ಮಾರುತಿ ಸುಜುಕಿ 2022ರ ಬ್ರೆಝಾ ಕಾರಿನ ಮೈಲೇಜ್ ಮತ್ತು ಹೊಸ ಸುರಕ್ಷಾ ಸೌಲಭ್ಯಗಳಿವು..

ಮಾರುತಿ ಸುಜುಕಿ ಕಂಪನಿಯ ಜನಪ್ರಿಯ ಕಾರುಗಳಲ್ಲಿ ಬ್ರೆಝಾ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಸಹ ಅಗ್ರಸ್ಥಾನದಲ್ಲಿದ್ದು, ಬ್ರೆಝಾ ಮಾದರಿಯು ಇದೀಗ 2022ರ ಆವೃತ್ತಿಯೊಂದಿಗೆ ಮತ್ತಷ್ಟು ಪ್ರೀಮಿಯಂ ಆವೃತ್ತಿಯಾಗಿ ಮಾರುಕಟ್ಟೆ ಪ್ರವೇಶಿಸಿದೆ.

ಮಾರುತಿ ಸುಜುಕಿ ಬ್ರೆಝಾ ಹೊಸ ಕಾರಿನ ಸುರಕ್ಷಾ ಸೌಲಭ್ಯಗಳಿವು..

2022ರ ಬ್ರೆಝಾ ಮಾದರಿಯಲ್ಲಿ ಈ ಹಿಂದೆಂದಿಗಿಂತಲೂ ಹೆಚ್ಚಿನ ಬದಲಾವಣೆಗಳನ್ನು ಪರಿಚಯಿಸಿದ್ದು, ಹೊಸ ಕಾರು ಮಾದರಿಯ ಎಲ್ಎಕ್ಸ್‌ಐ, ವಿಎಕ್ಸ್ಐ, ಜೆಡ್ಎಕ್ಸ್ಐ ಮತ್ತು ಜೆಡ್ಎಕ್ಸ್ಐ ವೆಂಟ್‌ಗಳನ್ನು ಹೊಂದಿದೆ. ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕ ಮಾದರಿಯು ರೂ. 7.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 13.96 ಲಕ್ಷ ಬೆಲೆ ಪಡೆದುಕೊಂಡಿದ್ದು, ಹೊಸ ಕಾರಿನಲ್ಲಿ 1.5 ಲೀಟರ್ ಕೆ15ಸಿ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಎಂಜಿನ್ ಅನ್ನು ಜೋಡಣೆ ಮಾಡಲಾಗಿದೆ.

ಮಾರುತಿ ಸುಜುಕಿ ಬ್ರೆಝಾ ಹೊಸ ಕಾರಿನ ಸುರಕ್ಷಾ ಸೌಲಭ್ಯಗಳಿವು..

ಹೊಸ ಕಾರಿನಲ್ಲಿರುವ ಎಂಜಿನ್ ಆಯ್ಕೆಯನ್ನು ಮಾರುತಿ ಸುಜುಕಿ ಕಂಪನಿಯು ಈಗಾಗಲೇ ಎರ್ಟಿಗಾ ಮತ್ತು ಎಕ್ಸ್‌ಎಲ್6 ಮಾದರಿಯಲ್ಲೂ ಜೋಡಣೆ ಮಾಡಲಾಗಿದ್ದು, 1.5 ಲೀಟರ್ ಕೆ15ಸಿ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಎಂಜಿನ್‌ನಲ್ಲಿ ಕಂಪನಿಯು ಮೈಲ್ಡ್ ಹೈಬ್ರಿಡ್ ತಂತ್ರಜ್ಞಾನ ಬಳಕೆ ಮಾಡಿದೆ.

ಮಾರುತಿ ಸುಜುಕಿ ಬ್ರೆಝಾ ಹೊಸ ಕಾರಿನ ಸುರಕ್ಷಾ ಸೌಲಭ್ಯಗಳಿವು..

