Just In
- 1 hr ago Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- 2 hrs ago ಈ ಬೈಕ್ಗಳನ್ನು ಗ್ರಾಹಕರು ಮುಗಿಬಿದ್ದು ಖರೀದಿಸುತ್ತಿದ್ದಾಗಲೇ ಬೆಲೆ ಏರಿಕೆ ಮಾಡಿ ಶಾಕ್ ಕೊಟ್ಟ ಟ್ರಯಂಫ್
- 3 hrs ago ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
- 4 hrs ago ಯುವಕರಿಗೆ ಸಿಹಿಸುದ್ದಿ: ಕೈಗೆಟುಕುವ ಬೆಲೆ, ಮಾಸ್ ಲುಕ್ನಲ್ಲಿ ಬರುತ್ತಿದೆ ಹೊಸ ಬಜಾಜ್ ಪಲ್ಸರ್ 400 ಬೈಕ್
Don't Miss!
- News ಮಳೆ.. ಮಳೆ.. ಮುಂದಿನ 24 ಗಂಟೆಯಲ್ಲಿ ಭರ್ಜರಿ ಮಳೆ!
- Sports IPL 2024: ಚಹಾಲ್ ಬಿಟ್ಟುಕೊಟ್ಟಿದರ ಬಗ್ಗೆ ಕಾರಣ ತಿಳಿಸಿದ ಆರ್ಸಿಬಿ ಮಾಜಿ ನಿರ್ದೇಶಕ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Lifestyle ಮೊಬೈಲ್ ಬೇಡ..ಗ್ಯಾಜೆಟ್ ಬೇಡ..ಹಸ್ತದಿಂದ ಪೇಮೆಂಟ್ ಮಾಡಿ..! ಇದು ಟಿಜಿಟಲ್ ಕ್ರಾಂತಿ..!
- Movies ಇವತ್ತು ಐಪಿಎಲ್.. ನಾಳೆ ಚುನಾವಣೆ .. ನಾಡಿದ್ದು ವರ್ಲ್ಡ್ ಕಪ್ ; ಇನ್ಯಾವಾಗ ರಿಲೀಸ್ ಮಾಡ್ತೀರಾ..?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸ್ಕಾರ್ಪಿಯೋ-ಎನ್ ಎಸ್ಯುವಿ ವಿತರಣೆಗೆ ಅಧಿಕೃತವಾಗಿ ಚಾಲನೆ ನೀಡಿದ ಮಹೀಂದ್ರಾ
ಮಹೀಂದ್ರಾ ಕಂಪನಿಯು ತನ್ನ ಹೊಸ ಸ್ಕಾರ್ಪಿಯೋ-ಎನ್ ಎಸ್ಯುವಿ ವಿತರಣೆಗೆ ದೇಶಾದ್ಯಂತ ತನ್ನ ಪ್ರಮುಖ ಡೀಲರ್ಸ್ಗಳಲ್ಲಿ ಚಾಲನೆ ನೀಡಿದ್ದು, ಮೊದಲ ಹಂತದ ವಿತರಣೆಯ ಕಾರ್ಯಕ್ರಮದಲ್ಲಿ ಸುಮಾರು 1 ಸಾವಿರಕ್ಕೂ ಹೆಚ್ಚು ಯುನಿಟ್ಗಳನ್ನು ವಿತರಿಸಲಾಗಿದೆ.
ಕಳೆದ ತಿಂಗಳು ಅಗಸ್ಟ್ 15ರಂದು ಬಿಡುಗಡೆಯಾಗಿದ್ದ ಸ್ಕಾರ್ಪಿಯೋ-ಎನ್ ಹೊಸ ಮಾದರಿಯ ವಿತರಣೆಯನ್ನ ಸೆಪ್ಟೆಂಬರ್ 25ರಿಂದ ವಿತರಣೆ ಮಾಡುವುದಾಗಿ ಹೇಳಿಕೊಂಡಿದ್ದ ಮಹೀಂದ್ರಾ ಕಂಪನಿಯು ಮೊದಲ ಹಂತದ ವಿತರಣೆಯನ್ನು ಆರಂಭಿಸಿದ್ದು, ಹಂತ-ಹಂತವಾಗಿ ದೇಶಾದ್ಯಂತ ಹೊಸ ಕಾರಿನ ವಿತರಣಾ ಪ್ರಮಾಣವನ್ನು ಹೆಚ್ಚಿಸುವುದಾಗಿ ಕಂಪನಿಯು ಭರವಸೆ ನೀಡಿದೆ.
