ಎಕ್ಸ್‌ಯುವಿ700 ಎಸ್‌ಯುವಿ ಖರೀದಿಯಲ್ಲಿ ಡೀಸೆಲ್ ಮಾದರಿಗಳಿಗೆ ಭರ್ಜರಿ ಬೇಡಿಕೆ

ಹೊಸ ಮಹೀಂದ್ರಾ ಎಕ್ಸ್‌ಯುವಿ700 ಎಸ್‌ಯುವಿ ಕಾರು ಮಾದರಿಯು ಭಾರತದಲ್ಲಿ ಬಿಡುಗಡೆಯಾದ ನಂತರ ಇದುವರೆಗೆ ಬರೋಬ್ಬರಿ 1 ಲಕ್ಷಕ್ಕೂ ಹೆಚ್ಚು ಯುನಿಟ್‌ಗಳಿಗೆ ಬುಕ್ಕಿಂಗ್ ಪಡೆದುಕೊಂಡಿದ್ದು, ದಾಖಲೆಯಾದ ಬೇಡಿಕೆಯಲ್ಲಿ ಶೇ.65 ಕ್ಕಿಂತಲೂ ಹೆಚ್ಚು ಗ್ರಾಹಕರು ಡೀಸೆಲ್ ಮಾದರಿಗಳಿಗಾಗಿ ಬುಕ್ಕಿಂಗ್ ಸಲ್ಲಿಸಿದ್ದಾರೆ.

ಎಕ್ಸ್‌ಯುವಿ700 ಎಸ್‌ಯುವಿ ಖರೀದಿಯಲ್ಲಿ ಡೀಸೆಲ್ ಮಾದರಿಗಳಿಗೆ ಭರ್ಜರಿ ಬೇಡಿಕೆ

ಹೊಸ ಎಕ್ಸ್‌ಯುವಿ700 ಕಾರು ಮಾದರಿಯನ್ನು ಬಿಡುಗಡೆಗೊಳಿಸಿದ ಮೊದಲ ಎರಡು ದಿನಗಳಲ್ಲಿ 50 ಸಾವಿರ ಯನಿಟ್‌ಗಳಿಗೆ ಬುಕ್ಕಿಂಗ್ ಪಡೆದುಕೊಂಡಿದ್ದ ಮಹೀಂದ್ರಾ ಕಂಪನಿಯು ಇದುವರೆಗೆ ಒಟ್ಟು 1 ಲಕ್ಷ ಯುನಿಟ್‌ಗಳಿಗೆ ಬುಕ್ಕಿಂಗ್ ಸ್ವಿಕರಿಸಿದೆ. ಹೊಸ ಕಾರು ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಆಕರ್ಷಕ ಬೆಲೆಯೊಂದಿಗೆ ಗ್ರಾಹಕರನ್ನು ಸೆಳೆಯುತ್ತಿದ್ದು, ಕಂಪನಿಯು ಇದುವರೆಗೆ ಸುಮಾರು 15 ಸಾವಿರ ಯುನಿಟ್‌ಗಳನ್ನು ವಿತರಣೆ ಮಾಡಿದೆ.

ಎಕ್ಸ್‌ಯುವಿ700 ಎಸ್‌ಯುವಿ ಖರೀದಿಯಲ್ಲಿ ಡೀಸೆಲ್ ಮಾದರಿಗಳಿಗೆ ಭರ್ಜರಿ ಬೇಡಿಕೆ

ಎಕ್ಸ್‌ಯುವಿ700 ಮಾದರಿಯ ಡೀಸೆಲ್ ಮಾದರಿಗಳಿಗಾಗಿ ಇದುವರೆಗೆ ಸುಮಾರು 65 ಸಾವಿರ ಗ್ರಾಹಕರು ಡೀಸೆಲ್ ಮಾದರಿಗಾಗಿ ಬುಕ್ಕಿಂಗ್ ದಾಖಲಿಸಿದ್ದು, ಇನ್ನುಳಿದ 35 ಸಾವಿರ ಗ್ರಾಹಕರು ಪೆಟ್ರೋಲ್ ಮಾದರಿಗಾಗಿ ಬುಕ್ಕಿಂಗ್ ಸಲ್ಲಿಸಿದ್ದಾರೆ.

