ಭಾರತದಲ್ಲಿ ಬೆಲೆ ಏರಿಕೆ ಪಡೆದುಕೊಂಡ ಮಹೀಂದ್ರಾ ಎಕ್ಸ್‌ಯುವಿ300 ಎಸ್‌ಯುವಿ

ಜನಪ್ರಿಯ ಮತ್ತು ಸ್ವದೇಶಿ ವಾಹನ ತಯಾರ ಕಂಪನಿಯಾದ ಮಹೀಂದ್ರಾ ತನ್ನ ಎಕ್ಸ್‌ಯುವಿ300 ಕಂಪ್ಯಾಕ್ಟ್ ಎಸ್‌ಯುವಿಯ ಬೆಲೆ ಏರಿಕೆಯನ್ನು ಮಾಡಿದೆ. ಇದರಿಂದ ಮಹೀಂದ್ರಾ ಎಕ್ಸ್‌ಯುವಿ300 ಕಾಂಪ್ಯಾಕ್ಟ್ ಎಸ್‌ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ತುಸು ದುಬಾರಿಯಾಗಿದೆ.

ಭಾರತದಲ್ಲಿ ಬೆಲೆ ಏರಿಕೆ ಪಡೆದುಕೊಂಡ ಮಹೀಂದ್ರಾ ಎಕ್ಸ್‌ಯುವಿ300 ಎಸ್‌ಯುವಿ

ಮಹೀಂದ್ರಾ ಎಕ್ಸ್‌ಯುವಿ300 2022ರ ಮಾರ್ಚ್ ತಿಂಗಳಿನಲ್ಲಿ ಕಂಪನಿಯ ಸಾಲಿನಲ್ಲಿ ನಾಲ್ಕನೇ ಹೆಚ್ಚು ಮಾರಾಟವಾದ ಮಾದರಿಯಾಗಿದೆ. ಇದು ಕಳೆದ ತಿಂಗಳಲ್ಲಿ 4,140 ಯುನಿಟ್‌ಗಳ ಮಾರಾಟವನ್ನು ಕಂಡಿದೆ, ಈ ಮಹೀಂದ್ರಾ ಎಕ್ಸ್‌ಯುವಿ300 ಕಂಪ್ಯಾಕ್ಟ್ ಎಸ್‌ಯುವಿಯ ರೂಪಾಂತರವನ್ನು ಅವಲಂಬಿಸಿ ರೂ.25,000- ರೂ.42,000 ಗಳವರೆಗೆ ಹೆಚ್ಚಿಸಲಾಗಿದೆ. ಇದೀಗ ಮಹೀಂದ್ರಾ ಎಕ್ಸ್‌ಯುವಿ300 ಕಂಪ್ಯಾಕ್ಟ್ ಎಸ್‌ಯುವಿಯಯ ಡಬ್ಲ್ಯು4 ಎಂಟಿ ರೂಪಾಂತರದ ಬೆಲೆಯು ರೂ.8.41 ಲಕ್ಷವಾಗಿದೆ.

ಭಾರತದಲ್ಲಿ ಬೆಲೆ ಏರಿಕೆ ಪಡೆದುಕೊಂಡ ಮಹೀಂದ್ರಾ ಎಕ್ಸ್‌ಯುವಿ300 ಎಸ್‌ಯುವಿ

ಇದೀಗ ಎಕ್ಸ್‌ಯುವಿ300 ಡಬ್ಲ್ಯು6 ಎಂಟಿ ರೂಪಾಂತರದ ಬೆಲೆಯು ರೂ.9.99 ಲಕ್ಷಗಳಾಗಿದೆ. ಇನ್ನು ಡಬ್ಲ್ಯು6 ಎಎಂಟಿ ರೂಪಾಂತರದ ಬೆಲೆಯು ರೂ.10.51 ಲಕ್ಷವಾಗಿದೆ. ಇನ್ನು ಇದೀಗ ಡಬ್ಲ್ಯು8 ಎಂಟಿ ರೂಪಾಂತರದ ಬೆಲೆಯು ರೂ.11.16 ಲಕ್ಷವಾಗಿದ್ದರೆ, ಡಬ್ಲ್ಯು8 ಒ ಎಂಟಿ ಬೆಲೆಯು ರೂ.12.38 ಲಕ್ಷವಾಗಿದೆ.

