ಮಾರುತಿ ಎಸ್‍ಯುವಿಗಳಿಗೆ ಭಾರೀ ಬೇಡಿಕೆ: 2 ಲಕ್ಷಕ್ಕೂ ಹೆಚ್ಚು ಬುಕ್ಕಿಂಗ್

ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್ (MSIL) ಎರಡನೇ ತಲೆಮಾರಿನ ಬ್ರೆಝಾ ಕಾಂಪ್ಯಾಕ್ಟ್ ಎಸ್‍ಯುವಿಯನ್ನು 2022ರ ಜೂನ್ ತಿಂಗಳಿನಲ್ಲಿ ಬಿಡುಗಡೆಗೊಳಿಸಿತು. ಈ ಹೊಸ ಬ್ರೆಝಾ ಕಾಂಪ್ಯಾಕ್ಟ್ ಎಸ್‍ಯುವಿಯು ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆಯನ್ನು ಪಡೆದುಕೊಂಡಿದೆ.

ಮಾರುತಿ ಎಸ್‍ಯುವಿಗಳಿಗೆ ಭಾರೀ ಬೇಡಿಕೆ: 2 ಲಕ್ಷಕ್ಕೂ ಹೆಚ್ಚು ಬುಕ್ಕಿಂಗ್

ಕಳೆದ ಎರಡು ತಿಂಗಳುಗಳಲ್ಲಿ, ಜನಪ್ರಿಯ ಟಾಟಾ ನೆಕ್ಸಾನ್ ಅನ್ನು ಹಿಂದಿಕ್ಕಿ ದೇಶದಲ್ಲಿ ಹೆಚ್ಚು ಮಾರಾಟವಾಗುವ ಎಸ್‍ಯುವಿಯಾಗುವಲ್ಲಿ ಯಶಸ್ವಿಯಾಗಿದೆ. ಇಂಡೋ-ಜಪಾನೀಸ್ ತಯಾರಕರು ಅದರ ಎಸ್‍ಯುವಿ ಪೋರ್ಟ್‌ಫೋಲಿಯೊವನ್ನು ಮತ್ತಷ್ಟು ವಿಸ್ತರಿಸಲು 2022ರ ಸೆಪ್ಟೆಂಬರ್ ತಿಂಗಳಿನಲ್ಲಿ ಗ್ರ್ಯಾಂಡ್ ವಿಟಾರಾವನ್ನು ಬಿಡುಗಡೆಗೊಳಿಸಿತು. ಈ ಎರಡು ಎಸ್‍ಯುವಿಗಳು ದಾಖಲೆ ಮಟ್ಟದಲ್ಲಿ ಮಾರಾಟವಾಗುತ್ತಿದೆ. ಈ ಎರಡೂ ಎಸ್‌ಯುವಿಗಳ ಸಂಯೋಜಿತ ಬುಕ್ಕಿಂಗ್ ಗಳು ಎರಡು ಲಕ್ಷ ದಾಟಿದೆ.

ಮಾರುತಿ ಎಸ್‍ಯುವಿಗಳಿಗೆ ಭಾರೀ ಬೇಡಿಕೆ: 2 ಲಕ್ಷಕ್ಕೂ ಹೆಚ್ಚು ಬುಕ್ಕಿಂಗ್

ಗ್ರ್ಯಾಂಡ್ ವಿಟಾರಾ ಎಸ್‍ಯುವಿಯ ವಿತರಣೆಯನ್ನು ಇತ್ತೀಚೆಗೆ ಪ್ರಾರಂಭಿಸಿದೆ. ಕಳೆದ ತಿಂಗಳಿನಲ್ಲಿ ಗ್ರ್ಯಾಂಡ್ ವಿಟಾರಾ ಮಾದರಿಯ 4,770 ಯುನಿಟ್‌ಗಳು ಮಾರಾಟವಾಗಿವೆ. ಈ ಹೊಸ ಮಾರುತಿ ಗ್ರ್ಯಾಂಡ್ ವಿಟಾರಾ ಎಸ್‌ಯುವಿಯ ಆರಂಭಿಕ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.10.45 ಲಕ್ಷವಾಗಿದೆ.

