ಇಂದಿನಿಂದ ಸ್ಕಾರ್ಪಿಯೋ-ಎನ್ ಕಾರು ಮಾದರಿಯ ಟೆಸ್ಟ್ ಡ್ರೈವ್ ಆರಂಭಿಸಿದ ಮಹೀಂದ್ರಾ

ಮಹೀಂದ್ರಾ ಕಂಪನಿಯು ಹೊಸ ಸ್ಕಾರ್ಪಿಯೋ ಮಾದರಿಯನ್ನು ಬಿಡುಗಡೆಗೊಳಿಸಿ ವಿತರಣೆಗೆ ಸಿದ್ದವಾಗುತ್ತಿದೆ. ಕಂಪನಿಯು ಹೊಸ ಕಾರಿನ ವಿತರಣೆಗೂ ಮುನ್ನ ಆಸಕ್ತ ಗ್ರಾಹಕರಿಗಾಗಿ ಟೆಸ್ಟ್ ಡ್ರೈವ್ ಆಯೋಜಿಸಿದ್ದು ಆಸಕ್ತ ಗ್ರಾಹಕರು ಹೊಸ ಕಾರು ಮಾದರಿಯ ಟೆಸ್ಟ್ ಡ್ರೈವ್‌ಗೆ ನೊಂದಣಿ ಮಾಡಿಕೊಳ್ಳಬಹುದಾಗಿದೆ.

 ಸ್ಕಾರ್ಪಿಯೋ-ಎನ್ ಕಾರು ಮಾದರಿಯ ಟೆಸ್ಟ್ ಡ್ರೈವ್

ಹೊಸ ಸ್ಕಾರ್ಪಿಯೋ-ಎನ್ ಮಾದರಿಯನ್ನು ಬಿಡುಗಡೆ ಮಾಡಿದ ನಂತರವಷ್ಟೇ ಬುಕಿಂಗ್ ಆರಂಭಿಸುತ್ತಿರುವ ಮಹೀಂದ್ರಾ ಕಂಪನಿಯು ಆಸಕ್ತ ಗ್ರಾಹಕರಿಗೆ ಇಂದಿನಿಂದ ದೇಶದ ಪ್ರಮುಖ 30 ನಗರಗಳಲ್ಲಿ ಟೆಸ್ಟ್ ಡ್ರೈವ್ ಆಯೋಜಿಸಿದ್ದು, ಟೆಸ್ಟ್ ಡ್ರೈವ್ ಬಯಸುವ ಗ್ರಾಹಕರು ನೋಂದಣಿ ಮಾಡಿಕೊಳ್ಳುವ ಮೂಲಕ ಹತ್ತಿರದ ಡೀಲರ್ಸ್‌ಗಳಲ್ಲಿ ಹೊಸ ಕಾರನ್ನು ಪಡೆದುಕೊಂಡು ಟೆಸ್ಟ್ ಡ್ರೈವ್ ಮಾಡಬಹುದಾಗಿದೆ.

 ಸ್ಕಾರ್ಪಿಯೋ-ಎನ್ ಕಾರು ಮಾದರಿಯ ಟೆಸ್ಟ್ ಡ್ರೈವ್

ಟೆಸ್ಟ್ ಡ್ರೈವ್ ಪ್ರಕ್ರಿಯೆ ಮುಗಿದ ನಂತರವಷ್ಟೇ ಈ ತಿಂಗಳಾಂತ್ಯಕ್ಕೆ ಬುಕಿಂಗ್ ಆರಂಭಿಸಲಿರುವ ಮಹೀಂದ್ರಾ ಕಂಪನಿಯು ಮುಂಬರುವ ಹಬ್ಬದ ಋುತುವಿನಲ್ಲಿ ಕಾರು ವಿತರಣೆ ಆರಂಭಿಸಲಿದ್ದು, ಹೊಸ ಕಾರನ್ನು ಈಗಾಗಲೇ ಬಿಡುಗಡೆ ಮಾಡಿದ್ದರೂ ಕಂಪನಿಯು ಕೆಲವು ತಾಂತ್ರಿಕ ಕಾರಣಗಳಿಂದ ವಿತರಣೆ ಅವಧಿಯಲ್ಲಿ ವಿಳಂಬ ನೀತಿ ಅನುಸರಿಸುತ್ತಿದೆ.

