ರೂ. 11.99 ಲಕ್ಷ ಬೆಲೆ ಹೊಂದಿರುವ ಮಹೀಂದ್ರಾ ಸ್ಕಾರ್ಪಿಯೋ ಎನ್ ಜೆಡ್2 ವೆರಿಯೆಂಟ್ ವಿಶೇಷತೆಗಳಿವು!
ಮಹೀಂದ್ರಾ ಕಂಪನಿಯು ಇದೇ ತಿಂಗಳಾಂತ್ಯಕ್ಕೆ ತನ್ನ ಹೊಸ ಸ್ಕಾರ್ಪಿಯೋ-ಎನ್ ವಿತರಣೆ ಆರಂಭಿಸಲಿದ್ದು, ಹೊಸ ಕಾರಿನ ಆರಂಭಿಕ ರೂಪಾಂತರದ ಕುರಿತಾದ ಮಾಹಿತಿಗಳನ್ನು ಇಲ್ಲಿ ಹಂಚಿಕೊಳ್ಳಲಾಗಿದೆ.

ಹೊಸ ಸ್ಕಾರ್ಪಿಯೋ-ಎನ್ ಕಾರು ಖರೀದಿಗೆ ಇದುವರೆಗೆ ಸುಮಾರು 1 ಲಕ್ಷಕ್ಕಿಂತಲೂ ಹೆಚ್ಚು ಗ್ರಾಹಕರು ಬುಕಿಂಗ್ ದಾಖಲಿಸಿದ್ದು, ಸೆಪ್ಟೆಂಬರ್ 26 ರಿಂದ ಹೊಸ ಕಾರಿನ ವಿತರಣೆ ಆರಂಭವಾಗಲಿದೆ. ಹೊಸ ಕಾರು ಜೆಡ್2, ಜೆಡ್4, ಜೆಡ್6, ಜೆಡ್8 ಮತ್ತು ಜೆಡ್ಎಲ್ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಹೊಸ ಕಾರು ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 11.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 21.45 ಲಕ್ಷ ಬೆಲೆ ಹೊಂದಿದೆ.

ಜೆಡ್2 ಆವೃತ್ತಿಯು ಬಜೆಟ್ ಬೆಲೆಯಲ್ಲಿ ಖರೀದಿಸಬಹುದಾಗಿದ್ದು, ಇದು ಇತರೆ ವೆರಿಯೆಂಟ್‌ಗಳಿಂತ ಕಡಿಮೆ ಫೀಚರ್ಸ್ ಹೊಂದಿದ್ದರೂ ಕೂಡಾ ಈ ವಿಭಾಗದ ಪ್ರತಿಸ್ಪರ್ಧಿ ಮಾದರಿಗಿಂತಲೂ ಹಲವಾರು ಸ್ಟ್ಯಾಂಡರ್ಡ್ ಫೀಚರ್ಸ್ ಪಡೆದುಕೊಂಡಿದೆ.

ಹೊಸ ಕಾರಿನಲ್ಲಿ ಜೆಡ್2 ವೆರಿಯೆಂಟ್ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 11.99 ಲಕ್ಷ ಬೆಲೆ ಹೊಂದಿದ್ದು, ಇದು 2.0 ಲೀಟರ್ ಪೆಟ್ರೋಲ್ ಮ್ಯಾನುವಲ್ ಆಯ್ಕೆಯನ್ನು ಹೊಂದಿದೆ. ಎಂಜಿನ್ ಆಯ್ಕೆ ಮತ್ತು ಗೇರ್‌ಬಾಕ್ಸ್ ಆಯ್ಕೆ ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ಬದಲಾಗಲಿದ್ದು, ಬೆಸ್ ವೆರಿಯೆಂಟ್ ಹಲವು ಸ್ಟ್ಯಾಂಡರ್ಡ್ ಫೀಚರ್ಸ್‌ಗಳೊಂದಿಗೆ ಖರೀದಿಗೆ ಉತ್ತಮ ಎನ್ನಿಸಲಿದೆ.

