Just In
- 18 min ago
ಎಸ್ಬಿಐ ಜೊತೆಗೂಡಿ ಇವಿ ಕಾರುಗಳಿಗಾಗಿ ವಿಶೇಷ ಸಾಲ ಸೌಲಭ್ಯ ಘೋಷಣೆ ಮಾಡಿದ ಟಾಟಾ ಮೋಟಾರ್ಸ್
- 14 hrs ago
ವ್ಯಾಗನ್ಆರ್ ಕಾರಿಗೆ ಸೆಡ್ಡು ಹೊಡೆಯಲಿದೆ 2022ರ ಕಿಯಾ ರೇ ಫೇಸ್ಲಿಫ್ಟ್
- 14 hrs ago
ಜುಲೈ ಎಲೆಕ್ಟ್ರಿಕ್ ಕಾರುಗಳ ನೋಂದಣಿಯಲ್ಲಿ ಶೇ 3.5 ರಷ್ಟು ಏರಿಕೆ: ಶೇ 90 ರಷ್ಟು ಪಾಲು ಟಾಟಾಗೆ
- 15 hrs ago
30.9 ಕಿ.ಮೀ ಮೈಲೇಜ್ನೊಂದಿಗೆ ಮಾರುತಿ ಸ್ವಿಫ್ಟ್ ಸಿಎನ್ಜಿ ಕಾರು ಬಿಡುಗಡೆ
Don't Miss!
- News
ಸ್ವಾತಂತ್ರ್ಯ ದಿನಾಚರಣೆ: ಜನ ಸೇರದಂತೆ ತಡೆಯಲು ಕೇಂದ್ರ ರಾಜ್ಯಗಳಿಗೆ ಸೂಚನೆ
- Sports
Asia Cup 2022: ಭಾರತ vs ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯದಲ್ಲಿ ಈ ತಂಡ ಗೆಲ್ಲಲಿದೆ; ರಿಕಿ ಪಾಂಟಿಂಗ್
- Lifestyle
Today Rashi Bhavishya: ಶನಿವಾರದ ದಿನ ಭವಿಷ್ಯ: ತುಲಾ, ಮೇಷ, ಮಕರ, ಕುಂಭ ರಾಶಿಯ ವ್ಯಾಪಾರಸ್ಥರಿಗೆ ಶುಭ ದಿನ
- Movies
ಅತ್ತ ಪೊಲೀಸ್, ಇತ್ತ ರೌಡಿ ಇಬ್ಬರನ್ನೂ ಎದುರಿಸುತ್ತಿರುವ ಕಂಠಿ!
- Finance
ಕ್ರಿಪ್ಟೋ ವಹಿವಾಟು: 370 ಕೋಟಿ ರೂಪಾಯಿ ಜಪ್ತಿ ಮಾಡಿದ ಇಡಿ
- Technology
ರೆಡ್ಮಿ K50 ಅಲ್ಟ್ರಾ ಮತ್ತು ಶಿಯೋಮಿ ಪ್ಯಾಡ್ 5 ಪ್ರೊ 12.4 ಬಿಡುಗಡೆ! ವಿಶೇಷತೆ ಏನು?
- Travel
75ನೇ ಸ್ವಾತೊಂತ್ರೋತ್ಸವವನ್ನು ಸ್ಮರಿಸುತ್ತಾ ಸ್ವಾತಂತ್ರ್ಯ ಹೋರಾಟದೊಡನೆ ಸಂಬಂಧವಿರುವ ಭಾರತದ ಈ ಸ್ಮಾರಕಗಳು
- Education
CAT 2022 Preparation Tips : ಕ್ಯಾಟ್ ಪರೀಕ್ಷೆಗೆ ಸಿದ್ಧತೆ ನಡೆಸಲು ಸಲಹೆಗಳು ಇಲ್ಲಿವೆ
ಡೀಲರ್ಸ್ ಯಾರ್ಡ್ ತಲುಪಿದ ಹೊಸ ಮಹೀಂದ್ರಾ ಸ್ಕಾರ್ಪಿಯೋ-ಎನ್ ಎಸ್‌ಯುವಿ
ಹೊಸ ಸ್ಕಾರ್ಪಿಯೋ-ಎನ್ ಎಸ್‌ಯುವಿ ಮಾದರಿಯನ್ನು ಬಿಡುಗಡೆ ಮಾಡಿರುವ ಮಹೀಂದ್ರಾ ಕಂಪನಿಯು ವಿತರಣೆಗೆ ಸಜ್ಜುಗೊಳ್ಳುತ್ತಿದ್ದು, ಹೊಸ ಕಾರನ್ನು ಕಂಪನಿಯು ತನ್ನ ಪ್ರಮುಖ ಡೀಲರ್ಸ್‌ಗಳಲ್ಲಿ ಸ್ಟಾಕ್ ಮಾಡುತ್ತಿದೆ.