ಭಾರತದಲ್ಲಿ ಬೆಲೆ ಏರಿಕೆ ಪಡೆದುಕೊಂಡ ಮಹೀಂದ್ರಾ ಎಕ್ಸ್‌ಯುವಿ300 ಎಸ್‌ಯುವಿ

ಇನ್ನು ಮಹೀಂದ್ರಾ ಎಕ್ಸ್‌ಯುವಿ300 ಡಬ್ಲ್ಯು8 ಒ ಎಂಟಿ ಡಿಟಿ ಬೆಲೆಯು ರೂ. 12.53 ಲಕ್ಷ, ಡಬ್ಲ್ಯು8 ಒ ಎಎಂಟಿ ರೂಪಾಂತರದ ಬೆಲೆಯು ರೂ.13.06 ಲಕ್ಷವಾದರೆ ಡಬ್ಲ್ಯು8 ಒ ಎಂಎಂಟಿ ಡಿಟಿ ಲೈನ್‌ ರೂಪಾಂತರದ ಬೆಲೆಯು ರೂ.13.21 ಲಕ್ಷವಾಗಿದೆ.

ಭಾರತದಲ್ಲಿ ಬೆಲೆ ಏರಿಕೆ ಪಡೆದುಕೊಂಡ ಮಹೀಂದ್ರಾ ಎಕ್ಸ್‌ಯುವಿ300 ಎಸ್‌ಯುವಿ

ಇನ್ನು ಮಹೀಂದ್ರಾ ಎಕ್ಸ್‌ಯುವಿ300 ಡೀಸೆಲ್ ಶ್ರೇಣಿಯು ರೂಪಾಂತರವನ್ನು ಅವಲಂಬಿಸಿ ಅದರ ಬೆಲೆಗಳು ರೂ.30,000 ದಿಂದ ರೂ.42,000 ವರೆಗೆ ಹೆಚ್ಚಾಗುತ್ತದೆ. ಬೆಲೆ ಏರಿಕೆಯ ಬಳಿಕ, ಮೂಲ ಡಬ್ಲ್ಯು4 ಎಂಟಿ ಟ್ರಿಮ್ ರೂ.9.30 ಲಕ್ಷ, ಡಬ್ಲ್ಯು6 ಎಂಟಿ ರೂಪಾಂತರದ ಬೆಲೆಯು ರೂ.10.38 ಲಕ್ಷ, ಸನ್ ರೂಫ್ ಹೊಂದಿರುವ ಡಬ್ಲ್ಯು8 ಎಂಟಿ ರೂಪಾಂತರದ ಬೆಲೆ ರೂ.12.41 ಲಕ್ಷಗಳದರೆ ಡಬ್ಲ್ಯು8 ಒ ಎಂಟಿ ರೂಪಾಂತರದ ಬೆಲೆಯು ರೂ.13.23 ಲಕ್ಷವಾಗಿದೆ.

ಭಾರತದಲ್ಲಿ ಬೆಲೆ ಏರಿಕೆ ಪಡೆದುಕೊಂಡ ಮಹೀಂದ್ರಾ ಎಕ್ಸ್‌ಯುವಿ300 ಎಸ್‌ಯುವಿ

ಇನ್ನು ಡಬ್ಲ್ಯು8 ಒ ಎಂಟಿ ಡಿಟಿ ರೂಪಾಂತರದ ಬೆಲೆಯು ರೂ.13.38 ಲಕ್ಷ, ಡಬ್ಲ್ಯು8 ಒ ಎಂಟಿ ಡಿಟಿ ರೂಪಾಂತರದ ಬೆಲೆಯು ರೂ.13.92 ಲಕ್ಷಗಳದರೆ, ಡಬ್ಲ್ಯು8 ಒ ಎಎಂಟಿ ಡಿಟಿ ರೂಪಾಂತರದ ಬೆಲೆಯು ರೂ.14.07 ಲಕ್ಷವಾಗಿದೆ.

ಭಾರತದಲ್ಲಿ ಬೆಲೆ ಏರಿಕೆ ಪಡೆದುಕೊಂಡ ಮಹೀಂದ್ರಾ ಎಕ್ಸ್‌ಯುವಿ300 ಎಸ್‌ಯುವಿ

ಇನ್ನು ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಗಳಲ್ಲಿಯೇ ಅತಿ ಹೆಚ್ಚು ಸುರಕ್ಷಿತ ಕಾರು ಮಾದರಿಯೆಂಬ ಹೆಗ್ಗಳಿಕೆ ಹೊಂದಿರುವ ಎಕ್ಸ್‌ಯುವಿ300 ಮಾದರಿಯು ಕಳೆದ ಕೆಲ ತಿಂಗಳಿನಿಂದ ಹೆಚ್ಚಿನ ಪ್ರಮಾಣದ ಬೇಡಿಕೆ ಪಡೆದುಕೊಳ್ಳುತ್ತಿದೆ.

