Just In
Don't Miss!
- News
ಪಲ್ಲವಿ ಡೇ ಬಳಿಕ ಮತ್ತೊಬ್ಬ ಯುವ ರೂಪದರ್ಶಿ ಆತ್ಮಹತ್ಯೆ
- Sports
ಮಹಿಳಾ ಟಿ20 ಚಾಲೆಂಜ್: ವೆಲಾಸಿಟಿ ವಿರುದ್ಧ ಗೆದ್ದ ಟ್ರೈಲ್ಬ್ಲೇಜರ್ಸ್, ಆದ್ರೂ ಫೈನಲ್ ಮಿಸ್
- Finance
ಮೇ 26ರಂದು ವಾಣಿಜ್ಯ ಬೆಳೆ ಅಡಿಕೆ, ಕಾಫಿ, ಮೆಣಸು, ಏಲಕ್ಕಿ ಪೇಟೆ ಧಾರಣೆ
- Movies
ಬಾಲಕೃಷ್ಣ 107ನೇ ಸಿನಿಮಾದ ಟೈಟಲ್ 'ಜೈ ಬಾಲಯ್ಯ'
- Technology
ಸ್ಯಾಮ್ಸಂಗ್ ಗ್ಯಾಲಕ್ಸಿ M13 ಸ್ಮಾರ್ಟ್‌ಫೋನ್ ಬಿಡುಗಡೆ! ವಿಶೇಷತೆ ಏನು?
- Lifestyle
ಕಿಚನ್ ಟಿಪ್ಸ್: ಫ್ರಿಡ್ಜ್ನಲ್ಲಿ ಆಹಾರಗಳನ್ನು ಹೀಗೆ ಇಟ್ಟರೆ ಆರೋಗ್ಯಕ್ಕೆ ಕುತ್ತು ಎಚ್ಚರ..!
- Education
Karnataka SSLC Revaluation 2022 : ಮರುಮೌಲ್ಯಮಾಪನ ಮತ್ತು ಮರುಎಣಿಕೆಗೆ ಅರ್ಜಿ ಆಹ್ವಾನ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಹೀಗಿರಲಿದೆ ವಿನೂತನ ಸೌಲಭ್ಯ ಹೊತ್ತು ಬಂದಿರುವ ಮಾರುತಿ ಸುಜುಕಿ ಬಲೆನೊ ಫೇಸ್‌ಲಿಫ್ಟ್
ಮಾರುತಿ ಸುಜುಕಿ ಕಂಪನಿಯು ಹೊಸ ಬಲೆನೊ ಫೇಸ್‌ಲಿಫ್ಟ್ ಮಾದರಿಯನ್ನು ಇದೇ ತಿಂಗಳು 23ರಂದು ಬಿಡುಗಡೆ ಮಾಡುತ್ತಿದ್ದು, ಹೊಸ ಕಾರು ಬಿಡುಗಡೆಗೂ ಕಂಪನಿಯು ಫೇಸ್‌ಲಿಫ್ಟ್ ಮಾದರಿಯ ಉತ್ಪಾದನಾ ಆವೃತ್ತಿಯ ಚಿತ್ರಗಳನ್ನು ಹಂಚಿಕೊಂಡಿದೆ.

ಹೊಸ ಬಲೆನೊ ಕಾರು ಮಾದರಿಯು ಈ ಬಾರಿ ಹಲವಾರು ಹೊಸ ತಾಂತ್ರಿಕ ಸೌಲಭ್ಯಗಳೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿದ್ದು, ಹ್ಯಾಚ್‌ಬ್ಯಾಕ್ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಹ್ಯುಂಡೈ ಐ20 ಮತ್ತು ಟಾಟಾ ಆಲ್‌ಟ್ರೊಜ್ ಮಾದರಿಗಳಿಗೆ ಮತ್ತಷ್ಟು ಪೈಪೋಟಿ ನೀಡುವ ನೀರಿಕ್ಷೆಯಿದೆ.

