ಜನವರಿ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ ಮಹೀಂದ್ರಾ ಥಾರ್
ಪ್ರಸ್ತುತ ತಲೆಮಾರಿನ ಮಹೀಂದ್ರಾ ಥಾರ್ ಎಸ್‍ಯುವಿಯನ್ನು 2020ರಲ್ಲಿ ಬಿಡುಗಡೆಗೊಳಿಸಿತ್ತು. ಈ ಮಹೀಂದ್ರಾ ಥಾರ್ ಎಸ್‍ಯುವಿಯು ಕಡಿಮೆ ಅವಧಿಯಲ್ಲಿ ಹೆಚ್ಚಿನ ಜನರನ್ನು ಸೆಳೆಯುವಲ್ಲಿ ಯಶ್ವಸಿಯಾಗಿದೆ. ಈ ಜನಪ್ರಿಯ ಥಾರ್ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಭರ್ಜರಿಯಾಗಿ ಮಾರಾಟವಾಗುತ್ತಿದೆ.

ಭಾರತೀಯ ಮಾರುಕಟ್ಟೆಯಲ್ಲಿ ಮಹೀಂದ್ರಾ ಥಾರ್ ಎಸ್‍ಯುವಿಯು ಬಿಡುಗಡೆಗಡೆಯಾದ ದಿನದಿಂದ ಅದೇ ರೀತಿಯ ಪ್ರಬಲ ಬೇಡಿಕೆಯನ್ನು ಹೊಂದಿದೆ. ಕಳೆದ ತಿಂಗಳು, ಮಹೀಂದ್ರಾ ಥಾರ್ ಎಸ್‍ಯುವಿ ಮಾದರಿಯ 4,646 ಯುನಿಟ್‌ಗಳನ್ನು ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟ ಮಾಡಲಾಗಿದೆ. 2021ರ ಜನವರಿ ತಿಂಗಳಿನಲ್ಲಿ ಮಹೀಂದ್ರಾ ಥಾರ್ ಮಾದರಿಯ 3,152 ಯುನಿಟ್‌ಗಳು ಮಾರಾಟವಾಗಿತ್ತು. ಇದನ್ನು ವರ್ಷದಿಂದ ವರ್ಷದ ಮಾರಾಟಕ್ಕೆ ಹೋಲಿಸಿದರೆ ಶೇಕಡಾ 47.4 ಮಾರಾಟದ ಬೆಳವಣಿಗೆಯನ್ನು ಸಾಧಿಸಿದೆ.

ಮಹೀಂದ್ರಾ ಥಾರ್ ಎಸ್‍ಯುವಿಯು ಕಡಿಮೆ ಬಜೆಟ್‌ನಲ್ಲಿ ಖರೀದಿಸಬಹುದಾದ ಅತ್ಯುತ್ತಮ ಎಸ್‍ಯುವಿಯಾಗಿದೆ. ಅದಕ್ಕಾಗಿಯೇ ವಾಹನ ಉತ್ಸಾಹಿಗಳು ಒಂದನ್ನು ಖರೀದಿಸಲು ನಿರಂತರವಾಗಿ ಸರತಿ ಸಾಲಿನಲ್ಲಿ ನಿಲ್ಲುತ್ತಾರೆ. ಇದು ಕೆಲವು ಪ್ರಭಾವಶಾಲಿ ಸ್ಪೆಕ್ಸ್‌ಗಳನ್ನು ಹೊಂದಿದೆ:

ಮಹೀಂದ್ರಾ ಥಾರ್ ಎಸ್‍ಯುವಿಯ ಬಗ್ಗೆ ಹೇಳುವುದಾದರೆ, ಇದು ಎರಡು ಎಂಜಿನ್ ಆಯ್ಕೆಗಳೊಂದಿಗೆ ಲಭ್ಯವಿದೆ. ಇದರಲ್ಲಿ ಮೊದಲೈಗೆ 2.0 ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್ ಆಗಿದೆ. ಈ ಎಂಜಿನ್ 150 ಬಿಹೆಚ್‍ಪಿ ಪವರ್ ಮತ್ತು 320 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ಇನ್ನು 2.2 ಲೀಟರ್ ಟರ್ಬೊ-ಡೀಸೆಲ್ ಎಂಜಿನ್ 130 ಬಿಹೆಚ್‍ಪಿ ಪವರ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎರಡು ಎಂಜಿನ್ ಗಳೊಂದಿಗೆ 6-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ.

