ಬಿಡುಗಡೆಗೂ ಮುನ್ನ ನ್ಯೂ ಜನರೇಷನ್ ಸ್ಕಾರ್ಪಿಯೋ ಟೀಸರ್ ಪ್ರಕಟಿಸಿದ ಮಹೀಂದ್ರಾ

ಮಹೀಂದ್ರಾ ಕಂಪನಿಯು ತನ್ನ ಹೊಸ ಸ್ಕಾರ್ಪಿಯೋ ಎಸ್‌ಯುವಿ ಮಾದರಿಯನ್ನು ಮುಂದಿನ ಜೂನ್ ಅಂತ್ಯಕ್ಕೆ ಬಿಡುಗಡೆ ಮಾಡುವ ಸಿದ್ದತೆಯಲ್ಲಿದ್ದು, ಹೊಸ ಕಾರು ಬಿಡುಗಡೆಗೂ ಮುನ್ನ ಕಂಪನಿಯು ಟೀಸರ್ ಪ್ರಕಟಿಸಿದೆ.

ಬಿಡುಗಡೆಗೂ ಮುನ್ನ ನ್ಯೂ ಜನರೇಷನ್ ಸ್ಕಾರ್ಪಿಯೋ ಟೀಸರ್ ಪ್ರಕಟಿಸಿದ ಮಹೀಂದ್ರಾ

ಹೊಸ ಸ್ಕಾರ್ಪಿಯೋ ಎಸ್‌ಯುವಿ ಮಾದರಿಯ ಬಿಡುಗಡೆಗಾಗಿ ವಿವಿಧ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುತ್ತಿದ್ದು, ಮಾರುಕಟ್ಟೆಯಲ್ಲಿ ಬೇಡಿಕೆ ಹಲವಾರು ಹೊಸ ಬದಲಾವಣೆಗಳನ್ನು ಪಡೆದುಕೊಂಡಿರುವ ನ್ಯೂ ಜನರೇಷನ್ ಮಾದರಿಯು ಭಾರೀ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಬಿಡುಗಡೆಗೂ ಮುನ್ನ ನ್ಯೂ ಜನರೇಷನ್ ಸ್ಕಾರ್ಪಿಯೋ ಟೀಸರ್ ಪ್ರಕಟಿಸಿದ ಮಹೀಂದ್ರಾ

ಮಹೀಂದ್ರಾ ಕಂಪನಿಯು ಕಳೆದ ಎರಡು ವರ್ಷಗಳಲ್ಲಿ ಪ್ರಮುಖ ಕಾರುಗಳ ನ್ಯೂ ಜನರೇಷನ್ ಮಾದರಿಗಳನ್ನು ಬಿಡುಗಡೆ ಮಾಡುವ ಮೂಲಕ ಭಾರೀ ಬೇಡಿಕೆ ಪಡೆದುಕೊಂಡಿದ್ದು, ಹೊಸ ತಲೆಮಾರಿನ ಸ್ಕಾರ್ಪಿಯೋ ಆವೃತ್ತಿಯು ಸಹ ಹೊಸ ಬದಲಾವಣೆಗಳೊಂದಿಗೆ ಬಿಡುಗಡೆಗೆ ಸಿದ್ದವಾಗುತ್ತಿದೆ.

ಬಿಡುಗಡೆಗೂ ಮುನ್ನ ನ್ಯೂ ಜನರೇಷನ್ ಸ್ಕಾರ್ಪಿಯೋ ಟೀಸರ್ ಪ್ರಕಟಿಸಿದ ಮಹೀಂದ್ರಾ

ನ್ಯೂ ಜನರೇಷನ್ ಸ್ಕಾರ್ಪಿಯೋ ಕಾರು ಮಾದರಿಯ ಪ್ರಸ್ತುತ ಮಾರುಕಟ್ಟೆಯಲ್ಲಿನ ಮಾರಾಜೋ ಎಂಪಿವಿಯಿಂದಲೂ ಕೆಲವು ಪ್ರೀಮಿಯಂ ಫೀಚರ್ಸ್‌ಗಳನ್ನು ಎರವಲು ಪಡೆದುಕೊಂಡಿದ್ದು, ಹೊಸ ಫೀಚರ್ಸ್‌ಗಳಿಂದಾಗಿ ಸ್ಕಾರ್ಪಿಯೋ ಕಾರು ಮತ್ತಷ್ಟು ಬಲಿಷ್ಠ ವಿನ್ಯಾಸದೊಂದಿಗೆ ವಿಸ್ತರಿತ ವೀಲ್ಹ್ ಬೆಸ್ ಮೂಲಕ ಅರಾಮದಾಯಕ ಕ್ಯಾಬಿನ್ ಸ್ಪೆಸ್ ಹೊಂದಿದೆ.

