ಬಿಡುಗಡೆಗಾಗಿ ರೋಡ್ ಟೆಸ್ಟಿಂಗ್ ನಡೆಸಿದ ಮಹೀಂದ್ರಾ ಥಾರ್ 5 ಡೋರ್ ವರ್ಷನ್

ಮಹೀಂದ್ರಾ ಕಂಪನಿಯು ಹೊಸ ತಲೆಮಾರಿನ ಎಸ್‌ಯುವಿ ಮಾದರಿಗಳ ಮೂಲಕ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುತ್ತಿದೆ.

Recommended Video

Mahindra Scorpio Classic Unveil Walkaround | ಹೊಸ ಅವತಾರದಲ್ಲಿ ಹಳೆಯ ಎಸ್‌ಯುವಿ | ಹೊಸ ಡೀಸೆಲ್ ಎಂಜಿನ್

ಭಾರೀ ಬೇಡಿಕೆ ಹಿನ್ನಲೆ ಕಂಪನಿಯು ಶೀಘ್ರದಲ್ಲಿಯೇ ಭಾರತದಲ್ಲಿ ಮತ್ತಷ್ಟು ಹೊಸ ಕಾರು ಮಾದರಿಗಳನ್ನು ರಸ್ತೆಗಿಳಿಸುವ ಯೋಜನೆಯಲ್ಲಿದೆ.

ಬಿಡುಗಡೆಗಾಗಿ ರೋಡ್ ಟೆಸ್ಟಿಂಗ್ ನಡೆಸಿದ ಮಹೀಂದ್ರಾ ಥಾರ್ 5 ಡೋರ್ ವರ್ಷನ್

ದೇಶಿಯ ಮಾರುಕಟ್ಟೆಯಲ್ಲಿ ಗ್ರಾಹಕರ ಬೇಡಿಕೆಯೆಂತೆ ಹೊಸ ಕಾರು ಉತ್ಪನ್ನಗಳನ್ನು ವಿಶ್ವದರ್ಜೆ ಗುಣಮಟ್ಟ ಮತ್ತು ಹಲವಾರು ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಬಿಡುಗಡೆ ಮಾಡುತ್ತಿರುವ ಮಹೀಂದ್ರಾ ಕಂಪನಿಯು ಕಳೆದ ಒಂದು ವರ್ಷದಿಂದ ಭಾರೀ ಪ್ರಮಾಣದಲ್ಲಿ ಬೆಳವಣಿಗೆ ಕಾಣುತ್ತಿದ್ದು, ಶೀಘ್ರದಲ್ಲಿಯೇ ಕಂಪನಿಯು ನ್ಯೂ ಜನರೇಷನ್ ಥಾರ್ ಮಾದರಿಯಲ್ಲಿ 5 ಡೋರ್ ವರ್ಷನ್ ಪರಿಚಯಿಸುತ್ತಿದೆ.

ಬಿಡುಗಡೆಗಾಗಿ ರೋಡ್ ಟೆಸ್ಟಿಂಗ್ ನಡೆಸಿದ ಮಹೀಂದ್ರಾ ಥಾರ್ 5 ಡೋರ್ ವರ್ಷನ್

ಸದ್ಯ ಮಾರುಕಟ್ಟೆಯಲ್ಲಿ ಮಹೀಂದ್ರಾ ಕಂಪನಿಯು ಥಾರ್ ಹೊಸ ಕಾರು ಮಾದರಿಯಲ್ಲಿ 3 ಡೋರ್ ವರ್ಷನ್ ಮಾತ್ರ ಮಾರಾಟ ಮಾಡುತ್ತಿದ್ದು, ಗ್ರಾಹಕರ ಬೇಡಿಕೆಯೆಂತೆ ಹೊಸ ಕಾರು ಮಾದರಿಯಲ್ಲಿ 5 ಡೋರ್ ವರ್ಷನ್ ಸಹ ಅಭಿವೃದ್ದಿಪಡಿಸುತ್ತಿದೆ.

ಬಿಡುಗಡೆಗಾಗಿ ರೋಡ್ ಟೆಸ್ಟಿಂಗ್ ನಡೆಸಿದ ಮಹೀಂದ್ರಾ ಥಾರ್ 5 ಡೋರ್ ವರ್ಷನ್

ಹೊಸ 5 ಡೋರ್ ವರ್ಷನ್ ಕಾರ್ಯಕ್ಷಮತೆ ಕುರಿತಾಗಿ ಈಗಾಗಲೇ ವಿವಿಧ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಕೈಗೊಂಡಿದ್ದು, ಕಂಪನಿಯು ಶೀಘ್ರದಲ್ಲಿಯೇ ಮಾರುಕಟ್ಟೆಗೆ ಪರಿಚಯಿಸಲಿದೆ.

