Just In
- 12 hrs ago ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- 15 hrs ago Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- 15 hrs ago ಈ ಬೈಕ್ಗಳನ್ನು ಗ್ರಾಹಕರು ಮುಗಿಬಿದ್ದು ಖರೀದಿಸುತ್ತಿದ್ದಾಗಲೇ ಬೆಲೆ ಏರಿಕೆ ಮಾಡಿ ಶಾಕ್ ಕೊಟ್ಟ ಟ್ರಯಂಫ್
- 17 hrs ago ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
Don't Miss!
- News Petrol Price: ಇಂದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ವಿವರ ತಿಳಿಯಿರಿ
- Finance ಎಂಡಿಎಚ್ ಮತ್ತು ಎವರೆಸ್ಟ್ ಸೇರಿದಂತೆ ಎಲ್ಲಾ ಬ್ರಾಂಡ್ ಮಸಾಲೆಗಳ ಮಾದರಿಗಳ ಪರೀಕ್ಷೆಗೆ ಮುಂದಾದ FSSAI
- Sports CSK vs LSG IPL 2024: ಐಪಿಎಲ್ನಲ್ಲಿ ಈ ದಾಖಲೆ ಮಾಡಿದ ಮೊದಲ ಸಿಎಸ್ಕೆ ನಾಯಕ ರುತುರಾಜ್ ಗಾಯಕ್ವಾಡ್
- Movies 'KGF-2' ಚಿತ್ರದಿಂದ ಸಿಕ್ಕಿದ್ದು 200 ಕೋಟಿ ರೂ.; 'ಟಾಕ್ಸಿಕ್', 'ರಾಮಾಯಣ'ಕ್ಕೆ ಯಶ್ 50-50 ಡೀಲ್!
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಎಕ್ಸ್ಯುವಿ400 ಎಲೆಕ್ಟ್ರಿಕ್ ಎಸ್ಯುವಿ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿದ ಮಹೀಂದ್ರಾ
ಮಹೀಂದ್ರಾ ಕಂಪನಿಯು ಹೊಸ ತಲೆಮಾರಿನ ವೈಶಿಷ್ಟ್ಯತೆಗಳೊಂದಿಗೆ ತನ್ನ ಪ್ರಮುಖ ಇವಿ ಕಾರುಗಳ ಬಿಡುಗಡೆಗೆ ಸಿದ್ದವಾಗುತ್ತಿದ್ದು, ಕಂಪನಿಯು ಇದೀಗ ಎಕ್ಸ್ಯುವಿ400 ಎಲೆಕ್ಟ್ರಿಕ್ ಕಾರು ಮಾದರಿಯ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಚುರುಕುಗೊಳಿಸಿದೆ.
ಸುಧಾರಿತ ತಂತ್ರಜ್ಞಾನ ಪ್ರೇರಣೆ ಅಡಿಯಲ್ಲಿ ಅಭಿವೃದ್ದಿಗೊಂಡ ಎಕ್ಸ್ಯುವಿ400 ಇವಿ ಕಾರು ಮಾದರಿಯನ್ನು 2023ರ ಆರಂಭದಲ್ಲಿ ಬಿಡುಗಡೆ ಮಾಡುತ್ತಿದ್ದು, ಹೊಸ ಕಾರಿನಲ್ಲಿ ಅತ್ಯಧಿಕ ಮೈಲೇಜ್ ಪ್ರೇರಿತ ಬ್ಯಾಟರಿ ಪ್ಯಾಕ್ ಜೋಡಣೆ ಮಾಡಲಾಗುತ್ತಿದೆ. ಕಳೆದ 2020ರ ದೆಹಲಿ ಆಟೋ ಎಕ್ಸ್ಪೋದಲ್ಲಿ ಅನಾವರಣಗೊಳಿಸಲಾಗಿದ್ದ ಇಎಕ್ಸ್ಯುವಿ300 ಮಾದರಿಯನ್ನೇ ಕಂಪನಿಯು ಇದೀಗ ಎಕ್ಸ್ಯುವಿ400 ಹೆಸರಿನಲ್ಲಿ ಬಿಡುಗಡೆ ಮಾಡುತ್ತಿದ್ದು, ಸಾಮಾನ್ಯ ಎಕ್ಸ್ಯುವಿ300 ಮಾದರಿಗಿಂತಲೂ ಇವಿ ಕಾರು ಮಾದರಿಯು ವಿಭಿನ್ನವಾದ ವಿನ್ಯಾಸ ಹೊಂದಿರಲಿದೆ.
