ಸೆಪ್ಟೆಂಬರ್ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ ಜನಪ್ರಿಯ ಮಹೀಂದ್ರಾ ಬೊಲೆರೊ

ಮಹೀಂದ್ರಾ ಬೊಲೆರೊ ಮಹೀಂದ್ರಾ ಕಂಪನಿಯ ಸರಣಿಯಲ್ಲಿ ಅತ್ಯಂತ ಜನಪ್ರಿಯ ಪ್ರಯಾಣಿಕ ವಾಹನಗಳಲ್ಲಿ ಒಂದಾಗಿದೆ. ಮಹೀಂದ್ರಾ ಬೊಲೆರೊ ಬ್ರ್ಯಾಂಡ್‌ನ ಸಾಲಿನಲ್ಲಿ ಒಟ್ಟಾರೆ ಮಾರಾಟದ ಪರಿಮಾಣದ ಶೇಕಡಾವಾರು ಪ್ರಾಬಲ್ಯವನ್ನು ಮುಂದುವರೆಸಿದೆ ಮತ್ತು ಕಠಿಣ, ಸಮರ್ಥ ಮತ್ತು ವಿಶ್ವಾಸಾರ್ಹ ಯಾಂತ್ರಿಕ ಪ್ಯಾಕೇಜ್‌ನೊಂದಿಗೆ ನೀಡಲಾಗುತ್ತದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ ಜನಪ್ರಿಯ ಮಹೀಂದ್ರಾ ಬೊಲೆರೊ

ಮಹೀಂದ್ರಾ ಬೊಲೆರೊ ವಿಶ್ವಾಸಾರ್ಹ ವಾಹನವನ್ನು ಬಯಸುವ ಗ್ರಾಹಕರಿಗೆ ಯೋಗ್ಯವಾದ ಆಯ್ಕೆಯಾಗಿದೆ. ಈ ಎಸ್‍ಯುವಿ ಬ್ರ್ಯಾಂಡ್‌ಗೆ ಗಮನಾರ್ಹವಾದ ಮಾರಾಟದ ಕೊಡುಗೆ ನೀಡುವುದನ್ನು ಮುಂದುವರೆಸಿದೆ. 2022ರ ಸೆಪ್ಟೆಂಬರ್ ತಿಂಗಳಿನಲ್ಲಿ, ಸ್ವದೇಶಿ ವಾಹನ ತಯಾರಕ ಕಂಪನಿಯಾದ ಮಹೀಂದ್ರಾ ತನ್ನ ಬೊಲೆರೊದ 8000 ಯುನಿಟ್‌ಗಳನ್ನು ಮಾರಾಟಗೊಳಿಸಿವೆ. 2022ರ ಸೆಪ್ಟೆಂಬರ್ ತಿಂಗಳಿನಲ್ಲಿ ಮಹೀಂದ್ರಾ ಕಂಪನಿಯು ಶೇಕಡಾ 9.7 ರಷ್ಟು ಮಾರುಕಟ್ಟೆ ಪಾಲನ್ನು ಹೊಂದಿದೆ ಮತ್ತು ಈ ತಿಂಗಳಲ್ಲಿ ಒಟ್ಟು 34,508 ಯುನಿಟ್‌ಗಳನ್ನು ಮಾರಾಟ ಮಾಡಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ ಜನಪ್ರಿಯ ಮಹೀಂದ್ರಾ ಬೊಲೆರೊ

ಮಹೀಂದ್ರಾ XUV700, ಸ್ಕಾರ್ಪಿಯೊ-ಎನ್ ಮತ್ತು ಥಾರ್ ಬಲವಾದ ಬೇಡಿಕೆಯನ್ನು ಮುಂದುವರೆಸುತ್ತಿರುವಾಗ, ಹೊಸ ಮಹೀಂದ್ರ ಬೊಲೆರೊ ಬ್ರ್ಯಾಂಡ್‌ನ ಸಾಲಿನಲ್ಲಿ ಎರಡನೇ ಅತ್ಯುತ್ತಮ ಮಾರಾಟದ ಕೊಡುಗೆಯಾಗಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ ಜನಪ್ರಿಯ ಮಹೀಂದ್ರಾ ಬೊಲೆರೊ

ಬೊಲೆರೊದ ಒಟ್ಟು 8108 ಯುನಿಟ್‌ಗಳು ಭಾರತದಲ್ಲಿ ಮಾರಾಟವಾಗಿದ್ದು, ಸ್ಕಾರ್ಪಿಯೊವು 9536 ಯುನಿಟ್‌ಗಳ ಒಟ್ಟು ಮಾರಾಟದ ಪ್ರಮಾಣದೊಂದಿಗೆ ಭಾರತದಲ್ಲಿ ಹೆಚ್ಚು ಮಾರಾಟವಾದ ಮಹೀಂದ್ರಾ ಕಾರಾಗಿದೆ. ಮಹೀಂದ್ರಾ ಬೊಲೆರೊವನ್ನು ಖರೀದಿದಾರರಿಗೆ ಮೂರು ಟ್ರಿಮ್ ಆಯ್ಕೆಗಳಲ್ಲಿ ನೀಡಲಾಗುತ್ತದೆ. ಇದು B4, B6, ಮತ್ತು B6(O) ಆಗಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ ಜನಪ್ರಿಯ ಮಹೀಂದ್ರಾ ಬೊಲೆರೊ