ಬಿಡುಗಡೆಗೂ ಮುನ್ನ ನ್ಯೂ ಜನರೇಷನ್ ಸ್ಕಾರ್ಪಿಯೋ ಟೀಸರ್ ಪ್ರಕಟಿಸಿದ ಮಹೀಂದ್ರಾ

ಹಾಗೆಯೇ ಹೊಸ ಕಾರಿನಲ್ಲಿ ಪ್ರೀಮಿಯಂ ಫೀಚರ್ಸ್‌ಗಳ ಜೊತೆಗೆ ಹೆಚ್ಚಿನ ಮಟ್ಟದ ಸುರಕ್ಷಾ ಸೌಲಭ್ಯಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗುತ್ತಿದ್ದು, ಆರಾಮದಾಯಕವಾದ ಆಸನ ಸೌಲಭ್ಯದೊಂದಿಗೆ ಅಂಡ್ರಾಯಿಡ್ ಆಟೋ ಮತ್ತು ಆಟೋ ಕಾರ್ ಪ್ಲೇ ಸರ್ಪೊಟ್ ಮಾಡುವ ಇನ್ಪೋಟೈನ್‌ಮೆಂಟ್ ಸಿಸ್ಟಂ, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್, ಎಲೆಕ್ಟ್ರಿಕ್ ಸನ್‌ರೂಫ್ ಮತ್ತು ವಿವಿಧ ಡ್ರೈವ್ ಮೋಡ್ ಕಂಟ್ರೋಲ್ ಸೇರಿದಂತೆ ಹಲವು ಹೊಸ ಸೌಲಭ್ಯಗಳಿವೆ.

ಬಿಡುಗಡೆಗೂ ಮುನ್ನ ನ್ಯೂ ಜನರೇಷನ್ ಸ್ಕಾರ್ಪಿಯೋ ಟೀಸರ್ ಪ್ರಕಟಿಸಿದ ಮಹೀಂದ್ರಾ

ಹೊಸ ಕಾರಿನಲ್ಲಿ ಈ ಬಾರಿ ಮತ್ತೊಂದು ವಿಶೇಷವೆಂದರೆ ಬ್ರಾಂಡ್ ನ್ಯೂ ಲೋಗೊ ಹೊಂದಿದ್ದು, ಸ್ಟೀರಿಂಗ್ ಮೌಂಟೆಡ್ ಮೇಲೆ ಇರಿಸಲಾಗಿರುವ ಲೋಗೊ ಸಾಕಷ್ಟು ಆಕರ್ಷಕವಾಗಿದೆ. ಹಾಗೆಯೇ ಹೊಸ ಕಾರಿನಲ್ಲಿ ಮಲ್ಟಿ ಏರ್‌ಬ್ಯಾಗ್, ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ರಿಯರ್ ಪಾರ್ಕಿಂಗ್ ಕ್ಯಾಮೆರಾ, ಆಯ್ದ ವೆರಿಯೆಂಟ್‌ಗಳಲ್ಲಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್, ಆಲ್ ವೀಲ್ಹ್ ಡಿಸ್ಕ್ ಬ್ರೇಕ್ ಸೌಲಭ್ಯಗಳಿವೆ.

ಬಿಡುಗಡೆಗೂ ಮುನ್ನ ನ್ಯೂ ಜನರೇಷನ್ ಸ್ಕಾರ್ಪಿಯೋ ಟೀಸರ್ ಪ್ರಕಟಿಸಿದ ಮಹೀಂದ್ರಾ

ಟಾಪ್ ಎಂಡ್ ಮಾದರಿಗಳಲ್ಲಿ ಕ್ರೂಸ್ ಕಂಟ್ರೋಲ್, ಸನ್‌ರೂಫ್, ಪುಶ್ ಬಟನ್ ಆನ್/ಆಫ್, ಕೀ ಲೆಸ್ ಎಂಟ್ರಿ, ರೂಫ್ ರೈಲ್ಸ್, ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್‌ಇಡಿ ಫಾಗ್ ಲ್ಯಾಂಪ್, ಎಲ್ಇಡಿ ಟರ್ನ್ ಇಂಡಿಕೇಟಕ್ ಲೈಟ್, ಸಿಲ್ವರ್ ಸ್ಕೀಡ್ ಪ್ಲೇಟ್ ಸೌಲಭ್ಯಗಳಿರಲಿವೆ.

