ಬಿಡುಗಡೆಗೆ ಸಜ್ಜಾದ ಅತಿ ಹೆಚ್ಚು ಮೈಲೇಜ್ ನೀಡುವ ಮಾರುತಿ ಗ್ರ್ಯಾಂಡ್ ವಿಟಾರಾ

ದೇಶದ ಅತಿ ದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ತನ್ನ ಬಹುನಿರೀಕ್ಷಿತ ಗ್ರ್ಯಾಂಡ್ ವಿಟಾರಾ ಎಸ್‌ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಈಗಾಗಲೇ ಅನಾವರಣಗೊಳಿಸಿದೆ. ಇದೀಗ ಮಾರುತಿ ಸುಜುಕಿ ಕಂಪನಿಯು ಈ ಹೊಸ ಗ್ರ್ಯಾಂಡ್ ವಿಟಾರಾ ಎಸ್‌ಯುವಿಯನ್ನು ಬಿಡುಗಡೆಗೊಳಿಸಲು ಸಜ್ಜಾಗಿದೆ.

ಬಿಡುಗಡೆಗೆ ಸಜ್ಜಾದ ಅತಿ ಹೆಚ್ಚು ಮೈಲೇಜ್ ನೀಡುವ ಮಾರುತಿ ಗ್ರ್ಯಾಂಡ್ ವಿಟಾರಾ

ಈ ಹೊಸ ಮಾರುತಿ ಗ್ರ್ಯಾಂಡ್ ವಿಟಾರಾ ಎಸ್‌ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಸೆಪ್ಟೆಂಬರ್ 26 ರಂದು ಬಿಡುಗಡೆಯಾಗಲಿದೆ. ಈ ಎಸ್‍ಯುವಿಗಾಗಿ ಕಂಪನಿಯು ಈ ತಿಂಗಳ ಆರಂಭದಲ್ಲಿ 53,000 ಕ್ಕೂ ಹೆಚ್ಚು ಬುಕಿಂಗ್‌ಗಳನ್ನು ಪಡೆದುಕೊಂಡಿದೆ ಆಸಕ್ತ ಖರೀದಿದಾರರು ರೂ.11,000 ಮೊತ್ತವನ್ನು ಪಾವತಿಸಿ ಮಾರುತಿ ಗ್ರ್ಯಾಂಡ್ ವಿಟಾರಾ ಎಸ್‌ಯುವಿಯನ್ನು ಬುಕ್ ಮಾಡಬಹುದು.ಈ ಹೊಸ ಮಾರುತಿ ಗ್ರ್ಯಾಂಡ್ ವಿಟಾರಾ ಎಸ್‌ಯುವಿಯನ್ನು ಸುಜುಕಿ ತನ್ನ ಗ್ಲೋಬಲ್-ಸಿ ಪ್ಲಾಟ್‌ಫಾರ್ಮ್ ಅನ್ನು ಬಳಸಿಕೊಂಡು ಅಭಿವೃದ್ಧಿಪಡಿಸಿದೆ ಮತ್ತು ವಿನ್ಯಾಸಗೊಳಿಸಿದೆ.

ಬಿಡುಗಡೆಗೆ ಸಜ್ಜಾದ ಅತಿ ಹೆಚ್ಚು ಮೈಲೇಜ್ ನೀಡುವ ಮಾರುತಿ ಗ್ರ್ಯಾಂಡ್ ವಿಟಾರಾ

ಮಾರುತಿ ಗ್ರಾಂಡ್ ವಿಟಾರಾ ಎರಡು ಎಂಜಿನ್ ಆಯ್ಕೆಗಳಲ್ಲಿ ನೀಡಲಾಗುವುದು. ಇದರಲ್ಲಿ ಒಂದು ಮೈಲ್ಡ್ ಹೈಬ್ರಿಡ್ ಮತ್ತು ಇನ್ನೊಂದು ಸೆಲ್ಫ್ ಚಾರ್ಜಿಂಗ್ ಪ್ರಬಲ ಹೈಬ್ರಿಡ್ ಆಗಿದೆ. ಇದರಲ್ಲಿ ಮೈಲ್ಡ್ ಹೈಬ್ರಿಡ್ ಆಯ್ಕೆಯು ಅದೇ 1.5 ಲೀಟರ್ K15C ಡ್ಯುಯಲ್ ಜೆಟ್ ಮೋಟರ್‌ನಿಂದ ಪವರ್ ಪಡೆಯುತ್ತದೆ.