ಮಾರುತಿ ಎಸ್‍ಯುವಿಗಳಿಗೆ ಭಾರೀ ಬೇಡಿಕೆ: 2 ಲಕ್ಷಕ್ಕೂ ಹೆಚ್ಚು ಬುಕ್ಕಿಂಗ್

ಈ ಹೊಸ ಮಾರುತಿ ಗ್ರ್ಯಾಂಡ್ ವಿಟಾರಾ ಎಸ್‌ಯುವಿಯನ್ನು ಸುಜುಕಿ ತನ್ನ ಗ್ಲೋಬಲ್-ಸಿ ಪ್ಲಾಟ್‌ಫಾರ್ಮ್ ಅನ್ನು ಬಳಸಿಕೊಂಡು ಅಭಿವೃದ್ಧಿಪಡಿಸಿದೆ ಮತ್ತು ವಿನ್ಯಾಸಗೊಳಿಸಿದೆ. ಈ ಹೊಸ ಮಾರುತಿ ಗ್ರ್ಯಾಂಡ್ ವಿಟಾರಾ ನೆಕ್ಸಾ ಔಟ್‌ಲೆಟ್‌ಗಳ ಮೂಲಕ ಮಾತ್ರ ಮಾರಾಟ ಮಾಡಲಾಗುತ್ತದೆ.

ಮಾರುತಿ ಎಸ್‍ಯುವಿಗಳಿಗೆ ಭಾರೀ ಬೇಡಿಕೆ: 2 ಲಕ್ಷಕ್ಕೂ ಹೆಚ್ಚು ಬುಕ್ಕಿಂಗ್

ಈ ಹೊಸ ಮಾರುತಿ ಗ್ರ್ಯಾಂಡ್ ವಿಟಾರಾ ಎಸ್‍ಯುವಿಯನ್ನು ಆರು ವಿಭಿನ್ನ ರೂಪಾಂತರ ಹಂತಗಳಲ್ಲಿ ನೀಡಲಾಗುತ್ತದೆ. ಇ ಎಸ್‍ಯುವಿ ಸಿಗ್ಮಾ, ಡೆಲ್ಟಾ, ಝೀಟಾ, ಝೀಟಾ+, ಆಲ್ಫಾ ಮತ್ತು ಆಲ್ಫಾ+. ಆಗಿದೆ. ಝೀಟಾ, ಝೀಟಾ+, ಆಲ್ಫಾ ಮತ್ತು ಆಲ್ಫಾ+ ರೂಪಾಂತರಗಳನ್ನು ಡ್ಯುಯಲ್-ಟೋನ್ ಬಣ್ಣ ಆಯ್ಕೆಗಳಲ್ಲಿ ಸಹ ಲಭ್ಯವಿದೆ.