2022ರ ಸೆಪ್ಟೆಂಬರ್ ತಿಂಗಳ ಮಾರಾಟದಲ್ಲಿ ಮಹೀಂದ್ರಾ ಕಂಪನಿಗೆ ಬೊಲೆರೊ ಉತ್ತಮ ಕೊಡುಗೆಯನ್ನು ನೀಡಿದೆ. ಸಾಮಾನ್ಯ ಬೊಲೆರೊ ಭಾರತೀಯ ಮಾರುಕಟ್ಟೆಯಲ್ಲಿ ಬಹುದೀರ್ಘಕಾಲದಿಂದ ಮಾರಾಟವಾಗುತ್ತಿರುವ ಜನಪ್ರಿಯ ಎಸ್‍ಯುವಿಗಳಲ್ಲಿ ಒಂದಾಗಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ ಜನಪ್ರಿಯ ಮಹೀಂದ್ರಾ ಬೊಲೆರೊ

ಈ ಮಹೀಂದ್ರಾ ಬೊಲೆರೊ ಎಸ್‍ಯುವಿ ಕೈಗೆಟುಕುವ ಬೆಲೆ ಮತ್ತು ಒರಟಾದ ಯುಟಿಲಿಟಿ ವಾಹನವಾಗಿದೆ. ಮಹೀಂದ್ರಾ ಕಂಪನಿಯು ಜನಪ್ರಿಯ ಬೊಲೆರೊ ಎಸ್‍ಯುವಿಯನ್ನು ಮೊದಲ ಬಾರಿಗೆ 2000ದಲ್ಲಿ ಬಿಡುಗಡೆಗೊಳಿಸಿದ್ದರು. ಇಂದಿಗೂ ಭಾರತೀಯ ಮಾರುಕಟ್ಟೆಯಲ್ಲಿ ಜನಪ್ರಿಯ ಎಸ್‍ಯುವಿಗಳಲ್ಲಿ ಒಂದಾಗಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ ಜನಪ್ರಿಯ ಮಹೀಂದ್ರಾ ಬೊಲೆರೊ

ಈ ಜನಪ್ರಿಯ ಮಹೀಂದ್ರಾ ಬೊಲೆರೊ ಎಸ್‍ಯುವಿ ಬಿ4, ಬಿ6 ಮತ್ತು ಬಿ6(ಒ) ಎಂಬ ಮೂರು ರೂಪಾಂತರಗಳಲ್ಲಿ ಲಭ್ಯವಿದೆ. ಈ ಬೊಲೆರೊ ವಿನ್ಯಾಸದ ಬಗ್ಗೆ ಹೇಳುವುದಾದರೆ, ಇದರ ಮುಂಭಾಗದಲ್ಲಿ ಹೊಸ ಬಂಪರ್, ಗ್ರಿಲ್ ಮತ್ತು ಮರುವಿನ್ಯಾಸಗೊಳಿಸಲಾದ ಹೆಡ್ ಲ್ಯಾಂಪ್ ಗಳನ್ನು ಅಳವಡಿಸಲಾಗಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ ಜನಪ್ರಿಯ ಮಹೀಂದ್ರಾ ಬೊಲೆರೊ

ಈ ಬೊಲೆರೊ ಎಸ್‍ಯುವಿ ಆಕರ್ಷಕ ಲುಕ್ ಅನ್ನು ಹೊಂದಿದೆ.ಬೊಲೆರೊ ಎಸ್‍‍ಯುವಿನಲ್ಲಿ ಹೊಸ ಕ್ರ್ಯಾಶ್ ಟೆಸ್ಟ್ ಸುರಕ್ಷತಾ ನಿಯಮಕ್ಕೆ ಅನುಗುಣವಾಗಿ ಅದರ ಮಂಭಾಗವನ್ನು ನವೀಕರಿಸಲಾಗಿದೆ. ಮುಂಭಾಗದ ಪ್ರಯಾಣಿಕರ ಸುರಕ್ಷತೆಗೆ ಈ ಹೊಸ ನವೀಕರಣವು ಸಹಕಾರಿಯಾಗಲಿದೆ

ಸೆಪ್ಟೆಂಬರ್ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ ಜನಪ್ರಿಯ ಮಹೀಂದ್ರಾ ಬೊಲೆರೊ

ಇದರೊಂದಿಗೆ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಫಾಗ್ ಲ್ಯಾಂಪ್, ಮತ್ತು ಪ್ರಯಾಣಿಕರ ಬದಿಯ ಏರ್‌ಬ್ಯಾಗ್ ಅನ್ನು ಈ ಬೊಲೆರೊ ಎಸ್‍‍ಯುವಿಯ ಟಾಪ್-ಎಂಡ್ ಮಾದರಿಯಲ್ಲಿ ಪ್ರತ್ಯೇಕವಾಗಿ ನೀಡಲಾಗುತ್ತದೆ. ಮಹೀಂದ್ರಾ ಬೊಲೆರೊ ಎಸ್‌ಯುವಿಯಲ್ಲಿ 1.5 ಎಲ್ 3-ಸಿಲಿಂಡರ್ ಎಮ್ಹಾಕ್ 75 ಡೀಸೆಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 75 ಬಿ‍‍ಹೆಚ್‍‍ಪಿ ಪವರ್ ಮತ್ತು 195 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ ಜನಪ್ರಿಯ ಮಹೀಂದ್ರಾ ಬೊಲೆರೊ

