Just In
- 6 min ago
ಓಲಾ S1 ಮತ್ತು S1 Pro ನಡುವೆ ಗೊಂದಲವೇ?: ಬೆಲೆ, ಡಿಸೈನ್, ಫೀಚರ್ಸ್ ಬಗೆಗಿನ ಮಾಹಿತಿ ಇಲ್ಲಿದೆ
- 9 min ago
24.90 ಕಿ.ಮೀ ಮೈಲೇಜ್ ನೀಡುವ ಆಲ್ಟೋ ಕೆ10 ಕಾರಿನ ಟಿವಿಸಿ ಬಿಡುಗಡೆಗೊಳಿಸಿದ ಮಾರುತಿ ಸುಜುಕಿ
- 1 hr ago
ಶೀಘ್ರದಲ್ಲಿಯೇ ಬಿಡುಗಡೆಯಾಗಲಿದೆ ನವೀಕೃತ ಮಾರುತಿ ಆಲ್ಟೊ ಕೆ10 ಸಿಎನ್ಜಿ
- 2 hrs ago
ಪೊಲೀಸರಿಗ್ಯಾಕೆ ಬುಲೆಟ್ ಪ್ರೂಫ್ ವಾಹನವಿಲ್ಲ: ಗಣ್ಯರಿಗಿರುವ ಭದ್ರತೆ ಆರಕ್ಷಕರಿಗಿಲ್ಲವೇ? ಕಾರಣ ಇಲ್ಲಿದೆ...
Don't Miss!
- Technology
ವಿಶ್ವ ಛಾಯಾಗ್ರಹಣ ದಿನ: ಈ ಸ್ಮಾರ್ಟ್ಫೋನ್ಗಳು ಫೋಟೋಗ್ರಫಿಗೆ ಸೂಕ್ತ ಎನಿಸಲಿವೆ!
- Sports
ಯುಎಇ ಟಿ20 ಲೀಗ್: 14 ಆಟಗಾರರ ಬಲಿಷ್ಠ ತಂಡ ಪ್ರಕಟಿಸಿದ ದುಬೈ ಕ್ಯಾಪಿಟಲ್ಸ್
- Lifestyle
ಈ ಲಕ್ಷಣಗಳು ನಿಮ್ಮಲ್ಲಿ ಕಂಡುಬಂದರೆ ಕೆಲಸಕ್ಕಂತೂ ಅಲ್ಪ ವಿರಾಮ ನೀಡಲೇಬೇಕು..!
- Movies
ಹೊಸ ಬಿಗ್ಬಾಸ್ಗೆ ನಾಗಾರ್ಜುನ ಪಡೆಯುತ್ತಿರುವ ಸಂಭಾವನೆ ಇಷ್ಟೋಂದಾ?
- Travel
ಮೋಜಿನ ವಾರಾಂತ್ಯದ ಪ್ರವಾಸಕ್ಕಾಗಿ ಇಲ್ಲಿಗೆ ಭೇಟಿ ನೀಡಿ
- News
ಕೃಷ್ಣ ಜನ್ಮಾಷ್ಟಮಿ: ಮುಂಬೈನಲ್ಲಿ ವಿಶ್ವ ದಾಖಲೆ ಬರೆದ ಅತಿ ಎತ್ತರದ ಮಾನವ ಪಿರಮಿಡ್
- Education
Karnataka High Court Recruitment 2022 : 129 ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ
- Finance
ಫೋನ್ ಪೇ, ಗೂಗಲ್ ಪೇ, ಭೀಮ್ App ಬಳಕೆಗೆ ಪೇಮೆಂಟ್ ಶುಲ್ಕ?
ಪ್ರಮುಖ ಕಾರು ಮಾದರಿಗಳ ಬೆಲೆ ಹೆಚ್ಚಳ ಘೋಷಣೆ ಮಾಡಿದ ಮಾರುತಿ ಸುಜುಕಿ
ಆಟೋ ಬಿಡಿಭಾಗಗಳ ವೆಚ್ಚ ಹೆಚ್ಚುತ್ತಿರುವ ಪರಿಣಾಮ ಹೊಸ ವಾಹನಗಳ ಬೆಲೆಯು ನಿರಂತರವಾಗಿ ಏರಿಕೆಯಾಗುತ್ತಿದ್ದು, ಕಾರು ಮಾರಾಟದಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿರುವ ಮಾರುತಿ ಸುಜುಕಿ(Maruti Suzuki) ಕಂಪನಿಯು ಕೂಡಾ ತನ್ನ ಪ್ರಮುಖ ಕಾರು ಮಾದರಿಗಳ ಬೆಲೆ ಹೆಚ್ಚಳ ಘೋಷಣೆ ಮಾಡಿದೆ.