ಬಿಡುಗಡೆಗೂ ಮುನ್ನ ನ್ಯೂ ಜನರೇಷನ್ ಸ್ಕಾರ್ಪಿಯೋ ಟೀಸರ್ ಪ್ರಕಟಿಸಿದ ಮಹೀಂದ್ರಾ

ಇದರೊಂದಿಗೆ ಹೊಸ ಕಾರಿನಲ್ಲಿ 17 ಇಂಚಿನ ಅಲಾಯ್ ವೀಲ್ಹ್‌ಗಳು, ಹೊಸ ವಿನ್ಯಾಸದ ಫ್ರಂಟ್ ಅಂಡ್ ರಿಯರ್ ಬಂಪರ್ ಮತ್ತು ವಿಸ್ತರಿತ ವೀಲ್ಹ್‌ಬೆಸ್‌ನಿಂದಾಗಿ ಮೂರನೇ ಸಾಲಿನ ಪ್ರಯಾಣಿಕರಿಗೆ ಹೆಚ್ಚಿನ ಮಟ್ಟದ ಸ್ಥಳಾವಕಾಶ ನೀಡಲಿದೆ.

ಬಿಡುಗಡೆಗೂ ಮುನ್ನ ನ್ಯೂ ಜನರೇಷನ್ ಸ್ಕಾರ್ಪಿಯೋ ಟೀಸರ್ ಪ್ರಕಟಿಸಿದ ಮಹೀಂದ್ರಾ

ಹೊಸ ಕಾರಿನಲ್ಲಿ ರಿಯರ್ ಎಸಿ ವೆಂಟ್ಸ್, ಲೆದರ್ ಸೀಟುಗಳು, 6 ಹಂತದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಡ್ರೈವರ್ ಸೀಟ್ ಸೇರಿದಂತೆ ಹೊಸ ಕಾರಿನಲ್ಲಿ ಹಲವಾರು ಸುರಕ್ಷಾ ಸೌಲಭ್ಯಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗುತ್ತಿದೆ.

ಬಿಡುಗಡೆಗೂ ಮುನ್ನ ನ್ಯೂ ಜನರೇಷನ್ ಸ್ಕಾರ್ಪಿಯೋ ಟೀಸರ್ ಪ್ರಕಟಿಸಿದ ಮಹೀಂದ್ರಾ

ಹೊಸ ಕಾರಿನ ವಿನ್ಯಾಸದ ಕುರಿತು ಹೇಳುವುದಾದರೆ ನವೀಕರಿಸಲಾದ ಗ್ರಿಲ್‌ನೊಂದಿಗೆ ಅಡ್ಡಲಾಗಿ ಮತ್ತು ನಡುವೆ ಐದು ಲಂಬ ಸ್ಲೇಟ್ಗಳನ್ನು ನೀಡಲಾಗಿದೆ. ಇದರೊಂದಿಗೆ ಎರಡು ಭಾಗಗಳಲ್ಲಿ ಹೆಡ್‌ಲೈಟ್ ಘಟಕಗಳನ್ನು ನೀಡಲಾಗಿದ್ದು, ಅದನ್ನು ಎರಡು ಭಾಗಗಳಾಗಿ ವಿಂಗಡಿಸಲಾಗಿದೆ.

ಬಿಡುಗಡೆಗೂ ಮುನ್ನ ನ್ಯೂ ಜನರೇಷನ್ ಸ್ಕಾರ್ಪಿಯೋ ಟೀಸರ್ ಪ್ರಕಟಿಸಿದ ಮಹೀಂದ್ರಾ

ಮುಂಭಾಗದಿಂದ ಬಲವಾದ ನೋಟವನ್ನು ನೀಡುವ ಅದರ ಬಾನೆಟ್ ಮೇಲೆ ಗೆರೆಗಳನ್ನು ಕಾಣಬಹುದು. ಅದರ ಬದಿಯಲ್ಲಿ ದೊಡ್ಡ ಮಿಶ್ರಲೋಹದ ಚಕ್ರಗಳು ಕಂಡುಬರುತ್ತವೆ. ಇದು ಈ ಎಸ್‌ಯುವಿಯ ಗಾತ್ರಕ್ಕೆ ಸಾಕಾಗಲಿದ್ದು, ಇದರ ಪಕ್ಕದಲ್ಲಿರುವ ಪುಟ್ ಸ್ಟೆಪ್‌ಗಳನ್ನು ಮೊದಲಿಗಿಂತಲೂ ದೊಡ್ಡದಾಗಿ ಇರಿಸಬಹುದಾಗಿದ್ದು, ಪ್ರಯಾಣಿಕರಿಗೆ ಇದು ಹತ್ತಲು ಮತ್ತು ಇಳಿಯಲು ಸಾಕಷ್ಟು ಸಹಕಾರಿಯಾಗುತ್ತದೆ. ಹಿಂಭಾಗದಲ್ಲಿ ಟೈಲ್ ಗೇಟ್ ಮತ್ತು ಅದನ್ನು ತೆರೆಯಲು ಬದಿಯಲ್ಲಿ ಡೋರ್ ಹ್ಯಾಂಡಲ್ ಇದ್ದು, ಎಲ್ಇಡಿ ಟೈಲ್ ಲೈಟ್ ಇದರಲ್ಲಿ ಕಾಣಬಹುದಾಗಿದೆ.

