Just In
- 8 hrs ago ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- 9 hrs ago ಟೊಯೊಟಾದ ಫಾರ್ಚ್ಯೂನರ್ನಲ್ಲೂ ಸಿಗಲಿದೆ ಹೈಬ್ರಿಡ್: ಇದರ ಮೈಲೇಜ್ ಕೇಳಿ ಸುಸ್ತಾದ ಗ್ರಾಹಕರು!
- 10 hrs ago ನಿಜವಾದ ಮಾನವತಾವಾದಿ: ನಟ ರಾಘವ ಲಾರೆನ್ಸ್ರಿಂದ ವಿಶೇಷ ಚೇತನ ಸಾಧಕರಿಗೆ 13 ಟಿವಿಎಸ್ ಸ್ಕೂಟರ್ ಗಿಫ್ಟ್
- 11 hrs ago ಜನ ಕ್ಯೂ ನಿಂತು ಖರೀದಿಸುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಮಾರಾಟದಲ್ಲಿ ಕುಸಿತ: ಕಾರಣವೇನು?
Don't Miss!
- Movies 'ಮಾರ್ಟಿನ್' ಚಿತ್ರದ ನಿರ್ಮಾಪಕ- ನಿರ್ದೇಶಕರ ಮಧ್ಯೆ ಕಿರಿಕ್: ಕೊನೆಗೂ ಸಿಕ್ತು ಸ್ಪಷ್ಟನೆ
- News 11 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ: ಡಾ. ಕೆ. ಸುಧಾಕರ್
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಹೀಂದ್ರಾ ಎಕ್ಸ್ಯುವಿ300 ಸ್ಪೋಟ್ಜ್ ವರ್ಷನ್ ಬಿಡುಗಡೆ ಮಾಹಿತಿ ಬಹಿರಂಗ
ಮಹೀಂದ್ರಾ ಕಂಪನಿಯು ತನ್ನ ಜನಪ್ರಿಯ ಕಂಪ್ಯಾಕ್ಟ್ ಎಸ್ಯುವಿ ಮಾದರಿಯಾದ ಎಕ್ಸ್ಯುವಿ300 ಫೇಸ್ಲಿಫ್ಟ್ ಬಿಡುಗಡೆಗೆ ಸಿದ್ದವಾಗುತ್ತಿದ್ದು, ಹೊಸ ಕಾರು ಇದೇ ತಿಂಗಳು 7ರಂದು ಅಧಿಕೃತವಾಗಿ ಬಿಡುಗಡೆಯಾಗುವ ಸಾಧ್ಯತೆಗಳಿವೆ.
ಹೊಸ ಎಕ್ಸ್ಯುವಿ300 ಫೇಸ್ಲಿಫ್ಟ್ ಮಾದರಿಯು ಮಾರುಕಟ್ಟೆಯಲ್ಲಿ ಬೇಡಿಕೆ ಕೆಲವು ಹೊಸ ಫೀಚರ್ಸ್ ಮತ್ತು ವಿನ್ಯಾಸ ಬದಲಾವಣೆಯೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿದ್ದು, ಹೊಸ ಕಾರಿನಲ್ಲಿ ಕಂಪನಿಯು ಈ ಬಾರಿ ಸ್ಟ್ಯಾಂಡರ್ಡ್ ಮಾದರಿಗಳೊಂದಿಗೆ ಹೊಸದಾಗಿ ಪರ್ಫಾಮೆನ್ಸ್ ಪ್ರಿಯರಿಗಾಗಿ ಸ್ಪೋರ್ಟ್ಜ್ ವರ್ಷನ್ ಬಿಡುಗಡೆ ಮಾಡುತ್ತಿದೆ.
ಕಂಪ್ಯಾಕ್ಟ್ ಎಸ್ಯುವಿ ವಿಭಾಗದಲ್ಲಿ ಉತ್ತಮ ಬೇಡಿಕೆ ಹೊಂದಿರುವ ಎಕ್ಸ್ಯುವಿ300 ಮಾದರಿಯು ಕಳೆದ ಕೆಲ ತಿಂಗಳಿನಿಂದ ಪ್ರತಿಸ್ಪರ್ಧಿ ಮಾದರಿಗಳಿಂದ ಹೆಚ್ಚಿನ ಸ್ಪರ್ಧೆ ಎದುರಿಸುತ್ತಿದ್ದು, ಹೀಗಾಗಿ ಕಂಪನಿಯು ಫೇಸ್ಲಿಫ್ಟ್ ಮಾದರಿಯಲ್ಲಿ ಕೆಲವು ಮಹತ್ವದ ಬದಲಾವಣೆಗಳೊಂದಿಗೆ ಗ್ರಾಹಕರ ಬೇಡಿಕೆ ಸುಧಾರಿಸುವ ನೀರಿಕ್ಷೆಯಲ್ಲಿದೆ.