ಹೊಸ ಸ್ಕಾರ್ಪಿಯೋ-ಎನ್ ಮಾದರಿಯಲ್ಲಿ ಹೆಚ್ಚಿನ ಫೀಚರ್ಸ್ ಬಯಸುವ ಗ್ರಾಹಕರಿಗೆ ಟಾಪ್ ಎಂಡ್ ಖರೀದಿಸಬಹುದಾಗಿದ್ದು, ಬಜೆಟ್ ಬೆಲೆಯೊಂದಿಗೆ ಒಂದು ಉತ್ತಮ ಮತ್ತು ಕಡಿಮೆ ಫೀಚರ್ಸ್‌ಗಳ ಹೊಂದಿರುವ ಕಾರು ಖರೀದಿಸುವವರಿಗೆ ಸ್ಕಾರ್ಪಿಯೋ ಜೆಡ್2 ಆಯ್ಕೆ ಉತ್ತಮವಾಗಿದೆ ಎನ್ನಬಹುದು.

ಸ್ಕಾರ್ಪಿಯೋ-ಎನ್ ಜೆಡ್2 ವೆರಿಯೆಂಟ್ ಇತರೆ ವೆರಿಯೆಂಟ್‌ಗಳಿಂತಲೂ ಹೆಚ್ಚಿನ ಮಟ್ಟದ ಪ್ರೀಮಿಯಂ ಸೌಲಭ್ಯಗಳನ್ನು ಹೊಂದಿಲ್ಲವಾದರೂ ಹಲವು ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ಜೋಡಣೆ ಮಾಡಲಾಗಿದ್ದು, ಸುರಕ್ಷತೆಯಲ್ಲಿ ಯಾವುದೇ ರಾಜಿಮಾಡಿಕೊಳ್ಳಲಾಗಿಲ್ಲ.

ಜೆಡ್2 ವೆರಿಯೆಂಟ್‌ನಲ್ಲಿ ಮಹೀಂದ್ರಾ ಕಂಪನಿಯು ಎಬಿಎಸ್, ಇಬಿಡಿ, ರಿಯರ್ ಪಾರ್ಕಿಂಗ್ ಸೆನ್ಸಾರ್, ಡ್ಯುಯಲ್ ಏರ್‌ಬ್ಯಾಗ್, ಮುಂಭಾಗ ಮತ್ತು ಹಿಂಭಾಗದ ಚಕ್ರಗಳಲ್ಲಿ ವೆಂಟಿಲೆಟೆಡ್ ಡಿಸ್ಕ್ ಬ್ರೇಕ್ ಮತ್ತು ಐಸೋಫಿಕ್ಸ್ ಆ್ಯಂಕರ್ ಮೌಂಟ್ ನೀಡಲಾಗಿದೆ.

ಹಾಗೆಯೇ ಜೆಡ್2 ವೆರಿಯೆಂಟ್‌ನಲ್ಲಿ ಗ್ರಾಹಕರಿಗೆ ಸ್ಟಾರ್ಟ್/ಸ್ಟಾಪ್ ಟೆಕ್ನಾಲಜಿ, ಎರಡನೇ ಮತ್ತು ಮೂರನೇ ಸಾಲಿನಲ್ಲಿ ಎಸಿ ವೆಂಟ್ಸ್, ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸ್ಕ್ರೀನ್, ಸ್ಟ್ರೀರಿಂಗ್ ಮೌಂಟೆಡ್ ಆಡಿಯೋ ಕಂಟ್ರೋಲ್, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್, ಮೊನೊಕ್ರೊಮ್ ಮಲ್ಟಿ ಇನ್‌ಫಾರ್ಮೆಷನ್ ಡಿಸ್‌ಪ್ಲೇ, ಪವರ್ ವಿಂಡೋ, ಒನ್ ಟಚ್ ಥಂಬಲ್ ಸೀಟ್, ಸ್ಕ್ರೀಡ್ ಪ್ಲೇಟ್, ರಿಯರ್ ವ್ಯೂ ಮೌಂಟೆಡ್ ಎಲ್ಇಡಿ ಟರ್ನ್ ಲೈಟ್ ಹೊಂದಿದೆ.

