ಸಿಎನ್‌ಜಿ ಕಾರುಗಳ ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಮಾರುತಿ ಸುಜುಕಿ
ಮಾರುತಿ ಸುಜುಕಿ(Maruti Suzuki) ಕಂಪನಿಯು ಸದ್ಯ ಕಾರುಗಳ ಉತ್ಪಾದನೆ ಮತ್ತು ಮಾರಾಟದಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದ್ದು, ಹೊಸ ಎಮಿಷನ್ ಜಾರಿ ನಂತರ ಡೀಸೆಲ್ ಕಾರುಗಳ ಮಾರಾಟವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿ ಕೇವಲ ಪೆಟ್ರೋಲ್ ಮತ್ತು ಸಿಎನ್‌ಜಿ ಆವೃತ್ತಿಗಳನ್ನು ಮಾತ್ರವೇ ಮಾರಾಟ ಮಾಡುತ್ತಿದೆ.

ಪೆಟ್ರೋಲ್ ಮಾದರಿಗಳ ಜೊತೆಗೆ ಜನಪ್ರಿಯ ಕಾರು ಮಾದರಿಗಳಾದ ಆಲ್ಟೊ, ವ್ಯಾಗನ್‌ಆರ್, ಸೆಲೆರಿಯೊ, ಎಸ್ ಪ್ರೆಸ್ಸೊ, ಇಕೋ, ಡಿಜೈರ್ ಎರ್ಟಿಗಾ ಮತ್ತು ಟೂರ್ ಎಸ್ ಮಾದರಿಯಲ್ಲಿ ಸಿಎನ್‌ಜಿ ಮಾದರಿಗಳನ್ನು ಮಾರಾಟ ಮಾಡುತ್ತಿರುವ ಮಾರುತಿ ಸುಜುಕಿ ಕಂಪನಿಯು ಕೆಲವೇ ವರ್ಷಗಳಲ್ಲಿ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಸಿಎನ್‌ಸಿ ಕಾರುಗಳ ಮಾರಾಟದಲ್ಲಿ ದೊಡ್ಡ ಮಟ್ಟದ ಬೇಡಿಕೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿರುವ ಮಾರುತಿ ಸುಜುಕಿ ಕಂಪನಿಯು ಕಳೆದ 12 ವರ್ಷಗಳಲ್ಲಿ ಸುಮಾರು 10 ಲಕ್ಷ ಕಾರುಗಳನ್ನು ಮಾರಾಟ ಮಾಡಿ ಹೊಸ ಮೈಲಿಗಲ್ಲು ಸಾಧಿಸಿದೆ.

2010ರಲ್ಲಿ ಮೊದಲ ಬಾರಿಗೆ ಎಸ್-ಸಿಎಸ್‌ಜಿ ತಂತ್ರಜ್ಞಾನ ಪ್ರೇರಿತ ಕಾರುಗಳನ್ನು ಪರಿಚಯಿಸಿದ್ದ ಮಾರುತಿ ಸುಜುಕಿ ಕಂಪನಿಯು ಆರಂಭದ ಎಂಟು ವರ್ಷಗಳಲ್ಲಿ ಕೇವಲ 4 ಲಕ್ಷ ಸಿಎನ್‌ಜಿ ಕಾರುಗಳನ್ನು ಮಾತ್ರ ಮಾರಾಟ ಮಾಡಿತ್ತು. ಆದರೆ ಇತ್ತೀಚೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ನಿರಂತರ ಹೆಚ್ಚಳ ಪರಿಣಾಮ ಸಿಎನ್‌ಜಿ ಕಾರುಗಳ ಮಾರಾಟವು ವರ್ಷದಿಂದ ವರ್ಷಕ್ಕೆ ದ್ವಿಗುಣಗೊಳ್ಳುತ್ತಿದೆ.