ಎಕ್ಸ್‌ಯುವಿ700 ಎಸ್‌ಯುವಿ ಖರೀದಿಯಲ್ಲಿ ಡೀಸೆಲ್ ಮಾದರಿಗಳಿಗೆ ಭರ್ಜರಿ ಬೇಡಿಕೆ

ಹೊಸ ಎಕ್ಸ್‌ಯುವಿ700 ಎಸ್‌ಯುವಿ ಮಾದರಿಯನ್ನು ಕಳೆದ ಅಗಸ್ಟ್ 15ರಂದು ಬಿಡುಗಡೆಗೊಳಿಸಿದ್ದ ಮಹೀಂದ್ರಾ ಕಂಪನಿಯು ಅಕ್ಟೋಬರ್‌ನಲ್ಲಿ ವಿತರಣೆ ಆರಂಭಿಸಿತ್ತು. ವಿತರಣೆ ಆರಂಭಿಸಿದ ಮೊದಲ ತಿಂಗಳಿನಲ್ಲಿ ಉತ್ತಮ ಸಂಖ್ಯೆಯಲ್ಲಿ ಮಾರಾಟ ಮಾಡಿದರೂ ನವೆಂಬರ್‌ ತಿಂಗಳಿನಲ್ಲಿ ಸೆಮಿಕಂಡಕ್ಟರ್ ಕೊರೆತೆಯೂ ಕಾರಿನ ಉತ್ಪಾದನೆಗೆ ತೀವ್ರ ಹೊಡೆತ ನೀಡಿತ್ತು.

ಎಕ್ಸ್‌ಯುವಿ700 ಎಸ್‌ಯುವಿ ಖರೀದಿಯಲ್ಲಿ ಡೀಸೆಲ್ ಮಾದರಿಗಳಿಗೆ ಭರ್ಜರಿ ಬೇಡಿಕೆ

ತದನಂತರ ಡಿಸೆಂಬರ್ ಮತ್ತು ಜನವರಿ ಆರಂಭದಲ್ಲಿ ಉತ್ಪಾದನೆ ಹೆಚ್ಚಳದೊಂದಿಗೆ ಕಂಪನಿಯು ಇದುವರೆಗೆ 15 ಸಾವಿರ ಯುನಿಟ್ ವಿತರಣೆ ಗುರಿಯನ್ನು ತಲುಪುದರ ಜೊತೆಗೆ ಬುಕ್ಕಿಂಗ್ ಪ್ರಮಾಣವು ಸಹ 1 ಲಕ್ಷ ದಾಟಿದೆ. ಬುಕ್ಕಿಂಗ್ ಪ್ರಮಾಣವು ಉತ್ಪಾದನೆಗಿಂತಲೂ ಹೆಚ್ಚಿರುವುದರಿಂದ ಹೊಸ ಕಾರಿನ ಉತ್ಪಾದನಾ ಸಾಮಾರ್ಥ್ಯದ ಆಧಾರದ ಮೇಲೆ ಹೊಸ ಕಾರಿನ ಕಾಯುವಿಕೆ ಅವಧಿಯನ್ನು ವಿವಿಧ ವೆರಿಯೆಂಟ್‌‌ಗಳಿಗೆ ಅನುಗುಣವಾಗಿ ಗರಿಷ್ಠ ಒಂದು ವರ್ಷದ ತನಕ ನಿಗದಿಪಡಿಸಲಾಗಿದೆ.

ಎಕ್ಸ್‌ಯುವಿ700 ಎಸ್‌ಯುವಿ ಖರೀದಿಯಲ್ಲಿ ಡೀಸೆಲ್ ಮಾದರಿಗಳಿಗೆ ಭರ್ಜರಿ ಬೇಡಿಕೆ

ಹೊಸ ಎಕ್ಸ್‌ಯುವಿ700 ಕಾರು ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಗ್ರಾಹಕರ ಬೇಡಿಕೆಯೆಂತೆ 5 ಸೀಟರ್ ಮತ್ತು 7 ಸೀಟರ್ ಮಾದರಿಗಳಲ್ಲಿ ಖರೀದಿಗೆ ಲಭ್ಯವಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 11.99 ಲಕ್ಷಕ್ಕೆ ಮತ್ತು ಹೆಚ್ಚಿನ ಮಟ್ಟದ ಫೀಚರ್ಸ್ ಹೊಂದಿರುವ ಟಾಪ್ ಎಂಡ್ ಮಾದರಿಯನ್ನು ರೂ. 22.89 ಲಕ್ಷ ಬೆಲೆ ಹೊಂದಿದೆ.