ಇನ್ನು ಮಹೀಂದ್ರಾ ಕಂಪನಿಯು ಸ್ಕಾರ್ಪಿಯೋ-ಎನ್ ಮಾದರಿಯಲ್ಲಿ ನೀಡಲಾಗಿರುವ ಪೆಟ್ರೋಲ್ ಎಂಜಿನ್ ಮಾದರಿಯ ಪರ್ಫಾಮೆನ್ಸ್ ಟ್ಯೂನ್ ಮಾಡಿದ್ದು, ಆರಂಭಿಕ ಜೆಡ್2 ಮಾದರಿಯಲ್ಲಿರುವ 2.0 ಲೀಟರ್ ಪೆಟ್ರೋಲ್ ಮಾದರಿಯು 130 ಬಿಎಚ್‌ಪಿ ಮತ್ತು 300 ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದರೆ ಹೈ ಎಂಡ್ ವೆರಿಯೆಂಟ್‌ಗಳಲ್ಲಿರುವ 2.0 ಲೀಟರ್ ಪೆಟ್ರೋಲ್ ಮಾದರಿಯು 200 ಬಿಎಚ್‌ಪಿ ಮತ್ತು 370 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

ಹಾಗೆಯೇ ಡೀಸೆಲ್ ಆರಂಭಿಕ ಮಾದರಿಯು ಮ್ಯಾನುವಲ್ ಆಯ್ಕೆಯೊಂದಿಗೆ 132 ಬಿಎಚ್‌ಪಿ ಮತ್ತು 300 ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ ಹೈ ಎಂಡ್ ಮಾದರಿಯು ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಮಾದರಿಯೊಂದಿಗೆ 175 ಬಿಎಚ್‌ಪಿ ಮತ್ತು 370 ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿವೆ.

ಇದರೊಂದಿಗೆ ಮಹೀಂದ್ರಾ ಕಂಪನಿಯು ಹೊಸ ಕಾರು ಮಾದರಿಯನ್ನು ಈ ಹಿಂದಿಗಿಂತಲೂ ಹೆಚ್ಚಿನ ಮಟ್ಟದ ತಾಂತ್ರಿಕ ಅಂಶಗಳೊಂದಿಗೆ ಅಭಿವೃದ್ದಿಗೊಳಿಸಿದ್ದು, ಇದರಲ್ಲಿ ಜೆಡ್2 ಮಾದರಿಯು ಇತರೆ ವೆರಿಯೆಂಟ್‌ಗಳಿಂತಲೂ ಸಾಕಷ್ಟು ಕಡಿಮೆ ಫೀಚರ್ಸ್ ಹೊಂದಿದ್ದರೂ ಹಲವಾರು ಬಜೆಟ್ ಬೆಲೆಯೊಂದಿಗೆ ಉತ್ತಮ ಫೀಚರ್ಸ್ ಹೊಂದಿದೆ ಎನ್ನಬಹುದು.

ಸ್ಕಾರ್ಪಿಯೋ-ಎನ್ ಮಧ್ಯಂತರ ವೆರಿಯೆಂಟ್ ನಂತರದಲ್ಲಿ ಲಭ್ಯವಾಗುವಂತೆ ಸನ್‌ರೂಫ್, ಎಲೆಕ್ಟ್ರಿಕಲ್ ಫೋಲ್ಡಿಂಗ್ ರಿಯರ್ ವ್ಯೂ ಮಿರರ್‌ಗಳು ಮತ್ತು ಶಾರ್ಕ್-ಫಿನ್ ಆಂಟೆನಾವನ್ನು ಸಹ ಒಳಗೊಂಡಿದ್ದು, ಹೊಸ ಕಾರಿನಲ್ಲಿ ಹೊರಭಾಗದಂತೆ ಒಳಭಾಗದಲ್ಲೂ ಸಾಕಷ್ಟು ಬದಲಾವಣೆ ತರಲಾಗಿದೆ.

