ಬಿಡುಗಡೆಯಾದ ಕೇವಲ ನಾಲ್ಕು ತಿಂಗಳಿನಲ್ಲಿ ಮಹೀಂದ್ರಾ ಎಕ್ಸ್‌ಯುವಿ ಬೆಲೆಯಲ್ಲಿ ಭಾರೀ ಹೆಚ್ಚಳ

ಮಹೀಂದ್ರಾ ಎಕ್ಸ್‌ಯುವಿ700(Mahindra XUV700) ಎಸ್‌ಯುವಿ ಮಾದರಿಯು ಭಾರತದಲ್ಲಿ ಬಿಡುಗಡೆಯ ನಂತರ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಹೊಸ ಕಾರು ಬಿಡುಗಡೆಯಾದ ಕೆಲವೇ ದಿನಗಳಿಗೆ ಮತ್ತಷ್ಟು ದುಬಾರಿ ಬೆಲೆ ಪಡೆದುಕೊಂಡಿದೆ.

ಬಿಡುಗಡೆಯಾದ ಕೇವಲ ನಾಲ್ಕು ತಿಂಗಳಿನಲ್ಲಿ ಮಹೀಂದ್ರಾ ಎಕ್ಸ್‌ಯುವಿ ಬೆಲೆಯಲ್ಲಿ ಭಾರೀ ಹೆಚ್ಚಳ

ಹೊಸ ಎಕ್ಸ್‌ಯುವಿ700 ಕಾರು ಮಾದರಿಯು ಕಳೆದ ಅಕ್ಟೋಬರ್‌ನಲ್ಲಿ ಬಿಡುಗಡೆಗೊಂಡ ಮೊದಲ ಎರಡು ದಿನಗಳಲ್ಲಿಯೇ ಬರೋಬ್ಬರಿ 50 ಸಾವಿರ ಯನಿಟ್‌ಗಳಿಗೆ ಬುಕ್ಕಿಂಗ್ ಮೂಲಕ ಇದುವರೆಗೆ 80 ಸಾವಿರಕ್ಕೂ ಹೆಚ್ಚು ಬುಕ್ಕಿಂಗ್ ಪಡೆದುಕೊಂಡಿದ್ದು, ಹೊಸ ಕಾರು ಉತ್ಪಾದನಾ ಸಾಮಾರ್ಥ್ಯದ ಆಧಾರದ ಮೇಲೆ ಹೊಸ ಕಾರಿನ ಕಾಯುವಿಕೆ ಅವಧಿಯು ವಿವಿಧ ವೆರಿಯೆಂಟ್‌‌ಗಳಿಗೆ ಅನುಗುಣವಾಗಿ ಗರಿಷ್ಠ ಒಂದು ವರ್ಷದ ತನಕ ನಿರ್ಧರಿಸಲಾಗಿದೆ.

ಬಿಡುಗಡೆಯಾದ ಕೇವಲ ನಾಲ್ಕು ತಿಂಗಳಿನಲ್ಲಿ ಮಹೀಂದ್ರಾ ಎಕ್ಸ್‌ಯುವಿ ಬೆಲೆಯಲ್ಲಿ ಭಾರೀ ಹೆಚ್ಚಳ

ಹೊಸ ಕಾರು ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಖರೀದಿಗೆ ಲಭ್ಯವಿದ್ದು, ಹೆಚ್ಚುತ್ತಿರುವ ಬಿಡಿಭಾಗಗಳ ವೆಚ್ಚ ನಿರ್ವಹಣೆಗಾಗಿ ಕಂಪನಿಯು ಹೊಸ ಕಾರಿನ ಬೆಲೆಯಲ್ಲಿ ಏರಿಕೆ ನಿರ್ಧರಿಸಿದೆ.

ಬಿಡುಗಡೆಯಾದ ಕೇವಲ ನಾಲ್ಕು ತಿಂಗಳಿನಲ್ಲಿ ಮಹೀಂದ್ರಾ ಎಕ್ಸ್‌ಯುವಿ ಬೆಲೆಯಲ್ಲಿ ಭಾರೀ ಹೆಚ್ಚಳ

ಮೊದಲ 50 ಸಾವಿರ ಯುನಿಟ್‌ಗೆ ಬುಕ್ಕಿಂಗ್ ಮಾಡಿರುವ ಗ್ರಾಹಕರಿಗೆ ಹಳೆಯ ಬೆಲೆಯಲ್ಲಿಯೇ ವಿತರಣೆ ಮಾಡುವುದಾಗಿ ಹೇಳಿಕೊಂಡಿರುವ ಮಹೀಂದ್ರಾ ಕಂಪನಿಯು 50 ಸಾವಿರ ಯುನಿಟ್ ನಂತರ ಬುಕ್ಕಿಂಗ್ ಮಾಡಿರುವ ಗ್ರಾಹಕರಿಗೆ ಅನ್ವಯಿಸುವಂತೆ ದರ ಏರಿಕೆ ಮಾಡಿದೆ.