ಎಕ್ಸ್ಯುವಿ300 ನೇಮ್ ಪ್ಲೇಟ್ ಅನ್ನು ಸದ್ಯ ಸಾಮಾನ್ಯ ಕಾರು ಮಾದರಿಗಾಗಿ ಮಾತ್ರ ಬಳಕೆಯ ಮಾಡಲಿದ್ದು, ಎಲೆಕ್ಟ್ರಿಕ್ ಆವೃತ್ತಿಗೆ ಎಕ್ಸ್ಯುವಿ400 ಹೆಸರು ಬಳಕೆ ಮಾಡಲಿದೆ.
ಹೊಸ ಕಾರು ಬಿಡುಗಡೆಗೂ ಮುನ್ನ ಕಂಪನಿಯು ಮುಂಬರುವ ಅಕ್ಟೋಬರ್ ಹೊತ್ತಿಗೆ ಹೊಸ ಕಾರಿನ ಉತ್ಪಾದನಾ ಮಾದರಿಯನ್ನು ಅನಾವರಣಗೊಳಿಸಲು ಸಜ್ಜಾಗುತ್ತಿದ್ದು, ಈ ವೇಳೆ ಹೊಸ ಕಾರಿನ ಪ್ರಮುಖ ತಾಂತ್ರಿಕ ಮಾಹಿತಿಗಳ ಜೊತೆಗೆ ಬ್ಯಾಟರಿ ಪ್ಯಾಕ್ ಕುರಿತಾದ ಮಾಹಿತಿಗಳನ್ನು ಹಂಚಿಕೊಳ್ಳಲಿದೆ.
ಮಹೀಂದ್ರಾ ಕಂಪನಿಯು ಮುಂದಿನ ಐದು ವರ್ಷಗಳಲ್ಲಿ ಒಟ್ಟು 13 ಹೊಸ ಕಾರುಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದ್ದು, ಹೊಸ ಯೋಜನೆಯಲ್ಲಿ ಎಲೆಕ್ಟ್ರಿಕ್ ಮಾದರಿಯಾದ ಎಕ್ಸ್ಯುವಿ 400 ಮಾದರಿಯು ಕೂಡಾ ಒಂದಾಗಿದೆ.
2020ರ ದೆಹಲಿ ಆಟೋ ಎಕ್ಸ್ಪೋದಲ್ಲಿ ಅನಾವರಣಗೊಂಡಿದ್ದ ಹೊಸ ಇಎಕ್ಸ್ಯುವಿ300(eXUV300) ಕಾರನ್ನು ಮಾರುಕಟ್ಟೆಯಲ್ಲಿನ ಸನ್ನಿವೇಶ ಆಧರಿಸಿ ಇದೀಗ ಬದಲಿ ಹೆಸರಿನಲ್ಲಿ ಬಿಡುಗಡೆ ಮಾಡಲು ಮುಂದಾಗಿದ್ದು, ಹೊಸ ಕಾರು ಬಿಡುಗಡೆಗೂ ಮುನ್ನ ತಾಂತ್ರಿಕ ಸೌಲಭ್ಯ ಕಾರ್ಯಕ್ಷಮತೆ ಪರೀಕ್ಷಿಸಲು ವಿವಿಧ ಹಂತದ ರೋಡ್ ಟೆಸ್ಟಿಂಗ್ ನಡೆಸಲಾಗುತ್ತಿದೆ.