ಹೊಸ ಕಾರು ಬಿಡುಗಡೆ ಮಾಡಿರುವ ಮಹೀಂದ್ರಾ ಕಂಪನಿಯು ಜುಲೈ 30ರಿಂದ ಅಧಿಕೃತ ಬುಕಿಂಗ್ ಆರಂಭಿಸುವುದುದಾಗಿ ಹೇಳಿಕೊಂಡಿದ್ದು, ಹೊಸ ಕಾರಿನ ವಿತರಣೆಯು ಅಗಸ್ಟ್ ಕೊನೆಯಲ್ಲಿ ಇಲ್ಲವೇ ಸೆಪ್ಟೆಂಬರ್ ಆರಂಭದಲ್ಲಿ ಪ್ರರಾಂಭಗೊಳ್ಳಲಿದೆ. ಹೊಸ ಕಾರಿನ ಉತ್ಪಾದನೆ ಅಗತ್ಯವಾದ ಸೆಮಿಕಂಡಕ್ಟರ್ ಕೊರತಯಿರುವುದರಿಂದ ಹೊಸ ಕಾರಿನ ವಿತರಣೆಯಲ್ಲಿ ವಿಳಂಬ ಮಾಡುತ್ತಿರುವ ಮಹೀಂದ್ರಾ ಕಂಪನಿಯು ಹೊಸ ಕಾರನ್ನು ಬಿಡುಗಡೆ ಮಾಡಿದ್ದರೂ ಬುಕಿಂಗ್ ಪ್ರಕ್ರಿಯೆಯನ್ನು ಒಂದು ತಿಂಗಳ ನಂತರ ಆರಂಭಿಸುತ್ತಿದೆ.

ಇದರ ಜೊತೆಗೆ ಹೊಸ ಕಾರಿನಲ್ಲಿ ಮಹೀಂದ್ರಾ ಕಂಪನಿಯು ಪೆಟ್ರೋಲ್ ಮತ್ತು ಡೀಸೆಲ್‌ಗಳಲ್ಲಿ ಮ್ಯಾನುವಲ್ ಆವೃತ್ತಿಗಳ ಬೆಲೆ ಮಾತ್ರ ಬಹಿರಂಗಪಡಿಸಿದ್ದು, ಆಟೋಮ್ಯಾಟಿಕ್ ಆವೃತ್ತಿಯ ಬೆಲೆಯನ್ನು ಜುಲೈ 30 ರಂದು ಮಾಹಿತಿ ಬಹಿರಂಗಪಡಿಸಲಿದೆ.

ಸ್ಕಾರ್ಪಿಯೋ-ಎನ್ ಮ್ಯಾನುವಲ್ ಮಾದರಿಗಳು ಎಕ್ಸ್‌ಶೋರೂಂ ಪ್ರಕಾರ ರೂ. 11.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 19.49 ಲಕ್ಷ ಬೆಲೆ ಹೊಂದಿದ್ದು, ಆಟೋಮ್ಯಾಟಿಕ್ ಆವೃತ್ತಿಗಳು ಮ್ಯಾನುವಲ್ ಮಾದರಿಳಿಂತ ತುಸು ಹೆಚ್ಚಿನ ಬೆಲೆ ಹೊಂದಿರಲಿವೆ.

