ಹೊಸ ನವೀಕರಣಗಳೊಂದಿಗೆ ಬಿಡುಗಡೆಯಾಗಲಿದೆ ಮಾರುತಿ ಸುಜುಕಿ ಇಕೋ

ದೇಶದ ಅತಿ ದೊಡ್ಡ ವಾಹನ ತಯಾರಕ ಕಂಪನಿಯಾದ ಮಾರುತಿ ಸುಜುಕಿ ತನ್ನ ಇಕೋ ವ್ಯಾನ್‌ಗೆ ಸಂಪೂರ್ಣ ಬದಲಾವಣೆಯನ್ನು ನೀಡಲು ಯೋಜಿಸುತ್ತಿದೆ. ಮಾರುತಿ ಸುಜುಕಿ ಇಕೋ ಭಾರತೀಯ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯೊಂದಿಗೆ ಮಾರಾಟವಾಗುವ ಮಾದರಿಯಾಗಿದೆ.

ಹೊಸ ನವೀಕರಣಗಳೊಂದಿಗೆ ಬಿಡುಗಡೆಯಾಗಲಿದೆ ಮಾರುತಿ ಸುಜುಕಿ ಇಕೋ

ಇತ್ತೀಚಿನ ವರದಿಯ ಪ್ರಕಾರ, ನ್ಯೂ ಜನರೇಷನ್ ಮಾರುತಿ ಸುಜುಕಿ ವ್ಯಾನ್‌ ಪ್ರಸ್ತುತ ಅಭಿವೃದ್ಧಿಯಲ್ಲಿದೆ ಮತ್ತು ಇದು ಈ ವರ್ಷದ ದೀಪಾವಳಿ ಹಬ್ಬದ ಸಮಯದ ಮೊದಲು, ಆಗಸ್ಟ್-ಸೆಪ್ಟೆಂಬರ್ ಅವಧಿಗಳ ಅವಧಿಯಲ್ಲಿ ಬಿಡುಗಡೆಯಾಗಬಹುದು. ಪ್ರಸ್ತುತ ಜನರೇಷನ್ ಮಾರುತಿ ಸುಜುಕಿ ವ್ಯಾನ್‌ ಒಂದು ದಶಕದಿಂದ ದೇಶೀಯ ಮಾರುಕಟ್ಟೆಯಲ್ಲಿ ಮಾರಾಟದಲ್ಲಿದೆ. ಈ ವರ್ಷದ ಜುಲೈನಲ್ಲಿ ಪ್ರಸ್ತುತ ಇಕೋ ಮಾದರಿಯ ಉತ್ಪಾದನೆಯನ್ನು ಸ್ಥಗಿತಗೊಳಿಸಬಹುದು.ಈ ವ್ಯಾನ್ ಭಾರತದಲ್ಲಿ ಅತಿ ಹೆಚ್ಚು ಮಾರಾಟವಾದ ಪ್ರಯಾಣಿಕ ಕಾರುಗಳಲ್ಲಿ ಒಂದಾಗಿದೆ.

ಹೊಸ ನವೀಕರಣಗಳೊಂದಿಗೆ ಬಿಡುಗಡೆಯಾಗಲಿದೆ ಮಾರುತಿ ಸುಜುಕಿ ಇಕೋ

ಹಣಕಾಸಿನ ವರ್ಷ 2021-22 ರಲ್ಲಿ ಮಾರುತಿ ಸುಜುಕಿ ಇಕೋದ 1.08 ಲಕ್ಷ ಯೂನಿಟ್‌ಗಳು ಮಾರಾಟವಾಗಿವೆ. ಮುಂಬರುವ ಕಟ್ಟುನಿಟ್ಟಾದ ಸುರಕ್ಷತಾ ಮಾನದಂಡಗಳು ಮಾರುತಿ ಸುಜುಕಿ ಇಕೋ ನವೀಕರಣಕ್ಕೆ ಕಾರಣವೆಂದು ನಿರೀಕ್ಷಿಸುತ್ತೇವೆ.

ಹೊಸ ನವೀಕರಣಗಳೊಂದಿಗೆ ಬಿಡುಗಡೆಯಾಗಲಿದೆ ಮಾರುತಿ ಸುಜುಕಿ ಇಕೋ

ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯವು (MoRTH) ಈ ವರ್ಷದ ಆರಂಭದಲ್ಲಿ ಎಂಟು ಜನರ ಪ್ರಯಾಣಿಕರ ಸಾಮರ್ಥ್ಯವಿರುವ ಎಲ್ಲಾ ಕಾರುಗಳಲ್ಲಿ ಆರು ಏರ್‌ಬ್ಯಾಗ್‌ಗಳನ್ನು ಕಡ್ಡಾಯಗೊಳಿಸಲಾಗಿದೆ ಎಂದು ಘೋಷಿಸಿತ್ತು. ಇದು 7-ಆಸನಗಳ Eeco ಸೇರಿದಂತೆ ಭಾರತೀಯ ಮಾರುಕಟ್ಟೆಯಲ್ಲಿ ಅಸ್ತಿತ್ವದಲ್ಲಿರುವ ಎಲ್ಲಾ ಪ್ರಯಾಣಿಕ ಕಾರುಗಳ ಮೇಲೆ ಪರಿಣಾಮ ಬೀರುತ್ತದೆ.

