ಶೀಘ್ರದಲ್ಲಿಯೇ ಹೊಸ ಅಪ್‌ಡೇಟ್ ಪಡೆದುಕೊಳ್ಳಲಿದೆ ಮಹೀಂದ್ರಾ ಎಕ್ಸ್‌ಯುವಿ700 ಎಸ್‌ಯುವಿ
ಎಕ್ಸ್‌ಯುವಿ700 ಎಸ್‌ಯುವಿ ಮೂಲಕ ಮಹೀಂದ್ರಾ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಹೊಸ ಕಾರಿನಲ್ಲಿ ಕಂಪನಿಯು ಶೀಘ್ರದಲ್ಲೇ ಕೆಲವು ಹೊಸ ಅಪ್‌ಡೇಟ್ ನೀಡಲು ಮುಂದಾಗಿದೆ.
Recommended Video
ಹೊಸ ಎಸ್‌ಯುವಿ ಕಾರು ಮಾದರಿಯಲ್ಲಿ ಮಹೀಂದ್ರಾ ಕಂಪನಿಯು ಆ್ಯಪಲ್ ಕಾರ್ ಪ್ಲೇ ಮತ್ತು ವಾಯ್ಸ್ ಅಸಿಸ್ಟ್ ಸೌಲಭ್ಯಗಳಲ್ಲಿ ಕೆಲವು ಹೊಸ ಬದಲಾವಣೆಗಳನ್ನು ನೀಡಲಾಗುತ್ತಿದೆ.

ಕಾರು ಬಳಕೆದಾರರ ಅಭಿಪ್ರಾಯ ಆಧರಿಸಿ ಮಹೀಂದ್ರಾ ಕಂಪನಿಯು ಎಕ್ಸ್‌ಯುವಿ700 ಮಾದರಿಯ ಹೊಸ ನವೀಕರಣಗಳನ್ನು ಪರಿಚಯಿಸುತ್ತಿದ್ದು, ಉನ್ನತೀಕರಿಸಿದ ಆ್ಯಪಲ್ ಕಾರ್ ಪ್ಲೇ ಮತ್ತು ಹೆಚ್ಚಿನ ವ್ಯಾಪ್ತಿ ಹೊಂದಿರುವ ಸಿರಿ ವಾಯ್ಸ್ ಅಸಿಸ್ಟ್ ಸೌಲಭ್ಯಗಳನ್ನು ನೀಡಲಾಗುತ್ತಿದೆ.

ಸೆಪ್ಟೆಂಬರ್ 5ರಿಂದ ಹೊಸ ನವೀಕರಣ ಪ್ರಕ್ರಿಯೆಗೆ ಚಾಲನೆ ನೀಡುವುದಾಗಿ ಹೇಳಿಕೊಂಡಿರುವ ಮಹೀಂದ್ರಾ ಕಂಪನಿಯು ಹಂತ-ಹಂತವಾಗಿ ಗ್ರಾಹಕರನ್ನು ಸಂಪರ್ಕಿಸಲಿದ್ದು, ಹೊಸ ನವೀಕರಣಕ್ಕಾಗಿ ಗ್ರಾಹಕರು ಹತ್ತಿರದ ಶೋರೂಂ ಭೇಟಿ ನೀಡಬೇಕಾಗುತ್ತದೆ.

ಹೀಗಾಗಿ ಹೊಸ ನವೀಕರಣಕ್ಕಾಗಿ ಗ್ರಾಹಕರ ಸಂಖ್ಯೆ ಆಧರಿಸಿ ನವೀಕರಣ ಪ್ರಕ್ರಿಯೆಯನ್ನು ಆರಂಭಿಸಲಾಗುತ್ತಿದ್ದು, ಉನ್ನತೀಕರಿಸಿದ ಆ್ಯಪಲ್ ಕಾರ್ ಪ್ಲೇ ಸೌಲಭ್ಯದೊಂದಿಗೆ ಮತ್ತಷ್ಟು ನಿಯಂತ್ರಕ ವ್ಯಾಪ್ತಿ ಹೊಂದಿರುವ ಸಿರಿ ವಾಯ್ಸ್ ಅಸಿಸ್ಟ್ ಸೌಲಭ್ಯಗಳು ಕಾರು ಚಾಲನೆಯನ್ನು ಮತ್ತಷ್ಟು ಸುಲಭವಾಗಿಸುತ್ತವೆ.

