ಎಕ್ಸ್‌ಯುವಿ300 ಮಾದರಿಯ ಟಾಪ್ ಎಂಡ್ ಆವೃತ್ತಿಯಲ್ಲಿ ಹೊಸ ಬದಲಾವಣೆ ಪರಿಚಯಿಸಿದ ಮಹೀಂದ್ರಾ

ಮಹೀಂದ್ರಾ ಕಂಪನಿಯು ಎಕ್ಸ್‌ಯುವಿ300 ಕಂಪ್ಯಾಕ್ಟ್ ಎಸ್‌ಯುವಿಯು 2022ರ ಆವೃತ್ತಿಯ ಬಿಡುಗಡೆಗೂ ಮುನ್ನ ಪ್ರಸ್ತುತ ಮಾದರಿಯಲ್ಲಿ ಕೆಲವು ಬದಲಾವಣೆಗಳನ್ನು ಪರಿಚಯಿಸಿದ್ದು, ಟಾಪ್ ಎಂಡ್ ಮಾದರಿಗಳಲ್ಲಿ ಕೆಲವು ಹೊಸ ಬದಲಾವಣೆಗಳನ್ನು ನೀಡಲಾಗಿದೆ.

ಎಕ್ಸ್‌ಯುವಿ300 ಮಾದರಿಯ ಟಾಪ್ ಎಂಡ್ ಆವೃತ್ತಿಯಲ್ಲಿ ಹೊಸ ಬದಲಾವಣೆ ಪರಿಚಯಿಸಿದ ಮಹೀಂದ್ರಾ

ಎಕ್ಸ್‌ಯುವಿ300 ಮಾದರಿಯ ಡಬ್ಲ್ಯು8 ಆಪ್ಷನ್ ರೂಪಾಂತರದಲ್ಲಿ ಈ ಹಿಂದೆ ನೀಡಲಾಗುತ್ತಿದ್ದ 17 ಇಂಚಿನ ಅಲಾಯ್ ವ್ಹೀಲ್‌ಗಳನ್ನು ಇದೀಗ 16 ಇಂಚಿಗೆ ಬದಲಾಯಿಸಲಾಗಿದ್ದು, ಹೊಸ ಅಲಾಯ್ ವೀಲ್ ಗಾತ್ರವನ್ನು ಕಡಿಮೆ ಮಾಡಲಾಗಿದ್ದರೂ ಟೈರ್ ಪ್ರೊಫೈಲ್‌ನಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಡಬ್ಲ್ಯು8 ಆಪ್ಷನ್ ಹೊರತುಪಡಿಸಿ ಇನ್ನುಳಿದ ಮಾದರಿಗಳಲ್ಲಿ ಕಂಪನಿಯು ಮೊದಲಿನಿಂದಲೂ 16 ಇಂಚಿನ ಅಲಾಯ್ ವ್ಹೀಲ್‌ಗಳನ್ನೇ ನೀಡುತ್ತಿದ್ದು, ಇದೀಗ ಟಾಪ್ ಎಂಡ್ ಮಾದರಿಯಲ್ಲಿ ಸ್ಟ್ಯಾಂಡರ್ಡ್ ಟೈರ್ ನೀಡಲಾಗಿದೆ.

ಎಕ್ಸ್‌ಯುವಿ300 ಮಾದರಿಯ ಟಾಪ್ ಎಂಡ್ ಆವೃತ್ತಿಯಲ್ಲಿ ಹೊಸ ಬದಲಾವಣೆ ಪರಿಚಯಿಸಿದ ಮಹೀಂದ್ರಾ

ಇದರೊಂದಿಗೆ ಟಾಪ್ ಎಂಡ್ ಮಾದರಿಯಲ್ಲಿ ಸೈಡ್ ಕೀ ಲೆಸ್ ಎಂಟ್ರಿ, ರಿಯರ್ ಸೆಂಟರ್ ಆರ್ಮ್‌ರೆಸ್ಟ್ ಮತ್ತು ಕಪ್ ಹೋಲ್ಡರ್ ಅನ್ನು ಕೂಡಾ ತೆಗೆದುಹಾಕಲಾಗಿದ್ದು, ಪ್ರಮುಖ ತಾಂತ್ರಿಕ ಅಂಶಗಳನ್ನು ಕಡಿತ ಮಾಡಲಾಗಿದ್ದರೂ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.