ಮೈಲ್ಡ್ ಹೈಬ್ರಿಡ್ ತಂತ್ರಜ್ಞಾನ ಕಾರು ಚಾಲನೆ ಆರಂಭಕ್ಕೂ ಮುನ್ನ ಎಂಜಿನ್‌ಗೆ ಶಕ್ತಿ ಪೂರೈಕೆ ಮೂಲಕ ಇಂಧನ ವ್ಯರ್ಥವಾಗುವುದನ್ನು ತಡೆದು ಮೈಲೇಜ್ ಪ್ರಮಾಣದಲ್ಲಿ ಹೆಚ್ಚಳಕ್ಕೆ ಸಹಕಾರಿಯಾಗಲಿದ್ದು, ಈ ಹಿಂದಿನ ಡೀಸೆಲ್ ಕಾರುಗಳಲ್ಲಿದ್ದ ಮೈಲೇಜ್ ಪ್ರಮಾಣವನ್ನು ಪೆಟ್ರೋಲ್ ಮಾದರಿಗಳಲ್ಲೂ ಕಾಯ್ದುಕೊಳ್ಳುವ ಉದ್ದೇಶದಿಂದ ಪೆಟ್ರೋಲ್ ಮಾದರಿಗಳಲ್ಲಿ ಮೈಲ್ಡ್ ಹೈಬ್ರಿಡ್ ತಂತ್ರಜ್ಞಾನ ಬಳಕೆ ಆರಂಭಿಸಿದೆ.

ಮಾರುತಿ ಸುಜುಕಿ ಬ್ರೆಝಾ ಹೊಸ ಕಾರಿನ ಸುರಕ್ಷಾ ಸೌಲಭ್ಯಗಳಿವು..

ಹೊಸ ಕಾರಿನಲ್ಲಿ ಕಂಪನಿಯು ಈ ಹಿಂದಿನ ಟಾರ್ಕ್ ಕನ್ವರ್ಟಕ್ ಗೇರ್‌ಬಾಕ್ಸ್ ಬದಲಾಗಿ ಹೊಸ 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಮತ್ತು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆಯನ್ನು ನೀಡಿದ್ದು, ಈ ಮೂಲಕ ಕಾರಿನ ಎಂಜಿನ್ 104.6 ಬಿಎಚ್‌ಪಿ ಮತ್ತು 137 ಎನ್ಎಂ ಉತ್ಪಾದನೆ ಮೂಲಕ ಉತ್ತಮ ಇಂಧನ ದಕ್ಷತೆ ಕಾಯ್ದುಕೊಂಡಿದೆ.

ಮಾರುತಿ ಸುಜುಕಿ ಬ್ರೆಝಾ ಹೊಸ ಕಾರಿನ ಸುರಕ್ಷಾ ಸೌಲಭ್ಯಗಳಿವು..

ಹೊಸ ಬ್ರೆಝಾ ಕಾರಿನ ಪೆಟ್ರೋಲ್ ಆಟೋಮ್ಯಾಟಿಕ್ ಆವೃತ್ತಿಯು ಪ್ರತಿ ಲೀಟರ್‌ಗೆ ಗರಿಷ್ಠ 19.80 ಕಿ.ಮೀ ಮೈಲೇಜ್ ನೀಡಿದರೆ, ಪೆಟ್ರೋಲ್ ಮ್ಯಾನುವಲ್ ಮಾದರಿಯು ಪ್ರತಿ ಲೀಟರ್‌ಗೆ ಗರಿಷ್ಠ 20.15 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ. ಹೊಸ ಕಾರಿನಲ್ಲಿ ಸದ್ಯಕ್ಕೆ ಪೆಟ್ರೋಲ್ ಮಾದರಿಯನ್ನು ಮಾತ್ರ ಬಿಡುಗಡೆ ಮಾಡಿರುವ ಮಾರುತಿ ಸುಜುಕಿ ಕಂಪನಿಯು ಶೀಘ್ರದಲ್ಲಿಯೇ ಸಿಎನ್‌ಜಿ ಮಾದರಿಯನ್ನು ಸಹ ಬಿಡುಗಡೆ ಮಾಡಬಹುದಾಗಿದೆ.

