Just In
- 17 min ago ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- 43 min ago ಎಲೆಕ್ಟ್ರಿಕ್ ಅವತಾರದಲ್ಲಿ ಬರಲಿದೆ ಹೋಂಡಾ ಆಕ್ಟಿವಾ: ಎಲೆಕ್ಟ್ರಿಕ್ ಸ್ಕೂಟರ್ಗಳ ರಾಜ ಆಗುತ್ತಾ?
- 44 min ago ಪ್ರೇರಣಾತ್ಮಕ ಕಥೆ: ಮನೆ ಕೆಲಸದಾಕೆಗೆ 'ಸೈಕಲ್' ಖರೀದಿಸಲು ಸಹಾಯ ಮಾಡಿದ ಮಾಲೀಕ.. ವಿಡಿಯೋ ವೈರಲ್
- 2 hrs ago ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
Don't Miss!
- News ಬಿಎಂಟಿಸಿ & ನಮ್ಮ ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲಿ ದಿಢೀರ್ ಹೆಚ್ಚಳಕ್ಕೆ ಕಾರಣ ಏನು?-ಇಲ್ಲಿದೆ ಮಾಹಿತಿ
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Movies ನಿತೇಶ್ ತಿವಾರಿ 'ರಾಮಾಯಣ' ಚಿತ್ರದಲ್ಲಿ ರಣ್ಬೀರ್ ಅಲ್ಲ, ಯಶ್ ಹೀರೋ? ಏನಿದು ಟ್ವಿಸ್ಟ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಹೀಂದ್ರಾ ಸ್ಕಾರ್ಪಿಯೋ-ಎನ್ ಎಸ್ಯುವಿ ಮಾದರಿಯ ಮೈಲೇಜ್ ಮಾಹಿತಿ ಬಹಿರಂಗ
ಮಹೀಂದ್ರಾ ಕಂಪನಿಯು ಹೊಸ ಸ್ಕಾರ್ಪಿಯೋ-ಎನ್ ಎಸ್ಯವಿಯನ್ನು ಬಿಡುಗಡೆ ಮಾಡಿದ್ದು, ಹೊಸ ಕಾರು ವಿತರಣೆಗೂ ಮುನ್ನ ಕಾರಿನ ರಿಯಲ್ ವರ್ಲ್ಡ್ ಮೈಲೇಜ್ ಮಾಹಿತಿ ಬಹಿರಂಗವಾಗಿದೆ. ಹೊಸ ಕಾರು ಪೆಟ್ರೋಲ್ ಮತ್ತು ಡೀಸೆಲ್ ಎರಡು ಎಂಜಿನ್ ಆಯ್ಕೆಗಳಲ್ಲಿ ಲಭ್ಯವಿದ್ದು, ಹೊಸ ಕಾರಿನಲ್ಲಿ ಡೀಸೆಲ್ ಮಾದರಿಯು ಉತ್ತಮ ಇಂಧನ ದಕ್ಷತೆ ಹೊಂದಿದೆ.
ಹೊಸ ಕಾರು ಜೆಡ್2, ಜೆಡ್4, ಜೆಡ್6, ಜೆಡ್8 ಮತ್ತು ಜೆಡ್ಎಲ್ ವೆರಿಯೆಂಟ್ಗಳನ್ನು ಹೊಂದಿದ್ದು, ವಿವಿಧ ಎಂಜಿನ್ ಆಯ್ಕೆಗಳೊಂದಿಗೆ ಹೊಸ ಕಾರು ಎಕ್ಸ್ಶೋರೂಂ ಪ್ರಕಾರ ರೂ. 11.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 19.49 ಲಕ್ಷ ಬೆಲೆ ಹೊಂದಿದ್ದು, ಆಟೋಮ್ಯಾಟಿಕ್ ಆವೃತ್ತಿಗಳು ಮ್ಯಾನುವಲ್ ಮಾದರಿಳಿಂತಲೂ ತುಸು ಹೆಚ್ಚಿನ ಬೆಲೆ ಹೊಂದಿರಲಿವೆ.