ಸ್ಕಾರ್ಪಿಯೋ-ಎನ್ ಹೊಸ ಮಾದರಿಯೊಂದಿಗೆ ಫುಲ್ ಸೈಜ್ ಎಸ್‌ಯುವಿ ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡಲು ಸಿದ್ದವಾಗುತ್ತಿರುವ ಮಹೀಂದ್ರಾ ಕಂಪನಿಯು ಆಟೋಮ್ಯಾಟಿಕ್ ಮಾದರಿಗಳ ಬೆಲೆಯಲ್ಲೂ ಗ್ರಾಹಕರಿಗೆ ಮತ್ತೊಂದು ಸರ್ಪ್ರೈಸ್ ನೀಡುವ ಭರವಸೆ ನೀಡಿದೆ. ಹೀಗಾಗಿ ಹೊಸ ಎಸ್‌ಯುವಿಯಲ್ಲಿ ಡೀಸೆಲ್ ಆಟೋಮ್ಯಾಟಿಕ್ ಮತ್ತು ಪೆಟ್ರೋಲ್ ಆಟೋಮ್ಯಾಟಿಕ್ ಬಯಸುವ ಗ್ರಾಹಕರಿಗೆ ಅತ್ಯುತ್ತಮ ಆಯ್ಕೆಗಳು ಲಭ್ಯವಿರಲಿದ್ದು, ಇದಕ್ಕಾಗಿ ಜುಲೈ 30ರ ತನಕ ಕಾಯಲೇಬೇಕಾಗುತ್ತದೆ.

ಈ ಹಿಂದಿನ ಸ್ಕಾರ್ಪಿಯೋ ಮಾದರಿಯನ್ನೇ ಮಹೀಂದ್ರಾ ಇದೀಗ ಬಹುದೊಡ್ಡ ಬದಲಾವಣೆಯೊಂದಿಗೆ ಸ್ಕಾರ್ಪಿಯೋ-ಎನ್ ಹೆಸರಿನಲ್ಲಿ ಬಿಡುಗಡೆ ಮಾಡಿದ್ದು, ವಿವಿಧ ಎಂಜಿನ್ ಆಯ್ಕೆಗಳಿಗೆ ಅನುಗುಣವಾಗಿ ಹೊಸ ಕಾರು ಜೆಡ್2, ಜೆಡ್4, ಜೆಡ್6, ಜೆಡ್8 ಮತ್ತು ಜೆಡ್ಎಲ್ ವೆರಿಯೆಂಟ್‌ಗಳನ್ನು ಹೊಂದಿದೆ.

ಹೊಸ ಕಾರು ಗ್ರಾಹಕರ ಬೇಡಿಕೆಯೆಂತೆ 6 ಸೀಟರ್ ಮತ್ತು 7 ಸೀಟರ್ ಸೌಲಭ್ಯದೊಂದಿಗೆ 2.2 ಲೀಟರ್ ಡೀಸೆಲ್ ಮತ್ತು 2.0 ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿದ್ದು, ಹೊಸ ಕಾರಿನ ವಿವಿಧ ಮಾದರಿಗಳಿಗೆ ಅನುಗುಣವಾಗಿ ಹಲವಾರು ಡ್ರೈವ್ ಮೋಡ್ ಪಡೆದುಕೊಳ್ಳಬಹುದಾಗಿದೆ.

ಸ್ಕಾರ್ಪಿಯೋ-ಎನ್ ಮಾದರಿಯು ಆನ್ ರೋಡ್‌ನಲ್ಲಿ ಮಾತ್ರ ಆಫ್ ರೋಡ್‌ನಲ್ಲೂ ಗಮನಸೆಳೆಯಲಿದ್ದು, 2.0-ಲೀಟರ್ ಪೆಟ್ರೋಲ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ಮತ್ತು 2.2 ಲೀಟರ್ ಡೀಸೆಲ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ ಎರಡು ರೀತಿಯ ಪರ್ಫಾಮೆನ್ಸ್ ಆಯ್ಕೆಗಳನ್ನು ಹೊಂದಿದೆ.

ಪೆಟ್ರೋಲ್ ಮ್ಯಾನುವಲ್ ಮಾದರಿಯು 203-ಬಿಎಚ್‌ಪಿ ಮತ್ತು 370-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದಲ್ಲಿ ಆಟೋಮ್ಯಾಟಿಕ್ ಮಾದರಿಯು 203-ಬಿಎಚ್‌ಪಿ ಮತ್ತು 380-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ. ಹಾಗೆಯೇ ಡೀಸೆಲ್ ಆರಂಭಿಕ ಮಾದರಿಯು ಮ್ಯಾನುವಲ್ ಆಯ್ಕೆಯೊಂದಿಗೆ 132 ಬಿಎಚ್‌ಪಿ ಮತ್ತು 300 ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ ಹೈ ಎಂಡ್ ಮಾದರಿಯು ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಮಾದರಿಯೊಂದಿಗೆ 175 ಬಿಎಚ್‌ಪಿ ಮತ್ತು 370 ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿವೆ.

