ಹೊಸ ದಾಖಲೆ: ಬರೋಬ್ಬರಿ 1.70 ಲಕ್ಷ ಬುಕಿಂಗ್ ಪಡೆದುಕೊಂಡ ಮಹೀಂದ್ರಾ ಎಕ್ಸ್‌ಯುವಿ700

ಮಹೀಂದ್ರಾ ಎಕ್ಸ್‌ಯುವಿ700(Mahindra XUV700) ಮಾದರಿಯು ಬಿಡುಗಡೆಯಾದ ಕೆಲವೇ ತಿಂಗಳುಗಳಲ್ಲಿ ಹಲವು ಹೊಸ ದಾಖಲೆಗೆ ಕಾರಣವಾಗಿದ್ದು, ಹೊಸ ಕಾರು ಬಿಡುಗಡೆಯಾದ ಕೇವಲ 8 ತಿಂಗಳಿನಲ್ಲಿ ಸುಮಾರು 1.70 ಲಕ್ಷ ಬುಕಿಂಗ್ ಪಡೆದುಕೊಂಡಿದೆ.

ಹೊಸ ದಾಖಲೆ: ಬರೋಬ್ಬರಿ 1.70 ಲಕ್ಷ ಬುಕಿಂಗ್ ಪಡೆದುಕೊಂಡ ಮಹೀಂದ್ರಾ ಎಕ್ಸ್‌ಯುವಿ700

ಹೊಸ ಎಕ್ಸ್‌ಯುವಿ700 ಕಾರು ಮಾದರಿಯನ್ನು ಬಿಡುಗಡೆಗೊಳಿಸಿದ ಮೊದಲ ದಿನವೇ 25 ಸಾವಿರ ಯನಿಟ್‌ಗಳಿಗೆ ಬುಕ್ಕಿಂಗ್ ಮತ್ತು ಎರಡನೇ ದಿನದ ಬುಕ್ಕಿಂಗ್ ಅವಧಿಯಲ್ಲೂ ಮತ್ತೆ 25 ಸಾವಿರ ಯುನಿಟ್‌ಗಳಿಗೆ ಬುಕ್ಕಿಂಗ್ ಪಡೆದುಕೊಳ್ಳುವ ಮೂಲಕ ಎರಡು ದಿನಗಳಲ್ಲಿ 50 ಸಾವಿರ ಯುನಿಟ್‌ಗಳಿಗೆ ಬುಕ್ಕಿಂಗ್ ಪಡೆದುಕೊಂಡಿದ್ದ ಮಹೀಂದ್ರಾ ಕಂಪನಿಯು ಇದುವರೆಗೆ 1.70 ಲಕ್ಷ ಯುನಿಟ್‌ಗಳಿಗೆ ಬುಕಿಂಗ್ ಸ್ವಿಕರಿಸಿದೆ.

ಹೊಸ ದಾಖಲೆ: ಬರೋಬ್ಬರಿ 1.70 ಲಕ್ಷ ಬುಕಿಂಗ್ ಪಡೆದುಕೊಂಡ ಮಹೀಂದ್ರಾ ಎಕ್ಸ್‌ಯುವಿ700

ಹೊಸ ಕಾರು ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಆಕರ್ಷಕ ಬೆಲೆಯೊಂದಿಗೆ ಗ್ರಾಹಕರನ್ನು ಸೆಳೆಯುತ್ತಿದ್ದು, ಕಂಪನಿಯು ಇದುವರೆಗೆ ಸುಮಾರು 35 ಸಾವಿರಕ್ಕೂ ಹೆಚ್ಚು ಯುನಿಟ್ ವಿತರಣೆ ಮಾಡಿದೆ.

