ಹೊಸ ಫೀಚರ್ಸ್ ಹೊಂದಿರುವ ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್ ಅನಾವರಣ

ಮಹೀಂದ್ರಾ ಕಂಪನಿಯು ತನ್ನ ಜನಪ್ರಿಯ ಸ್ಕಾರ್ಪಿಯೋ ಎಸ್‌ಯುವಿಯ ಕ್ಲಾಸಿಕ್ ಆವೃತ್ತಿಯನ್ನು ಅನಾವರಣಗೊಳಿಸಿದ್ದು, ಹೊಸ ಕಾರು ಮಾದರಿಯು ಹಲವಾರು ಹೊಸ ಬದಲಾವಣೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿದೆ.

ಹೊಸ ಫೀಚರ್ಸ್ ಹೊಂದಿರುವ ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್ ಅನಾವರಣ

ಹೊಸ ತಲೆಮಾರಿನ ಸ್ಕಾರ್ಪಿಯೋ-ಎನ್ ಬಿಡುಗಡೆಯ ನಂತರ ಮಹೀಂದ್ರಾ ಕಂಪನಿಯು ಇದೀಗ ಸ್ಕಾರ್ಪಿಯೋ ಕ್ಲಾಸಿಕ್ ಮಾದರಿಯನ್ನ ಅನಾವರಣಗೊಳಿಸಿದ್ದು, ಹೊಸ ಸ್ಕಾರ್ಪಿಯೋ ಕ್ಲಾಸಿಕ್ ಮಾದರಿಯು ಪ್ರಮುಖ ಬದಲಾವಣೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿದೆ.

ಹೊಸ ಫೀಚರ್ಸ್ ಹೊಂದಿರುವ ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್ ಅನಾವರಣ

ಸ್ಕಾರ್ಪಿಯೋ-ಎನ್ ಮಾದರಿಯ ಸಂಪೂರ್ಣ ಹೊಸ ತಲೆಮಾರಿನ ಆವೃತ್ತಿಯಾಗಿದ್ದರೆ ಸ್ಕಾರ್ಪಿಯೋ ಕ್ಲಾಸಿಕ್ ಮಾದರಿಯು ಹಳೆಯ ತಲೆಮಾರಿನ ಆವೃತ್ತಿಯಾಗಿದ್ದು, ಸ್ಕಾರ್ಪಿಯೋ-ಎನ್ ಬಿಡುಗಡೆಯ ನಂತರ ಹಳೆಯ ಮಾದರಿಯಲ್ಲಿ ಹೊಸ ಬದಲಾವಣೆಗಾಗಿ ಸ್ಕಾರ್ಪಿಯೋ ಕ್ಲಾಸಿಕ್ ಪರಿಚಯಿಸುತ್ತಿದೆ.

ಹೊಸ ಫೀಚರ್ಸ್ ಹೊಂದಿರುವ ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್ ಅನಾವರಣ

ಹೊಸ ಸ್ಕಾರ್ಪಿಯೋ ಕ್ಲಾಸಿಕ್ ಬೆಲೆ ಮಾಹಿತಿಯು ಇದೇ ತಿಂಗಳು 20ರಂದು ಬಹಿರಂಗವಾಗಲಿದ್ದು, ಹೊಸ ಕಾರು ಕಾರು ಮಾದರಿಯು ಎಸ್ ಮತ್ತು ಎಸ್11 ವೆರಿಯೆಂಟ್‌ಗಳೊಂದಿಗೆ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ.

ಹೊಸ ಫೀಚರ್ಸ್ ಹೊಂದಿರುವ ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್ ಅನಾವರಣ

ಹೊಸ ಮಾದರಿಯಲ್ಲಿ 2.2 ಲೀಟರ್ ಎಂಹ್ವಾಕ್ ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದ್ದು, 132 ಬಿಎಚ್‌ಪಿ ಮತ್ತು 300 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಇದು ಹಳೆಯ ಮಾದರಿಯಲ್ಲಿ ಎಂಜಿನ್‌ಗಿಂತಲೂ 55 ಕೆ.ಜಿ ಕಡಿಮೆ ತೂಕದೊಂದಿಗೆ ಶೇ.14 ರಷ್ಟು ಉತ್ತಮ ಇಂಧನ ದಕ್ಷತೆ ಹೊಂದಿದೆ.