ಬಿಡುಗಡೆಯಾದ ಕೇವಲ ನಾಲ್ಕು ತಿಂಗಳಿನಲ್ಲಿ ಮಹೀಂದ್ರಾ ಎಕ್ಸ್‌ಯುವಿ ಬೆಲೆಯಲ್ಲಿ ಭಾರೀ ಹೆಚ್ಚಳ

ಮಹೀಂದ್ರಾ ಕಂಪನಿಯ ಹೊಸ ದರಪಟ್ಟಿಯಲ್ಲಿ ಎಕ್ಸ್‌ಯುವಿ700 ಮಾದರಿಯು ಪೆಟ್ರೋಲ್ ಮಾದರಿಯಲ್ಲಿ ಗರಿಷ್ಠ ರೂ. 75 ಸಾವಿರ ಮತ್ತು ಡೀಸೆಲ್ ಮಾದರಿಗಳಲ್ಲಿ ಗರಿಷ್ಠ ರೂ. 81 ಸಾವಿರ ದರ ಹಚ್ಚಳ ಮಾಡಲಾಗಿದೆ. ಬೆಲೆ ಹೆಚ್ಚಳದ ನಂತರ ಹೊಸ ಎಕ್ಸ್‌ಯುವಿ700 ಮಾದರಿಯು ಇದೀಗ ಆರಂಭಿಕವಾಗಿ ರೂ. 12.95 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 23.80 ಲಕ್ಷ ಬೆಲೆ ಪಡೆದುಕೊಂಡಂತಾಗಿದೆ.

ಬಿಡುಗಡೆಯಾದ ಕೇವಲ ನಾಲ್ಕು ತಿಂಗಳಿನಲ್ಲಿ ಮಹೀಂದ್ರಾ ಎಕ್ಸ್‌ಯುವಿ ಬೆಲೆಯಲ್ಲಿ ಭಾರೀ ಹೆಚ್ಚಳ

ಹೊಸ ಕಾರು ಖರೀದಿಗೆ ಬುಕ್ಕಿಂಗ್ ಸಲ್ಲಿಸಿರುವ ಮೊದಲ 25 ಸಾವಿರ ಗ್ರಾಹಕರಿಗೆ 2022ರ ಮಧ್ಯಂತರದ ವೇಳೆಗೆ ವಿತರಣೆಯಾಗಲಿದ್ದು, 25 ಸಾವಿರ ಯುನಿಟ್ ನಂತರ ಬುಕ್ಕಿಂಗ್ ಸಲ್ಲಿಸಿರುವ ಗ್ರಾಹಕರಿಗೆ ಹೊಸ ಕಾರು 2022ರ ಜೂನ್‌ನಿಂದ ಡಿಸೆಂಬರ್ ತನಕ ಮತ್ತು 50 ಸಾವಿರ ಯುನಿಟ್ ಬುಕ್ಕಿಂಗ್ ಸಲ್ಲಿಕೆ ಮಾಡಿರುವ ಗ್ರಾಹಕರಿಗೆ 2023ರ ನಂತರ ಹೊಸ ಕಾರು ಖರೀದಿಗೆ ಲಭ್ಯವಿರಲಿದೆ.

ಬಿಡುಗಡೆಯಾದ ಕೇವಲ ನಾಲ್ಕು ತಿಂಗಳಿನಲ್ಲಿ ಮಹೀಂದ್ರಾ ಎಕ್ಸ್‌ಯುವಿ ಬೆಲೆಯಲ್ಲಿ ಭಾರೀ ಹೆಚ್ಚಳ

ಹೊಸ ಕಾರು ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಗ್ರಾಹಕರ ಬೇಡಿಕೆಯೆಂತೆ 5 ಸೀಟರ್ ಮತ್ತು 7 ಸೀಟರ್ ಮಾದರಿಗಳಲ್ಲಿ ಖರೀದಿಗೆ ಲಭ್ಯವಿದ್ದು, ಹೊಸ ಕಾರಿನಲ್ಲಿ ಕಂಪನಿಯು 2.0-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 2.2-ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಆಯ್ಕೆ ನೀಡಿದೆ.