ಇನ್ನು ಎಕ್ಸ್‌ಯುವಿ700 ಮಾದರಿಯು ಬಿಡುಗಡೆಯಾದ ಕೇವಲ 11 ತಿಂಗಳಿನಲ್ಲಿ ಹೊಸ ದಾಖಲೆಗೆ ಕಾರಣವಾಗಿದ್ದು, ಹೊಸ ಕಾರು ಬಿಡುಗಡೆಯ ನಂತರ ಇದುವರೆಗೆ ಬರೋಬ್ಬರಿ 1.50 ಲಕ್ಷಕ್ಕೂ ಯುನಿಟ್‌ಗಳಿಗೆ ಬುಕಿಂಗ್ ಪಡೆದುಕೊಂಡಿದೆ.

ಹೊಸ ಎಕ್ಸ್‌ಯುವಿ700 ಕಾರು ಮಾದರಿಯನ್ನು ಬಿಡುಗಡೆಗೊಳಿಸಿದ ಮೊದಲ ಎರಡು ದಿನಗಳಲ್ಲಿಯೇ 50 ಸಾವಿರ ಯನಿಟ್‌ಗಳಿಗೆ ಬುಕ್ಕಿಂಗ್ ಪಡೆದುಕೊಂಡಿದ್ದ ಮಹೀಂದ್ರಾ ಕಂಪನಿಯು ಇದುವರೆಗೆ ಒಟ್ಟು 1.50 ಲಕ್ಷಕ್ಕೂ ಹೆಚ್ಚು ಯುನಿಟ್‌ಗಳಿಗೆ ಬುಕಿಂಗ್ ಸ್ವಿಕರಿಸಿದೆ. ಹೊಸ ಕಾರು ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಆಕರ್ಷಕ ಬೆಲೆಯೊಂದಿಗೆ ಗ್ರಾಹಕರನ್ನು ಸೆಳೆಯುತ್ತಿದ್ದು, ಉತ್ಪಾದನಾ ಸಾಮರ್ಥ್ಯಕ್ಕೆ ಅನುಗುಣವಾಗಿ ಕಂಪನಿಯು ಇದುವರೆಗೆ ಸುಮಾರು 35 ಸಾವಿರ ಯುನಿಟ್‌ಗಳನ್ನು ವಿತರಣೆ ಮಾಡಿದೆ.

ಹೊಸ ಎಕ್ಸ್‌ಯುವಿ700 ಎಸ್‌ಯುವಿ ಮಾದರಿಯನ್ನು ಕಳೆದ ಅಗಸ್ಟ್ 15ರಂದು ಬಿಡುಗಡೆಗೊಳಿಸಿದ್ದ ಮಹೀಂದ್ರಾ ಕಂಪನಿಯು ಅಕ್ಟೋಬರ್‌ನಲ್ಲಿ ವಿತರಣೆ ಆರಂಭಿಸಿತ್ತು. ವಿತರಣೆ ಆರಂಭಿಸಿದ ಮೊದಲ ತಿಂಗಳಿನಲ್ಲಿ ಉತ್ತಮ ಸಂಖ್ಯೆಯಲ್ಲಿ ಮಾರಾಟ ಮಾಡಿದರೂ ನವೆಂಬರ್ ತಿಂಗಳಿನಲ್ಲಿ ಸೆಮಿಕಂಡಕ್ಟರ್ ಕೊರೆತೆಯೂ ಕಾರಿನ ಉತ್ಪಾದನೆಗೆ ತೀವ್ರ ಹೊಡೆತ ನೀಡಿತ್ತು.

ತದನಂತರ ಡಿಸೆಂಬರ್ ಮತ್ತು ಜನವರಿ ಆರಂಭದಲ್ಲಿ ಉತ್ಪಾದನೆ ಹೆಚ್ಚಳದೊಂದಿಗೆ ಕಂಪನಿಯು ಇದುವರೆಗೆ 35 ಸಾವಿರ ಯುನಿಟ್‌ಗಳನ್ನು ವಿತರಣೆ ಮಾಡಿದ್ದು, ಉತ್ಪಾದನಾ ಸಾಮಾರ್ಥ್ಯದ ಆಧಾರದ ಮೇಲೆ ಹೊಸ ಕಾರಿನ ಕಾಯುವಿಕೆ ಅವಧಿಯು ಇದೀಗ ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ಗರಿಷ್ಠ ಒಂದೂವರೆ ವರ್ಷದ ತನಕ ನಿಗದಿಪಡಿಸಲಾಗಿದೆ.