ಬಿಡುಗಡೆಗೆ ಸಜ್ಜಾದ ಅತಿ ಹೆಚ್ಚು ಮೈಲೇಜ್ ನೀಡುವ ಮಾರುತಿ ಗ್ರ್ಯಾಂಡ್ ವಿಟಾರಾ

ಅದು ಕಂಪನಿಯ ಶ್ರೇಣಿಯಲ್ಲಿ ಎರ್ಟಿಗಾ, ಬ್ರೆಝಾ, ಸಿಯಾಜ್ ನಲ್ಲಿಯು ಲಭ್ಯವಿದೆ. ಈ ಎಂಜಿನ್ 103 ಎಚ್‌ಪಿ ಪವರ್ ಮತ್ತು 137 ಎನ್‌ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಮೈಲ್ಡ್ ಹೈಬ್ರಿಡ್ ಆಯ್ಕೆಯನ್ನು 6 ಆಟೋಮ್ಯಾಟಿಕ್ ಗೇರ್ ಬಾಕ್ಸ್ ಮತ್ತು 5 ಮ್ಯಾನುವಲ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ನೀಡಲಾಗುವುದು.

ಬಿಡುಗಡೆಗೆ ಸಜ್ಜಾದ ಅತಿ ಹೆಚ್ಚು ಮೈಲೇಜ್ ನೀಡುವ ಮಾರುತಿ ಗ್ರ್ಯಾಂಡ್ ವಿಟಾರಾ

AWD ಆಯ್ಕೆಯನ್ನು ಆಟೋಮ್ಯಾಟಿಕ್ ಗೇರ್ ಬಾಕ್ಸ್ ನೊಂದಿಗೆ ಮಾತ್ರ ನೀಡಲಾಗುತ್ತದೆ. ಸ್ಟ್ರಾಂಗ್ ಹೈಬ್ರಿಡ್ ಗ್ರ್ಯಾಂಡ್ ವಿಟಾರಾ 1.5 ಲೀಟರ್ ಟಿಎನ್‌ಜಿಎ ಪೆಟ್ರೋಲ್ ಎಂಜಿನ್‌ನಿಂದ ನಿಯಂತ್ರಿಸಲ್ಪಡುತ್ತದೆ, ಇದನ್ನು ಟೊಯೊಟಾ ಅಭಿವೃದ್ಧಿಪಡಿಸಿದೆ. ಇದು 92.4 ಬಿಹೆಚ್‍ಪಿ ಪವರ್ ಮತ್ತು 122 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ಬಿಡುಗಡೆಗೆ ಸಜ್ಜಾದ ಅತಿ ಹೆಚ್ಚು ಮೈಲೇಜ್ ನೀಡುವ ಮಾರುತಿ ಗ್ರ್ಯಾಂಡ್ ವಿಟಾರಾ