ಹೊಸ ಫೀಚರ್ಸ್ ಹೊಂದಿರುವ ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್ ಅನಾವರಣ

ಇದರೊಂದಿಗೆ ಹೊಸ ಮಾದರಿಯು ಈ ಹಿಂದಿನಂತೆ ಹೊರನೋಟ ಹೊಂದಿದ್ದರು ಕೆಲವು ಹೊಸ ಫೀಚರ್ಸ್‌ಗಳು ಕಾರಿನ ನೋಟಕ್ಕೆ ಮತ್ತಷ್ಟು ಮೆರಗು ನೀಡಲಿದ್ದು, ಮರುವಿನ್ಯಾಸಗೊಳಿಸಲಾದ ಸಿಕ್ಸ್ ಸ್ಲಾಟ್ ಫ್ರಂಟ್ ಗ್ರಿಲ್ ಮತ್ತು ಬಂಪರ್ ಜೊತೆ ಹೊಸ ಲೊಗೊ ಸಾಕಷ್ಟು ಆಕರ್ಷಕವಾಗಿದೆ.

ಹೊಸ ಫೀಚರ್ಸ್ ಹೊಂದಿರುವ ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್ ಅನಾವರಣ

ಮುಖ್ಯವಾಗಿ ಹೊಸ ಕಾರಿನಲ್ಲಿ ಈ ಬಾರಿ ಎಲ್ಇಡಿ ಐಬೋ ಜೊತೆಗೆ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್ ನೀಡಲಾಗಿದ್ದು, ಎಲ್ಇಡಿ ಡೇ ಟೈಮ್ ರನ್ನಿಂಗ್ ಲೈಟ್ ಸೇರಿದಂತೆ ಪ್ರಮುಖ ಬದಲಾವಣೆಗಳನ್ನು ನೀಡಲಾಗಿದೆ.

ಹೊಸ ಫೀಚರ್ಸ್ ಹೊಂದಿರುವ ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್ ಅನಾವರಣ

ಇದರೊಂದಿಗೆ ಹೊಸ ಕಾರಿನ ಮುಂಭಾಗದಲ್ಲಿ ಮತ್ತಷ್ಟು ಬದಲಾವಣೆಗಾಗಿ ಫಾಗ್ ಲ್ಯಾಂಪ್ ಹೌಸಿಂಗ್ ಸಹ ಬದಲಾವಣೆಗೊಳಿಸಲಾಗಿದ್ದು, ಡೈಮಂಡ್ ಕಟ್ ಹೊಂದಿರುವ 17 ಇಂಚಿನ ಅಲಾಯ್ ವ್ಹೀಲ್, ಡ್ಯುಯಲ್ ಟೋನ್ ಕ್ಲಾಡಿಂಗ್, ಹಿಂಬದಿಯಲ್ಲಿ ಸಿಗ್ನಿಚೆರ್ ಟವರ್ ವಿನ್ಯಾಸದ ಎಲ್‌ಇಡಿ ಟೈಲ್ ಲ್ಯಾಂಪ್ ನೀಡಲಾಗಿದೆ.

ಹೊಸ ಫೀಚರ್ಸ್ ಹೊಂದಿರುವ ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್ ಅನಾವರಣ

