ತಾಂತ್ರಿಕ ಸಮಸ್ಯೆ: ಎಕ್ಸ್‌ಯುವಿ700 ಎಸ್‌ಯುವಿ ಮಾದರಿಯನ್ನು ಮತ್ತೊಮ್ಮೆ ರೀಕಾಲ್ ಮಾಡಿದ ಮಹೀಂದ್ರಾ

ಎಸ್‌ಯುವಿ ವಿಭಾಗದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿರುವ ಮಹೀಂದ್ರಾ ಎಕ್ಸ್‌ಯುವಿ700 ಮಾದರಿಯು ಭಾರೀ ಪ್ರಮಾಣದ ಮಾರಾಟದ ನಡುವೆಯೂ ಕೆಲ ತಿಂಗಳಿನಿಂದ ಪ್ರಮುಖ ವೆರಿಯೆಂಟ್‌ಗಳಲ್ಲಿ ಕಂಡುಬರುತ್ತಿರುವ ತಾಂತ್ರಿಕ ಸಮಸ್ಯೆಗಳು ಗ್ರಾಹಕರಲ್ಲಿ ಅಸಮಾಧಾನ ಉಂಟುಮಾಡುತ್ತಿದೆ.

ತಾಂತ್ರಿಕ ಸಮಸ್ಯೆ: ಎಕ್ಸ್‌ಯುವಿ700 ಎಸ್‌ಯುವಿ ಮಾದರಿಯನ್ನು ಮತ್ತೊಮ್ಮೆ ರೀಕಾಲ್ ಮಾಡಿದ ಮಹೀಂದ್ರಾ

ಹೊಸ ಎಕ್ಸ್‌ಯುವಿ700 ಕಾರು ಮಾದರಿಗೆ ಭಾರೀ ಬೇಡಿಕೆಯ ನಡುವೆಯೂ ಕೆಲವು ಗ್ರಾಹಕರಿಂದ ಎಕ್ಸ್‌ಯುವಿ700 ತಾಂತ್ರಿಕ ಸೌಲಭ್ಯಗಳ ಕುರಿತಾಗಿ ದೂರುಗಳು ಹೆಚ್ಚಳವಾಗುತ್ತಿದ್ದು, ಗ್ರಾಹಕರಿಂದ ದೂರ ದಾಖಲಾಗುತ್ತಿರುವ ಹಿನ್ನಲೆಯಲ್ಲಿ ಮಹೀಂದ್ರಾ ಕಂಪನಿಯು ತಾಂತ್ರಿಕ ದೋಷದಿಂದ ಕೂಡಿರುವ ಪ್ರಮುಖ ವೆರಿಯೆಂಟ್‌ಗಳನ್ನು ಹಿಂಪಡೆಯುತ್ತಿದೆ.

ತಾಂತ್ರಿಕ ಸಮಸ್ಯೆ: ಎಕ್ಸ್‌ಯುವಿ700 ಎಸ್‌ಯುವಿ ಮಾದರಿಯನ್ನು ಮತ್ತೊಮ್ಮೆ ರೀಕಾಲ್ ಮಾಡಿದ ಮಹೀಂದ್ರಾ

ಕಳೆದ ತಿಂಗಳು ಕಾರಿನ ಆಕ್ಸಲ್‌ಗೆ ಸಂಪರ್ಕಿಸುವ ಪ್ರೊಪೆಲ್ಲರ್ ಶಾಫ್ಟ್‌‌‌ನಲ್ಲಿ ತೊಂದರೆಯಾಗುತ್ತಿರುವ ಹಿನ್ನಲೆ 4x4 ಡ್ರೈವ್ ಸಿಸ್ಟಂ ಸೌಲಭ್ಯ ಹೊಂದಿರುವ ಡೀಸೆಲ್ ಆಟೋಮ್ಯಾಟಿಕ್ ವೆರಿಯೆಂಟ್‌ಗಳು ಹಿಂಪಡೆದಿದ್ದ ಮಹೀಂದ್ರಾ ಕಂಪನಿಯು ಇದೀಗ 4x4 ಡ್ರೈವ್ ಸಿಸ್ಟಂ ಹೊಂದಿರುವ ಎಲ್ಲಾ ವೆರಿಯೆಂಟ್‌ಗಳನ್ನು ಹಿಂಪಡೆದಿದೆ.

