Just In
- 3 hrs ago
ಎಲೆಕ್ಟ್ರಿಕ್, ಹೈಬ್ರಿಡ್ ಕಾರುಗಳಲ್ಲಿ ಮಾತ್ರ ರಿಜನರೇಟಿವ್ ಬ್ರೇಕಿಂಗ್ ಏಕೆ ಲಭ್ಯವಿದೆ: ಇದರ ಉಪಯೋಗವೇನು?
- 4 hrs ago
ಹೊಸ ನವೀಕರಣಗಳೊಂದಿಗೆ ಸಿಎಫ್ಮೋಟೋ 150ಎನ್ಕೆ ಬೈಕ್ ಬಿಡುಗಡೆ
- 5 hrs ago
ಏಪ್ರಿಲ್ ತಿಂಗಳ ಟಿವಿಎಸ್ ವಾಹನ ಮಾರಾಟ ವರದಿ: ರಫ್ತಿನಲ್ಲಿ ದಾಖಲೆ ನಿರ್ಮಾಣ
- 6 hrs ago
ಎಲೆಕ್ಟ್ರಿಕ್ ಕಾರ್ ಆಗಿ ಪರಿವರ್ತನೆಗೊಂಡು ಮಿಂಚುತ್ತಿದೆ 1954ರ ಫಿಯೆಟ್ ಕಾರು
Don't Miss!
- News
ಶಿವಮೊಗ್ಗ: ಮಳೆಯಲ್ಲಿ ಸಿಲುಕಿದ್ದ 150 ಮಂದಿಗೆ ಆಪತ್ಭಾಂಧವರಾದ ಅಗ್ನಿಶಾಮಕ ದಳ
- Sports
MI ಆಡುವ 11ರ ಬಳಗದಲ್ಲಿ ಮಗನಿಗೆ ಅವಕಾಶ ಸಿಗದ ಕುರಿತು ಸಚಿನ್ ತೆಂಡೂಲ್ಕರ್ ಹೇಳಿದ್ದೇನು?
- Lifestyle
ಮೇ. 30ಕ್ಕೆ ಶನಿ ಜಯಂತಿ: ಶನಿ ಧೈಯ್ಯಾ, ಶನಿ ದೋಷವಿದ್ದರೆ ಈ ಪರಿಹಾರಗಳನ್ನು ಮಾಡಿ
- Finance
ಮೇ 24ರಂದು ವಾಣಿಜ್ಯ ಬೆಳೆ ಅಡಿಕೆ, ಕಾಫಿ, ಮೆಣಸು, ಏಲಕ್ಕಿ ಪೇಟೆ ಧಾರಣೆ
- Movies
'ಯುಗಾಂತರ' ಧಾರಾವಾಹಿಗೆ ಪ್ರಾಮಾಣಿಕ ಐಎಎಸ್ ಅಧಿಕಾರಿ ಪ್ರೇರಣೆ: ವಾಹಿನಿ ಮುಖ್ಯಸ್ಥರ ಸ್ಪಷ್ಟನೆಯೇನು?
- Technology
ಭಾರತದಲ್ಲಿ ಎಲ್ಜಿ OLED 2022 ಸ್ಮಾರ್ಟ್ ಟಿವಿ ಸರಣಿ ಅನಾವರಣ!
- Education
BSF Recruitment 2022 : 281 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಬಾರ್ನ್ ಎಲೆಕ್ಟ್ರಿಕ್ ಸರಣಿಯ ಮೊದಲ ಇವಿ ಕಾರಿನ ಟೀಸರ್ ಬಿಡುಗಡೆ ಮಾಡಿದ ಮಹೀಂದ್ರಾ
ಮಹೀಂದ್ರಾ(Mahindra) ಕಂಪನಿಯು ಭಾರತದಲ್ಲಿ ಹೊಸ ತಲೆಮಾರಿನ ಇವಿ ಮಾದರಿಗಳ ಬಿಡುಗಡೆ ಮಾಡಲು ಸಿದ್ದವಾಗುತ್ತಿದ್ದು, ಬಾರ್ನ್ ಇವಿ ಶ್ರೇಣಿಯಲ್ಲಿ ಒಟ್ಟು ಮೂರು ಹೊಸ ಇವಿ ಎಸ್‌ಯುವಿ ಕಾರುಗಳನ್ನು ಪರಿಚಯಿಸುವ ಯೋಜನೆಯಲ್ಲಿದೆ.