ಹೊಸ ಎಕ್ಸ್ಯುವಿ400 ಎಲೆಕ್ಟ್ರಿಕ್ ಬಿಡುಗಡೆ ಯೋಜನೆ ಕುರಿತಂತೆ ಈಗಾಗಲೇ ಮಾತನಾಡಿರುವ ಮಹೀಂದ್ರಾ ಕಾರ್ಯನಿರ್ವಾಹಕ ನಿರ್ದೇಶಕ ರಾಜೇಶ್ ಜೆಜುರಿಕರ್ ಅವರು ಹೊಸ ಇವಿ ಕಾರು ಮಾದರಿಯನ್ನು ಮುಂದಿನ ವರ್ಷದ ಮೊದಲ ತ್ರೈಮಾಸಿಕ ಅವಧಿಯಲ್ಲಿ ಬಿಡುಗಡೆಯ ಸುಳಿವು ನೀಡಿದ್ದು, ಹೊಸ ಕಾರು ಬಿಡುಗಡೆಗೂ ಈ ವರ್ಷದ ಸೆಪ್ಟೆಂಬರ್ ಅಥವಾ ಅಕ್ಟೋಬರ್ನಲ್ಲಿ ಹೊಸ ಕಾರಿನ ಉತ್ಪಾದನಾ ಮಾದರಿಯನ್ನು ಅನಾವರಣಗೊಳಿಸುವ ಮಾಹಿತಿ ಹಂಚಿಕೊಂಡಿದ್ದಾರೆ.
2023ರ ಜನವರಿಯಿಂದ ಮಾರ್ಚ್ ಅವಧಿಯಲ್ಲಿ ಎಕ್ಸ್ಯುವಿ400 ಎಲೆಕ್ಟ್ರಿಕ್ ಹೆಸರಿನಲ್ಲಿ ಬಿಡುಗಡೆಯಾಗಲಿದ್ದು, ಹೊಸ ಮಾದರಿಯು ನಾಲ್ಕು ಮೀಟರ್ಗಿಂತಲೂ ಹೆಚ್ಚಿನ ಉದ್ದಳತೆಯೊಂದಿಗೆ ಸಾಮಾನ್ಯ ಎಕ್ಸ್ಯುವಿ300 ಮಾದರಿಗಿಂತಲೂ ಹೆಚ್ಚಿನ ಸ್ಥಳಾವಕಾಶ ಹೊಂದಿರಲಿದೆ.
ಮಹೀಂದ್ರಾ ಕಂಪನಿಯ ಹೊಸ ಎಕ್ಸ್ಯುವಿ400 ಮಾದರಿಯು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಟಾಟಾ ನೆಕ್ಸಾನ್ ಇವಿ ಮತ್ತು ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಗಳಿಗೆ ಭರ್ಜರಿ ಪೈಪೋಟಿಯಾಗಿ ಬಿಡುಗಡೆಯಾಗುತ್ತಿದೆ.ಮಹೀಂದ್ರಾ ಕಂಪನಿಯು ಬಿಡುಗಡೆ ಮಾಡಲಿರುವ ಒಟ್ಟು 13 ಕಾರುಗಳಲ್ಲಿ ಎಂಟು ಎಲೆಕ್ಟ್ರಿಕ್ ಕಾರು ಮಾದರಿಗಳು ಬಿಡುಗಡೆಯಾಗಲಿದ್ದು, ಎಲೆಕ್ಟ್ರಿಕ್ ಕಾರುಗಳು 2022ರ ಮಧ್ಯಂತರದಿಂದ ಹಂತ-ಹಂತವಾಗಿ ಮಾರುಕಟ್ಟೆಯನ್ನು ಪ್ರವೇಶಿಸಲಿವೆ.
2022ರಿಂದ 2027ರ ತನಕ ಎಂಟು ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲಿರುವ ಮಹೀಂದ್ರಾ ಕಂಪನಿಯು ಆರಂಭಿಕವಾಗಿ ಎಕ್ಸ್ಯುವಿ400 ಬಿಡುಗಡೆ ಮಾಡಲಿದ್ದು, ತದನಂತರ ಮಾರುಕಟ್ಟೆಯಲ್ಲಿ ಇತರೆ ಕಾರುಗಳ ಮಾದರಿಗಳ ಎಲೆಕ್ಟ್ರಿಕ್ ಆವೃತ್ತಿಗಳನ್ನು ಪರಿಚಯಿಸಲಿದೆ.
ಡೀಸೆಲ್ ಕಾರುಗಳನ್ನು ತಗ್ಗಿಸಲು ಪೆಟ್ರೋಲ್ ಹೈಬ್ರಿಡ್ ಕಾರು ಮಾದರಿಗಳನ್ನು ಸಹ ಅಭಿವೃದ್ದಿಪಡಿಸುತ್ತಿದ್ದು, ಇಎಕ್ಸ್ಯುವಿ400, ಇಕೆಯುವಿ100 ನಂತರ ಮತ್ತಷ್ಟು ಹೊಸ ಎಲೆಕ್ಟ್ರಿಕ್ ಕಾರುಗಳು ರಸ್ತೆಗಿಳಿಯಲಿವೆ.