ತಾಂತ್ರಿಕ ಸಮಸ್ಯೆ: ಎಕ್ಸ್‌ಯುವಿ700 ಎಸ್‌ಯುವಿ ಮಾದರಿಯನ್ನು ಮತ್ತೊಮ್ಮೆ ರೀಕಾಲ್ ಮಾಡಿದ ಮಹೀಂದ್ರಾ

4x4 ಡ್ರೈವ್ ಸಿಸ್ಟಂ ಹೊಂದಿರುವ ಎಕ್ಸ್‌ಯುವಿ700 ಮಾದರಿಯ ಎಲ್ಲಾ ವೆರಿಯೆಂಟ್‌ಗಳಲ್ಲೂ ಹಿಂಬದಿಯ ಚಕ್ರದಲ್ಲಿರುವ ಶಾಕ್ ಅಬ್ಸಾರ್ವರ್‌ನಲ್ಲಿ ತೊಂದರೆ ಉಂಟಾಗುತ್ತಿದ್ದು, ಸದ್ಯ ಜೋಡಣೆ ಮಾಡಲಾಗಿರುವ ಎಂಟು ಸುತ್ತುಗಳನ್ನು ಹೊಂದಿರುವ ಶಾಕ್ ಅಬ್ಸಾರ್ವರ್ ಅನ್ನು ಒಂಬತ್ತು ಸುತ್ತು ಹೊಂದಿರು ಶಾಕ್ ಅಬ್ಸಾರ್ವರ್‌ಗೆ ಬದಲಾಯಿಸುವ ಸುಳಿವು ನೀಡಿದೆ.

ತಾಂತ್ರಿಕ ಸಮಸ್ಯೆ: ಎಕ್ಸ್‌ಯುವಿ700 ಎಸ್‌ಯುವಿ ಮಾದರಿಯನ್ನು ಮತ್ತೊಮ್ಮೆ ರೀಕಾಲ್ ಮಾಡಿದ ಮಹೀಂದ್ರಾ

ಆಫ್ ರೋಡ್ ಡ್ರೈವ್ ಸಂದರ್ಭದಲ್ಲಿ ರಿಯರ್ ಶಾಕ್ ಅಬ್ಸಾರ್ವರ್‌ನಲ್ಲಿ ಆಗುತ್ತಿರುವ ಸಮಸ್ಯೆ ಕುರಿತಂತೆ ಹಲವಾರು ಗ್ರಾಹಕರು ಕಂಪನಿಗೆ ದೂರು ನೀಡುತ್ತಿದ್ದು, ಈ ಹಿನ್ನಲೆಯಲ್ಲಿ ಕಂಪನಿಯು 4x4 ಡ್ರೈವ್‌ ಸಿಸ್ಟಂ ಹೊಂದಿರುವ ಎಲ್ಲಾ ವೆರಿಯೆಂಟ್‌ಗಳನ್ನು ಇದೀಗ ಒಂಬತ್ತು ಸುತ್ತುಗಳನ್ನು ಹೊಂದಿರುವ ಶಾಕ್ ಅಬ್ಸಾರ್ವರ್‌ಗೆ ಉಚಿತವಾಗಿ ಬದಲಾಯಿಸುವುದಾಗಿ ಹೇಳಿಕೊಂಡಿದೆ.

ತಾಂತ್ರಿಕ ಸಮಸ್ಯೆ: ಎಕ್ಸ್‌ಯುವಿ700 ಎಸ್‌ಯುವಿ ಮಾದರಿಯನ್ನು ಮತ್ತೊಮ್ಮೆ ರೀಕಾಲ್ ಮಾಡಿದ ಮಹೀಂದ್ರಾ

ಇದರ ಹೊರತಾಗಿ ಇನ್ನುಳಿದ ಸಾಮಾನ್ಯ ಮಾದರಿಗಳಲ್ಲಿ ಯಾವುದೇ ತಾಂತ್ರಿಕ ಸಮಸ್ಯೆಗಳಿಲ್ಲವೆಂದು ಸ್ಪಷ್ಟಪಡಿಸಲಾಗಿದ್ದು, ಗ್ರಾಹಕರ ದೂರಿನ್ವಯ ಕಂಪನಿಯುು ಸ್ವಯಂಪ್ರೇರಿತವಾಗಿ ಎಲ್ಲಾ ವೆರಿಯೆಂಟ್‌ಗಳನ್ನು ಪರೀಕ್ಷೆಗೆ ಒಳಪಡಿಸುತ್ತಿದೆ.