ಇನ್ನು ಹೊಸ ಕಾರು ಮಾದರಿಯ ಇಂಟಿರಿಯರ್ ವಿನ್ಯಾಸದ ಕುರಿತಾಗಿ ಮಾತನಾಡುವುದಾದರೇ ಸ್ಕಾರ್ಪಿಯೋ ಕ್ಲಾಸಿಕ್ ಹಳೆಯ ಮಾದರಿಗಿಂತ ಕೆಲವೇ ಕೆಲವು ಬದಲಾವಣೆಗಳನ್ನು ಪಡೆದುಕೊಂಡಿದ್ದು, ವುಡ್ ಟ್ರಿಮ್ ಹೊಂದಿರುವ ಸುಧಾರಿತ ಡ್ಯಾಶ್‌ಬೋರ್ಡ್‌, 9 ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ, ಲೆದರ್ ವ್ಯಾರ್ಪ್ ಹೊಂದಿರುವ ಸ್ಟೀರಿಂಗ್ ವ್ಹೀಲ್, ಬ್ಲ್ಯಾಕ್ ಮತ್ತು ಬ್ರಿಝ್ ಇಂಟಿರಿಯರ್ ಹೊಂದಿದೆ.

ಹೊಸ ಫೀಚರ್ಸ್ ಹೊಂದಿರುವ ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್ ಅನಾವರಣ

ಹೊಸ ಕಾರಿನಲ್ಲಿ ಕಂಪನಿಯು 7 ಸೀಟರ್ ಮತ್ತು 9 ಸೀಟರ್ ಸೌಲಭ್ಯದ ಆಯ್ಕೆ ನೀಡಲಾಗಿದ್ದು, ಮೂರನೇ ಸಾಲಿನಲ್ಲಿ ಬೆಂಚ್ ಆಸನ ಸೌಲಭ್ಯದೊಂದಿಗೆ 7 ಸೀಟರ್ ಮಾದರಿಯ ತುಸು ಹೆಚ್ಚಿನ ಸ್ಥಳವಾಕಾಶ ಹೊಂದಿದ್ದರೆ 9 ಸೀಟರ್ ಮಾದರಿಯ ಆಸನ ಸೌಲಭ್ಯವು ತುಸು ಇಕ್ಕಟ್ಟಾದ ಸ್ಥಳಾವಕಾಶ ಹೊಂದಿದೆ.

ಹೊಸ ಫೀಚರ್ಸ್ ಹೊಂದಿರುವ ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್ ಅನಾವರಣ

ಹೊಸ ಮಾದರಿಯಲ್ಲಿ ಈ ಹಿಂದಿನ ಮಾದರಿಯಲ್ಲಿ ಕೆಲವು ಫೀಚರ್ಸ್‌ಗಳೊಂದಿಗೆ ಕ್ರೂಸ್ ಕಂಟ್ರೋಲ್, ಎರಡನೇ ಸಾಲಿನ ಆಸನಗಳಿಗೆ ರಿಯರ್ ಎಸಿ ವೆಂಟ್ಸ್ ಮತ್ತು ಸುರಕ್ಷತೆಗಾಗಿ ಎರಡು ಮಾದರಿಯಲ್ಲೂ ಡ್ಯುಯಲ್ ಏರ್‌ಬ್ಯಾಗ್ ಸೌಲಭ್ಯವನ್ನು ಸೇರಿಸಲಾಗಿದೆ.

ಹೊಸ ಫೀಚರ್ಸ್ ಹೊಂದಿರುವ ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್ ಅನಾವರಣ

ಹಾಗೆಯೇ ಹೊಸ ಕಾರಿನಲ್ಲಿ ಡ್ಯುಯಲ್ ವಿಶ್ ಬೋನ್ ಸಸ್ಷೆಂಷನ್ ಹೊಂದಿರುವ ಹೊಸ ಲ್ಯಾಡರ್ ಫ್ರೇಮ್ ಚಾಸಿಸ್ ನೀಡಿರುವ ಕೂಡಾ ಕಾರಿನ ಬಾಡಿ ರೋಲ್ ಸಾಕಷ್ಟು ಸುಧಾರಿಸಿದ್ದು, ಹೈ ಸ್ಪೀಡ್‌ನಲ್ಲೂ ಕಾರನ್ನು ಅರಾಮವಾಗಿ ಹ್ಯಾಂಡಲ್ ಮಾಡಬಹುದಾಗಿದೆ.

Most Read Articles

Kannada
English summary
Mahindra scorpio classic unveiled in india specs features details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X