ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಮಾರುತಿ ಗ್ರ್ಯಾಂಡ್ ವಿಟಾರಾ ಸಿಎನ್‌ಜಿ ಎಸ್‍ಯುವಿ

ಜನಪ್ರಿಯ ಮತ್ತು ದೇಶದ ಅತಿ ದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ಭಾರತದಲ್ಲಿ ಬ್ಯಾಕ್-ಟು-ಬ್ಯಾಕ್ ಕಾರು ಬಿಡುಗಡೆಗಳೊಂದಿಗೆ ತನ್ನ ಉತ್ಪನ್ನ ಪೋರ್ಟ್ಫೋಲಿಯೊವನ್ನು ವೇಗವಾಗಿ ವಿಸ್ತರಿಸುತ್ತಿದೆ. ಇದರಂರೆ ಮಾರುತಿ ಸುಜುಕಿ ತನ್ನ ಬಹುನಿರೀಕ್ಷಿತ ಗ್ರ್ಯಾಂಡ್ ವಿಟಾರಾ ಎಸ್‌ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿತು.

ಇಂಡೋ-ಜಪಾನೀಸ್ ವಾಹನ ತಯಾರಕರು ಬಲೆನೊ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಮತ್ತು XL6 ಎಂಯುವಿಯ CNG ರೂಪಾಂತರಗಳನ್ನು NEXA ಶ್ರೇಣಿಯ ಅಡಿಯಲ್ಲಿ ಪರಿಚಯಿಸಿದರು. ಮಾರುತಿ ಸುಜುಕಿ ಹೊಸದಾಗಿ ಬಿಡುಗಡೆಯಾದ ಗ್ರ್ಯಾಂಡ್ ವಿಟಾರಾ ಎಸ್‍ಯುವಿಯ CNG ರೂಪಾಂತರವನ್ನು ಪ್ರಾರಂಭಿಸುವುದರೊಂದಿಗೆ ತನ್ನ NEXA ಉತ್ಪನ್ನ ಶ್ರೇಣಿಯನ್ನು ಮತ್ತಷ್ಟು ವಿಸ್ತರಿಸಲಿದೆ. ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಸಿಎನ್‌ಜಿ ರೂಪಾಂತರವು ಮುಂದಿನ ತಿಂಗಳು ಬಿಡುಗಡೆಯಾಗಲಿದೆ. ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ ಇ-ಸಿಎನ್‌ಜಿಗಾಗಿ ಈಗಾಗಲೇ ತನ್ನ ಸಿಎನ್‌ಜಿ ಎಸ್‌ಯುವಿಗಾಗಿ ಬುಕ್ಕಿಂಗ್ ಅನ್ನು ತೆರೆದಿದ್ದಾರೆ.

ಇದಲ್ಲದೆ, ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ ಮತ್ತು ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಎರಡೂ ವಿಭಿನ್ನ ಬ್ಯಾಡ್ಜ್‌ಗಳನ್ನು ಹೊಂದಿರುವ ಒಂದೇ ವಾಹನಗಳಾಗಿರುವುದರಿಂದ, ಈ ಎರಡೂ ಎಸ್‌ಯುವಿಗಳ ಬೆಲೆಗಳನ್ನು ಕೆಲವು ಸಾವಿರ ರೂಪಾಯಿಗಳ ಅಂತರ ಇರುತ್ತದೆ. ಮುಂಬರುವ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಎಸ್‌ಯುವಿಯ ಮುಂಬರುವ ಸಿಎನ್‌ಜಿ ಆವೃತ್ತಿಯು ಇದೇ ರೀತಿಯ ಬೆಲೆ ವ್ಯತ್ಯಾಸವನ್ನು ಹೊಂದಿದೆ ಎಂದು ನಾವು ನಿರೀಕ್ಷಿಸಬಹುದು. ಇದಲ್ಲದೆ ಮುಂಬರುವ ಸಿಎನ್‌ಜಿ ಆವೃತ್ತಿಯ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಎಸ್‌ಯುವಿಯನ್ನು ಕೇವಲ ಎರಡು ಟ್ರಿಮ್ ಹಂತಗಳಲ್ಲಿ ನೀಡಲಾಗುತ್ತದೆ.

ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಎಸ್‌ಯುವಿಯ ಮುಂಬರುವ ಸಿಎನ್‌ಜಿ ಆವೃತ್ತಿಯಲ್ಲಿ ನೀಡಲಾದ ಎರಡು ಟ್ರಿಮ್ ಹಂತಗಳು 'ಡೆಲ್ಟಾ' ಮತ್ತು 'ಝೀಟಾ' ಟ್ರಿಮ್‌ಗಳಾಗಿರಬಹುದು. ಇದಲ್ಲದೆ, ಈ ಟ್ರಿಮ್ ಮಟ್ಟಗಳ ಆಧಾರದ ಮೇಲೆ CNG ರೂಪಾಂತರಗಳಿಗೆ ನಾವು 1 ಲಕ್ಷ ರೂಪಾಯಿಗಳಷ್ಟು ದುಬಾರಿಯಾಗಿರಬಹುದು ಎಂದು ನಿರೀಕ್ಷಿಸುತ್ತೇವೆ. ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಎಸ್‌ಯುವಿಯ ಮುಂಬರುವ ಸಿಎನ್‌ಜಿ ಆವೃತ್ತಿಯು ಅದೇ 1.5-ಲೀಟರ್ ನ್ಯಾಚುರಲ್ 4-ಸಿಲಿಂಡರ್ ಎಂಜಿನ್‌ ಅನ್ನು ಹೊಂದಿದೆ,

ಇದೇ ಎಂಜಿನ್ ಮಾರುತಿ ಸುಜುಕಿ ಎರ್ಟಿಗಾ ಎಸ್-ಸಿಎನ್‌ಜಿ ಮತ್ತು ಮಾರುತಿ ಸುಜುಕಿ ಎಕ್ಸ್‌ಎಲ್ 6 ಕಾರುಗಳಲ್ಲಿ ಲಭ್ಯವಿದೆ. ಈ ಸಿಎನ್‌ಜಿ 87 ಬಿಹೆಚ್‍ಪಿ ಪವರ್ ಮತ್ತು 121.5 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಗ್ರ್ಯಾಂಡ್ ವಿಟಾರಾ ಎರಡು ಪವರ್‌ಟ್ರೇನ್ ಆಯ್ಕೆಗಳಲ್ಲಿ ಲಭ್ಯವಿದೆ. ಈ ಎಸ್‍ಯುವಿಯು 1.5-ಲೀಟರ್ K15C ಪೆಟ್ರೋಲ್ ಎಂಜಿನ್ ಮೈಲ್ಡ್-ಹೈಬ್ರಿಡ್ ಸಿಸ್ಟಂ ಮತ್ತು 1.5-ಲೀಟರ್ TNGA ಪೆಟ್ರೋಲ್ ಮೋಟರ್ ಸ್ಟ್ರಾಂಗ್-ಹೈಬ್ರಿಡ್ ಸಿಸ್ಟಂ ಅನ್ನು ಒಳಗೊಂಡಿದೆ.

ಇದರಲ್ಲಿ 1.5-ಲೀಟರ್ K15C ಪೆಟ್ರೋಲ್ ಎಂಜಿನ್ ಮೈಲ್ಡ್-ಹೈಬ್ರಿಡ್ ಸಿಸ್ಟಂ 102 ಬಿಹೆಚ್‍ಪಿ ಪವರ್ ಮತ್ತು 137 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಇದರಲ್ಲಿ 5-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಮತ್ತು 6-ಸ್ಪೀಡ್ ಟಾರ್ಕ್ ಕರ್ನವಾಟರ್ ಆಟೋಮ್ಯಾಟಿಕ್ ಯುನಿಟ್ ಅನ್ನು ಜೋಡಿಸಲಾಗಿದೆ. ಇನ್ನು ಎಡಬ್ಲ್ಯೂಡಿ ಸಿಸ್ಟಂ ಅನ್ನು ಮ್ಯಾನುವಲ್ ರೂಪಾಂತರಗಳಲ್ಲಿ ಮಾತ್ರ ನೀಡಲಾಗುತ್ತಿದೆ. ಇನ್ನು ಇಂಟೆಲಿಜೆಂಟ್ ಎಲೆಕ್ಟ್ರಿಕ್ ಹೈಬ್ರಿಡ್ ಸಿಸ್ಟಂ ಎಂದೂ ಕರೆಯಲ್ಪಡುವ ಸ್ಟ್ರಾಂಗ್-ಹೈಬ್ರಿಡ್ ಆವೃತ್ತಿಯು ಐಸಿಇ ಯುನಿಟ್ ಮೂಲಕ ಸಂಯೋಜಿತವಾಗಿ 115 ಬಿಹೆಚ್‍ಪಿ ಪವರ್ ಅನ್ನು ಉತ್ಪಾದಿಸುತ್ತದೆ.