ತಾಂತ್ರಿಕ ಸಮಸ್ಯೆ: ಎಕ್ಸ್‌ಯುವಿ700 ಎಸ್‌ಯುವಿ ಮಾದರಿಯನ್ನು ಮತ್ತೊಮ್ಮೆ ರೀಕಾಲ್ ಮಾಡಿದ ಮಹೀಂದ್ರಾ

ಎಸ್‌ಯುವಿ ವಿಭಾಗದಲ್ಲಿ ಬೆಲೆ ವಿಚಾರವಾಗಿ ಹೊಸ ಸಂಚಲನಕ್ಕೆ ಕಾರಣವಾದ ಹೊಸ ಎಕ್ಸ್‌ಯುವಿ700 ಕಾರು ಮಾದರಿಯು ಬಿಡುಗಡೆಯಾದ ನಂತರ ಇದುವರೆಗೆ ಸುಮಾರು 1.50 ಲಕ್ಷಕ್ಕೂ ಅಧಿಕ ಯುನಿಟ್‌ಗಳಿಗೆ ಬುಕಿಂಗ್ ಸ್ವಿಕರಿಸಿದ್ದು, ಹೊಸ ಕಾರು ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಆಕರ್ಷಕ ಬೆಲೆಯೊಂದಿಗೆ ಗ್ರಾಹಕರನ್ನು ಸೆಳೆಯುತ್ತಿದೆ.

ತಾಂತ್ರಿಕ ಸಮಸ್ಯೆ: ಎಕ್ಸ್‌ಯುವಿ700 ಎಸ್‌ಯುವಿ ಮಾದರಿಯನ್ನು ಮತ್ತೊಮ್ಮೆ ರೀಕಾಲ್ ಮಾಡಿದ ಮಹೀಂದ್ರಾ

ಹೊಸ ಕಾರು ಗ್ರಾಹಕರ ಬೇಡಿಕೆಯೆಂತೆ 5 ಸೀಟರ್ ಮತ್ತು 7 ಸೀಟರ್ ಮಾದರಿಗಳಲ್ಲಿ ಖರೀದಿಗೆ ಲಭ್ಯವಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 13.18 ಲಕ್ಷಕ್ಕೆ ಮತ್ತು ಹೆಚ್ಚಿನ ಮಟ್ಟದ ಫೀಚರ್ಸ್ ಹೊಂದಿರುವ ಟಾಪ್ ಎಂಡ್ ಮಾದರಿಯನ್ನು ರೂ. 24.58 ಲಕ್ಷ ಬೆಲೆ ಹೊಂದಿದೆ.

ತಾಂತ್ರಿಕ ಸಮಸ್ಯೆ: ಎಕ್ಸ್‌ಯುವಿ700 ಎಸ್‌ಯುವಿ ಮಾದರಿಯನ್ನು ಮತ್ತೊಮ್ಮೆ ರೀಕಾಲ್ ಮಾಡಿದ ಮಹೀಂದ್ರಾ

ಹೊಸ ಕಾರಿನಲ್ಲಿ 7 ಸೀಟರ್ ಮಾದರಿಯು 2+3+2 ಮಾದರಿಯ ಆಸನ ಸೌಲಭ್ಯ ಹೊಂದಿದ್ದರೆ 5 ಸೀಟರ್ ಮಾದರಿಯು 2+3 ಆಸನ ಸೌಲಭ್ಯ ಹೊಂದಿದ್ದು, ಹೊಸ ಕಾರಿನಲ್ಲಿ ಕಂಪನಿಯು 2.0-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 2.2-ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಆಯ್ಕೆ ನೀಡಿದೆ.

ತಾಂತ್ರಿಕ ಸಮಸ್ಯೆ: ಎಕ್ಸ್‌ಯುವಿ700 ಎಸ್‌ಯುವಿ ಮಾದರಿಯನ್ನು ಮತ್ತೊಮ್ಮೆ ರೀಕಾಲ್ ಮಾಡಿದ ಮಹೀಂದ್ರಾ

