ಕೊಟ್ಟ ಮಾತಿನಂತೆ ನಿಗದಿತ ಅವಧಿಯಲ್ಲಿ 14 ಸಾವಿರ ಯುನಿಟ್ ಎಕ್ಸ್‌ಯುವಿ700 ವಿತರಿಸಿದ ಮಹೀಂದ್ರಾ

ಮಹೀಂದ್ರಾ ಕಂಪನಿಯು ಎಕ್ಸ್‌ಯುವಿ700 ಎಸ್‌ಯುವಿ ಮೂಲಕ ಹಲವು ಹೊಸ ದಾಖಲೆಗಳಿಗೆ ಕಾರಣವಾಗಿದ್ದು, ಗ್ರಾಹಕರ ಬೇಡಿಕೆಯೆಂತೆ ಹೊಸ ಕಾರಿನ ವಿತರಣೆಯನ್ನು ತೀವ್ರಗೊಳಿಸಿದೆ. ಕಂಪನಿಯು ಕೊಟ್ಟ ಮಾತಿನಂತೆ ಇದುವರೆಗೆ 14 ಸಾವಿರ ಯುನಿಟ್ ವಿತರಣೆ ಮಾಡಿದ್ದು, ಉತ್ಪಾದನೆಯನ್ನು ತೀವ್ರಗೊಳಿಸುವ ಮೂಲಕ ಕಾಯುವಿಕೆ ಅವಧಿಯನ್ನು ತಗ್ಗಿಸಲಾಗುತ್ತಿದೆ.

ಕೊಟ್ಟ ಮಾತಿನಂತೆ ನಿಗದಿತ ಅವಧಿಯಲ್ಲಿ 14 ಸಾವಿರ ಯುನಿಟ್ ಎಕ್ಸ್‌ಯುವಿ700 ವಿತರಿಸಿದ ಮಹೀಂದ್ರಾ

ಹೊಸ ಎಕ್ಸ್‌ಯುವಿ700 ಎಸ್‌ಯುವಿ ಮಾದರಿಯನ್ನು ಕಳೆದ ಅಗಸ್ಟ್ 15ರಂದು ಬಿಡುಗಡೆಗೊಳಿಸಿದ್ದ ಮಹೀಂದ್ರಾ ಕಂಪನಿಯು ಅಕ್ಟೋಬರ್‌ನಲ್ಲಿ ವಿತರಣೆ ಆರಂಭಿಸಿತ್ತು. ವಿತರಣೆ ಆರಂಭಿಸಿದ ಮೊದಲ ತಿಂಗಳಿನಲ್ಲಿ ಉತ್ತಮ ಸಂಖ್ಯೆಯಲ್ಲಿ ಮಾರಾಟ ಮಾಡಿದರೂ ನವೆಂಬರ್‌ ತಿಂಗಳಿನಲ್ಲಿ ಸೆಮಿಕಂಡಕ್ಟರ್ ಕೊರೆತೆಯೂ ಕಾರಿನ ಉತ್ಪಾದನೆಗೆ ತೀವ್ರ ಹೊಡೆತ ನೀಡಿತ್ತು. ತದನಂತರ ಡಿಸೆಂಬರ್ ಮತ್ತು ಜನವರಿ ಆರಂಭದಲ್ಲಿ ಉತ್ಪಾದನೆ ಹೆಚ್ಚಳದೊಂದಿಗೆ ಕಂಪನಿಯು ಇದೀಗ 14 ಸಾವಿರ ಯುನಿಟ್ ವಿತರಣೆ ಗುರಿಯನ್ನು ತಲುಪಿದೆ.

