ಇದೇ ತಿಂಗಳು 12ರಂದು ಅನಾವರಣಗೊಳ್ಳಲಿದೆ ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್

ಮಹೀಂದ್ರಾ ಕಂಪನಿಯು ಸ್ಕಾರ್ಪಿಯೋ ಹೊಸ ತಲೆಮಾರಿನ ಆವೃತ್ತಿಯನ್ನು ಸ್ಕಾರ್ಪಿಯೋ-ಎನ್ ಹೆಸರಿನಲ್ಲಿ ಬಿಡುಗಡೆ ಮಾಡಿದ್ದು, ಇದರ ಜೊತೆಗೆ ಕಂಪನಿಯು ಹಳೆಯ ತಲೆಮಾರಿನ ಸ್ಕಾರ್ಪಿಯೋ ಮಾದರಿಯನ್ನು ಸ್ಕಾರ್ಪಿಯೋ-ಕ್ಲಾಸಿಕ್ ಹೆಸರಿನಲ್ಲಿ ಬಿಡುಗಡೆಗೆ ಸಜ್ಜಾಗುತ್ತಿದೆ.

ಇದೇ ತಿಂಗಳು 11ರಂದು ಅನಾವರಣಗೊಳ್ಳಲಿದೆ ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್

ಸ್ಕಾರ್ಪಿಯೋ-ಎನ್ ಹೊಸ ಆವೃತ್ತಿಯನ್ನು ಈಗಾಗಲೇ ಬಿಡುಗಡೆ ಮಾಡಿ ಭಾರೀ ಪ್ರಮಾಣದ ಬುಕಿಂಗ್ ಪಡೆದುಕೊಂಡಿರುವ ಮಹೀಂದ್ರಾ ಕಂಪನಿಯು ಶೀಘ್ರದಲ್ಲಿಯೇ ವಿತರಣೆ ಆರಂಭಿಸಲು ಸಜ್ಜಾಗುತ್ತಿದ್ದು, ಸ್ಕಾರ್ಪಿಯೋ-ಎನ್ ವಿತರಣೆ ಆರಂಭಕ್ಕೂ ಮುನ್ನ ಕಂಪನಿಯು ಇದೀಗ ಸ್ಕಾರ್ಪಿಯೋ ಕ್ಲಾಸಿಕ್ ಮಾದರಿಯನ್ನು ಅನಾವರಣಗೊಳಿಸಲು ಸಜ್ಜಾಗಿದೆ.

ಇದೇ ತಿಂಗಳು 11ರಂದು ಅನಾವರಣಗೊಳ್ಳಲಿದೆ ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್

ಲಭ್ಯವಾಗಿರುವ ಮಾಹಿತಿಗಳ ಪ್ರಕಾರ ಹೊಸ ಸ್ಕಾರ್ಪಿಯೋ ಕ್ಲಾಸಿಕ್ ಮಾದರಿಯು ಇದೇ ತಿಂಗಳು 11ರಂದು ಅಧಿಕೃತವಾಗಿ ಅನಾವರಣಗೊಳ್ಳುತ್ತಿದ್ದು, ಹೊಸ ಮಾದರಿಯಲ್ಲಿ ಕಂಪನಿಯು ಪ್ರಮುಖ ಬದಲಾವಣೆಗಳನ್ನು ಪರಿಚಯಿಸಲಿದೆ.

ಇದೇ ತಿಂಗಳು 11ರಂದು ಅನಾವರಣಗೊಳ್ಳಲಿದೆ ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್

ಸ್ಕಾರ್ಪಿಯೋ ಕ್ಲಾಸಿಕ್ ಮಾದರಿಯಲ್ಲಿ ಸ್ಕಾರ್ಪಿಯೋ-ಎನ್ ಮಾದರಿಯಲ್ಲಿರುವಂತೆ ಸುಧಾರಿತ ತಂತ್ರಜ್ಞಾನ ಪ್ರೇರಿತ ಪ್ರೀಮಿಯಂ ಫೀಚರ್ಸ್‌ಗಳನ್ನು ನೀಡಿಲ್ಲವಾದರೂ ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಹೊಸ ಫೀಚರ್ಸ್ ನೀಡಲಾಗಿದ್ದು, ಹೊಸ ಸ್ಕಾರ್ಪಿಯೋ ಕ್ಲಾಸಿಕ್ ಮಾದರಿಯು ಹೊಸ ಲೊಗೊ ಸೇರಿದಂತೆ ಕೆಲವು ಪ್ರೀಮಿಯ ಫೀಚರ್ಸ್‌ಗಳು ಅರಾಮದಾಯಕ ಕಾರು ಚಾಲನೆಗೆ ಪೂರಕವಾಗಿರಲಿವೆ.