ಗ್ಲೊಬಲ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ 4 ಸ್ಟಾರ್ ಸೇಫ್ಚಿ ರೇಟಿಂಗ್ ಪಡೆದುಕೊಳ್ಳುವ ಮೂಲಕ ಸುರಕ್ಷಿತ ಕಾರು ಮಾದರಿಯಾಗಿ ಗುರುತಿಸಿಕೊಂಡ ನಂತರ ಹೊಸ ಥಾರ್ ಕಾರಿಗೆ ಮತ್ತಷ್ಟು ಬೇಡಿಕೆ ಪಡೆದುಕೊಂಡಿದೆ. ಈ ಎಸ್‍ಯುವಿಯ ವೈಟಿಂಗ್ ಪಿರೇಡ್ ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ನಿರ್ಧಾರವಾಗಲಿದೆ.

ಈ ನ್ಯೂ ಜನರೇಷನ್ ಮಹೀಂದ್ರಾ ಥಾರ್ ಎಸ್‍ಯುವಿಯ ಒಳಭಾಗದಲ್ಲಿ ಆ್ಯಪಲ್ ಕಾರ್‌ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಕನೆಕ್ಟಿವಿಟಿಯನ್ನು ಹೊಂದಿರುವ 7-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ,ರೂಫ್ ಮೌಂಟೆಡ್ ಆಡಿಯೋ ಸ್ಪಿಕರ್ಸ್, ಮಲ್ಟಿ ಕಲರ್ ಇನ್ಪೋಟೈನ್ ಮೆಂಟ್ ಸಿಸ್ಟಂ ಮತ್ತು ಸ್ಟೀರಿಂಗ್ ಮೌಟೆಂಟ್ ಕಂಟ್ರೋಲ್ ಅನ್ನು ಒಳಗೊಂಡಿದೆ.

ಥಾರ್ ಎಸ್‍ಯುವಿಯಲ್ಲಿ ಸುರಕ್ಷತೆಗಾಗಿ ಹಲವಾರು ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ. ಎರಡು ಎಂಜಿನ್ ಆಯ್ಕೆಗಳಲ್ಲೂ 4x4 ಡ್ರೈವ್ ಸಿಸ್ಟಂ, ಕ್ರೂಸ್ ಕಂಟ್ರೋಲ್, 255/65 18-ಇಂಚಿನ ಆಲ್ ಟೆರೆನ್ ಟೈರ್ಸ್, ಡ್ಯುಯಲ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್, ಹಿಲ್ ಸ್ಟಾರ್ಟ್ ಅಸಿಸ್ಟ್, ರೋಲ್ ಓವರ್ ಮಿಟಿಗೆಷನ್, ತ್ರೀ ಪಾಯಿಂಟ್ ಸಿಲ್ಟ್ ಬೆಲ್ಟ್ ಮತ್ತು ರಿಯರ್ ವ್ಯೂ ಕ್ಯಾಮೆರಾವನ್ನು ಕೂಡ ಹೊಂದಿದೆ.

ಥಾರ್ ಮಾದರಿಯಲ್ಲಿ ಮೊದಲ ಬಾರಿಗೆ ಡೀಸೆಲ್ ಎಂಜಿನ್ ಜೊತೆಗೆ ಪೆಟ್ರೋಲ್ ಕಾರಿನ ಆಯ್ಕೆಯನ್ನು ಸಹ ನೀಡಿರುವುದು ಆಫ್-ರೋಡ್ ಕಾರು ಮಾದರಿಯ ಮಾರಾಟದಲ್ಲಿ ಮತ್ತೊಂದು ಹಂತದ ಬದಲಾವಣೆಗೆ ಕಾರಣವಾಗಿದ್ದು, ಲ್ಯಾಡರ್-ಫ್ರೇಮ್ ಚಾರ್ಸಿ ಜೊತೆಗೆ ಹೊಸ ಸಸ್ಪೆಂಷನ್ ಸೌಲಭ್ಯವು ಹೊಸ ಥಾರ್ ಕಾರಿನ ಗುಣಮಟ್ಟ ಮತ್ತು ಕಾರ್ಯಕ್ಷಮತೆ ಹೆಚ್ಚಿಸಿದೆ.