ಕೊಟ್ಟ ಮಾತಿನಂತೆ ನಿಗದಿತ ಅವಧಿಯಲ್ಲಿ 14 ಸಾವಿರ ಯುನಿಟ್ ಎಕ್ಸ್‌ಯುವಿ700 ವಿತರಿಸಿದ ಮಹೀಂದ್ರಾ

ಮಹೀಂದ್ರಾ ಕಂಪನಿಯ ಈ ಮೊದಲು ಜನವರಿ 14ಕ್ಕೆ 14 ಸಾವಿರ ಯುನಿಟ್ ಎಕ್ಸ್‌ಯುವಿ700 ವಿತರಣೆ ಪೂರ್ಣಗೊಳಿಸುವ ಭರವಸೆ ನೀಡಿತ್ತಾದರೂ ಸೆಮಿಕಂಡಕ್ಟರ್ ಕೊರತೆಯಿಂದ ತುಸು ಹಿನ್ನಡೆಯಾಗಿದ್ದು, ಇದೀಗ 14 ಸಾವಿರ ಯುನಿಟ್ ವಿತರಣೆ ಗುರಿಯನ್ನು ಜನವರಿ 26ರ ಗಣರಾಜ್ಯೋತ್ಸವ ಸಂಭ್ರಮದಲ್ಲಿ ಪೂರ್ಣಗೊಳಿಸಿದೆ.

ಕೊಟ್ಟ ಮಾತಿನಂತೆ ನಿಗದಿತ ಅವಧಿಯಲ್ಲಿ 14 ಸಾವಿರ ಯುನಿಟ್ ಎಕ್ಸ್‌ಯುವಿ700 ವಿತರಿಸಿದ ಮಹೀಂದ್ರಾ

ಹೊಸ ಕಾರು ಇದುವರೆಗೆ ಸುಮಾರು 80 ಸಾವಿರಕ್ಕೂ ಹೆಚ್ಚು ಯುನಿಟ್‌ಗಳಿಗೆ ಬುಕ್ಕಿಂಗ್ ಪಡೆದುಕೊಂಡಿದ್ದು, ಹೊಸ ಕಾರಿನ ಉತ್ಪಾದನಾ ಸಾಮಾರ್ಥ್ಯದ ಆಧಾರದ ಮೇಲೆ ಹೊಸ ಕಾರಿನ ಕಾಯುವಿಕೆ ಅವಧಿಯನ್ನು ವಿವಿಧ ವೆರಿಯೆಂಟ್‌‌ಗಳಿಗೆ ಅನುಗುಣವಾಗಿ ಗರಿಷ್ಠ ಒಂದು ವರ್ಷದ ತನಕ ನಿಗದಿಪಡಿಸಲಾಗಿದೆ.

ಕೊಟ್ಟ ಮಾತಿನಂತೆ ನಿಗದಿತ ಅವಧಿಯಲ್ಲಿ 14 ಸಾವಿರ ಯುನಿಟ್ ಎಕ್ಸ್‌ಯುವಿ700 ವಿತರಿಸಿದ ಮಹೀಂದ್ರಾ

ಹೊಸ ಎಕ್ಸ್‌ಯುವಿ700 ಕಾರು ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಗ್ರಾಹಕರ ಬೇಡಿಕೆಯೆಂತೆ 5 ಸೀಟರ್ ಮತ್ತು 7 ಸೀಟರ್ ಮಾದರಿಗಳಲ್ಲಿ ಖರೀದಿಗೆ ಲಭ್ಯವಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 11.99 ಲಕ್ಷಕ್ಕೆ ಮತ್ತು ಹೆಚ್ಚಿನ ಮಟ್ಟದ ಫೀಚರ್ಸ್ ಹೊಂದಿರುವ ಟಾಪ್ ಎಂಡ್ ಮಾದರಿಯನ್ನು ರೂ. 22.89 ಲಕ್ಷ ಬೆಲೆ ಹೊಂದಿದೆ.

ಕೊಟ್ಟ ಮಾತಿನಂತೆ ನಿಗದಿತ ಅವಧಿಯಲ್ಲಿ 14 ಸಾವಿರ ಯುನಿಟ್ ಎಕ್ಸ್‌ಯುವಿ700 ವಿತರಿಸಿದ ಮಹೀಂದ್ರಾ

ಮೊದಲ 25 ಸಾವಿರ ಯುನಿಟ್‌ಗೆ ಬುಕ್ಕಿಂಗ್ ಮಾಡಿರುವ ಗ್ರಾಹಕರಿಗೆ ಹಳೆಯ ಬೆಲೆಯಲ್ಲಿಯೇ ವಿತರಣೆ ಮಾಡುವುದಾಗಿ ಹೇಳಿಕೊಂಡಿರುವ ಮಹೀಂದ್ರಾ ಕಂಪನಿಯು 25 ಸಾವಿರ ಯುನಿಟ್ ನಂತರ ಬುಕ್ಕಿಂಗ್ ಮಾಡಿರುವ ಗ್ರಾಹಕರಿಗೆ ಅನ್ವಯಿಸುವಂತೆ ದರ ಏರಿಕೆ ಮಾಡಿದೆ.