 ಸ್ಕಾರ್ಪಿಯೋ-ಎನ್ ಕಾರು ಮಾದರಿಯ ಟೆಸ್ಟ್ ಡ್ರೈವ್

ಇನ್ನು 20 ವರ್ಷಗಳ ಯಶಸ್ವಿ ಮಾರಾಟ ಇತಿಹಾಸ ಹೊಂದಿರುವ ಸ್ಕಾರ್ಪಿಯೋ ಮಾದರಿಯಲ್ಲಿ ಮಹೀಂದ್ರಾ ಇದೀಗ ಬಹುದೊಡ್ಡ ಬದಲಾವಣೆ ಮಾಡಿದ್ದು, ಹೊಸ ಮಾದರಿಯನ್ನು ಸ್ಕಾರ್ಪಿಯೋ-ಎನ್ ಹೆಸರಿನಲ್ಲಿ ಬಿಡುಗಡೆ ಮಾಡಿದೆ. ಹೊಸ ಕಾರು ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 11.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 19.49 ಲಕ್ಷ ಬೆಲೆ ಹೊಂದಿದ್ದು, ಹೊಸ ಕಾರು ಮಾದರಿಯು ವಿವಿಧ ಎಂಜಿನ್ ಆಯ್ಕೆಗಳಿಗೆ ಅನುಗುಣವಾಗಿ ಜೆಡ್2, ಜೆಡ್4, ಜೆಡ್6, ಜೆಡ್8 ಮತ್ತು ಜೆಡ್ಎಲ್ ವೆರಿಯೆಂಟ್‌ಗಳನ್ನು ಹೊಂದಿದೆ.

 ಸ್ಕಾರ್ಪಿಯೋ-ಎನ್ ಕಾರು ಮಾದರಿಯ ಟೆಸ್ಟ್ ಡ್ರೈವ್

ಹೊಸ ಕಾರು ಮಾದರಿಯಾಗಿ ಕಂಪನಿಯು ಜುಲೈ 30ರಿಂದ ರೂ.25 ಸಾವಿರ ಮುಂಗಡದೊಂದಿಗೆ ಅಧಿಕೃತ ಬುಕಿಂಗ್ ಆರಂಭಿಸಲಿದ್ದು, ಹೊಸ ಕಾರಿನ ವಿತರಣೆಯನ್ನು ಮುಂಬರುವ ದಸರಾ ವೇಳೆಗೆ ಆರಂಭವಾಗಬಹುದಾಗಿದೆ. ಹೊಸ ಕಾರನ್ನು ಕಂಪನಿಯು ಗ್ರಾಹಕರ ಬೇಡಿಕೆಯೆಂತೆ 6 ಸೀಟರ್ ಮತ್ತು 7 ಸೀಟರ್ ಸೌಲಭ್ಯದೊಂದಿಗೆ ಪರಿಚಯಿಸಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆ ಹೊಂದಿದೆ.

 ಸ್ಕಾರ್ಪಿಯೋ-ಎನ್ ಕಾರು ಮಾದರಿಯ ಟೆಸ್ಟ್ ಡ್ರೈವ್

ಹೊಸ ಕಾರಿನಲ್ಲಿ ಕಂಪನಿಯು 2.2 ಲೀಟರ್ ಡೀಸೆಲ್ ಮತ್ತು 2.0 ಪೆಟ್ರೋಲ್ ಎಂಜಿನ್ ಆಯ್ಕೆ ನೀಡುತ್ತಿದ್ದು, ಆಯ್ದ ಮಾದರಿಗಳಲ್ಲಿ 4x4 ಡ್ರೈವ್ ಸಿಸ್ಟಂ ನೀಡಿದೆ. ಹೊಸ ಕಾರು ಆನ್‌ರೋಡ್‌ನಲ್ಲಿ ಜಿಪ್, ಜ್ಯಾಪ್ ಮತ್ತು ಜೂಮ್ ಎನ್ನುವ ಮೂರು ಡ್ರೈವ್ ಮೋಡ್‌ಗಳನ್ನು ಮತ್ತು ಆಫ್ ರೋಡ್‌ನಲ್ಲಿ ನಾರ್ಮಲ್, ಗ್ರಾಸ್, ಸ್ನೋ, ಮಡ್ ಮತ್ತು ಸ್ಯಾಂಡ್ ಮೋಡ್‌ಗಳನ್ನು ಹೊಂದಿದೆ.