ಎಕ್ಸ್‌ಯುವಿ700 ಎಸ್‌ಯುವಿ ಖರೀದಿಯಲ್ಲಿ ಡೀಸೆಲ್ ಮಾದರಿಗಳಿಗೆ ಭರ್ಜರಿ ಬೇಡಿಕೆ

ಮೊದಲ 25 ಸಾವಿರ ಯುನಿಟ್‌ಗೆ ಬುಕ್ಕಿಂಗ್ ಮಾಡಿರುವ ಗ್ರಾಹಕರಿಗೆ ಹಳೆಯ ಬೆಲೆಯಲ್ಲಿಯೇ ವಿತರಣೆ ಮಾಡುವುದಾಗಿ ಹೇಳಿಕೊಂಡಿರುವ ಮಹೀಂದ್ರಾ ಕಂಪನಿಯು 25 ಸಾವಿರ ಯುನಿಟ್ ನಂತರ ಬುಕ್ಕಿಂಗ್ ಮಾಡಿರುವ ಗ್ರಾಹಕರಿಗೆ ಅನ್ವಯಿಸುವಂತೆ ದರ ಏರಿಕೆ ಮಾಡಿದೆ.

ಎಕ್ಸ್‌ಯುವಿ700 ಎಸ್‌ಯುವಿ ಖರೀದಿಯಲ್ಲಿ ಡೀಸೆಲ್ ಮಾದರಿಗಳಿಗೆ ಭರ್ಜರಿ ಬೇಡಿಕೆ

ಹೊಸ ದರಪಟ್ಟಿಯಲ್ಲಿ ಎಕ್ಸ್‌ಯುವಿ700 ಮಾದರಿಯು ಪೆಟ್ರೋಲ್ ಮಾದರಿಯಲ್ಲಿ ಗರಿಷ್ಠ ರೂ. 75 ಸಾವಿರ ಮತ್ತು ಡೀಸೆಲ್ ಮಾದರಿಗಳಲ್ಲಿ ಗರಿಷ್ಠ ರೂ. 81 ಸಾವಿರ ದರ ಹಚ್ಚಳ ಮಾಡಲಾಗಿದೆ. ಬೆಲೆ ಹೆಚ್ಚಳದ ನಂತರ ಹೊಸ ಎಕ್ಸ್‌ಯುವಿ700 ಮಾದರಿಯು ಇದೀಗ ಆರಂಭಿಕವಾಗಿ ರೂ. 12.95 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 23.80 ಲಕ್ಷ ಬೆಲೆ ಪಡೆದುಕೊಂಡಂತಾಗಿದೆ.

ಎಕ್ಸ್‌ಯುವಿ700 ಎಸ್‌ಯುವಿ ಖರೀದಿಯಲ್ಲಿ ಡೀಸೆಲ್ ಮಾದರಿಗಳಿಗೆ ಭರ್ಜರಿ ಬೇಡಿಕೆ

ಹೊಸ ಕಾರು ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಗ್ರಾಹಕರ ಬೇಡಿಕೆಯೆಂತೆ 5 ಸೀಟರ್ ಮತ್ತು 7 ಸೀಟರ್ ಮಾದರಿಗಳಲ್ಲಿ ಖರೀದಿಗೆ ಲಭ್ಯವಿದ್ದು, ಹೊಸ ಕಾರಿನಲ್ಲಿ ಕಂಪನಿಯು 2.0-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 2.2-ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಆಯ್ಕೆ ನೀಡಿದೆ.

ಎಕ್ಸ್‌ಯುವಿ700 ಎಸ್‌ಯುವಿ ಖರೀದಿಯಲ್ಲಿ ಡೀಸೆಲ್ ಮಾದರಿಗಳಿಗೆ ಭರ್ಜರಿ ಬೇಡಿಕೆ

2.0-ಲೀಟರ್ ಪೆಟ್ರೋಲ್ ಮಾದರಿಯು 198-ಬಿಎಚ್‌ಪಿ, 300-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ 2.2-ಲೀಟರ್ ಡೀಸೆಲ್ ಮಾದರಿಯು 183-ಬಿಎಚ್‌ಪಿ ಮತ್ತು 420-ಎನ್ಎಂ ಟಾರ್ಕ್(6-ಸ್ಪೀಡ್ ಎಂಟಿ),450-ಎನ್ಎಂ ಟಾರ್ಕ್(6-ಸ್ಪೀಡ್ ಎಟಿ) ಉತ್ಪಾದನಾ ವೈಶಿಷ್ಟ್ಯತೆ ಹೊಂದಿದೆ.