ಕೊಟ್ಟ ಮಾತಿನಂತೆ ನಿಗದಿತ ಅವಧಿಯಲ್ಲಿ 14 ಸಾವಿರ ಯುನಿಟ್ ಎಕ್ಸ್‌ಯುವಿ700 ವಿತರಿಸಿದ ಮಹೀಂದ್ರಾ

ಹೊಸ ದರಪಟ್ಟಿಯಲ್ಲಿ ಎಕ್ಸ್‌ಯುವಿ700 ಮಾದರಿಯು ಪೆಟ್ರೋಲ್ ಮಾದರಿಯಲ್ಲಿ ಗರಿಷ್ಠ ರೂ. 75 ಸಾವಿರ ಮತ್ತು ಡೀಸೆಲ್ ಮಾದರಿಗಳಲ್ಲಿ ಗರಿಷ್ಠ ರೂ. 81 ಸಾವಿರ ದರ ಹಚ್ಚಳ ಮಾಡಲಾಗಿದೆ. ಬೆಲೆ ಹೆಚ್ಚಳದ ನಂತರ ಹೊಸ ಎಕ್ಸ್‌ಯುವಿ700 ಮಾದರಿಯು ಇದೀಗ ಆರಂಭಿಕವಾಗಿ ರೂ. 12.95 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 23.80 ಲಕ್ಷ ಬೆಲೆ ಪಡೆದುಕೊಂಡಂತಾಗಿದೆ.

ಕೊಟ್ಟ ಮಾತಿನಂತೆ ನಿಗದಿತ ಅವಧಿಯಲ್ಲಿ 14 ಸಾವಿರ ಯುನಿಟ್ ಎಕ್ಸ್‌ಯುವಿ700 ವಿತರಿಸಿದ ಮಹೀಂದ್ರಾ

ಹೊಸ ಕಾರು ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಗ್ರಾಹಕರ ಬೇಡಿಕೆಯೆಂತೆ 5 ಸೀಟರ್ ಮತ್ತು 7 ಸೀಟರ್ ಮಾದರಿಗಳಲ್ಲಿ ಖರೀದಿಗೆ ಲಭ್ಯವಿದ್ದು, ಹೊಸ ಕಾರಿನಲ್ಲಿ ಕಂಪನಿಯು 2.0-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 2.2-ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಆಯ್ಕೆ ನೀಡಿದೆ.

ಕೊಟ್ಟ ಮಾತಿನಂತೆ ನಿಗದಿತ ಅವಧಿಯಲ್ಲಿ 14 ಸಾವಿರ ಯುನಿಟ್ ಎಕ್ಸ್‌ಯುವಿ700 ವಿತರಿಸಿದ ಮಹೀಂದ್ರಾ

2.0-ಲೀಟರ್ ಪೆಟ್ರೋಲ್ ಮಾದರಿಯು 198-ಬಿಎಚ್‌ಪಿ, 300-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ 2.2-ಲೀಟರ್ ಡೀಸೆಲ್ ಮಾದರಿಯು 183-ಬಿಎಚ್‌ಪಿ ಮತ್ತು 420-ಎನ್ಎಂ ಟಾರ್ಕ್(6-ಸ್ಪೀಡ್ ಎಂಟಿ),450-ಎನ್ಎಂ ಟಾರ್ಕ್(6-ಸ್ಪೀಡ್ ಎಟಿ) ಉತ್ಪಾದನಾ ವೈಶಿಷ್ಟ್ಯತೆ ಹೊಂದಿದೆ.