ಮಾರುತಿ ಎಸ್‍ಯುವಿಗಳಿಗೆ ಭಾರೀ ಬೇಡಿಕೆ: 2 ಲಕ್ಷಕ್ಕೂ ಹೆಚ್ಚು ಬುಕ್ಕಿಂಗ್

ಈ ಹೊಸ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಎರಡು ಪವರ್‌ಟ್ರೇನ್ ಆಯ್ಕೆಗಳಲ್ಲಿ ಲಭ್ಯವಿದೆ, ಈ ಎಸ್‍ಯುವಿಯು 1.5-ಲೀಟರ್ K15C ಪೆಟ್ರೋಲ್ ಎಂಜಿನ್ ಮೈಲ್ಡ್-ಹೈಬ್ರಿಡ್ ಸಿಸ್ಟಂ ಮತ್ತು 1.5-ಲೀಟರ್ TNGA ಪೆಟ್ರೋಲ್ ಮೋಟರ್ ಸ್ಟ್ರಾಂಗ್-ಹೈಬ್ರಿಡ್ ಸಿಸ್ಟಂನೊಂದಿಗೆ ಲಭ್ಯವಿದೆ. ಇದರಲ್ಲಿ 1.5-ಲೀಟರ್ K15C ಪೆಟ್ರೋಲ್ ಎಂಜಿನ್ ಮೈಲ್ಡ್-ಹೈಬ್ರಿಡ್ ಸಿಸ್ಟಂ 102 ಬಿಹೆಚ್‍ಪಿ ಪವರ್ ಮತ್ತು 137 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ಮಾರುತಿ ಎಸ್‍ಯುವಿಗಳಿಗೆ ಭಾರೀ ಬೇಡಿಕೆ: 2 ಲಕ್ಷಕ್ಕೂ ಹೆಚ್ಚು ಬುಕ್ಕಿಂಗ್

ಇದರೊಂದಿಗೆ 5-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಮತ್ತು 6-ಸ್ಪೀಡ್ ಟಾರ್ಕ್ ಕರ್ನವಾಟರ್ ಆಟೋಮ್ಯಾಟಿಕ್ ಯುನಿಟ್ ನೊಂದಿಗೆ ಜೋಡಿಸಲಾಗಿದೆ. ಎಡಬ್ಲ್ಯೂಡಿ ಸಿಸ್ಟಂ ಅನ್ನು ಮ್ಯಾನುವಲ್ ರೂಪಾಂತರಗಳೊಂದಿಗೆ ಮಾತ್ರ ನೀಡಲಾಗುತ್ತದೆ.

ಮಾರುತಿ ಎಸ್‍ಯುವಿಗಳಿಗೆ ಭಾರೀ ಬೇಡಿಕೆ: 2 ಲಕ್ಷಕ್ಕೂ ಹೆಚ್ಚು ಬುಕ್ಕಿಂಗ್

ಇನ್ನು ಇಂಟೆಲಿಜೆಂಟ್ ಎಲೆಕ್ಟ್ರಿಕ್ ಹೈಬ್ರಿಡ್ ಸಿಸ್ಟಮ್ ಎಂದೂ ಕರೆಯಲ್ಪಡುವ ಸ್ಟ್ರಾಂಗ್-ಹೈಬ್ರಿಡ್ ಆವೃತ್ತಿಯು ಐಸಿಇ ಯುನಿಟ್ ಮೂಲಕ ಸಂಯೋಜಿತವಾಗಿ 115 ಬಿಹೆಚ್‍ಪಿ ಪವರ್ ಅನ್ನು ಉತ್ಪಾದಿಸುತ್ತದೆ. ಇದನ್ನು ಇ-ಸಿವಿಟಿ ಯೊಂದಿಗೆ ಮಾತ್ರ ಜೋಡಿಸಲಾಗಿದೆ. ಈ ಪವರ್‌ಟ್ರೇನ್‌ಗಾಗಿ 27.97 ಕಿ.ಮೀ ಮೈಲೇಜ್ ನೀಡುತ್ತದೆ ಎಂದು ಮಾರುತಿ ಸುಜುಕಿ ಕಂಪನಿ ಹೇಳಿಕೊಂಡಿದೆ.

ಮಾರುತಿ ಎಸ್‍ಯುವಿಗಳಿಗೆ ಭಾರೀ ಬೇಡಿಕೆ: 2 ಲಕ್ಷಕ್ಕೂ ಹೆಚ್ಚು ಬುಕ್ಕಿಂಗ್

ಈ ಹೊಸ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಎಸ್‍ಯುವಿಯು 4,345 ಎಂಎಂ ಉದ್ದ, 1,795 ಎಂಎಂ ಅಗಲ ಮತ್ತು 1,645 ಎಂಎಂ ಎತ್ತರ ಮತ್ತು 2,600 ಎಂಎಂ ವ್ಹೀಲ್‌ಬೇಸ್ ಹೊಂದಿದೆ. ಈ 5-ಸೀಟರ್ ಎಸ್‍ಯುವಿಯು 45-ಲೀಟರ್ ಸಾಮರ್ಥ್ಯದ ಫ್ಯೂಯಲ್ ಟ್ಯಾಂಕ್ ಅನ್ನು ಹೊಂದಿದೆ.