2020-21ನೇ ಹಣಕಾಸು ವರ್ಷದಲ್ಲಿ 7.98 ಲಕ್ಷ ಯನಿಟ್ ಸಿಎನ್‌ಜಿ ಕಾರುಗಳನ್ನು ಮಾರಾಟ ಮಾಡಿದ್ದ ಮಾರುತಿ ಸುಜುಕಿ ಕಂಪನಿಯು ಇದೀಗ ಹೊಸ ಪ್ರಕಟಣೆ ಪ್ರಕಟಿಸಿದ್ದು, 10 ಲಕ್ಷ ಯುನಿಟ್ ಮಾರಾಟ ಪೂರ್ಣಗೊಳಿಸಿರುವುದಾಗಿ ಮಾಹಿತಿ ಹಂಚಿಕೊಂಡಿದೆ.

ಮಾರುತಿ ಸುಜುಕಿ ಕಂಪನಿಯು ಎಸ್-ಸಿಎನ್‌ಜಿ ಹೆಸರಿನಲ್ಲಿ ಸಿಎನ್‌ಜಿ ಕಾರುಗಳನ್ನು ಮಾರಾಟ ಮಾಡುತ್ತಿದ್ದು, ಕಂಪನಿಯು ವೈಯಕ್ತಿಕ ಮತ್ತು ವಾಣಿಜ್ಯ ವಿಭಾಗದಲ್ಲಿ ಕಾರ್ಯಾಚರಣೆಗಾಗಿ ಒಟ್ಟು 9 ಸಿಎನ್‌ಜಿ ಕಾರುಗಳನ್ನು ಮಾರಾಟ ಹೊಂದಿದೆ.

ಇವುಗಳಲ್ಲಿ ಆಲ್ಟೊ, ಎಸ್-ಪ್ರೆಸೊ, ವ್ಯಾಗನ್ಆರ್, ಸೆಲೆರಿಯೊ, ಡಿಜೈರ್, ಎರ್ಟಿಗಾ, ಇಕೋ, ಎಸ್-ಪ್ರೆಸ್ಸೊ ಮತ್ತು ಟೂರ್-ಎಸ್ ಮಾದರಿಗಳು ಪ್ರಮುಖವಾಗಿದ್ದು, ಡೀಸೆಲ್‌ಗೆ ಸರಿಸಮನಾದ ಮೈಲೇಜ್ ಹಿಂದಿರುಗಿಸಲಿರುವ ಸಿಎನ್‌ಜಿ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿವೆ.

ಮಾರುತಿ ಸುಜುಕಿ ಸಿಎನ್‌ಜಿ ಕಾರುಗಳ ಪಟ್ಟಿಯಲ್ಲಿ ಸದ್ಯ ಸೆಲೆರಿಯೊ ಮಾದರಿಯು ಅತಿ ಇಂಧನ ದಕ್ಷತೆ ಹೊಂದಿದ್ದು, ಇದು ಪ್ರತಿ ಕೆಜಿ ಸಿಎನ್‌ಜಿಗೆ ಗರಿಷ್ಠ 35.60 ಕಿಮೀ ಮೈಲೇಜ್ ನೀಡುತ್ತದೆ. ತದನಂತರ ಇತರೆ ಮಾದರಿಗಳು ಕೂಡಾ ಉತ್ತಮ ಇಂಧನ ದಕ್ಷತೆ ಹೊಂದಿದ್ದು, ಡೀಸೆಲ್ ಕಾರುಗಳ ಮಾರಾಟ ಸ್ಥಗಿತದ ನಂತರ ಹೆಚ್ಚಿನ ಬೇಡಿಕೆ ಹರಿದುಬರುತ್ತಿದೆ.

ಹೀಗಾಗಿ ಹಂತ-ಹಂತವಾಗಿ ಹೊಸ ಸಿಎನ್‌ಜಿ ಮಾದರಿಗಳನ್ನು ಬಿಡುಗಡೆ ಮಾಡುತ್ತಿರುವ ಮಾರುತಿ ಸುಜುಕಿಯು ಶೀಘ್ರದಲ್ಲೇ ಮತ್ತಷ್ಟು ಕಾರು ಮಾದರಿಗಳಲ್ಲಿ ಸಿಎನ್‌ಜಿ ಮಾದರಿಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ.