ಹೊಸ ಕಾರು ಎಂಎಕ್ಸ್, ಎಎಕ್ಸ್3, ಎಎಕ್ಸ್5, ಎಎಕ್ಸ್7 ಮತ್ತು ಎಎಕ್ಸ್7 ಲಗ್ಷುರಿ ಎನ್ನುವ ವಿವಿಧ ವೆರಿಯೆಂಟ್‌ಗಳೊಂದಿಗೆ ಆಕರ್ಷಕ ಫೀಚರ್ಸ್, ಬಲಿಷ್ಠ ಎಂಜಿನ್ ಆಯ್ಕೆ ಹೊಂದಿದ್ದು, ಕಂಪನಿಯೇ ಜೋಡಣೆ ಮಾಡುವ 7 ಸೀಟರ್ ಮಾದರಿಗಳನ್ನು ಹೊರತುಪಡಿಸಿ 5 ಸೀಟರ್ ಹೊಂದಿರುವ ಮಾದರಿಗಳಲ್ಲಿ 7 ಸೀಟರ್ ಬಯಸುವ ಗ್ರಾಹಕರು ಹೆಚ್ಚುವರಿ ರೂ. 70 ಸಾವಿರ ಪಾವತಿ ಮಾಡಬೇಕಾಗುತ್ತದೆ.

ತಾಂತ್ರಿಕ ಸಮಸ್ಯೆ: ಎಕ್ಸ್‌ಯುವಿ700 ಎಸ್‌ಯುವಿ ಮಾದರಿಯನ್ನು ಮತ್ತೊಮ್ಮೆ ರೀಕಾಲ್ ಮಾಡಿದ ಮಹೀಂದ್ರಾ

ಹೊಸ ಕಾರಿನಲ್ಲಿ ಫ್ರಂಟ್ ಫಾಸಿಯಾದೊಂದಿಗೆ ಸಂಯೋಜನೆಗೊಂಡಿರುವ ಎಲ್ಇಡಿ ಹೆಡ್‌ಲ್ಯಾಂಪ್ಸ್, ಸಿ ಆಕಾರದಲ್ಲಿರುವ ಎಲ್ಇಡಿ ಡಿಆರ್‌ಎಲ್ಎಸ್, ಸಿಲ್ವರ್ ಕೋಟಿಂಗ್ ಹೊಂದಿರುವ ಫ್ಲಕ್ಸ್ ಸ್ಕೀಡ್ ಪ್ಲೇಟ್, 18-ಇಂಚಿನ ಡ್ಯುಯಲ್ ಟೋನ್ ಮಲ್ಟಿ ಸ್ಪೋಕ್ ಅಲಾಯ್ ವ್ಹೀಲ್ ಪಡೆದುಕೊಂಡಿದೆ.

ತಾಂತ್ರಿಕ ಸಮಸ್ಯೆ: ಎಕ್ಸ್‌ಯುವಿ700 ಎಸ್‌ಯುವಿ ಮಾದರಿಯನ್ನು ಮತ್ತೊಮ್ಮೆ ರೀಕಾಲ್ ಮಾಡಿದ ಮಹೀಂದ್ರಾ

ಎಕ್ಸ್‌ಯುವಿ700 ಮಾದರಿಯ ಸೈಡ್ ಪ್ರೋಫೈಲ್ ಮತ್ತು ಹಿಂಬದಿಯ ವಿನ್ಯಾಸವು ಕೂಡಾ ಸಾಕಷ್ಟು ಹೊಸತನದಿಂದ ಕೂಡಿದ್ದು, ಹಿಂಬದಿಯ ಫೆಂಡರ್‌ನೊಂದಿಗೆ ಹರಡಿಕೊಂಡಿರುವ ವಿಭಜಿತ ಟೈಲ್‌ಲ್ಯಾಂಪ್, ವಿನೂತನ ವಿನ್ಯಾಸದ ಬಂಪರ್, ಫ್ಲಕ್ಸ್ ಸ್ಕೀಡ್ ಪ್ಲೇಟ್, ರೂಫ್ ರೈಲ್ಸ್, ಶಾರ್ಕ್ ಫಿನ್ ಆಂಟೆನಾ, ರೂಫ್ ಸ್ಪಾಯ್ಲರ್ ಪಡೆದುಕೊಂಡಿದೆ.