ಬಿಡುಗಡೆಗಾಗಿ ರೋಡ್ ಟೆಸ್ಟಿಂಗ್ ನಡೆಸಿದ ಮಹೀಂದ್ರಾ ಥಾರ್ 5 ಡೋರ್ ವರ್ಷನ್

ಆಫ್-ರೋಡ್ ಪ್ರಿಯರಿಗಾಗಿ ವಿಶೇಷವಾಗಿ ಸಿದ್ದಗೊಂಡಿರುವ ಥಾರ್ ಕಾರು ಮಾದರಿಯು ಇದುವರೆಗೆ 1 ಲಕ್ಷಕ್ಕೂ ಹೆಚ್ಚು ಬುಕಿಂಗ್‌ನೊಂದಿಗೆ 60 ಸಾವಿರಕ್ಕೂ ಹೆಚ್ಚು ಯುನಿಟ್ ಮಾರಾಟಗೊಂಡಿವೆ. ಇನ್ನು ಸುಮಾರು 40 ಸಾವಿರಕ್ಕೂ ಹೆಚ್ಚು ಗ್ರಾಹಕರು ಹೊಸ ಕಾರು ಮಾದರಿಗಾಗಿ ಕಾಯುತ್ತಿದ್ದು, ಹೊಸ ಕಾರು ಆಫ್-ರೋಡ್‌ಗಿಂತಲೂ ಲೈಫ್‌ಸ್ಟೈಲ್ ಮಾದರಿಗಾಗಿ ಬದಲಾಗುತ್ತಿದೆ.

ಬಿಡುಗಡೆಗಾಗಿ ರೋಡ್ ಟೆಸ್ಟಿಂಗ್ ನಡೆಸಿದ ಮಹೀಂದ್ರಾ ಥಾರ್ 5 ಡೋರ್ ವರ್ಷನ್

ಹೊಸ ಕಾರು 3 ಡೋರ್ ಹೊಂದಿರುವುದರಿಂದ ಇನ್ನು ಹಲವು ಗ್ರಾಹಕರ ಹೊಸ ಕಾರನ್ನು ಖರೀದಿಸುವ ಆಸಕ್ತಿ ಇದ್ದರೂ ಹಿಂದೆ ಸರಿಸುತ್ತಿದ್ದು, ಕುಟಂಬ ಸಮೇತ ಪ್ರಯಾಣ ಮಾಡಲು ಅನುಕೂಲವಿದ್ದಲ್ಲಿ ಖರೀದಿ ಮಾಡಬಹುದಿತ್ತು ಎನ್ನುವುದು ಹಲವು ಗ್ರಾಹಕರ ಅಭಿಪ್ರಾಯವಾಗಿದೆ.

ಬಿಡುಗಡೆಗಾಗಿ ರೋಡ್ ಟೆಸ್ಟಿಂಗ್ ನಡೆಸಿದ ಮಹೀಂದ್ರಾ ಥಾರ್ 5 ಡೋರ್ ವರ್ಷನ್

3 ಡೋರ್ ಥಾರ್ ಕಾರಿನಲ್ಲಿ ನಾಲ್ಕು ಆಸನ ಸೌಲಭ್ಯವಿದ್ದರೂ ಮುಂಭಾಗದ ಆಸನಗಳಲ್ಲಿ ಚಾಲಕ ಮತ್ತು ಸಹಪ್ರಯಾಣಿಕ ಹೊರತುಪಡಿಸಿ ಹಿಂಬದಿಯ ಆಸನಗಳಿಗೆ ಪ್ರವೇಶಿಸಲು ಸಾಕಷ್ಟು ತೊಂದರೆ ಅನುಭವಿಸಬೇಕಾಗುತ್ತದೆ. ಹೀಗಾಗಿ ಥಾರ್ ಕಾರು ಕೇವಲ ಇಬ್ಬರು ಮಾತ್ರ ಪ್ರಯಾಣಿಸಬಹುದಾದ ಮಾದರಿಯಾಗಿದ್ದು, ಇದು ಆಫ್ ರೋಡ್ ಇಷ್ಟಪಡುವ ಗ್ರಾಹಕರಿಗೆ ಉತ್ತಮವಾಗಿದ್ದರೂ ಕುಟಂಬ ಸಮೇತ ಪ್ರಯಾಣ ಬಯಸುವ ಗ್ರಾಹಕರು ಹೊಸ ಕಾರಿನ ಆಯ್ಕೆಗೆ ಹಿಂದೆ ಸರಿಯುತ್ತಾರೆ.