ಭಾರತದಲ್ಲಿ ಬೆಲೆ ಏರಿಕೆ ಪಡೆದುಕೊಂಡ ಮಹೀಂದ್ರಾ ಎಕ್ಸ್‌ಯುವಿ300 ಎಸ್‌ಯುವಿ

2020-21ರ ಆರ್ಥಿಕ ವರ್ಷದ ದ್ವಿತೀಯಾರ್ಧದಲ್ಲಿ ಮಹೀಂದ್ರಾ ಎಕ್ಸ್‌ಯುವಿ300 ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಬುಕಿಂಗ್ ಪ್ರಮಾಣವು ಕೂಡ ಹೆಚ್ಚಾಗಿದ್ದು, ಪ್ರತಿ ತಿಂಗಳು ಸರಾಸರಿಯಾಗಿ 6 ಸಾವಿರ ಯುನಿಟ್‌‌ಗೆ ಬುಕ್ಕಿಂಗ್ ದಾಖಲಾಗಿದೆ.

ಭಾರತದಲ್ಲಿ ಬೆಲೆ ಏರಿಕೆ ಪಡೆದುಕೊಂಡ ಮಹೀಂದ್ರಾ ಎಕ್ಸ್‌ಯುವಿ300 ಎಸ್‌ಯುವಿ

ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಅತಿ ಹೆಚ್ಚು ಸುರಕ್ಷಾ ಫೀಚರ್ಸ್ ಹೊಂದಿರುವ ಎಕ್ಸ್‌ಯುವಿ300 ಎಸ್ಯುವಿಯು ಅತಿ ಹೆಚ್ಚು ಅಂಕಗಳೊಂದಿಗೆ ಕ್ರ್ಯಾಶ್ ಟೆಸ್ಟಿಂಗ್ 5 ಸ್ಟಾರ್ ರೇಟಿಂಗ್ ಪಡೆದ ಮೊದಲ ಬಜೆಟ್ ಕಾರು ಮಾದರಿಯಾಗಿದೆ. ಪ್ರತಿ ಹೊಸ ಕಾರು ಮಾದರಿಗಳಿಗೂ ಪ್ರಯಾಣಿಕರ ಸುರಕ್ಷಾ ವಿಚಾರವಾಗಿ ಜಾಗತಿಕ ಪ್ರಮಾಣ ಪತ್ರದ ಅವಶ್ಯಕತೆಯಿದೆ.

ಭಾರತದಲ್ಲಿ ಬೆಲೆ ಏರಿಕೆ ಪಡೆದುಕೊಂಡ ಮಹೀಂದ್ರಾ ಎಕ್ಸ್‌ಯುವಿ300 ಎಸ್‌ಯುವಿ

ಈ ಎಕ್ಸ್‌ಯುವಿ300 ಪಡೆದುಕೊಳ್ಳುತ್ತಿರುವ ಉತ್ತಮ ರೇಟಿಂಗ್‌ನಿಂದಾಗಿ ಸುರಕ್ಷತೆಯಲ್ಲಿ ಯಾವುದೇ ರಾಜಿ ಮಾಡಿಕೊಂಡಿಲ್ಲ ಎಂಬುವುದು ಖಾತ್ರಿಯಾಗಿದೆ. ಈ ಕಾಂಪ್ಯಾಕ್ಟ್ ಎಸ್‌ಯುವಿ ಕಾರುಗಳಲ್ಲಿ ಈ ಮೊದಲು ಟಾಟಾ ನೆಕ್ಸಾನ್ ನಂತರ ಎಕ್ಸ್‌ಯುವಿ300 ಕೂಡಾ ಗರಿಷ್ಠ ರೇಟಿಂಗ್ ಪಡೆದುಕೊಳ್ಳುವ ಮೂಲಕ ಗರಿಷ್ಠ ಸುರಕ್ಷತಾ ಕಾರು ಮಾದರಿಯಾಗಿ ಗ್ರಾಹಕರ ಗಮನಸೆಳೆಯುತ್ತಿದೆ.