ಬಲೆನೊ ಫೇಸ್‌ಲಿಫ್ಟ್ ಮಾದರಿಯ ವಿನ್ಯಾಸವು ಸಾಕಷ್ಟು ಬದಲಾವಣೆಗೊಂಡಿದ್ದು, ಫ್ಲಾಟರ್ ಕ್ಲಾಮ್‌ಶೆಲ್ ಬಾನೆಟ್ ಮತ್ತು ಪರಿಷ್ಕೃತ ಮುಂಭಾಗದ ಬಂಪರ್ ಜೊತೆಗೆ ದೊಡ್ಡ ಫಾಗ್ ಲ್ಯಾಂಪ್ ಹೌಸಿಂಗ್‌ಗಳನ್ನು ಹೊಂದಿದೆ. ಸೈಡ್ ಪ್ರೊಫೈಲ್ ಹಿಂದಿನ ಮಾದರಿಯಂತೆಯೇ ಕಾಣುತ್ತದೆ, ಕ್ರೋಮ್ ಸ್ಟ್ರಿಪ್ ಅನ್ನು ಹೊರತುಪಡಿಸಿ, ಈಗ ಕೆಳಗಿನ ವಿಂಡೋ ಲೈನ್‌ನಿಂದ ಹಿಂದಿನ ಕ್ವಾರ್ಟರ್ ಗ್ಲಾಸ್‌ಗೆ ಚಲಿಸುತ್ತದೆ.

ಹಿಂಭಾಗದಲ್ಲಿ ಹೊಸ ಬಲೆನೊ ಹೊಸ ಟೈಲ್‌ಗೇಟ್ ವಿನ್ಯಾಸ, ಹೊಸ ಸಿ-ಆಕಾರದ ಎಲ್‌ಇಡಿ ಟೈಲ್-ಲೈಟ್‌ಗಳು ಮತ್ತು ರಿಪ್ರೊಫೈಲ್ಡ್ ರಿಯರ್ ಬಂಪರ್‌ನೊಂದಿಗೆ ಬರುತ್ತದೆ. ವರದಿಗಳ ಪ್ರಕಾರ, ಹೊಸ ಮಾರುತಿ ಬಲೆನೊ ಪರ್ಲ್ ಆರ್ಕ್ಟಿಕ್ ವೈಟ್, ಸ್ಪ್ಲೆಂಡಿಡ್ ಸಿಲ್ವರ್, ಗ್ರಾಂಡ್ಯೂರ್ ಗ್ರೇ, ಸೆಲೆಸ್ಟಿಯಲ್ ಬ್ಲೂ, ಓಪ್ಯುಲೆಂಟ್ ರೆಡ್ ಮತ್ತು ಲಕ್ಸ್ ಬೀಜ್ ಎಂಬ ಆರು ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಿರುತ್ತದೆ.

ಹೊಸ ವೈಶಿಷ್ಟ್ಯತೆಗಳಲ್ಲಿ ಮರುವಿನ್ಯಾಸಗೊಳಿಸಲಾದ ಡ್ಯಾಶ್‌ಬೋರ್ಡ್, ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್‌ಪ್ಲೇ ಸಂಪರ್ಕದೊಂದಿಗೆ 9.0-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಹಿಂದಿನ ಮಾದರಿಗಳಿಂತೆ ಎಸಿ ವೆಂಟ್‌ಗಳು, ಫಾಸ್ಟ್ ಚಾರ್ಜಿಂಗ್ ಯುಎಸ್‌ಬಿ ಪೋರ್ಟ್, ಹೆಡ್ ಅಪ್ ಡಿಸ್ಪ್ಲೇ (ಎಚ್‌ಯುಡಿ) ಅನ್ನು ಒಳಗೊಂಡಿದೆ.

ಮಾರುತಿ ಸುಜುಕಿ ಕಂಪನಿಯು ಈ ಬಾರಿ ಹೊಸ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಮಾದರಿಯಲ್ಲಿ ಹೆಚ್ಚಿನ ಸುರಕ್ಷತೆಗೆ ಒತ್ತು ನೀಡಿದ್ದು, ಉನ್ನತ ರೂಪಾಂತರದಲ್ಲಿ ಒಟ್ಟು 6 ಏರ್‌ಬ್ಯಾಗ್‌ಗಳ ಜೊತೆಗೆ ಸುರಕ್ಷತಾ ಸಾಧನಗಳನ್ನು ನವೀಕರಿಸಿದೆ.