ಮಾರುತಿ ಸುಜುಕಿ ಬ್ರೆಝಾ ಹೊಸ ಕಾರಿನ ಸುರಕ್ಷಾ ಸೌಲಭ್ಯಗಳಿವು..

ಮಾರುತಿ ಸುಜುಕಿಯು ಈಗಾಗಲೇ ತನ್ನ ಪ್ರಮುಖ ಕಾರುಗಳಲ್ಲಿ ಸಿಎನ್‌ಜಿ ವರ್ಷನ್ ಪರಿಚಯಿಸಿದ್ದು, ಬ್ರೆಝಾ ಮಾದರಿಯಲ್ಲೂ ಕೂಡಾ ಫ್ಯಾಕ್ಟರಿ ಫಿಟೆಡ್ ಸಿಎನ್‌ಜಿ ಬಿಡುಗಡೆಗಾಗಿ ಸಿದ್ದವಾಗುತ್ತಿದೆ. ಮಾರುತಿ ಸುಜುಕಿ ಪ್ರಮುಖ ಸಿಎನ್‌ಜಿ ಮಾದರಿಗಳು ಪ್ರತಿ ಕೆಜಿ ಸಿಎನ್‌‌ಜಿಗೆ 25 ಕಿ.ಮೀ ನಿಂದ 36 ಕಿ.ಮೀ ತನಕ ಮೈಲೇಜ್ ವೈಶಿಷ್ಟ್ಯತೆ ಹೊಂದಿದ್ದು, ಬ್ರೆಝಾ ಕೂಡಾ ಕೂಡಾ ಮೈಲೇಜ್ ಪ್ರೇರಿತ ಸಿಎನ್‌ಜಿ ಮಾದರಿಯಾಗಲಿದೆ.

ಮಾರುತಿ ಸುಜುಕಿ ಬ್ರೆಝಾ ಹೊಸ ಕಾರಿನ ಸುರಕ್ಷಾ ಸೌಲಭ್ಯಗಳಿವು..

ಸದ್ಯಕ್ಕೆ ಪೆಟ್ರೋಲ್ ಮಾದರಿಯನ್ನು ಮಾತ್ರ ಹೊಂದಿರುವ ಬ್ರೆಝಾ ಕಾರು ಮಾದರಿಯು ಪ್ರತಿಸ್ಪರ್ಧಿ ಮಾದರಿಗಳಿಗೆ ಪೈಪೋಟಿಯಾಗಿ ಹಲವಾರು ಹೊಸ ಫೀಚರ್ಸ್ ಹೊಂದಿದ್ದು, ಹಳೆಯ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಪ್ರೀಮಿಯಂ ಸೌಲಭ್ಯಗಳನ್ನು ಪಡೆದುಕೊಂಡಿದೆ.

ಮಾರುತಿ ಸುಜುಕಿ ಬ್ರೆಝಾ ಹೊಸ ಕಾರಿನ ಸುರಕ್ಷಾ ಸೌಲಭ್ಯಗಳಿವು..

ಹೊಸ ಕಾರು ಈ ಹಿಂದಿನಂತೆ 3,995 ಎಂಎಂ ಉದ್ದಳತೆ, 1,790 ಎಂಎಂ ಅಗಲ, 2,500 ವ್ಹೀಲ್‌ಬೆಸ್ ಹೊಂದಿದ್ದು, 45 ಎಂಎಂ ಹೆಚ್ಚು ಎತ್ತರದೊಂದಿಗೆ ಒಳ ವಿನ್ಯಾಸದಲ್ಲಿ ಸಾಕಷ್ಟು ಬದಲಾವಣೆ ಪಡೆದುಕೊಂಡಿದೆ.

