Just In
Don't Miss!
- Sports
ವಿಂಡೀಸ್ ಪ್ರವಾಸದಲ್ಲಿ ಹಿರಿಯ ಆಟಗಾರರಿಗೆ ವಿಶ್ರಾಂತಿ, ಸಂಜು ಸ್ಯಾಮ್ಸನ್ಗೆ ಸಿಗಲಿದೆ ಮತ್ತೊಂದು ಅವಕಾಶ?
- News
ಅಮೃತ್ ನಗರೋತ್ಥಾನ ಯೋಜನೆಯಡಿ ಬೆಂಗಳೂರು ಪೂರ್ವ ವಲಯಕ್ಕೆ 450 ಕೋಟಿ ಮಂಜೂರು
- Movies
ಹಿಂದಿಗೆ ಹೋಗುತ್ತಿದೆ ಏಳು ವರ್ಷ ಹಳೆಯ ಕನ್ನಡ ಸಿನಿಮಾ: ಅಕ್ಷಯ್-ಶಾಹಿದ್ ನಡುವೆ ಪೈಪೋಟಿ!
- Finance
ಸರ್ವೀಸ್ ಚಾರ್ಜ್ ಬಗ್ಗೆ ಗ್ರಾಹಕರು ದೂರು ನೀಡುವುದು ಹೇಗೆ?
- Lifestyle
ಯಾರೂ ಇಲ್ಲದಿದ್ದಾಗ ಪುರುಷ ಈ ರೀತಿ ವಿಲಕ್ಷಣವಾಗಿ ವರ್ತಿಸುತ್ತಾನೆ, ಗೊತ್ತಾ? ಇದನ್ನು ಓದಿದ್ರೆ ನೀವು ಶಾಕ್ ಆಗೋದು ಪಕ್ಕಾ!
- Technology
ಜಬ್ರೋನಿಕ್ಸ್ ಡ್ರಿಪ್ ಸ್ಮಾರ್ಟ್ವಾಚ್ ಬಿಡುಗಡೆ! ಲಾಂಗ್ ಬ್ಯಾಟರಿ ಬ್ಯಾಕ್ಅಪ್ ವಿಶೇಷ!
- Education
Karnataka Second PUC Results 2022 : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಉತ್ತರ ಪತ್ರಿಕೆಯ ಪ್ರತಿಗಳು ಜು.6ರಿಂದ ಲಭ್ಯ
- Travel
ಸೂರ್ಯ, ಅಲೆಗಳು ಮತ್ತು ಮರಳು ಇವುಗಳ ಸಮ್ಮಿಲನ ಕಡಲತೀರದ ಪಟ್ಟಣ - ಮಲ್ಪೆ
ಸುರಕ್ಷಾ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೊಂದು ಅತ್ಯುನ್ನತ ಪ್ರಶಸ್ತಿ ತನ್ನದಾಗಿಸಿಕೊಂಡ ಮಹೀಂದ್ರಾ ಎಕ್ಸ್‌ಯುವಿ700
ಮಹೀಂದ್ರಾ ಹೊಸ ಎಕ್ಸ್‌ಯುವಿ700 ಎಸ್‌ಯುವಿ ಮಾದರಿಯು ಬಿಡುಗಡೆಯ ನಂತರ ಹಲವಾರು ಹೊಸ ದಾಖಲೆಗಳಿಗೆ ಕಾರಣವಾಗಿದ್ದು, ಹೊಸ ಕಾರು ಗ್ಲೋಬಲ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಗರಿಷ್ಠ ಸೇಫ್ಟಿ ರೇಟಿಂಗ್ಸ್‌ನೊಂದಿಗೆ ಮತ್ತೊಂದು ಅತ್ಯುನ್ನತ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.

ಗ್ಲೋಬಲ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಎಕ್ಸ್‌ಯುವಿ300 ನಂತರ ಎಕ್ಸ್‌ಯುುವಿ700 ಮಾದರಿಯು ಗರಿಷ್ಠ ಸೇಫ್ಟಿ ರೇಟಿಂಗ್ಸ್ ಪಡೆದುಕೊಂಡ ಎರಡನೇ ಕಾರು ಮಾದರಿಯಾಗಿ ಹೊರಹೊಮ್ಮಿದ್ದು, ಹಲವಾರು ಸೇಫ್ಟಿ ಫೀಚರ್ಸ್ ಹೊಂದಿರುವ ಹೊಸ ಎಕ್ಸ್‌ಯುವಿ700 ಮಾದರಿಯು ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಗರಿಷ್ಠ ಅಂಕಗಳೊಂದಿಗೆ 5 ಸ್ಟಾರ್ ಸೇಫ್ಟಿ ರೇಟಿಂಗ್ಸ್ ಪಡೆದುಕೊಂಡಿತ್ತು.