ಹೊಸ ದಾಖಲೆ: ಬರೋಬ್ಬರಿ 1.70 ಲಕ್ಷ ಬುಕಿಂಗ್ ಪಡೆದುಕೊಂಡ ಮಹೀಂದ್ರಾ ಎಕ್ಸ್‌ಯುವಿ700

ದಾಖಲೆಯಾಗಿರುವ ಬುಕಿಂಗ್ ಬೇಡಿಕೆಯಲ್ಲಿ ಶೇ.65 ಕ್ಕಿಂತಲೂ ಹೆಚ್ಚು ಗ್ರಾಹಕರು ಡೀಸೆಲ್ ಮಾದರಿಗಳಿಗಾಗಿ ಕಾಯುತ್ತಿದ್ದು, ಟಾಪ್ ಎಂಡ್ ಮಾದರಿಗಾಗಿ ಸುಮಾರು ಶೇ. 65ಕ್ಕೂ ಹೆಚ್ಚು ಗ್ರಾಹಕರು ಬುಕಿಂಗ್ ಸಲ್ಲಿಸಿದ್ದಾರೆ.

ಹೊಸ ದಾಖಲೆ: ಬರೋಬ್ಬರಿ 1.70 ಲಕ್ಷ ಬುಕಿಂಗ್ ಪಡೆದುಕೊಂಡ ಮಹೀಂದ್ರಾ ಎಕ್ಸ್‌ಯುವಿ700

ಹೊಸ ಕಾರು ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಗ್ರಾಹಕರ ಬೇಡಿಕೆಯೆಂತೆ 5 ಸೀಟರ್ ಮತ್ತು 7 ಸೀಟರ್ ಮಾದರಿಗಳಲ್ಲಿ ಖರೀದಿಗೆ ಲಭ್ಯವಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 13.18 ಲಕ್ಷದಿಂದ ಮತ್ತು ಹೆಚ್ಚಿನ ಮಟ್ಟದ ಫೀಚರ್ಸ್ ಹೊಂದಿರುವ ಟಾಪ್ ಎಂಡ್ ಮಾದರಿಯನ್ನು ರೂ. 24.58 ಲಕ್ಷ ಬೆಲೆ ಹೊಂದಿದೆ.

ಹೊಸ ದಾಖಲೆ: ಬರೋಬ್ಬರಿ 1.70 ಲಕ್ಷ ಬುಕಿಂಗ್ ಪಡೆದುಕೊಂಡ ಮಹೀಂದ್ರಾ ಎಕ್ಸ್‌ಯುವಿ700

ಹೊಸ ಕಾರಿನಲ್ಲಿ ಕಂಪನಿಯು 2.0-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 2.2-ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಆಯ್ಕೆ ಲಭ್ಯವಿದ್ದು, ಹೊಸ ಕಾರು ಖರೀದಿಗಾಗಿ ಗ್ರಾಹಕರು ಕನಿಷ್ಠ 12 ರಿಂದ ಗರಿಷ್ಠ 24 ತಿಂಗಳುಗಳ ಕಾಲ ಕಾಯಬೇಕಾಗುತ್ತದೆ.

ಹೊಸ ದಾಖಲೆ: ಬರೋಬ್ಬರಿ 1.70 ಲಕ್ಷ ಬುಕಿಂಗ್ ಪಡೆದುಕೊಂಡ ಮಹೀಂದ್ರಾ ಎಕ್ಸ್‌ಯುವಿ700

ಹೊಸ ಕಾರು ಗ್ರಾಹಕರ ಬೇಡಿಕೆಯೆಂತೆ ಎಂಎಕ್ಸ್, ಎಎಕ್ಸ್3, ಎಎಕ್ಸ್5, ಎಎಕ್ಸ್7 ಮತ್ತು ಎಎಕ್ಸ್7 ಲಗ್ಷುರಿ ಎನ್ನುವ ವಿವಿಧ ವೆರಿಯೆಂಟ್‌ಗಳೊಂದಿಗೆ ಆಕರ್ಷಕ ಫೀಚರ್ಸ್, ಬಲಿಷ್ಠ ಎಂಜಿನ್ ಆಯ್ಕೆ ಹೊಂದಿದ್ದು, ಕಂಪನಿಯೇ ಜೋಡಣೆ ಮಾಡುವ 7 ಸೀಟರ್ ಮಾದರಿಗಳನ್ನು ಹೊರತುಪಡಿಸಿ 5 ಸೀಟರ್ ಹೊಂದಿರುವ ಮಾದರಿಗಳಲ್ಲಿ 7 ಸೀಟರ್ ಬಯಸುವ ಗ್ರಾಹಕರು ಹೆಚ್ಚುವರಿ ರೂ. 70 ಸಾವಿರ ಪಾವತಿ ಮಾಡಬೇಕಾಗುತ್ತದೆ.