 ಸ್ಕಾರ್ಪಿಯೋ-ಎನ್ ಕಾರು ಮಾದರಿಯ ಟೆಸ್ಟ್ ಡ್ರೈವ್

ಸ್ಕಾರ್ಪಿಯೋ-ಎನ್ 2.0-ಲೀಟರ್ ಪೆಟ್ರೋಲ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ ಮ್ಯಾನುವಲ್ ಮಾದರಿಯು 203-ಬಿಎಚ್‌ಪಿ ಮತ್ತು 370-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದಲ್ಲಿ ಆಟೋಮ್ಯಾಟಿಕ್ ಮಾದರಿಯು 203-ಬಿಎಚ್‌ಪಿ ಮತ್ತು 380-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

 ಸ್ಕಾರ್ಪಿಯೋ-ಎನ್ ಕಾರು ಮಾದರಿಯ ಟೆಸ್ಟ್ ಡ್ರೈವ್

ಹಾಗೆಯೇ 2.2 ಲೀಟರ್ ಡೀಸೆಲ್ ಮಾದರಿಯು ಸಹ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ ಎರಡು ರೀತಿಯ ಪರ್ಫಾಮೆನ್ಸ್ ಹೊಂದಿದ್ದು, ಆರಂಭಿಕ ಮಾದರಿಯು 132 ಬಿಎಚ್‌ಪಿ ಮತ್ತು 300 ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ ಹೈ ಎಂಡ್ ಮಾದರಿಯು 175 ಬಿಎಚ್‌ಪಿ ಮತ್ತು 370 ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದೆ.

 ಸ್ಕಾರ್ಪಿಯೋ-ಎನ್ ಕಾರು ಮಾದರಿಯ ಟೆಸ್ಟ್ ಡ್ರೈವ್

ಇನ್ನು ಮಹೀಂದ್ರಾ ಕಂಪನಿಯು ಹೊಸ ಕಾರು ಮಾದರಿಯನ್ನು ಈ ಹಿಂದಿಗಿಂತಲೂ ಹೆಚ್ಚಿನ ಮಟ್ಟದ ತಾಂತ್ರಿಕ ಅಂಶಗಳೊಂದಿಗೆ ಅಭಿವೃದ್ದಿಗೊಳಿಸಿದ್ದು, ಕಾರಿನ ಮುಂಭಾಗದಲ್ಲಿ ಮಹೀಂದ್ರಾ ಸಾಂಪ್ರದಾಯಿಕ ಸಿಕ್ಸ್ ಸ್ಲಾಟ್ ಫ್ರಂಟ್ ಗ್ರಿಲ್ ಜೊತೆಗೆ ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್, ಸ್ಕಾರ್ಪಿಯನ್ ಟೈಲ್ ಶೇಪ್ ಹೊಂದಿರುವ ಡಿಆರ್‌ಎಲ್ಎಸ್ ಮತ್ತು ಫಾಗ್ ಲ್ಯಾಂಪ್ ಹೊಂದಿದೆ.

 ಸ್ಕಾರ್ಪಿಯೋ-ಎನ್ ಕಾರು ಮಾದರಿಯ ಟೆಸ್ಟ್ ಡ್ರೈವ್

ಹೊಸ ಸ್ಕಾರ್ಪಿಯೋ-ಎನ್ ಮಾದರಿಯಲ್ಲಿ ಸಿ ಮತ್ತು ಡಿ-ಪಿಲ್ಲರ್ ಪ್ರದೇಶಗಳಲ್ಲಿ ವಿಂಡೋ ಕ್ರೋಮ್ ಫ್ರೇಮ್‌ನಲ್ಲಿ ಸ್ಕಾರ್ಪಿಯನ್ ಸ್ಟಿಂಗ್ ಅಂಶವನ್ನು ಸಹ ಹೊಂದಿದೆ. ಜೊತೆಗೆ ಹೊಸ ಸ್ಕಾರ್ಪಿಯೋ-ಎನ್‌ನಲ್ಲಿ ಹೊಸ ಡ್ಯುಯಲ್-ಟೋನ್ ಮಿಶ್ರಲೋಹದ 18 ಇಂಚಿನ ಚಕ್ರಗಳನ್ನು ನೀಡಲಾಗಿದ್ದು, ಲಂಬವಾಗಿ ಜೋಡಿಸಲಾದ ಎಲ್ಇಡಿ ಟೈಲ್‌ಲೈಟ್‌ಗಳು ಮತ್ತು ಸ್ಪಾಯ್ಲರ್ ಅನ್ನು ಹೊಂದಿದೆ.