ಎಕ್ಸ್‌ಯುವಿ700 ಎಸ್‌ಯುವಿ ಖರೀದಿಯಲ್ಲಿ ಡೀಸೆಲ್ ಮಾದರಿಗಳಿಗೆ ಭರ್ಜರಿ ಬೇಡಿಕೆ

ಹೊಸ ಕಾರು ಗ್ರಾಹಕರ ಬೇಡಿಕೆಯೆಂತೆ ಎಂಎಕ್ಸ್, ಎಎಕ್ಸ್3, ಎಎಕ್ಸ್5, ಎಎಕ್ಸ್7 ಮತ್ತು ಎಎಕ್ಸ್7 ಲಗ್ಷುರಿ ಎನ್ನುವ ವಿವಿಧ ವೆರಿಯೆಂಟ್‌ಗಳೊಂದಿಗೆ ಆಕರ್ಷಕ ಫೀಚರ್ಸ್, ಬಲಿಷ್ಠ ಎಂಜಿನ್ ಆಯ್ಕೆ ಹೊಂದಿದ್ದು, ಕಂಪನಿಯೇ ಜೋಡಣೆ ಮಾಡುವ 7 ಸೀಟರ್ ಮಾದರಿಗಳನ್ನು ಹೊರತುಪಡಿಸಿ 5 ಸೀಟರ್ ಹೊಂದಿರುವ ಮಾದರಿಗಳಲ್ಲಿ 7 ಸೀಟರ್ ಬಯಸುವ ಗ್ರಾಹಕರು ಹೆಚ್ಚುವರಿ ರೂ. 70 ಸಾವಿರ ಪಾವತಿ ಮಾಡಬೇಕಾಗುತ್ತದೆ.

ಎಕ್ಸ್‌ಯುವಿ700 ಎಸ್‌ಯುವಿ ಖರೀದಿಯಲ್ಲಿ ಡೀಸೆಲ್ ಮಾದರಿಗಳಿಗೆ ಭರ್ಜರಿ ಬೇಡಿಕೆ

ಹೊಸ ಕಾರಿನಲ್ಲಿ ಫ್ರಂಟ್ ಫಾಸಿಯಾದೊಂದಿಗೆ ಸಂಯೋಜನೆಗೊಂಡಿರುವ ಎಲ್ಇಡಿ ಹೆಡ್‌ಲ್ಯಾಂಪ್ಸ್, ಸಿ ಆಕಾರದಲ್ಲಿರುವ ಎಲ್ಇಡಿ ಡಿಆರ್‌ಎಲ್ಎಸ್, ಸಿಲ್ವರ್ ಕೋಟಿಂಗ್ ಹೊಂದಿರುವ ಫ್ಲಕ್ಸ್ ಸ್ಕೀಡ್ ಪ್ಲೇಟ್, 18-ಇಂಚಿನ ಡ್ಯುಯಲ್ ಟೋನ್ ಮಲ್ಟಿ ಸ್ಪೋಕ್ ಅಲಾಯ್ ವ್ಹೀಲ್ ಪಡೆದುಕೊಂಡಿದೆ.

ಎಕ್ಸ್‌ಯುವಿ700 ಎಸ್‌ಯುವಿ ಖರೀದಿಯಲ್ಲಿ ಡೀಸೆಲ್ ಮಾದರಿಗಳಿಗೆ ಭರ್ಜರಿ ಬೇಡಿಕೆ

ಎಕ್ಸ್‌ಯುವಿ700 ಮಾದರಿಯ ಸೈಡ್ ಪ್ರೋಫೈಲ್ ಮತ್ತು ಹಿಂಬದಿಯ ವಿನ್ಯಾಸವು ಕೂಡಾ ಸಾಕಷ್ಟು ಹೊಸತನದಿಂದ ಕೂಡಿದ್ದು, ಹಿಂಬದಿಯ ಫೆಂಡರ್‌ನೊಂದಿಗೆ ಹರಡಿಕೊಂಡಿರುವ ವಿಭಜಿತ ಟೈಲ್‌ಲ್ಯಾಂಪ್, ವಿನೂತನ ವಿನ್ಯಾಸದ ಬಂಪರ್, ಫ್ಲಕ್ಸ್ ಸ್ಕೀಡ್ ಪ್ಲೇಟ್, ರೂಫ್ ರೈಲ್ಸ್, ಶಾರ್ಕ್ ಫಿನ್ ಆಂಟೆನಾ, ರೂಫ್ ಸ್ಪಾಯ್ಲರ್ ಪಡೆದುಕೊಂಡಿದೆ.