ಎಕ್ಸ್ಯುವಿ300 ಮಾದರಿಯಲ್ಲಿ ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ಪ್ರಮುಖ ತಾಂತ್ರಿಕ ಅಂಶಗಳೊಂದಿಗೆ ಸ್ಟ್ಯಾಂಡರ್ಡ್ ಮಾದರಿಯಲ್ಲಿ ಮಾರಾಟಗೊಳ್ಳುತ್ತಿದ್ದು, ಫೇಸ್ಲಿಫ್ಟ್ ಮಾದರಿಯೊಂದಿಗೆ ಹೊಸ ಕಾರು ಈ ಬಾರಿ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿರುವ ಸ್ಪೋರ್ಟ್ಜ್ ಮಾದರಿಯು ಕೂಡಾ ಬಿಡುಗಡೆಯಾಗಲಿದೆ.
ಎಕ್ಸ್ಯುವಿ 300 ಕಾರು ಮಾದರಿಯು ಸದ್ಯ ಮಾರುಕಟ್ಟೆಯಲ್ಲಿ 1.2-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ನೊಂದಿಗೆ ಖರೀದಿಗೆ ಲಭ್ಯವಿದ್ದು, ಕಂಪನಿಯು ಹೆಚ್ಚಿನ ಪರ್ಫಾಮೆನ್ಸ್ ಹೊಂದಿರುವ ಟರ್ಬೊ ವರ್ಷನ್ ಬಿಡುಗಡೆ ಮಾಡುವ ಯೋಜನೆಯಲ್ಲಿದೆ.
2020ರ ದೆಹಲಿ ಆಟೋ ಎಕ್ಸ್ಪೋದಲ್ಲಿ ಮೊದಲ ಬಾರಿಗೆ ಅನಾವರಣಗೊಂಡಿದ್ದ ಎಕ್ಸ್ಯುವಿ300 ಸ್ಪೋರ್ಟ್ಜ್ ಆವೃತ್ತಿಯು ಇದೀಗ ಬಿಡುಗಡೆಗಾಗಿ ಅಂತಿಮ ಹಂತದ ಸಿದ್ದತೆಯಲ್ಲಿದ್ದು, ಕಳೆದ ವರ್ಷವೇ ಬಿಡುಗಡೆಯಾಗಬೇಕಿದ್ದ ಹೊಸ ಕಾರನ್ನು ಕಂಪನಿಯು ಕಾರಣಾಂತರಗಳಿಂದ ಮುಂದೂಡಿಕೆ ಮಾಡುತ್ತಾ ಇದೀಗ ಬಿಡುಗಡೆಗೆ ಸಿದ್ದವಾಗಿದೆ.
ಹೊಸ ಕಾರಿನಲ್ಲಿ ಸಾಮಾನ್ಯ ಮಾದರಿಯಲ್ಲಿರುವಂತೆಯೇ ಪ್ರಮುಖ ತಾಂತ್ರಿಕ ಅಂಶಗಳೊಂದಿಗೆ ಪರ್ಫಾಮೆನ್ಸ್ ಪ್ರಿಯರಿಗಾಗಿಯೇ ಹೊಸದಾಗಿ ಅಭಿವೃದ್ದಿಗೊಳಿಸಲಾದ 1.2-ಲೀಟರ್ ಟಿ-ಜಿಡಿಐ ಪೆಟ್ರೋಲ್ ಎಂಜಿನ್ ಜೋಡಣೆ ಹೊಂದಿದ್ದು, ಅತಿ ಹೆಚ್ಚು ಬಿಎಚ್ಪಿ ಉತ್ಪಾದನಾ ವೈಶಿಷ್ಟ್ಯತೆಯೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿದೆ.
ಹೊಸದಾಗಿ ಅಭಿವೃದ್ದಿಗೊಳಿಸಲಾಗಿರುವ 1.2-ಲೀಟರ್ ಪೆಟ್ರೋಲ್ ಎಂಜಿನ್ ಅನ್ನು ಎಂಸ್ಟಾಲಿನ್ ಎಂದು ಹೆಸರಿಸಿರುವ ಮಹೀಂದ್ರಾ ಕಂಪನಿಯು ಸದ್ಯ ಮಾರುಕಟ್ಟೆಯಲ್ಲಿರುವ ಸಾಮಾನ್ಯ ಮಾದರಿಯ 1.2-ಲೀಟರ್ ಪೆಟ್ರೋಲ್ ಎಂಜಿನ್ಗಿಂತಲೂ ಹೆಚ್ಚು ಸುಧಾರಿತ ತಂತ್ರಜ್ಞಾನ ಪ್ರೇರಣೆಯೊಂದಿಗೆ ಅಭಿವೃದ್ದಿಗೊಳಿಸಲಾಗಿದೆ.