ಹೆಚ್ಚುವರಿ ಏರ್‌ಬ್ಯಾಗ್ ಸೌಲಭ್ಯದ ಜೊತೆಗೆ ಹೊಸ ಬಲೆನೊದಲ್ಲಿ ಹೊಸ ಸುರಕ್ಷತಾ ವೈಶಿಷ್ಟ್ಯಗಳಲ್ಲಿ ಹಿಲ್ ಹೋಲ್ಡ್ ಅಸಿಸ್ಟ್, ಕ್ರೂಸ್ ಕಂಟ್ರೋಲ್, ಎಬಿಎಸ್, ಇಎಸ್‌ಪಿ ಮತ್ತು ಇಬಿಡಿ ಸಹ ಸೇರ್ಪಡೆಯಾಗಲಿದ್ದು, ಸುಜುಕಿ ಕಾರ್ ಕನೆಕ್ಟ್ ತಂತ್ರಜ್ಞಾನದಲ್ಲೂ ಸಹ ಸುಧಾರಿತ ವೈಶಿಷ್ಟ್ಯತೆಗಳನ್ನು ಸೇರ್ಪಡೆಗೊಳಿಸಿದೆ.

ಕಾರ್ ಕನೆಕ್ಟ್ ಫೀಚರ್ಸ್ ಕುರಿತಾಗಿ ಹೊಸ ಟೀಸರ್ ಸಹ ಬಿಡುಗಡೆ ಮಾಡಿರುವ ಮಾರುತಿ ಸುಜುಕಿ ಕಂಪನಿಯು ಒಂದೇ ಸೂರಿನಡಿ 40ಕ್ಕೂ ಹೆಚ್ಚು ತಾಂತ್ರಿಕ ಸೌಲಭ್ಯಗಳನ್ನು ಸ್ಮಾರ್ಟ್‌ಫೋನ್ ಮೂಲಕವೇ ನಿರ್ವಹಣೆ ಮಾಡಬಹುದಾಗಿದ್ದು, ಅಮೆಜಾನ್ ಅಲೆಕ್ಸಾ ವಾಯ್ಸ್ ಕಮಾಂಡ್ ತಾಂತ್ರಿಕ ಸೌಲಭ್ಯಗಳನ್ನು ನಿಯಂತ್ರಿಸಬಹುದು.

ಜೊತೆಗೆ ತುರ್ತುಸೇವೆಗಳಿಗಾಗಿ ಸುಧಾರಿತ ಟೆಲಿಮ್ಯಾಟಿಕ್ಸ್ ಪರಿಹಾರಗಳನ್ನು ಒಳಗೊಂಡಿರಲಿದ್ದು, ಸುಜುಕಿ ಕಾರ್ ಕನೆಕ್ಟ್ ಫೀಚರ್ಸ್‍ಗಳನ್ನು ಸ್ಮಾರ್ಟ್‌ಫೋನ್ ಅಪ್ಲಿಕೇಷನ್ ಮೂಲಕ ಇಂಧನ ಲಭ್ಯತೆ, ಸಾಗಬಹುದಾದ ದೂರ, ಓಡೋಮೀಟರ್, ಕಾರ್ ಡಯಾಗ್ನೋಸಿಸ್, ಒಳಗೊಂಡಂತೆ ವಿವಿಧ ಮಾಹಿತಿಗಳ ಸಂಪೂರ್ಣ ಡೇಟಾ ಒದಗಿಸಲಿದೆ.

ಕನೆಕ್ಟೆಡ್ ಕಾರ್ ಟೆಕ್ ವೈಶಿಷ್ಟ್ಯದ ಜೊತೆಗೆ ಮಾರುತಿ ಕಂಪನಿಯು ಹೊಸ ಬಲೆನೊದಲ್ಲಿ 9-ಇಂಚಿನ ಡಿಜಿಟಲ್ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ, 360 ಡಿಗ್ರಿ ವ್ಯೂ ಕ್ಯಾಮೆರಾ ಮತ್ತು ಹೆಡ್-ಅಪ್ ಡಿಸ್ಪ್ಲೇ (HUD) ಪರದೆ ಸೇರಿದಂತೆ ಈ ವಿಭಾಗದ ಮೊದಲ ವೈಶಿಷ್ಟ್ಯಗಳನ್ನು ಸಹ ನೀಡುತ್ತದೆ.