ಮಾರುತಿ ಎಸ್‍ಯುವಿಗಳಿಗೆ ಭಾರೀ ಬೇಡಿಕೆ: 2 ಲಕ್ಷಕ್ಕೂ ಹೆಚ್ಚು ಬುಕ್ಕಿಂಗ್

ಈ ಹೊಸ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಎಸ್‍ಯುವಿ ಮಾದರಿಯು ವಿನ್ಯಾಸದ ಬಗ್ಗೆ ಹೇಳುವುದಾದರೆ, ಇದು ಹೈರೈಡರ್‌ನೊಂದಿಗೆ ಕೆಲವು ಬಾಹ್ಯ ವಿಶೇಷಣಗಳನ್ನು ಹಂಚಿಕೊಂಡದೆ. ಹೈರೈಡರ್‌ನಿಂದ ಗ್ರಾಂಡ್ ವಿಟಾರಾ ದೊಡ್ಡ ವ್ಯತ್ಯಾಸವೆಂದರೆ ಅದರ ಮುಂಭಾಗದ ವಿನ್ಯಾಸ. ವಿದೇಶಿ ಮಾರುಕಟ್ಟೆಯಲ್ಲಿ ಮಾರಾಟವಾಗುವ ಸುಜುಕಿ ಎಸ್-ಕ್ರಾಸ್‌ಗೆ ಹೋಲುವಂತೆ ಕಾಣುತ್ತಿದೆ,

ಮಾರುತಿ ಎಸ್‍ಯುವಿಗಳಿಗೆ ಭಾರೀ ಬೇಡಿಕೆ: 2 ಲಕ್ಷಕ್ಕೂ ಹೆಚ್ಚು ಬುಕ್ಕಿಂಗ್

ಗ್ರ್ಯಾಂಡ್ ವಿಟಾರಾ ಎಸ್‍ಯುವಿಯ ಒಳಭಾಗವು ಗ್ರ್ಯಾಂಡ್ ವಿಟಾರಾ ಹೈರೈಡರ್‌ನಂತೆಯೇ ಕಾಣುತ್ತದೆ ಮತ್ತು ಬಣ್ಣದ ಯೋಜನೆಗಳು ಮಾತ್ರ ಪ್ರಮುಖ ವ್ಯತ್ಯಾಸವಾಗಿದೆ. ಎರಡೂ ಒಂದೇ ಸ್ಟೀಯರಿಂಗ್ ವೀಲ್ ಅನ್ನು ಪಡೆಯುತ್ತವೆ, ಹೊಸ ಮಾರುತಿ ಸುಜುಕಿ ಮಾದರಿಗಳಲ್ಲಿ ಕಂಡುಬರುತ್ತದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್, ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಎಲ್ಲಾ ಸ್ವಿಚ್‌ಗಿಯರ್‌ಗಳು ಎರಡೂ ಎಸ್‍ಯುವಿಗಳಲ್ಲಿ ಒಂದೇ ಆಗಿರುತ್ತವೆ.