ಪ್ರಯಾಣಿಕ ವಾಹನಗಳ ಸುರಕ್ಷತೆ ಕುರಿತು ಜಾಗತಿಕ ಮಟ್ಟದ ಅಭಿಯಾನ ಕೈಗೊಂಡಿರುವ ಗ್ಲೊಬಲ್ ಎಸ್‌ಸಿಎಪಿ ಸಂಸ್ಥೆಯು ಭಾರತದಲ್ಲಿ #SAFERCARSFORINDIA ಅಭಿಯಾನದಡಿ ಹೊಸ ಕಾರುಗಳ ಸುರಕ್ಷತೆಯನ್ನು ಸುಧಾರಿಸುತ್ತಿದ್ದು, ಮಹೀಂದ್ರಾ ಕಂಪನಿಯು ಹೊಸ ಕಾರುಗಳ ಸುರಕ್ಷತೆಯಲ್ಲಿ ಗಮನಾರ್ಹ ಫಲಿತಾಂಶದ ಮೂಲಕ ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆ ಖಚಿತಪಡಿಸುತ್ತಿದೆ.

ಗ್ಲೊಬಲ್ ಎನ್‌ಸಿಎಪಿ ಕ್ರ್ಯಾಶ್‌ಟೆಸ್ಟಿಂಗ್‌ನಲ್ಲಿ ಎಕ್ಸ್‌ಯುವಿ700 ಮಾದರಿಯು ವಯಸ್ಕ ಪ್ರಯಾಣಿಕರ ಸುರಕ್ಷತೆಗಾಗಿ ನೀಡುವ 17 ಅಂಕಗಳಲ್ಲಿ 16.03 ಅಂಕಗಳನ್ನು ಮತ್ತು ಮಕ್ಕಳ ಸುರಕ್ಷತೆಗಾಗಿ ನೀಡಲಾಗುವ 49 ಅಂಕಗಳಲ್ಲಿ 41.66 ಅಂಕಗಳೊಂದಿಗೆ ಗರಿಷ್ಠ 5 ಸ್ಟಾರ್ ರೇಟಿಂಗ್ಸ್ ಪಡೆದುಕೊಂಡಿದ್ದು, ಇದೀಗ ಹೊಸ ಕಾರಿನ ಸುರಕ್ಷಾ ಸೌಲಭ್ಯಗಳನ್ನು ಆಧರಿಸಿ ಗ್ಲೊಬಲ್ ಎನ್‌ಸಿಎಪಿ ಸಂಸ್ಥೆಯು ಮತ್ತೊಂದು ಅತ್ಯುನ್ನತ ಪ್ರಶಸ್ತಿ ನೀಡಿದೆ.

ಹೊಸ ಕಾರಿನಲ್ಲಿರುವ ಅಡ್ವಾನ್ಸ್ ಡ್ರೈವಿಂಗ್ ಅಸಿಸ್ಟಂ ಸಿಸ್ಟಂ ಸೌಲಭ್ಯವನ್ನು ಪ್ರತ್ಯೇಕವಾಗಿ ಪರೀಕ್ಷಿಸಿರುವ ಗ್ಲೊಬಲ್ ಎನ್‌ಸಿಎಪಿ ಸಂಸ್ಥೆಯು ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೊಲ್ ಮತ್ತು ಪೆಡೆಟ್ರೆಷಿಯನ್ ಪ್ರೊಟೆಕ್ಷನ್ ಸೌಲಭ್ಯಗಳಿಗೆಗಾಗಿ 'ಸೇಫರ್ ಛಾಯ್ಸ್' ಪ್ರಶಸ್ತಿ ನೀಡಿದೆ.

ಭಾರತದಲ್ಲಿ ಎಕ್ಸ್‌ಯುವಿ700 ಕಾರು ಮಾದರಿಯು 'ಸೇಫರ್ ಛಾಯ್ಸ್' ಪ್ರಶಸ್ತಿ ಪಡೆದ ಮೊದಲ ಕಾರು ಮಾದರಿಯಾಗಿ ಹೊರಹೊಮ್ಮಿದ್ದು, ಹೊಸ ಕಾರಿನಲ್ಲಿ ಪ್ರಯಾಣಿಕರ ಗರಿಷ್ಠ ಸುರಕ್ಷತೆಗಾಗಿ ಹಲವಾರು ಸ್ಟ್ಯಾಂಡರ್ಡ್ ಫೀಚರ್ಸ್ ನೀಡಲಾಗಿದೆ.