ಹೊಸ ಎಕ್ಸ್‌ಯುವಿ700 ಕಾರು ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಗ್ರಾಹಕರ ಬೇಡಿಕೆಯೆಂತೆ 5 ಸೀಟರ್ ಮತ್ತು 7 ಸೀಟರ್ ಮಾದರಿಗಳಲ್ಲಿ ಖರೀದಿಗೆ ಲಭ್ಯವಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 13.88 ಲಕ್ಷಕ್ಕೆ ಮತ್ತು ಹೆಚ್ಚಿನ ಮಟ್ಟದ ಫೀಚರ್ಸ್ ಹೊಂದಿರುವ ಟಾಪ್ ಎಂಡ್ ಮಾದರಿಯನ್ನು ರೂ. 24.58 ಲಕ್ಷ ಬೆಲೆ ಹೊಂದಿದೆ.

ಹೊಸ ಕಾರಿನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಗ್ರಾಹಕರ ಬೇಡಿಕೆಯೆಂತೆ 5 ಸೀಟರ್ ಮತ್ತು 7 ಸೀಟರ್ ಮಾದರಿಗಳಲ್ಲಿ ಖರೀದಿಗೆ ಲಭ್ಯವಿದ್ದು, ಹೊಸ ಕಾರಿನಲ್ಲಿ ಕಂಪನಿಯು 2.0-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 2.2-ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಆಯ್ಕೆ ನೀಡಿದೆ.

2.0-ಲೀಟರ್ ಪೆಟ್ರೋಲ್ ಮಾದರಿಯು 198-ಬಿಎಚ್‌ಪಿ, 300-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ 2.2-ಲೀಟರ್ ಡೀಸೆಲ್ ಮಾದರಿಯು 183-ಬಿಎಚ್‌ಪಿ ಮತ್ತು 420-ಎನ್ಎಂ ಟಾರ್ಕ್(6-ಸ್ಪೀಡ್ ಎಂಟಿ),450-ಎನ್ಎಂ ಟಾರ್ಕ್(6-ಸ್ಪೀಡ್ ಎಟಿ) ಉತ್ಪಾದನಾ ವೈಶಿಷ್ಟ್ಯತೆ ಹೊಂದಿದೆ.

ಎಕ್ಸ್‌ಯುವಿ700 ಮಾದರಿಯಲ್ಲಿ ಎಂಎಕ್ಸ್, ಎಎಕ್ಸ್3, ಎಎಕ್ಸ್5, ಎಎಕ್ಸ್7 ಮತ್ತು ಎಎಕ್ಸ್7 ಲಗ್ಷುರಿ ವೆರಿಯೆಂಟ್ ಖರೀದಿಗೆ ಲಭ್ಯವಿದ್ದು, ಆಕರ್ಷಕ ಫೀಚರ್ಸ್, ಬಲಿಷ್ಠ ಎಂಜಿನ್ ಆಯ್ಕೆ ಹೊಂದಿವೆ. ಕಂಪನಿಯೇ ಜೋಡಣೆ ಮಾಡುವ 7 ಸೀಟರ್ ಮಾದರಿಗಳನ್ನು ಹೊರತುಪಡಿಸಿ 5 ಸೀಟರ್ ಹೊಂದಿರುವ ಮಾದರಿಗಳಲ್ಲಿ 7 ಸೀಟರ್ ಬಯಸುವ ಗ್ರಾಹಕರು ಹೆಚ್ಚುವರಿ ರೂ. 70 ಸಾವಿರ ಪಾವತಿ ಮಾಡಬೇಕಾಗುತ್ತದೆ.

ಹೊಸ ಕಾರಿನಲ್ಲಿ ಫ್ರಂಟ್ ಫಾಸಿಯಾದೊಂದಿಗೆ ಸಂಯೋಜನೆಗೊಂಡಿರುವ ಎಲ್ಇಡಿ ಹೆಡ್‌ಲ್ಯಾಂಪ್ಸ್, ಸಿ ಆಕಾರದಲ್ಲಿರುವ ಎಲ್ಇಡಿ ಡಿಆರ್‌ಎಲ್ಎಸ್, ಸಿಲ್ವರ್ ಕೋಟಿಂಗ್ ಹೊಂದಿರುವ ಫ್ಲಕ್ಸ್ ಸ್ಕೀಡ್ ಪ್ಲೇಟ್, 18-ಇಂಚಿನ ಡ್ಯುಯಲ್ ಟೋನ್ ಮಲ್ಟಿ ಸ್ಪೋಕ್ ಅಲಾಯ್ ವ್ಹೀಲ್ ಪಡೆದುಕೊಂಡಿದೆ.