 ಸ್ಕಾರ್ಪಿಯೋ-ಎನ್ ಕಾರು ಮಾದರಿಯ ಟೆಸ್ಟ್ ಡ್ರೈವ್

ಸ್ಕಾರ್ಪಿಯೋ-ಎನ್ ಮಧ್ಯಂತರ ವೆರಿಯೆಂಟ್‌ ನಂತರದಲ್ಲಿ ಲಭ್ಯವಾಗುವಂತೆ ಸನ್‌ರೂಫ್, ಎಲೆಕ್ಟ್ರಿಕಲ್ ಫೋಲ್ಡಿಂಗ್ ರಿಯರ್ ವ್ಯೂ ಮಿರರ್‌ಗಳು ಮತ್ತು ಶಾರ್ಕ್-ಫಿನ್ ಆಂಟೆನಾವನ್ನು ಸಹ ಒಳಗೊಂಡಿದ್ದು, ಹೊಸ ಕಾರಿನಲ್ಲಿ ಹೊರಭಾಗದಂತೆ ಒಳಭಾಗದಲ್ಲೂ ಸಾಕಷ್ಟು ಬದಲಾವಣೆ ತರಲಾಗಿದೆ.

 ಸ್ಕಾರ್ಪಿಯೋ-ಎನ್ ಕಾರು ಮಾದರಿಯ ಟೆಸ್ಟ್ ಡ್ರೈವ್

ಹೊಸ ಕಾರಿನ ಒಳಪ್ರವೇಶಸುತ್ತಿದ್ದಂತೆ ಡ್ಯುಯಲ್-ಟೋನ್ ಡ್ಯಾಶ್‌ಬೋರ್ಡ್ ಮತ್ತು ಮೆಟಲ್-ಫಿನಿಶ್ಡ್ ಡ್ಯುಯಲ್ ರೈಲ್‌ಗಳೊಂದಿಗೆ ಆಕರ್ಷಕವಾದ ಸೆಂಟರ್ ಕನ್ಸೋಲ್‌ ಗಮನಸೆಳೆಯಲಿದ್ದು, ರಿಚ್ ಕಾಫಿ ಬ್ಲ್ಯಾಕ್ ಲೆದರ್ ಆಸನಗಳು, 6 ಹಂತಗಳಲ್ಲಿ ಹೊಂದಾಣಿಕೆ ಮಾಡಬಹುದಾದ ಡ್ರೈವರ್ ಸೀಟ್ ಎರಡನೇ ಸಾಲಿನಲ್ಲಿ ಕ್ಯಾಪ್ಟನ್ ಆಸನಗಳನ್ನು ಸಹ ಒಳಗೊಂಡಿವೆ.

 ಸ್ಕಾರ್ಪಿಯೋ-ಎನ್ ಕಾರು ಮಾದರಿಯ ಟೆಸ್ಟ್ ಡ್ರೈವ್

ಇದರೊಂದಿಗೆ ಹೊಸ ಕಾರಿನಲ್ಲಿ 8-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, 70ಕ್ಕೂ ಹೆಚ್ಚು ಕಾರ್ ಕನೆಕ್ಟ್ ಫೀಚರ್ಸ್, ಅಂಡ್ರಾಯಿಡ್ ಆಟೋ ಮತ್ತು ಆಟೋ ಕಾರ್‌ಪ್ಲೇ, ಅಮೆಜಾನ್ ಅಲೆಕ್ಸಾ ವಾಯ್ಸ್ ಸರ್ಪೊಟ್, 3ಡಿ ಸೊನಿ ಸರೌಂಡ್ ಸೌಂಡ್ ಸಿಸ್ಟಂ ಮತ್ತು ವಾಯ್ಸ್ ಕಮಾಂಡ್ ಫೀಚರ್ಸ್ ಹೊಂದಿದೆ.