ಮಹೀಂದ್ರಾ ಕಂಪನಿಯು ಹೊಸ ಕಾರಿನಲ್ಲಿ ಗ್ರಾಹಕರ ಬೇಡಿಕೆಯೆಂತೆ 6 ಸೀಟರ್ ಮತ್ತು 7 ಸೀಟರ್ ಸೌಲಭ್ಯದೊಂದಿಗೆ 2.2 ಲೀಟರ್ ಡೀಸೆಲ್ ಮತ್ತು 2.0 ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆ ನೀಡಿದ್ದು, ಹೊಸ ಕಾರಿನ ವಿವಿಧ ಮಾದರಿಗಳಿಗೆ ಅನುಗುಣವಾಗಿ ಹಲವಾರು ಡ್ರೈವ್ ಮೋಡ್ ಪಡೆದುಕೊಳ್ಳಬಹುದಾಗಿದೆ.
ಸ್ಕಾರ್ಪಿಯೋ-ಎನ್ ಮಾದರಿಯು ಆನ್ ರೋಡ್ನಲ್ಲಿ ಮಾತ್ರವಲ್ಲ ಆಫ್ ರೋಡ್ನಲ್ಲೂ ಗಮನಸೆಳೆಯಲಿದ್ದು, 2.0-ಲೀಟರ್ ಪೆಟ್ರೋಲ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್ಬಾಕ್ಸ್ ಆಯ್ಕೆಯನ್ನು ಮತ್ತು 2.2 ಲೀಟರ್ ಡೀಸೆಲ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್ಬಾಕ್ಸ್ ಆಯ್ಕೆಯೊಂದಿಗೆ ಎರಡು ರೀತಿಯ ಪರ್ಫಾಮೆನ್ಸ್ ಆಯ್ಕೆಗಳನ್ನು ಹೊಂದಿದೆ.
ಪೆಟ್ರೋಲ್ ಮ್ಯಾನುವಲ್ ಮಾದರಿಯು 203-ಬಿಎಚ್ಪಿ ಮತ್ತು 370-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದಲ್ಲಿ ಆಟೋಮ್ಯಾಟಿಕ್ ಮಾದರಿಯು 203-ಬಿಎಚ್ಪಿ ಮತ್ತು 380-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ. ಹಾಗೆಯೇ ಡೀಸೆಲ್ ಆರಂಭಿಕ ಮಾದರಿಯು ಮ್ಯಾನುವಲ್ ಆಯ್ಕೆಯೊಂದಿಗೆ 132 ಬಿಎಚ್ಪಿ ಮತ್ತು 300 ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ ಹೈ ಎಂಡ್ ಮಾದರಿಯು ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಮಾದರಿಯೊಂದಿಗೆ 175 ಬಿಎಚ್ಪಿ ಮತ್ತು 370 ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿವೆ.
ಈ ಮೂಲಕ ಹೊಸ ಕಾರು ಉತ್ತಮ ಇಂಧನ ದಕ್ಷತೆ ಹೊಂದಿದ್ದು, ಹೊಸ ಕಾರಿನ 2.2 ಲೀಟರ್ ಡೀಸೆಲ್ ಮಾದರಿಯು ಪ್ರತಿ ಲೀಟರ್ಗೆ ನಗರ ಪ್ರದೇಶದಲ್ಲಿ 12.16 ಕಿ.ಮೀ ನಿಂದ 12.80 ಕಿ.ಮೀ ಮೈಲೇಜ್ ನೀಡಿದರೆ ಹೆದ್ದಾರಿಗಳಲ್ಲಿ ಇದೇ ಮಾದರಿಯು ಪ್ರತಿ ಲೀಟರ್ಗೆ 14.64 ಕಿ.ಮೀ ನಿಂದ 15.50 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.
2.0 ಲೀಟರ್ ಪೆಟ್ರೋಲ್ ಮಾದರಿಯು ಪ್ರತಿ ಲೀಟರ್ಗೆ ನಗರದಲ್ಲಿ 7.9 ಕಿ.ಮೀ ನಿಂದ 8.50 ಕಿ.ಮೀ ತನಕ ಮೈಲೇಜ್ ನೀಡಿದಲ್ಲಿ ಹೆದ್ದಾರಿಗಳಲ್ಲಿ ಇದರ ಮೈಲೇಜ್ ಪ್ರಮಾಣವು ಪ್ರತಿ ಲೀಟರ್ಗೆ 8.50 ಕಿ.ಮೀ ನಿಂದ 9.40 ಕಿಮೀ ಮೈಲೇಜ್ ಹಿಂದಿರುಗಿಸಲಿದೆ ಎನ್ನಲಾಗಿದೆ.