1.2 ಲೀಟರ್ ಡ್ಯುಯಲ್ ಜೆಟ್ ಮೈಲ್ಡ್ ಹೈಬ್ರಿಡ್ ತಂತ್ರಜ್ಞಾನ ಪ್ರೇರಿತ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 1.2 ಲೀಟರ್ ಪೆಟ್ರೋಲ್ ಮಾದರಿಯು 89 ಬಿಎಚ್‌ಪಿ ಮತ್ತು 113 ಎನ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಹೊಸ ಮಾದರಿಯು ಬಾಹ್ಯ ತಾಂತ್ರಿಕ ಅಂಶಗಳಲ್ಲಿ ಹಲವು ಬದಲಾವಣೆಗಳನ್ನು ಪಡೆದುಕೊಂಡರು ಎಂಜಿನ್ ಆಯ್ಕೆಯು ಈ ಮಾದರಿಯಲ್ಲಿರುವಂತೆ ಮುಂದುವರಿಸಲಾಗಿದ್ದು, 2020ರಲ್ಲಿ ಜಾರಿಗೆ ಹೊಸ ಬಂದ ಹೊಸ ಬಿಎಸ್ 6 ಮಾನದಂಡದ ನಂತರ ಮಾರುತಿ ಸುಜುಕಿ ಕಂಪನಿಯು ಸಂಪೂರ್ಣವಾಗಿ ಡೀಸೆಲ್ ಕಾರುಗಳ ಮಾರಾಟವನ್ನು ಸ್ಥಗಿತಗೊಳಿಸಿದೆ.

ಕಂಪನಿಯು ಸದ್ಯ ಪೆಟ್ರೋಲ್, ಸ್ಮಾರ್ಟ್ ಹೈಬ್ರಿಡ್ ಹೊಂದಿರುವ ಪೆಟ್ರೋಲ್ ಮತ್ತು ಸಿಎನ್‌ಜಿ ಮಾದರಿಗಳನ್ನು ಮಾತ್ರ ಮಾರಾಟ ಮಾಡುತ್ತಿದ್ದು, ಸ್ಮಾರ್ಟ್ ಹೈಬ್ರಿಡ್ ಪೆಟ್ರೋಲ್ ಮಾದರಿಗಳ ಮೂಲಕ ಡೀಸೆಲ್ ಕಾರುಗಳಲ್ಲಿದ್ದ ಮೈಲೇಜ್ ಪ್ರಮಾಣವನ್ನು ಒದಗಿಸಲು ಯತ್ನಿಸಿರುವ ಮಾರುತಿ ಸುಜುಕಿ ಕಂಪನಿಯು ಸಿಎನ್‌ಜಿ ಮಾದರಿಗಳ ಮೇಲೆ ಹೆಚ್ಚಿನ ಗಮನಹರಿಸಿದೆ.

ಮಾರುತಿ ಸುಜುಕಿ ಕಂಪನಿಯು ಈಗಾಗಲೇ ಪ್ರಮುಖ ಕಾರುಗಳಲ್ಲಿ ಸಿಎನ್‌ಜಿ ಮಾದರಿಗಳನ್ನು ಮಾರಾಟ ಮಾಡುತ್ತಿದ್ದು, ಇದುವರೆಗೆ ಸುಮಾರು ಎರಡು ಲಕ್ಷಕ್ಕೂ ಹೆಚ್ಚು ಸಿಎನ್‌ಜಿ ಕಾರುಗಳನ್ನು ಮಾರಾಟ ಮಾಡಿದೆ. ಇದೀಗ ಹೊಸದಾಗಿ ಬಿಡುಗಡೆಯಾಗಲಿರುವ 2022ರ ಬಲೆನೊ ಮಾದರಿಯಲ್ಲೂ ಸಿಎನ್‌ಜಿ ಮಾದರಿಗಳನ್ನು ಪರಿಚಯಿಸುವ ಸಾಧ್ಯತೆಗಳಿದ್ದು, ಹೊಸ ಕಾರುಗಳು ಪ್ರಮುಖ ಬದಲಾವಣೆಗಳೊಂದಿಗೆ ಉತ್ತಮ ಬೇಡಿಕೆ ಪಡೆದುಕೊಳ್ಳಲಿದೆ.

ಪ್ರಸ್ತುತ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ಬಲೆನೊ ಮಾದರಿಯು ದೆಹಲಿ ಎಕ್ಸ್ ಶೋರೂಂ ಪ್ರಕಾರ ಆರಂಭಿಕವಾಗಿ ರೂ. 6.14 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 9.66 ಲಕ್ಷ ತನಕ ಬೆಲೆ ಹೊಂದಿದ್ದು, ಹೊಸ ಬಲೆನೊ ಮಾದರಿಯು ಪ್ರಸ್ತುತ ಮಾದರಿಗಿಂತಲೂ ಸುಮಾರು ರೂ. 30 ಸಾವಿರದಿಂದ ರೂ. 60 ಸಾವಿರ ತನಕ ಹೆಚ್ಚುವರಿ ಬೆಲೆ ಹೊಂದಲಿದೆ.