ಎಕ್ಸ್‌ಯುವಿ300 ಮಾದರಿಯ ಟಾಪ್ ಎಂಡ್ ಆವೃತ್ತಿಯಲ್ಲಿ ಹೊಸ ಬದಲಾವಣೆ ಪರಿಚಯಿಸಿದ ಮಹೀಂದ್ರಾ

ಎಕ್ಸ್‌ಯುವಿ300 ಮಾದರಿಯು ವಿವಿಧ ತಾಂತ್ರಿಕ ಅಂಶಗಳಿಗೆ ಅನುಗುಣವಾಗಿ ಡಬ್ಲ್ಯು4, ಡಬ್ಲ್ಯು6, ಡಬ್ಲ್ಯು8, ಡಬ್ಲ್ಯು8 ಆಪ್ಷನ್ ರೂಪಾಂತರಗಳಲ್ಲಿ ಲಭ್ಯವಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ, 7.95 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 13.46 ಲಕ್ಷ ಬೆಲೆ ಹೊಂದಿದೆ.

ಎಕ್ಸ್‌ಯುವಿ300 ಮಾದರಿಯ ಟಾಪ್ ಎಂಡ್ ಆವೃತ್ತಿಯಲ್ಲಿ ಹೊಸ ಬದಲಾವಣೆ ಪರಿಚಯಿಸಿದ ಮಹೀಂದ್ರಾ

ಹೊಸ ಬದಲಾವಣೆಯಲ್ಲಿ ನೀಡಲಾಗಿರುವ 16 ಇಂಚಿನ ಅಲಾಯ್ ವ್ಹೀಲ್‌ಗಳಿಂದ ಕಾರಿನ ತೂಕದಲ್ಲಿ ತುಸು ಕಡಿತವಾಗಲಿದ್ದು, ಇದು ಇಂಧನ ದಕ್ಷತೆಯನ್ನು ಹೆಚ್ಚಿಸುವುದರ ಜೊತೆಗೆ ಸ್ಟ್ಯಾಂಡರ್ಡ್ ಮಾದರಿಗಳಲ್ಲಿ ಚಕ್ರಗಳಿಗೂ ಹೊಸ ಟೈರ್ ಸರಿಹೊಂದುತ್ತದೆ.

ಎಕ್ಸ್‌ಯುವಿ300 ಮಾದರಿಯ ಟಾಪ್ ಎಂಡ್ ಆವೃತ್ತಿಯಲ್ಲಿ ಹೊಸ ಬದಲಾವಣೆ ಪರಿಚಯಿಸಿದ ಮಹೀಂದ್ರಾ

ಇನ್ನು ಮಧ್ಯಮ ಕ್ರಮಾಂಕದ ಎಸ್‌ಯುವಿ ಸರಣಿ ಕಾರುಗಳ ಮಾರಾಟದಲ್ಲಿ ಸದ್ಯ ಅಗ್ರಸ್ಥಾನ ಕಾಯ್ದಕೊಂಡಿರುವ ಮಹೀಂದ್ರಾ ಕಂಪನಿಯು ಎಕ್ಸ್‌ಯುವಿ300 ಮೂಲಕ ಉತ್ತಮ ಬೇಡಿಕೆ ಪಡೆದುಕೊಂಡಿದೆ. ಎಕ್ಸ್‌ಯುವಿ300 ಮಾದರಿಯು ಬಿಡುಗಡೆಯ ನಂತರ ಹಲವಾರು ಬದಲಾವಣೆಗಳನ್ನು ಪಡೆದುಕೊಂಡಿದ್ದು, ಶೀಘ್ರದಲ್ಲೇ ಹೊಸ ಕಾರು ಮತ್ತಷ್ಟು ಉನ್ನತೀಕರಿಸಿದ ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಳ್ಳಲಿದೆ.