ಕೊಟ್ಟ ಮಾತಿನಂತೆ ನಿಗದಿತ ಅವಧಿಯಲ್ಲಿ 14 ಸಾವಿರ ಯುನಿಟ್ ಎಕ್ಸ್‌ಯುವಿ700 ವಿತರಿಸಿದ ಮಹೀಂದ್ರಾ

ಹೊಸ ಕಾರು ಗ್ರಾಹಕರ ಬೇಡಿಕೆಯೆಂತೆ ಎಂಎಕ್ಸ್, ಎಎಕ್ಸ್3, ಎಎಕ್ಸ್5, ಎಎಕ್ಸ್7 ಮತ್ತು ಎಎಕ್ಸ್7 ಲಗ್ಷುರಿ ಎನ್ನುವ ವಿವಿಧ ವೆರಿಯೆಂಟ್‌ಗಳೊಂದಿಗೆ ಆಕರ್ಷಕ ಫೀಚರ್ಸ್, ಬಲಿಷ್ಠ ಎಂಜಿನ್ ಆಯ್ಕೆ ಹೊಂದಿದ್ದು, ಕಂಪನಿಯೇ ಜೋಡಣೆ ಮಾಡುವ 7 ಸೀಟರ್ ಮಾದರಿಗಳನ್ನು ಹೊರತುಪಡಿಸಿ 5 ಸೀಟರ್ ಹೊಂದಿರುವ ಮಾದರಿಗಳಲ್ಲಿ 7 ಸೀಟರ್ ಬಯಸುವ ಗ್ರಾಹಕರು ಹೆಚ್ಚುವರಿ ರೂ. 70 ಸಾವಿರ ಪಾವತಿ ಮಾಡಬೇಕಾಗುತ್ತದೆ.

ಕೊಟ್ಟ ಮಾತಿನಂತೆ ನಿಗದಿತ ಅವಧಿಯಲ್ಲಿ 14 ಸಾವಿರ ಯುನಿಟ್ ಎಕ್ಸ್‌ಯುವಿ700 ವಿತರಿಸಿದ ಮಹೀಂದ್ರಾ

ಹೊಸ ಕಾರಿನಲ್ಲಿ ಫ್ರಂಟ್ ಫಾಸಿಯಾದೊಂದಿಗೆ ಸಂಯೋಜನೆಗೊಂಡಿರುವ ಎಲ್ಇಡಿ ಹೆಡ್‌ಲ್ಯಾಂಪ್ಸ್, ಸಿ ಆಕಾರದಲ್ಲಿರುವ ಎಲ್ಇಡಿ ಡಿಆರ್‌ಎಲ್ಎಸ್, ಸಿಲ್ವರ್ ಕೋಟಿಂಗ್ ಹೊಂದಿರುವ ಫ್ಲಕ್ಸ್ ಸ್ಕೀಡ್ ಪ್ಲೇಟ್, 18-ಇಂಚಿನ ಡ್ಯುಯಲ್ ಟೋನ್ ಮಲ್ಟಿ ಸ್ಪೋಕ್ ಅಲಾಯ್ ವ್ಹೀಲ್ ಪಡೆದುಕೊಂಡಿದೆ.

ಕೊಟ್ಟ ಮಾತಿನಂತೆ ನಿಗದಿತ ಅವಧಿಯಲ್ಲಿ 14 ಸಾವಿರ ಯುನಿಟ್ ಎಕ್ಸ್‌ಯುವಿ700 ವಿತರಿಸಿದ ಮಹೀಂದ್ರಾ

ಎಕ್ಸ್‌ಯುವಿ700 ಮಾದರಿಯ ಸೈಡ್ ಪ್ರೋಫೈಲ್ ಮತ್ತು ಹಿಂಬದಿಯ ವಿನ್ಯಾಸವು ಕೂಡಾ ಸಾಕಷ್ಟು ಹೊಸತನದಿಂದ ಕೂಡಿದ್ದು, ಹಿಂಬದಿಯ ಫೆಂಡರ್‌ನೊಂದಿಗೆ ಹರಡಿಕೊಂಡಿರುವ ವಿಭಜಿತ ಟೈಲ್‌ಲ್ಯಾಂಪ್, ವಿನೂತನ ವಿನ್ಯಾಸದ ಬಂಪರ್, ಫ್ಲಕ್ಸ್ ಸ್ಕೀಡ್ ಪ್ಲೇಟ್, ರೂಫ್ ರೈಲ್ಸ್, ಶಾರ್ಕ್ ಫಿನ್ ಆಂಟೆನಾ, ರೂಫ್ ಸ್ಪಾಯ್ಲರ್ ಪಡೆದುಕೊಂಡಿದೆ.