ಮತ್ತೊಂದೆಡೆ ಎಲೆಕ್ಟ್ರಿಕ್ ಮೋಟಾರು 80.2 ಹೆಚ್‍ಪಿ ಪವರ್ ಮತ್ತು 141 ಎನ್ಎಂ ಟಾರ್ಕ್ ಸಾಮರ್ಥ್ಯವನ್ನು ಹೊಂದಿದ್ದು, ಇದು 115.56 ಬಿಹೆಚ್‍ಪಿ ಸಂಯೋಜಿತ ಗರಿಷ್ಠ ಉತ್ಪಾದನೆಯನ್ನು ನೀಡುತ್ತದೆ. ಸ್ಟ್ರಾಂಗ್ ಹೈಬ್ರಿಡ್ ಸೆಟಪ್ ಅನ್ನು eCVT ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದ್ದು, ಇದು ಮುಂಭಾಗದ ವೀಲ್‌ಗಳಿಗೆ ಪವರ್ ಅನ್ನು ಸಪ್ಲೈ ಮಾಡುತ್ತದೆ. ಸ್ಟ್ರಾಂಗ್ ಹೈಬ್ರಿಡ್ ಗ್ರ್ಯಾಂಡ್ ವಿಟಾರಾ 27.97km/l (ARAI) ಮೈಲೇಜ್ ನೀಡುತ್ತದೆ.

ಬಿಡುಗಡೆಗೆ ಸಜ್ಜಾದ ಅತಿ ಹೆಚ್ಚು ಮೈಲೇಜ್ ನೀಡುವ ಮಾರುತಿ ಗ್ರ್ಯಾಂಡ್ ವಿಟಾರಾ

ಹೊಸ ಮಾರುತಿ ಗ್ರ್ಯಾಂಡ್ ವಿಟಾರಾದೊಂದಿಗೆ ಒಟ್ಟು 10 ರೂಪಾಂತರಗಳು ಆಫರ್‌ನಲ್ಲಿವೆ. ಇದು ಮೈಲ್ಡ್ ಹೈಬ್ರಿಡ್‌ಗೆ 8 ಮತ್ತು ಸ್ಟ್ರಾಂಗ್ ಹೈಬ್ರಿಡ್‌ಗೆ 2 ಆಗಿದೆ. ಮಾರುತಿ ಗ್ರ್ಯಾಂಡ್ ವಿಟಾರಾ ಮೈಲ್ಡ್ ಹೈಬ್ರಿಡ್‌ ರೂಪಾಂತರಗಳು - ಸಿಗ್ಮಾ MT, ಡೆಲ್ಟಾ MT, ಝೀಟಾ MT, ಆಲ್ಫಾ MT, ಆಲ್ಫಾ 4WD MT, ಡೆಲ್ಟಾ AT, ಝೀಟಾ AT ಮತ್ತು ಆಲ್ಫಾ AT ಆದರೆ, ಸ್ಟ್ರಾಂಗ್ ಹೈಬ್ರಿಡ್ ರೂಪಾಂತರಗಳೆಂದರೆ Zeta+ CVT ಮತ್ತು Alpha+ CVT ಆಗಿದೆ. ಗ್ರಾಂಡ್ ವಿಟಾರಾ ಸ್ಟ್ರಾಂಗ್ ಹೈಬ್ರಿಡ್‌ನ ಒಟ್ಟು ವಾಹನ ತೂಕ 1,755 ಕೆಜಿಯಾಗಿದೆ.

ಬಿಡುಗಡೆಗೆ ಸಜ್ಜಾದ ಅತಿ ಹೆಚ್ಚು ಮೈಲೇಜ್ ನೀಡುವ ಮಾರುತಿ ಗ್ರ್ಯಾಂಡ್ ವಿಟಾರಾ

ಈ ಹೊಸ ಮಾರುತಿ ಗ್ರ್ಯಾಂಡ್ ವಿಟಾರಾ ಈಗ ಅದರ ವಿಭಾಗದಲ್ಲಿ ಹೆಚ್ಚು ಇಂಧನ-ಸಮರ್ಥ ಮಾದರಿಯಾಗಿದೆ, ಇದು ಜಾಗತಿಕ ಮಾರುಕಟ್ಟೆಗಳಲ್ಲಿ ಮಾರಾಟದಲ್ಲಿರುವ ಹೊಸ ಜನರೇಷನ್ ಎಸ್-ಕ್ರಾಸ್‌ಗೆ ಆಧಾರವಾಗಿದೆ.