ಇದೇ ತಿಂಗಳು 11ರಂದು ಅನಾವರಣಗೊಳ್ಳಲಿದೆ ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್

ಜೊತೆಗೆ ಹೊಸ ಆಸನ ಸೌಲಭ್ಯಗಳು ಮತ್ತು ಸುರಕ್ಷತೆಗಾಗಿ ಹೆಚ್ಚುವರಿ ಏರ್‌ಬ್ಯಾಗ್ ನೀಡಲಾಗುತ್ತಿದ್ದು, ಹೊಸ ಫೀಚರ್ಸ್ ಜೋಡಣೆ ನಂತರ ಕಾರಿನ ಬೆಲೆಯು ಹೆಚ್ಚಳವಾಗಲಿದೆ. ಹಾಗೆಯೇ ಹೊಸ ಕಾರಿನಲ್ಲಿ ಡೀಸೆಲ್ ಎಂಜಿನ್ ಆಯ್ಕೆ ಮಾತ್ರ ಲಭ್ಯವಿರಲಿದ್ದು, ಸ್ಕಾರ್ಪಿಯೋ-ಎನ್ ಮಾದರಿಯಲ್ಲಿ ಯಾವುದೇ ಪೆಟ್ರೋಲ್ ಎಂಜಿನ್ ಆಯ್ಕೆ ನೀಡಲಾಗಿಲ್ಲ.

ಇದೇ ತಿಂಗಳು 11ರಂದು ಅನಾವರಣಗೊಳ್ಳಲಿದೆ ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್

ಹಳೆಯ ತಲೆಮಾರಿನ ಸ್ಕಾರ್ಪಿಯೋ ಮಾದರಿಯು ಸದ್ಯ ಮಾರುಕಟ್ಟೆಯಲ್ಲಿ ಎಕ್ಸ್‌ಶೋರೂಂ ಪ್ರಕಾರ ರೂ. 13.54 ಲಕ್ಷದಿಂದ ರೂ. 18.62 ಲಕ್ಷ ಬೆಲೆ ಹೊಂದಿದ್ದು, ಸ್ಕಾರ್ಪಿಯೋ ಕ್ಲಾಸಿಕ್ ಮಾದರಿಯ ಹಳೆಯ ಮಾದರಿಗಿಂತ ರೂ. 50 ಸಾವಿರದಿಂದ ರೂ. 1 ಲಕ್ಷದ ತನಕ ಹೆಚ್ಚುವರಿ ಬೆಲೆ ಪಡೆದುಕೊಳ್ಳಬಹುದಾಗಿದೆ.

ಇದೇ ತಿಂಗಳು 11ರಂದು ಅನಾವರಣಗೊಳ್ಳಲಿದೆ ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್

ಸದ್ಯ ಮಾರುಕಟ್ಟೆ ಪ್ರವೇಶಿಸಿರುವ ಸ್ಕಾರ್ಪಿಯೋ-ಎನ್ ಹೊಸ ಕಾರು ಮಾದರಿಯು ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಗಳೊಂದಿಗೆ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 11.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 21.45 ಲಕ್ಷ ಬೆಲೆ ಹೊಂದಿದೆ.

ಇದೇ ತಿಂಗಳು 11ರಂದು ಅನಾವರಣಗೊಳ್ಳಲಿದೆ ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್

ಹೊಸ ಕಾರು ಗ್ರಾಹಕರ ಬೇಡಿಕೆಯೆಂತೆ 6 ಸೀಟರ್ ಮತ್ತು 7 ಸೀಟರ್ ಸೌಲಭ್ಯದೊಂದಿಗೆ 2.2 ಲೀಟರ್ ಡೀಸೆಲ್ ಮತ್ತು 2.0 ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿದ್ದು, 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದೆ.

ಇದೇ ತಿಂಗಳು 11ರಂದು ಅನಾವರಣಗೊಳ್ಳಲಿದೆ ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್

2.0-ಲೀಟರ್ ಪೆಟ್ರೋಲ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ಮತ್ತು 2.2 ಲೀಟರ್ ಡೀಸೆಲ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ ಎರಡು ರೀತಿಯ ಪರ್ಫಾಮೆನ್ಸ್ ಆಯ್ಕೆಗಳನ್ನು ಹೊಂದಿದೆ.

ಇದೇ ತಿಂಗಳು 11ರಂದು ಅನಾವರಣಗೊಳ್ಳಲಿದೆ ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್

ಪೆಟ್ರೋಲ್ ಮ್ಯಾನುವಲ್ ಮಾದರಿಯು 203-ಬಿಎಚ್‌ಪಿ ಮತ್ತು 370-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದಲ್ಲಿ ಆಟೋಮ್ಯಾಟಿಕ್ ಮಾದರಿಯು 203-ಬಿಎಚ್‌ಪಿ ಮತ್ತು 380-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

ಇದೇ ತಿಂಗಳು 11ರಂದು ಅನಾವರಣಗೊಳ್ಳಲಿದೆ ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್

ಹಾಗೆಯೇ ಡೀಸೆಲ್ ಆರಂಭಿಕ ಮಾದರಿಯು ಮ್ಯಾನುವಲ್ ಆಯ್ಕೆಯೊಂದಿಗೆ 132 ಬಿಎಚ್‌ಪಿ ಮತ್ತು 300 ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ ಹೈ ಎಂಡ್ ಮಾದರಿಯು ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಮಾದರಿಯೊಂದಿಗೆ 175 ಬಿಎಚ್‌ಪಿ ಮತ್ತು 370 ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿವೆ.