ಹೊಸ ದಾಖಲೆ: ಬರೋಬ್ಬರಿ 1.70 ಲಕ್ಷ ಬುಕಿಂಗ್ ಪಡೆದುಕೊಂಡ ಮಹೀಂದ್ರಾ ಎಕ್ಸ್‌ಯುವಿ700

ಎಕ್ಸ್‌ಯುವಿ700 ಎಸ್‌ಯುವಿಯಲ್ಲಿ 2.0-ಲೀಟರ್ ಪೆಟ್ರೋಲ್ ಮಾದರಿಯು 198-ಬಿಎಚ್‌ಪಿ, 300-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ 2.2-ಲೀಟರ್ ಡೀಸೆಲ್ ಮಾದರಿಯು 183-ಬಿಎಚ್‌ಪಿ ಮತ್ತು 420-ಎನ್ಎಂ ಟಾರ್ಕ್(6-ಸ್ಪೀಡ್ ಎಂಟಿ),450-ಎನ್ಎಂ ಟಾರ್ಕ್(6-ಸ್ಪೀಡ್ ಎಟಿ) ಉತ್ಪಾದನಾ ವೈಶಿಷ್ಟ್ಯತೆ ಹೊಂದಿದೆ.

ಹೊಸ ದಾಖಲೆ: ಬರೋಬ್ಬರಿ 1.70 ಲಕ್ಷ ಬುಕಿಂಗ್ ಪಡೆದುಕೊಂಡ ಮಹೀಂದ್ರಾ ಎಕ್ಸ್‌ಯುವಿ700

ಹೊಸ ಕಾರಿನಲ್ಲಿ ಫ್ರಂಟ್ ಫಾಸಿಯಾದೊಂದಿಗೆ ಸಂಯೋಜನೆಗೊಂಡಿರುವ ಎಲ್ಇಡಿ ಹೆಡ್‌ಲ್ಯಾಂಪ್ಸ್, ಸಿ ಆಕಾರದಲ್ಲಿರುವ ಎಲ್ಇಡಿ ಡಿಆರ್‌ಎಲ್ಎಸ್, ಸಿಲ್ವರ್ ಕೋಟಿಂಗ್ ಹೊಂದಿರುವ ಫ್ಲಕ್ಸ್ ಸ್ಕೀಡ್ ಪ್ಲೇಟ್, 18-ಇಂಚಿನ ಡ್ಯುಯಲ್ ಟೋನ್ ಮಲ್ಟಿ ಸ್ಪೋಕ್ ಅಲಾಯ್ ವ್ಹೀಲ್ ಪಡೆದುಕೊಂಡಿದೆ.

ಹೊಸ ದಾಖಲೆ: ಬರೋಬ್ಬರಿ 1.70 ಲಕ್ಷ ಬುಕಿಂಗ್ ಪಡೆದುಕೊಂಡ ಮಹೀಂದ್ರಾ ಎಕ್ಸ್‌ಯುವಿ700

ಎಕ್ಸ್‌ಯುವಿ700 ಮಾದರಿಯ ಸೈಡ್ ಪ್ರೋಫೈಲ್ ಮತ್ತು ಹಿಂಬದಿಯ ವಿನ್ಯಾಸವು ಕೂಡಾ ಸಾಕಷ್ಟು ಹೊಸತನದಿಂದ ಕೂಡಿದ್ದು, ಹಿಂಬದಿಯ ಫೆಂಡರ್‌ನೊಂದಿಗೆ ಹರಡಿಕೊಂಡಿರುವ ವಿಭಜಿತ ಟೈಲ್‌ಲ್ಯಾಂಪ್, ವಿನೂತನ ವಿನ್ಯಾಸದ ಬಂಪರ್, ಫ್ಲಕ್ಸ್ ಸ್ಕೀಡ್ ಪ್ಲೇಟ್, ರೂಫ್ ರೈಲ್ಸ್, ಶಾರ್ಕ್ ಫಿನ್ ಆಂಟೆನಾ, ರೂಫ್ ಸ್ಪಾಯ್ಲರ್ ಪಡೆದುಕೊಂಡಿದೆ.