ಹಾಗೆಯೇ ಹೊಸ ಸ್ಕಾರ್ಪಿಯೊ-ಎನ್ ಮಾದರಿಯನ್ನು ಅದರ ಹಿಂದಿನ ಸ್ಕಾರ್ಪಿಯೊಗಿಂತಲೂ ಹೆಚ್ಚಿನ ವೈಶಿಷ್ಟ್ಯಗಳೊಂದಿಗೆ ಬಿಡುಗಡೆ ಮಾಡಲಾಗಿದ್ದು, ಜುಲೈ 30ರಿಂದ ಹೊಸ ಕಾರಿನ ಬುಕಿಂಗ್ ಪ್ರಕ್ರಿಯೆ ಆರಂಭವಾಗಲಿದೆ.
ಇದರೊಂದಿಗೆ ಮಹೀಂದ್ರಾ ಕಂಪನಿಯು ಹೊಸ ಕಾರು ಮಾದರಿಯನ್ನು ಈ ಹಿಂದಿಗಿಂತಲೂ ಹೆಚ್ಚಿನ ಮಟ್ಟದ ತಾಂತ್ರಿಕ ಅಂಶಗಳೊಂದಿಗೆ ಅಭಿವೃದ್ದಿಗೊಳಿಸಿದ್ದು, ಕಾರಿನ ಮುಂಭಾಗದಲ್ಲಿ ಮಹೀಂದ್ರಾ ಸಾಂಪ್ರದಾಯಿಕ ಸಿಕ್ಸ್ ಸ್ಲಾಟ್ ಫ್ರಂಟ್ ಗ್ರಿಲ್ ಜೊತೆಗೆ ಎಲ್ಇಡಿ ಪ್ರೊಜೆಕ್ಟರ್ ಹೆಡ್ಲ್ಯಾಂಪ್, ಸ್ಕಾರ್ಪಿಯನ್ ಟೈಲ್ ಶೇಪ್ ಹೊಂದಿರುವ ಡಿಆರ್ಎಲ್ಎಸ್ ಮತ್ತು ಫಾಗ್ ಲ್ಯಾಂಪ್ ಹೊಂದಿದೆ.
ಹೊಸ ಸ್ಕಾರ್ಪಿಯೋ-ಎನ್ ಮಾದರಿಯಲ್ಲಿ ಸಿ ಮತ್ತು ಡಿ-ಪಿಲ್ಲರ್ ಪ್ರದೇಶಗಳಲ್ಲಿ ವಿಂಡೋ ಕ್ರೋಮ್ ಫ್ರೇಮ್ನಲ್ಲಿ ಸ್ಕಾರ್ಪಿಯನ್ ಸ್ಟಿಂಗ್ ಅಂಶವನ್ನು ಸಹ ಹೊಂದಿದೆ. ಜೊತೆಗೆ ಹೊಸ ಸ್ಕಾರ್ಪಿಯೋ-ಎನ್ನಲ್ಲಿ ಹೊಸ ಡ್ಯುಯಲ್-ಟೋನ್ ಮಿಶ್ರಲೋಹದ 18 ಇಂಚಿನ ಚಕ್ರಗಳನ್ನು ನೀಡಲಾಗಿದ್ದು, ಲಂಬವಾಗಿ ಜೋಡಿಸಲಾದ ಎಲ್ಇಡಿ ಟೈಲ್ಲೈಟ್ಗಳು ಮತ್ತು ಸ್ಪಾಯ್ಲರ್ ಅನ್ನು ಹೊಂದಿದೆ.
ಸ್ಕಾರ್ಪಿಯೋ-ಎನ್ ಮಧ್ಯಂತರ ವೆರಿಯೆಂಟ್ ನಂತರದಲ್ಲಿ ಲಭ್ಯವಾಗುವಂತೆ ಸನ್ರೂಫ್, ಎಲೆಕ್ಟ್ರಿಕಲ್ ಫೋಲ್ಡಿಂಗ್ ರಿಯರ್ ವ್ಯೂ ಮಿರರ್ಗಳು ಮತ್ತು ಶಾರ್ಕ್-ಫಿನ್ ಆಂಟೆನಾವನ್ನು ಸಹ ಒಳಗೊಂಡಿದ್ದು, ಹೊಸ ಕಾರಿನಲ್ಲಿ ಹೊರಭಾಗದಂತೆ ಒಳಭಾಗದಲ್ಲೂ ಸಾಕಷ್ಟು ಬದಲಾವಣೆ ತರಲಾಗಿದೆ.