ಹೊಸ ಎಂಜಿನ್ ಅನ್ನು ಸ್ಪೋರ್ಟ್ಜ್ ವರ್ಷನ್ನಲ್ಲಿ ಮಾತ್ರವೇ ಖರೀದಿಗೆ ಲಭ್ಯವಿರಲಿದ್ದು, ಹೊಸ ಕಾರು ಮುಂಬರುವ ಫೇಸ್ಲಿಫ್ಟ್ ಮಾದರಿಯಲ್ಲಿ ಬಿಡುಗಡೆಯಾಗಬಹುದಾಗಿದೆ. ಹೊಸ ಎಂಜಿನ್ ಮಾದರಿಯು ಗ್ರಾಹಕರ ಬೇಡಿಕೆಯೆಂತೆ 6-ಸ್ಪೀಡ್ ಮ್ಯಾನುವಲ್ ಗೇರ್ಬಾಕ್ಸ್ ಮತ್ತು 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್ಬಾಕ್ಸ್ ಆಯ್ಕೆ ಹೊಂದಲಿದೆ.
ಕಂಪ್ಯಾಕ್ಟ್ ಎಸ್ಯುವಿ ಕಾರು ಮಾದರಿಗಳಲ್ಲಿಯೇ ಅತಿ ಹೆಚ್ಚು ಸುರಕ್ಷಿತ ಕಾರು ಮಾದರಿಯೆಂಬ ಹೆಗ್ಗಳಿಕೆ ಹೊಂದಿರುವ ಎಕ್ಸ್ಯುವಿ300 ಮಾದರಿಯು ಕ್ರ್ಯಾಶ್ ಟೆಸ್ಟಿಂಗ್ನಲ್ಲಿ ಹೆಚ್ಚು ಅಂಕಗಳೊಂದಿಗೆ 5 ಸ್ಟಾರ್ ರೇಟಿಂಗ್ ಪಡೆದ ಮೊದಲ ಕಾರು ಮಾದರಿಯಾಗಿದೆ.
ಎಕ್ಸ್ಯುವಿ300 ಮಾದರಿಯು ಗುಣಮಟ್ಟದ ಬಿಡಿಭಾಗಗಳೊಂದಿಗೆ ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಟಾಪ್ ಎಂಡ್ ಮಾದರಿಯಲ್ಲಿ 7 ಏರ್ಬ್ಯಾಗ್ ಸೇರಿದಂತೆ ಹಲವಾರು ಪ್ರೀಮಿಯಂ ಸೌಲಭ್ಯಗಳನ್ನು ಸ್ಟ್ಯಾಂಡರ್ಡ್ ಹೊಂದಿದ್ದು, ಹಲವಾರು ಸೆಗ್ಮೆಂಟ್ ಫಸ್ಟ್ ಪ್ರೀಮಿಯಂ ಫೀಚರ್ಸ್ ಹೊಂದಿದೆ.
ಇತ್ತೀತೆಗೆ ಎಕ್ಸ್ಯುವಿ300 ಮಾದರಿಯ ಟಾಪ್ ಎಂಡ್ ವೆರಿಯೆಂಟ್ ಡಬ್ಲ್ಯು8 ಆಪ್ಷನ್ ಮಾದರಿಯಲ್ಲಿ ಹೊಸ ಅಲಾಯ್ ವ್ಹೀಲ್ ಜೋಡಣೆ ಮಾಡಿದ್ದ ಮಹೀಂದ್ರಾ ಕಂಪನಿಯು 17-ಇಂಚಿನ ಡ್ಯುಯಲ್ ಟೋನ್ ಅಲಾಯ್ ವ್ಹೀಲ್ ನೀಡುತ್ತಿದೆ.
ಡಬ್ಲ್ಯು8 ಆಪ್ಷನ್ ಮಾದರಿಯ ಹೊರತುಪಡಿಸಿ ಇನ್ನುಳಿದ ಮಾದರಿಗಳಲ್ಲಿ ಕಂಪನಿಯು 16 ಇಂಚಿನ ಅಲಾಯ್ ವ್ಹೀಲ್ ನೀಡಲಾಗುತ್ತಿದ್ದು, ಟಾಪ್ ಎಂಡ್ ಮಾದರಿಯಲ್ಲಿ ಹೊಸ ಡ್ಯುಯಲ್ ಟೋನ್ ಮಾದರಿಯ ಹೊರತಾಗಿಯೂ ಕಂಪನಿಯು ಈ ಹಿಂದಿನ ಬೆಲೆ ಪಟ್ಟಿಯನ್ನು ಮುಂದುವರಿಸಿದೆ.
ಎಕ್ಸ್ಯುವಿ300 ಮಾದರಿಯು ಸದ್ಯ ವಿವಿಧ ತಾಂತ್ರಿಕ ಅಂಶಗಳಿಗೆ ಅನುಗುಣವಾಗಿ ಡಬ್ಲ್ಯು4, ಡಬ್ಲ್ಯು6, ಡಬ್ಲ್ಯು8, ಡಬ್ಲ್ಯು8 ಆಪ್ಷನ್ ವೆರಿಯೆಂಟ್ಗಳಲ್ಲಿ ಖರೀದಿಗೆ ಲಭ್ಯವಿದ್ದು, ದೆಹಲಿ ಎಕ್ಸ್ಶೋರೂಂ ಪ್ರಕಾರ ಆರಂಭಿಕವಾಗಿ ರೂ. 8.41 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 14.07 ಲಕ್ಷ ಬೆಲೆ ಹೊಂದಿದೆ.