ಮಾಲಿನ್ಯ ತಗ್ಗಿಸುವ ಉದ್ದೇಶದಿಂದಾಗಿ ಸಾಮಾನ್ಯ ಪೆಟ್ರೋಲ್ ಮತ್ತು ಡೀಸೆಲ್ ಕಾರುಗಳ ಮಾರಾಟವನ್ನು ತಗ್ಗಿಸಲಾಗುತ್ತಿದ್ದು, ಪರಿಸರಕ್ಕೆ ಪೂರಕರವಾದ ಸಿಎನ್‌ಜಿ, ಹೈಬ್ರಿಡ್ ಮತ್ತು ಎಲೆಕ್ಟ್ರಿಕ್ ಕಾರುಗಳನ್ನು ಹೆಚ್ಚು ಅಭಿವೃದ್ದಿಗೊಳಿಸಲಾಗುತ್ತಿದೆ.

2030ರ ವೇಳೆಗೆ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳನ್ನು ಪರಿಣಾಮಕಾರಿಯಾಗಿ ತಗ್ಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಹಲವಾರು ಕಠಿಣ ಕ್ರಮಗಳನ್ನು ಪ್ರಕಟಿಸುತ್ತಿದ್ದು, ಪರಿಸರ ಸ್ನೇಹಿ ಹೈಬ್ರಿಡ್, ಸಿಎನ್‌ಜಿ ಮತ್ತು ಎಲೆಕ್ಟ್ರಿಕ್ ಕಾರುಗಳನ್ನು ಬಳಕೆ ಮಾಡುವಂತೆ ಹೊಸ ಯೋಜನೆಗಳನ್ನು ಜಾರಿಗೆ ತಂದಿದೆ.

ದುಬಾರಿ ಇಂಧನ ದರ ಮತ್ತು ಹೆಚ್ಚುತ್ತಿರುವ ಮಾಲಿನ್ಯ ಪ್ರಮಾಣವನ್ನು ಪರಿಣಾಮಕಾರಿಯಾಗಿ ತಗ್ಗಿಸುವ ನಿಟ್ಟಿನಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳಿಗೆ ಜಾರಿಗೆ ತಂದಿದ್ದು, ವಿವಿಧ ರಾಜ್ಯ ಸರ್ಕಾರಗಳು ಸಿಎನ್‌ಜಿ ಹೆಚ್ಚಿನ ಬಳಕೆಯೊಂದಿಗೆ ಎಲೆಕ್ಟ್ರಿಕ್ ವಾಹನ ಬಳಕೆಯನ್ನು ಹೆಚ್ಚಿಸಲು ಹೊಸ ಇವಿ ವಾಹನ ನೀತಿಯನ್ನು ಅಳವಡಿಸಿಕೊಂಡಿವೆ.

ಹೊಸ ಇವಿ ವಾಹನ ನೀತಿ ಮೂಲಕ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸುವ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗುತ್ತಿದ್ದು, ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಒತ್ತು ನೀಡಲು ಮತ್ತಷ್ಟು ಹೊಸ ಕ್ರಮ ಪ್ರಕಟಿಸಲಾಗುತ್ತಿದೆ.

ಜೊತೆಗೆ ಸಿಎನ್‌ಜಿ ವಾಹನ ಮಾರಾಟವು ಕೂಡಾ ಪ್ರಸ್ತುತ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿರುವುದು ಉತ್ತಮ ಬೆಳವಣಿಯಾಗಿದ್ದು, ಭವಿಷ್ಯದ ವಾಹನ ಮಾರಾಟದಲ್ಲಿ ಮಾರುತಿ ಸುಜುಕಿಯು ಇನ್ನಷ್ಟು ಬೇಡಿಕೆ ಪಡೆದುಕೊಳ್ಳಲಿದೆ.


Click it and Unblock the Notifications