ಮಾರುತಿ ಸುಜುಕಿ ಬ್ರೆಝಾ ಹೊಸ ಕಾರಿನ ಸುರಕ್ಷಾ ಸೌಲಭ್ಯಗಳಿವು..

ಕಾರಿನ ಮುಂಭಾಗದಲ್ಲಿ ನವೀಕೃತ ಫ್ಲಾಟ್-ಲುಕಿಂಗ್ ಕ್ಲಾಮ್‌ಶೆಲ್ ಬಾನೆಟ್ ನೀಡಲಾಗಿದ್ದು, ಸ್ಕ್ವಾರಿಶ್ ಡ್ಯುಯಲ್-ಎಲ್‌ಇಡಿ ಹೆಡ್‌ಲ್ಯಾಂಪ್ ವಿನ್ಯಾಸವು ಇದೀಗ ಗನ್‌ಮೆಟಲ್ ಶೆಡ್ ಹೊಂದಿರುವ ಗ್ರಿಲ್‌ನೊಂದಿಗೆ ಅಂದವಾಗಿ ವಿಲೀನಗೊಳಿಸಲಾಗಿದೆ. ಹಾಗೆಯೇ ಕಾಂಟ್ರಾಸ್ಟ್ ಬ್ಲ್ಯಾಕ್ ಕ್ಲಾಡಿಂಗ್‌ ಉತ್ತಮವಾಗಿದ್ದು, ಹಿಂಭಾಗದಲ್ಲಿನ ಟೈಲ್‌ಗೇಟ್ ವಿನ್ಯಾಸವನ್ನು ಸಹ ಪರಿಷ್ಕರಿಸಲಾಗಿದೆ.

ಮಾರುತಿ ಸುಜುಕಿ ಬ್ರೆಝಾ ಹೊಸ ಕಾರಿನ ಸುರಕ್ಷಾ ಸೌಲಭ್ಯಗಳಿವು..

ಹೊಸ ಮಾದರಿಯಲ್ಲಿ ಇದೀಗ ಟೈಲ್ ಲ್ಯಾಂಪ್ ಸಹ ಉತ್ತಮ ಹೊರನೋಟ ಹೊಂದಿದ್ದು, ಲೈಸೆನ್ಸ್ ಪ್ಲೇಟ್‌ನ ಮೇಲ್ಭಾಗದ ಮಧ್ಯದಲ್ಲಿ ಬ್ರೆಜ್ಜಾ ಬ್ಯಾಡ್ಜಿಂಗ್ ನೀಡಲಾಗಿದೆ. ಇದರೊಂದಿಗೆ ಹೊಸ ಕಾರಿನ ಬೆಸ್ ವೆರಿಯೆಂಟ್‌ಗಳಲ್ಲಿ ಫ್ಲೋಟಿಂಗ್ ರೂಫ್ ಎಫೆಕ್ಟ್‌ನೊಂದಿಗೆ ಡ್ಯುಯಲ್-ಟೋನ್ ಎಕ್ಸ್‌ಟೀರಿಯರ್ ಶೇಡ್‌ಗಳನ್ನು ಪಡೆಯಲಿದ್ದು, ಇವು ಕಾರಿನ ಉದ್ದಳತೆ ಹೆಚ್ಚು ಕಾಣುವಂತೆ ಮಾಡುತ್ತವೆ.

ಮಾರುತಿ ಸುಜುಕಿ ಬ್ರೆಝಾ ಹೊಸ ಕಾರಿನ ಸುರಕ್ಷಾ ಸೌಲಭ್ಯಗಳಿವು..