ಹೊಸ ಎಕ್ಸ್‌ಯುವಿ700 ಮಾದರಿಯಲ್ಲಿ 7-ಏರ್‌ಬ್ಯಾಗ್, ಎಬಿಎಸ್ ಜೊತೆಗೆ ಇಬಿಡಿ, ಎಲೆಕ್ಟ್ರಾನಿಕ್ ಲಾಕಿಂಗ್, ಟ್ರಾಕ್ಷನ್ ಕಂಟ್ರೋಲ್, ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಆಟೋ ಹೆಡ್‌ಲ್ಯಾಂಪ್ ಬೂಸ್ಟರ್, ವ್ಯಯಕ್ತಿಕರಣಗೊಳಿಸಿದ ಸೇಫ್ಟಿ ಅಲರ್ಟ್, ಡ್ರೈವರ್ ಡ್ರಾಸಿನೆಸ್ ಅಲರ್ಟ್, ಲೆನ್ ಕಿಪ್ ಅಸಿಸ್ಟ್ ಸೌಲಭ್ಯ ಹೊಂದಿದೆ.

ಮಹೀಂದ್ರಾ ಕಂಪನಿಯು ಹೊಸ ಕಾರು ಮಾದರಿಗಾಗಿ ಇದುವರೆಗೆ ಸುಮಾರು 1 ಲಕ್ಷಕ್ಕೂ ಅಧಿಕ ಯುನಿಟ್‌ಗಳಿಗೆ ಬುಕಿಂಗ್ ಸ್ವಿಕರಿಸಿದ್ದು, ಹೊಸ ಕಾರು ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಆಕರ್ಷಕ ಬೆಲೆಯೊಂದಿಗೆ ಗ್ರಾಹಕರನ್ನು ಸೆಳೆಯುತ್ತಿದೆ.

ಹೊಸ ಕಾರು ಗ್ರಾಹಕರ ಬೇಡಿಕೆಯೆಂತೆ 5 ಸೀಟರ್ ಮತ್ತು 7 ಸೀಟರ್ ಮಾದರಿಗಳಲ್ಲಿ ಖರೀದಿಗೆ ಲಭ್ಯವಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 13.18 ಲಕ್ಷಕ್ಕೆ ಮತ್ತು ಹೆಚ್ಚಿನ ಮಟ್ಟದ ಫೀಚರ್ಸ್ ಹೊಂದಿರುವ ಟಾಪ್ ಎಂಡ್ ಮಾದರಿಯನ್ನು ರೂ. 24.58 ಲಕ್ಷ ಬೆಲೆ ಹೊಂದಿದೆ.

ಹೊಸ ಕಾರಿನಲ್ಲಿ 7 ಸೀಟರ್ ಮಾದರಿಯು 2+3+2 ಮಾದರಿಯ ಆಸನ ಸೌಲಭ್ಯ ಹೊಂದಿದ್ದರೆ 5 ಸೀಟರ್ ಮಾದರಿಯು 2+3 ಆಸನ ಸೌಲಭ್ಯ ಹೊಂದಿದ್ದು, ಹೊಸ ಕಾರಿನಲ್ಲಿ ಕಂಪನಿಯು 2.0-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 2.2-ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಆಯ್ಕೆ ನೀಡಿದೆ.

ಹೊಸ ಕಾರು ಎಂಎಕ್ಸ್, ಎಎಕ್ಸ್3, ಎಎಕ್ಸ್5, ಎಎಕ್ಸ್7 ಮತ್ತು ಎಎಕ್ಸ್7 ಲಗ್ಷುರಿ ಎನ್ನುವ ವಿವಿಧ ವೆರಿಯೆಂಟ್‌ಗಳೊಂದಿಗೆ ಆಕರ್ಷಕ ಫೀಚರ್ಸ್, ಬಲಿಷ್ಠ ಎಂಜಿನ್ ಆಯ್ಕೆ ಹೊಂದಿದ್ದು, ಕಂಪನಿಯೇ ಜೋಡಣೆ ಮಾಡುವ 7 ಸೀಟರ್ ಮಾದರಿಗಳನ್ನು ಹೊರತುಪಡಿಸಿ 5 ಸೀಟರ್ ಹೊಂದಿರುವ ಮಾದರಿಗಳಲ್ಲಿ 7 ಸೀಟರ್ ಬಯಸುವ ಗ್ರಾಹಕರು ಹೆಚ್ಚುವರಿ ರೂ. 70 ಸಾವಿರ ಪಾವತಿ ಮಾಡಬೇಕಾಗುತ್ತದೆ.