ಇದರೊಂದಿಗೆ ಮಹೀಂದ್ರಾ ಕಂಪನಿಯು ತನ್ನ ನ್ಯೂ ಜನರೇಷನ್ ಎಸ್‍ಯುವಿ ಮಾದರಿಗಳಾದ ಸ್ಕಾರ್ಪಿಯೋ ಎಸ್‌ಯುವಿ ಬಿಡುಗಡೆಗೆ ಸಜ್ಜಾಗುತ್ತಿದೆ. ಹೊಸ ಎಸ್‍ಯುವಿ ಮಾದರಿಯು ಶೀಘ್ರದಲ್ಲೇ ಮಾರುಕಟ್ಟೆ ಪ್ರವೇಶಿಸುವುದು ಬಹುತೇಕ ಖಚಿತವಾಗಿದೆ. ಸ್ಕಾರ್ಪಿಯೋ ಹೊಸ ಮಾದರಿಯನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿರುವ ಮಹೀಂದ್ರಾ ಕಂಪನಿಯು ವಿವಿಧ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳೊಂದಿಗೆ ಶೀಘ್ರದಲ್ಲಿಯೇ ಉತ್ಪಾದನಾ ಪ್ರಕ್ರಿಯೆಗೆ ಚಾಲನೆ ನೀಡಲು ಸಿದ್ದವಾಗುತ್ತಿದ್ದು, ಹೊಸ ಕಾರು ಪ್ರಸಕ್ತ ವರ್ಷದ ಮೊದಲ ತ್ರೈಮಾಸಿಕ ಅವಧಿಯಲ್ಲಿ ಬಿಡುಗಡೆ ಮಾಡುವ ಯೋಜನೆಯಲ್ಲಿದೆ.

ಹೊಸ ಸ್ಕಾರ್ಪಿಯೋ ಎಸ್‍ಯುವಿ ಮಾದರಿಯ ಮಾರಾಜೋ ಎಂಪಿವಿ ಹೊಸ ಆವೃತ್ತಿಯಿಂದಲೂ ಕೆಲವು ಪ್ರೀಮಿಯಂ ಫೀಚರ್ಸ್‌ಗಳನ್ನು ಎರವಲು ಪಡೆದುಕೊಂಡಿದ್ದು, ಹೊಸ ಫೀಚರ್ಸ್‌ಗಳಿಂದಾಗಿ ಸ್ಕಾರ್ಪಿಯೋ ಕಾರು ಮತ್ತಷ್ಟು ಬಲಿಷ್ಠ ವಿನ್ಯಾಸದೊಂದಿಗೆ ವಿಸ್ತರಿತ ವೀಲ್ಹ್ ಬೆಸ್ ಮೂಲಕ ಅರಾಮದಾಯಕ ಕ್ಯಾಬಿನ್ ಸ್ಪೆಸ್ ಹೊಂದಿದೆ. ಈ ಹೊಸ ಎಸ್‍ಯುವಿಯಲ್ಲಿ ಆಕರ್ಷಕವಾದ ಪ್ರೀಮಿಯಂ ಫೀಚರ್ಸ್ ಜೊತೆಗೆ ಹೆಚ್ಚಿನ ಮಟ್ಟದ ಸುರಕ್ಷಾ ಸೌಲಭ್ಯಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗುತ್ತಿದೆ. ಇದರಲ್ಲಿ ಅಂಡ್ರಾಯಿಡ್ ಆಟೋ ಮತ್ತು ಆಟೋ ಕಾರ್ ಪ್ಲೇ ಸರ್ಪೊಟ್ ಮಾಡುವ ಇನ್ಪೋಟೈನ್‌ಮೆಂಟ್ ಸಿಸ್ಟಂ, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್, ಎಲೆಕ್ಟ್ರಿಕ್ ಸನ್‌ರೂಫ್ ಮತ್ತು ವಿವಿಧ ಡ್ರೈವ್ ಮೋಡ್ ಕಂಟ್ರೋಲ್ ಸೇರಿದಂತೆ ಹಲವು ಹೊಸ ಸೌಲಭ್ಯಗಳಿವೆ.

ಇನ್ನು ಒಟ್ಟಾರೆಯಾಗಿ ಮಹೀಂದ್ರಾ ಥಾರ್ ಭಾರತೀಯ ಮಾರುಕಟ್ಟೆಯಲ್ಲಿ ಬಹುದೀರ್ಘ ಕಾಲದಿಂದ ಮಾರಾಟವಾಗುತ್ತಿರುವ ಜನಪ್ರಿಯ ಆಫ್-ರೋಡ್ ಎಸ್‍ಯುವಿ ಮಾದರಿಯಾಗಿದೆ. ಆಫ್-ರೋಡ್ ವಾಹನ ಎಂದಾಗ ಭಾರತೀಯರಿಗೆ ಮೊದಲಿಗೆ ಥಾರ್ ಎಸ್‍ಯುವಿಯು ಮನಸ್ಸಿಗೆ ಬರುತ್ತದೆ. ಅಷ್ಟು ಜನಪ್ರಿಯತೆಯನ್ನು ಹೊಂದಿರುವ ಆಫ್-ರೋಡರ್ ಆಗಿದೆ,


Click it and Unblock the Notifications