ಕೋವಿಡ್ ಪರಿಣಾಮ ಜಾಗತಿಕ ಮಾರುಕಟ್ಟೆಯಲ್ಲಿ ಆಟೋ ಬಿಡಿಭಾಗಗಳ ಕೊರತೆಯು ಬೆಲೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗುತ್ತಿದ್ದು, ಹೆಚ್ಚುತ್ತಿರುವ ವೆಚ್ಚಗಳ ನಿರ್ವಹಣೆಗಾಗಿ ಆಟೋ ಕಂಪನಿಗಳು ನಿರಂತರವಾಗಿ ಬೆಲೆ ಪರಿಷ್ಕರಣೆ ಮಾಡುತ್ತಿವೆ. ಮಾರುತಿ ಸುಜುಕಿ ಸಹ ಕಳೆದ ಜನವರಿಯಲ್ಲಿ ಬೆಲೆ ಹೆಚ್ಚಳ ಮಾಡಿದ ನಂತರ ಇದೀಗ ಮತ್ತೊಮ್ಮೆ ಬೆಲೆ ಹೆಚ್ಚಳ ಮಾಡಿದೆ.

2022ರರಲ್ಲಿ ಎರಡನೇ ಬಾರಿಗೆ ಮಾರುತಿ ಸುಜುಕಿ ಕಾರುಗಳ ಬೆಲೆಯಲ್ಲಿ ಶೇ. 1ರಿಂದ ಶೇ. 1.30ರಷ್ಟು ಬೆಲೆ ಹೆಚ್ಚಳ ಮಾಡಲಾಗಿದ್ದು, ಕಂಪನಿಯು ವಿವಿಧ ಮಾದರಿಗಳಲ್ಲಿ ಬೆಲೆ ಹೆಚ್ಚಳ ಪಟ್ಟಿಯನ್ನು ಶೀಘ್ರದಲ್ಲಿಯೇ ಬಿಡುಗಡೆ ಮಾಡಲಿದೆ.

ನಿರಂತರ ಬೆಲೆ ಏರಿಕೆ ಪರಿಣಾಮ ವಾಹನ ಮಾಲೀಕತ್ವವು ದಿನದಿಂದ ದಿನಕ್ಕೆ ದುಬಾರಿಯಾಗಿ ಪರಿಣಮಿಸುತ್ತಿದ್ದು, 2021ರಿಂದ ಮಾರುತಿ ಸುಜುಕಿಯು ಐದನೇ ಬಾರಿಗೆ ಬೆಲೆ ಮಾಡಿದಂತಾಗಿದೆ. ಇದರಿದ ಕಳೆದ ಒಂದು ವರ್ಷದಲ್ಲಿ ಮಾರುತಿ ಸುಜುಕಿ ಕಾರುಗಳ ಬೆಲೆಯಲ್ಲಿ ಶೇ.7 ರಿಂದ ಶೇ. 9 ರಷ್ಟು ದುಬಾರಿಯಾಗಿವೆ.