ಹೊಸ ನವೀಕರಣಗಳೊಂದಿಗೆ ಬಿಡುಗಡೆಯಾಗಲಿದೆ ಮಾರುತಿ ಸುಜುಕಿ ಇಕೋ

ಬಹು ಏರ್‌ಬ್ಯಾಗ್‌ಗಳ ಹೊರತಾಗಿ, ಮುಂದಿನ ಜನರೇಷನ್ ಮಾದರಿಯು ಪವರ್ ಸ್ಟೀರಿಂಗ್ ಕಾಲಮ್‌ನಂತಹ ಕೆಲವು ಹೆಚ್ಚುವರಿ ವೈಶಿಷ್ಟ್ಯಗಳನ್ನು ಹೊಂದಿರುತ್ತದೆ. ಭಾರತದಲ್ಲಿ ಲಭ್ಯವಿರುವ ಅಸ್ತಿತ್ವದಲ್ಲಿರುವ ಹೆಚ್ಚಿನ ಕಾರುಗಳು ಕರ್ಟನ್ ಮತ್ತು ಸೈಡ್ ಏರ್‌ಬ್ಯಾಗ್‌ಗಳನ್ನು ಸರಿಹೊಂದಿಸಲು ವಿನ್ಯಾಸಗೊಳಿಸಲಾಗಿಲ್ಲವಾದ್ದರಿಂದ, ವಿವಿಧ ಕಾರು ತಯಾರಕರಿಂದ ಅನೇಕ ಇತರ ವಾಹನಗಳಿಗೆ ಪ್ರಮುಖ ನವೀಕರಣಗಳನ್ನು ನಿರೀಕ್ಷಿಸುತ್ತೇವೆ.

ಹೊಸ ನವೀಕರಣಗಳೊಂದಿಗೆ ಬಿಡುಗಡೆಯಾಗಲಿದೆ ಮಾರುತಿ ಸುಜುಕಿ ಇಕೋ

ಹೆಚ್ಚುವರಿ ಸುರಕ್ಷತಾ ವೈಶಿಷ್ಟ್ಯಗಳಿಂದ ಬಜೆಟ್ ಹೆಚ್ಚಿಸುವಾಗ ಕೆಲವು ಎಂಟ್ರಿ ಲೆವೆಲ್ ಮಾದರಿಗಳನ್ನು ನಿಲ್ಲಿಸುವ ಸಾಧ್ಯತೆಯಿದೆ, ಪ್ರಸ್ತುತ ಮಾರುತಿ ಸುಜುಕಿ ಇಕೋ ಮಾದರಿಯ ಬಗ್ಗೆ ಹೇಳುವುದಾದರೆ, 2020ರ ಸೆಪ್ಟೆಂಬರ್ ತಿಂಗಳಲ್ಲಿ ಮಾರುತಿ ಸುಜುಕಿ ಕಂಪನಿಯ ಇಕೋ ಮಾದರಿಯು ಮಾರಾಟದಲ್ಲಿ ಹೊಸ ಮೈಲುಗಲ್ಲು ಸಾಧಿಸಿತು.

ಹೊಸ ನವೀಕರಣಗಳೊಂದಿಗೆ ಬಿಡುಗಡೆಯಾಗಲಿದೆ ಮಾರುತಿ ಸುಜುಕಿ ಇಕೋ

ಮಾರುತಿ ಸುಜುಕಿ ಕಂಪನಿಯು ಕಳೆದ 10 ವರ್ಷಗಳಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಇಕೋ ಮಾದರಿಯ 7 ಲಕ್ಷ ಯುನಿಟ್‌ಗಳನ್ನು ಮಾರಾಟ ಮಾಡಿದೆ. ಮಾರುತಿ ಸುಜುಕಿ ಕಂಪನಿಯು ಇಕೋ ವ್ಯಾನ್ ಅನ್ನು ಭಾರತದಲ್ಲಿ 2010ರಲ್ಲಿ ಮೊದಲ ಬಾರಿಗೆ ಬಿಡುಗಡೆಗೊಳಿಸಿದ್ದರು.