ಬಿಡುಗಡೆಗಾಗಿ ರೋಡ್ ಟೆಸ್ಟಿಂಗ್ ನಡೆಸಿದ ಮಹೀಂದ್ರಾ ಥಾರ್ 5 ಡೋರ್ ವರ್ಷನ್

ಹೀಗಾಗಿ ಪ್ರಾಯೋಗಿಕವಾಗಿ ಹೊಸ 5 ಡೋರ್ ಥಾರ್ ಮಾದರಿಯನ್ನು ಅಭಿವೃದ್ದಿಪಡಿಸುತ್ತಿರುವ ಮಹೀಂದ್ರಾ ಕಂಪನಿಯು ಈ ವರ್ಷಾಂತ್ಯಕ್ಕೆ ಇಲ್ಲವೇ 2023ರ ಆರಂಭದಲ್ಲಿ ಬಿಡುಗಡೆಯಾಗಲಿರುವ ಥಾರ್ ಫೇಸ್‌ಲಿಫ್ಟ್ ಮಾದರಿಯಲ್ಲಿ 5 ಡೋರ್ ಮಾದರಿಯನ್ನು ಪರಿಚಯಿಸಬಹುದಾಗಿದೆ.

ಬಿಡುಗಡೆಗಾಗಿ ರೋಡ್ ಟೆಸ್ಟಿಂಗ್ ನಡೆಸಿದ ಮಹೀಂದ್ರಾ ಥಾರ್ 5 ಡೋರ್ ವರ್ಷನ್

ಹೊಸ ಮಾದರಿಯೊಂದಿಗೆ ಥಾರ್ ಕಾರು 3 ಡೋರ್ ಮತ್ತು 5 ಡೋರ್ ವರ್ಷನ್‌ಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, 5 ಡೋರ್ ವರ್ಷನ್‌ಗಾಗಿ ಕಂಪನಿಯು ಹೊಸ ಕಾರಿನ ಉದ್ದಳತೆಯನ್ನು ಹೆಚ್ಚಿಸಲಿದೆ.

ಬಿಡುಗಡೆಗಾಗಿ ರೋಡ್ ಟೆಸ್ಟಿಂಗ್ ನಡೆಸಿದ ಮಹೀಂದ್ರಾ ಥಾರ್ 5 ಡೋರ್ ವರ್ಷನ್

ನ್ಯೂ ಜನರೇಷನ್ ಥಾರ್ ಕಾರು ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಸದ್ಯ ಎಎಕ್ಸ್ ಮತ್ತು ಎಲ್ಎಕ್ಸ್ ಎನ್ನುವ ಎರಡು ಮಾದರಿಗಳಲ್ಲಿ ಖರೀದಿಗೆ ಲಭ್ಯವಿದ್ದು, ಲ್ಯಾಡರ್-ಫ್ರೇಮ್ ಚಾರ್ಸಿ ಜೊತೆಗೆ ಹೊಸ ಸಸ್ಪೆಂಷನ್‌ ಸೌಲಭ್ಯವು ಹೊಸ ಥಾರ್ ಕಾರಿನ ಗುಣಮಟ್ಟ ಮತ್ತು ಕಾರ್ಯಕ್ಷಮತೆ ಹೆಚ್ಚಿಸಿದೆ.

ಬಿಡುಗಡೆಗಾಗಿ ರೋಡ್ ಟೆಸ್ಟಿಂಗ್ ನಡೆಸಿದ ಮಹೀಂದ್ರಾ ಥಾರ್ 5 ಡೋರ್ ವರ್ಷನ್

ಥಾರ್ ಕಾರು ಮಾದರಿಯಲ್ಲಿ ಮೊದಲ ಬಾರಿಗೆ ಡೀಸೆಲ್ ಎಂಜಿನ್ ಜೊತೆಗೆ ಪೆಟ್ರೋಲ್ ಕಾರಿನ ಆಯ್ಕೆಯನ್ನು ಸಹ ನೀಡಿರುವುದು ಆಫ್-ರೋಡ್ ಕಾರು ಮಾದರಿಯ ಮಾರಾಟದಲ್ಲಿ ಮತ್ತೊಂದು ಹಂತದ ಬದಲಾವಣೆಗೆ ಕಾರಣವಾಗಿದ್ದು, ಬಿಎಸ್-6 ಎಂಜಿನ್ ಪ್ರೇರಿತ 2.2-ಲೀಟರ್ ಡೀಸೆಲ್ ಎಂಜಿನ್ ಮತ್ತು ಹೊಸದಾಗಿ ಅಭಿವೃದ್ದಿಗೊಳಿಸಲಾದ 2.0-ಲೀಟರ್ ಎಂ-ಸ್ಟಾಲಿನ್ ಪೆಟ್ರೋಲ್ ಎಂಜಿನ್ ನೀಡಲಾಗಿದೆ.