ಹೊಸ ದರಪಟ್ಟಿಯಲ್ಲಿ ಕಂಪನಿಯು ಇತ್ತೀಚೆಗೆ ಬಿಡುಗಡೆಯಾದ ಎರ್ಟಿಗಾ ಫೇಸ್‌ಲಿಫ್ಟ್ ಹೊರತುಪಡಿಸಿ ಉಳಿದೆಲ್ಲಾ ಮಾದರಿಗಳ ಬೆಲೆಯಲ್ಲೂ ಹೆಚ್ಚಳ ಮಾಡಿದ್ದು, ಕೋವಿಡ್‌ಗೂ ಮುನ್ನ ಪ್ರತಿ ಆರು ತಿಂಗಳಿಗೆ ಒಂದು ಬಾರಿ ವಾಹನಗಳ ದರ ಪರಿಷ್ಕರಣೆ ಮಾಡುತ್ತಿದ್ದ ಆಟೋ ಕಂಪನಿಗಳು ಇದೀಗ ಪ್ರತಿ ಮೂರು ತಿಂಗಳಿಗೆ ಒಂದು ಬಾರಿ ದರ ಹೆಚ್ಚಿಸುತ್ತಿವೆ.

ಉತ್ಪಾದನಾ ವೆಚ್ಚಗಳನ್ನು ಸರಿದೂಗಿಸಲು ಪ್ರತಿ ಮೂರು ತಿಂಗಳಿಗೆ ಒಂದು ಬಾರಿ ಬಹುತೇಕ ವಾಹನ ತಯಾರಕ ಕಂಪನಿಗಳು ತಮ್ಮ ವಾಹನಗಳ ಮೂಲ ಬೆಲೆಯಲ್ಲಿ ಶೇ.1 ರಿಂದ ಶೇ.2 ರಷ್ಟು ಬೆಲೆ ಹೆಚ್ಚಿಸುತ್ತಿದ್ದು, ಕಳೆದ ಕೆಲ ತಿಂಗಳಿನಲ್ಲಿ ಬಜೆಟ್ ಕಾರುಗಳ ಬೆಲೆಯಲ್ಲಿ ಸರಾಸರಿಯಾಗಿ ರೂ. 50 ಸಾವಿರದಿಂದ ರೂ.1.20 ಲಕ್ಷದಷ್ಟು ದುಬಾರಿಯಾಗಿವೆ.

ಮಧ್ಯಮ ಗಾತ್ರದ ಕಾರುಗಳ ಬೆಲೆಯಲ್ಲಿ ರೂ. 80 ಸಾವಿರದಿಂದ ರೂ. 1.50 ಲಕ್ಷದವರೆಗೆ ಬೆಲೆ ಹೆಚ್ಚಳವಾಗಿದ್ದು, ವಿದೇಶಿ ಮಾರುಕಟ್ಟೆಗಳಿಂದ ಆಮದುಗೊಳ್ಳುವ ಎಲೆಕ್ಟ್ರಾನಿಕ್ ಸೆಮಿ ಕಂಡಕ್ಟರ್‌ಗಳ ಬೆಲೆ ಹೆಚ್ಚಳವಾಗುತ್ತಿರುವ ಪರಿಣಾಮವೇ ಹೊಸ ವಾಹನ ಖರೀದಿಯು ಮತ್ತಷ್ಟು ಹೊರೆಯಾಗುತ್ತಿದೆ.

ಬಿಡಿಭಾಗಗಳ ಬೆಲೆ ಹೆಚ್ಚಳ ಪರಿಣಾಮ ಕಳೆದ ಜನವರಿಯಲ್ಲಿ ಕೆಲವು ಕಾರುಗಳ ಬೆಲೆ ಏರಿಕೆ ಮಾಡಿದ್ದ ಮಾರುತಿ ಸುಜುಕಿಯು ಇದೀಗ ಮತ್ತೊಮ್ಮೆ ದರ ಹೆಚ್ಚಿಸುತ್ತಿದ್ದು, ಏಪ್ರಿಲ್ 15 ರಿಂದ ಅನ್ವಯವಾಗುವಂತೆ ಹೊಸ ದರ ಪಟ್ಟಿ ಬಿಡುಗಡೆ ಮಾಡಲು ಸಿದ್ದತೆ ನಡೆಸುತ್ತಿದೆ.