ಕಳೆದ ತಿಂಗಳು ಅಗಸ್ಟ್ 15ರಂದು ಬಿಡುಗಡೆಯಾಗಿದ್ದ ಸ್ಕಾರ್ಪಿಯೋ-ಎನ್ ಹೊಸ ಮಾದರಿಯ ವಿತರಣೆಯನ್ನ ಸೆಪ್ಟೆಂಬರ್ 25ರಿಂದ ವಿತರಣೆ ಮಾಡುವುದಾಗಿ ಹೇಳಿಕೊಂಡಿದ್ದ ಮಹೀಂದ್ರಾ ಕಂಪನಿಯು ಮೊದಲ ಹಂತದ ವಿತರಣೆಯನ್ನು ಆರಂಭಿಸಿದ್ದು, ಹಂತ-ಹಂತವಾಗಿ ದೇಶಾದ್ಯಂತ ಹೊಸ ಕಾರಿನ ವಿತರಣಾ ಪ್ರಮಾಣವನ್ನು ಹೆಚ್ಚಿಸುವುದಾಗಿ ಕಂಪನಿಯು ಭರವಸೆ ನೀಡಿದೆ.
ಹೊಸ ಸ್ಕಾರ್ಪಿಯೋ-ಎನ್ ಮಾದರಿಗೆ ಈಗಾಗಲೇ 1 ಲಕ್ಷಕ್ಕೂ ಅಧಿಕ ಗ್ರಾಹಕರಿಂದ ಬುಕಿಂಗ್ ದಾಖಲಾಗಿದ್ದು, ಹೊಸ ಕಾರು ಜೆಡ್2, ಜೆಡ್4, ಜೆಡ್6, ಜೆಡ್8 ಮತ್ತು ಜೆಡ್ಎಲ್ ವೆರಿಯೆಂಟ್ಗಳೊಂದಿಗೆ ಎಕ್ಸ್ಶೋರೂಂ ಪ್ರಕಾರ ಆರಂಭಿಕವಾಗಿ ರೂ. 11.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 21.45 ಲಕ್ಷ ಬೆಲೆ ಹೊಂದಿದೆ.
ಸ್ಕಾರ್ಪಿಯೋ-ಎನ್ ಮಾದರಿಯು 6 ಸೀಟರ್ ಮತ್ತು 7 ಸೀಟರ್ ಸೌಲಭ್ಯದೊಂದಿಗೆ 2.2 ಲೀಟರ್ ಡೀಸೆಲ್ ಮತ್ತು 2.0 ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿದ್ದು, ಎರಡು ಮಾದರಿಗಳಲ್ಲೂ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಆವೃತ್ತಿಗಳು ಖರೀದಿಗೆ ಲಭ್ಯವಿವೆ.
2.0-ಲೀಟರ್ ಪೆಟ್ರೋಲ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್ಬಾಕ್ಸ್ ಆಯ್ಕೆಯನ್ನು ಮತ್ತು 2.2 ಲೀಟರ್ ಡೀಸೆಲ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್ಬಾಕ್ಸ್ ಆಯ್ಕೆಯೊಂದಿಗೆ ಎರಡು ರೀತಿಯ ಪರ್ಫಾಮೆನ್ಸ್ ಆಯ್ಕೆಗಳನ್ನು ಹೊಂದಿದೆ.
ಪೆಟ್ರೋಲ್ ಮ್ಯಾನುವಲ್ ಮಾದರಿಯು 203-ಬಿಎಚ್ಪಿ ಮತ್ತು 370-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದಲ್ಲಿ ಆಟೋಮ್ಯಾಟಿಕ್ ಮಾದರಿಯು 203-ಬಿಎಚ್ಪಿ ಮತ್ತು 380-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.