ಮಾರುತಿ ಎಸ್‍ಯುವಿಗಳಿಗೆ ಭಾರೀ ಬೇಡಿಕೆ: 2 ಲಕ್ಷಕ್ಕೂ ಹೆಚ್ಚು ಬುಕ್ಕಿಂಗ್

ಈ ಹೊಸ ಗ್ರ್ಯಾಂಡ್ ವಿಟಾರಾದ ಎಸ್‍ಯುವಿಯಲ್ಲಿ ಫುಲ್ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, 360-ಡಿಗ್ರಿ ಕ್ಯಾಮೆರಾ, HUD, Apple CarPlay ಮತ್ತು Android Auto ಜೊತೆಗೆ ಒಂಬತ್ತು-ಇಂಚಿನ SmartPlay Pro+ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ಪ್ಯಾಡಲ್ ಶಿಫ್ಟರ್‌ಗಳು, ಸುಜುಕಿ ಕನೆಕ್ಟ್ ಟೆಲಿಮ್ಯಾಟಿಕ್ಸ್, ಮತ್ತು ಡ್ರೈವ್ ಮೋಡ್ ಗಳನ್ನು ಒಳಗೊಂಡಿದೆ. ಈ ಮಾರುತಿ ಗ್ರ್ಯಾಂಡ್ ವಿಟಾರಾ ಭಾರತೀಯ ಮಾರುಕಟ್ಟೆಯಲ್ಲಿ ಹ್ಯುಂಡೈ ಕ್ರೆಟಾ ಮತ್ತು ಕಿಯಾ ಸೆಲ್ಟೋಸ್ ಎಸ್‍ಯುವಿಗಳಿಗೆ ಪೈಪೋಟಿ ನೀಡುತ್ತದೆ.

ಮಾರುತಿ ಎಸ್‍ಯುವಿಗಳಿಗೆ ಭಾರೀ ಬೇಡಿಕೆ: 2 ಲಕ್ಷಕ್ಕೂ ಹೆಚ್ಚು ಬುಕ್ಕಿಂಗ್

ಇನ್ನು ಹೊಸ ಮಾರುತಿ ಸುಜುಕಿ ಬ್ರೆಝಾ ಎಸ್‍ಯುವಿಯ ಬಗ್ಗೆ ಹೇಳುವುದಾದರೆ. ಈ ರಿಫ್ರೆಶ್ ಮಾಡಲಾದ ಕಾಂಪ್ಯಾಕ್ಟ್ ಎಸ್‍ಯುವಿ ನಾಲ್ಕು ರೂಪಾಂತರಗಳಲ್ಲಿ ಲಭ್ಯವಿದೆ, ಬ್ರೆಝಾ ಕಾರು ಮಾದರಿಯು ಮಾರುತಿ ಸುಜುಕಿ ಕಾರು ಮಾರಾಟದಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದ್ದು, ಇದುವರೆಗೆ ಇದು ದೇಶಿಯ ಮಾರುಕಟ್ಟೆಯಲ್ಲಿ ಸುಮಾರು 7.50 ಲಕ್ಷ ಯುನಿಟ್ ಮಾರಾಟ ದಾಖಲೆ ಹೊಂದಿದೆ.

ಮಾರುತಿ ಎಸ್‍ಯುವಿಗಳಿಗೆ ಭಾರೀ ಬೇಡಿಕೆ: 2 ಲಕ್ಷಕ್ಕೂ ಹೆಚ್ಚು ಬುಕ್ಕಿಂಗ್

ಭಾರತದಲ್ಲಿ ಮೊದಲ ಬಾರಿಗೆ 2016ರಲ್ಲಿ ಬಿಡುಗಡೆಯಾಗಿದ್ದ ಬ್ರೆಝಾ ಕಾರು ಕಡಿಮೆ ಅವಧಿಯಲ್ಲಿ ಅತಿ ಹೆಚ್ಚು ಮಾರಾಟ ದಾಖಲೆ ಹೊಂದಿದ್ದು, ಗ್ರಾಹಕರ ಬೇಡಿಕೆಯೆಂತೆ ಇದುವರೆಗೆ ಹಲವಾರು ಬದಲಾವಣೆಗಳೊಂದಿಗೆ ಸ್ಥಿರ ಮಾರುಕಟ್ಟೆ ಕಾಯ್ದುಕೊಂಡಿದೆ. ಮಾರುತಿ ಸುಜುಕಿಯು 2022ರ ಮಾದರಿಯಲ್ಲಿ ಈ ಹಿಂದೆಂದಿಗಿಂತಲೂ ಹೆಚ್ಚಿನ ಬದಲಾವಣೆಗಳನ್ನು ಬಿಡುಗಡೆಗೊಳಿಸಿತ್ತು.