ಬಿಡುಗಡೆಗೆ ಸಜ್ಜಾದ ಅತಿ ಹೆಚ್ಚು ಮೈಲೇಜ್ ನೀಡುವ ಮಾರುತಿ ಗ್ರ್ಯಾಂಡ್ ವಿಟಾರಾ

ಅನುಪಾತದಲ್ಲಿ, ಹೊಸ ಗ್ರಾಂಡ್ ವಿಟಾರಾ 4,345 ಎಂಎಂ ಉದ್ದ, 1,795 ಎಂಎಂ ಅಗಲ ಮತ್ತು 1,645 ಎಂಎಂ ಎತ್ತರ ಮತ್ತು 2,600 ಎಂಎಂ ವ್ಹೀಲ್‌ಬೇಸ್ ಹೊಂದಿದೆ. ಈ 5-ಸೀಟರ್ ಎಸ್‍ಯುವಿಯು 45-ಲೀಟರ್ ಸಾಮರ್ಥ್ಯದ ಫ್ಯೂಯಲ್ ಟ್ಯಾಂಕ್ ಅನ್ನು ಹೊಂದಿರುತ್ತದೆ.

ಬಿಡುಗಡೆಗೆ ಸಜ್ಜಾದ ಅತಿ ಹೆಚ್ಚು ಮೈಲೇಜ್ ನೀಡುವ ಮಾರುತಿ ಗ್ರ್ಯಾಂಡ್ ವಿಟಾರಾ

ಇನ್ನು ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಒಳಾಂಗಣವನ್ನು ಎರಡು ವಿಭಿನ್ನ ಥೀಮ್‌ಗಳಲ್ಲಿ ನೀಡಲಾಗಿದೆ, ಇದು ಗ್ರಾಹಕರು ಆಯ್ಕೆ ಮಾಡುವ ಪವರ್‌ಟ್ರೇನ್ ಆಯ್ಕೆಯನ್ನು ಅವಲಂಬಿಸಿರುತ್ತದೆ. ಮೈಲ್ಡ್ ಹೈಬ್ರಿಡ್ ಪವರ್‌ಟ್ರೇನ್ ಗ್ರ್ಯಾಂಡ್ ವಿಟಾರಾ ಮಾಲೀಕರಿಗೆ ಸಿಲ್ವರ್ ಅಕ್ಸೆಂಟ್‌ಗಳೊಂದಿಗೆ ಇಂಟೀರಿಯರ್ ಬ್ಲ್ಯಾಕ್ & ಬೋರ್ಡೆಕ್ಸ್ ಥೀಮ್ ಹೊಂದಿದೆ.

ಬಿಡುಗಡೆಗೆ ಸಜ್ಜಾದ ಅತಿ ಹೆಚ್ಚು ಮೈಲೇಜ್ ನೀಡುವ ಮಾರುತಿ ಗ್ರ್ಯಾಂಡ್ ವಿಟಾರಾ

ಈ ಹೊಸ ಎಸ್‍ಯುವಿಯಲ್ಲಿ ಅತ್ಯಾಧುನಿಕ ಸುರಕ್ಷತಾ ಫೀಚರ್ಸ್ ಗಳನ್ನು ಹೊಂದಿರುತ್ತದೆ. ಇದರಲ್ಲಿ 6 ಏರ್ ಬ್ಯಾಗ್ ಗಳು, 360 ಕ್ಯಾಮೆರಾ ವ್ಯೂ, ರಿವರ್ಸ್ ಪಾರ್ಕಿಂಗ್ ಕ್ಯಾಮೆರಾ, ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್ (TPMS), ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ (ESP), ಹಿಲ್ ಹೋಲ್ಡ್ ಅಸಿಸ್ಟ್, ಹಿಲ್ ಡಿಸೆಂಟ್ ಕಂಟ್ರೋಲ್, 3-ಪಾಯಿಂಟ್ ELR ಸೀಟ್ ಬೆಲ್ಟ್‌ಗಳು ಮತ್ತು ಇಂಜಿನ್ ಇಮೊಬಿಲೈಸರ್ ನಂತಹ ರಕ್ಷತಾ ಫೀಚರ್ಸ್ ಗಳನ್ನು ಹೊಂದಿವೆ.