ಈ ಎಂಜಿನ್ ನೊಂದಿಗೆ 5 ಸ್ಪೀಡ್ ಮಾನ್ಯುವಲ್ ಗೇರ್ ಬಾಕ್ಸ್ ಅನ್ನು ಅಳವಡಿಸಲಾಗಿದೆ. ಮಹೀಂದ್ರಾ ಬೊಲೆರೊ ಎಸ್‍ಯುವಿಯನ್ನು ಮೊದಲ ಬಾರಿಗೆ ಭಾರತದಲ್ಲಿ 2000 ರಲ್ಲಿ ಪರಿಚಯಿಸಲಾಯಿತು, ಮತ್ತು ವರ್ಷಗಳಲ್ಲಿ ಕೆಲವು ಫೇಸ್‌ಲಿಫ್ಟ್‌ಗಳ ಹೊರತಾಗಿ, ವಾಹನವು ಒಂದೇ ಆಗಿರುತ್ತದೆ. ಅದರ ಇಬೊಲೆರೊ ಸಬ್ -4 ಮೀಟರ್ ವಾಹನವಾಗಿದೆ; ಇದರ ಉದ್ದ 3,995 ಮಿಮೀ, ಅಗಲ 1,745 ಎಂಎಂ, ಎತ್ತರ 1,880 ಎಂಎಂ, 2,680 ಎಂಎಂ ಉದ್ದದ ವ್ಹೀಲ್‌ಬೇಸ್ ಅನ್ನು ಒಳಗೊಂಡಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ ಜನಪ್ರಿಯ ಮಹೀಂದ್ರಾ ಬೊಲೆರೊ

ಮಹೀಂದ್ರಾ ಕಂಪನಿಯು 2020ರ ಆಟೋ ಎಕ್ಸ್‌ಪೋದಲ್ಲಿ ಮೊದಲ ಬಾರಿಗೆ ಪೂರ್ವವೀಕ್ಷಣೆ ಮಾಡಿದ ನಂತರ ಸುಮಾರು 33 ತಿಂಗಳ ಕಾಯುವಿಕೆಯ ನಂತರ, ಎಕ್ಸ್‌ಯುವಿ300 ಟರ್ಬೋಸ್ಪೋರ್ಟ್ ಮಾದರಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಾಗಿದೆ. ಈ ಹೊಸ ಮಹೀಂದ್ರಾ ಎಕ್ಸ್‌ಯುವಿ300 ಟರ್ಬೋಸ್ಪೋರ್ಟ್ ಆರಂಭಿಕ ಬೆಲೆಯು ರೂ.10.35 ಲಕ್ಷವಾಗಿದೆ. ಹೊಸ ಮಹೀಂದ್ರಾ ಎಕ್ಸ್‌ಯುವಿ300 ಟರ್ಬೋಸ್ಪೋರ್ಟ್ W6 TGDi, W8 TGDi ಮತ್ತು W8(O) TGDi ಎಂಬ ಮೂರು ಟ್ರಿಮ್ ಹಂತಗಳಲ್ಲಿ ಲಭ್ಯವಿದೆ, ಹೊಸ 1.2-ಲೀಟರ್ mStallion TGDi ಎಂಜಿನ್‌ನಿಂದ ಪಡೆದ ಮೊದಲ ಎಸ್‍ಯುವಿ ಇದಾಗಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ ಜನಪ್ರಿಯ ಮಹೀಂದ್ರಾ ಬೊಲೆರೊ

ಇನ್ನು ಈ ಮಹೀಂದ್ರಾ ಬೊಲೆರೊ ಎಸ್‍ಯುವಿಯು ಬಾಕ್ಸೀ ವಿನ್ಯಾಸವನ್ನು ಹೊಂದಿದೆ. ಹೊಸ ಬೊಲೆರೊ ಎಸ್‍‍ಯುವಿಯಲ್ಲಿ ಸುರಕ್ಷತಾ ಕ್ರಮಗಳನ್ನು ಹೆಚ್ಚಿಸಿದೆ. ಮಹೀಂದ್ರಾ ಬೊಲೆರೊ ಎಸ್‍ಯುವಿ ಭಾರತೀಯ ಮಾರುಕಟ್ಟೆಯಲ್ಲಿ ಉತ್ತಮ ಬೇಡೀಕೆಯೊಂದಿಗೆ ಮಾರಾಟವಾಗುತ್ತಿದೆ.

Most Read Articles

Kannada
English summary
Mahindra sold more than 8000 units of bolero in september 2022 details
Story first published: Monday, October 10, 2022, 11:24 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X