ಇನ್ನುಳಿದಂತೆ ಹೊಸ ಕಾರಿನಲ್ಲಿ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಇನ್ಫೋಟೈನ್‌ಮೆಂಟ್ ಸಾಫ್ಟ್‌ವೇರ್ ಮತ್ತು ಇತರೆ ವೈಶಿಷ್ಟ್ಯಗಳನ್ನು ಪ್ರಮುಖ ಮಾದರಿಗಳೊಂದಿಗೆ ಹಂಚಿಕೊಳ್ಳಲಾಗಿದ್ದು, 9.0-ಇಂಚಿನ ಸ್ಮಾರ್ಟ್‌ಪ್ಲೇ ಪ್ರೊ+ ಟಚ್‌ಸ್ಕ್ರೀನ್‌ ಅಳವಡಿಸಲಾಗಿದೆ.

ಮಾರುತಿ ಸುಜುಕಿ ಬ್ರೆಝಾ ಹೊಸ ಕಾರಿನ ಸುರಕ್ಷಾ ಸೌಲಭ್ಯಗಳಿವು..

ಇದರಲ್ಲದೆ ಹೊಸ ಕಾರಿನಲ್ಲಿ ಆರ್ಕಮಿಸ್ ಸೌಂಡ್ ಸಿಸ್ಟಂ, ವೈರ್‌ಲೆಸ್ ಚಾರ್ಜಿಂಗ್, ರಿಯರ್ ಎಸಿ ವೆಂಟ್‌ಗಳು, ವಾಯ್ಸ್ ಕಮಾಂಡ್ ಸಪೋರ್ಟ್, ಕನೆಕ್ಟ್ ಕಾರ್ ಟೆಕ್, ಹೆಡ್ಸ್-ಅಪ್ ಡಿಸ್ಪ್ಲೇ, ಕ್ರೂಸ್ ಕಂಟ್ರೋಲ್, ಆಟೋಮ್ಯಾಟಿಕ್ ಎಸಿ ಕಂಟ್ರೊಲರ್, ಆಂಬಿಯೆಂಟ್ ಲೈಟಿಂಗ್ಸ್, ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್‌ಗಳು, ಕನೆಕ್ಟಿಂಗ್ ಕಾರ್ ಟೆಕ್ ಜೊತೆ ಅಲೆಕ್ಸಾ ವಾಯ್ಸ್ ಕಮಾಂಡ್ ಮತ್ತು ಸನ್‌ರೂಫ್ ಸೌಲಭ್ಯಗಳನ್ನು ನೀಡಿದೆ.

ಮಾರುತಿ ಸುಜುಕಿ ಬ್ರೆಝಾ ಹೊಸ ಕಾರಿನ ಸುರಕ್ಷಾ ಸೌಲಭ್ಯಗಳಿವು..

ಹೊಸ ಕಾರಿನಲ್ಲಿ ಸುರಕ್ಷತೆಗಾಗಿ ಆರು ಏರ್‌ಬ್ಯಾಗ್‌ಗಳ ಜೊತೆಗೆ ಇಎಸ್‌ಪಿ, ಇಬಿಡಿ ಜೊತೆಗೆ ಎಬಿಎಸ್, ಸೆಗ್ಮೆಂಟ್ ಫಸ್ಟ್ 360 ಡಿಗ್ರಿ ಕ್ಯಾಮೆರಾ, ಹಿಲ್-ಹೋಲ್ಡ್ ಅಸಿಸ್ಟ್ ಮತ್ತು ಐಸೋಫಿಕ್ಸ್ ಚೈಲ್ದ್ ಸೀಟ್ ಮೌಂಟ್ ನೀಡಿಲಾಗಿದ್ದು, ಈ ಬಾರಿ ಹೊಸ ಕಾರು ಕ್ರ್ಯಾಶ್ ಟೆಸ್ಟ್‌ನಲ್ಲಿ ಉತ್ತಮ ಸೇಫ್ಟಿ ರೇಟಿಂಗ್ಸ್ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

Article Published On: Friday, July 1, 2022, 13:29 [IST]
English summary
Maruti suzuki brezza mileage and safety packages details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+