ಎಕ್ಸ್‌ಯುವಿ700 ಎಸ್‌ಯುವಿ ಖರೀದಿಯಲ್ಲಿ ಡೀಸೆಲ್ ಮಾದರಿಗಳಿಗೆ ಭರ್ಜರಿ ಬೇಡಿಕೆ

ಹಾಗೆಯೇ ಹೊಸ ಕಾರಿನಲ್ಲಿ 10.25 ಇಂಚಿನ ಡಿಜಿಟಲ್ ಮತ್ತು ಇನ್ಪೋಟೈನ್‌ಮೆಂಟ್ ಟಚ್‌ಸ್ಕ್ರೀನ್ ಡಿಸ್‌ಪ್ಲೇ, ಆಂಡ್ರಾಯಿಡ್ ಆಟೋ ಮತ್ತು ಆಟೋ ಕಾರ್‌ಪ್ಲೇ, ಅಮೆಜಾನ್ ಅಲೆಕ್ಸಾ, 60 ತಾಂತ್ರಿಕ ಸೌಲಭ್ಯಗಳನ್ನು ನಿಯಂತ್ರಿಸಬಹುದಾದ ಕಾರ್ ಕನೆಕ್ಟ್ ಟೆಕ್ನಾಲಜಿ, ವಾಯ್ಸ್ ಅಸಿಸ್ಟೆನ್ಸ್, ಆ್ಯಂಬಿಯೆಂಟ್ ಲೈಟಿಂಗ್ಸ್, ಡ್ಯುಯಲ್ ಜೋನ್ ಕ್ಲೈಮೆಟ್ ಕಂಟ್ರೋಲ್, 2 ಮತ್ತು 3ನೇ ಸಾಲಿನಲ್ಲೂ ಎಸಿ ವೆಂಟ್ಸ್, ಪನೋರಮಿಕ್ ಸನ್‌ರೂಫ್ ಮತ್ತು ಏರ್ ಪ್ಯೂರಿಫ್ಲೈರ್ ಸೌಲಭ್ಯಗಳಿವೆ.

ಎಕ್ಸ್‌ಯುವಿ700 ಎಸ್‌ಯುವಿ ಖರೀದಿಯಲ್ಲಿ ಡೀಸೆಲ್ ಮಾದರಿಗಳಿಗೆ ಭರ್ಜರಿ ಬೇಡಿಕೆ

ಅಡ್ವಾನ್ಸ್ ಡ್ರೈವರ್ ಅಸಿಸ್ಟೆಡ್ ಸಿಸ್ಟಂ ಸೌಲಭ್ಯವು ಹೊಸ ಕಾರಿನ ಪ್ರಮುಖ ಸುರಕ್ಷಾ ಸೌಲಭ್ಯವಾಗಿದ್ದು, ಇದರ ಜೊತೆಗೆ 7-ಏರ್‌ಬ್ಯಾಗ್, ಎಬಿಎಸ್ ಜೊತೆಗೆ ಇಬಿಡಿ, ಎಲೆಕ್ಟ್ರಾನಿಕ್ ಲಾಕಿಂಗ್, ಟ್ರಾಕ್ಷನ್ ಕಂಟ್ರೋಲ್, ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಆಟೋ ಹೆಡ್‌ಲ್ಯಾಂಪ್ ಬೂಸ್ಟರ್, ವ್ಯಯಕ್ತಿಕರಣಗೊಳಿಸಿದ ಸೇಫ್ಟಿ ಅಲರ್ಟ್, ಡ್ರೈವರ್ ಡ್ರಾಸಿನೆಸ್ ಅಲರ್ಟ್, ಲೆನ್ ಕಿಪ್ ಅಸಿಸ್ಟ್ ಸೌಲಭ್ಯ ಹೊಂದಿದೆ.

Most Read Articles

Kannada
English summary
Mahindra xuv700 suv diesel variants getting huge demand
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X