ಬಿಡುಗಡೆಯಾದ ಕೇವಲ ನಾಲ್ಕು ತಿಂಗಳಿನಲ್ಲಿ ಮಹೀಂದ್ರಾ ಎಕ್ಸ್‌ಯುವಿ ಬೆಲೆಯಲ್ಲಿ ಭಾರೀ ಹೆಚ್ಚಳ

2.0-ಲೀಟರ್ ಪೆಟ್ರೋಲ್ ಮಾದರಿಯು 198-ಬಿಎಚ್‌ಪಿ, 300-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ 2.2-ಲೀಟರ್ ಡೀಸೆಲ್ ಮಾದರಿಯು 183-ಬಿಎಚ್‌ಪಿ ಮತ್ತು 420-ಎನ್ಎಂ ಟಾರ್ಕ್(6-ಸ್ಪೀಡ್ ಎಂಟಿ),450-ಎನ್ಎಂ ಟಾರ್ಕ್(6-ಸ್ಪೀಡ್ ಎಟಿ) ಉತ್ಪಾದನಾ ವೈಶಿಷ್ಟ್ಯತೆ ಹೊಂದಿದೆ.

ಬಿಡುಗಡೆಯಾದ ಕೇವಲ ನಾಲ್ಕು ತಿಂಗಳಿನಲ್ಲಿ ಮಹೀಂದ್ರಾ ಎಕ್ಸ್‌ಯುವಿ ಬೆಲೆಯಲ್ಲಿ ಭಾರೀ ಹೆಚ್ಚಳ

ಹೊಸ ಕಾರು ಗ್ರಾಹಕರ ಬೇಡಿಕೆಯೆಂತೆ ಎಂಎಕ್ಸ್, ಎಎಕ್ಸ್3, ಎಎಕ್ಸ್5, ಎಎಕ್ಸ್7 ಮತ್ತು ಎಎಕ್ಸ್7 ಲಗ್ಷುರಿ ಎನ್ನುವ ವಿವಿಧ ವೆರಿಯೆಂಟ್‌ಗಳೊಂದಿಗೆ ಆಕರ್ಷಕ ಫೀಚರ್ಸ್, ಬಲಿಷ್ಠ ಎಂಜಿನ್ ಆಯ್ಕೆ ಹೊಂದಿದ್ದು, ಕಂಪನಿಯೇ ಜೋಡಣೆ ಮಾಡುವ 7 ಸೀಟರ್ ಮಾದರಿಗಳನ್ನು ಹೊರತುಪಡಿಸಿ 5 ಸೀಟರ್ ಹೊಂದಿರುವ ಮಾದರಿಗಳಲ್ಲಿ 7 ಸೀಟರ್ ಬಯಸುವ ಗ್ರಾಹಕರು ಹೆಚ್ಚುವರಿ ರೂ. 70 ಸಾವಿರ ಪಾವತಿ ಮಾಡಬೇಕಾಗುತ್ತದೆ.

ಬಿಡುಗಡೆಯಾದ ಕೇವಲ ನಾಲ್ಕು ತಿಂಗಳಿನಲ್ಲಿ ಮಹೀಂದ್ರಾ ಎಕ್ಸ್‌ಯುವಿ ಬೆಲೆಯಲ್ಲಿ ಭಾರೀ ಹೆಚ್ಚಳ

ಹೊಸ ಕಾರಿನಲ್ಲಿ ಫ್ರಂಟ್ ಫಾಸಿಯಾದೊಂದಿಗೆ ಸಂಯೋಜನೆಗೊಂಡಿರುವ ಎಲ್ಇಡಿ ಹೆಡ್‌ಲ್ಯಾಂಪ್ಸ್, ಸಿ ಆಕಾರದಲ್ಲಿರುವ ಎಲ್ಇಡಿ ಡಿಆರ್‌ಎಲ್ಎಸ್, ಸಿಲ್ವರ್ ಕೋಟಿಂಗ್ ಹೊಂದಿರುವ ಫ್ಲಕ್ಸ್ ಸ್ಕೀಡ್ ಪ್ಲೇಟ್, 18-ಇಂಚಿನ ಡ್ಯುಯಲ್ ಟೋನ್ ಮಲ್ಟಿ ಸ್ಪೋಕ್ ಅಲಾಯ್ ವ್ಹೀಲ್ ಪಡೆದುಕೊಂಡಿದೆ.