ಇದೇ ತಿಂಗಳು 11ರಂದು ಅನಾವರಣಗೊಳ್ಳಲಿದೆ ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್

ಇದರೊಂದಿಗೆ ಮಹೀಂದ್ರಾ ಕಂಪನಿಯು ಹೊಸ ಕಾರು ಮಾದರಿಯನ್ನು ಈ ಹಿಂದಿಗಿಂತಲೂ ಹೆಚ್ಚಿನ ಮಟ್ಟದ ತಾಂತ್ರಿಕ ಅಂಶಗಳೊಂದಿಗೆ ಅಭಿವೃದ್ದಿಗೊಳಿಸಿದ್ದು, ಕಾರಿನ ಮುಂಭಾಗದಲ್ಲಿ ಮಹೀಂದ್ರಾ ಸಾಂಪ್ರದಾಯಿಕ ಸಿಕ್ಸ್ ಸ್ಲಾಟ್ ಫ್ರಂಟ್ ಗ್ರಿಲ್ ಜೊತೆಗೆ ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್, ಸ್ಕಾರ್ಪಿಯನ್ ಟೈಲ್ ಶೇಪ್ ಹೊಂದಿರುವ ಡಿಆರ್‌ಎಲ್ಎಸ್ ಮತ್ತು ಫಾಗ್ ಲ್ಯಾಂಪ್ ನೀಡಲಾಗಿದೆ.

ಇದೇ ತಿಂಗಳು 11ರಂದು ಅನಾವರಣಗೊಳ್ಳಲಿದೆ ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್

ಹೊಸ ಸ್ಕಾರ್ಪಿಯೋ-ಎನ್ ಮಾದರಿಯಲ್ಲಿ ಸಿ ಮತ್ತು ಡಿ-ಪಿಲ್ಲರ್ ಪ್ರದೇಶಗಳಲ್ಲಿ ವಿಂಡೋ ಕ್ರೋಮ್ ಫ್ರೇಮ್‌ನಲ್ಲಿ ಸ್ಕಾರ್ಪಿಯನ್ ಸ್ಟಿಂಗ್ ಅಂಶವನ್ನು ಸಹ ಹೊಂದಿದೆ. ಜೊತೆಗೆ ಹೊಸ ಸ್ಕಾರ್ಪಿಯೋ-ಎನ್‌ನಲ್ಲಿ ಹೊಸ ಡ್ಯುಯಲ್-ಟೋನ್ ಮಿಶ್ರಲೋಹದ 18 ಇಂಚಿನ ಚಕ್ರಗಳನ್ನು ನೀಡಲಾಗಿದ್ದು, ಲಂಬವಾಗಿ ಜೋಡಿಸಲಾದ ಎಲ್ಇಡಿ ಟೈಲ್‌ಲೈಟ್‌ಗಳು ಮತ್ತು ಸ್ಪಾಯ್ಲರ್ ಅನ್ನು ಹೊಂದಿದೆ.

ಇದೇ ತಿಂಗಳು 11ರಂದು ಅನಾವರಣಗೊಳ್ಳಲಿದೆ ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್

ಜೊತೆಗೆ ಹೊಸ ಕಾರಿನಲ್ಲಿ ಡ್ಯುಯಲ್-ಜೋನ್ ಸ್ವಯಂಚಾಲಿತ ಹವಾಮಾನ ನಿಯಂತ್ರಣ, ಮುಂಭಾಗ ಮತ್ತು ಹಿಂಭಾಗದಲ್ಲಿ ಕ್ಯಾಮೆರಾಗಳು ಮತ್ತು ಸ್ಮಾರ್ಟ್‌ಫೋನ್‌ಗಾಗಿ ವೈರ್‌ಲೆಸ್ ಚಾರ್ಜರ್‌ನಂತಹ ವೈಶಿಷ್ಟ್ಯಗಳನ್ನು ಹೊಂದಿರಲಿದ್ದು, ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ಇಬಿಡಿ ಜೊತೆಗೆ ಎಬಿಎಸ್, ಇಎಸ್ಇ, ಟ್ರಾಕ್ಷನ್ ಕಂಟ್ರೋಲ್, ಹಿಲ್ ಹೋಲ್ಡ್ ಕಂಟ್ರೋಲ್, ಹಿಲ್ ಡಿಸೆಂಟ್ ಕಂಟ್ರೋಲ್, ಐಸೋಫಿಕ್ಸ್ ಆಂಕರ್ ಪಾಯಿಂಟ್‌ಗಳು ಮತ್ತು ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್ ಸೇರಿದಂತೆ ಹಲವಾರು ಫೀಚರ್ಸ್‌ಗಳಿವೆ.

Article Published On: Tuesday, August 9, 2022, 21:21 [IST]
English summary
Mahindra scorpio classic to be unveiled on 11 august
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+