ಇದನ್ನು ಇ-ಸಿವಿಟಿ ಯುನಿಟ್ ನೊಂದಿಗೆ ಮಾತ್ರ ಜೋಡಿಸಲಾಗಿದೆ. ಈ ಪವರ್‌ಟ್ರೇನ್‌ಗಾಗಿ 27.97 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ ಎಂದು ಕಂಪನಿ ಹೇಳಿದೆ. ಈ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಎಸ್‍ಯುವಿಯು 4,345 ಎಂಎಂ ಉದ್ದ, 1,795 ಎಂಎಂ ಅಗಲ ಮತ್ತು 1,645 ಎಂಎಂ ಎತ್ತರ ಮತ್ತು 2,600 ಎಂಎಂ ವ್ಹೀಲ್‌ಬೇಸ್ ಅನ್ನು ಹೊಂದಿದೆ. ಈ 5-ಸೀಟರ್ ಎಸ್‍ಯುವಿಯು 45-ಲೀಟರ್ ಸಾಮರ್ಥ್ಯದ ಫ್ಯೂಯಲ್ ಟ್ಯಾಂಕ್ ಅನ್ನು ಒಳಗೊಂಡಿದೆ.

ಇದನ್ನು ಇ-ಸಿವಿಟಿ ಯುನಿಟ್ ನೊಂದಿಗೆ ಮಾತ್ರ ಜೋಡಿಸಲಾಗಿದೆ. ಈ ಪವರ್‌ಟ್ರೇನ್‌ಗಾಗಿ 27.97 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ. ಈ ಮಾರುತಿ ಗ್ರ್ಯಾಂಡ್ ವಿಟಾರಾ ಎಸ್‍ಯುವಿಯು 4,345 ಎಂಎಂ ಉದ್ದ, 1,795 ಎಂಎಂ ಅಗಲ ಮತ್ತು 1,645 ಎಂಎಂ ಎತ್ತರ ಮತ್ತು 2,600 ಎಂಎಂ ವ್ಹೀಲ್‌ಬೇಸ್ ಅನ್ನು ಹೊಂದಿದೆ. ಈ 5-ಸೀಟರ್ ಎಸ್‍ಯುವಿಯು 45-ಲೀಟರ್ ಸಾಮರ್ಥ್ಯದ ಫ್ಯೂಯಲ್ ಟ್ಯಾಂಕ್ ಅನ್ನು ಒಳಗೊಂಡಿದೆ. ಸೈಡ್ ಬಾಡಿ ಪ್ಯಾನೆಲ್‌ಗಳು, ಟೈಲ್‌ಗೇಟ್ ಮತ್ತು ಇಂಟಿಗ್ರೇಟೆಡ್ ಟೈಲ್ ಲ್ಯಾಂಪ್‌ಗಳೊಂದಿಗೆ ಹಿಂಭಾಗದ ಬಂಪರ್ ಕೂಡ ಹೈರೈಡರ್‌ಗೆ ಹೋಲುತ್ತವೆ.

Most Read Articles

Kannada
English summary
Maruti grand vitara cng suv india launch soon details
Story first published: Tuesday, November 29, 2022, 19:18 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X