ಎಕ್ಸ್‌ಯುವಿ300 ಮಾದರಿಯ ಟಾಪ್ ಎಂಡ್ ಆವೃತ್ತಿಯಲ್ಲಿ ಹೊಸ ಬದಲಾವಣೆ ಪರಿಚಯಿಸಿದ ಮಹೀಂದ್ರಾ

ಎಕ್ಸ್‌ಯುವಿ300 ಮಾದರಿಯಲ್ಲಿ ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ಪ್ರಮುಖ ತಾಂತ್ರಿಕ ಅಂಶಗಳನ್ನು ಸ್ಟ್ಯಾಂಡರ್ಡ್ ಆಗಿ ಪಡೆದುಕೊಂಡಿದ್ದು, ಫೇಸ್‌ಲಿಫ್ಟ್ ಮಾದರಿಯೊಂದಿಗೆ ಹೊಸ ಕಾರು ಈ ಬಾರಿ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆಹೊಂದಿರುವ ಸ್ಪೋರ್ಟ್ಜ್ ಮಾದರಿಯು ಕೂಡಾ ಬಿಡುಗಡೆಯಾಗಬಹುದಾಗಿದೆ.

ಎಕ್ಸ್‌ಯುವಿ300 ಮಾದರಿಯ ಟಾಪ್ ಎಂಡ್ ಆವೃತ್ತಿಯಲ್ಲಿ ಹೊಸ ಬದಲಾವಣೆ ಪರಿಚಯಿಸಿದ ಮಹೀಂದ್ರಾ

ಎಕ್ಸ್‌ಯುವಿ 300 ಕಾರು ಮಾದರಿಯು ಸದ್ಯ ಮಾರುಕಟ್ಟೆಯಲ್ಲಿ 1.2-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್‌ನೊಂದಿಗೆ ಖರೀದಿಗೆ ಲಭ್ಯವಿದ್ದು, ಕಂಪನಿಯು ಶೀಘ್ರದಲ್ಲೇ ಎಕ್ಸ್‌ಯುವಿ300 ಮಾದರಿಯ ಟರ್ಬೊ ವರ್ಷನ್ ಬಿಡುಗಡೆ ಮಾಡುವ ಯೋಜನೆಯಲ್ಲಿದೆ.

ಎಕ್ಸ್‌ಯುವಿ300 ಮಾದರಿಯ ಟಾಪ್ ಎಂಡ್ ಆವೃತ್ತಿಯಲ್ಲಿ ಹೊಸ ಬದಲಾವಣೆ ಪರಿಚಯಿಸಿದ ಮಹೀಂದ್ರಾ

2020ರ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಮೊದಲ ಬಾರಿಗೆ ಅನಾವರಣಗೊಂಡಿದ್ದ ಮಹೀಂದ್ರಾ ಎಕ್ಸ್‌ಯುವಿ300 ಸ್ಪೋರ್ಟ್ಜ್ ಆವೃತ್ತಿಯು ಇದೀಗ ಬಿಡುಗಡೆಗಾಗಿ ಅಂತಿಮ ಹಂತದ ಸಿದ್ದತೆಯಲ್ಲಿದ್ದು, ಕಳೆದ ವರ್ಷವೇ ಬಿಡುಗಡೆಯಾಗಬೇಕಿದ್ದ ಹೊಸ ಕಾರು ಕೋವಿಡ್ ಪರಿಣಾಮ ಬಿಡುಗಡೆ ಮುಂದೂಡಿಕೆಯಾಗುತ್ತಾ ಇದೀಗ ಮಾರುಕಟ್ಟೆ ಪ್ರವೇಶಿಸುತ್ತಿದೆ.