ಇದರೊಂದಿಗೆ ಮಹೀಂದ್ರಾ ಕಂಪನಿಯು ಹೊಸ ಕಾರು ಮಾದರಿಯನ್ನು ಈ ಹಿಂದಿಗಿಂತಲೂ ಹೆಚ್ಚಿನ ಮಟ್ಟದ ತಾಂತ್ರಿಕ ಅಂಶಗಳೊಂದಿಗೆ ಅಭಿವೃದ್ದಿಗೊಳಿಸಿದ್ದು, ಕಾರಿನ ಮುಂಭಾಗದಲ್ಲಿ ಮಹೀಂದ್ರಾ ಸಾಂಪ್ರದಾಯಿಕ ಸಿಕ್ಸ್ ಸ್ಲಾಟ್ ಫ್ರಂಟ್ ಗ್ರಿಲ್ ಜೊತೆಗೆ ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್, ಸ್ಕಾರ್ಪಿಯನ್ ಟೈಲ್ ಶೇಪ್ ಹೊಂದಿರುವ ಡಿಆರ್‌ಎಲ್ಎಸ್ ಮತ್ತು ಫಾಗ್ ಲ್ಯಾಂಪ್ ಹೊಂದಿದೆ.

ಹೊಸ ಸ್ಕಾರ್ಪಿಯೋ-ಎನ್ ಮಾದರಿಯಲ್ಲಿ ಸಿ ಮತ್ತು ಡಿ-ಪಿಲ್ಲರ್ ಪ್ರದೇಶಗಳಲ್ಲಿ ವಿಂಡೋ ಕ್ರೋಮ್ ಫ್ರೇಮ್‌ನಲ್ಲಿ ಸ್ಕಾರ್ಪಿಯನ್ ಸ್ಟಿಂಗ್ ಅಂಶವನ್ನು ಸಹ ಹೊಂದಿದೆ. ಜೊತೆಗೆ ಹೊಸ ಸ್ಕಾರ್ಪಿಯೋ-ಎನ್‌ನಲ್ಲಿ ಹೊಸ ಡ್ಯುಯಲ್-ಟೋನ್ ಮಿಶ್ರಲೋಹದ 18 ಇಂಚಿನ ಚಕ್ರಗಳನ್ನು ನೀಡಲಾಗಿದ್ದು, ಲಂಬವಾಗಿ ಜೋಡಿಸಲಾದ ಎಲ್ಇಡಿ ಟೈಲ್‌ಲೈಟ್‌ಗಳು ಮತ್ತು ಸ್ಪಾಯ್ಲರ್ ಅನ್ನು ಹೊಂದಿದೆ.

ಹೊಸ ಸ್ಕಾರ್ಪಿಯೋ-ಎನ್ ಮಾದರಿಯಲ್ಲಿ ಸಿ ಮತ್ತು ಡಿ-ಪಿಲ್ಲರ್ ಪ್ರದೇಶಗಳಲ್ಲಿ ವಿಂಡೋ ಕ್ರೋಮ್ ಫ್ರೇಮ್‌ನಲ್ಲಿ ಸ್ಕಾರ್ಪಿಯನ್ ಸ್ಟಿಂಗ್ ಅಂಶವನ್ನು ಸಹ ಹೊಂದಿದೆ. ಜೊತೆಗೆ ಹೊಸ ಸ್ಕಾರ್ಪಿಯೋ-ಎನ್‌ನಲ್ಲಿ ಹೊಸ ಡ್ಯುಯಲ್-ಟೋನ್ ಮಿಶ್ರಲೋಹದ 18 ಇಂಚಿನ ಚಕ್ರಗಳನ್ನು ನೀಡಲಾಗಿದ್ದು, ಲಂಬವಾಗಿ ಜೋಡಿಸಲಾದ ಎಲ್ಇಡಿ ಟೈಲ್‌ಲೈಟ್‌ಗಳು ಮತ್ತು ಸ್ಪಾಯ್ಲರ್ ಅನ್ನು ಹೊಂದಿದೆ.