ಪ್ರತ್ಯೇಕವಾದ ಇವಿ ಪ್ಲ್ಯಾಟ್‌ಫಾರ್ಮ್ ಮೇಲೆ ಮಹೀಂದ್ರಾ ಕಂಪನಿಯು ಹೊಸ ಎಸ್‌ಯುವಿ ಮಾದರಿಗಳನ್ನು ಅಭಿವೃದ್ದಿಗೊಳಿಸುತ್ತಿದ್ದು, ಮೂರು ಹೊಸ ಇವಿ ಕಾರಿಗಳಲ್ಲಿ ಮೊದಲ ಇವಿ ಎಸ್‌ಯುವಿ ಕಾರಿನ ಟೀಸರ್ ಹಂಚಿಕೊಂಡಿರುವ ಕಂಪನಿಯು ಮುಂಬರುವ ಜುಲೈನಲ್ಲಿ ಕಾನ್ಸೆಪ್ಟ್ ಮಾದರಿಯನ್ನು ಅನಾವರಣಗೊಳಿಸುವುದಾಗಿ ಅಧಿಕೃತ ಮಾಹಿತಿ ಹಂಚಿಕೊಂಡಿದೆ.

ಮಹೀಂದ್ರಾ ಕಂಪನಿಯು ಬಾರ್ನ್ ಇವಿ ಪರಿಕಲ್ಪನೆ ಅಡಿ ಹೊಸ ಇವಿ ಕಾರುಗಳನ್ನು ಯುಕೆಯಲ್ಲಿರುವ ತನ್ನ ಅಡ್ವಾನ್ಸ್ಡ್ ಡಿಸೈನ್ ಸ್ಟುಡಿಯೋದಲ್ಲಿ ವಿನ್ಯಾಸಗೊಳಿಸುತ್ತಿದ್ದು, ಹೊಸ ಶ್ರೇಣಿಯ ಇವಿ ಕಾರುಗಳನ್ನು 2025 ಮತ್ತು 2026ರ ನಡುವೆ ಪರಿಚಯಿಸಬಹುದಾಗಿದೆ.

ಅದಕ್ಕೂ ಮುನ್ನ ಕಂಪನಿಯು ಭಾರತದಲ್ಲಿ ಈಗಾಗಲೇ ಅನಾವರಣಗೊಳಿಸಲಾಗಿರುವ ಇಕೆಯುವಿ100 ಮತ್ತು ಇಎಕ್ಸ್‌ಯುವಿ300 ಕಾರುಗಳನ್ನು 2023ರ ಆರಂಭದಲ್ಲಿ ಬಿಡುಗಡೆ ಮಾಡಲಿದ್ದು, ಬಾರ್ನ್ ಇವಿ ಪರಿಕಲ್ಪನೆಯಲ್ಲಿ ಅಭಿವೃದ್ದಿಗೊಳ್ಳುತ್ತಿರುವ ಇವಿ ಕಾರುಗಳು ಇಕೆಯುವಿ100 ಮತ್ತು ಇಎಕ್ಸ್‌ಯುವಿ300 ಕಾರುಗಳಿಂತಲೂ ಹೆಚ್ಚಿನ ಮಟ್ಟದ ತಂತ್ರಜ್ಞಾನ ಪ್ರೇರಣೆಯೊಂದಿಗೆ ಬಿಡುಗಡೆಯಾಗಲಿವೆ ಎನ್ನಬಹುದು.

ಬಾರ್ನ್ ಇವಿ ಪರಿಕಲ್ಪನೆಯ ಹೊಸ ಕಾರುಗಳು ಮಹೀಂದ್ರಾ ಕಂಪನಿಯ ಹೊಸ ಇವಿ ಕಾರುಗಳಿಗಾಗಿ ಮೀಸಲಾದ ಪ್ಲಾಟ್‌ಫಾರ್ಮ್ ಅನ್ನು ಆಧರಿಸಿರಲಿದ್ದು, ಹೊಸ ಇವಿ ಎಸ್‌ಯುವಿ ಕಾರು ಸಿ ಆಕಾರದ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಟೈಲ್‌ಲೈಟ್ ಮತ್ತು ಆಕರ್ಷಕ ಕ್ಯಾಬಿನ್ ಕೂಡಾ ಹೊಂದಿರಲಿದೆ.