ಹೊಸ ಕಾರುಗಳಿಗೆ ಬೇಡಿಕೆ ಹೆಚ್ಚಿದ್ದರೂ ಕೂಡಾ ಬಿಡಿಭಾಗಗಳ ಕೊರತೆ ಹಿನ್ನಲೆಯಲ್ಲಿ ವಾಹನ ಮಾರಾಟದಲ್ಲಿ ಪ್ರಮುಖ ಕಾರು ಕಂಪನಿಗಳು ಹಿನ್ನಡೆ ಅನುಭವಿಸುತ್ತಿದ್ದು, ಜಾಗತಿಕ ಮಾರುಕಟ್ಟೆಯಲ್ಲಿನ ಎಲೆಕ್ಟ್ರಾನಿಕ್ ಚಿಪ್ ಕೊರತೆಯು ಕಾರಿನ ಬೆಲೆ ಹೆಚ್ಚಳಕ್ಕೆ ಕಾರಣವಾಗಿರುವುದಲ್ಲದೆ ವಿತರಣೆ ಅವಧಿಯಲ್ಲೂ ಹೆಚ್ಚಳಕ್ಕೆ ಕಾರಣವಾಗಿದೆ.

ಕೋವಿಡ್ ಅವಧಿಯಲ್ಲಿ ಉಂಟಾದ ಆರ್ಥಿಕ ಬಿಕ್ಕಟ್ಟಿನಿಂದಾಗಿ ವಾಹನ ಬಿಡಿಭಾಗಗಳ ಪೂರೈಕೆ ಸರಪಳಿಯಲ್ಲಿ ಆದ ಅಸ್ತವ್ಯಸ್ತವೇ ಇದೀಗ ಹೊಸ ವಾಹಗಳ ಉತ್ಪಾದನೆ ಕುಂಠಿತಗೊಳ್ಳಲು ಪ್ರಮುಖ ಕಾರಣವಾಗಿದ್ದು, ಸೆಮಿ ಕಂಡಕ್ಟರ್‌ಗಳಿಗಾಗಿ ಭಾರತೀಯ ಆಟೋ ಉದ್ಯಮವು ಸಂಪೂರ್ಣವಾಗಿ ವಿದೇಶಿ ಕಂಪನಿಗಳನ್ನೇ ಅವಲಂಬಿಸಿವೆ.

ಇದೀಗ ಕೋವಿಡ್ ಪರಿಸ್ಥಿತಿ ಸುಧಾರಿಸಿರುವುದರಿಂದ ಆಟೋಮೊಬೈಲ್ ಜೊತೆಗೆ ಪ್ರಮುಖ ಎಲೆಕ್ಟ್ರಾನಿಕ್ ಸಾಧನಗಳಾದ ಲ್ಯಾಪ್‌ಟಾಪ್, ಮೊಬೈಲ್‌ಗಳು ಹಾಗೂ ಇತರೆ ಎಲೆಕ್ಟ್ರಾನಿಕ್ ಸಾಧನಗಳಿಗೆ ಭಾರೀ ಬೇಡಿಕೆ ಹರಿದುಬರುತ್ತಿದ್ದು, ಆಟೋಮೊಬೈಲ್ ವಲಯಕ್ಕೆ ಹೆಚ್ಚಿನ ಮಟ್ಟದಲ್ಲಿ ಪೂರೈಕೆಯಾಗುತ್ತಿದ್ದ ಸೆಮಿ ಕಂಡಕ್ಟರ್ ಪೂರೈಕೆಯು ಎಲೆಕ್ಟ್ರಾನಿಕ್ ಸಾಧನ ಉತ್ಪಾದನಾ ಕಂಪನಿಗಳಿಗೆ ಹೆಚ್ಚಿನ ಮಟ್ಟದಲ್ಲಿ ಪೂರೈಕೆಯಾಗುತ್ತಿದೆ.