ಭಾರತದಲ್ಲಿ ಬೆಲೆ ಏರಿಕೆ ಪಡೆದುಕೊಂಡ ಮಹೀಂದ್ರಾ ಎಕ್ಸ್‌ಯುವಿ300 ಎಸ್‌ಯುವಿ

#SAFERCARSFORINDIA ಅಭಿಯಾನದಡಿ ದೇಶಿಯ ಮಾರುಕಟ್ಟೆಯಲ್ಲಿನ ಕಾರುಗಳ ಅಸಲಿಯತ್ತು ಬಯಲು ಮಾಡುತ್ತಿರುವ ಗ್ಲೋಬಲ್ ಎನ್‌ಸಿಎಪಿ ಸಂಸ್ಥೆಯು ಮಹೀಂದ್ರಾ ಎಕ್ಸ್‌ಯುವಿ300 ಕಾರು ಮಾದರಿಗೆ ಗರಿಷ್ಠ ರೇಟಿಂಗ್ ನೀಡಿದೆ. ಈ ಎಕ್ಸ್‌ಯುವಿ300 ಮಾದರಿಯು ಗುಣಮಟ್ಟದ ಬಿಡಿಭಾಗಗಳೊಂದಿಗೆ ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಟಾಪ್ ಎಂಡ್ ಮಾದರಿಯಲ್ಲಿ 7 ಏರ್‌ಬ್ಯಾಗ್ ಸೇರಿದಂತೆ ಹಲವಾರು ಪ್ರೀಮಿಯಂ ಸೌಲಭ್ಯಗಳನ್ನು ಸ್ಟ್ಯಾಂಡರ್ಡ್ ಹೊಂದಿದ್ದು, ಹಲವಾರು ಸೆಗ್ಮೆಂಟ್ ಫಸ್ಟ್ ಪ್ರೀಮಿಯಂ ಫೀಚರ್ಸ್ ಹೊಂದಿದೆ.

ಭಾರತದಲ್ಲಿ ಬೆಲೆ ಏರಿಕೆ ಪಡೆದುಕೊಂಡ ಮಹೀಂದ್ರಾ ಎಕ್ಸ್‌ಯುವಿ300 ಎಸ್‌ಯುವಿ

ಮಹೀಂದ್ರಾ ಎಕ್ಸ್‌ಯುವಿ 300 ಎಸ್‍ಯುವಿ ಮಾದರಿಯು ಸದ್ಯ ಮಾರುಕಟ್ಟೆಯಲ್ಲಿ 1.2-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್‌ನೊಂದಿಗೆ ಖರೀದಿಗೆ ಲಭ್ಯವಿದೆ. ಇದರ 1.2-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್‌ ಅನ್ನು ಹೊಂದಿದೆ. ಈ ಎಂಜಿನ್ 110 ಬಿಹೆಚ್‍ಪಿ ಪವರ್ ಮತ್ತು 200 ಎನ್‌ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇನ್ನು1.5 ಲೀಟರ್ ಆಯಿಲ್ ಬರ್ನರ್ ಎಂಜಿನ್ 117 ಬಿಹೆಚ್‍ಪಿ ಪವರ್ ಮತ್ತು 300 ಎನ್‌ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎರಡು ಎಂಜಿನ್ ಗಳೊಂದಿಗೆ 6-ಸ್ಪೀಡ್ ಮ್ಯಾನ್ಯುವಲ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ.

ಭಾರತದಲ್ಲಿ ಬೆಲೆ ಏರಿಕೆ ಪಡೆದುಕೊಂಡ ಮಹೀಂದ್ರಾ ಎಕ್ಸ್‌ಯುವಿ300 ಎಸ್‌ಯುವಿ

ಮಹೀಂದ್ರಾ ಎಕ್ಸ್‌ಯುವಿ300 ಜನಪ್ರಿಯ ಕಾಂಪ್ಯಾಕ್ಟ್ ಎಸ್‍ಯುವಿಗಳಲ್ಲಿ ಒಂದಾಗಿದೆ, ಮಹೀಂದ್ರಾ ಎಕ್ಸ್‌ಯುವಿ300 ದೇಶಿಯ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಹ್ಯುಂಡೈ ವೆನ್ಯೂ, ಫೋರ್ಡ್ ಇಕೋಸ್ಪೋರ್ಟ್ ಮತ್ತು ಟಾಟಾ ನೆಕ್ಸಾನ್ ಕಾಂಪ್ಯಾಕ್ಟ್ ಎಸ್‍ಯುವಿಗೆ ಪೈಪೋಟಿಯನ್ನು ನೀಡುತ್ತದೆ.

Most Read Articles

Kannada
English summary
Mahindra xuv300 suv prices increased variants wise new prices details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X