ಹೊಸ ಕಾರಿನ ಒಳಪ್ರವೇಶಸುತ್ತಿದ್ದಂತೆ ಡ್ಯುಯಲ್-ಟೋನ್ ಡ್ಯಾಶ್ಬೋರ್ಡ್ ಮತ್ತು ಮೆಟಲ್-ಫಿನಿಶ್ಡ್ ಡ್ಯುಯಲ್ ರೈಲ್ಗಳೊಂದಿಗೆ ಆಕರ್ಷಕವಾದ ಸೆಂಟರ್ ಕನ್ಸೋಲ್ ಗಮನಸೆಳೆಯಲಿದ್ದು, ರಿಚ್ ಕಾಫಿ ಬ್ಲ್ಯಾಕ್ ಲೆದರ್ ಆಸನಗಳು, 6 ಹಂತಗಳಲ್ಲಿ ಹೊಂದಾಣಿಕೆ ಮಾಡಬಹುದಾದ ಡ್ರೈವರ್ ಸೀಟ್ ಎರಡನೇ ಸಾಲಿನಲ್ಲಿ ಕ್ಯಾಪ್ಟನ್ ಆಸನಗಳನ್ನು ಸಹ ಒಳಗೊಂಡಿವೆ.
ಇದರೊಂದಿಗೆ ಹೊಸ ಕಾರಿನಲ್ಲಿ 8-ಇಂಚಿನ ಟಚ್ಸ್ಕ್ರೀನ್ ಇನ್ಪೋಟೈನ್ಮೆಂಟ್ ಸಿಸ್ಟಂ, 70ಕ್ಕೂ ಹೆಚ್ಚು ಕಾರ್ ಕನೆಕ್ಟ್ ಫೀಚರ್ಸ್, ಅಂಡ್ರಾಯಿಡ್ ಆಟೋ ಮತ್ತು ಆಟೋ ಕಾರ್ಪ್ಲೇ, ಅಮೆಜಾನ್ ಅಲೆಕ್ಸಾ ವಾಯ್ಸ್ ಸರ್ಪೊಟ್, 3ಡಿ ಸೊನಿ ಸರೌಂಡ್ ಸೌಂಡ್ ಸಿಸ್ಟಂ ಮತ್ತು ವಾಯ್ಸ್ ಕಮಾಂಡ್ ಫೀಚರ್ಸ್ ಹೊಂದಿದೆ.
ಜೊತೆಗೆ ಹೊಸ ಕಾರಿನಲ್ಲಿ ಡ್ಯುಯಲ್-ಜೋನ್ ಸ್ವಯಂಚಾಲಿತ ಹವಾಮಾನ ನಿಯಂತ್ರಣ, ಮುಂಭಾಗ ಮತ್ತು ಹಿಂಭಾಗದಲ್ಲಿ ಕ್ಯಾಮೆರಾಗಳು ಮತ್ತು ಸ್ಮಾರ್ಟ್ಫೋನ್ಗಾಗಿ ವೈರ್ಲೆಸ್ ಚಾರ್ಜರ್ನಂತಹ ವೈಶಿಷ್ಟ್ಯಗಳನ್ನು ಹೊಂದಿರಲಿದ್ದು, ಸುರಕ್ಷತೆಗಾಗಿ 6 ಏರ್ಬ್ಯಾಗ್ಗಳು, ಇಬಿಡಿ ಜೊತೆಗೆ ಎಬಿಎಸ್, ಇಎಸ್ಇ, ಟ್ರಾಕ್ಷನ್ ಕಂಟ್ರೋಲ್, ಹಿಲ್ ಹೋಲ್ಡ್ ಕಂಟ್ರೋಲ್, ಹಿಲ್ ಡಿಸೆಂಟ್ ಕಂಟ್ರೋಲ್, ಐಸೋಫಿಕ್ಸ್ ಆಂಕರ್ ಪಾಯಿಂಟ್ಗಳು ಮತ್ತು ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್ ಸೇರಿದಂತೆ ಹಲವಾರು ಫೀಚರ್ಸ್ಗಳಿವೆ.