ಸ್ಕಾರ್ಪಿಯೋ-ಎನ್ ಮಧ್ಯಂತರ ವೆರಿಯೆಂಟ್ ನಂತರದಲ್ಲಿ ಲಭ್ಯವಾಗುವಂತೆ ಸನ್‌ರೂಫ್, ಎಲೆಕ್ಟ್ರಿಕಲ್ ಫೋಲ್ಡಿಂಗ್ ರಿಯರ್ ವ್ಯೂ ಮಿರರ್‌ಗಳು ಮತ್ತು ಶಾರ್ಕ್-ಫಿನ್ ಆಂಟೆನಾವನ್ನು ಸಹ ಒಳಗೊಂಡಿದ್ದು, ಹೊಸ ಕಾರಿನಲ್ಲಿ ಹೊರಭಾಗದಂತೆ ಒಳಭಾಗದಲ್ಲೂ ಸಾಕಷ್ಟು ಬದಲಾವಣೆ ತರಲಾಗಿದೆ.

ಹೊಸ ಕಾರಿನ ಒಳಪ್ರವೇಶಸುತ್ತಿದ್ದಂತೆ ಡ್ಯುಯಲ್-ಟೋನ್ ಡ್ಯಾಶ್‌ಬೋರ್ಡ್ ಮತ್ತು ಮೆಟಲ್-ಫಿನಿಶ್ಡ್ ಡ್ಯುಯಲ್ ರೈಲ್‌ಗಳೊಂದಿಗೆ ಆಕರ್ಷಕವಾದ ಸೆಂಟರ್ ಕನ್ಸೋಲ್ ಗಮನಸೆಳೆಯಲಿದ್ದು, ರಿಚ್ ಕಾಫಿ ಬ್ಲ್ಯಾಕ್ ಲೆದರ್ ಆಸನಗಳು, 6 ಹಂತಗಳಲ್ಲಿ ಹೊಂದಾಣಿಕೆ ಮಾಡಬಹುದಾದ ಡ್ರೈವರ್ ಸೀಟ್ ಎರಡನೇ ಸಾಲಿನಲ್ಲಿ ಕ್ಯಾಪ್ಟನ್ ಆಸನಗಳನ್ನು ಸಹ ಒಳಗೊಂಡಿವೆ.

ಇದರೊಂದಿಗೆ ಹೊಸ ಕಾರಿನಲ್ಲಿ 8-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, 70ಕ್ಕೂ ಹೆಚ್ಚು ಕಾರ್ ಕನೆಕ್ಟ್ ಫೀಚರ್ಸ್, ಅಂಡ್ರಾಯಿಡ್ ಆಟೋ ಮತ್ತು ಆಟೋ ಕಾರ್‌ಪ್ಲೇ, ಅಮೆಜಾನ್ ಅಲೆಕ್ಸಾ ವಾಯ್ಸ್ ಸರ್ಪೊಟ್, 3ಡಿ ಸೊನಿ ಸರೌಂಡ್ ಸೌಂಡ್ ಸಿಸ್ಟಂ ಮತ್ತು ವಾಯ್ಸ್ ಕಮಾಂಡ್ ಫೀಚರ್ಸ್ ಹೊಂದಿದೆ.

ಜೊತೆಗೆ ಹೊಸ ಕಾರಿನಲ್ಲಿ ಡ್ಯುಯಲ್-ಜೋನ್ ಸ್ವಯಂಚಾಲಿತ ಹವಾಮಾನ ನಿಯಂತ್ರಣ, ಮುಂಭಾಗ ಮತ್ತು ಹಿಂಭಾಗದಲ್ಲಿ ಕ್ಯಾಮೆರಾಗಳು ಮತ್ತು ಸ್ಮಾರ್ಟ್‌ಫೋನ್‌ಗಾಗಿ ವೈರ್‌ಲೆಸ್ ಚಾರ್ಜರ್‌ನಂತಹ ವೈಶಿಷ್ಟ್ಯಗಳನ್ನು ಹೊಂದಿರಲಿದ್ದು, ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ಇಬಿಡಿ ಜೊತೆಗೆ ಎಬಿಎಸ್, ಇಎಸ್ಇ, ಟ್ರಾಕ್ಷನ್ ಕಂಟ್ರೋಲ್, ಹಿಲ್ ಹೋಲ್ಡ್ ಕಂಟ್ರೋಲ್, ಹಿಲ್ ಡಿಸೆಂಟ್ ಕಂಟ್ರೋಲ್, ಐಸೋಫಿಕ್ಸ್ ಆಂಕರ್ ಪಾಯಿಂಟ್‌ಗಳು ಮತ್ತು ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್ ಸೇರಿದಂತೆ ಹಲವಾರು ಫೀಚರ್ಸ್‌ಗಳಿವೆ.