ಹಾಗೆಯೇ ಡೀಸೆಲ್ ಆರಂಭಿಕ ಮಾದರಿಯು ಮ್ಯಾನುವಲ್ ಆಯ್ಕೆಯೊಂದಿಗೆ 132 ಬಿಎಚ್ಪಿ ಮತ್ತು 300 ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ ಹೈ ಎಂಡ್ ಮಾದರಿಯು ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಮಾದರಿಯೊಂದಿಗೆ 175 ಬಿಎಚ್ಪಿ ಮತ್ತು 370 ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿವೆ.
ಇದರೊಂದಿಗೆ ಮಹೀಂದ್ರಾ ಕಂಪನಿಯು ಹೊಸ ಕಾರು ಮಾದರಿಯನ್ನು ಈ ಹಿಂದಿಗಿಂತಲೂ ಹೆಚ್ಚಿನ ಮಟ್ಟದ ತಾಂತ್ರಿಕ ಅಂಶಗಳೊಂದಿಗೆ ಅಭಿವೃದ್ದಿಗೊಳಿಸಿದ್ದು, ಕಾರಿನ ಮುಂಭಾಗದಲ್ಲಿ ಮಹೀಂದ್ರಾ ಸಾಂಪ್ರದಾಯಿಕ ಸಿಕ್ಸ್ ಸ್ಲಾಟ್ ಫ್ರಂಟ್ ಗ್ರಿಲ್ ಜೊತೆಗೆ ಎಲ್ಇಡಿ ಪ್ರೊಜೆಕ್ಟರ್ ಹೆಡ್ಲ್ಯಾಂಪ್, ಸ್ಕಾರ್ಪಿಯನ್ ಟೈಲ್ ಶೇಪ್ ಹೊಂದಿರುವ ಡಿಆರ್ಎಲ್ಎಸ್ ಮತ್ತು ಫಾಗ್ ಲ್ಯಾಂಪ್ ನೀಡಲಾಗಿದೆ.
ಹೊಸ ಸ್ಕಾರ್ಪಿಯೋ-ಎನ್ ಮಾದರಿಯಲ್ಲಿ ಸಿ ಮತ್ತು ಡಿ-ಪಿಲ್ಲರ್ ಪ್ರದೇಶಗಳಲ್ಲಿ ವಿಂಡೋ ಕ್ರೋಮ್ ಫ್ರೇಮ್ನಲ್ಲಿ ಸ್ಕಾರ್ಪಿಯನ್ ಸ್ಟಿಂಗ್ ಅಂಶವನ್ನು ಸಹ ಹೊಂದಿದೆ. ಜೊತೆಗೆ ಹೊಸ ಸ್ಕಾರ್ಪಿಯೋ-ಎನ್ನಲ್ಲಿ ಹೊಸ ಡ್ಯುಯಲ್-ಟೋನ್ ಮಿಶ್ರಲೋಹದ 18 ಇಂಚಿನ ಚಕ್ರಗಳನ್ನು ನೀಡಲಾಗಿದ್ದು, ಲಂಬವಾಗಿ ಜೋಡಿಸಲಾದ ಎಲ್ಇಡಿ ಟೈಲ್ಲೈಟ್ಗಳು ಮತ್ತು ಸ್ಪಾಯ್ಲರ್ ಅನ್ನು ಹೊಂದಿದೆ.
ಸ್ಕಾರ್ಪಿಯೋ-ಎನ್ ಮಧ್ಯಂತರ ವೆರಿಯೆಂಟ್ ನಂತರದಲ್ಲಿ ಲಭ್ಯವಾಗುವಂತೆ ಸನ್ರೂಫ್, ಎಲೆಕ್ಟ್ರಿಕಲ್ ಫೋಲ್ಡಿಂಗ್ ರಿಯರ್ ವ್ಯೂ ಮಿರರ್ಗಳು ಮತ್ತು ಶಾರ್ಕ್-ಫಿನ್ ಆಂಟೆನಾವನ್ನು ಸಹ ಒಳಗೊಂಡಿದ್ದು, ಹೊಸ ಕಾರಿನಲ್ಲಿ ಹೊರಭಾಗದಂತೆ ಒಳಭಾಗದಲ್ಲೂ ಸಾಕಷ್ಟು ಬದಲಾವಣೆ ತರಲಾಗಿದೆ.