ಬಿಡುಗಡೆಗೂ ಮುನ್ನ ನ್ಯೂ ಜನರೇಷನ್ ಸ್ಕಾರ್ಪಿಯೋ ಟೀಸರ್ ಪ್ರಕಟಿಸಿದ ಮಹೀಂದ್ರಾ

ಹಿಂಭಾಗದಲ್ಲಿ ಸ್ಟಾಪ್ ಲೈಟ್, ದೊಡ್ಡ ವೈಪರ್ ಮತ್ತು ಶಾರ್ಕ್ ಫಿನ್ ಆಂಟೆನಾವನ್ನು ಮೇಲಿನ ಭಾಗದಲ್ಲಿ ಕಾಣಬಹುದಾಗಿದ್ದು, ಇದು ಹಿಂಭಾಗದಿಂದ ವಿನ್ಯಾಸವನ್ನು ಮತ್ತಷ್ಟು ಬಲಿಷ್ಠತೆ ನೀಡುತ್ತದೆ.

ಬಿಡುಗಡೆಗೂ ಮುನ್ನ ನ್ಯೂ ಜನರೇಷನ್ ಸ್ಕಾರ್ಪಿಯೋ ಟೀಸರ್ ಪ್ರಕಟಿಸಿದ ಮಹೀಂದ್ರಾ

ಇದರೊಂದಿಗೆ 2022ರ ಮಹೀಂದ್ರಾ ಸ್ಕಾರ್ಪಿಯೋ ಕಾರಿನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಗಳನ್ನು ನೀಡಬಹುದು. ಎಕ್ಸ್‌ಯುವಿ700 ಮತ್ತು ಥಾರ್ ಮಾದರಿಯಲ್ಲಿರುವಂತೆ 2.0 ಲೀಟರ್ ಪೆಟ್ರೋಲ್ ಎಂಜಿನ್ ಮತ್ತು 2.2 ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ನೀಡಬಹುದಾಗಿದೆ.

ಬಿಡುಗಡೆಗೂ ಮುನ್ನ ನ್ಯೂ ಜನರೇಷನ್ ಸ್ಕಾರ್ಪಿಯೋ ಟೀಸರ್ ಪ್ರಕಟಿಸಿದ ಮಹೀಂದ್ರಾ

ಸದ್ಯ ಮಾರುಕಟ್ಟೆಯಲ್ಲಿರುವ ಸ್ಕಾರ್ಪಿಯೋ ಎಸ್‌ಯುವಿ ಕಾರು ಮಾದರಿಯು ಪ್ರಮುಖ ಐದು ವೆರಿಯೆಂಟ್‌ಗಳೊಂದಿಗೆ 2.2-ಲೀಟರ್ ಡೀಸೆಲ್ ಎಂಜಿನ್‌ ಆಯ್ಕೆಯೊಂದಿಗೆ ಮಾರಾಟಕ್ಕೆ ಲಭ್ಯವಿದ್ದು, ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 13.53 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 18.61 ಲಕ್ಷ ಬೆಲೆ ಹೊಂದಿದೆ.

ಬಿಡುಗಡೆಗೂ ಮುನ್ನ ನ್ಯೂ ಜನರೇಷನ್ ಸ್ಕಾರ್ಪಿಯೋ ಟೀಸರ್ ಪ್ರಕಟಿಸಿದ ಮಹೀಂದ್ರಾ

ಭಾರತದಲ್ಲಿ ಸ್ಕಾರ್ಪಿಯೋ ಮೊದಲ ತಲೆಮಾರಿನ ಆವೃತ್ತಿಯು ಬಿಡುಗಡೆಯಾಗಿ ಯಶಸ್ವಿ 20 ವರ್ಷ ಪೂರೈಸುತ್ತಿದ್ದು, ಮುಂದಿನ ತಿಂಗಳು ಜೂನ್‌ನಲ್ಲಿ ಪೂರ್ಣಗೊಳ್ಳಲಿರುವ 20ನೇ ವರ್ಷದ ಸಂಭ್ರಮಾಚರಣೆ ವೇಳೆಗೆ ಕಂಪನಿಯು ನ್ಯೂ ಜನರೇಷನ್ ಸ್ಕಾರ್ಪಿಯೋ ಬಿಡುಗಡೆ ಮಾಡುವ ಸಾಧ್ಯತೆಗಳಿವೆ ಎನ್ನಲಾಗಿದೆ.

Most Read Articles

Kannada
English summary
Mahindra teases the new gen scorpio ahead of its launch
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X