ಹೊಸ ದಾಖಲೆ: ಬರೋಬ್ಬರಿ 1.70 ಲಕ್ಷ ಬುಕಿಂಗ್ ಪಡೆದುಕೊಂಡ ಮಹೀಂದ್ರಾ ಎಕ್ಸ್‌ಯುವಿ700

ಹಾಗೆಯೇ ಹೊಸ ಕಾರಿನಲ್ಲಿ 10.25 ಇಂಚಿನ ಡಿಜಿಟಲ್ ಮತ್ತು ಇನ್ಪೋಟೈನ್‌ಮೆಂಟ್ ಟಚ್‌ಸ್ಕ್ರೀನ್ ಡಿಸ್‌ಪ್ಲೇ, ಆಂಡ್ರಾಯಿಡ್ ಆಟೋ ಮತ್ತು ಆಟೋ ಕಾರ್‌ಪ್ಲೇ, ಅಮೆಜಾನ್ ಅಲೆಕ್ಸಾ, 60 ತಾಂತ್ರಿಕ ಸೌಲಭ್ಯಗಳನ್ನು ನಿಯಂತ್ರಿಸಬಹುದಾದ ಕಾರ್ ಕನೆಕ್ಟ್ ಟೆಕ್ನಾಲಜಿ, ವಾಯ್ಸ್ ಅಸಿಸ್ಟೆನ್ಸ್, ಆ್ಯಂಬಿಯೆಂಟ್ ಲೈಟಿಂಗ್ಸ್, ಡ್ಯುಯಲ್ ಜೋನ್ ಕ್ಲೈಮೆಟ್ ಕಂಟ್ರೋಲ್, 2 ಮತ್ತು 3ನೇ ಸಾಲಿನಲ್ಲೂ ಎಸಿ ವೆಂಟ್ಸ್, ಪನೋರಮಿಕ್ ಸನ್‌ರೂಫ್ ಮತ್ತು ಏರ್ ಪ್ಯೂರಿಫ್ಲೈರ್ ಸೌಲಭ್ಯಗಳಿವೆ.

ಹೊಸ ದಾಖಲೆ: ಬರೋಬ್ಬರಿ 1.70 ಲಕ್ಷ ಬುಕಿಂಗ್ ಪಡೆದುಕೊಂಡ ಮಹೀಂದ್ರಾ ಎಕ್ಸ್‌ಯುವಿ700

ಅಡ್ವಾನ್ಸ್ ಡ್ರೈವರ್ ಅಸಿಸ್ಟೆಡ್ ಸಿಸ್ಟಂ ಸೌಲಭ್ಯವು ಹೊಸ ಕಾರಿನ ಪ್ರಮುಖ ಸುರಕ್ಷಾ ಸೌಲಭ್ಯವಾಗಿದ್ದು, ಇದರ ಜೊತೆಗೆ 7-ಏರ್‌ಬ್ಯಾಗ್, ಎಬಿಎಸ್ ಜೊತೆಗೆ ಇಬಿಡಿ, ಎಲೆಕ್ಟ್ರಾನಿಕ್ ಲಾಕಿಂಗ್, ಟ್ರಾಕ್ಷನ್ ಕಂಟ್ರೋಲ್, ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಆಟೋ ಹೆಡ್‌ಲ್ಯಾಂಪ್ ಬೂಸ್ಟರ್, ವ್ಯಯಕ್ತಿಕರಣಗೊಳಿಸಿದ ಸೇಫ್ಟಿ ಅಲರ್ಟ್, ಡ್ರೈವರ್ ಡ್ರಾಸಿನೆಸ್ ಅಲರ್ಟ್, ಲೆನ್ ಕಿಪ್ ಅಸಿಸ್ಟ್ ಸೌಲಭ್ಯ ಹೊಂದಿದೆ.

Article Published On: Tuesday, May 31, 2022, 12:13 [IST]
English summary
Mahindra xuv700 bookings in india cross 1 70 lakh milestone
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+