ಎಕ್ಸ್‌ಯುವಿ300 ಮಾದರಿಯ ಟಾಪ್ ಎಂಡ್ ಆವೃತ್ತಿಯಲ್ಲಿ ಹೊಸ ಬದಲಾವಣೆ ಪರಿಚಯಿಸಿದ ಮಹೀಂದ್ರಾ

ಹೊಸ ಕಾರಿನಲ್ಲಿ ಸಾಮಾನ್ಯ ಮಾದರಿಯಲ್ಲಿರುವಂತೆಯೇ ಪ್ರಮುಖ ತಾಂತ್ರಿಕ ಅಂಶಗಳೊಂದಿಗೆ ಪರ್ಫಾಮೆನ್ಸ್ ಪ್ರಿಯರಿಗಾಗಿಯೇ ಹೊಸದಾಗಿ ಅಭಿವೃದ್ದಿಗೊಳಿಸಲಾದ 1.2-ಲೀಟರ್ ಟಿ-ಜಿಡಿಐ ಪೆಟ್ರೋಲ್ ಎಂಜಿನ್‌ ಜೋಡಣೆ ಹೊಂದಿದ್ದು, ಅತಿ ಹೆಚ್ಚು ಬಿಎಚ್‌ಪಿ ಉತ್ಪಾದನಾ ವೈಶಿಷ್ಟ್ಯತೆಯೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿದೆ.

ಎಕ್ಸ್‌ಯುವಿ300 ಮಾದರಿಯ ಟಾಪ್ ಎಂಡ್ ಆವೃತ್ತಿಯಲ್ಲಿ ಹೊಸ ಬದಲಾವಣೆ ಪರಿಚಯಿಸಿದ ಮಹೀಂದ್ರಾ

ಹೊಸದಾಗಿ ಅಭಿವೃದ್ದಿಗೊಳಿಸಲಾಗಿರುವ 1.2-ಲೀಟರ್ ಪೆಟ್ರೋಲ್ ಎಂಜಿನ್ ಅನ್ನು ಎಂಸ್ಟಾಲಿನ್ ಎಂದು ಹೆಸರಿಸಿರುವ ಮಹೀಂದ್ರಾ ಕಂಪನಿಯು ಸದ್ಯ ಮಾರುಕಟ್ಟೆಯಲ್ಲಿರುವ ಸಾಮಾನ್ಯ ಮಾದರಿಯ 1.2-ಲೀಟರ್ ಪೆಟ್ರೋಲ್ ಎಂಜಿನ್‌ಗಿಂತಲೂ ಹೆಚ್ಚು ಸುಧಾರಿತ ತಂತ್ರಜ್ಞಾನ ಪ್ರೇರಣೆಯೊಂದಿಗೆ ಅಭಿವೃದ್ದಿಗೊಳಿಸಲಾಗಿದೆ.

ಎಕ್ಸ್‌ಯುವಿ300 ಮಾದರಿಯ ಟಾಪ್ ಎಂಡ್ ಆವೃತ್ತಿಯಲ್ಲಿ ಹೊಸ ಬದಲಾವಣೆ ಪರಿಚಯಿಸಿದ ಮಹೀಂದ್ರಾ

ಹೊಸ ಎಂಜಿನ್ ಅನ್ನು ಸ್ಪೋರ್ಟ್ಜ್ ವರ್ಷನ್‌ನಲ್ಲಿ ಮಾತ್ರವೇ ಖರೀದಿಗೆ ಲಭ್ಯವಿರಲಿದ್ದು, ಹೊಸ ಕಾರು ಮುಂಬರುವ ಫೇಸ್‌ಲಿಫ್ಟ್ ಮಾದರಿಯಲ್ಲಿ ಬಿಡುಗಡೆಯಾಗಬಹುದಾಗಿದೆ. ಹೊಸ ಎಂಜಿನ್ ಮಾದರಿಯು ಗ್ರಾಹಕರ ಬೇಡಿಕೆಯೆಂತೆ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮತ್ತು 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಲಿದೆ.