2022ರ ಜುಲೈನಲ್ಲಿ ಹೊಸ ಬಾರ್ನ್ ಇವಿ ಪರಿಕಲ್ಪನೆಯ ಅಡಿಯ ಹೊಸ ಮೂರು ಇವಿ ಕಾರುಗಳು ಕಾನ್ಸೆಪ್ಟ್ ಮಾದರಿಗಳೊಂದಿಗೆ ಅನಾವರಣಗೊಳ್ಳಲಿದ್ದು, ಹೊಸ ಕಾರುಗಳ ಭಾರತದಲ್ಲಿ ಮಾತ್ರವಲ್ಲ ಪ್ರಮುಖ ಅಂತರಾಷ್ಟ್ರೀಯ ಮಾರುಕಟ್ಟೆಗಳಿಗೂ ಪ್ರವೇಶಿಸಲಿವೆ.

ಕಂಪನಿಯು ಪ್ರಸ್ತುತ ಮಾರುಕಟ್ಟೆಯಲ್ಲಿ ಎಕ್ಸ್‌ಯುವಿ700, ಎಕ್ಸ್‌ಯುವಿ300, ಬೊಲೆರೊ, ಸ್ಕಾರ್ಪಿಯೋ, ಥಾರ್ ಮಾದರಿಯೊಂದಿಗೆ ಎಸ್‌ಯುವಿ ಮಾರಾಟದಲ್ಲಿ ಮುಂಚೂಣಿ ಹೊಂದಿರುವ ಮಹೀಂದ್ರಾ ಕಂಪನಿಯು ಎಸ್‌ಯುವಿ ವಿಭಾಗದಲ್ಲಿ ಮತ್ತಷ್ಟು ಹೊಸ ಕಾರುಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದ್ದು, ಹೊಸ ಎಸ್‌ಯುವಿ ಕಾರುಗಳ ಪಟ್ಟಿಯಲ್ಲಿ ಸಾಮಾನ್ಯ ಮಾದರಿಗಳ ಜೊತೆಗೆ ಎಲೆಕ್ಟ್ರಿಕ್ ಮಾದರಿಗಳು ಸಹ ಮಾರುಕಟ್ಟೆ ಪ್ರವೇಶಿಸುತ್ತಿವೆ.

ಮಹೀಂದ್ರಾ ಕಂಪನಿಯು ಮುಂದಿನ ಐದು ವರ್ಷಗಳ ಅವಧಿಯಲ್ಲಿ ಒಟ್ಟು 13 ಹೊಸ ಕಾರುಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದ್ದು, ಹೊಸ ಯೋಜನೆ ಅಡಿ ಎಲೆಕ್ಟ್ರಿಕ್ ಮಾದರಿಯಾದ ಇಎಕ್ಸ್‌ಯುವಿ300 ಮಾದರಿಯು ಕೂಡಾ ಶೀಘ್ರದಲ್ಲೇ ಬಿಡುಗಡೆಯಾಗಲಿದೆ.

2020ರ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಮೊದಲ ಅನಾವರಣಗೊಂಡಿದ್ದ ಹೊಸ ಇಎಕ್ಸ್‌ಯುವಿ(eXUV300) ಕಾರನ್ನು ಮಾರುಕಟ್ಟೆಯಲ್ಲಿನ ಸನ್ನಿವೇಶವನ್ನು ಆಧರಿಸಿ ಇದೀಗ ಬಿಡುಗಡೆ ಮಾಡಲು ಮುಂದಾಗಿದ್ದು, ಹೊಸ ಕಾರು ಬಿಡುಗಡೆಗೂ ಮುನ್ನ ವಿವಿಧ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಕೈಗೊಂಡಿದೆ.

ಹೊಸ ಕಾರು ಈ ವರ್ಷಾಂತ್ಯಕ್ಕೆ ಉತ್ಪಾದನಾ ಮಾದರಿಯೊಂದಿಗೆ ಅನಾವರಣಗೊಳ್ಳಲಿದ್ದು, 2023ರ ಆರಂಭದಲ್ಲಿ ಅಧಿತೃತವಾಗಿ ಮಾರುಕಟ್ಟೆ ಪ್ರವೇಶಿಸುವುದು ಖಚಿತವಾಗಿದೆ. ಮಹೀಂದ್ರಾ ಕಂಪನಿಯು ಇಎಕ್ಸ್‌ಯುವಿ300 ಬಿಡುಗಡೆಗೂ ಮುನ್ನ ಇಕೆಯುವಿ100 ಎಲೆಕ್ಟ್ರಿಕ್ ಕಾರು ಮಾದರಿಯ ಮಾರಾಟಕ್ಕೆ ಚಾಲನೆ ನೀಡಲಿದ್ದು, ಹೊಸ ಇಎಕ್ಸ್‌ಯುವಿ300 ಮಾದರಿಯು ಪ್ರಸ್ತುತ ಮಾರುಕಟ್ಟೆಯಲ್ಲಿ ಇವಿ ಕಾರು ಮಾರಾಟದಲ್ಲಿ ಮುಂಚೂಣಿಯಲ್ಲಿ ಟಾಟಾ ನೆಕ್ಸಾನ್ ಇವಿ ಮಾದರಿಗೆ ಪೈಪೋಟಿಯಾಗಿ ಬಿಡುಗಡೆಯಾಗುತ್ತಿದೆ.