ಹೊಸ ನವೀಕರಣಗಳೊಂದಿಗೆ ಬಿಡುಗಡೆಯಾಗಲಿದೆ ಮಾರುತಿ ಸುಜುಕಿ ಇಕೋ

ಮಾರುತಿ ಸುಜುಕಿ ಕಂಪನಿಯು ಕೇವಲ ಎರಡು ವರ್ಷಗಳಲ್ಲಿ ಇಕೋದ 1 ಲಕ್ಷ ಯೂನಿಟ್‌ಗಳನ್ನು ಮಾರಾಟ ಮಾಡಿದ್ದರು. 2014ರಲ್ಲಿ ಮಾರುತಿ ಮತ್ತೆ 1 ಲಕ್ಷ ಯುನಿಟ್ ಇಕೋವನ್ನು ಮಾರಾಟ ಮಾಡಲಾಗಿತ್ತು. ಇನ್ನು ಬೇಡಿಕೆ ಹೆಚ್ಚಾದಾಗ ಬೇಡಿಕೆಗೆ ತಕ್ಕಂತೆ ಪೂರೈಸಲು ಇಕೋ ಮಾದರಿಯ ಕಾರ್ಗೋ ಎಂಬ ಹೊಸ ರೂಪಾಂತರವನ್ನು ಪರಿಚಯಿಸಿದ್ದರು.

ಹೊಸ ನವೀಕರಣಗಳೊಂದಿಗೆ ಬಿಡುಗಡೆಯಾಗಲಿದೆ ಮಾರುತಿ ಸುಜುಕಿ ಇಕೋ

ನಂತರ ಮೂರು ವರ್ಷಗಳಲ್ಲಿ ಸತತವಾಗಿ 1 ಲಕ್ಷ ಯೂನಿಟ್ ಇಕೋವನ್ನು ಮಾರಾಟವನ್ನು ಮಾಡಲಾಗಿತ್ತು. 2018ರ ವೇಳೆಗೆ ಮಾರುತಿ ಸುಜುಕಿ ಕಂಪನಿಯು ಒಟ್ಟು 5 ಲಕ್ಷ ಯುನಿಟ್‌ಗಳನ್ನು ಮಾರಾಟ ಮಾಡಿದರು. ಇನ್ನು ಮಾರುತಿ ಸುಜುಕಿ ಕಂಪನಿಯು ತನ್ನ ಅತ್ಯಂತ ಜನಪ್ರಿಯ ಮಾದರಿಗಳಲ್ಲಿ ಒಂದಾದ ಇಕೋ ವ್ಯಾನ್ ಅನ್ನು ಸಿಎನ್‌ಜಿ ಆವೃತ್ತಿಯಲ್ಲಿ ಈ ವರ್ಷದ ಮಾರ್ಚ್ ತಿಂಗಳಲ್ಲಿ ಬಿಡುಗಡೆಗೊಳಿಸಲಾಗಿತ್ತು.

ಹೊಸ ನವೀಕರಣಗಳೊಂದಿಗೆ ಬಿಡುಗಡೆಯಾಗಲಿದೆ ಮಾರುತಿ ಸುಜುಕಿ ಇಕೋ

ಈ ಮಾರುತಿ ಸುಜುಕಿ ಇಕೋ ಮಾದರಿಯಲ್ಲಿ 5 ರಿಂದ 7 ಸೀಟುಗಳನ್ನು ಹೊಂದಿದೆ. ಈ ಕಾರಿನಲ್ಲಿ 1.2 ಲೀಟರ್ ಪೆಟ್ರೋಲ್ ಎಂಜಿನ್ ಅಳವಡಿಸಲಾಗಿದೆ. ಈ ಎಂಜಿನ್ 73 ಬಿಹೆಚ್‌ಪಿ ಮತ್ತು 101 ಎನ್‌ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್ ನಲ್ಲಿ 5 ಸ್ಪೀಡಿನ ಮ್ಯಾನ್ಯುವಲ್ ಟ್ರಾನ್ಸ್‌ಮಿಷನ್‌ ಜೋಡಿಸಲಾಗಿದೆ. ಮಾರುತಿ ಸುಜುಕಿ ಇಕೋ ಸಿಎನ್‌ಜಿ ಮಾದರಿಯು ಪ್ರತಿ ಲೀಟರ್‌ಗೆ 21.8 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ. ಇಕೋ ಮಾದರಿಯ ಒಟ್ಟು ಮಾರಾಟದಲ್ಲಿ ಶೇ.17 ರಷ್ಟು ಸಿಎನ್‌ಜಿ ರೂಪಾಂತರ ಕೊಡುಗೆಯನ್ನು ನೀಡಿದೆ.