ಎಕ್ಸ್‌ಯುವಿ300 ಮಾದರಿಯ ಟಾಪ್ ಎಂಡ್ ಆವೃತ್ತಿಯಲ್ಲಿ ಹೊಸ ಬದಲಾವಣೆ ಪರಿಚಯಿಸಿದ ಮಹೀಂದ್ರಾ

ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಗಳಲ್ಲಿಯೇ ಅತಿ ಹೆಚ್ಚು ಸುರಕ್ಷಿತ ಕಾರು ಮಾದರಿಯೆಂಬ ಹೆಗ್ಗಳಿಕೆ ಹೊಂದಿರುವ ಎಕ್ಸ್‌ಯುವಿ300 ಮಾದರಿಯು ಕಳೆದ ಕೆಲ ತಿಂಗಳಿನಿಂದ ಹೆಚ್ಚಿನ ಪ್ರಮಾಣದ ಬೇಡಿಕೆ ಪಡೆದುಕೊಳ್ಳುತ್ತಿದೆ. ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಅತಿ ಹೆಚ್ಚು ಸುರಕ್ಷಾ ಫೀಚರ್ಸ್ ಹೊಂದಿರುವ ಎಕ್ಸ್‌ಯುವಿ300 ಮಾದರಿಯು ಅತಿ ಹೆಚ್ಚು ಅಂಕಗಳೊಂದಿಗೆ ಕ್ರ್ಯಾಶ್ ಟೆಸ್ಟಿಂಗ್ 5 ಸ್ಟಾರ್ ರೇಟಿಂಗ್ ಪಡೆದ ಮೊದಲ ಬಜೆಟ್ ಕಾರು ಮಾದರಿಯಾಗಿದೆ.

ಎಕ್ಸ್‌ಯುವಿ300 ಮಾದರಿಯ ಟಾಪ್ ಎಂಡ್ ಆವೃತ್ತಿಯಲ್ಲಿ ಹೊಸ ಬದಲಾವಣೆ ಪರಿಚಯಿಸಿದ ಮಹೀಂದ್ರಾ

ಪ್ರತಿ ಹೊಸ ಕಾರು ಮಾದರಿಗಳಿಗೂ ಪ್ರಯಾಣಿಕರ ಸುರಕ್ಷಾ ವಿಚಾರವಾಗಿ ಜಾಗತಿಕ ಪ್ರಮಾಣ ಪತ್ರದ ಅವಶ್ಯಕತೆಯಿದ್ದು, ಎಕ್ಸ್‌ಯುವಿ300 ಪಡೆದುಕೊಳ್ಳುತ್ತಿರುವ ಉತ್ತಮ ರೇಟಿಂಗ್‌ನಿಂದಾಗಿ ಸುರಕ್ಷತೆಯಲ್ಲಿ ಯಾವುದೇ ರಾಜಿ ಮಾಡಿಕೊಂಡಿಲ್ಲ ಎಂಬುವುದು ಖಾತ್ರಿಯಾಗಿದೆ.

ಎಕ್ಸ್‌ಯುವಿ300 ಮಾದರಿಯ ಟಾಪ್ ಎಂಡ್ ಆವೃತ್ತಿಯಲ್ಲಿ ಹೊಸ ಬದಲಾವಣೆ ಪರಿಚಯಿಸಿದ ಮಹೀಂದ್ರಾ

ಎಕ್ಸ್‌ಯುವಿ300 ಮಾದರಿಯು ಗುಣಮಟ್ಟದ ಬಿಡಿಭಾಗಗಳೊಂದಿಗೆ ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಟಾಪ್ ಎಂಡ್ ಮಾದರಿಯಲ್ಲಿ 7 ಏರ್‌ಬ್ಯಾಗ್ ಸೇರಿದಂತೆ ಹಲವಾರು ಪ್ರೀಮಿಯಂ ಸೌಲಭ್ಯಗಳನ್ನು ಸ್ಟ್ಯಾಂಡರ್ಡ್ ಹೊಂದಿದ್ದು, ಹಲವಾರು ಸೆಗ್ಮೆಂಟ್ ಫಸ್ಟ್ ಪ್ರೀಮಿಯಂ ಫೀಚರ್ಸ್ ಹೊಂದಿದೆ.

Article Published On: Monday, February 14, 2022, 13:50 [IST]
English summary
Mahindra xuv300 compact suv update new alloy wheels
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+