ತಾಂತ್ರಿಕ ಸಮಸ್ಯೆ: ಎಕ್ಸ್‌ಯುವಿ700 ಎಸ್‌ಯುವಿ ಮಾದರಿಯನ್ನು ಮತ್ತೊಮ್ಮೆ ರೀಕಾಲ್ ಮಾಡಿದ ಮಹೀಂದ್ರಾ

ಹಾಗೆಯೇ ಹೊಸ ಕಾರಿನಲ್ಲಿ 10.25 ಇಂಚಿನ ಡಿಜಿಟಲ್ ಮತ್ತು ಇನ್ಪೋಟೈನ್‌ಮೆಂಟ್ ಟಚ್‌ಸ್ಕ್ರೀನ್ ಡಿಸ್‌ಪ್ಲೇ, ಆಂಡ್ರಾಯಿಡ್ ಆಟೋ ಮತ್ತು ಆಟೋ ಕಾರ್‌ಪ್ಲೇ, ಅಮೆಜಾನ್ ಅಲೆಕ್ಸಾ, 60 ತಾಂತ್ರಿಕ ಸೌಲಭ್ಯಗಳನ್ನು ನಿಯಂತ್ರಿಸಬಹುದಾದ ಕಾರ್ ಕನೆಕ್ಟ್ ಟೆಕ್ನಾಲಜಿ, ವಾಯ್ಸ್ ಅಸಿಸ್ಟೆನ್ಸ್, ಆ್ಯಂಬಿಯೆಂಟ್ ಲೈಟಿಂಗ್ಸ್, ಡ್ಯುಯಲ್ ಜೋನ್ ಕ್ಲೈಮೆಟ್ ಕಂಟ್ರೋಲ್, 2 ಮತ್ತು 3ನೇ ಸಾಲಿನಲ್ಲೂ ಎಸಿ ವೆಂಟ್ಸ್, ಪನೋರಮಿಕ್ ಸನ್‌ರೂಫ್ ಮತ್ತು ಏರ್ ಪ್ಯೂರಿಫ್ಲೈರ್ ಸೌಲಭ್ಯಗಳಿವೆ.

ತಾಂತ್ರಿಕ ಸಮಸ್ಯೆ: ಎಕ್ಸ್‌ಯುವಿ700 ಎಸ್‌ಯುವಿ ಮಾದರಿಯನ್ನು ಮತ್ತೊಮ್ಮೆ ರೀಕಾಲ್ ಮಾಡಿದ ಮಹೀಂದ್ರಾ

ಇದರೊಂದಿಗೆ ಹೊಸ ಕಾರು ಸುರಕ್ಷಾ ವಿಚಾರವಾಗಿ ಭಾರತದಲ್ಲಿ 'ಸೇಫರ್ ಛಾಯ್ಸ್' ಪ್ರಶಸ್ತಿ ಪಡೆದ ಮೊದಲ ಕಾರು ಮಾದರಿಯಾಗಿ ಹೊರಹೊಮ್ಮಿದ್ದು, ಹೊಸ ಕಾರಿನಲ್ಲಿ ಪ್ರಯಾಣಿಕರ ಗರಿಷ್ಠ ಸುರಕ್ಷತೆಗಾಗಿ ಹಲವಾರು ಸ್ಟ್ಯಾಂಡರ್ಡ್ ಫೀಚರ್ಸ್ ನೀಡಲಾಗಿದೆ.

ತಾಂತ್ರಿಕ ಸಮಸ್ಯೆ: ಎಕ್ಸ್‌ಯುವಿ700 ಎಸ್‌ಯುವಿ ಮಾದರಿಯನ್ನು ಮತ್ತೊಮ್ಮೆ ರೀಕಾಲ್ ಮಾಡಿದ ಮಹೀಂದ್ರಾ

ಹೊಸ ಎಕ್ಸ್‌ಯುವಿ700 ಮಾದರಿಯಲ್ಲಿ 7-ಏರ್‌ಬ್ಯಾಗ್, ಎಬಿಎಸ್ ಜೊತೆಗೆ ಇಬಿಡಿ, ಎಲೆಕ್ಟ್ರಾನಿಕ್ ಲಾಕಿಂಗ್, ಟ್ರಾಕ್ಷನ್ ಕಂಟ್ರೋಲ್, ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಆಟೋ ಹೆಡ್‌ಲ್ಯಾಂಪ್ ಬೂಸ್ಟರ್, ವ್ಯಯಕ್ತಿಕರಣಗೊಳಿಸಿದ ಸೇಫ್ಟಿ ಅಲರ್ಟ್, ಡ್ರೈವರ್ ಡ್ರಾಸಿನೆಸ್ ಅಲರ್ಟ್, ಲೆನ್ ಕಿಪ್ ಅಸಿಸ್ಟ್ ಸೌಲಭ್ಯ ಹೊಂದಿದೆ.

Article Published On: Saturday, July 23, 2022, 14:29 [IST]
English summary
Mahindra xuv700 suv recalled again over rear suspension issued details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+