ಹೊಸ ನವೀಕರಣಗಳೊಂದಿಗೆ ಬಿಡುಗಡೆಯಾಗಲಿದೆ ಮಾರುತಿ ಸುಜುಕಿ ಇಕೋ

ಮಾರುತಿ ಸುಜುಕಿ ಇಕೋ ಕಾರು ಭಾರತದ ಮಧ್ಯಮ ವರ್ಗದವರನ್ನು ಗುರಿಯಾಗಿಸಿಕೊಂಡು ಬಿಡುಗಡೆಗೊಳಿಸಿದೆ. ಜನಪ್ರಿಯ ಒಮ್ನಿ ವ್ಯಾನ್ ಸ್ಥಗಿತಗೊಂಡ ಬಳಿಕ ಮಾರುತಿ ಸುಜುಕಿ ಕಂಪನಿಯ ಇಕೋ ಭಾರತೀಯ ಮಾರುಕಟ್ಟೆಯಲ್ಲಿರುವ ಏಕೈಕ ವ್ಯಾನ್ ಆಗಿದೆ. ಮಾರುತಿ ಸುಜುಕಿ ಕಂಪನಿಯ ಕಾರುಗಳ ಸರಣಿಯಲ್ಲಿ ಅತಿ ಹೆಚ್ಚು ಮಾರಾಟವಾಗುವ ಮಾದರಿಗಳಲ್ಲಿ ಒಂದಾಗಿದೆ. ಇಕೋ ಭಾರತದಲ್ಲಿ ಮಾರಾಟವಾಗುವ ವಾಹನಗಳ ಟಾಪ್-10 ಪಟ್ಟಿಯಲ್ಲಿ ಸ್ಥಿರವಾಗಿ ಸ್ಥಾನ ಪಡೆದುಕೊಂಡಿದೆ. ಇನ್ನು ಮಾರುತಿ ಸುಜುಕಿ ಈ ವರ್ಷ ಭಾರತದಲ್ಲಿ ಎರಡು ಹೊಸ ಎಸ್‌ಯುವಿಗಳನ್ನು ಬಿಡುಗಡೆ ಮಾಡಲಿದೆ. ಒಂದು ನ್ಯೂ ಜನರೇಷನ್ ಮಾರುತಿ ಬ್ರೆಝಾ ಆದರೆ, ಇನ್ನೊಂದು ಸಂಪೂರ್ಣವಾಗಿ ಹೊಸ ಮಾದರಿಯನ್ನು ಬಿಡುಗಡೆಗೊಳಿಸಲಿದೆ.

ಹೊಸ ನವೀಕರಣಗಳೊಂದಿಗೆ ಬಿಡುಗಡೆಯಾಗಲಿದೆ ಮಾರುತಿ ಸುಜುಕಿ ಇಕೋ

ಹೊಸ ಮಾರುತಿ ಸುಜುಕಿ ಬ್ರೆಝಾ ಮುಂದಿನ ತಿಂಗಳು ಬಿಡುಗಡೆಯಾಗಲಿದೆ ಎಂದು ನಿರೀಕ್ಷಿಸುತ್ತೇವೆ. ಆದರೆ ಇದರ ಅಧಿಕೃತ ಬಿಡುಗಡೆಯ ದಿನಾಂಕ ಮತ್ತು ವಿವರಗಳನ್ನು ಶೀಘ್ರದಲ್ಲೇ ಕಂಪನಿಯು ಬಹಿರಂಗಪಡಿಸಬಹುದು. 2022ರ ಮಾರುತಿ ಬ್ರೆಝಾ ಜಾಹೀರಾತಿನ ಚಿತ್ರೀಕರಣದ ವೇಳೆ ಇತ್ತೀಚೆಗೆ ಕಾಣಿಸಿಕೊಂಡಿದೆ. ಈ ಕಾಂಪ್ಯಾಕ್ಟ್ ಎಸ್‍ಯುವಿ ಬ್ರೆಝಾ ಹೆಸರಿನಿಂದ ಹೋಗುವುದರಿಂದ ವಿಟಾರಾ ಹೆಸರನ್ನು ಕೈಬಿಡುವ ನಿರೀಕ್ಷೆಯಿದೆ ಮತ್ತು ಇದು ಫೇಸ್‌ಲಿಫ್ಟೆಡ್ ಎರ್ಟಿಗಾ ಮತ್ತು XL6 ನಲ್ಲಿ ಕಂಡುಬರುವ 1.5-ಲೀಟರ್ ನಾಲ್ಕು-ಸಿಲಿಂಡರ್ K15C ಪೆಟ್ರೋಲ್ ಮೈಲ್ಡ್-ಹೈಬ್ರಿಡ್ ಎಂಜಿನ್‌ ಅನ್ನು ಹೊಂದಿರುತ್ತದೆ.

Most Read Articles

Kannada
English summary
Maruti suzuki eeco likly to get new update after 11 year detail
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X