ಎಕ್ಸ್‌ಯುವಿ700 ಮಾದರಿಯ ಸೈಡ್ ಪ್ರೋಫೈಲ್ ಮತ್ತು ಹಿಂಬದಿಯ ವಿನ್ಯಾಸವು ಕೂಡಾ ಸಾಕಷ್ಟು ಹೊಸತನದಿಂದ ಕೂಡಿದ್ದು, ಹಿಂಬದಿಯ ಫೆಂಡರ್‌ನೊಂದಿಗೆ ಹರಡಿಕೊಂಡಿರುವ ವಿಭಜಿತ ಟೈಲ್‌ಲ್ಯಾಂಪ್, ವಿನೂತನ ವಿನ್ಯಾಸದ ಬಂಪರ್, ಫ್ಲಕ್ಸ್ ಸ್ಕೀಡ್ ಪ್ಲೇಟ್, ರೂಫ್ ರೈಲ್ಸ್, ಶಾರ್ಕ್ ಫಿನ್ ಆಂಟೆನಾ, ರೂಫ್ ಸ್ಪಾಯ್ಲರ್ ಪಡೆದುಕೊಂಡಿದೆ.

ಹಾಗೆಯೇ ಹೊಸ ಕಾರಿನಲ್ಲಿ 10.25 ಇಂಚಿನ ಡಿಜಿಟಲ್ ಮತ್ತು ಇನ್ಪೋಟೈನ್‌ಮೆಂಟ್ ಟಚ್‌ಸ್ಕ್ರೀನ್ ಡಿಸ್‌ಪ್ಲೇ, ಆಂಡ್ರಾಯಿಡ್ ಆಟೋ ಮತ್ತು ಆಟೋ ಕಾರ್‌ಪ್ಲೇ, ಅಮೆಜಾನ್ ಅಲೆಕ್ಸಾ, 60 ತಾಂತ್ರಿಕ ಸೌಲಭ್ಯಗಳನ್ನು ನಿಯಂತ್ರಿಸಬಹುದಾದ ಕಾರ್ ಕನೆಕ್ಟ್ ಟೆಕ್ನಾಲಜಿ, ವಾಯ್ಸ್ ಅಸಿಸ್ಟೆನ್ಸ್, ಆ್ಯಂಬಿಯೆಂಟ್ ಲೈಟಿಂಗ್ಸ್, ಡ್ಯುಯಲ್ ಜೋನ್ ಕ್ಲೈಮೆಟ್ ಕಂಟ್ರೋಲ್, 2 ಮತ್ತು 3ನೇ ಸಾಲಿನಲ್ಲೂ ಎಸಿ ವೆಂಟ್ಸ್, ಪನೋರಮಿಕ್ ಸನ್‌ರೂಫ್ ಮತ್ತು ಏರ್ ಪ್ಯೂರಿಫ್ಲೈರ್ ಸೌಲಭ್ಯಗಳಿವೆ.

ಅಡ್ವಾನ್ಸ್ ಡ್ರೈವರ್ ಅಸಿಸ್ಟೆಡ್ ಸಿಸ್ಟಂ ಸೌಲಭ್ಯವು ಹೊಸ ಕಾರಿನ ಪ್ರಮುಖ ಸುರಕ್ಷಾ ಸೌಲಭ್ಯವಾಗಿದ್ದು, ಇದರ ಜೊತೆಗೆ 7-ಏರ್‌ಬ್ಯಾಗ್, ಎಬಿಎಸ್ ಜೊತೆಗೆ ಇಬಿಡಿ, ಎಲೆಕ್ಟ್ರಾನಿಕ್ ಲಾಕಿಂಗ್, ಟ್ರಾಕ್ಷನ್ ಕಂಟ್ರೋಲ್, ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಆಟೋ ಹೆಡ್‌ಲ್ಯಾಂಪ್ ಬೂಸ್ಟರ್, ವ್ಯಯಕ್ತಿಕರಣಗೊಳಿಸಿದ ಸೇಫ್ಟಿ ಅಲರ್ಟ್, ಡ್ರೈವರ್ ಡ್ರಾಸಿನೆಸ್ ಅಲರ್ಟ್, ಲೆನ್ ಕಿಪ್ ಅಸಿಸ್ಟ್ ಸೌಲಭ್ಯ ಹೊಂದಿದೆ.


Click it and Unblock the Notifications