ಬಿಡುಗಡೆಯಾದ ಕೇವಲ ನಾಲ್ಕು ತಿಂಗಳಿನಲ್ಲಿ ಮಹೀಂದ್ರಾ ಎಕ್ಸ್‌ಯುವಿ ಬೆಲೆಯಲ್ಲಿ ಭಾರೀ ಹೆಚ್ಚಳ

ಎಕ್ಸ್‌ಯುವಿ700 ಮಾದರಿಯ ಸೈಡ್ ಪ್ರೋಫೈಲ್ ಮತ್ತು ಹಿಂಬದಿಯ ವಿನ್ಯಾಸವು ಕೂಡಾ ಸಾಕಷ್ಟು ಹೊಸತನದಿಂದ ಕೂಡಿದ್ದು, ಹಿಂಬದಿಯ ಫೆಂಡರ್‌ನೊಂದಿಗೆ ಹರಡಿಕೊಂಡಿರುವ ವಿಭಜಿತ ಟೈಲ್‌ಲ್ಯಾಂಪ್, ವಿನೂತನ ವಿನ್ಯಾಸದ ಬಂಪರ್, ಫ್ಲಕ್ಸ್ ಸ್ಕೀಡ್ ಪ್ಲೇಟ್, ರೂಫ್ ರೈಲ್ಸ್, ಶಾರ್ಕ್ ಫಿನ್ ಆಂಟೆನಾ, ರೂಫ್ ಸ್ಪಾಯ್ಲರ್ ಪಡೆದುಕೊಂಡಿದೆ.

ಬಿಡುಗಡೆಯಾದ ಕೇವಲ ನಾಲ್ಕು ತಿಂಗಳಿನಲ್ಲಿ ಮಹೀಂದ್ರಾ ಎಕ್ಸ್‌ಯುವಿ ಬೆಲೆಯಲ್ಲಿ ಭಾರೀ ಹೆಚ್ಚಳ

ಹಾಗೆಯೇ ಹೊಸ ಕಾರಿನಲ್ಲಿ 10.25 ಇಂಚಿನ ಡಿಜಿಟಲ್ ಮತ್ತು ಇನ್ಪೋಟೈನ್‌ಮೆಂಟ್ ಟಚ್‌ಸ್ಕ್ರೀನ್ ಡಿಸ್‌ಪ್ಲೇ, ಆಂಡ್ರಾಯಿಡ್ ಆಟೋ ಮತ್ತು ಆಟೋ ಕಾರ್‌ಪ್ಲೇ, ಅಮೆಜಾನ್ ಅಲೆಕ್ಸಾ, 60 ತಾಂತ್ರಿಕ ಸೌಲಭ್ಯಗಳನ್ನು ನಿಯಂತ್ರಿಸಬಹುದಾದ ಕಾರ್ ಕನೆಕ್ಟ್ ಟೆಕ್ನಾಲಜಿ, ವಾಯ್ಸ್ ಅಸಿಸ್ಟೆನ್ಸ್, ಆ್ಯಂಬಿಯೆಂಟ್ ಲೈಟಿಂಗ್ಸ್, ಡ್ಯುಯಲ್ ಜೋನ್ ಕ್ಲೈಮೆಟ್ ಕಂಟ್ರೋಲ್, 2 ಮತ್ತು 3ನೇ ಸಾಲಿನಲ್ಲೂ ಎಸಿ ವೆಂಟ್ಸ್, ಪನೋರಮಿಕ್ ಸನ್‌ರೂಫ್ ಮತ್ತು ಏರ್ ಪ್ಯೂರಿಫ್ಲೈರ್ ಸೌಲಭ್ಯಗಳಿವೆ.

ಬಿಡುಗಡೆಯಾದ ಕೇವಲ ನಾಲ್ಕು ತಿಂಗಳಿನಲ್ಲಿ ಮಹೀಂದ್ರಾ ಎಕ್ಸ್‌ಯುವಿ ಬೆಲೆಯಲ್ಲಿ ಭಾರೀ ಹೆಚ್ಚಳ

ಅಡ್ವಾನ್ಸ್ ಡ್ರೈವರ್ ಅಸಿಸ್ಟೆಡ್ ಸಿಸ್ಟಂ ಸೌಲಭ್ಯವು ಹೊಸ ಕಾರಿನ ಪ್ರಮುಖ ಸುರಕ್ಷಾ ಸೌಲಭ್ಯವಾಗಿದ್ದು, ಇದರ ಜೊತೆಗೆ 7-ಏರ್‌ಬ್ಯಾಗ್, ಎಬಿಎಸ್ ಜೊತೆಗೆ ಇಬಿಡಿ, ಎಲೆಕ್ಟ್ರಾನಿಕ್ ಲಾಕಿಂಗ್, ಟ್ರಾಕ್ಷನ್ ಕಂಟ್ರೋಲ್, ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಆಟೋ ಹೆಡ್‌ಲ್ಯಾಂಪ್ ಬೂಸ್ಟರ್, ವ್ಯಯಕ್ತಿಕರಣಗೊಳಿಸಿದ ಸೇಫ್ಟಿ ಅಲರ್ಟ್, ಡ್ರೈವರ್ ಡ್ರಾಸಿನೆಸ್ ಅಲರ್ಟ್, ಲೆನ್ ಕಿಪ್ ಅಸಿಸ್ಟ್ ಸೌಲಭ್ಯ ಹೊಂದಿದೆ.

Article Published On: Wednesday, January 12, 2022, 11:32 [IST]
English summary
Mahindra xuv700 suv price hiked upto rs 81000
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+