ಹೊಸ ಕಾರಿನಲ್ಲಿ ಫ್ರಂಟ್ ಫಾಸಿಯಾದೊಂದಿಗೆ ಸಂಯೋಜನೆಗೊಂಡಿರುವ ಎಲ್ಇಡಿ ಹೆಡ್‌ಲ್ಯಾಂಪ್ಸ್, ಸಿ ಆಕಾರದಲ್ಲಿರುವ ಎಲ್ಇಡಿ ಡಿಆರ್‌ಎಲ್ಎಸ್, ಸಿಲ್ವರ್ ಕೋಟಿಂಗ್ ಹೊಂದಿರುವ ಫ್ಲಕ್ಸ್ ಸ್ಕೀಡ್ ಪ್ಲೇಟ್, 18-ಇಂಚಿನ ಡ್ಯುಯಲ್ ಟೋನ್ ಮಲ್ಟಿ ಸ್ಪೋಕ್ ಅಲಾಯ್ ವ್ಹೀಲ್ ಪಡೆದುಕೊಂಡಿದೆ.

ಎಕ್ಸ್‌ಯುವಿ700 ಮಾದರಿಯ ಸೈಡ್ ಪ್ರೋಫೈಲ್ ಮತ್ತು ಹಿಂಬದಿಯ ವಿನ್ಯಾಸವು ಕೂಡಾ ಸಾಕಷ್ಟು ಹೊಸತನದಿಂದ ಕೂಡಿದ್ದು, ಹಿಂಬದಿಯ ಫೆಂಡರ್‌ನೊಂದಿಗೆ ಹರಡಿಕೊಂಡಿರುವ ವಿಭಜಿತ ಟೈಲ್‌ಲ್ಯಾಂಪ್, ವಿನೂತನ ವಿನ್ಯಾಸದ ಬಂಪರ್, ಫ್ಲಕ್ಸ್ ಸ್ಕೀಡ್ ಪ್ಲೇಟ್, ರೂಫ್ ರೈಲ್ಸ್, ಶಾರ್ಕ್ ಫಿನ್ ಆಂಟೆನಾ, ರೂಫ್ ಸ್ಪಾಯ್ಲರ್ ಪಡೆದುಕೊಂಡಿದೆ.

ಹಾಗೆಯೇ ಹೊಸ ಕಾರಿನಲ್ಲಿ 10.25 ಇಂಚಿನ ಡಿಜಿಟಲ್ ಮತ್ತು ಇನ್ಪೋಟೈನ್‌ಮೆಂಟ್ ಟಚ್‌ಸ್ಕ್ರೀನ್ ಡಿಸ್‌ಪ್ಲೇ, ಆಂಡ್ರಾಯಿಡ್ ಆಟೋ ಮತ್ತು ಆಟೋ ಕಾರ್‌ಪ್ಲೇ, ಅಮೆಜಾನ್ ಅಲೆಕ್ಸಾ, 60 ತಾಂತ್ರಿಕ ಸೌಲಭ್ಯಗಳನ್ನು ನಿಯಂತ್ರಿಸಬಹುದಾದ ಕಾರ್ ಕನೆಕ್ಟ್ ಟೆಕ್ನಾಲಜಿ, ವಾಯ್ಸ್ ಅಸಿಸ್ಟೆನ್ಸ್, ಆ್ಯಂಬಿಯೆಂಟ್ ಲೈಟಿಂಗ್ಸ್, ಡ್ಯುಯಲ್ ಜೋನ್ ಕ್ಲೈಮೆಟ್ ಕಂಟ್ರೋಲ್, 2 ಮತ್ತು 3ನೇ ಸಾಲಿನಲ್ಲೂ ಎಸಿ ವೆಂಟ್ಸ್, ಪನೋರಮಿಕ್ ಸನ್‌ರೂಫ್ ಮತ್ತು ಏರ್ ಪ್ಯೂರಿಫ್ಲೈರ್ ಸೌಲಭ್ಯಗಳಿವೆ.