ಬಿಡುಗಡೆಗೆ ಸಜ್ಜಾದ ಅತಿ ಹೆಚ್ಚು ಮೈಲೇಜ್ ನೀಡುವ ಮಾರುತಿ ಗ್ರ್ಯಾಂಡ್ ವಿಟಾರಾ

ಹೈರೈಡರ್‌ನೊಂದಿಗೆ ಅದರ ಕೆಲವು ಬಾಹ್ಯ ವಿಶೇಷಣಗಳನ್ನು ಹಂಚಿಕೊಂಡರೆ, ಗ್ರ್ಯಾಂಡ್ ವಿಟಾರಾ ಕೆಲವು ವಿಶಿಷ್ಟ ವೈಶಿಷ್ಟ್ಯಗಳನ್ನು ಸಹ ಪಡೆಯುತ್ತದೆ. ಇದು ಹೊಸ ಮುಂಭಾಗದ ಷಡ್ಭುಜೀಯ ಗ್ರಿಲ್ ವಿನ್ಯಾಸ, LED ಹೆಡ್‌ಲ್ಯಾಂಪ್‌ಗಳು ಮತ್ತು LED DRL ಗಳಲ್ಲಿ LED ಟೈಲ್ ಲ್ಯಾಂಪ್‌ಗಳು ಮತ್ತು ಹೊಸ ಮುಂಭಾಗ ಮತ್ತು ಹಿಂಭಾಗದ ಬಂಪರ್‌ಗಳಲ್ಲಿ ಕಂಡುಬರುತ್ತದೆ. ವೈಡ್ ಏರ್ ವೆಂಟ್‌ಗಳು, ರೂಫ್ ರೈಲ್‌ಗಳು, ಆಟೋ ಫೋಲ್ಡಿಂಗ್ ORVM ಗಳು ಮತ್ತು ರೂಫ್‌ಲೈನ್‌ನಲ್ಲಿ ಕ್ರೋಮ್ ಅಸ್ಸೆಂಟ್ ಗಳು ಸಹ ಅದರ ಬಾಹ್ಯ ಮೇಕ್ಅಪ್‌ನ ಒಂದು ಭಾಗವಾಗಿರುತ್ತದೆ.

ಬಿಡುಗಡೆಗೆ ಸಜ್ಜಾದ ಅತಿ ಹೆಚ್ಚು ಮೈಲೇಜ್ ನೀಡುವ ಮಾರುತಿ ಗ್ರ್ಯಾಂಡ್ ವಿಟಾರಾ

ಬಿಡುಗಡೆಯಾಗಲಿರುವ ಹೊಸ ಮಾರುತಿ ಗ್ರ್ಯಾಂಡ್ ವಿಟಾರಾ ಎಸ್‍ಯುವಿಯು ಅಧಿಕ ಮೈಲೇಜ್, ಆಕರ್ಷಕ ವಿನ್ಯಾಸ ಮತ್ತು ಅತ್ಯಾಧುನಿಕ ಫೀಚರ್ಸ್ ಗಳೊಂದಿಗೆ ಹೆಚ್ಚಿನ ಗ್ರಾಹಕರನ್ನು ಸೆಳೆಯಬಹುದು. ಮಾರುತಿ ಸುಜುಕಿ ಕಂಪನಿಯ ಹೊಸ ಗ್ರ್ಯಾಂಡ್ ವಿಟಾರಾ ಎಸ್‍ಯುವಿಯನ್ನು ಇದೇ ತಿಂಗಳ 26 ರಂದು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ.

Most Read Articles

Kannada
English summary
Maruti suzuki all set to launch all new grand vitara suv on september 26 2022 details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X