ಮಾರುತಿ ಎಸ್‍ಯುವಿಗಳಿಗೆ ಭಾರೀ ಬೇಡಿಕೆ: 2 ಲಕ್ಷಕ್ಕೂ ಹೆಚ್ಚು ಬುಕ್ಕಿಂಗ್

ಈ ಹೊಸ ಎಸ್‍ಯುವಿ ಮಾದರಿಯ ಎಲ್ಎಕ್ಸ್‌ಐ, ವಿಎಕ್ಸ್ಐ, ಜೆಡ್ಎಕ್ಸ್ಐ ಮತ್ತು ಜೆಡ್ಎಕ್ಸ್ಐ ವೆಂಟ್‌ಗಳನ್ನು ಹೊಂದಿದೆ. ಈ ಹೊಸ ಮಾರುತಿ ಸುಜುಕಿ ಬ್ರೆಝಾ ಎಸ್‍ಯುವಿ ಮಾದರಿಯು ಈ ಬಾರಿ ಸಾಕಷ್ಟು ನವೀಕೃತ ಸೌಲಭ್ಯಗಳನ್ನು ಹೊಂದಿದೆ. ಇದು ಒಂದೇ ಎಂಜಿನ್ ಆಯ್ಕೆ ಪಡೆದುಕೊಂಡಿದೆ.

ಮಾರುತಿ ಎಸ್‍ಯುವಿಗಳಿಗೆ ಭಾರೀ ಬೇಡಿಕೆ: 2 ಲಕ್ಷಕ್ಕೂ ಹೆಚ್ಚು ಬುಕ್ಕಿಂಗ್

ಈ 1.5 ಲೀಟರ್ ಕೆ15ಸಿ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಎಂಜಿನ್ ಕಂಪನಿಯು ಮೈಲ್ಡ್ ಹೈಬ್ರಿಡ್ ತಂತ್ರಜ್ಞಾನ ಬಳಕೆ ಮಾಡಿದ್ದು, ಇದು ಕಾರು ಚಾಲನೆ ಆರಂಭಕ್ಕೂ ಮುನ್ನ ಎಂಜಿನ್ ಆರಂಭಕ್ಕೆ ಪವರ್ ಪೂರೈಕೆ ಮೂಲಕ ಇಂಧನ ವ್ಯರ್ಥವಾಗುವುದನ್ನು ತಡೆದು ಮೈಲೇಜ್ ಪ್ರಮಾಣದಲ್ಲಿ ಹೆಚ್ಚಳಕ್ಕೆ ಸಹಕಾರಿಯಾಗುತ್ತದೆ.ಪೆಟ್ರೋಲ್ ಮಾದರಿಗಳಲ್ಲಿ ಮೈಲ್ಡ್ ಹೈಬ್ರಿಡ್ ತಂತ್ರಜ್ಞಾನ ಬಳಕೆ ಆರಂಭಿಸಿದೆ.