ಹೀಗಾಗಿ ಸೆಮಿ ಕಂಡಕ್ಟರ್ ಪೂರೈಕೆ ತಗ್ಗಿರುವುದಿಂದ ಆಟೋ ಮೊಬೈಲ್ ಕ್ಷೇತ್ರದ ಮೇಲೆ ಪರಿಣಾಮ ಉಂಟು ಮಾಡುತ್ತಿದ್ದು, ಎಲೆಕ್ಟ್ರಾನಿಕ್ ಚಿಪ್ ಕೊರತೆಯು ಕೇವಲ ಭಾರತದಲ್ಲಿ ಮಾತ್ರವಲ್ಲ ಯುರೋಪ್, ಅಮೆರಿಕಾ ಹಾಗೂ ಏಷ್ಯಾದ ಪ್ರಮುಖ ದೇಶಗಳಲ್ಲಿನ ವಾಹನ ಉತ್ಪಾದನೆಯು ಮೇಲೂ ಪರಿಣಾಮ ಉಂಟುಮಾಡುತ್ತಿದೆ.

ಇದರಿಂದ ಸೆಮಿ ಕಂಡಕ್ಟರ್ ಕೊರತೆಯೂ ವಾಹನ ಬೆಲೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗುತ್ತಿದ್ದು, ಮಾರುತಿ ಸುಜುಕಿ ಸೇರಿದಂತೆ ಪ್ರಮುಖ ಕಾರು ಕಂಪನಿಗಳು ಇದೀಗ ಈ ವರ್ಷದ ಎರಡನೇ ಬೆಲೆ ಹೆಚ್ಚಳ ಘೋಷಣೆ ಮಾಡಿವೆ.

ಹೊಸ ದರಪಟ್ಟಿಯಲ್ಲಿ ಅರೆನಾ ಮತ್ತು ನೆಕ್ಸಾ ಎರಡು ಮಾದರಿಗಳಲ್ಲೂ ದರ ಹೆಚ್ಚಿಸಲಾಗುತ್ತಿದ್ದು, ವಿವಿಧ ಮಾದರಿಗಳಿಗೆ ಅನುಗುಣವಾಗಿ ಕಂಪನಿಯು ರೂ. 5 ಸಾವಿರದಿಂದ ರೂ. 20 ಸಾವಿರ ತನಕ ಬೆಲೆ ಏರಿಕೆ ಮಾಡಬಹುದಾಗಿದೆ.

ಮಾರುತಿ ಸುಜುಕಿ ಕಂಪನಿಯು ಸದ್ಯ ವಿವಿಧ ಕಾರು ಮಾದರಿಗಳಿಗೆ ಅನುಗುಣವಾಗಿ ಎರಡು ಮಾದರಿಯ ಕಾರು ಮಾರಾಟ ಸೌಲಭ್ಯವನ್ನು ಹೊಂದಿದ್ದು, ಸಾಮಾನ್ಯ ಕಾರು ಮಾದರಿಗಳನ್ನು ಅರೆನಾ ಮಾರಾಟ ಮಳಿಗೆಗಳಲ್ಲಿ ಮತ್ತು ಪ್ರೀಮಿಯಂ ಕಾರು ಮಾದರಿಗಳನ್ನು ನೆಕ್ಸಾ ಮಾರಾಟ ಮಳಿಗೆಗಳಲ್ಲಿ ಮಾರಾಟ ಮಾಡುತ್ತದೆ.