ಹೊಸ ಕಾರಿನ ಒಳಪ್ರವೇಶಸುತ್ತಿದ್ದಂತೆ ಡ್ಯುಯಲ್-ಟೋನ್ ಡ್ಯಾಶ್ಬೋರ್ಡ್ ಮತ್ತು ಮೆಟಲ್-ಫಿನಿಶ್ಡ್ ಡ್ಯುಯಲ್ ರೈಲ್ಗಳೊಂದಿಗೆ ಆಕರ್ಷಕವಾದ ಸೆಂಟರ್ ಕನ್ಸೋಲ್ ಗಮನಸೆಳೆಯಲಿದ್ದು, ರಿಚ್ ಕಾಫಿ ಬ್ಲ್ಯಾಕ್ ಲೆದರ್ ಆಸನಗಳು, 6 ಹಂತಗಳಲ್ಲಿ ಹೊಂದಾಣಿಕೆ ಮಾಡಬಹುದಾದ ಡ್ರೈವರ್ ಸೀಟ್ ಎರಡನೇ ಸಾಲಿನಲ್ಲಿ ಕ್ಯಾಪ್ಟನ್ ಆಸನಗಳನ್ನು ಸಹ ಒಳಗೊಂಡಿವೆ.
ಇದರೊಂದಿಗೆ ಹೊಸ ಕಾರಿನಲ್ಲಿ 8-ಇಂಚಿನ ಟಚ್ಸ್ಕ್ರೀನ್ ಇನ್ಪೋಟೈನ್ಮೆಂಟ್ ಸಿಸ್ಟಂ, 70ಕ್ಕೂ ಹೆಚ್ಚು ಕಾರ್ ಕನೆಕ್ಟ್ ಫೀಚರ್ಸ್, ಅಂಡ್ರಾಯಿಡ್ ಆಟೋ ಮತ್ತು ಆಟೋ ಕಾರ್ಪ್ಲೇ, ಅಮೆಜಾನ್ ಅಲೆಕ್ಸಾ ವಾಯ್ಸ್ ಸರ್ಪೊಟ್, 3ಡಿ ಸೊನಿ ಸರೌಂಡ್ ಸೌಂಡ್ ಸಿಸ್ಟಂ ಮತ್ತು ವಾಯ್ಸ್ ಕಮಾಂಡ್ ಫೀಚರ್ಸ್ ಹೊಂದಿದೆ.
ಜೊತೆಗೆ ಹೊಸ ಕಾರಿನಲ್ಲಿ ಡ್ಯುಯಲ್-ಜೋನ್ ಸ್ವಯಂಚಾಲಿತ ಹವಾಮಾನ ನಿಯಂತ್ರಣ, ಮುಂಭಾಗ ಮತ್ತು ಹಿಂಭಾಗದಲ್ಲಿ ಕ್ಯಾಮೆರಾಗಳು ಮತ್ತು ಸ್ಮಾರ್ಟ್ಫೋನ್ಗಾಗಿ ವೈರ್ಲೆಸ್ ಚಾರ್ಜರ್ನಂತಹ ವೈಶಿಷ್ಟ್ಯಗಳನ್ನು ಹೊಂದಿರಲಿದೆ.
ಸುರಕ್ಷತೆಗಾಗಿ 6 ಏರ್ಬ್ಯಾಗ್ಗಳು, ಇಬಿಡಿ ಜೊತೆಗೆ ಎಬಿಎಸ್, ಇಎಸ್ಇ, ಟ್ರಾಕ್ಷನ್ ಕಂಟ್ರೋಲ್, ಹಿಲ್ ಹೋಲ್ಡ್ ಕಂಟ್ರೋಲ್, ಹಿಲ್ ಡಿಸೆಂಟ್ ಕಂಟ್ರೋಲ್, ಐಸೋಫಿಕ್ಸ್ ಆಂಕರ್ ಪಾಯಿಂಟ್ಗಳು ಮತ್ತು ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್ ಸೇರಿದಂತೆ ಹಲವಾರು ಫೀಚರ್ಸ್ಗಳಿವೆ.