ಮಾರುತಿ ಎಸ್‍ಯುವಿಗಳಿಗೆ ಭಾರೀ ಬೇಡಿಕೆ: 2 ಲಕ್ಷಕ್ಕೂ ಹೆಚ್ಚು ಬುಕ್ಕಿಂಗ್

ಈ ಹೊಸ ಬ್ರೆಝಾ ಕಾರಿನಲ್ಲಿ ಕಂಪನಿಯು ಈ ಹಿಂದಿನ ಟಾರ್ಕ್ ಕನ್ವರ್ಟಕ್ ಗೇರ್‌ಬಾಕ್ಸ್ ಬದಲಾಗಿ 6-ಸ್ಪೀಡ್ ಆಟೋಮ್ಯಾಟಿಕ್ ಮತ್ತು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆಯನ್ನು ನೀಡಿದೆ. ಈ ಹೊಸ ಎಂಜಿನ್ ಮೂಲಕ ಕಾರು 104.6 ಬಿಎಚ್‌ಪಿ ಮತ್ತು 137 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

ಮಾರುತಿ ಎಸ್‍ಯುವಿಗಳಿಗೆ ಭಾರೀ ಬೇಡಿಕೆ: 2 ಲಕ್ಷಕ್ಕೂ ಹೆಚ್ಚು ಬುಕ್ಕಿಂಗ್

ಇನ್ನು ಕಂಪನಿಯ ಮಾಹಿತಿ ಪ್ರಕಾರ ಹೊಸ ಬ್ರೆಝಾ ಕಾರಿನ ಪೆಟ್ರೋಲ್ ಆಟೋಮ್ಯಾಟಿಕ್ ಆವೃತ್ತಿಯು ಪ್ರತಿ ಲೀಟರ್‌ಗೆ ಗರಿಷ್ಠ 19.80 ಕಿ.ಮೀ ಮೈಲೇಜ್ ನೀಡಿದರೆ, ಪೆಟ್ರೋಲ್ ಮ್ಯಾನುವಲ್ ಮಾದರಿಯು ಪ್ರತಿ ಲೀಟರ್‌ಗೆ ಗರಿಷ್ಠ 20.15 ಕಿ.ಮೀ ಮೈಲೇಜ್ ಒದಗಿಸುತ್ತದೆ. ಈ ಹೊಸ ಕಾರಿನಲ್ಲಿ ಮತ್ತೊಂದು ಪ್ರಮುಖ ಬದಲಾವಣೆಯೆಂದರೆ ಈ ಹಿಂದಿನ ವಿಟಾರಾ ಬ್ರೆಝಾ ಬ್ಯಾಡ್ಜ್ ಬದಲಾಗಿ ಕಂಪನಿಯು ಇದೀಗ ಕೇವಲ ಬ್ರೆಝಾ ಬ್ಯಾಡ್ಜ್ ಮಾತ್ರ ಬಳಕೆ ಮಾಡಿದೆ.

ಮಾರುತಿ ಎಸ್‍ಯುವಿಗಳಿಗೆ ಭಾರೀ ಬೇಡಿಕೆ: 2 ಲಕ್ಷಕ್ಕೂ ಹೆಚ್ಚು ಬುಕ್ಕಿಂಗ್

ಈ ಹೊಸ ಎಸ್‍ಯುವಿ ಹಿಂದಿನ ಮಾದರಿಗಿಂತ 45 ಎಂಎಂ ಹೆಚ್ಚುವರಿ ಎತ್ತರವನ್ನು ಹೊಂದಿದೆ. ಇನ್ನುಳಿದಂತೆ ಈ ಹೊಸ ಎಸ್‍ಯುವಿ ಈ ಹಿಂದಿನಂತೆ 3,995 ಎಂಎಂ ಉದ್ದಳತೆ, 1,790 ಎಂಎಂ ಅಗಲ, 2,500 ವ್ಹೀಲ್‌ಬೆಸ್ ಹೊಂದಿದ್ದು, ಹೊಸ ಕಾರಿನ ಹೊರ ಮತ್ತು ಒಳ ವಿನ್ಯಾಸದಲ್ಲಿ ಸಾಕಷ್ಟು ಬದಲಾವಣೆ ಪಡೆದುಕೊಂಡಿದೆ.

Article Published On: Saturday, October 29, 2022, 13:29 [IST]
English summary
Maruti grand vitara and brezza combined booking stand at over two lakh units details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+