ಕೊಟ್ಟ ಮಾತಿನಂತೆ ನಿಗದಿತ ಅವಧಿಯಲ್ಲಿ 14 ಸಾವಿರ ಯುನಿಟ್ ಎಕ್ಸ್‌ಯುವಿ700 ವಿತರಿಸಿದ ಮಹೀಂದ್ರಾ

ಹಾಗೆಯೇ ಹೊಸ ಕಾರಿನಲ್ಲಿ 10.25 ಇಂಚಿನ ಡಿಜಿಟಲ್ ಮತ್ತು ಇನ್ಪೋಟೈನ್‌ಮೆಂಟ್ ಟಚ್‌ಸ್ಕ್ರೀನ್ ಡಿಸ್‌ಪ್ಲೇ, ಆಂಡ್ರಾಯಿಡ್ ಆಟೋ ಮತ್ತು ಆಟೋ ಕಾರ್‌ಪ್ಲೇ, ಅಮೆಜಾನ್ ಅಲೆಕ್ಸಾ, 60 ತಾಂತ್ರಿಕ ಸೌಲಭ್ಯಗಳನ್ನು ನಿಯಂತ್ರಿಸಬಹುದಾದ ಕಾರ್ ಕನೆಕ್ಟ್ ಟೆಕ್ನಾಲಜಿ, ವಾಯ್ಸ್ ಅಸಿಸ್ಟೆನ್ಸ್, ಆ್ಯಂಬಿಯೆಂಟ್ ಲೈಟಿಂಗ್ಸ್, ಡ್ಯುಯಲ್ ಜೋನ್ ಕ್ಲೈಮೆಟ್ ಕಂಟ್ರೋಲ್, 2 ಮತ್ತು 3ನೇ ಸಾಲಿನಲ್ಲೂ ಎಸಿ ವೆಂಟ್ಸ್, ಪನೋರಮಿಕ್ ಸನ್‌ರೂಫ್ ಮತ್ತು ಏರ್ ಪ್ಯೂರಿಫ್ಲೈರ್ ಸೌಲಭ್ಯಗಳಿವೆ.

ಕೊಟ್ಟ ಮಾತಿನಂತೆ ನಿಗದಿತ ಅವಧಿಯಲ್ಲಿ 14 ಸಾವಿರ ಯುನಿಟ್ ಎಕ್ಸ್‌ಯುವಿ700 ವಿತರಿಸಿದ ಮಹೀಂದ್ರಾ

ಅಡ್ವಾನ್ಸ್ ಡ್ರೈವರ್ ಅಸಿಸ್ಟೆಡ್ ಸಿಸ್ಟಂ ಸೌಲಭ್ಯವು ಹೊಸ ಕಾರಿನ ಪ್ರಮುಖ ಸುರಕ್ಷಾ ಸೌಲಭ್ಯವಾಗಿದ್ದು, ಇದರ ಜೊತೆಗೆ 7-ಏರ್‌ಬ್ಯಾಗ್, ಎಬಿಎಸ್ ಜೊತೆಗೆ ಇಬಿಡಿ, ಎಲೆಕ್ಟ್ರಾನಿಕ್ ಲಾಕಿಂಗ್, ಟ್ರಾಕ್ಷನ್ ಕಂಟ್ರೋಲ್, ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಆಟೋ ಹೆಡ್‌ಲ್ಯಾಂಪ್ ಬೂಸ್ಟರ್, ವ್ಯಯಕ್ತಿಕರಣಗೊಳಿಸಿದ ಸೇಫ್ಟಿ ಅಲರ್ಟ್, ಡ್ರೈವರ್ ಡ್ರಾಸಿನೆಸ್ ಅಲರ್ಟ್, ಲೆನ್ ಕಿಪ್ ಅಸಿಸ್ಟ್ ಸೌಲಭ್ಯ ಹೊಂದಿದೆ.

Most Read Articles

Kannada
English summary
Mahindra xuv700 suv delivery marks 14 000 units
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X