ಹೊಸ ಎಕ್ಸ್ಯುವಿ400 ಮಾದರಿಯು ವಿವಿಧ ವೆರಿಯೆಂಟ್ಗಳೊಂದಿಗೆ ಎರಡು ರೀತಿಯ ಬ್ಯಾಟರಿ ಆಯ್ಕೆ ಪೆಡೆದುಕೊಳ್ಳಲಿದ್ದು, ಇದು ಪ್ರತಿ ಚಾರ್ಜ್ಗೆ ಕನಿಷ್ಠ 350 ಕಿ.ಮೀ ನಿಂದ 480 ಕಿ.ಮೀ ಮೈಲೇಜ್ ಪ್ರೇರಿತ ಬ್ಯಾಟರಿ ಪ್ಯಾಕ್ಗಳನ್ನು ಹೊಂದಿರಲಿದೆ.
ಸದ್ಯ ಮಾರುಕಟ್ಟೆಯಲ್ಲಿ ಟಾಟಾ ನೆಕ್ಸಾನ್ ಇವಿ ಕೂಡಾ ಎರಡು ಮಾದರಿಯ ಬ್ಯಾಟರಿ ಆಯ್ಕೆಯೊಂದಿಗೆ ಮಾರಾಟಗೊಳ್ಳುತ್ತಿದ್ದು, ಅದೇ ರೀತಿಯಾಗಿ ಎಕ್ಸ್ಯುವಿ400 ಮಾದರಿಯು ಸಹ ವಿವಿಧ ಹಂತದ ಬೆಲೆ ಸ್ತರಗಳೊಂದಿಗೆ ಬಿಡುಗಡೆಯಾಗಬಹುದಾಗಿದೆ. ಬಜೆಟ್ ಆಧರಿಸಿ ಗ್ರಾಹಕರು ತಮ್ಮ ಬೇಡಿಕೆಯೆಂತೆ ಹೊಸ ಕಾರನ್ನು ಸ್ಟ್ಯಾಂಡರ್ಡ್ ಮತ್ತು ಎಕ್ಸ್ಸೆಂಡ್ ಮಾದರಿಗಳಲ್ಲಿ ಖರೀದಿ ಮಾಡಬಹುದಾಗಿದ್ದು, ಇದು ಎಕ್ಸ್ಶೋರೂಂ ಪ್ರಕಾರ ಆರಂಭಿಕವಾಗಿ ರೂ. 12 ಲಕ್ಷದಿಂದ ಆರಂಭವಾಗಿ ಟಾಪ್ ಎಂಡ್ ಮಾದರಿಯು ರೂ. 20 ಲಕ್ಷ ಬೆಲೆ ಹೊಂದಬಹುದಾಗಿದೆ.
ಇನ್ನು ಪ್ರಸ್ತುತ ಮಾರುಕಟ್ಟೆಯಲ್ಲಿನ ಎಲೆಕ್ಟ್ರಿಕ್ ವಾಣಿಜ್ಯ ವಾಹನ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿರುವ ಮಹೀಂದ್ರಾ ಕಂಪನಿಯ ಮಹೀಂದ್ರಾ ಎಲೆಕ್ಟ್ರಿಕ್ ವಿಭಾಗವು ಮತ್ತಷ್ಟು ಹೊಸ ಇವಿ ವಾಹನ ಉತ್ಪನ್ನಗಳನ್ನು ಬಿಡುಗಡೆ ಮಾಡಲು ಸಿದ್ದವಾಗುತ್ತಿದ್ದು, ವಾಣಿಜ್ಯ ವಾಹನಗಳ ಮಾದರಿಗಳಂತೆಯೇ ಪ್ರಯಾಣಿಕರ ಎಲೆಕ್ಟ್ರಿಕ್ ವಾಹನ ಮಾದರಿಯ ಮಾರಾಟದಲ್ಲೂ ಮುಂಚೂಣಿ ಸಾಧಿಸುವ ನೀರಿಕ್ಷೆಯಲ್ಲಿದೆ.
Source: Auto Comparo/YouTube