರುವ ಮಾದರಿಗಳಲ್ಲಿ 7 ಸೀಟರ್ ಬಯಸುವ ಗ್ರಾಹಕರು ಹೆಚ್ಚುವರಿ ರೂ. 70 ಸಾವಿರ ಪಾವತಿ ಮಾಡಬೇಕಾಗುತ್ತದೆ.

ಹೊಸ ಕಾರಿನಲ್ಲಿ ಫ್ರಂಟ್ ಫಾಸಿಯಾದೊಂದಿಗೆ ಸಂಯೋಜನೆಗೊಂಡಿರುವ ಎಲ್ಇಡಿ ಹೆಡ್‌ಲ್ಯಾಂಪ್ಸ್, ಸಿ ಆಕಾರದಲ್ಲಿರುವ ಎಲ್ಇಡಿ ಡಿಆರ್‌ಎಲ್ಎಸ್, ಸಿಲ್ವರ್ ಕೋಟಿಂಗ್ ಹೊಂದಿರುವ ಫ್ಲಕ್ಸ್ ಸ್ಕೀಡ್ ಪ್ಲೇಟ್, 18-ಇಂಚಿನ ಡ್ಯುಯಲ್ ಟೋನ್ ಮಲ್ಟಿ ಸ್ಪೋಕ್ ಅಲಾಯ್ ವ್ಹೀಲ್ ಪಡೆದುಕೊಂಡಿದೆ.

ಎಕ್ಸ್‌ಯುವಿ700 ಮಾದರಿಯ ಸೈಡ್ ಪ್ರೋಫೈಲ್ ಮತ್ತು ಹಿಂಬದಿಯ ವಿನ್ಯಾಸವು ಕೂಡಾ ಸಾಕಷ್ಟು ಹೊಸತನದಿಂದ ಕೂಡಿದ್ದು, ಹಿಂಬದಿಯ ಫೆಂಡರ್‌ನೊಂದಿಗೆ ಹರಡಿಕೊಂಡಿರುವ ವಿಭಜಿತ ಟೈಲ್‌ಲ್ಯಾಂಪ್, ವಿನೂತನ ವಿನ್ಯಾಸದ ಬಂಪರ್, ಫ್ಲಕ್ಸ್ ಸ್ಕೀಡ್ ಪ್ಲೇಟ್, ರೂಫ್ ರೈಲ್ಸ್, ಶಾರ್ಕ್ ಫಿನ್ ಆಂಟೆನಾ, ರೂಫ್ ಸ್ಪಾಯ್ಲರ್ ಪಡೆದುಕೊಂಡಿದೆ.

ಹಾಗೆಯೇ ಹೊಸ ಕಾರಿನಲ್ಲಿ 10.25 ಇಂಚಿನ ಡಿಜಿಟಲ್ ಮತ್ತು ಇನ್ಪೋಟೈನ್‌ಮೆಂಟ್ ಟಚ್‌ಸ್ಕ್ರೀನ್ ಡಿಸ್‌ಪ್ಲೇ, ಆಂಡ್ರಾಯಿಡ್ ಆಟೋ ಮತ್ತು ಆಟೋ ಕಾರ್‌ಪ್ಲೇ, ಅಮೆಜಾನ್ ಅಲೆಕ್ಸಾ, 60 ತಾಂತ್ರಿಕ ಸೌಲಭ್ಯಗಳನ್ನು ನಿಯಂತ್ರಿಸಬಹುದಾದ ಕಾರ್ ಕನೆಕ್ಟ್ ಟೆಕ್ನಾಲಜಿ, ವಾಯ್ಸ್ ಅಸಿಸ್ಟೆನ್ಸ್, ಆ್ಯಂಬಿಯೆಂಟ್ ಲೈಟಿಂಗ್ಸ್, ಡ್ಯುಯಲ್ ಜೋನ್ ಕ್ಲೈಮೆಟ್ ಕಂಟ್ರೋಲ್, 2 ಮತ್ತು 3ನೇ ಸಾಲಿನಲ್ಲೂ ಎಸಿ ವೆಂಟ್ಸ್, ಪನೋರಮಿಕ್ ಸನ್‌ರೂಫ್ ಮತ್ತು ಏರ್ ಪ್ಯೂರಿಫ್ಲೈರ್ ಸೌಲಭ್ಯಗಳಿವೆ.

ಇದರೊಂದಿಗೆ ಹೊಸ ಕಾರು ಸುರಕ್ಷಾ ವಿಚಾರವಾಗಿ ಭಾರತದಲ್ಲಿ 'ಸೇಫರ್ ಛಾಯ್ಸ್' ಪ್ರಶಸ್ತಿ ಪಡೆದ ಮೊದಲ ಕಾರು ಮಾದರಿಯಾಗಿ ಹೊರಹೊಮ್ಮಿದ್ದು, ಹೊಸ ಕಾರಿನಲ್ಲಿ ಪ್ರಯಾಣಿಕರ ಗರಿಷ್ಠ ಸುರಕ್ಷತೆಗಾಗಿ ಹಲವಾರು ಸ್ಟ್ಯಾಂಡರ್ಡ್ ಫೀಚರ್ಸ್ ನೀಡಲಾಗಿದೆ.

ಹೊಸ ಎಕ್ಸ್‌ಯುವಿ700 ಮಾದರಿಯಲ್ಲಿ 7-ಏರ್‌ಬ್ಯಾಗ್, ಎಬಿಎಸ್ ಜೊತೆಗೆ ಇಬಿಡಿ, ಎಲೆಕ್ಟ್ರಾನಿಕ್ ಲಾಕಿಂಗ್, ಟ್ರಾಕ್ಷನ್ ಕಂಟ್ರೋಲ್, ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಆಟೋ ಹೆಡ್‌ಲ್ಯಾಂಪ್ ಬೂಸ್ಟರ್, ವ್ಯಯಕ್ತಿಕರಣಗೊಳಿಸಿದ ಸೇಫ್ಟಿ ಅಲರ್ಟ್, ಡ್ರೈವರ್ ಡ್ರಾಸಿನೆಸ್ ಅಲರ್ಟ್, ಲೆನ್ ಕಿಪ್ ಅಸಿಸ್ಟ್ ಸೌಲಭ್ಯ ಹೊಂದಿದೆ.


Click it and Unblock the Notifications