 ಸ್ಕಾರ್ಪಿಯೋ-ಎನ್ ಕಾರು ಮಾದರಿಯ ಟೆಸ್ಟ್ ಡ್ರೈವ್

ಇದಲ್ಲದೆ ಹೊಸ ಕಾರಿನಲ್ಲಿ ಡ್ಯುಯಲ್-ಜೋನ್ ಸ್ವಯಂಚಾಲಿತ ಹವಾಮಾನ ನಿಯಂತ್ರಣ, ಮುಂಭಾಗ ಮತ್ತು ಹಿಂಭಾಗದಲ್ಲಿ ಕ್ಯಾಮೆರಾಗಳು ಮತ್ತು ಸ್ಮಾರ್ಟ್‌ಫೋನ್‌ಗಾಗಿ ವೈರ್‌ಲೆಸ್ ಚಾರ್ಜರ್‌ನಂತಹ ವೈಶಿಷ್ಟ್ಯಗಳನ್ನು ಹೊಂದಿರಲಿದ್ದು, ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ಇಬಿಡಿ ಜೊತೆಗೆ ಎಬಿಎಸ್, ಇಎಸ್ಇ, ಟ್ರಾಕ್ಷನ್ ಕಂಟ್ರೋಲ್, ಹಿಲ್ ಹೋಲ್ಡ್ ಕಂಟ್ರೋಲ್, ಹಿಲ್ ಡಿಸೆಂಟ್ ಕಂಟ್ರೋಲ್, ಐಸೋಫಿಕ್ಸ್ ಆಂಕರ್ ಪಾಯಿಂಟ್‌ಗಳು ಮತ್ತು ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್ ಸೇರಿದಂತೆ ಹಲವಾರು ಫೀಚರ್ಸ್‌ಗಳಿವೆ.

 ಸ್ಕಾರ್ಪಿಯೋ-ಎನ್ ಕಾರು ಮಾದರಿಯ ಟೆಸ್ಟ್ ಡ್ರೈವ್

ಹೊಸ ಸ್ಕಾರ್ಪಿಯೋ-ಎನ್ ಮಾದರಿಯು ಡೀಪ್ ಫಾರೆಸ್ಟ್, ನಪೋಲಿ ಬ್ಲಾಕ್, ಎವರೆಸ್ಟ್ ವೈಟ್, ರೆಡ್ ರೇಜ್, ಡ್ಯಾಜ್ಲಿಂಗ್ ಸಿಲ್ವರ್, ರಾಯಲ್ ಗೋಲ್ಡ್ ಮತ್ತು ಗ್ರ್ಯಾಂಡ್ ಕ್ಯಾನ್ಯನ್ ಬಣ್ಣಗಳ ಆಯ್ಕೆ ಹೊಂದಿದ್ದು, ಮೂರನೇ ಸಾಲಿನ ಆಸನಕ್ಕಾಗಿ ಹೊಸ ಕಾರಿನಲ್ಲಿ 206 ಎಂಎಂ ಹೆಚ್ಚುವರಿ ಉದ್ದಳತೆ ನೀಡಲಾಗಿದೆ.

 ಸ್ಕಾರ್ಪಿಯೋ-ಎನ್ ಕಾರು ಮಾದರಿಯ ಟೆಸ್ಟ್ ಡ್ರೈವ್

ಈ ಮೂಲಕ ಹೊಸ ಕಾರು ಬಲಿಷ್ಠ ವಿನ್ಯಾಸ ಮತ್ತು ಪ್ರೀಮಿಯಂ ಫೀಚರ್ಸ್‌ನೊಂದಿಗೆ 4,662 ಎಂಎಂ ಉದ್ದಳತೆ ಮತ್ತು 2,750 ಎಂಎಂ ವಿಸ್ತರಿತ ವೀಲ್ಹ್ ಬೆಸ್ ಮೂಲಕ ಅರಾಮದಾಯಕ ಕ್ಯಾಬಿನ್ ಸ್ಪೆಸ್ ಹೊಂದಿದ್ದು, ಹೊಸ ಕಾರು ಪ್ರಸ್ತುತ ಮಾದರಿಗಿಂತಲೂ ಹೆಚ್ಚುವರಿಯಾಗಿ 206 ಎಂಎಂ ಉದ್ದ ಮತ್ತು 97 ಎಂಎಂ ಅಗಲ ಹೊಂದಿದ್ದರೆ 125 ಎಂಎಂ ನಷ್ಟು ಪ್ರಸ್ತುತ ಮಾದರಿಗಿಂತಲೂ ಕಡಿಮೆ ಎತ್ತರ ಹೊಂದಿದೆ.

Article Published On: Tuesday, July 5, 2022, 13:59 [IST]
English summary
Mahindra scorpio n test drives begins today details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+