ಬಿಡುಗಡೆಗಾಗಿ ರೋಡ್ ಟೆಸ್ಟಿಂಗ್ ನಡೆಸಿದ ಮಹೀಂದ್ರಾ ಥಾರ್ 5 ಡೋರ್ ವರ್ಷನ್

ಎರಡು ಎಂಜಿನ್ ಮಾದರಿಗಳಲ್ಲೂ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಗಳನ್ನು ನೀಡಲಾಗಿದ್ದು, ಹಲವಾರು ಸ್ಟ್ಯಾಂಡರ್ಡ್ ಫೀಚರ್ಸ್ ನೀಡಲಾಗಿದೆ.

ಬಿಡುಗಡೆಗಾಗಿ ರೋಡ್ ಟೆಸ್ಟಿಂಗ್ ನಡೆಸಿದ ಮಹೀಂದ್ರಾ ಥಾರ್ 5 ಡೋರ್ ವರ್ಷನ್

ಹೊಸ ಕಾರಿನ ಒಳಭಾಗದ ಸೌಲಭ್ಯಗಳು ಪ್ರಸ್ತುತ ಮಾದರಿಗಿಂತಲೂ ಹೆಚ್ಚು ಪ್ರೀಮಿಯಂ ಮತ್ತು ಮಾರ್ಡನ್ ವಿನ್ಯಾಸಗಳನ್ನು ಹೊಂದಿದ್ದು, ಆಕರ್ಷಕ ಡ್ಯಾಶ್‌ಬೋರ್ಡ್‌ನೊಂದಿಗೆ ಆ್ಯಪಲ್ ಕಾರ್‌ಪ್ಲೇ ಮತ್ತು ಅಂಡ್ರಾಯಿಡ್ ಆಟೋಗೆ ಸರ್ಪೋಟ್ ಮಾಡಬಲ್ಲ 7-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ಎಲ್ಲಾ ಮಾದರಿಯ ಹವಾಗುಣವನ್ನು ತಡೆಯಬಲ್ಲ ರೂಫ್ ಮೌಂಟೆಡ್ ಆಡಿಯೋ ಸ್ಪಿಕರ್ಸ್, ಮಲ್ಟಿ ಕಲರ್ ಇನ್ಫಾಮೆಷನ್ ಡಿಸ್‌ಪ್ಲೇ ಮತ್ತು ಸ್ಟೀರಿಂಗ್ ಮೌಟೆಂಟ್ ಕಂಟ್ರೋಲ್ ಸೌಲಭ್ಯ ನೀಡಲಾಗಿದೆ.

ಬಿಡುಗಡೆಗಾಗಿ ರೋಡ್ ಟೆಸ್ಟಿಂಗ್ ನಡೆಸಿದ ಮಹೀಂದ್ರಾ ಥಾರ್ 5 ಡೋರ್ ವರ್ಷನ್

ಹೊಸ ಕಾರಿನಲ್ಲಿ ಸುರಕ್ಷತೆಗಾಗಿ ಹಲವಾರು ಸೆಫ್ಟಿ ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದ್ದು, ಎರಡು ಎಂಜಿನ್ ಆಯ್ಕೆಗಳಲ್ಲೂ 4x4 ಡ್ರೈವ್ ಸಿಸ್ಟಂ, ಕ್ರೂಸ್ ಕಂಟ್ರೋಲ್, 255/65 18-ಇಂಚಿನ ಆಲ್ ಟೆರೆನ್ ಟೈರ್ಸ್, ಡ್ಯುಯಲ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್, ಹಿಲ್ ಸ್ಟಾರ್ಟ್ ಅಸಿಸ್ಟ್, ರೋಲ್ ಓವರ್ ಮಿಟಿಗೆಷನ್, ತ್ರೀ ಪಾಯಿಂಟ್ ಸಿಲ್ಟ್ ಬೆಲ್ಟ್, ರಿಯರ್ ವ್ಯೂ ಕ್ಯಾಮೆರಾ ಜೋಡಿಸಲಾಗಿದೆ.

ಬಿಡುಗಡೆಗಾಗಿ ರೋಡ್ ಟೆಸ್ಟಿಂಗ್ ನಡೆಸಿದ ಮಹೀಂದ್ರಾ ಥಾರ್ 5 ಡೋರ್ ವರ್ಷನ್

ಥಾರ್ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 13.53 ಲಕ್ಷದಿಂದ ರೂ. 16.03 ಲಕ್ಷ ಬೆಲೆ ಹೊಂದಿದ್ದು, 5 ಡೋರ್ ವರ್ಷನ್ ಬೆಲೆಯು 3 ಡೋರ್ ಮಾದರಿಗಿಂತಲೂ ತುಸು ದುಬಾರಿಯಾಗಿರಲಿದೆ.

Article Published On: Friday, August 19, 2022, 8:45 [IST]
English summary
Mahindra thar 5 door suv spied testing again details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+