ಹೊಸ ಕಾರಿನ ಒಳಪ್ರವೇಶಸುತ್ತಿದ್ದಂತೆ ಡ್ಯುಯಲ್-ಟೋನ್ ಡ್ಯಾಶ್‌ಬೋರ್ಡ್ ಮತ್ತು ಮೆಟಲ್-ಫಿನಿಶ್ಡ್ ಡ್ಯುಯಲ್ ರೈಲ್‌ಗಳೊಂದಿಗೆ ಆಕರ್ಷಕವಾದ ಸೆಂಟರ್ ಕನ್ಸೋಲ್ ಗಮನಸೆಳೆಯಲಿದ್ದು, ರಿಚ್ ಕಾಫಿ ಬ್ಲ್ಯಾಕ್ ಲೆದರ್ ಆಸನಗಳು, 6 ಹಂತಗಳಲ್ಲಿ ಹೊಂದಾಣಿಕೆ ಮಾಡಬಹುದಾದ ಡ್ರೈವರ್ ಸೀಟ್ ಎರಡನೇ ಸಾಲಿನಲ್ಲಿ ಕ್ಯಾಪ್ಟನ್ ಆಸನಗಳನ್ನು ಸಹ ಒಳಗೊಂಡಿವೆ.

ಇದರೊಂದಿಗೆ ಹೊಸ ಕಾರಿನಲ್ಲಿ 8-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, 70ಕ್ಕೂ ಹೆಚ್ಚು ಕಾರ್ ಕನೆಕ್ಟ್ ಫೀಚರ್ಸ್, ಅಂಡ್ರಾಯಿಡ್ ಆಟೋ ಮತ್ತು ಆಟೋ ಕಾರ್‌ಪ್ಲೇ, ಅಮೆಜಾನ್ ಅಲೆಕ್ಸಾ ವಾಯ್ಸ್ ಸರ್ಪೊಟ್, 3ಡಿ ಸೊನಿ ಸರೌಂಡ್ ಸೌಂಡ್ ಸಿಸ್ಟಂ ಮತ್ತು ವಾಯ್ಸ್ ಕಮಾಂಡ್ ಫೀಚರ್ಸ್ ಹೊಂದಿದೆ.

ಜೊತೆಗೆ ಹೊಸ ಕಾರಿನಲ್ಲಿ ಡ್ಯುಯಲ್-ಜೋನ್ ಸ್ವಯಂಚಾಲಿತ ಹವಾಮಾನ ನಿಯಂತ್ರಣ, ಮುಂಭಾಗ ಮತ್ತು ಹಿಂಭಾಗದಲ್ಲಿ ಕ್ಯಾಮೆರಾಗಳು ಮತ್ತು ಸ್ಮಾರ್ಟ್‌ಫೋನ್‌ಗಾಗಿ ವೈರ್‌ಲೆಸ್ ಚಾರ್ಜರ್‌ನಂತಹ ವೈಶಿಷ್ಟ್ಯಗಳನ್ನು ಹೊಂದಿರಲಿದೆ.

ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ಇಬಿಡಿ ಜೊತೆಗೆ ಎಬಿಎಸ್, ಇಎಸ್ಇ, ಟ್ರಾಕ್ಷನ್ ಕಂಟ್ರೋಲ್, ಹಿಲ್ ಹೋಲ್ಡ್ ಕಂಟ್ರೋಲ್, ಹಿಲ್ ಡಿಸೆಂಟ್ ಕಂಟ್ರೋಲ್, ಐಸೋಫಿಕ್ಸ್ ಆಂಕರ್ ಪಾಯಿಂಟ್‌ಗಳು ಮತ್ತು ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್ ಸೇರಿದಂತೆ ಹಲವಾರು ಫೀಚರ್ಸ್‌ಗಳಿವೆ.


Click it and Unblock the Notifications