ಮಹೀಂದ್ರಾ ಕಂಪನಿಯು ಬಿಡುಗಡೆ ಮಾಡಲಿರುವ ಹೊಸ ಎಂಟು ಎಲೆಕ್ಟ್ರಿಕ್ ಕಾರುಗಳೊಂದಿಗೆ ಐದು ಸಾಮಾನ್ಯ ಕಾರು ಮಾದರಿಗಳು ಸಹ ಬಿಡುಗಡೆಯಾಗಲಿದ್ದು, ಹೊಸ ಎಲೆಕ್ಟ್ರಿಕ್ ಕಾರುಗಳು 2022ರ ಮಧ್ಯಂತರದಿಂದ ಹಂತ-ಹಂತವಾಗಿ ಮಾರುಕಟ್ಟೆ ಪ್ರವೇಶಿಸಲಿವೆ.

2022ರಿಂದ 2027ರ ತನಕ ಎಂಟು ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲಿರುವ ಮಹೀಂದ್ರಾ ಕಂಪನಿಯು ಆರಂಭಿಕವಾಗಿ ಇಕೆಯುವಿ100 ನಂತರ ಇಎಕ್ಸ್‌ಯುವಿ300 ಬಿಡುಗಡೆ ಮಾಡಲಿದ್ದು, ತದನಂತರ ಮಾರುಕಟ್ಟೆಯಲ್ಲಿನ ಇತರೆ ಕಾರುಗಳ ಮಾದರಿಗಳಲ್ಲೂ ಎಲೆಕ್ಟ್ರಿಕ್ ಆವೃತ್ತಿಗಳನ್ನು ಪರಿಚಯಿಸಲಿದೆ.

ಹೊಸ ಇಎಕ್ಸ್‌ಯುವಿ300 ಮಾದರಿಯು ಪ್ರತಿ ಚಾರ್ಜ್‌ಗೆ ಕನಿಷ್ಠ 380 ಕಿ.ಮೀ ನಿಂದ 420 ಕಿ.ಮೀ ಮೈಲೇಜ್ ಪ್ರೇರಿತ ಬ್ಯಾಟರಿ ಪ್ಯಾಕ್‌ನೊಂದಿಗೆ ಟಾಟಾ ನೆಕ್ಸಾನ್ ಇವಿ ಬೆಲೆಗೆ ಸರಿಸಮನಾಗಿ ಬಿಡುಗಡೆ ಹೊಂದಬಹುದಾಗಿದ್ದು, ಹೊಸ ಕಾರು ಎಂಜಿ ಜೆಡ್ಎಸ್ ಇವಿ ಮಾದರಿಗೂ ಸಹ ಪೈಪೋಟಿ ನೀಡಲಿದೆ.

ಇಕೆಯುವಿ100 ಮಾದರಿಯು ಎಕ್ಸ್‌ಶೋರೂಂ ಪ್ರಕಾರ ರೂ. 8.25 ಲಕ್ಷ ಬೆಲೆ ಹೊಂದಿದ್ದು, 15.9kWh ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್‌ನೊಂದಿಗೆ ಪ್ರತಿ ಚಾರ್ಜ್‌ಗೆ ಕನಿಷ್ಠ 150 ಕಿ.ಮೀ ಮೈಲೇಜ್ ಸಾಮರ್ಥ್ಯ ಹೊಂದಿರಲಿದೆ. ಹಾಗೆಯೇ ಇಎಕ್ಸ್‌ಯುವಿ 300 ಮಾದರಿಯು ಹೆಚ್ಚಿನ ಮಟ್ಟದ ಬ್ಯಾಟರಿ ಪ್ಯಾಕ್‌ನೊಂದಿಗೆ ಗರಿಷ್ಠ ಮೈಲೇಜ್ ಪ್ರೇರಣೆ ಹೊಂದಿಲಿದ್ದು, ಇದು 2023ರ ಆರಂಭದಲ್ಲಿ ಬಿಡುಗಡೆಯಾಗಲಿದೆ.